ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪದವಿಪೂರ್ವ ಶಿಕ್ಷಣ ಇಲಾಖೆಯವರು ಜನತಾ ಪದವಿಪೂರ್ವ ಕಾಲೇಜು ಹೆಮ್ಮಾಡಿಯಲ್ಲಿ ಆಯೋಜಿಸಿದ ಜಿಲ್ಲಾ ಮಟ್ಟದ ಕಬ್ಬಡಿ ಸ್ಪರ್ಧೆಯಲ್ಲಿ ಕುಂದಾಪುರ ತಾಲೂಕನ್ನು ಪ್ರತಿನಿಧಿಸಿದ ಆತಿಥೇಯ ತಂಡವು ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನೀಯರಾಗಿ ಹೊರಹೊಮ್ಮುವುದರೊಂದಿಗೆ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. ಕಳೆದ ಹತ್ತು ವರ್ಷದ ಕಬಡ್ಡಿ ಕ್ರೀಡಾ ಇತಿಹಾಸದಲ್ಲಿ ಕುಂದಾಪುರ ತಾಲೂಕಿನಿಂದ ರಾಜ್ಯಮಟ್ಟಕ್ಕೆ ಅರ್ಹತೆ ಪಡೆದು ಆಯ್ಕೆಯಾದ ಏಕೈಕ ತಂಡ ಎಂಬ ಹೆಗ್ಗಳಿಕೆಯನ್ನೂ ಪಡೆದ ಕೀರ್ತಿ ಹೆಮ್ಮಾಡಿಯ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರ ಪಾಲಿಗೆ ಸೇರಿದೆ. ಉಡುಪಿ ಜಿಲ್ಲಾಮಟ್ಟದ ಪಂದ್ಯದಲ್ಲಿ ಕುಂದಾಪುರ ತಾಲೂಕನ್ನು ಪ್ರತಿನಿಧಿಸಿದ ಜನತಾ ಸ್ವತಂತ್ರ ಪದವಿ ಪೂರ್ವ ಕಾಲೇಜಿನ 7 ವಿದ್ಯಾರ್ಥಿನಿಯರ ಪೈಕಿ 5 ವಿದ್ಯಾರ್ಥಿನಿಯರು ಮುಂದೆ ನಡೆಯುವ ರಾಜ್ಯ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿ ಅಪ್ರತಿಮ ಸಾಧನೆ ಮೆರೆದಿದ್ದಾರೆ.ವಿದ್ಯಾರ್ಥಿನಿಯರ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ,ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ. ಇದನ್ನೂ ಓದಿ ► ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಪದವಿಪೂರ್ವ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಉಪ್ಪುಂದ ಶ್ರೀ ದುರ್ಗಾಪರಮೇಶ್ವರೀ ಸಭಾಭವನದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಶ್ರೀ ಗಣೇಶೋತ್ಸವ ಸುವರ್ಣ ಮಹೋತ್ಸವ ಸಮಿತಿಯ ವತಿಯಿಂದ ಸುವರ್ಣ ಸಂಭ್ರಮದ ಅಂಗವಾಗಿ ಉಡುಪಿ ಜಿಲ್ಲಾ ಮಟ್ಟದ ಗಣಪತಿ ಚಿತ್ರ ಬಿಡಿಸುವ ಸ್ಪರ್ಧೆ ಹಮ್ಮಿಕೊಳ್ಳಲಾಗಿತ್ತು. ಉಪತಹಸೀಲ್ದಾರ್ ಹಾಗೂ ದೇವಸ್ಥಾನದ ಕಾರ್ಯನಿರ್ವಹಣಾದಿಕಾರಿಯಾದ ಭೀಮಪ್ಪ ಎಚ್ ಬಿಲ್ಲಾರ್ ಉದ್ಗಾಟಿಸಿದರು. ಈ ಸಂಧರ್ಭದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅದ್ಯಕ್ಷರಾದ ಸಂದೇಶ್ ಭಟ್, ಚಿತ್ರ ಕಲಾವಿದರಾದ ಮಂಜುನಾಥ ಮಯ್ಯ,ಶಿಕ್ಷಕರಾದ ಗಣೇಶ್ ಪೂಜಾರಿ,ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿಯ ಉಪಾಧ್ಯಕ್ಷರಾದ ರಾಮದೇವಾಡಿಗ,ಉದ್ಯಮಿ ಸದಾಶಿವ ಗಾಣಿಗ ಸುವರ್ಣ ಮಹೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ವಿ.ಎಚ್.ನಾಯಕ್ ಮೊದಲಾದವರು ಉಪಸ್ಥಿತರಿದ್ದರು ಪ್ರಧಾನ ಸಂಚಾಲಕರಾದ ಪುರುಷೋತ್ತಮದಾಸ್ ಕಾರ್ಯಕ್ರಮ ನಿರೂಪಿಸಿದರು. ಅನಿಲ್ ದೇವಾಡಿಗ ಸ್ವಾಗತಿಸಿ ಮಂಜುನಾಥ್ ದೇವಾಡಿಗ ಧನ್ಯವಾದಗೈದರು
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಯಕ್ಷಗಾನ ಕಲೆಯಲ್ಲಿನ ಭಾಷಾ ಪ್ರಯೋಗ, ಕನ್ನಡ ಭಾಷೆಯ ಸತ್ವವನ್ನು ಜೀವಂತವಾಗಿರಿಸಿದೆ. ಕರಾವಳಿ ಜಿಲ್ಲೆಗಳು ಯಕ್ಷಗಾನದ ನೂರಾರು ಕಲಾವಿದರಿದ್ದು, ಕಲೆಯನ್ನೇ ಉಸಿರಾಗಿಸಿಕೊಂಡವರಾಗಿದ್ದಾರೆ. ಆಧುನಿಕ ಜಗತ್ತಿನ ಮಿತಿಗಳ ನಡುವೆಯೂ ಯಕ್ಷರಂಗ ಶ್ರೀಮಂತವಾಗಿರಲು ಕಲಾರಾಧಕರ ಪ್ರೋತ್ಸಾಹವೇ ಕಾರಣವಾಗಿದೆ ಎಂದು ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು. ಅವರು ನಾಗೂರು ಒಡೆಯರ ಮಠ ಶ್ರೀ ಗೋಪಾಲಕೃಷ್ಣ ಸಭಾಭವನದಲ್ಲಿ ಭಾನುವಾರ ಶ್ರೀ ಕೃಪಾಪೋಷಿತ ಯಕ್ಷಗಾನ ಮಂಡಳಿ ಹಟ್ಟಿಯಂಗಡಿ ಹಾಗೂ ಕುಂದಾಪ್ರ ಡಾಟ್ ಕಾಂ ಆಯೋಜಿಸಿದ 2 ದಿನಗಳ ಯಕ್ಷೋತ್ಸವ 2023 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಯಕ್ಷಗಾನ ಮನೊರಂಜನೆಗಷ್ಟೇ ಸೀಮಿತವಾಗಿರದೇ ದೇವರ ಸೇವೆಯೂ ಆಗಿರುವುದರಿಂದ ಆಸಕ್ತರ ನೇತೃತ್ವದಲ್ಲಿ ಮುನ್ನಡೆಯುತ್ತದೆ. ಈ ಕಲೆಗೆ ಅಳಿವೆಂಬುದಿಲ್ಲ ಎಂದರು. ಕಾರ್ಯಕ್ರಮದಲ್ಲಿ ಕಿರಿಮಂಜೇಶ್ವರ ಗ್ರಾಪಂ ಅಧ್ಯಕ್ಷರಾದ ಶೇಖರ ಖಾರ್ವಿ, ನಾವುಂದ ಗ್ರಾಪಂ ಅಧ್ಯಕ್ಷರಾದ ನರಸಿಂಹ ದೇವಾಡಿಗ, ಸಭಾಭವನ ಮಾಲಿಕರಾದ ಮಂಜುನಾಥ ಉಡುಪ ಮುಖ್ಯ ಅತಿಥಿಗಳಾಗಿದ್ದರು. ಹಟ್ಟಿಯಂಗಡಿ ಮೇಳದ ಸಂಚಾಲಕರಾದ ರಂಜಿತ್ ಕುಮಾರ್ ಶೆಟ್ಡಿ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕುಂದಾಪ್ರ ಡಾಟ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ಹಿಂದಿ ವಿಭಾಗದಿಂದ “ಹಿಂದಿ ದಿವಸ್ – ಜ್ಯೋತ್ಸ್ನಾ” ಕಾರ್ಯಕ್ರಮ ಜರುಗಿತು. ಬ್ರಹ್ಮಾವರದ ಎಸ್.ಎಂ.ಎಸ್. ಕಾಲೇಜಿನ ಪ್ರಾಂಶುಪಾಲರಾದ ಡಾ. ಮಂಜುನಾಥ ಉಡುಪ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ವಹಿಸಿದ್ದರು. ನಿವೃತ್ತ ಪ್ರಾಂಶುಪಾಲರಾದ ಡಾ. ಎನ್.ಪಿ. ನಾರಾಯಣ ಶೆಟ್ಟಿ ಅವರನ್ನು ಹಿಂದಿ ವಿಭಾಗದ ವತಿಯಿಂದ ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ. ಜಿ.ಎಂ. ಗೊಂಡ, ಪದವಿ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ ಸತ್ಯನಾರಾಯಣ, ಐಕ್ಯೂಎಸಿ ಸಂಯೋಜಕರಾದ ಡಾ. ವಿಜಯ್ ಕುಮಾರ್ ಉಪಸ್ಥಿತರಿದ್ದರು “ಹಿಂದಿ ದಿವಸ್ – ಜ್ಯೋತ್ಸ್ನಾ” ದ ಅಂಗವಾಗಿ ಕಬೀರ್ ಭಜನ್, ಹನುಮಾನ್ ಚಾಲೀಸ್ ಕಂಠಪಾಠ, ಹಿಂದಿ ಭಾಷಣ ಮತ್ತು ಚಿತ್ರಕಲಾ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಹಿಂದಿ ವಿಭಾಗದ ಮುಖ್ಯಸ್ಥೆ ಪ್ರೊ.ಪ್ರಫುಲ್ಲಾ ಬಿ. ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಹಿಂದಿ ವಿಭಾಗದ ಉಪನ್ಯಾಸಕಿಯರಾದ ಅಶ್ವಿನಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಅಂಕದಕಟ್ಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಎಲ್ ಜಿ ಫೌಂಡೇಶನ್ ವತಿಯಿಂದ ಸಮವಸ್ತ್ರ ವಿತರಿಸಲಾಯಿತು. ಸಂಸ್ಥೆಯ ಆಡಳಿತ ನಿರ್ದೇಶಕರಾದ ನಾಗರಾಜ್ ಡಿ ಪಡುಕೋಣೆ ಅವರು ಸಮವಸ್ತ್ರ ವಿತರಿಸಿ ಮಾತನಾಡಿ ಆಂಗ್ಲ ಮಾಧ್ಯಮ ವ್ಯಾಮೋಹದಿಂದ ಸರಕಾರಿ ಶಾಲೆಗಳು ಅವನತಿಯತ್ತ ಸಾಗುತ್ತಿರುವ ಈ ಸಂದರ್ಭದಲ್ಲಿ ದಾನಿಗಳ ನೆರವು ಪಡೆದು ಕೊಂಡು ಪರಿಸರದ ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ಶಾಲೆ ನೀಡುತ್ತಿದ್ದು ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆಯ ಬೇಕೆಂದರು. ಈ ಸಂದರ್ಭದಲ್ಲಿ ಟ್ರಸ್ಟಿನ ನಿರ್ದೇಶಕರಾದ ಕುಸುಮ ನಾಗರಾಜ್ ಪಡುಕೋಣೆ, ವ್ಯವಸ್ಥಾಪಕರಾದ ಸುರೇಶ್ ಪಡುಕೋಣೆ, ಕುಂದಾಪುರ ಪತ್ರಕರ್ತರ ಸಂಘದ ಅಧ್ಯಕ್ಷರಾದ ನಾಗರಾಜ್ ರಾಯಪ್ಪನ ಮಠ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ವರದ ಆಚಾರ್, ಉಪಾಧ್ಯಕ್ಷರಾದ ಸುರೇಶ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಬಾಬು ಪೈ, ಶಾಲೆಯ ಪ್ರಭಾರ ಮುಖ್ಯ ಶಿಕ್ಷಕಿ ಸುನೀತಾ ಉಪಸ್ಥಿತರಿದ್ದರು. ಶಿಕ್ಷಕರಾದ ರವೀಂದ್ರ ಸ್ವಾಗತಿಸಿದರು. ಸಹ ಶಿಕ್ಷಕಿ ಅಖಿಲಾ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ವಿಶ್ವಕರ್ಮ ಸಮಾಜ ಯುವಕ ದಳ, ಶ್ರೀ ವಿಶ್ವಕರ್ಮ ಬ್ರಾಹ್ಮಣ ಸಮಾಜ ಯುವಕ ಸೇವಾ ಸಂಘ, ಶ್ರೀದೇವಿ ಮಹಿಳಾ ಮಂಡಳಿ ಕೋಟೇಶ್ವರ ಇವರ ಆಶ್ರಯದಲ್ಲಿ, ಪುರೋಹಿತ್ ರೋಹಿತಾಕ್ಷ ಆಚಾರ್ಯರ ಪ್ರಧಾನ ಆಚಾರ್ಯತ್ವದಲ್ಲಿ ಶ್ರೀ ವಿಶ್ವಕರ್ಮ ಯಜ್ಞ ಮಹೋತ್ಸವವು ಕೋಟೇಶ್ವರ ವಿಶ್ವಕರ್ಮ ಕಲ್ಯಾಣ ಮಂಟಪದಲ್ಲಿ ನಡೆಯಿತು. ಬಳಿಕ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿದ್ದ ಅಧ್ಯಾಪಕ ಪಡುವರಿ ನಾಗೇಶ್ ಆಚಾರ್ಯ ಮಾತನಾಡಿ, ವಿಶ್ವಕರ್ಮ ಸಮುದಾಯವರು ಸಾಮಾಜಿಕವಾಗಿ ಎಲ್ಲಾ ವರ್ಗದ ಜನರಲ್ಲಿ ಗುರುತಿಸಿಕೊಳ್ಳಲು ನಾವು ಮಾಡುವ ಪಂಚ ಕಸುಬುಗಳೇ ಕಾರಣ. ಆದರೆ ಆರ್ಥಿಕ, ರಾಜಕೀಯ ಹಾಗೂ ಶೈಕ್ಷಣಿಕವಾಗಿ ಪ್ರಬುದ್ಧತೆಗೆ ಬರುವಲ್ಲಿ ಹಿಂದೆ ಉಳಿಯಲು ನಮ್ಮಲ್ಲಿನ ಶಿಕ್ಷಣ ಹಾಗೂ ಸಂಘಟನೆಯ ಕೊರತೆಯೇ ಮೂಲ ಕಾರಣವಾಗಿದೆ. ಈ ನಿಟ್ಟಿನಲ್ಲಿ ನಮ್ಮ ಮಕ್ಕಳಿಗೆ ಬಾಲ್ಯದಿಂದಲೇ ಜೀವನ ಸಂಸ್ಕಾರದ ಜೊತೆಗೆ ಬದುಕುವ ಶಿಕ್ಷಣ ನೀಡಬೇಕಾಗಿದೆ ಎಂದರು. ಪುರೋಹಿತ್ ರೋಹಿತಾಕ್ಷ ಆಚಾರ್ಯ ಶುಭಾಶಂಸನೆಗೈದು, ಭಗವಂತನ ಆರಾಧನೆ ಅಷ್ಟು ಸುಲಭವಲ್ಲ, ಅದಕ್ಕೂ ಯೋಗ ಹಾಗೂ ಋಣಾನುಬಂಧ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಯುಪಿಎ ಸರಕಾರದ ಅವಧಿಯಲ್ಲಿ ಬೆಂಗಳೂರು – ಮೈಸೂರು – ಕಾರವಾರ ರೈಲುನ್ನು ಪ್ರಾರಂಭಿಸಲಾಗಿತ್ತು. ಬೆಂಗಳೂರು – ಕಾರವಾರ ನೇರ ರೈಲು ಕಾರಣಾಂತರಗಳಿಂದ ರದ್ದಾಗಿ ಬಳಿಕ ಮಂಗಳೂರು ತನಕ ಮಾತ್ರ ಸಂಚರಿಸುತಿತ್ತು. ಈಗ ಅದೇ ರೈಲು ಮುರುಡೇಶ್ವರದ ತನಕ ವಿಸ್ತರಣೆಗೊಂಡಿದೆ. ಈ ರೈಲಿನ ವೇಳಾಪಟ್ಟಿ ಪರಿಷ್ಕರಿಸಿದರೆ ಮತ್ತು ಪ್ರತ್ಯೇಕ ರೈಲು ಆರಂಭಿಸಿದರೆ ಕರಾವಳಿ ಜನತೆಗೆ ಅನೂಕೂಲವಾಗಲಿದೆ ಎಂದು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ್ ಶೆಟ್ಟಿ ಹೇಳಿದ್ದಾರೆ. ಬೆಂಗಳೂರು – ಮೈಸೂರು – ಮುರ್ಡೇಶ್ವರ ರೈಲಿನ ವೇಳಾಪಟ್ಟಿ ಪರಿಷ್ಕರಿಸಿದರೆ ಮಾತ್ರ ಕರಾವಳಿ ಜನತೆಗೆ ಅನೂಕೂಲವಾಗಲಿದೆ . ರಾತ್ರಿ 8-15 ಕ್ಕೆ ಬೆಂಗಳೂರಿನಿಂದ ಹೊರಡುವ ರೈಲು ಮದ್ಯಾಹ್ನ 11 -54 ಕ್ಕೆ ಕುಂದಾಪುರಕ್ಕೆ ಬರಲಿದೆ. ಕುಂದಾಪುರದಿಂದ ಮದ್ಯಾಹ್ನ 3 – 10 ಕ್ಕೆ ಹೊರಟು ಬೆಳಿಗ್ಗೆ 7-15 ಕ್ಕೆ ಬೆಂಗಳೂರು ತಲುಪಲಿದೆ. ಈ ವೇಳಾಪಟ್ಟಿ ಬೆಂಗಳೂರಿಗೆ ತೆರಳುವ ಕುಂದಾಪುರ ಮತ್ತು ಕರಾವಳಿಗರಿಗೆ ಅನೂಕೂಲವಾಗಿಲ್ಲ. ರಾತ್ರಿ ಹೊರಟು ಬೆಳಿಗ್ಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಸೆ.17: ಬೆಂಗಳೂರಿನಿಂದ ಮೈಸೂರು ಮಾರ್ಗವಾಗಿ ಮಂಗಳೂರಿಗೆ ಸಂಚರಿಸುತ್ತಿದ್ದ ನಿತ್ಯ ರೈಲು ಮುರ್ಡೇಶ್ವರದವರೆಗೆ ವಿಸ್ತರಣೆಗೊಂಡಿದ್ದು, ಭಾನುವಾರ ಕುಂದಾಪುರಕ್ಕೆ ಆಗಮಿಸಿದ ಈ ರೈಲಿನ್ನು ಕುಂದಾಪುರ ರೈಲು ಪ್ರಯಾಣಿಕರ ಹಿತರಕ್ಷಣಾ ಸಮಿತಿಯ ವತಿಯಿಂದ ಅದ್ಧೂರಿಯಾಗಿ ಸ್ವಾಗತಿಸಿಕೊಳ್ಳಲಾಯಿತು. ಕುಂದಾಪುರದ ನಿಲ್ದಾಣದಲ್ಲಿ ಶ್ರೀ ಲಕ್ಷ್ಮಿ ನಾರಾಯಣ ದೇವಸ್ಥಾನದ ಮಹಿಳಾ ಚೆಂಡೆ ಬಳಗದ ಚೆಂಡೆ ವಾದನದೊಂದಿಗೆ ರೈಲನ್ನು ಬರಮಾಡಿಕೊಳ್ಳಲಾಯಿತು. ರೈಲಿಗೆ ಹೂವಿನ ಮಾಲೆ ಹಾಕಿ, ಮೈಸೂರು ಸಂಸದ ಪ್ರತಾಪ್ಸಿಂಹ ಅವರಿಗೆ ಕೃತಜ್ಞತೆ ಸಲ್ಲಿಸುವ ಬ್ಯಾನರ್ ಅಳವಡಿಸಲಾಯಿತು. ಈ ವೇಳೆ ಶಾಸಕ ಕಿರಣ್ ಕೊಡ್ಗಿ ಮಾತನಾಡಿ, ಪ್ರಧಾನಿ ಮೋದಿಯವರ ಹುಟ್ಟುಹಬ್ಬದ ದಿನವೇ ಈ ನಿತ್ಯದ ರೈಲು ಆರಂಭಗೊಂಡಿದ್ದು, ಇದು ಈ ಭಾಗದ ಎಲ್ಲ ಪ್ರಯಾಣಿಕರಿಗೆ ಅನುಕೂಲವಾಗಲಿದೆ. ಇದಕ್ಕೆ ಪ್ರಯತ್ನಿಸಿದ ರೈಲು ಪ್ರಯಾಣಿಕರ ಸಮಿತಿ ಹಾಗೂ ಜನಪ್ರತಿನಿಧಿಗಳಿಗೂ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು. ಕುಂದಾಪುರ ರೈಲು ಪ್ರಯಾಣಿಕರ ಸಮಿತಿ ಅಧ್ಯಕ್ಷ ಗಣೇಶ್ ಪುತ್ರನ್ ಮಾತನಾಡಿ ಈ ರೈಲಿಗೆ ಒಂದು ವರ್ಷದಿಂದ ನಿರಂತರವಾಗಿ ಪ್ರಯತ್ನಿಸಿದ್ದು, ಮೈಸೂರು ಸಂಸದ ಪ್ರತಾಪ್ಸಿಂಹ ಅವರ ಪ್ರಯತ್ನ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದೈಹಿಕ,ಮಾನಸಿಕ ಸ್ಥಿರ ಆರೋಗ್ಯಕ್ಕಾಗಿ ಕ್ರೀಡೆಗಳ ಪಾತ್ರ ಪ್ರಮುಖವಾದದ್ದು ಎಂದು ಬೈಂದೂರು ಕ್ಷೇತ್ರದ ಮಾಜಿ ಶಾಸಕರು ಕೆ. ಗೋಪಾಲ ಪೂಜಾರಿ ಹೇಳಿದರು. ಅವರು ಪದವಿಪೂರ್ವ ಶಿಕ್ಷಣ ಇಲಾಖೆ ಉಡುಪಿ, ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಿದ ಜಿಲ್ಲಾ ಮಟ್ಟದ ಪದವಿಪೂರ್ವ ಬಾಲಕ/ಬಾಲಕಿಯರ ಕಬಡ್ಡಿ ಪಂದ್ಯಾಟದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ ಪಾಟ್ನಾ ಪೈರೇಟ್ಸ್ ತಂಡದ ಪ್ರೋ ಕಬಡ್ಡಿ ಆಟಗಾರರಾದ ರಂಜಿತ್ ನಾಯ್ಕ್ ಎಲ್ಲಾ ತಂಡಗಳಿಗೆ ಶುಭ ಹಾರೈಸಿದರು. ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಪ್ರಾಂಶುಪಾಲರಾದ ಗಣೇಶ ಮೊಗವೀರ ಅವರು ಮಾತನಾಡುತ್ತಾ ಮುಂದಿನ ಶೈಕ್ಷಣಿಕ ವರ್ಷದಿಂದ ಪ್ರೌಢಶಾಲಾ ವಿಭಾಗದಲ್ಲಿ ರಾಜ್ಯ ಮಟ್ಟವನ್ನು ಪ್ರತಿನಿಧಿಸಿದ ಕ್ರೀಡಾ ವಿಭಾಗ ಮೂಲಕ 20 ಜನ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣವನ್ನು ನೀಡುವುದಾಗಿ ಭರವಸೆ ನೀಡಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಕಟ್ ಬೇಲ್ತೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ವೈಶಾಲಿ, ಜನತಾ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಮಂಜು ಕಾಳಾವರ, ಉಡುಪಿ ಜಿಲ್ಲಾ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಭಾರತರತ್ನ ಸರ್ ಎಂ ವಿಶ್ವೇಶ್ವರಯ್ಯನವರ ಹುಟ್ಟು ಹಬ್ಬದ ಪ್ರಯುಕ್ತ ಇಂಜಿನಿಯರ್ಸ್ ಡೇ ಕಾರ್ಯಕ್ರಮವನ್ನು ಕುಂದಾಪುರ ತಾಲೂಕು ಯುವ ಬಂಟರ ಸಂಘ ವತಿಯಿಂದ ಆಚರಿಸಲಾಯಿತು. ಮೆಸ್ಕಾಂ ಇಂಜಿನಿಯರ್ ಭರತ್ ರಾಜ್ ಶೆಟ್ಟಿ ಜಾಂಬೂರು ಅವರನ್ನು ಸಂಘದ ಕಚೇರಿಯಲ್ಲಿ ಅಧ್ಯಕ್ಷರಾದ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಶಾಲು ಹೊದಿಸಿ ಸನ್ಮಾನಿಸುವ ಮೂಲಕ ಆಚರಿಸಿದರು. ಸನ್ಮಾನ ಸ್ವೀಕರಿಸಿದ ಭರತ್ ರಾಜ್ ಶೆಟ್ಟಿ ರಾಷ್ಟ್ರೀಯ ಅಭಿಯಂತರದ ದಿನಾಚರಣೆಯ ಪ್ರಸ್ತುತತೆಯ ಬಗ್ಗೆ ಮಾತನಾಡಿ, ಇಂದು ತನ್ನನ್ನ ಗುರುತಿಸಿ ಅಭಿನಂದಿಸಿದ ಸಂಘಕ್ಕೆ ಕೃತಜ್ಞತೆಗಳನ್ನು ಅರ್ಪಿಸಿದರು. ಸಂಘದ ಪ್ರಧಾನ ಕಾರ್ಯದರ್ಶಿ ನಿತೀಶ್ ಶೆಟ್ಟಿ ಬಸ್ರೂರು, ಶ್ರೀ ರವಿಶಂಕರ ಹೆಗ್ಡೆ , ಚೇತನ್ ಶೆಟ್ಟಿ ಕೋವಾಡಿ, ಉದಯ್ ಶೆಟ್ಟಿ ಮಚ್ಚಟ್ಟು, ಸುಕುಮಾರ ಶೆಟ್ಟಿ ಹೇರಿಕುದ್ರು, ಮುರಳೀಧರ ಶೆಟ್ಟಿ ಹುಯ್ಯಾರು, ಗುರುಪ್ರಸಾದ್ ಶೆಟ್ಟಿ ಹಾಲಾಡಿ, ರಾಜೀವ ಶೆಟ್ಟಿ ಹೆಂಗವಳ್ಳಿ ಉಪಸ್ಥಿತರಿದ್ದರು. ಸಂದೇಶ ಶೆಟ್ಟಿ ಸರ್ವರನ್ನು ಸ್ವಾಗತಿಸಿ, ಸಂಘದ ಕೋಶಾಧಿಕಾರಿ ಅಕ್ಷಯ ಹೆಗ್ಡೆ ಮೊಳಹಳ್ಳಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
