Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಸೆ.12: ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಬಹುಕೋಟಿ ರೂಪಾಯಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಚೈತ್ರಾ ಕುಂದಾಪುರ ಮತ್ತು 5 ಮಂದಿಯನ್ನು ಸಿಸಿಬಿ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿಗಳಿಗೆ 10 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಆರೋಪಿಗಳನ್ನು ಪ್ರತ್ಯೇಕವಾಗಿ ಬಂಧಿಸಿ ಬೆಂಗಳೂರಿಗೆ ಕರೆತಂದ ಪೊಲೀಸರು, ಸಿಸಿಬಿ ಕಛೇರಿಯಲ್ಲಿ ಮೊದಲ ಹಂತದ ವಿಚಾರಣೆ ನಡೆಸಿದ್ದಾರೆ. ಪ್ರಕರಣದಲ್ಲಿ ಭಾಗಿಯಾದ ಚೈತ್ರಾ ಕುಂದಾಪುರ, ಗಗನ್ ಕಡೂರು, ಶ್ರೀಕಾಂತ್ ನಾಯಕ್, ರಮೇಶ್, ಧನರಾಜ್ ಹಾಗೂ 10ನೇ ಆರೋಪಿ ಪ್ರಜ್ವಲ್ ಎಂಬಾತನನ್ನು ಸಿಸಿಬಿ ಪೊಲೀಸರು ಈಗಾಗಲೇ ಬಂಧಿಸಿ ವೈದ್ಯಕೀಯ ಪರೀಕ್ಷೆ ನಡೆಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಇದನ್ನೂ ಓದಿ:► ಬಿಜೆಪಿ ಎಂಎಲ್ಎ ಟಿಕೆಟ್ ಹೆಸರಲ್ಲಿ ವಂಚನೆ: ಬಿದಿಬದಿ ವ್ಯಾಪಾರಿ, ಮಿಮಿಕ್ರಿ ಆರ್ಟಿಸ್ಟ್ಗೆ ವೇಷ ಹಾಕಿಸಿ 5 ಕೋಟಿ ವಂಚನೆ – https://kundapraa.com/?p=68995 . ನ್ಯಾಯಾಲಯದಲ್ಲಿ ಉಡುಪಿ ಪೊಲೀಸರು ತನಗೆ ತೊಂದರೆ ಕೊಟ್ಟಿದ್ದಾರೆ. ಬಂಧನ ಮಾಡಿರುವ ಬಗ್ಗೆ ಮನೆಯವರಿಗೆ ಮಾಹಿತಿ ನೀಡಲು ಅವಕಾಶ ನೀಡಿಲ್ಲ…

Read More

ಕಬಾಬ್ ಮಾರುವ ಬಿದಿ ಬದಿ ವ್ಯಾಪಾರಿ, ಮಿಮಿಕ್ರಿ ಆರ್ಟಿಸ್ಟ್‌ಗೆ ವೇಷ ಹಾಕಿಸಿ 5 ಕೋಟಿ ವಂಚನೆ ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಸೆ.12: ವಿಧಾನಸಭಾ ಚುನಾವಣೆ ಪೂರ್ವದಲ್ಲಿ ಉದ್ಯಮಿಯೋರ್ವರಿಗೆ ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಬಹುಕೋಟಿ ರೂಪಾಯಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದ್ದು, ಪ್ರಮುಖ ಆರೋಪಿ ಚೈತ್ರಾ ಕುಂದಾಪುರ ಸಹಿತ ಐದು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 8 ಮಂದಿ ವಿರುದ್ಧ ದೂರು:ಸೆ.8ರಂದು ಬೈಂದೂರು ಬಿಜೆಪಿ ಮುಖಂಡ, ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರು ಬೆಂಗಳೂರಿನಲ್ಲಿ ಬಂಡೇಪಾಳ್ಯ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಇದರ ಬೆನ್ನಲ್ಲೇ ಸಿಸಿಬಿ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿದ್ದರು. ತಲೆಮರೆಸಿಕೊಂಡಿದ್ದ ಚೈತ್ರ ಕುಂದಾಪುರ ಹಾಗೂ ತಂಡವನ್ನು ಉಡುಪಿ ಕೃಷ್ಣ ಮಠದ ಹಾಗೂ ಬೆಂಗಳೂರಿನಲ್ಲಿ ಬಂಧಿಸಿ ಕರೆದೊಯ್ದಿದ್ದಾರೆ. ಹಿಂದೂಪರ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ ಪ್ರಕರಣದ 1ನೇ ಆರೋಪಿ ಚೈತ್ರಾ ಕುಂದಾಪುರ, ಗಗನ್ ಕಡೂರು, ಶ್ರೀಕಾಂತ್ ನಾಯಕ್, ರಮೇಶ್ ಹಾಗೂ ಧನರಾಜ್ ಎಂಬ ಐವರನ್ನು ಪೊಲೀಸರು ವಶಕ್ಕೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಸೆ.12: ಉದ್ಯಮಿಯೋರ್ವರಿಗೆ ಕಳೆದ ವಿಧಾನಸಭಾ ಚುನಾವಣೆ ಪೂರ್ವದಲ್ಲಿ ಎಂಎಲ್ಎ ಟಿಕೆಟ್ ಕೊಡಿಸುವ ಭರವಸೆ ನೀಡಿ ಬಹುಕೋಟಿ ರೂಪಾಯಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಚೈತ್ರಾ ಕುಂದಾಪುರ ಸಹಿತ ಐದು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿರುವ ಬಗ್ಗೆ ಮಾಹಿತಿ ಹೊರಬಿದ್ದಿದೆ. ಹಿಂದೂಪರ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ ಚೈತ್ರಾ ಕುಂದಾಪುರ, ಗಗನ್ ಕಡೂರು, ಶ್ರೀಕಾಂತ್ ನಾಯಕ್, ರಮೇಶ್ ಹಾಗೂ ಧನರಾಜ್ ಎಂಬ ಐವರನ್ನು ಪೊಲೀಸರು ವಶಕ್ಕೆ ಪಡೆದಿರುವ ಬಗ್ಗೆ ಮಾಹಿತಿ ದೊರೆತಿದ್ದು, ಪ್ರಕರಣದಲ್ಲಿ ಭಾಗಿಯಾಗಿದ್ದ 3ನೇ ಆರೋಪಿ ಹೊಸಪೇಟೆಯ ಅಭಿನವ ಹಾಲಶ್ರೀ ಸ್ವಾಮೀಜಿ, 5ನೇ ಆರೋಪಿ ನಾಯ್ಕ್ ಎಂಬುವವನ್ನು ಇನ್ನಷ್ಟೇ ಬಂಧಿಸಬೇಕಿದ್ದು 8ನೇ ಆರೋಪಿ ಪ್ರಸಾದ್ ಬೈಂದೂರು ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಸೆ.8ರಂದು ಬೈಂದೂರು ಬಿಜೆಪಿ ಮುಖಂಡ, ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರು ಬೆಂಗಳೂರಿನಲ್ಲಿ ಬಂಡೇಪಾಳ್ಯ ಪೊಲೀಸರಿಗೆ ದೂರು ನೀಡಿದ್ದು, ಇದರ ಬೆನ್ನಲ್ಲೇ ಮಿಂಚಿನ ಕಾರ್ಯಾಚರಣೆ ನಡೆಸಿದ ಪೊಲೀಸರು ತಲೆಮರೆಸಿಕೊಂಡಿದ್ದ ಚೈತ್ರ ಕುಂದಾಪುರ ಹಾಗೂ ತಂಡವನ್ನು ಉಡುಪಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರದ ಅಧಿ ದೇವರಾದ ಶ್ರೀ ಕುಂದೇಶ್ವರ ದೇವರ ಸನ್ನಿಧಿಯಲ್ಲಿ ಕರಾವಳಿ ಭಾಗದಲ್ಲೇ ಪ್ರಥಮ ಬಾರಿಗೆ ವಾಸುದೇವ ಜೋಯಿಷರ ನೇತೃತ್ವದಲ್ಲಿ 1200ಕ್ಕೂ ಮಿಕ್ಕಿ ಮಹಿಳೆಯರಿಂದ ಸಾಮೂಹಿಕ ಶಿವ ಸಹಸ್ರನಾಮ ಭಸ್ಮಾರ್ಚನೆ ಪೂಜಾ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಕೃಷ್ಣಾನಂದ ಚಾತ್ರ, ಸಮಾಜ ಸೇವಕರಾದ ಸುಬ್ರಹ್ಮಣ್ಯ ಹೊಳ್ಳ, ವ್ಯವಸ್ಥಾಪನ ಸಮಿತಿಯ ಸದಸ್ಯರಾದ ಸತೀಶ್ ಶೆಟ್ಟಿ, ವಿಶ್ವನಾಥ್ ಪೂಜಾರಿ ಗರಡಿ ಮನೆ, ನಾಗರಾಜ್ ರಾಯಪ್ಪನ ಮಠ, ಜಯಾನಂದ ಖಾರ್ವಿ, ಸತೀಶ್, ವೀಣಾ ಎಚ್, ಸವಿತ ಜಗದೀಶ್ ಊರಿನ ಪ್ರಮುಖರಾದ ಕಿಶೋರ್ ಹೆಗ್ಡೆ, ಚಂದ್ರಶೇಖರ್ ಕಲ್ಪತರು, ಸಟ್ವಡಿ ವಿಜಯ್ ಶೆಟ್ಟಿ, ರಾಜೀವ ಕೋಟ್ಯಾನ್,ಹೃದಯ ಕುಮಾರ್ ಶೆಟ್ಟಿ, ಮಂಜುನಾಥ್ ರಾವ್, ಜಿ ಎಸ್ ಭಟ್, ಸಚಿನ್ ನಕ್ಕತ್ತಾಯ, ಚಂದ್ರಶೇಖರ್ ಶೆಟ್ಟಿ ಶ್ರವಣ್ ಚಾತ್ರ ಮುಂತಾದವರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ,ಸೆ.12: ಕುಂದಾಪುರ ತಾಲೂಕಿನ ಮೋವಾಡಿ ಎಂಬಲ್ಲಿ ಸೌಪರ್ಣಿಕಾ ಹೊಳೆಯಲ್ಲಿ ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದ ಮರಳು ಅಡ್ಡೆ ಮೇಲೆ ಗಂಗೊಳ್ಳಿ ಪೊಲೀಸರು ದಾಳಿ ನಡೆಸಿದ್ದಾರೆ. ಅಕ್ರಮವಾಗಿ ಮರಳುಗಾರಿಕೆ ಮಾಡುತ್ತಿದ್ದ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಸೋಮವಾರ ತಡರಾತ್ರಿ ಗಂಗೊಳ್ಳಿ ಪಿಎಸ್ಐ ಹರೀಶ್ ಆರ್ ಹಾಗೂ ಪೊಲೀಸ್ ಸಿಬ್ಬಂದಿಗಳು ದಾಳಿ ನಡೆಸಿ ಆಪಾದಿತರು ಕೃತ್ಯಕ್ಕೆ ಬಳಿಸಿದ ಒಟ್ಟು 2,13,500 ರೂಪಾಯಿ ಮೌಲ್ಯದ 2 ದೋಣಿ, ಪ್ಲಾಸ್ಟಿಕ್ ಬುಟ್ಟಿಗಳು, ಕಬ್ಬಿಣದ ಬಕೆಟುಗಳು, ಮರದ ಹಲಗೆ, ಕಬ್ಬಿಣದ ಸ್ಟ್ಯಾಂಡ್ ಮತ್ತು ಒಂದು ಯುನಿಟ್ ಮರಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ. ಕಾರ್ಯಾಚರಣೆಯಲ್ಲಿ ನಾಲ್ವರು ಉತ್ತರ ಪ್ರದೇಶದ ಕಾರ್ಮಿಕರು ಹಾಗೂ ಓರ್ವ ಸ್ಥಳೀಯ ಅಕ್ರಮ ದಕ್ಕೆ ನಡೆಸುತ್ತಿದ್ದ ಅಲ್ಟನ್ ಎಂಬುವವರನ್ನು ವಶಕ್ಕೆ ಪ್ರಕರಣ ದಾಖಲಿಸಲಾಗಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು,ಸೆ.12: ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ಮಹಾಸಭೆಯು ನಾವುಂದದ ಶ್ರೀ ಮಹಾಗಣಪತಿ ಮಾಂಗಲ್ಯ ಮಂಟಪದಲ್ಲಿ ಇಂದು ನಡೆಯಿತು. ಮಹಾಸಭೆಯ ಅಧ್ಯಕ್ಷತೆ ವಹಿಸಿದ ಸಂಘದ ಅಧ್ಯಕ್ಷರಾದ ಎಸ್. ರಾಜು ಪೂಜಾರಿ ಮಾತನಾಡಿ, ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘವು ಹಿಂದಿನ ಸಾಲಿನಲ್ಲಿ ರೂ 312 ಕೋಟಿಗೂ ಮಿಕ್ಕಿದ ವ್ಯವಹಾರ ನಡೆಸಿ, ರೂ. 1.25 ಕೋಟಿ ಲಾಭ ಗಳಿಸಿದೆ. ಸದಸ್ಯರಿಗೆ ಶೇ. 14 ಡಿವಿಡೆಂಡ್ ನೀಡಲು ನಿರ್ಧರಿಸಲಾಗಿದೆ. ಸಂಘವು ಹಿಂದಿನ ಸಾಲಿನಲ್ಲಿ ರೂ 58.70 ಕೋಟಿ ಠೇವಣಿ ಹೊಂದಿ, ಸದಸ್ಯರಿಗೆ ರೂ. 43.82 ಕೋಟಿ ಸಾಲ ನೀಡಿದೆ. ಅದರಲ್ಲಿ ರೂ. 10 ಕೋಟಿಗೂ ಮಿಕ್ಕಿ ಕೃಷಿ ಸಾಲವನ್ನು ಸಂಘವು ಸದಸ್ಯರಿಗೆ ನೀಡಲಾಗಿದೆ. ವಿವಿಧ ನಿಧಿಗಳಲ್ಲಿ 45.71 ಕೋಟಿ ರೂ. ಸಂಚಯಿಸಲಾಗಿದೆ ಎಂದರು. ಸಂಸ್ಥೆಯ ನಿರಂತರವಾಗಿ ಪ್ರಗತಿಯ ಪಥದಲ್ಲಿದ್ದು ಸದಸ್ಯರಿಗೂ ಬಡ್ಡಿಯಲ್ಲಿ ಕಡಿತ, ಕೃಷಿ ಹಾಗೂ ಹೈನುಗಾರಿಕೆಗೆ ಸಾಲ ನೀಡಿ ಪ್ರೋತ್ಸಾಹ ನೀಡುತ್ತಾ ಬರಲಾಗುತ್ತಿದೆ. ವಿವಿಧ ಮಾಹಿತಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಸರಾಸರಿ ಮಳೆ ಕೊರತೆಯಿಂದಾಗಿ ಭತ್ತದ ಬೆಳೆ ಹಾಗೂ ತೋಟಗಾರಿಕಾ ಬೆಳೆಗಳು ಒಣಗುತ್ತಿದೆ. ಹಾಗಾಗಿ ಬೈಂದೂರನ್ನು ಬರಗಾಲ ಪೀಡಿತ ತಾಲೂಕನ್ನಾಗಿ ಘೋಷಿಸುವಂತೆ ಸಂಸದ ಬಿ.ವೈ. ರಾಘವೇಂದ್ರ ಮನವಿ ಮಾಡಿದರು. ಅವರು ಬೈಂದೂರು ಮಿನಿವಿಧಾನಸೌಧ ಶಾಸಕರ ಕಛೇರಿಯಲ್ಲಿ ಸೋಮವಾರ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ ಪರಿಶೀಲನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಬಿಜೆಪಿ ಸರಕಾರ ರೈತರಿಗೆ ನೀಡಿದ ಉಚಿತ ವಿದ್ಯುತ್ ಯೋಜನೆಯಂತೆ ಲೋಡ್ ಶೆಡ್ಡಿಂಗ್ ಮಾಡದೇ ವಿದ್ಯುತ್ ಒದಗಿಸಬೇಕು. ವಿದ್ಯುತ್ ಕೊರತೆ ಇದ್ದರೆ, ಬೇರೆ ರಾಜ್ಯದಿಂದಾದರೂ ಖರೀದಿಸಿ ನೀಡಲಿ. ರೈತರಿಗೆ ನೀರು, ವಿದ್ಯುತ್ ದೊರೆತರೆ ಯಾವುದೇ ಭಾಗ್ಯದ ಅವಶ್ಯಕತೆ ಇರುವುದಿಲ್ಲ ಎಂದ ಅವರು, ಉಡುಪಿ ಜಿಲ್ಲೆಯಲ್ಲಿ ಸರಕಾರಿ ಬಸ್ಸುಗಳ ಸಂಖ್ಯೆ ತೀರಾ ಕಡಿಮೆಯಿದ್ದು ಶಕ್ತಿ ಯೋಜನೆಯ ಲಾಭ ಜಿಲ್ಲೆಯ ಮಹಿಳೆಯರಿಗೆ ದೊರೆಯುತ್ತಿಲ್ಲ. ಖಾಸಗಿ ಬಸ್ಸುಗಳಿಗೂ ಸಬ್ಸಿಡಿ ಒದಗಿಸಿದರೆ ಕರಾವಳಿಯ ಹೆಣ್ಣುಮಕ್ಕಳಿಗೆ ಅನುಕೂಲ ಮಾಡಿದಂತಾಗುವುದು ಇಲ್ಲದಿದ್ದರೆ ಕೇವಲ ಪ್ರಚಾರದ ಯೋಜನೆಯಾಗುವುದು. ಮಹಿಳೆಯರಿಗೆ ಒಂದು ಕಡೆ ಹಣವನ್ನು ಕೊಟ್ಟಂತೆ ಮಾಡಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೆಲ್ಬೋರ್ನ್/ಕುಂದಾಪುರ: ಆಸ್ಟ್ರೇಲಿಯಾದ ಮೆಲ್ಬೋರ್ನ್ ನಗರದಲ್ಲಿ ನೆಲೆಸಿರುವ ಕ್ರೀಡೋತ್ಸಾಹಿ ಕುಂದಾಪ್ರ ಕನ್ನಡಿಗರು, ತಮ್ಮೂರಿನ ಅಭಿಮಾನದಿಂದಾಗಿ ‘ಕುಂದಾಪ್ರ ರಾಯಲ್ಸ್’ ಎಂಬ ಹೊಸ ಕ್ರಿಕೆಟ್ ತಂಡವನ್ನು ಆರಂಭಿಸಿದ್ದಾರೆ. ಮೆಲ್ಬೋರ್ನ್ ನಗರದಲ್ಲಿ ಇತ್ತೀಚಿಗೆ ಉದ್ಘಾಟನಾ ಕಾರ್ಯಕ್ರಮ ಅದ್ಧೂರಿಯಾಗಿ ನೆರವೇರಿತು. ಕಳೆದ 15 ವರ್ಷಗಳಿಂದ ಮೆಲ್ಬೋರ್ನ್‌ನಲ್ಲಿ ವಾಸಿಸುತ್ತಿರುವ ತಂಡದ ಮ್ಯಾನೇಜರ್ ಅನಂತರಾಮ ಶೆಟ್ಟಿ ಕೋಳ್ಕೆರೆ ಮತ್ತು ತಂಡದ ನಾಯಕರಾದ ಸೂರಜ್ ಶೆಟ್ಟಿ ಅಸೂಡು ಕಾರ್ಯಕ್ರಮ ಆಯೋಜಿಸಿದರು. ಕಾರ್ಯಕ್ರಮದಲ್ಲಿ 250ಕ್ಕೂ ಮಂದಿ ಭಾಗವಹಿಸಿ ಸಂಭ್ರಮಿಸಿದರು. ಕಾರ್ಯಕ್ರಮದಲ್ಲಿ ವ್ಯಾಪಾರ ಪ್ರಾಯೋಜಕರಾದ ಬ್ರೈಟನ್ ಲೆಕ್ಸಸ್‌ನ ಜನರಲ್ ಸೇಲ್ಸ್ ಮ್ಯಾನೇಜರ್ ಡಿಯೋನ್ ನುಗಾರ, ಆಸ್ಟ್ರೇಬಿಲ್ಡ್‌ನ ದಯಾನಂದ ಶೆಟ್ಟಿ ಅಜ್ರಿ, ಹ್ಯಾಟರ್ ಮತ್ತು ಹೇರ್ ಮತ್ತು ಡ್ರೋಮ್‌ನ ವಿನೋದ್ ಶೆಟ್ಟಿ ಕೊಡ್ಲಾಡಿ, ಸ್ಪ್ರಿಂಗ್ಡೇಲ್ ಫ್ಯಾಮಿಲಿ ಡೆಂಟಲ್ನಿಂದ ಡಾ. ರಕ್ಷಿತ್ ಶೆಟ್ಟಿ ಗಿಳಿಯಾರ್, ಒನ್ಗ್ರೂಪ್ ರಿಯಾಲಿಟಿಯಿಂದ ಕಲ್ಲೆ ಸಿಂಗ್, ವಿಜೇತ್ ಶೆಟ್ಟಿ ಸೀತಾನಾದಿ ಮತ್ತು ಅಲ್ಟಾಲ್ಯಾಂಡ್‌ನಿಂದ ರಾಮ್ ಮೋಹನ್ ಶೆಟ್ಟಿ ಮೊಳಹಳ್ಳಿ, ಮೆಲ್ಬೋರ್ನ್ ಕನ್ನಡ ಸಂಘದಿಂದ ವಿಶೇಷ ಅತಿಥಿಗಳಾಗಿ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡದ ಕನಕ ಅಧ್ಯಯನ ಪೀಠ ಹಾಗೂ ಚೇತನಾ ಫೌಂಡೇಶನ್ ಸಂಯುಕ್ತಾಶ್ರಯದಲ್ಲಿ ಜರುಗಿದ ನುಡಿ ಸಡಗರ ಕಾರ್ಯಕ್ರಮದಲ್ಲಿ ಭರತ್ ಕುಮಾರ್ ಶೆಟ್ಟಿ ಕೊಲ್ಲೂರು ಅವರಿಗೆ ಕರುನಾಡು ಚೇತನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಉಪ್ಪುಂದ ಮೂರ್ತೆದಾರರ ಸೇವಾ ಸಹಕಾರಿ ಸಂಘದ 32ನೇ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆ ಭಾನುವಾರ ಮಾತೃಶ್ರೀ ಸಭಾಭವನದಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಮೋಹನ ಪೂಜಾರಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಉಪ್ಪುಂದ ಮೂರ್ತೆದಾರರ ಸೇವಾ ಸಹಕಾರಿ ಸಂಘ ವರದಿ ವರ್ಷದಲ್ಲಿ ರೂ. 112.74 ಕೋಟಿ ವ್ಯವಹಾರ ನಡೆಸಿ, ರೂ. 40.54 ಲಕ್ಷ ನಿವ್ವಳ ಲಾಭ ಗಳಿಸಿದೆ. ಆಡಿಟ್ ವರ್ಗೀಕರಣದಲ್ಲಿ ಎ ದರ್ಜೆ ಹೊಂದಿದೆ. ಸಂಘವು ಪ್ರಾರಂಭದಿಂದಲೂ ಲಾಭದಲ್ಲಿಯ್ಲೇ ಮುನ್ನಡೆಯುತ್ತಿದ್ದು, ಕಳೆದ 31 ವರ್ಷಗಳಿಂದ ನಿರಂತರ ಡಿವಿಡೆಂಟ್ ನೀಡಿರುವ ಹೆಗ್ಗಳಿಕೆ ಗಳಿಸಿದೆ. ಈ ಭಾರಿ 10% ಡಿವಿಡೆಂಟ್ ಘೋಷಿಸಲಾಗಿದೆ. ಪ್ರಧಾನ ಕಚೇರಿಗೆ ಸುಸಜ್ಜಿತವಾದ ಸಹಕಾರಿ ಸಂಕೀರ್ಣ ನಿರ್ಮಾಣ ಯೋಜನೆಯಿದ್ದು, ಅದಕ್ಕಾಗಿ ಜಾಗ ಮೀಸಲಿರಿಸಲಾಗಿದೆ ಎಂದು ಹೇಳಿದರು. ರಾಷ್ಟ್ರಪತಿ ಪದಕ ಪುರಸ್ಕೃತ ಕ್ರೀಡಾ ಕ್ಷೇತ್ರದ ಸಾಧಕ, ಪೋಲಿಸ್ ಸಿಬ್ಬಂದಿ ಶಂಕರ ಪೂಜಾರಿ ಕಾಡಿನತಾರು, ಎಸ್ಎಸ್ಎಲ್‌ಸಿಯಲ್ಲಿ ರಾಜ್ಯಕ್ಕೆ ದ್ವಿತೀಯ ಹಾಗೂ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿನಿ ಅಮೂಲ್ಯ,…

Read More