Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಾಹಿತಿ, ನಾಟಕಗಾರ, ಯಕ್ಷಗಾನ ಪ್ರಸಂಗಕರ್ತ, ಕವಿ, ವಾಚಕಾಭಿನಯ, ಪರಿಣತ, ವಾಗ್ಮಿ ಕೊರ್ಗಿ ಶಂಕರನಾರಾಯಣ ಉಪಾಧ್ಯಾಯರನ್ನು ಕುಂದಪ್ರಭ ಸಂಸ್ಥೆಯ ಕೋ.ಮ.ಕಾರಂತ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಪ್ರಶಸ್ತಿ ಪ್ರದಾನ ಸಮಾರಂಭ 07-01-2024ರಂದು ಕುಂದಾಪುರದ ಸರಕಾರಿ ಪ.ಪೂ.ಕಾಲೇಜಿನ ರೋಟರಿ ಲಕ್ಷ್ಮೀನರಸಿಂಹ ಕಲಾ ಮಂದಿರದಲ್ಲಿ ನಡೆಯಲಿದೆ. ಹಿರಿಯ ಪತ್ರಕರ್ತ, ತರಬೇತುದಾರ ಕೋಣಿ ಮಹಾಬಲೇಶ್ವರ ಕಾರಂತರ ಸ್ಮರಣೆಯಲ್ಲಿ ನೀಡುವ ಪ್ರಶಸ್ತಿ ಇದಾಗಿದೆ. ಕೊರ್ಗಿ ಶಂಕರನಾರಾಯಣ ಉಪಾಧ್ಯಾಯರು ಬಿಎಸ್ಎನ್ಎಲ್ ಉದ್ಯೋಗಿ ಆಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದು, ಯಕ್ಷಗಾನ, ನಾಟಕ, ಸಾಹಿತ್ಯ, ಸಂಗೀತ, ನೃತ್ಯದಲ್ಲಿ ಆಸಕ್ತಿ ಹೊಂದಿದವರಾಗಿದ್ದಾರೆ. ಡಾ| ಎಸ್. ಎಲ್. ಭೈರಪ್ಪನವರ ಮಂದ್ರ ಕಾದಂಬರಿ ನಾಟಕಕ್ಕೆ ರೂಪಾಂತರಗೊಳಿಸಿದವರು. ಈ ನಾಟಕ ಬಹಳ ಪ್ರಸಿದ್ಧವಾಯಿತು. ಹಲವಾರು ಶ್ರೇಷ್ಠ ಕೃತಿಗಳನ್ನು ಕನ್ನಡ ರೂಪ, ನಾಟಕ ರೂಪಕ್ಕಿಳಿಸಿದವರು. ಇವರಿಗೆ ಕರ್ನಾಟಕ ನಾಟಕ ಅಕಾಡೆಮಿಯ ಸುವರ್ಣ ರಂಗ ಪ್ರಶಸ್ತಿ, ನೂಪುರ ಭ್ರಮರಿ ಸಂಸ್ಥೆಯ ವಿಮರ್ಶಾ ವಾಙ್ಮಯಿ ಪ್ರಶಸ್ತಿ, ಬೆಂಗಳೂರು ಗಾಯನ ಸಮಾಜದ ಶ್ರೀ ಕಲಾ ಜ್ಯೋತಿ ಪ್ರಶಸ್ತಿ ಲಭಿಸಿದೆ. ಕನ್ನಡ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರೇಖೆಗಳ ಮೂಲಕ ಚಾಟಿ – ನಗುವಿನ ಚಟಾಕಿಯ ಜೊತೆಗೆ ವಾಸ್ತವದ ಅನಾವರಣಗೊಳಿಸುವ ಕಾರ್ಟೂನು ಕ್ರೀಯಾಶಿಲ ಕಲಾಮಾಧ್ಯಮ. ಇಂತಹ ಕಾರ್ಟೂನು ರಚಿಸುವ ಕಾರ್ಟೂನಿಷ್ಠರನ್ನು, ಕಾರ್ಟೂನಿಷ್ಠರ ತವರು ಕುಂದಾಪುರದಲ್ಲಿ ಒಗ್ಗೂಡಿಸಿ ಆಯೋಜಿಸಲಾಗುತ್ತಿರುವ ಕಾರ್ಟೂನು ಹಬ್ಬಕ್ಕೆ ದಶಮ ಸಂಭ್ರಮ. ಖ್ಯಾತ ವ್ಯಂಗ್ಯಚಿತ್ರಕಾರ ಕುಂದಾಪುರದ ಸತೀಶ್ ಆಚಾರ್ಯರ ಅವರ ಸಾರಥ್ಯದಲ್ಲಿ ವಿಭಿನ್ನ ಐಡಿಯಾಸ್ ಹಾಗೂ ಕಾರ್ಟೂನು ಕುಂದಾಪ್ರ ತಂಡದ ಕಾರ್ಟೂನಿಷ್ಠರ ನೇತೃತ್ವದಲ್ಲಿ ನಡೆಯುತ್ತಿರುವ ಕಾರ್ಟೂನು ಹಬ್ಬ ಹತ್ತಾರು ವಿಶೇಷತೆಗಳೊಂದಿಗೆ ನಡೆಯುತ್ತಿದ್ದು ಈ ಭಾರಿಯೂ ಡಿಸೆಂಬರ್ 9 ರಿಂದ 12ರ ತನಕ ನಾಲ್ಕು ದಿನಗಳ ಕಾಲ ಕುಂದಾಪುರದ ಕಲಾಮಂದಿರದಲ್ಲಿ ಜರುಗಲಿದೆ. ಹಬ್ಬದಲ್ಲಿ ಕಾರ್ಟೂನು ಪ್ರದರ್ಶನ, ವಿದ್ಯಾರ್ಥಿ ಹಾಗೂ ಪೋಷಕರ ಕಾರ್ಟೂನು ಸ್ವರ್ಧೆ, ಲೈವ್ ಕ್ಯಾರಿಕೇಚರಿಂಗ್, ಮಾಸ್ಟರ್ ಸ್ಟ್ರೋಕ್, ನಿತ್ಕ ಕಾಮಿಡಿ ಕೂತ್ಕ ನಗಾಡಿ, ಸೆಲ್ಫಿ ಕಾರ್ನರ್, ಹೀಗೆ ನಾಲ್ಕು ದಿನವೂ ಕಾರ್ಟೂನು ಪ್ರಿಯರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ರಂಜನೆ ಹಾಗೂ ಅರಿವಿಗಾಗಿ ಇದರ ಜೊತೆ ಜೊತೆಗೆ ಕಾರ್ಟೂನಿನ ಬಗೆಗೆ ಒಲವು ಮೂಡಿಸುವುದಕ್ಕಾಗಿ ಕಾರ್ಟೂನು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು: ಡಾ.ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ (ಲಿಡ್ಕರ್)ದ ರಾಯಭಾರಿಯಾಗಿ ನಟ ಡಾಲಿ ಧನಂಜಯ್ ಅವರನ್ನು ಇಂದು ಅಧಿಕೃತವಾಗಿ ಘೋಷಣೆ ಮಾಡಲಾಯಿತು. ವಿಧಾನಸೌಧದ ಮುಂಭಾಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯನವರು ನಟ ಧನಂಜಯ ಅವರನ್ನು ಲಿಡ್ಕರ್ ರಾಯಭಾರಿ ಘೋಷಿಸಿದರು. ಇದೇ ಮೊದಲ ಬಾರಿಗೆ ಲಿಡ್ಕರ್ ಗೆ ರಾಯಭಾರಿಯನ್ನು ಆಯ್ಕೆ ಮಾಡಿದ್ದು ವಿಶೇಷ. ಸ್ಯಾಂಡಲ್ವುಡ್ ನಲ್ಲಿ ನಟನಾಗಿ ನಿರ್ಮಾಪಕನಾಗಿ ಡಾಲಿ ಸಿಕ್ಕಾಪಟ್ಟೆ ಬ್ಯುಸಿ ಇರುವ ಸ್ಟಾರ್. ನಟನೆ, ನಿರ್ಮಾಣದ ಜೊತೆಗೀಗ ಧನಂಜಯ ಜಾಹೀರಾತು ಕ್ಷೇತ್ರಕ್ಕೂ ಕಾಲಿಟ್ಟಿದ್ದಾರೆ. ಮೊದಲ ಬಾರಿಗೆ ಡಾಲಿ ಸರ್ಕಾರದ ಜಾಹೀರಾತಿನಲ್ಲಿ ಮಿಂಚುವ ಮೂಲಕ ಚರ್ಮ ಕುಶಲಕರ್ಮಿಗಳ ಕುಟುಂಬದ ನೆರವಿಗೆನಿಂತಿದ್ದಾರೆ. ವಿಶೇಷ ಎಂದರೆ ಲಿಡ್ಕರ್ ರಾಯಭಾರಿಯಾಗಲು ಧನಂಜಯ ಅವರು ಒಂದು ರೂಪಾಯಿ ಸಂಭಾವನೆಯನ್ನು ಕೂಡ ಪಡೆದಿಲ್ಲ. ಉಚಿತವಾಗಿ ಲಿಡ್ಕರ್ ಬ್ರಾಂಡ್ ಪ್ರಮೋಟ್ ಮಾಡುವ ಮೂಲಕ ಧನಂಜಯ್ ಮಾದರಿಯಾಗಿದ್ದಾರೆ. ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರ 67ನೇ ಪುಣ್ಯ ಸ್ಮರಣೆ ದಿನವೇ ಈ ಕಾರ್ಯಕ್ರಮ ಹಮ್ಮಿಕೊಂಡಿರುವುದು…

Read More

ಕುಂದಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀಮದ್ಭಗವದ್ಗೀತಾ ಆಚರಣಾ ಸಮಿತಿ ವತಿಯಿಂದ ಗೀತಾ ಜಯಂತಿಯ ಪ್ರಯುಕ್ತ ಆಯೋಜಿಸಿದ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ವಿವಿಧ ಬಹುಮಾನಗಳನ್ನು ಪಡೆದುಕೊಂಡಿದ್ದಾರೆ. ಕನ್ನಡ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಪಿ.ಯು.ಸಿ.ವಿಜ್ಞಾನ ವಿಭಾಗದ ಶ್ರುತಿಕಾ ಶೆಟ್ಟಿ ಪ್ರಥಮ ಸ್ಥಾನ, ಕಂಠಪಾಠ(ಶ್ಲೋಕ) ಸ್ಪರ್ಧೆಯಲ್ಲಿ ಪ್ರಥಮ ಪಿ.ಯು.ಸಿ ವಿಜ್ಞಾನ ವಿಭಾಗದ ಮಯೂರ್ ಅವಭ್ರತ್ ಪ್ರಥಮ ಸ್ಥಾನ, ಕಂಠಪಾಠ (ಶ್ಲೋಕ) ಸ್ಪರ್ಧೆಯಲ್ಲಿ ಪ್ರಥಮ ಪಿ.ಯು.ಸಿ.ವಿಜ್ಞಾನ ವಿಭಾಗದ ರಕ್ಷಿತಾ ಭಟ್ ದ್ವಿತೀಯ ಸ್ಥಾನ, ಕನ್ನಡ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಪಿ.ಯು.ಸಿ.ವಿಜ್ಞಾನ ವಿಭಾಗದ ಸ್ಪಂದನಾ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ವಿದ್ಯಾರ್ಥಿಗಳು ಭಾನುವಾರ ರೋಟೇಟಿಂಗ್ ರೂಬಿಕ್ ಕ್ಯೂಬ್ ಮೂಲಕ ಎರಡು ಪ್ರತ್ಯೇಕ ಗಿನ್ನಿಸ್ ದಾಖಲೆ ಬರೆದಿದ್ದಾರೆ. ಮೊದಲ ದಾಖಲೆಯಾಗಿ ನ.30ರಂದು ಹಟ್ಟಿಯಂಗಡಿ ಸಿದ್ಧಿವಿನಾಯಕ ವಸತಿ ಶಾಲೆಯ 50 ವಿದ್ಯಾರ್ಥಿಗಳು 6000 ಕ್ಯೂಬ್ ಗಳನ್ನು ಬಳಸಿಕೊಂಡು 19.198 ಚ.ಮೀ ವಿಸ್ತೀರ್ಣದಲ್ಲಿ ಒಂದು ಬದಿಯಲ್ಲಿ ದೇಶದ ಹಾಕಿ ಮಾಂತ್ರಿಕ ಮೇಜರ್ ಧ್ಯಾನಚಂದ್ ಹಾಗೂ ಇನ್ನೊಂದು ಬದಿಯಲ್ಲಿ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧು ಅವರ ಡ್ಯುಯಲ್ ಸೈಡೆಡ್ ರೋಟೇಟಿಂಗ್ ಫಸಲ್ ರೂಬಿಕ್ ಕ್ಯೂಬ್ ಮೊಸಾಯಿಕ್ ಭಾವಚಿತ್ರವನ್ನು ಅನಾವರಣಗೊಳಿಸುವ ಮೂಲಕ ಈ ಹಿಂದಿನ ಕಝಾಕಿಸ್ತಾನದ ಝೆಂಗಿಸ್ ಐಟ್ಜಾನೋವ್ 5100 ಕ್ಯೂಬ್ ಗಳೊಂದಿಗೆ ನಿರ್ಮಿಸಿದ್ದ 15.878 ಚ.ಮೀಟರ್ ವಿಸ್ತಿರ್ಣದ ದಾಖಲೆಯನ್ನು ಮುರಿದು ನೂತನ ಗಿನ್ನಿಸ್ ದಾಖಲೆ ಮಾಡಿದ್ದರು. ಎರಡನೇ ದಾಖಲೆಯಾಗಿ ಹಟ್ಟಿಯಂಗಡಿ ಸಿದ್ಧಿವಿನಾಯಕ ವಸತಿ ಶಾಲೆಯ ಸಂಸ್ಥಾಪಕ ಹಾಗೂ ಹಿರಿಯ ಧಾರ್ಮಿಕ ನೇತಾರರಾಗಿದ್ದ ಹೆಚ್. ರಾಮಚಂದ್ರ ಭಟ್ ಅವರ ಮೊಸಾಯಿಕ್ ಭಾವಚಿತ್ರವನ್ನು ಭಾನುವಾರ ಮಧ್ಯಾಹ್ನ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ನೀವೆಷ್ಟೇ ಆರ್ಥಿಕ ಶ್ರೀಮಂತಿಕೆಯಿದ್ದರೂ ಆರೋಗ್ಯ ಶ್ರೀಮಂತಿಕೆಯಿಲ್ಲದಿದ್ದರೆ ನೆಮ್ಮದಿಯ ಜೀವನ ಸಾಗಿಸಲಾಗದು ಎಂದು ಕುಂದಾಪುರ ಉಪವಿಭಾಗಾಧಿಕಾರಿ ರಶ್ಮಿ ಎಸ್ ಆರ್ ಹೇಳಿದರು. ಅವರು ನವೋದಯ ಗ್ರಾಮವಿಕಾಸ ಚಾರಿಟೇಬಲ್ ಟ್ರಸ್ಟ್ ಮಂಗಳೂರು, ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘ ನಾವುಂದ ಹಾಗೂ ಆದರ್ಶ ಆಸ್ಪತ್ರೆ ಉಡುಪಿ ಸಹಯೋಗದಲ್ಲಿ ಭಾನುವಾರ ನಾವುಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಆಯೋಜಿಸಲಾಗಿದ್ದ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಆರೋಗ್ಯವಂತ ದೇಹ ಹೊಂದಿರುವ ಪ್ರತಿಯೊಬ್ಬ ವ್ಯಕ್ತಿ ಕನಿಷ್ಟ ವರ್ಷಕ್ಕೊಂದು ಬಾರಿಯಾದರೂ ರಕ್ತದಾನ ಮಾಡುವ ಶಪಥ ಮಾಡಬೇಕು. ಅದು ಮಾತ್ರ ರಕ್ತದ ಕೊರತೆಯಿಂದ ಬಳಲುತ್ತಿರುವ ಅದೆಷ್ಟೋ ರೋಗಿಗಳ ಬದುಕಿಗೆ ನಾವು ಕೊಡುವ ಅಮೂಲ್ಯ ದೇಣಿಗೆಯಾಗಬಹುದು ಎಂದವರು ಹೇಳಿದರು. ಉಡುಪಿಯ ಆದರ್ಶ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಚಂದ್ರಶೇಖರ್ ಮಾತನಾಡಿ, ನಿಯಮಿತ ಆಹಾರ, ಆಗಿದ್ದಾಂಗೆ ಆರೋಗ್ಯ ತಪಾಸಣೆಯಿಂದ ಆರೋಗ್ಯ ರಕ್ಷಣೆ ಸಾಧ್ಯ. ಉತ್ತಮ ಆರೋಗ್ಯ ವಿಮೆಯಿಂದ ಮಾಡಿಸಿಕೊಳ್ಳುವುದೇ ದುಬಾರಿ ಚಿಕಿತ್ಸಾ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕಾರ್ಕಳ: ಕಾರ್ಕಳದ ಕ್ರಿಯೇಟಿವ್‌ ಶಿಕ್ಷಣ ಪ್ರತಿಷ್ಠಾನ ಮತ್ತು “ಗ್ರೀನ್‌ ಸೋಲ್”‌ ಸಂಸ್ಥೆಯ ಸಹಕಾರ ಹಾಗೂ ಸಾರ್ವಜನಿಕರಿಂದ ಬಳಸಿದ ಪಾದರಕ್ಷೆಗಳನ್ನು ಸಂಗ್ರಹಿಸಿ ಅದನ್ನು ಉನ್ನತ ತಂತ್ರಜ್ಞಾನದ ಮೂಲಕ ಮರುಬಳಕೆ ಮಾಡಿ ಶಾಲೆಯ ಬಡಮಕ್ಕಳಿಗೆ ಹಂಚುವ ವಿನೂತನ ಮತ್ತು ಮಾದರಿ ಕಾರ್ಯಕ್ರಮ ನಡೆಯಿತು. ಉಡುಪಿ, ದಕ್ಷಿಣಕನ್ನಡ ಜಿಲ್ಲೆಗಳನ್ನೊಳಗೊಂಡ ಅತ್ಯಂತ ಬಡತನ ಹೊಂದಿದ ಶಾಲೆಯ ಮಕ್ಕಳಿಗೆ ಪಾದರಕ್ಷೆಯನ್ನು ಒದಗಿಸುವ ಅಭಿಯಾನ “ಗ್ರೀನ್‌ ಸೋಲ್”‌ ಎಂಬ ಸಂಸ್ಥೆಯೊಂದಿಗೆ ಸೇರಿ ನಡೆಸಲಾಗುತ್ತಿದೆ. ಅವಿನಾಶ್‌ ಕಾಮತ್‌ ರವರ ಕನಸಿನ ಯೋಜನೆಗೆ ಕ್ರಿಯೇಟಿವ್‌ ವಿದ್ಯಾ ಸಂಸ್ಥೆಯೂ ಕೈ ಜೋಡಿಸಿದ್ದು ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಸಹಸಂಸ್ಥಾಪಕರಾದ ಅಶ್ವತ್‌ ಎಸ್. ಎಲ್‌ ಭಾಗಿಯಾಗಿ ಮಾತನಾಡಿ ಗ್ರಾಮೀಣ ಪ್ರದೇಶದ ಕನಿಷ್ಟ ಅವಶ್ಯಕತೆಗಳನ್ನೂ ಪೂರೈಸಿಕೊಳ್ಳಲಾಗದ ವಿದ್ಯಾರ್ಥಿಗಳಿಗೆ ಈ ಯೋಜನೆ ವರದಾನವಾಗಲಿದೆ. “ನಡಿಗೆ” ಯೋಜನೆಯಲ್ಲಿ ಸಾರ್ವಜನಿಕರ ಸಹಕಾರದೊಂದಿಗೆ ಕಾರ್ಕಳ ಪರಿಸರದಿಂದ ಒಂದು ಸಾವಿರಕ್ಕೂ ಅಧಿಕ ಪಾದರಕ್ಷೆಗಳ ಜೊತೆಯನ್ನು “ಗ್ರೀನ್‌ ಸೋಲ್”‌ ಸಂಸ್ಥೆಗೆ ಹಸ್ತಾಂತರಿಸಲಾಯಿತು.

Read More