Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂಲಂಡನ್: ಬ್ರಿಟಿಷ್ ಸಂಸತ್ತಿನ ಪ್ರತಿಷ್ಠಿತ ಹೌಸ್ ಆಫ್ ಲಾರ್ಡ್ಸ್ ನಲ್ಲಿ ನಡೆದ ವರ್ಣರಂಜಿತ ಸಮಾರಂಭದಲ್ಲಿ ಖ್ಯಾತ ಅನಿವಾಸಿ ಭಾರತೀಯ ಉದ್ಯಮಿ ಹಾಗು ಕೊಡುಗೈ ದಾನಿ ಡಾ. ರೊನಾಲ್ಡ್ ಕೊಲಾಸೊ ಅವರಿಗ ಇನ್ಸ್ ಟಿಟ್ಯೂಟ್ ಆಫ್ ಡೈರೆಕ್ಟರ್ಸ್ (IOD) ವತಿಯಿಂದ ಡಿಸ್ಟಿಂಗ್ವಿಶ್ಡ್ ಫೆಲೋಶಿಪ್ 2023 ಅವಾರ್ಡ್ ಅನ್ನು ನೀಡಿ ಗೌರವಿಸಲಾಯಿತು. ಕೊಲಾಸೊ ಅವರ ಅಸಾಧಾರಣ ಸಮಾಜ ಸೇವಾ ಚಟುವಟಿಕೆಗಳನ್ನು ಗುರುತಿಸಿ ಈ ಗೌರವ ನೀಡಲಾಗಿದೆ. ಜಗತ್ತಿನ ವಿವಿಧೆಡೆಗಳಿಂದ ಬಂದಿದ್ದ ಗಣ್ಯರು, ಕಾರ್ಪೊರೇಟ್ ದಿಗ್ಗಜರು ಈ ಸಮಾರಂಭದಲ್ಲಿ ಭಾಗವಹಿಸಿದ್ದರು ಲಂಡನ್ ನಗರದ ಲಾರ್ಡ್ ಮೇಯರ್, ಮಿನಿಸ್ಟರ್ ಆಫ್ ಲಂಡನ್ ಹಾಗು ಪಾರ್ಲಿಮೆಂಟರಿ ಅಂಡರ್ ಸೆಕ್ರೆಟರಿ ಪೌಲ್ ಸ್ಕಲ್ಲಿ, ಇನ್ಸ್ ಟಿಟ್ಯೂಟ್ ಆಫ್ ಡೈರೆಕ್ಟರ್ಸ್ ಇಂಡಿಯಾದ ಅಧ್ಯಕ್ಷ ಲೆ. ಜ. ಸುರಿಂದರ್ ನಾಥ್, ಕಾನ್ಫೆಡರೇಷನ್ ಆಫ್ ಬ್ರಿಟಿಷ್ ಇಂಡಸ್ಟ್ರಿನ ಉಪಾಧ್ಯಕ್ಷ ಲಾರ್ಡ್ ಕರಣ್ ಬಿಲ್ಲಿಮೋರಿಯ, ಹೌಸ್ ಆಫ್ ಲಾರ್ಡ್ಸ್ ನ ಮಾಜಿ ಡೆಪ್ಯುಟಿ ಸ್ಪೀಕರ್ ಲಾರ್ಡ್ ಸ್ವರಾಜ್ ಪಾಲ್, ಸದ್ಗುರು ಶ್ರೀ ಮಧುಸೂಧನ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಅಜ್ಜರಕಾಡಿ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಕಾರ್ಯಕ್ರಮ ಜರುಗಿತು. ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಧ್ವಜಾರೋಹಣ ನೆರವೇರಿಸಿ ಮಾತನಾಡಿ ಕನ್ನಡ ನುಡಿಯನ್ನು ಕಟ್ಟುವ ಹಾಗೂ ಉಳಿಸಿ ಬೆಳೆಸುವ ಕಾಯಕದಲ್ಲಿ ಉಡುಪಿ ಜಿಲ್ಲೆಯ ಕೊಡುಗೆ ಅಪಾರವಾದುದು. ಜಿಲ್ಲೆಯಲ್ಲಿ ಕನ್ನಡದೊಂದಿಗೆ ತುಳು, ಕೊಂಕಣಿ, ಬ್ಯಾರಿ ಮೊದಲಾದ ಭಾಷೆಗಳಿವೆ. ಆದರೆ ಇವೆಲ್ಲವೂ ಬೇರೆ ಎಂದು ಭಾವಿಸಬೇಕಿಲ್ಲ. ಎಲ್ಲರೂ ಕನ್ನಡಿಗರೇ ಆಗಿದ್ದಾರೆ ಎಂದರು. ಪ್ರಾಕೃತಿಕ ಏರುಪೇರುವಿನಿಂದಾಗಿ ಈ ಭಾರಿ ವಾಡಿಕೆ ಮಳೆ ಬಾರದೇ ಇರುವುದರಿಂದ ರಾಜ್ಯದ 220 ತಾಲೂಕುಗಳಲ್ಲಿ ಬರ ಕಾಣಿಸಿಕೊಂಡಿದೆ. ಜಿಲ್ಲೆಯಲ್ಲಿಯೂ ಶೇ.25ರಷ್ಟು ಮಳೆ ಕೊರೆಯಾಗಿದೆ. ಇದರಿಂದ ಈಗಾಗಲೇ ಕಾರ್ಕಳ ಹಾಗೂ ಹೆಬ್ರಿ ತಾಲೂಕುಗಳನ್ನು ಸಂಪೂರ್ಣ ಬರಪೀಡಿತ ಹಾಗೂ ಬ್ರಹ್ಮಾವರ ತಾಲೂಕನ್ನು ಸಾಧಾರಣ ಬರಪೀಡಿತ ಎಂದು ಘೋಷಿಸಲಾಗಿದೆ. ಬೆಳೆ ಹಾನಿ ಅಂದಾಜಿಸಿ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದ ಅವರು ಪಶ್ಚಿಮವಾಹಿನಿ ಯೋಜನೆಯಡಿ ಜಿಲ್ಲೆಯಲ್ಲಿ 450 ಕೋಟಿ ರೂ ವೆಚ್ಚದಲ್ಲಿ 56 ಕಿಂಡಿ ಅಣೆಕಟ್ಟು ನಿರ್ಮಾಣ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಅಜ್ಮನ್: ಅರಬ್ ರಾಷ್ಟ್ರದ ಕುಂದಾಪುರ ಕನ್ನಡಿಗರು ಸೇರಿದ ಕಟ್ಟಿದ ನಮ್ಮ ಕುಂದಾಪುರ ಕನ್ನಡ ಬಳಗ ಗಲ್ಪ್ ಸಂಘಟನೆಯ ವತಿಯಿಂದ ಅಜ್ಮನ್ ಹೆಬಿಟೆಟ್ ಸ್ಕೂಲ್ ಸಭಾಂಗಣದಲ್ಲಿ ಆಯೋಜಿಸಿದ್ದ ಕುಂದಗನ್ನಡ ಉತ್ಸವ 2023 – ಕುಂದಾಪುರ ರತ್ನ ಪ್ರಶಸ್ತಿ ಪ್ರದಾನ ಹಾಗೂ ಯಕ್ಷಗಾನ ಪ್ರದರ್ಶನ ಸಮಾರಂಭ ಯಶಸ್ವಿಯಾಗಿ ಜರುಗಿತು. ಸೌದಿ ಅರೇಬಿಯಾದಲ್ಲಿ ನೆಲೆಸಿರುವ ಮಂದರ್ತಿ ಮೂಲದ ಉದ್ಯಮಿ ವಿಶ್ವನಾಥ್ ಹೆಗ್ಡೆ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಗಲ್ಫ್ ರಾಷ್ಟ್ರದಲ್ಲಿರುವ ಕುಂದಗನ್ನಡಿಗರ ಸಾಧನೆ ಮತ್ತು ಪರಿಶ್ರಮ ಜಗತ್ತಿಗೆ ಮಾದರಿಯಾಗಿದೆ. ವೃತ್ತಿ ಬದುಕಿನ ಜೊತೆಗೆ ತಾಯಿನೆಲದ ಅಭಿಮಾನ ಹಾಗೂ ಸಂಘಟಿತ ಶ್ರಮದ ಮೂಲಕ ಕುಂದಾಪುರದ ಜನತೆಗೆ ನೆರವಾಗುವ ನಮ್ಮ ಕುಂದಾಪ್ರ ಕನ್ನಡ ಬಳಗ ಗಲ್ಪ್ ಸಂಘಟನೆಯು ಕುಂದಾಪುರದ ಹೆಮ್ಮೆ ಎಂದರು. ನಮ್ಮ ಕುಂದಾಪ್ರ ಕನ್ನಡ ಬಳಗದ ಅಧ್ಯಕ್ಷ ಸಾದನ್ ದಾಸ್ ಮಾತನಾಡಿ, ಕುಂದಾಪುರ ಕನ್ನಡ ಬಳಗ ಗಲ್ಪ್ ರಾಷ್ಟ್ರದಲ್ಲಿ ಕುಂದಗನ್ನಡಗರಿಗೆ ಧ್ವನಿಯಾಗುವ ಜೊತೆಗೆ ಪ್ರತಿ ವರ್ಷ ಹತ್ತಾರು ವಿಭಿನ್ನ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ಬಡ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಇಂದಿನ ದಿನಗಳಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಬಹಳಷ್ಟು ಪೈಪೋಟಿ ಇದೆ. ಶೈಕ್ಷಣಿಕ ಕ್ಷೇತ್ರ ಬಹಳಷ್ಟು ವಿಸ್ತಾರವಾಗಿದ್ದು, ಶಿಕ್ಷಣಕ್ಕೆ ನಮ್ಮ ದೇಶದಲ್ಲಿ ವಿಪುಲ ಅವಕಾಶಗಳಿವೆ. ಸಾಕಷ್ಟು ಸಂಪನ್ಮೂಲಗಳು, ಸಂಪನ್ಮೂಲ ವ್ಯಕ್ತಿಗಳಿದ್ದು, ಇವೆಲ್ಲವನ್ನೂ ಬಳಸಿಕೊಂಡು ಸಮೃದ್ಧ ದೇಶ ಕಟ್ಟುವ ಕಾಯಕದಲ್ಲಿ ನಮ್ಮನ್ನು ತೊಡಗಿಸಿಕೊಳ್ಳಬೇಕು. ನಾವು ಹುಟ್ಟಿ ಬೆಳೆದ ಊರು ಮತ್ತು ಶಿಕ್ಷಣ ಪಡೆದ ಸಂಸ್ಥೆಗಳಲ್ಲಿ ನಾವೆಲ್ಲರೂ ತೊಡಗಿಸಿಕೊಂಡು, ಆ ಗ್ರಾಮದ, ದೇಶದ ಅಭಿವೃದ್ಧಿಗೆ ಸಹಕಾರ ನೀಡಬೇಕು ಎಂದು ಸಿದ್ಧಾಪುರ ಸರಸ್ವತಿ ವಿದ್ಯಾಲಯ ವಿದ್ಯಾಸಂಸ್ಥೆಯ ಸಂಚಾಲಕ ಡಿ.ಗೋಪಾಲಕೃಷ್ಣ ಕಾಮತ್ ಹೇಳಿದರು. ಗಂಗೊಳ್ಳಿಯ ಜಿ.ಎಸ್.ವಿ.ಎಸ್.ಅಸೋಸಿಯೇಶನ್ ಪ್ರಾಯೋಜಿತ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ದಾನಿಗಳಾದ ಡಾ.ಲೋಕೇಶ್ ಗಂಗೊಳ್ಳಿ ಸಹಕಾರದೊಂದಿಗೆ ನೂತನವಾಗಿ ನಿರ್ಮಿಸಲಾಗಿರುವ ವಿಜ್ಞಾನ ಮತ್ತು ಗಣಿತ ಪ್ರಯೋಗಾಲಯ ಉದ್ಘಾಟನೆ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಶುಕ್ರವಾರ ಅವರು ಮಾತನಾಡಿದರು. ಜಿ.ಎಸ್.ವಿ.ಎಸ್.ಅಸೋಸಿಯೇಶನ್ ಅಧ್ಯಕ್ಷ ಡಾ.ಕಾಶೀನಾಥ ಪೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಿಶಾಲಾಕ್ಷಿ ಮತ್ತು ಪಾಂಡುರಂಗ ಶೇರುಗಾರ್ ಅವರು ನೂತನ ವಿಜ್ಞಾನ ಮತ್ತು ಗಣಿತ ಪ್ರಯೋಗಾಲಯವನ್ನು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಅ.31: ಹಿರಿಯ ಪತ್ರಕರ್ತ, ಸಾಹಿತಿ, ಸಂಘಟಕ ಶೇಖರ ಅಜೆಕಾರು (54) ಅವರು ತೀವ್ರ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಕಾರ್ಕಳ ತಾಲೂಕಿನ ಅಜೆಕಾರು ನಿವಾಸಿಯಾದ ಶೇಖರ್ ಅವರು ಇಂದು ಬೆಳಗ್ಗೆ ಮನೆಯಲ್ಲಿರುವಾಗ ಕುಸಿದು ಬಿದ್ದಿದ್ದರು. ಕುಟುಂಬದವರು ತಕ್ಷಣ ಕಾರ್ಕಳ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ವೈದ್ಯರು ಮೃತಪಟ್ಟಿರುವುದನ್ನು ಖಚಿತಪಡಿಸಿದರು. ಶೇಖರ ಅಜೆಕಾರು ಅವರು ಕುಂದಪ್ರಭ ವಾರಪತ್ರಿಕೆಯಿಂದ ವೃತ್ತಿ ಜೀವನ ಆರಂಭಿಸಿದರು. ಮುಂಬಯಿಯ ಕರ್ನಾಟಕ ಮಲ್ಲ ಪತ್ರಿಕೆಯ ಉಪಸಂಪಾದಕರಾಗಿ, ಮಂಗಳೂರಿನ ಜನವಾಹಿನಿ ಪತ್ರಿಕೆಗಳಲ್ಲಿ ಪೂರ್ಣಕಾಲಿಕ ಪತ್ರಕರ್ತರಾಗಿ ಎರಡು ದಶಕಗಳ ಕಾಲ ಪ್ರಮುಖ ಜವಾಬ್ದಾರಿಗಳನ್ನು ನಿರ್ವಹಿಸಿದ್ದಾರೆ. ಡೈಜಿವರ್ಡ್, ಕನ್ನಡಪ್ರಭ, ಉಷಾ ಕಿರಣ ಪತ್ರಿಕೆಗಳಿಗೆ ವರದಿಗಾರರಾಗಿ ಗ್ರಾಮೀಣ ಪತ್ರಿಕೋದ್ಯದಲ್ಲಿ ಹೊಸ ಹಾದಿ ತುಳಿದವರು. ಭಂಡಾರ್ಕಾರ್ಸ್ ಕಾಲೇಜಿನ ಬಿಕಾಂ ವಿದ್ಯಾರ್ಥಿಯಾಗಿದ್ದ ಶೇಖರ್ ಅವರು, ಯುವ ಸ್ಪಂದನ ಹೆಸರಿನ ಹಸ್ತ ಪತ್ರಿಕೆ, ಮಾಸಿಕ ಮುದ್ರಿತ ಪತ್ರಿಕೆಗಳನ್ನು ಸಂಪಾದಿಸಿ ಪ್ರಕಟಿಸಿದ್ದರು. ಪತ್ರಕರ್ತರ ವೇದಿಕೆ (ರಿ) ಬೆಂಗಳೂರು ಇದರ ಉಡುಪಿ ಜಿಲ್ಲಾಅಧ್ಯಕ್ಷರಾಗಿ 11 ವರ್ಷಗಳಿಂದ ಸೇವೆ ಸಲ್ಲಿಸುತ್ತಾ ಹಿರಿಯರೆಡೆಗೆ ನಮ್ಮ ನಡಿಗೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಾರ್ವಜನಿಕ ಶಿಕ್ಷಣ ಇಲಾಖೆ ಉಡುಪಿ ಮತ್ತು ಸರಕಾರಿ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಕುಂದಾಪುರದ ಜಂಟಿ ಆಶ್ರಯದಲ್ಲಿ ಕುಂದಾಪುರದ ಗಾಂಧಿ ಮೈದಾನದಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಶಂಕರನಾರಾಯಣದ ಮದರ್ ತೆರೆಸಾ ಮೆಮೋರಿಯಲ್ ಸ್ಕೂಲ್‌ನ ವಿದ್ಯಾರ್ಥಿಗಳು ಪ್ರತ್ಯೇಕ ಕ್ರೀಡಾ ವಿಭಾಗದಲ್ಲಿ ಸಾಧನೆಗೈದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಾಲೆಯ ಎಂಟನೇ ತರಗತಿ ವಿದ್ಯಾರ್ಥಿ ರೋಷನ್ ಆರ್ 14ರ ಒಳಗಿನ ವಯೋಮಾನದ ವಿದ್ಯಾರ್ಥಿಗಳ ವಿಭಾಗದಲ್ಲಿ 100 ಮೀಟರ್ ಓಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಾಲೆಯ 7ನೇ ತರಗತಿ ವಿದ್ಯಾರ್ಥಿ ಆಕಾಶ್, 14ರ ಒಳಗಿನ ವಯೋಮಾನದ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳ ಕ್ರೀಡಾಕೂಟದ ಚಕ್ರ ಎಸೆತದಲ್ಲಿ ಪ್ರಥಮ ಸ್ಥಾನ, ಗುಂಡು ಎಸೆತ ಪ್ರಥಮ ಸ್ಥಾನ ಹಾಗೂ 100 ಮೀಟರ್ ಓಟದಲ್ಲಿ ಪ್ರಥಮ ಸ್ಥಾನ ಗಳಿಸುವ ಮೂಲಕ ಜಿಲ್ಲಾ ಮಟ್ಟದ ಕ್ರೀಡಾಕೂಟದ ವೈಯಕ್ತಿಕ ಸಮಗ್ರ ಚಾಂಪಿಯನ್ ಟ್ರೋಫಿಯನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ವಿದ್ಯಾರ್ಥಿಗಳ ಈ ಸಾಧನೆಯನ್ನು ಶಾಲೆಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬ್ರಹ್ಮಾವರದಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ 17 ವಯೋಮಾನದ ಬಾಲಕರ ಕ್ರಿಕೆಟ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲೆ 9ನೇ ತರಗತಿ ವಿದ್ಯಾರ್ಥಿ ಅರ್ಯನ್ ಎ. ಖಾರ್ವಿ ಭಾಗವಹಿಸಿ, ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕಾರ್ಕಳ: ನಾನು ಎಂಬುದು ವಯಕ್ತಿಕ. ಆದ್ದರಿಂದ ಉನ್ನತಿಗೇರುವುದು, ಹೆಸರು ಗಳಿಸುವುದು ಸಂಸ್ಥೆಯಿಂದಲೇ ಹೊರತು ವ್ಯಕ್ತಿಯಿಂದಲ್ಲ. ವಿಭಿನ್ನವಾಗಿ ಯೋಚಿಸುವುದರಿಂದ ಕ್ರಿಯಾತ್ಮಕ ರಚನೆಗಳು ಹೊರಹೊಮ್ಮುತ್ತವೆ. ಪ್ರಯತ್ನಪೂರ್ವಕವಾದ ಕಾರ್ಯ ಖಂಡಿತ ಯಶಸ್ಸನ್ನು ತಂದುಕೊಡುತ್ತದೆ. ವ್ಯಕ್ತಿಯ ವ್ಯಕ್ತಿತ್ವ ನಿರ್ಮಾಣ ಕಾರ್ಯದಲ್ಲಿ ಹೊಸತನ್ನು ಹುಡುಕಿ ಅಳವಡಿಸಿಕೊಳ್ಳಬೇಕು. ವಿದ್ಯಾರ್ಥಿಗಳೂ ಸಹ ಅನೇಕ ರೀತಿಯ ಸಾಮರ್ಥ್ಯ ಹೊಂದಿದ್ದಾರೆ. ಭಿನ್ನ ವಿಚಾರಧಾರೆ ಹೊಂದಿದವರಿದ್ದಾರೆ. ಅವರ ಅಭಿರುಚಿಗೆ ತಕ್ಕಂತೆ ಮಾರ್ಗದರ್ಶನ ನೀಡಬೇಕಾದದ್ದು ಉಪನ್ಯಾಸಕರ ಕರ್ತವ್ಯವಾಗಬೇಕು ಎಂದು ರಾಮಕುಂಜೇಶ್ವರ ಪ್ರೌಢಶಾಲೆಯ ಶಿಕ್ಷಕ, ಜೆ ಸಿ ಐ ನ ತರಬೇತುದಾರ ಶ್ರೀ ಸತೀಶ್‌ ಭಟ್‌ ಪುತ್ತೂರು ಇವರು ಕಾರ್ಕಳ ಕ್ರಿಯೇಟಿವ್‌ ಕಾಲೇಜಿನಲ್ಲಿ ನಡೆದ “ಕ್ರಿಯೇಟಿವ್‌ ಉನ್ನತಿ” ಉಪನ್ಯಾಸಕರಿಗೆ ಪುನಶ್ಚೇತನ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕಿಗಳಾಗಿ ಆಗಮಿಸಿ ಮಾತನಾಡಿದರು. ಪ್ರಾಚಾರ್ಯರಾದ ವಿದ್ವಾನ್‌ ಗಣಪತಿ ಭಟ್‌ ಪ್ರಾಸ್ತಾವಿಕವಾಗಿ ಮಾತನಾಡುತ್ತಾ ಕಾರ್ಯಗಾರಗಳು ಪ್ರತಿಯೊಬ್ಬ ಉಪನ್ಯಾಸಕರ ಹಾಗೂ ಉಪನ್ಯಾಸಕೇತರರು ವಿಮರ್ಶೆ ಮತ್ತು ಚಿಂತನೆಗೊಳಪಡಿಸುವಂತೆ ಮಾಡುತ್ತವೆ. ನಮಗೆ ಅತ್ಯುತ್ತಮವಾದ ಅವಕಾಶಗಳಿವೆ. ಬದಲಾದ ಕಾಲಮಾನಕ್ಕೆ ತಕ್ಕಂತೆ ನಾವೂ ಬದಲಾಗಿ ಸವಾಲನ್ನು ಸ್ವೀಕರಿಸಿ ಮುನ್ನುಗ್ಗಬೇಕಾಗಿದೆ.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಬ್ರಹ್ಮಾವರ ಸಕ್ಕರೆ ಕಾರ್ಖಾನೆಯ ಗುಜರಿ ಮಾರಾಟದಲ್ಲಿ 14 ಕೋಟಿ ರೂ. ಹೆಚ್ಚು ಅಕ್ರಮ ನಡೆದಿದೆ ಎಂದು ಉಡುಪಿ ಜಿಲ್ಲಾ ರೈತ ಸಂಘ ಸಲ್ಲಿಸಿದ್ದ ದೂರನ್ನು ದಾಖಲಿಸಿಕೊಂಡಿದ್ದ ಹೆಚ್ಚುವರಿ ಸಿವಿಲ್ ನ್ಯಾಯಾಲಯವು ಪೊಲೀಸರಿಗೆ ಡಿಸೆಂಬರ್ 12ರೊಗಳಗೆ ವರದಿ ಸಲ್ಲಿಸಲು ನಿರ್ದೇಶನ ನೀಡಿತ್ತು. ಇದರ ಬೆನ್ನಲ್ಲೇ ದ.ಕ ಸಹಕಾರಿ ಸಕ್ಕರೆ ಕಾರ್ಖಾನೆಯ ಎಂಡಿ, ಅಧ್ಯಕ್ಷರು, ಆಡಳಿತ ಮಂಡಳಿ, ಬಿಡ್ಡರ್ ಹಾಗೂ ಸಿಬ್ಬಂದಿಗಳ ವಿರುದ್ಧ ಬ್ರಹ್ಮಾವರ ಪೊಲೀಸರು ಎಂಐಆರ್ ದಾಖಲಿಸಿಕೊಂಡಿದ್ದಾರೆ. 18-08-2021ರಿಂದ 05-12-2022ರ ಮಧ್ಯಾವದಿಯಲ್ಲಿ ಸಕ್ಕರೆ ಕಾರ್ಖಾನೆಯ ಸಕ್ಕರೆ ಸ್ಥಾವರ ಮತ್ತು ಯಂತ್ರೋಪಕರಣಗಳ ಮಾರಾಟಕ್ಕೆ ಸಂಬಂಧಿಸಿದಂತೆ ಟೆಂಡರ್ ಕಮ್ ಹರಾಜು ಪ್ರಕ್ರಿಯೆಯಲ್ಲಿ ವಂಚನೆ, ದಾಖಲೆಗಳನ್ನು ರಚಿಸುವಲ್ಲಿ ಹುದ್ದೆಯ ದುರುಪಯೋಗ ಮತ್ತು ವೈಯಕ್ತಿಕ ಲಾಭ ಪಡೆಯುವ ಉದ್ದೇಶದಿಂದ ಪರಸ್ಪರ ಪಿತೂರು ನಡೆಸಿ ಕಾನೂನುಬಾಹಿರ ಟೆಂಡರ್ ಪ್ರಕ್ರಿಯ ಮಾಡುವ ಮೂಲಕ ನಂಬಿಕೆ ದ್ರೋಹ, ದುರುಪಯೋಗ, ವಂಚನೆಯ ಮೂಲಕ ಸುಳ್ಳುದಾಖಲೆಗಳನ್ನು ಸೃಷ್ಟಿಸಿ ಗುಜರಿಯನ್ನು ಮಾರಾಟ ಮಾಡಲಾಗಿದೆ. ಇದು ರೈತರಿಗೆ ಮತ್ತು ಸರಕಾರಕ್ಕೆ 14 ಕೋಟಿಯಷ್ಟು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ ಅ.26: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಗುಲ್ವಾಡಿ, ಕಾವ್ರಾಡಿ, ಬಳ್ಕೂರು ಗ್ರಾಮದ ಸ.ನಂ. 180, 157, 189 ಲ್ಲಿನ 11.90 ಎಕ್ರೆ ವಿಸ್ತೀರ್ಣ ಪ್ರದೇಶದ ಮರಳು ಬ್ಲಾಕ್ ಸಂಖ್ಯೆ 4 ರಲ್ಲಿ ಹಾಗೂ ಜಪ್ತಿ, ಹಳ್ನಾಡು ಗ್ರಾಮದ ಸ.ನಂ. 174, 56 ರಲ್ಲಿನ 5.70 ಎಕ್ರೆ ವಿಸ್ತೀರ್ಣ ಪ್ರದೇಶದ ಮರಳು ಬ್ಲಾಕ್ ಸಂಖ್ಯೆ 6 ರಲ್ಲಿ ಮರಳನ್ನು ಸಾರ್ವಜನಿಕರಿಗೆ ಹಾಗೂ ಸರ್ಕಾರಿ ಕಾಮಗಾರಿಗಳಿಗೆ ಸ್ಯಾಂಡ್ ಆಪ್ ಮೂಲಕ ಪೂರೈಸಲು ಜಿಲ್ಲಾ ಮರಳು ಉಸ್ತುವಾರಿ ಸಮಿತಿಯಲ್ಲಿ ತೀರ್ಮಾನಿಸಲಾಗಿದ್ದು, ಸಾರ್ವಜನಿಕರು ಸದರಿ ಮರಳನ್ನು UಆUPI E-sand APP ಮೂಲಕ ಬುಕ್ಕೀಂಗ್ ಮಾಡಿಕೊಂಡು ಪಡೆದುಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಹಿರಿಯ ಭೂ ವಿಜ್ಞಾನಿಯವರ ಕಚೇರಿ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ರಜತಾದ್ರಿ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2572333, 2950088 ಹಾಗೂ Udupi E-Sand App ದೂ.ಸಂಖ್ಯೆ: 6364024555, 6366745888 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ

Read More