Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬೆಂಗಳೂರಿನ ಸ್ವಯಂಸ್ಪೂರ್ತಿ ಫೌಂಡೇಶನ್ ವತಿಯಿಂದ ಸಮೃದ್ಧ ಬೈಂದೂರು ಯೋಜನೆಯ ಭಾಗವಾಗಿ ಬೈಂದೂರು ತಾಲೂಕಿನ ಸ.ಹಿ.ಪ್ರಾ ಶಾಲೆ ಬಿಜೂರು, ಸ.ಹಿ.ಪ್ರಾ ಶಾಲೆ ಕಾಲ್ತೊಡು ಹಾಗೂ ಸ.ಹಿ.ಪ್ರಾ ಶಾಲೆ ಜಡ್ಕಲ್’ನಲ್ಲಿ ನಿರ್ಮಿಸಿರುವ ಕಂಪ್ಯೂಟರ್ ಲ್ಯಾಬ್ ಮತ್ತು ಗ್ರಂಥಾಲಯವನ್ನೊಳಗೊಂಡ ಒಳಗೊಂಡ ಒಟ್ಟು 7.5 ಲಕ್ಷ ವೆಚ್ಚದ ‘ಸ್ವಯಂಸ್ಪೂರ್ತಿ ಕೌಶಲ್ಯ ಕೇಂದ್ರ’ಕ್ಕೆ ಇತ್ತೀಚಿಗೆ ಚಾಲನೆ ನೀಡಲಾಯಿತು. ಶಾಸಕ ಗುರುರಾಜ್ ಗಂಟಿಹೊಳೆ ಅವರು ಸ್ವಯಂಸ್ಪೂರ್ತಿ ಕೌಶಲ್ಯ ಕೇಂದ್ರವನ್ನು ಉದ್ಘಾಟಿಸಿದರು. ಬಳಿಕ ಪುಸ್ತಕ ಹಾಗೂ ಕ್ರೀಡಾ ಸಾಮಗ್ರಿಗಳನ್ನು ಹಸ್ತಾಂತರಿಸಿದರು. ಫೌಂಡೇಶನ್ ವತಿಯಿಂದ ಆಯೋಜಿಸಿದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು. ಈ ವೇಳೆ ಶಾಲೆಗಳ ಮುಖ್ಯೋಪಧ್ಯಾಯರು, ಎಸ್.ಡಿ.ಎಂ.ಸಿ ಅಧ್ಯಕ್ಷರು, ಸದಸ್ಯರು, ಪಂಚಾಯತ್ ಅಧ್ಯಕ್ಷರು ಮತ್ತು ಸದಸ್ಯರು, ಸ್ವಯಂಸ್ಪೂರ್ತಿ ಫೌಂಡೇಶನ್ ಪದಾಧಿಕಾರಿಗಳು ಉಪಸ್ಥಿತರಿದ್ದರು. ಸರಕಾರಿ ಶಾಲೆ ಮಕ್ಕಳಿಗೆ ಓದಲು ಕಲಿಕಾ ಸ್ನೇಹಿ ವಾತಾವರಣ ನಿರ್ಮಿಸಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡಬೇಕೆನ್ನುವ ಮಹತ್ವಾಕಾಂಕ್ಷೆಯಿಂದ “ಸ್ವಯಂಸ್ಪೂರ್ತಿ ಕೌಶಲ್ಯ ಕೇಂದ್ರವನ್ನು ಸ್ಥಾಪಿಸಲಾಗಿದೆ. ಇದರ ಸದುಪಯೋಗವನ್ನು ಎಲ್ಲಾ ವಿದ್ಯಾರ್ಥಿಗಳು ಪಡೆಯುವಂತಾಗಲಿ -…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಹೆಬ್ರಿ ತಾಲೂಕು ನಾಡ್ಪಾಲು ಗ್ರಾಮ ಪಂಚಾಯಿತಿಯ ಪಶ್ಚಿಮ ಘಟ್ಟಗಳ ತಪ್ಪಲಿನ ಕಾಡಿನ ಅಂಚಿನಲ್ಲಿ ಬಹುತೇಕ ಸಮಾಜದ ಕಟ್ಟ ಕಡೆಯ, ಜನವಸತಿಯ ಕೊನೆಯ ಪ್ರದೇಶದಲ್ಲಿ ನೆಲೆಸಿರುವ, ಮಲೆಕುಡಿಯ ಕುಟುಂಬಗಳನ್ನು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಶನಿವಾರ ಭೇಟಿ ಮಾಡಿದರು. ನಗರ ಪ್ರದೇಶದಿಂದ ಬಹುದೂರದ, ಅರಣ್ಯದ ಅತ್ಯಂತ ಒಳಭಾಗದ ಪ್ರದೇಶಗಳಾದ ಪೀತಾಬೈಲು, ತಿಂಗಳ ಮಕ್ಕಿ, ತೆಂಗಮಾರು ಗ್ರಾಮದಲ್ಲಿ ವಾಸಿಸುವ ಬುಡಕಟ್ಟು ಕುಟುಂಬಗಳ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು 3 ರಿಂದ 4 ಕಿ.ಮೀ ಕಾಡು ಕಚ್ಛಾ ದಾರಿಯಲ್ಲಿ ಗುಡ್ಡಗಳನ್ನ ಹತ್ತಿ ಇಳಿದು ನದಿ, ಕೊಳ್ಳಗಳನ್ನು ದಾಟಿ ನಡೆದು ಕುಗ್ರಾಮಕ್ಕೆ ಭೇಟಿ ನೀಡಿದರು. ಹಲವು ವರ್ಷಗಳಿಂದ ಆಧುನಿಕ ಮೂಲಭೂತ ಸೌಲಭ್ಯಗಳಿಂದ ವಂಚಿತರಾದ ಮಲೆಕುಡಿಯ ಮೂಲ ಆದಿ ನಿವಾಸಿಗಳೊಂದಿಗೆ ಜಿಲ್ಲಾಧಿಕಾರಿಗಳು ಚರ್ಚಿಸಿ, ಅವರ ಪರಿಸ್ಥಿತಿಯನ್ನು ಖುದ್ದಾಗಿ ಅವಲೋಕಿಸಿ, ಬುಡಕಟ್ಟು ಜನಾಂಗದವರಿಗೆ ಅಗತ್ಯವಿರುವ ಸೌಲಭ್ಯಗಳನ್ನು ಕಲ್ಪಿಸಲಾಗುವುದಾಗಿ ತಿಳಿಸಿದರು. ಪಶ್ಚಿಮ ಘಟ್ಟಗಳ ಅಂಚಿನ ಕಾಡಿನ ತೆಂಗಮಾರು ಗ್ರಾಮದಲ್ಲಿ ವಾಸವಾಗಿರುವ ನಾರಾಯಣ ಗೌಡ ಅವರನ್ನು ಸಂಪರ್ಕಿಸಿ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು: ಸ್ಯಾಂಡಲ್‌ವುಡ್‌ನ ಖ್ಯಾತ ನಟಿ ರಾಧಿಕಾ ಕುಮಾರಸ್ವಾಮಿ ನಟನೆ ಜೊತೆಗೆ ನಿರ್ಮಾಣದಲ್ಲೂ ಗುರುತಿಸಿಕೊಂಡಿದ್ದಾರೆ. ತಮ್ಮ ಶಮಿಕಾ ಎಂಟರ್ ಪ್ರೈಸಸ್ ಮೂಲಕ ರಾಧಿಕಾ ಮೂರು ಸಿನಿಮಾಗನ್ನು ನಿರ್ಮಾಣ ಮಾಡಿದ್ದಾರೆ. ಇದೀಗ ಅವರ ಸಹೋದರ ರವಿರಾಜ್ ಚಂದನವನಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ನಟನಾಗಿ ಅಲ್ಲ ನಿರ್ಮಾಪಕನಾಗಿ. ರವಿರಾಜ್ ಅವರಿಗೆ ಸಿನಿಮಾರಂಗ ಹೊಸದೇನಲ್ಲ. ತನ್ನ ಸಹೋದರಿ ರಾಧಿಕಾ ಅವರ ಶಮಿಕಾ ಎಂಟರ್ ಪ್ರೈಸಸ್ ನಲ್ಲಿ ಸಹ ನಿರ್ಮಾಪಕನಾಗಿ ಕೆಲಸ ಮಾಡಿರುವ ಅನುಭವ ರವಿರಾಜ್ ಅವರಿಗಿದೆ. ‘ಲಕ್ಕಿ’, ‘ಸ್ವೀಟಿ ನನ್ನ ಜೋಡಿ’, ಭೈರಾದೇವಿ ಸಿನಿಮಾಗಳಲ್ಲಿ ರವಿರಾಜ್ ತಂಗಿ ರಾಧಿಕಾ ಜೊತೆ ಕೆಲಸ ಮಾಡಿದ್ದರು ಜೊತೆಗೆ ಸಿನಿಮಾ ವಿತರಣೆ ವಿಭಾಗದಲ್ಲೂ ಕೆಲಸ ಮಾಡಿದ್ದಾರೆ. ಆದರೀಗ ಸ್ವತಂತ್ರ ನಿರ್ಮಾಪಕರಾಗಿ ಚಂದನವನಕ್ಕೆ ಪದಾರ್ಪಣೆ ಮಾಡತ್ತಿದ್ದಾರೆ ರವಿರಾಜ್. ತಮ್ಮದೇ ಆದ ಹೊಸ ನಿರ್ಮಾಣ ಸಂಸ್ಥೆ ಹುಟ್ಟುಹಾಕಿದ್ದು ಈಗಾಗಲೇ ಮೊದಲ ಸಿನಿಮಾದ ಚಿತ್ರೀಕರಣ ಕೂಡ ಮುಗಿಸಿದ್ದಾರೆ. ರವಿರಾಜ್ ತಮ್ಮ ನಿರ್ಮಾಣ ಸಂಸ್ಥೆಗೆ ‘ಶ್ರೀ ದುರ್ಗಾಪರಮೇಶ್ವರಿ ಪ್ರೊಡಕ್ಷನ್’ ಎಂದು ಹೆಸರಿಟ್ಟಿದ್ದಾರೆ. ಅಂದಹಾಗೆ ಇದು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಗೂಡ್ಸ್ ರೈಲಿನ ಲಾರಿಯಲ್ಲಿ ಬಿಜೂರು ರೈಲ್ವೆ ನಿಲ್ದಾಣದ ಸಮೀಪ ಬೆಂಕಿ ಕಾಣಿಸಿಕೊಂಡಿದ್ದು, ಬಿಜೂರು ನಿಲ್ದಾಣದ ಸಿಬ್ಬಂದಿಗಳು ತಕ್ಷಣ ಕಾರ್ಯಪ್ರವೃತ್ತರಾಗಿದ್ದರಿಂದ ರೈಲು ನಿಲ್ಲಿಸಿ, ಅಗ್ನಿಶಾಮಕದಳದ ನೆರವಿನೊಂದಿಗೆ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮುಂಬೈನಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಗೂಡ್ಸ್ ರೈಲು ಬಿಜೂರು ನಿಲ್ದಾಣ ಸಮೀಪ ಬರುತ್ತಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣ ರೈಲು ನಿಲ್ಲಿಸಿ ಅಗ್ನಿಶಾಮಕ ದಳಕ್ಕೆ ಮಾಹಿತಿ ರವಾನಿಸಲಾಯಿತು. ರೈಲಿನ ಮಧ್ಯಭಾಗದ ಲಾರಿಯಲ್ಲಿ ತುಂಬಿಸಲಾಗಿದ್ದ ಆಹಾರ ಸಾಮಾಗ್ರಿಗಳಿಗೆ ಬೆಂಕಿ ಬಿದ್ದಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಷ್ಟರಲ್ಲಿ ಲಾರಿಯಲ್ಲಿದ್ದ ಭಾಗಶಃ ವಸ್ತುಗಳು ಸುಟ್ಟುಹೊಗಿದ್ದವು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಅ.09: ನಗರದಲ್ಲಿ ಅ.01ರಂದು ರಾಘವೇಂದ್ರ ಶೇರುಗಾರ್ (42) ಯಾನೆ ಬನ್ಸ್ ರಾಘು ಕೊಲೆ ಪ್ರಕರಣದಲ್ಲಿ ಬಂಧಿತ ಇಬ್ಬರು ಆರೋಪಿಗಳಾದ ಶಫಿವುಲ್ಲ ಅಲಿಯಾಸ್ ಆಟೋ ಶಫಿ (40), ಮಹಮ್ಮದ್ ಇಮ್ರಾನ್ (43) ಎಂಬಿಬ್ಬರಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿದೆ. ಶಿವಮೊಗ್ಗ ಜಿಲ್ಲೆಯವರಾದ ಶಫಿವುಲ್ಲ ಹಾಗೂ ಮಹಮ್ಮದ್ ಇಮ್ರಾನ್ ಎಂಬಾತನ್ನು ಅ.5ರಂದು ಶಿವಮೊಗ್ಗ ರೈಲ್ವೇ ನಿಲ್ದಾಣದ ಬಳಿ ಬಂಧಿಸಿದ್ದು ಅ.6 ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ತನಿಖೆಗೆ ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆದಿದ್ದರು. ಸೋಮವಾರ ಪೊಲೀಸ್ ಕಸ್ಟಡಿ ಅವಧಿ ಮುಗಿದ ಹಿನ್ನೆಲೆ ಕುಂದಾಪುರ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಮೃತ ರಾಘವೇಂದ್ರ ಶೇರಿಗಾರ್ ಅಲಿಯಾಸ್ ಬನ್ಸ್ ರಾಘು ಅವರ ಕಾರಿಗೆ ಆರೋಪಿಗಳ ಕಾರು ತಾಕಿದ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಆರೋಪಿ ಶಫಿವುಲ್ಲಾ ಚಾಕುವಿನಿಂದ ರಾಘವೇಂದ್ರ ಶೇರಿಗಾರ್ ಎಂಬುವವರಿಗೆ ಇರಿದಿದ್ದು ವಿಪರೀತ ರಕ್ತಸ್ರಾವವಾಗಿ ಮೃತಪಟ್ಟಿದ್ದರು. ಆರೋಪಿ ಶಾಫಿವುಲ್ಲಾಗೆ ಜುಗಾರಿ ಆಡುವ ಚಟವಿದ್ದು ಆತನ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಯುದ್ಧಪೀಡಿತ ಇಸ್ರೇಲ್‌ನಲ್ಲಿ ಕರಾವಳಿಯ 600 ಮಂದಿ ನೆಲೆಸಿರುವ ಬಗ್ಗೆ ಮಾಹಿತಿ ಇದ್ದು ಈ ಪೈಕಿ ಕುಂದಾಪುರ, ಬೈಂದೂರು ತಾಲೂಕುಗಳ 75 ಮಂದಿ ಇರಬಹುದು ಎಂದು ಅಂದಾಜಿಸಲಾಗಿದೆ. ಸದ್ಯ ಎಲ್ಲರೂ ಸುರಕ್ಷಿತರಾಗಿರುವ ಮಾಹಿತಿ ದೊರೆಯುತ್ತಿದೆ. ಇಸ್ರೇಲ್‌ನ ಥೆಲ್ ಅವೀವ್ ನಗರ ಹಾಗೂ ಸುಮಾರು 12 ಕೀಮೀ ದೂರದಲ್ಲಿರುವ ಅರ್ಜಲಿಯಾ ಹಾಗೂ ಹಿಪಾ ಭಾಗದಲ್ಲಿ ಹೆಚ್ಚಾಗಿ ಕುಂದಾಪುರ ಬೈಂದೂರು ತಾಲೂಕಿನವರು ವಾಸವಿದ್ದು, ಜೆರುಸಲೇಮ್ ಪ್ರದೇಶದಲ್ಲಿಯೂ ಕೆಲವರು ಇರುವ ಮಾಹಿತಿ ಇದೆ. ಕರಾವಳಿ ಜಿಲ್ಲೆಯವರು ಇರುವ ಕೆಲವು ಪ್ರದೇಶ ಕಡಿಮೆ ಯುದ್ಧಪೀಡಿತವಾಗಿದ್ದು ಬಂಕರ್, ಸೇಫ್ ಹೌಸ್’ಗಳಲ್ಲಿ ರಕ್ಷಣೆ ಪಡೆದಿದ್ದಾರೆ. ಕುಂದಾಪ್ರ ಡಾಟ್ ಕಾಂ ಸುದ್ದಿ. ಇಸ್ರೆಲಿನ ಅರ್ಜಲಿಯಾ ನಗರದಲ್ಲಿ ಹೌಸ್ ನರ್ಸ್ ಆಗಿರುವ ಉಪ್ಪುಂದ ಮೂಲಕ ಕ್ಲಾರೆನ್ಸ್ ಉಪ್ಪುಂದ ಅವರು ಇಸ್ರೆಲಿನ ಸದ್ಯದ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಹಂಚಿಕೊಂಡಿದ್ದು, ಸದ್ಯ ಸುರಕ್ಷಿತವಾಗಿರುವುದಾಗಿ ತಿಳಿಸಿದ್ದಾರೆ. ಸೋಮವಾರ ಸೈರನ್ ಶಬ್ದ ಮಾಡಿದ್ದು ಬಿಟ್ಟರೆ ಸಾರ್ವಜನಿಕರಿಗೆ ಯಾವುದೇ ಸಂದೇಶ ರವಾನಿಸಿಲ್ಲ. ಹಾಗೇನಾದರೂ ಅಪಾಯದ ಸಂಧರ್ಭ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಡುಪಿ ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆಯವರು ಆಯೋಜಿಸಿದ ಜಿಲ್ಲಾ ಮಟ್ಟದ ಗ್ರಾಮೀಣ ಐ.ಟಿ. ಕ್ವಿಜ್’ನಲ್ಲಿ ಸ್ಪರ್ಧಿಸಿದ ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ.ವಿಜ್ಞಾನ ವಿಭಾಗ ವಿದ್ಯಾರ್ಥಿ ತೇಜಸ್ವಿ ಮಿಥುನ್ ಜಿಲ್ಲಾ ಮಟ್ಟದಲ್ಲಿ ವಿಜೇತನಾಗಿ ರಾಜ್ಯ ಮಟ್ಟದ ಗ್ರಾಮೀಣ ಐ.ಟಿ.ಕ್ವಿಜ್ ಗೆ ಆಯ್ಕೆ ಆಗಿರುತ್ತಾನೆ. ವಿದ್ಯಾರ್ಥಿಯ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕಂದಾವರ ಮೂಡ್ಲಕಟ್ಟೆಯ ಅಂಬೇಡ್ಕರ್ ಭವನದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಕುಂದು ಕೊರತೆ ಸಭೆ ಪಿಎಸ್ಐ ಪವನ್ ನಾಯಕ್ ಹಾಗೂ ಸಮುದಾಯ ಮುಖಂಡರ ಉಪಸ್ಥಿತಿಯಲ್ಲಿ ಭಾನುವಾರ ಜರುಗಿತು. ಈ ಸಂದರ್ಭ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ ಹೇಗೆ ಮತ್ತು ಹೇಗೆ ಯಶಸ್ಸು ಸಾಧಿಸಬಹುದು ಎಂಬ ವಿಷಯದ ಕುರಿತು ಪಿಎಸ್ಐ ಪವನ್ ನಾಯಕ್ ಹಾಗೂ ಸ್ಪರ್ಧಾ ಸಾರಥಿ ಅಕಾಡೆಮಿ ಕುಂದಾಪುರ ಆದರ್ಶ ಕೆಲ ವಿಶೇಷ ಉಪನ್ಯಾಸ ನೀಡಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮೊಗವೀರ ಯುವ ಸಂಘಟನೆ ರಿ. ಉಡುಪಿ ಜಿಲ್ಲೆ ಹಾಲಾಡಿ ಶಂಕರನಾರಾಯಣ ಘಟಕ ದ ವತಿಯಿಂದ ಮೊಗವೀರ ಸಮಾಜದ ಮಾರ್ಗದರ್ಶಕರಾದ ನಾಡೋಜ ಡಾ. ಜಿ. ಶಂಕರ್ ಅವರ 68ನೇ ಹುಟ್ಟುಹಬ್ಬದ ಪ್ರಯುಕ್ತ ವಾಗ್ಜೋತಿ ಶ್ರವಣ ದೋಷವುಳ್ಳ ಅಂಧ ಮಕ್ಕಳ ವಸತಿ ಶಾಲೆ ಮೂಡುಬಗೆ ಅಂಪಾರು ಇಲ್ಲಿನ ಮಕ್ಕಳಿಗೆ ಮದ್ಯಾಹ್ನ ಊಟ ಮತ್ತು ಸಿಹಿ ತಿಂಡಿ ವಿತರಿಸಿ ಕೇಕ್ ಕಟ್ ಮಾಡಿ ಆಚರಿಸಲಾಯಿತು. ಮೊಗವೀರ ಯುವ ಸಂಘಟನೆ ಉಡುಪಿ ಜಿಲ್ಲೆಯ ಅಧ್ಯಕ್ಷ ರಾಜೇಂದ್ರ ಸುವರ್ಣ ಹಿರಿಯಡ್ಕ, ನಿಕಟಪೂರ್ವ ಅಧ್ಯಕ್ಷರಾದ ಶಿವರಾಮ್ ಕೆ. ಕೋಟ, ಪ್ರಧಾನ ಕಾರ್ಯದರ್ಶಿ ರವೀಶ್ ಎಸ್. ಕೊರವಡಿ, ಉಪಾಧ್ಯಕ್ಷರಾದ ಜಯಂತ್ ಅಮೀನ್, ಮಾಜಿ ಅಧ್ಯಕ್ಷರು ಗಣೇಶ್ ಕಾಂಚನ್, ಅಶೋಕ್ ತೆಕ್ಕಟ್ಟೆ, ಘಟಕ ದ ಅಧ್ಯಕ್ಷರಾದ ಕ್ರಷ್ಣ ಮೂರ್ತಿ ಕಾಂಚನ್, ನಿಕಟ ಪೂರ್ವ ಅಧ್ಯಕ್ಷರಾದ ಶೇಖರ್ ತೋಳರ್, ಕಾರ್ಯದರ್ಶಿ ಯಾದ ಶರತ್ ಮೊಗವೀರ ಸೌಡ, ಗೌರವ ಸಲಹೆಗರಾ ದ ರಘುರಾಮ್ ಹುಣಸೆಮಕ್ಕಿ, ಶಾಲಾ ಸಹ ಮುಖ್ಯಪಾಧ್ಯಾಯರಾದ ಸತ್ಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜಿಲ್ಲಾ ಪ್ರವಾಸೋದ್ಯಮ ಇಲಾಖೆಯವರು ವಿಶ್ವ ಪ್ರವಾಸೋದ್ಯಮ ದಿನದ ಅಂಗವಾಗಿ ಆಯೋಜಿಸಿದ ತಾಲೂಕು ಮಟ್ಟದ ವಿವಿಧ ಸಾಹಿತ್ಯಕ ಸ್ಪರ್ಧೆಗಳಲ್ಲಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಹಲವು ವಿಭಾಗಗಳಲ್ಲಿ ಸಾಧನೆ ಮೆರೆದಿದ್ದಾರೆ. ಚರ್ಚಾ ಸ್ಪರ್ಧೆಯಲ್ಲಿ ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗದ ವರ್ಷಾ ರವಿಶಂಕರ್ ಪ್ರಥಮ ಸ್ಥಾನ, ರಸಪ್ರಶ್ನೆ(ಕ್ವಿಜ್) ಸ್ಪರ್ಧೆಯಲ್ಲಿ ಪ್ರಥಮ ಪಿ.ಯು.ಸಿ.ಗಿರೀಶ್ ಪೈ ಪ್ರಥಮ ಸ್ಥಾನ, ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗದ ಐಶ್ವರ್ಯ ವೈದ್ಯ ದ್ವಿತೀಯ ಸ್ಥಾನ,ರಂಗೋಲಿ ಸ್ಪರ್ಧೆಯಲ್ಲಿ ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗದ ವೈಷ್ಣವಿ ದ್ವಿತೀಯ ಸ್ಥಾನ ಪಡೆದಿರುತ್ತಾಳೆ. ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು,ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Read More