ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶೈಕ್ಷಣಿಕ ವಾತಾವರಣದಲ್ಲಿ ವಿದ್ಯಾರ್ಜನೆ ಮಾಡುವ ಸಂದರ್ಭದಲ್ಲಿ ಸಾಮರಸ್ಯ ಬಹಳ ಮುಖ್ಯ. ಪ್ರಥಮ ವರ್ಷದ ಪದವಿಗೆ ಸೇರಿದ ನಿಮಗೆ ಭವಿಷ್ಯದಲ್ಲಿ ಜೀವನಕ್ಕೆ ಅಗತ್ಯವಾದ ಮೌಲ್ಯಗಳನ್ನು ಅಳವಡಿಸಿಕೊಳ್ಳಿ. ಬದುಕಿನ ಕೊನೆಯವರೆಗೆ ಬರುವ ಶಿಕ್ಷಣವನ್ನು ಕಲಿತು ಬದುಕಿರಿ ಎಂದು ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಳ ಪದವಿ-ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಗೋಪಾಲಕೃಷ್ಣ ಜಿ. ಬಿ. ಹೇಳಿದರು. ಅವರು ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯು ಪ್ರಥಮ ಪದವಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ‘ಫ್ರೆಶರ್ಸ್ ಡೇ’ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಉಪ-ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳಾದ ರಕ್ಷಿತ್ ರಾವ್ ಗುಜ್ಜಾಡಿ, ರೇಷ್ಮಾ ಶೆಟ್ಟಿ ಉಪಸ್ಥಿತರಿದ್ದರು. ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯ ಕಾರ್ಯದರ್ಶಿ ವಿಕಾಸ್ ಶೆಟ್ಟಿ ಸ್ವಾಗತಿಸಿ, ಎಸ್ಕ್ಯೂಎಸಿ ಪ್ರತಿನಿಧಿ ಖುಷಿ ಶೆಟ್ಟಿ ವಂದಿಸಿ, ಸಾಂಸ್ಕೃತಿಕ ಕಾರ್ಯದರ್ಶಿ ಅಭಿಷೇಕ್…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಘಟಕ ಆಶ್ರಯದಲ್ಲಿ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮ ವೀರಾ ರಾಜೇಂದ್ರ ಹೆಗ್ಡೆ ಸಭಾಂಗಣದಲ್ಲಿ ಜರುಗಿತು. ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ನಿಟ್ಟೆ ವಿಶ್ವ ವಿದ್ಯಾನಿಲಯದ ಭಾರತೀಯ ಜ್ಞಾನ ವ್ಯವಸ್ಥೆ ಕೇಂದ್ರ, ನಿಟ್ಟೆ ಇಲ್ಲಿನ ಪ್ರಾಧ್ಯಾಪಕರು ಮತ್ತು ನಿರ್ದೇಶಕರು, ಡಾ. ಸುಧೀರ ರಾಜ್ ಕೆ., ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ, ಇಂದಿನ ವೇಗವಾಗಿ ಬದಲಾಗುತ್ತಿರುವ ಜಗತ್ತಿನಲ್ಲಿ ಕೇವಲ ಪುಸ್ತಕದ ಜ್ಞಾನವನ್ನು ಹೊಂದಿರುವುದು ಸಾಕಾಗುವುದಿಲ್ಲ. ವಿದ್ಯಾರ್ಥಿಗಳು ತಮ್ಮ ಜ್ಞಾನವನ್ನು ಪ್ರಾಯೋಗಿಕವಾಗಿ ಬಳಸುವ ಸಾಮರ್ಥ್ಯ ಸಂವಹನ ಕೌಶಲ್ಯ ಸೃಜನಶೀಲತೆ ನಾಯಕತ್ವ ಮತ್ತು ಸಮಸ್ಯೆ ಪರಿಹರಿಸುವ ಸಾಮರ್ಥ್ಯ ಬೆಳಸಿಕೊಳ್ಳುವುದು ಅತೀ ಅಗತ್ಯ. ಭಾರತೀಯ ಜ್ಙಾನ ವ್ಯವಸ್ಥೆಯು ಅನುಭವ ಮೌಲ್ಯ ಮತ್ತು ಪ್ರಾಯೋಗಿಕ ಕಲಿಕೆಗೆ ಮಹತ್ವ ನೀಡುತ್ತದೆ. ಆದ್ದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಜ್ಞಾನವನ್ನು ಪ್ರಾಯೋಗಿಕ ಕೌಶಲ್ಯಗಳೊಂದಿಗೆ ಸಂಪರ್ಕಿಸಬೇಕಾದರೆ ಇಂತಹ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಆಳವಾದ ಪರಿಣಿತಿಯನ್ನು ಬೆಳೆಸಿಕೊಂಡು ಮತ್ತು ಉತ್ತಮ ಮೌಲ್ಯಗಳನ್ನು ಅಳವಡಿಸಿಕೊಂಡರೆ ವಿದ್ಯಾರ್ಥಿಗಳು…
ಕುಂದಾಪ್ರ ಡಾಟ್ ಕಾಂ ಸುದ್ದಿಬೈಂದೂರು: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾಗಿ ಡಾ. ಉಮೇಶ್ ಮಯ್ಯ ಅಧಿಕಾರ ಸ್ವೀಕರಿಸಿದ್ದಾರೆ. ಮೂಲತ: ಯಡ್ತರೆ ಗ್ರಾಮದವರಾದ ಉಮೇಶ್ ಮಯ್ಯ ಅವರು ಡಾ. ಜಿ. ಶಂಕರ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಅಜ್ಜರಕಾಡು ಇಲ್ಲಿಂದ ವರ್ಗಾವಣೆಗೊಂಡಿದ್ದು, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೈಂದೂರು ಇಲ್ಲಿ ಪ್ರಭಾರ ಪ್ರಾಂಶುಪಾಲರ ಅಧಿಕಾರ ಸ್ವೀಕರಿಸಿದರು. ಇವರು 32 ವರ್ಷಗಳ ಸೇವಾ ಅನುಭವ ಹೊಂದಿದ್ದು, M.Com., M.B.A., M.Phil., Ph.D. ಪದವಿಯನ್ನು ಪಡೆದಿರುತ್ತಾರೆ. ಈ ಹಿಂದೆ 2009ರಿಂದ 2017ರ ತನಕ ವಾಣಿಜ್ಯಶಾಸ್ತ್ರ ಮತ್ತು ನಿರ್ವಹಣಾಶಾಸ್ತ್ರದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿರುತ್ತಾರೆ. ಡಾ. ಉಮೇಶ್ ಮಯ್ಯ ಅವರ ಪ್ರಮುಖ ಸಾಧನೆಗಳು ಮತ್ತು ಕೊಡುಗೆಗಳು:
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕಾಪು ತಾಲೂಕಿನ ಮುದರಂಗಡಿ ಪೇಟೆಯಲ್ಲಿ ಶುಕ್ರವಾರ ಹಾಡಹಗಲೇ ನಡೆದ ಕೊಲೆ ಪ್ರಕರಣದಲ್ಲಿ ಉಡುಪಿ ಪೊಲೀಸರು ಮಿಂಚಿನ ಕಾರ್ಯಾಚರಣೆಯಲ್ಲಿ ಶನಿವಾರ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಘಟನೆ ನಡೆದು ಕೆಲವೇ ಗಂಟೆಯೊಳಗೆ ಪೊಲೀಸರು ತಂಡವು ಎಲ್ಲಾ ಮೂವರು ಸುಪಾರಿ ಹಂತಕರನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ಉತ್ತರ ಪ್ರದೇಶದ ರಾಜು (42), ಉತ್ತರಾಖಂಡ ರಾಜ್ಯದ ಅಜಯ್ ರಸ್ತೋಗಿ ಯಾನೆ ಅನ್ನೋಲ್ (23) ಮತ್ತು ಬಿಹಾರ ರಾಜ್ಯದ ಜಿಯಾಹುಲ್ ವಜೂಲ್ ಶೇಖ್ ಅಲಿಯಾಸ್ ದೀಪಕ್ (38) ಎಂದು ಗುರುತಿಸಲಾಗಿದೆ. ಘಟನೆ ವಿವರ:ಕಾಪು ತಾಲೂಕು ಮುದರಂಗಡಿಯ ಸೆಂಗ್ ಕ್ಷೇವಿಯರ್ ಚರ್ಚ್ನ ಕಾಂಪ್ಲೆಕ್ಸ್ನಲ್ಲಿ ಡೇವಿಡ್ ಡಿಸೋಜಾ (55) ಎಂಬವರು ಪ್ರಿನ್ಸ್ ಎಂಟರ್ಪ್ರೈಸಸ್ ಎಂಬ ಹೆಸರಿನ ಉದ್ಯಮದ ಕಚೇರಿ ಹೊಂದಿದ್ದು, ಶುಕ್ರವಾರ ಕಚೇರಿಗೆ ಬಂದು ಬಳಿಕ ತನ್ನ ಥಾರ್ ವಾಹನದ ಬಳಿ ಹೋದಾಗ ದುಷ್ಕರ್ಮಿಯೊಬ್ಬ ಪಿಸ್ತೂಲ್ ನಿಂದ ತಲೆಗೆ ಗುಂಡು ಹಾರಿಸಿದ್ದ. ಬಳಿಕ ಆರೋಪಿಗಳು ಪರಾರಿಯಾಗಿದ್ದ. ಬಸ್ನಲ್ಲಿ ಪರಾರಿಯಾಗಿದ್ದ ಆರೋಪಿಗಳು:ಮುದರಂಗಡಿಯಿಂದ ಬೈಕ್ನಲ್ಲಿ ಪರಾರಿಯಾಗಿದ್ದ ಆರೋಪಿಗಳು ಬೈಕನ್ನು ಎರ್ಮಾಳ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮುಖ್ಯ ಆಯುಕ್ತರಾದ ಡಾ. ಪಿ.ಜಿ.ಆರ್ ಸಿಂಧ್ಯಾ ಅವರು ಭೇಟಿ ನೀಡಿ ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ದಳ ಹಾಗೂ ಶಿಕ್ಷಕರನ್ನು ಉದ್ದೇಶಿಸಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ರಾಜ್ಯ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಆಯುಕ್ತ ಪ್ರಭಾಕರ ಭಟ್, ಜಿಲ್ಲಾ ಆಯುಕ್ತರಾದ ಇಂದ್ರಾಳಿ ಜಯಕರ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ಆನಂದ ಅಡಿಗ, ಎ.ಎಸ್.ಓ.ಸಿ ಸುಮನ್ ಶೇಖರ್ , ಹಿರಿಯ ಸ್ಕೌಟ್ಸ್ ಶಿಕ್ಷಕ ಸುಬ್ರಮಣ್ಯ ಅವರು, ಪೂರ್ವ ಪ್ರಾಥಮಿಕ, ಪ್ರಾಥಮಿಕ ಹಾಗೂ ಪದವಿ ಪೂರ್ವ ಕಾಲೇಜಿನ ಮುಖ್ಯಸ್ಥರು ಉಪಸ್ಥಿತರಿದ್ದರು. ಪ್ರೌಢ ಶಾಲಾ ಮುಖ್ಯ ಶಿಕ್ಷಕ ಕೃಷ್ಣ ಅಡಿಗ ಸರ್ವರನ್ನು ಸ್ವಾಗತಿಸಿದರು. ಬುಲ್ ಬುಲ್ ಶಿಕ್ಷಕಿ ಪದ್ಮಾವತಿ ಕಾರ್ಯಕ್ರಮವನ್ನು ನಿರೂಪಿಸಿ, ಗೈಡ್ಸ್ ಶಿಕ್ಷಕಿ ರಮಣಿ ಅವರು ವಂದನಾರ್ಪಣೆ ಗೈದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಕಳೆದ ಒಂದು ವರ್ಷದಿಂದ ಉದ್ಯೋಗಕ್ಕಾಗಿ ಕಾಯುತ್ತಿದ್ದ ಭವ್ಯಶ್ರೀ ಅವರ ನಿರೀಕ್ಷೆಗೆ ಆಳ್ವಾಸ್ ಪ್ರಗತಿ–2026 ಹೊಸ ತಿರುವು ನೀಡಿದೆ. ದೈಹಿಕ ವಿಶೇಷಚೇತನರಾಗಿರುವ ಅವರು, ತಮ್ಮ ಸಹೋದರನ ನೆರವಿನಿಂದ ಗಾಲಿಕುರ್ಚಿಯಲ್ಲಿ ಆಗಮಿಸಿ, ಉದ್ಯೋಗ ಮೇಳದಲ್ಲಿ ಭಾಗವಹಿಸಿ ಮೈಸೂರಿನ ರೆಡ್ಡೀಸ್ ಫೌಂಡೇಷನ್ನಲ್ಲಿ ಅಕೌಂಟೆಂಟ್ ಹುದ್ದೆಗೆ ಆಯ್ಕೆಯಾಗಿದ್ದಾರೆ. ವಾಮದಪದವು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾಭ್ಯಾಸ ಪೂರ್ಣಗೊಳಿಸಿದ ಭಾಗ್ಯಶ್ರೀ ಕುಲಾಲ್ ಒಂದು ವರ್ಷದ ಹಿಂದೆ ಎಂ.ಕಾಂ ಪದವಿ ಪಡೆದಿದ್ದರು. ಪದವಿ ಪಡೆದ ಬಳಿಕ ಉದ್ಯೋಗಕ್ಕಾಗಿ ನಿರಂತರವಾಗಿ ಪ್ರಯತ್ನಿಸುತ್ತಿದ್ದರೂ, ಕಳೆದ ಒಂದು ವರ್ಷದಿಂದ ಸೂಕ್ತ ಅವಕಾಶಕ್ಕಾಗಿ ಕಾಯುತ್ತಿದ್ದರು. ಉದ್ಯೋಗದ ನಿರೀಕ್ಷೆಯೊಂದಿಗೆ ಆಳ್ವಾಸ್ ಪ್ರಗತಿಗೆ ಆಗಮಿಸಿದ ಭವ್ಯಶ್ರೀ ಅವರಿಗೆ, ದೈಹಿಕ ಸವಾಲು ಯಾವುದೂ ತಮ್ಮ ಕನಸಿಗೆ ಅಡ್ಡಿಯಾಗಲಿಲ್ಲ. ತಮ್ಮ ಸಹೋದರನ ನೆರವಿನಿಂದ ಗಾಲಿಕುರ್ಚಿಯಲ್ಲಿ ಮೇಳಕ್ಕೆ ಆಗಮಿಸಿ, ಸಂದರ್ಶನ ಎದುರಿಸಿ, ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದರು. ಅಂತಿಮವಾಗಿ ಮೈಸೂರಿನ ರೆಡ್ಡೀಸ್ ಫೌಂಡೇಷನ್ನಲ್ಲಿ ಅಕೌಂಟೆಂಟ್ ಹುದ್ದೆಗೆ ಆಯ್ಕೆಯಾಗುವ ಮೂಲಕ ತಮ್ಮ ಬಹುದಿನಗಳ ಉದ್ಯೋಗದ ಕನಸನ್ನು ನನಸಾಗಿಸಿಕೊಂಡಿದ್ದಾರೆ. ಉದ್ಯೋಗ ಸಿಕ್ಕಿರುವುದು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬ್ರಹ್ಮಾವರ: ಗ್ರಾಮಾಭಿವೃದ್ಧಿ ಮತ್ತು ಸ್ವ ಉದ್ಯೋಗ ತರಬೇತಿ (ರುಡ್ಸೆಟ್) ಸಂಸ್ಥೆ, ಬ್ರಹ್ಮಾವರ, ಜಯಂಟ್ಸ್ ಗ್ರೂಪ್ ಬ್ರಹ್ಮಾವರ, ಸಿ.ಎಸ್.ಐ. ಲೊಂಬಾರ್ಡ್ ಮಿಷನ್ ಆಸ್ಪತ್ರೆ ಹಾಗೂ ರುಡ್ಸೆಟ್ ಆಸರೆ ಸಂಘಟನೆ ಇವರ ಸಂಯುಕ್ತ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರದ ಉದ್ಘಾಟನಾ ಸಮಾರಂಭವು ರುಡ್ಸೆಟ್ ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಪ್ರಮೋದ್ ಮಧ್ವರಾಜ್, ಮಾಜಿ ಸಚಿವರು, ಮೀನುಗಾರಿಕೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉದ್ಯಮಿಗಳು ಹಾಗೂ ಕೊಡುಗೈ ದಾನಿಗಳು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ರುಡ್ಸೆಟ್ ಸಂಸ್ಥೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ತರಬೇತಿ ಪಡೆಯುತ್ತಿರುವುದನ್ನು ಗಮನಿಸಿ ಸಂತಸ ವ್ಯಕ್ತಪಡಿಸಿದರು. ಹಿಂದಿನ ಕಾಲದಲ್ಲಿ ಮಹಿಳೆಯರು ಕೆಲವು ನಿರ್ದಿಷ್ಟ ಕೆಲಸಗಳಿಗೆ ಮಾತ್ರ ಸೀಮಿತರಾಗಿದ್ದರು. ಆದರೆ ಇಂದು ಮಹಿಳೆಯರು ಮುಂದೆ ಬಂದು ವಿವಿಧ ಕೌಶಲ್ಯಗಳನ್ನು ಪಡೆದುಕೊಂಡು ತಮ್ಮ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಿಕೊಳ್ಳಲು ಪ್ರಯತ್ನಿಸುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದು ಹೇಳಿದರು. ವ್ಯವಹಾರದಲ್ಲಿ ಕೇವಲ ಲಾಭಗಳಿಸುವುದಷ್ಟೇ ಮುಖ್ಯವಲ್ಲ;…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರಕೃತಿ ವಿಕೋಪ ಹಾಗೂ ಅತಿವೃಷ್ಠಿಯಿಂದಾಗಿ ಜನಸಾಮಾನ್ಯರಿಗೆ ಯಾವುದೇ ರೀತಿಯ ಸಮಸ್ಯೆಗಳು ಉಂಟಾದಲ್ಲಿ ಕೂಡಲೇ ಸ್ಪಂದಿಸುವುದರ ಜೊತೆಗೆ ಪರಿಹಾರದ ಮೊತ್ತವನ್ನು ಶೀಘ್ರದಲ್ಲಿಯೇ ನೀಡಬೇಕು ಎಂದು ಅಧಿಕಾರಿಗಳಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್ ಫರೀದ್ ಹೇಳಿದರು. ಅವರು ಶುಕ್ರವಾರ ಕಾಪು ತಾಲೂಕು ಕಚೇರಿ ಸಭಾಂಗಣದಲ್ಲಿ ಪ್ರಕೃತಿ ವಿಕೋಪಕ್ಕೆ ಸಂಬಂಧಿಸಿದಂತೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರಕೃತಿ ವಿಕೋಪ ಹಾಗೂ ಅತಿವೃಷ್ಠಿಯಿಂದಾಗಿ ಪ್ರಾಣಹಾನಿ, ಮನೆಹಾನಿ ಸೇರಿದಂತೆ ಮತ್ತಿತರ ಹಾನಿಗಳು ಉಂಟಾದಲ್ಲಿ ಕೆಳಮಟ್ಟದ ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ, ಅವರುಗಳಿಗೆ ಅಗತ್ಯ ನೆರವುಗಳನ್ನು ಒದಗಿಸಬೇಕು. ಮಳೆಯ ನೀರಿನಿಂದ ಪರಿಕರ, ಹೊದಿಕೆ, ಆಹಾರ ದಾಸ್ತಾನುಗಳು ಹಾಳಾದಲ್ಲಿ ತುರ್ತಾಗಿ ಅಧಿಕಾರಿಗಳು ತತ್ಕ್ಷಣ 5,500 ರೂ. ಪರಿಹಾರ ಧನ ವಿತರಿಸುವುದರೊಂದಿಗೆ ಸ್ವಾಭಿಮಾನದಿಂದ ಅವರುಗಳು ಜೀವಿಸಲು ಅವಕಾಶ ಮಾಡಿಕೊಡಬೇಕು., ಪರಿಹಾರದ ಹಣವನ್ನು ನೀಡುವಾಗ ಅಧಿಕಾರಿಗಳು ಹೃದಯವಂತಿಕೆ, ಪ್ರಜ್ಞಾವಂತಿಕೆ ಹಾಗೂ ಬುದ್ಧಿವಂತಿಕೆಯಿಂದ ನಿರ್ಧಾರ ತೆಗೆದುಕೊಂಡು ಜನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿದ್ಯಾರ್ಥಿಗಳಾದ ನಿಮಗೂ ಅವಕಾಶ ಇದೆ, ನಿಮಗೂ ಸ್ಫೂರ್ತಿ ಆಗಬೇಕು, ತಗೆದುಕೊಂಡವರಿಗೂ ಖುಷಿ ಆಗಬೇಕು, ಕೊಟ್ಟವರಿಗೂ ಆತ್ಮ ತೃಪ್ತಿ ಇರಬೇಕು, ಮುಂದಿನ ದಿನಗಳಲ್ಲಿ ನೀವು ಉಳಿದ ಮಕ್ಕಳಿಗೆ ಕೊಡಬೇಕು ಈ ಉದ್ದೇಶದಿಂದ ಕೊಡುತ್ತಿರುವ ನಗದು ಪುರಸ್ಕಾರ ಮತಷ್ಟ್ಟು ಮಕ್ಕಳಿಗೆ ಉತೇಜನ ಸಿಗಲಿ ಎಂಬ ಆಶಯದೊಂದಿಗೆ ಈ ಕಾರ್ಯ ಕಳೆದ 14 ವರ್ಷಗಳಿಂದ ನಡೆಸುಕೊಂಡು ಬರುತ್ತಿರುವ ಸ್ನೇಹ ಸಂಗಮದ ಸದಸ್ಯರ ಔದ್ಯೋಗಿಕ ಜೀವನದಲ್ಲಿ ಯಶಸ್ಸು ಸಿಗಲಿ ಎಂದು ಕರ್ನಾಟಕ ಪಬ್ಲಿಕ್ ಸ್ಕೂಲ್ ಕೋಟೇಶ್ವರ ಇದರ ಉಪ ಪ್ರಾಂಶುಪಾಲರಾದ ಚಂದ್ರಶೇಖರ ಶೆಟ್ಟಿ ಹೇಳಿದರು. ಅವರು ಕೋಟೇಶ್ವರ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರೌಢಶಾಲಾ ವಿಭಾಗ ಚೇತನಾ ಸಭಾಭವನದಲ್ಲಿ ಶುಕ್ರವಾರ ಜರುಗಿದ 2002-04ನೇ ಸಾಲಿನ ಸ್ನೇಹ ಸಂಗಮ ಹಳೇ ವಿದ್ಯಾರ್ಥಿ ಸಂಘದ 14ನೇ ವರ್ಷದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಹಿರಿಯ ಶಿಕ್ಷಕಿ ಜಯಶ್ರೀ, ಸ್ನೇಹ ಸಂಗಮ ಹಳೇ ವಿದ್ಯಾರ್ಥಿ ಸಂಘದ ಅಧಕ್ಷ ಗೀರಿಶ್ ಪೂಜಾರಿ, ಸದಸ್ಯರಾದ ರವಿ ದೇವಾಡಿಗ, ಯೋಗೀಶ್ ದೇವಾಡಿಗ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ದೇಶದ ಅತಿದೊಡ್ಡ ಉದ್ಯೋಗ ಮೇಳವೆಂದು ಗುರುತಿಸಿಕೊಂಡಿರುವ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ‘ಆಳ್ವಾಸ್ ಪ್ರಗತಿ–2026’ರ 16ನೇ ಆವೃತ್ತಿಗೆ ಶುಕ್ರವಾರ ವಿದ್ಯಾಗಿರಿಯ ಡಾ. ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಚಾಲನೆ ದೊರೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್, ಬದಲಾಗುತ್ತಿರುವ ಉದ್ಯೋಗ ಕ್ಷೇತ್ರದ ಅಗತ್ಯಗಳಿಗೆ ಅನುಗುಣವಾಗಿ ಯುವ ಉದ್ಯೋಗಾಕಾಂಕ್ಷಿಗಳು ತಮ್ಮ ಕೌಶಲ್ಯಗಳನ್ನು ನಿರಂತರವಾಗಿ ಅಭಿವೃದ್ಧಿಪಡಿಸಿಕೊಳ್ಳಬೇಕು, ವೃತ್ತಿಪರ ಸಂಪರ್ಕ ಜಾಲವನ್ನು ಬೆಳೆಸಿಕೊಳ್ಳಬೇಕು ಹಾಗೂ ಕೃತಕ ಬುದ್ಧಿಮತ್ತೆ (ಎಐ) ಸೇರಿದಂತೆ ಉದಯೋನ್ಮುಖ ತಂತ್ರಜ್ಞಾನಗಳಿಗೆ ಹೊಂದಿಕೊಳ್ಳಬೇಕು ಎಂದು ಕರೆ ನೀಡಿದರು. ಶಿಕ್ಷಣವೊಂದೇ ಇಂದಿನ ವೇಗವಾಗಿ ಬದಲಾಗುತ್ತಿರುವ ಉದ್ಯೋಗ ಕ್ಷೇತ್ರದಲ್ಲಿ ಯಶಸ್ಸು ಸಾಧಿಸಲು ಸಾಕಾಗುವುದಿಲ್ಲ. ಶಿಕ್ಷಣದ ಜೊತೆಗೆ ಕೌಶಲ್ಯವೂ ಅತ್ಯಗತ್ಯವಾಗಿದ್ದು, ಉದ್ಯೋಗ ಕ್ಷೇತ್ರದಲ್ಲಿ ಪ್ರಸ್ತುತವಾಗಿರಲು ಕೌಶಲ್ಯಗಳನ್ನು ನಿರಂತರವಾಗಿ ಉನ್ನತೀಕರಿಸಿಕೊಳ್ಳಬೇಕು. “ಶಿಕ್ಷಣ ಪಾಸ್ಪೋರ್ಟ್ನಂತಿದ್ದರೆ, ಕೌಶಲ್ಯ ವೀಸಾದಂತೆ” ಎಂದು ರೂಪಕದ ಮೂಲಕ ವಿವರಿಸಿದ ಅವರು, ಯುವಜನರು ಪ್ರಾಯೋಗಿಕ ಹಾಗೂ ಉದ್ಯಮ ಕ್ಷೇತ್ರಕ್ಕೆ ಅಗತ್ಯವಾದ ಕೌಶಲ್ಯಗಳನ್ನು ರೂಢಿಸಿಕೊಳ್ಳಬೇಕು. ಸಾಮಾಜಿಕ ಜಾಲತಾಣಗಳನ್ನು ಕೇವಲ ಮನರಂಜನೆಗಾಗಿ ಬಳಸದೆ, ತಮ್ಮ…
