ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬೈಂದೂರು ವಿಧಾನಸಭಾ ವ್ಯಾಪ್ತಿಯಲ್ಲಿ ಅಗತ್ಯವಿರುವ ಮೊಬೈಲ್ ಟವರ್ ಹಾಗೂ ಹೆಚ್ಚಿನ ರೈಲು ನಿಲುಗಡೆಗೆ ಸಂಬಂಧಿಸಿದಂತೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ. ರಾಘವೇಂದ್ರ ಅವರು ಕೇಂದ್ರ ದೂರಸಂಪರ್ಕ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಹಾಗೂ ರೈಲ್ವೇ ಸಚಿವರಾದ ಅಶ್ವಿನಿ ವೈಷ್ಣವ್ ಅವರನ್ನು ಮಂಗಳವಾರ ಭೇಟಿಯಾಗಿ ಮನವಿ ಸಲ್ಲಿಸಿದರು. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರು ವಿಧಾನಸಭಾ ವ್ಯಾಪ್ತಿಯಲ್ಲಿ ಅಗತ್ಯವಿರುವ ಬಿ.ಎಸ್.ಎನ್.ಎಲ್ ಮೊಬೈಲ್ ಟವರ್ ಮಂಜೂರಾತಿಗೆ ಹಾಗೂ ಬೈಂದೂರು, ಶಿರೂರು, ಬಿಜೂರು ಹಾಗೂ ಸೇನಾಪುರ ರೈಲ್ವೇ ನಿಲ್ದಾಣಗಳಲ್ಲಿ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಹೆಚ್ಚಿನ ರೈಲುಗಳು ನಿಲುಗಡೆಗೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು. ಸಂಸದರ ಮನವಿಗೆ ಕೇಂದ್ರ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಉಡುಪಿಯ ಕಾಲೇಜೊಂದರಲ್ಲಿ ನಡೆದ ಮೊಬೈಲ್ ಚಿತ್ರೀಕರಣಕ್ಕೆ ಸಂಬಂಧಿಸಿದಂತೆ ಪ್ರಕರಣವನ್ನು ಎಸ್ಐಟಿಗೆ ವಹಿಸುವ ಪ್ರಶ್ನೆ ಉದ್ಬವವಾಗುವುದಿಲ್ಲ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅವರು ಉಡುಪಿ ಉಡುಪಿ ಜಿಲ್ಲೆಯ ಪ್ರಗತಿ ಪರಿಶೀಲನೆ ಸಭೆಗೆ ಆಗಮಿಸಿದ ಸಂದರ್ಭ ಪಡುಬಿದ್ರಿಯಲ್ಲಿ ಕಡಲ್ಕೊರೆತದಿಂದ ಹಾನಿಯಾಗಿರುವ ಪ್ರದೇಶಕ್ಕೆ ಭೇಟಿ ಬಳಿಕ ಮಾತನಾಡಿದರು. ವೀಡಿಯೋ ಪ್ರಕರಣದಕ್ಕೆ ಸಂಬಂಧಿಸಿದಂತೆ ಪೊಲೀಸರು ಸುಮೋಟೋ ಪ್ರಕರಣವನ್ನು ದಾಖಲಿಸಿಕೊಂಡಿದ್ದು ಎಫ್.ಐ.ಆರ್ ಆಗಿದೆ. ತನಿಖೆಯನ್ನು ಡಿವೈಎಸ್ಪಿ ಮಟ್ಟದ ಅಧಿಕಾರಿ ಮಾಡುತ್ತಿದ್ದಾರೆ. ಈ ಹೊತ್ತಿನಲ್ಲಿ ಎಸ್ಐಟಿ ಪ್ರಶ್ನೆ ಉದ್ಭವಿಸುವುದಿಲ್ಲ. ತನಿಕೆಯ ವರದಿ ಬಂದ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದವರು ತಿಳಿಸಿದ್ದಾರೆ. ಉಡುಪಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ಸಿಬ್ಬಂದಿಯ ವೇತನ ಬಿಡುಗಡೆಯಾಗದ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಈ ಬಗ್ಗೆ ಮಾಹಿತಿ ಇಲ್ಲ. ಕೂಡಲೇ ಹಣಕಾಸು ಇಲಾಖೆಗೆ ಸೂಚನೆ ನೀಡಲಾಗುವುದು ಎಂದರು. ಕಡಲ್ಕೊರೆತಕ್ಕೆ ಶಾಶ್ವತ ಪರಿಹಾರದ ಯೋಜನೆ:ಕರಾವಳಿಯಲ್ಲಿ ಕಡಲ್ಕೊರೆತ ತಡೆ ಕುರಿತಂತೆ ಶಾಶ್ವತ ಪರಿಹಾರ ಒದಗಿಸಲು ಕ್ರಿಯಾ ಯೋಜನೆ ರೂಪಿಸಲಾಗುವುದು, ಇದಕ್ಕೆ ಎಷ್ಟು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು,ಅ.01: ತಾಲೂಕಿನ ಉಪ್ಪುಂದ ಕರ್ಕಿಕಳಿ ಎಂಬಲ್ಲಿ ನಡೆದ ದೋಣಿ ದುರಂತದಲ್ಲಿ ಓರ್ವ ಮೀನುಗಾರ ಮೃತಪಟ್ಟು, ಇನ್ನೋರ್ವ ನಾಪತ್ತೆಯಾಗಿದ್ದಾನೆ. ಇಂದು ಘಟನಾ ಸ್ಥಳಕ್ಕೆ ಭೇಟಿ ನೀಡಿದ ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಅವರು ಮೀನುಗಾರರಿಂದ ಘಟನೆಯ ಮಾಹಿತಿ ಪಡೆದುಕೊಂಡದರು. ಈ ವೇಳೆ ಬೈಂದೂರು ಮಂಡಲ ಬಿಜೆಪಿ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಬಿ.ಎಸ್. ಸುರೇಶ್ ಶೆಟ್ಟಿ, ಮೀನುಗಾರ ಮುಖಂಡರಾದ ಆನಂದ ಖಾರ್ವಿ, ಜಗನ್ನಾಥ ಮೊಗವೀರ, ಬಿಎಚ್ಪಿ ನಾಗರಾಜ ಖಾರ್ವಿ, ಪ್ರಜ್ವಲ್ ಶೆಟ್ಟಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಪಟ್ಟೆಬಲೆ ದೋಣಿಯ ಮೂಲಕ ಮೀನುಗಾರಿಕೆಗೆ ತೆರಳಿ ಹಿಂದಿರುಗುತ್ತಿದ್ದ ವೇಳೆ ಅವಘಡ ಸಂಭವಿಸಿತ್ತು. ಸಮುದ್ರದಲೆಗಳ ಹೊಡೆತಕ್ಕೆ ದೋಣಿ ಮಗುಚಿ ಬಿದ್ದು ದುರಂತ ನಡೆದಿದ್ದು, ದೋಣಿಯಡಿಗೆ ಸಿಲುಕಿದ್ದ ನಾಗೇಶ್ ಬಾಬು ಖಾರ್ವಿ [30] ಎಂಬುವವರನ್ನು ಚಿಕಿತ್ಸೆಗಾಗಿ ಕರೆದೊಯ್ಯುವ ವೇಳೆ ಮಾರ್ಗಮಧ್ಯದಲ್ಲಿ ಮೃತಪಟ್ಟಿದ್ದಾರೆ. ಸತೀಶ್ ಖಾರ್ವಿ [34] ಎಂಬುವವರು ನಾಪತ್ತೆಯಾಗಿದ್ದು ಹುಡುಕಾಟ ನಡೆಸಲಾಗುತ್ತಿದೆ. ಉಪ್ಪುಂದದ ಸಚಿನ್ ಖಾರ್ವಿ ಎಂಬುವವರಿಗೆ ಸೇರಿದ ಮಾಸ್ತಿ ಮರ್ಲಿಚಿಕ್ಕು ಪ್ರಸಾದ ಹೆಸರಿನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಆರ್ಟ್ಸ್ ಮತ್ತು ಸೈನ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾಗಿ ಡಾ. ಶುಭಕರ ಆಚಾರಿ ಅವರನ್ನು ನೇಮಕ ಮಾಡಲಾಗಿದ್ದು, ಅವರು ಅ.1ರಿಂದ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಕಳೆದ 30 ವರ್ಷಗಳ ಸುದೀರ್ಘ ಅವಧಿಯಲ್ಲಿ ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಮಣಿಪಾಲ ವ್ಯಾಪ್ತಿಯ ವಿವಿಧ ಕಾಲೇಜುಗಳಲ್ಲಿ ರಾಜ್ಯಶಾಸ್ತ್ರ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ. ಕಾರ್ಕಳದ ಭುವನೇಂದ್ರ ಮತ್ತು ಮೂಡುಬಿದಿರೆ ಮಹಾವೀರ ಕಾಲೇಜುಗಳಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ, ಭಂಡರ್ಕಾರ್ಸ್ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಸೇರಿದಂತೆ ವಿವಿಧ ಹುದ್ದೆಗಳನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ. ಡಾ.ಶುಭಕರಾಚಾರಿ ಅವರು ಮೂಲತಃ ತೀರ್ಥಹಳ್ಳಿಯ ಗಬಡಿ ಗ್ರಾಮದವರಾಗಿದ್ದು, ಸೀತಾರಾಮ ಆಚಾರ್ಯ ಮತ್ತು ಇಂದಿರಾ ಅವರ ಪುತ್ರ. ತೀರ್ಥಹಳ್ಳಿಯ ತುಂಗಭದ್ರಾ ಮಹಾವಿದ್ಯಾಲಯಲ್ಲಿ ಪದವಿ ಶಿಕ್ಷಣದ ನಂತರ ರಾಜ್ಯಶಾಸ್ತ್ರ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಹಾಗೂ ಮಂಗಳೂರು ವಿಶ್ವವಿದ್ಯಾಲಯದಿಂದ ಪಡೆದು ಪಿಎಚ್ಡಿ ಪದವಿಯನ್ನು ಪಡೆದಿದ್ದಾರೆ. ಕಾಲೇಜಿನ ಪ್ರಾಂಶುಪಾಲರಾದ ಡಾ. ಎನ್.ಪಿ. ನಾರಾಯಣ ಶೆಟ್ಟಿ ಅವರು 31 ಜುಲೈ 2023ರಂದು ನಿವೃತ್ತಿ ಹೊಂದಲಿದ್ದು,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಮೀನುಗಾರಿಕೆಗೆ ತೆರಳಿ ಹಿಂದಿರುಗುತ್ತಿದ್ದ ಸಂದರ್ಭ ನಡೆದ ದೋಣಿ ದುರಂತದಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದು, ಇನ್ನೋರ್ವ ನಾಪತ್ತೆಯಾದ ಘಟನೆ ಉಪ್ಪುಂದ ಕರ್ಕಿಕಳಿ ಎಂಬಲ್ಲಿ ಸೋಮವಾರ ಸಂಜೆ ನಡೆದಿದೆ. ಪಟ್ಟೆಬಲೆ ದೋಣಿಯ ಮೂಲಕ ಮೀನುಗಾರಿಕೆಗೆ ತೆರಳಿ ಸಂಜೆ ಹಿಂದಿರುಗುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಸಮುದ್ರದಲೆಗಳ ಹೊಡೆತಕ್ಕೆ ದೋಣಿ ಮಗುಚಿ ಬಿದ್ದು ದುರಂತ ನಡೆದಿದ್ದು, ದೋಣಿಯಡಿಗೆ ಸಿಲುಕಿದ್ದ ನಾಗೇಶ್ ಬಾಬು ಖಾರ್ವಿ [30] ಎಂಬುವವರು ಮೃತಪಟ್ಟಿದ್ದಾರೆ. ಸತೀಶ್ ಖಾರ್ವಿ [34] ಎಂಬುವವರು ನಾಪತ್ತೆಯಾಗಿದ್ದು ಹುಡುಕಾಟ ನಡೆಸಲಾಗುತ್ತಿದೆ. ಸಚಿನ್ ಖಾರ್ವಿ ಎಂಬುವವರಿಗೆ ಸೇರಿದ ಮಾಸ್ತಿ ಮರ್ಲಿಚಿಕ್ಕು ಪ್ರಸಾದ ಹೆಸರಿನ ದೋಣಿಯಲ್ಲಿ 8 ಮಂದಿ ಮೀನುಗಾರಿಕೆಗೆ ತೆರಳಿದ್ದು, ದಡಕ್ಕೆ ಸಮೀಪವಿರುವಾಗ ದುರಂತ ನಡೆದಿದೆ. 6 ಮಂದಿ ಈಜಿ ದಡ ಸೇರಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಸ್ಪಸ್ಥರಾಗಿದ್ದ ದೋಣಿ ಮಾಲಿಕ ಸಚಿನ್ ಖಾರ್ವಿ ಅವರಿಗೆ ಚಿಕಿತ್ಸೆ ನೀಡಲಾಗಿದ್ದು, ಚೇತರಿಸಿಕೊಂಡಿದ್ದಾರೆ. ಮೀನುಗಾರರು ದುರಂತಕ್ಕೀಡದ ದೋಣಿ, ಬಲೆಯನ್ನು ದಡಕ್ಕೆ ಎಳೆದು ತರಲಾಗಿದೆ. ಬೈಂದೂರು ಠಾಣೆ ಪೊಲೀಸರು, ಗಂಗೊಳ್ಳಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಸಾರ್ವಜನಿಕ ಶಿಕ್ಷಣ ಇಲಾಖೆ ಕುಂದಾಪುರ ಹಾಗೂ ಸರಕಾರಿ ಪ್ರೌಢಶಾಲೆ ಕೋಣಿ ಇವರ ಜಂಟಿ ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ ಕರಾಟೆ ಪಂದ್ಯಾಟದಲ್ಲಿ ಶಂಕರನಾರಾಯಣದ ಮದರ್ ತೆರೆಸಾ ಮೆಮೋರಿಯಲ್ ಸ್ಕೂಲಿನ ಇಬ್ಬರು ವಿದ್ಯಾರ್ಥಿಗಳು ಬಹುಮಾನ ಗೆದ್ದುಕೊಂಡಿದ್ದಾರೆ. ಶಾಲೆಯ 7ನೇ ತರಗತಿ ವಿದ್ಯಾರ್ಥಿನಿ ರೀದಾ ಫರ್ವಿನ್ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದರೇ, 6ನೇ ತರಗತಿ ವಿದ್ಯಾರ್ಥಿ ಕಿಶನ್ ಶೆಟ್ಟಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ವಿಜೇತ ವಿದ್ಯಾರ್ಥಿಗಳಿಗೆ ಸಂಸ್ಥೆಯ ಆಡಳಿತ ಮಂಡಳಿಯವರು, ಮುಖ್ಯೋಪಾಧ್ಯಯರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯವರು ಅಭಿನಂದಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಿವಮೊಗ್ಗ,ಜು.30: ಕೊಲ್ಲೂರು ಸಮೀಪದ ಅರಶಿನಗುಂಡಿ ಜಲಪಾತದ ಬಳಿ ನೀರಿಗೆ ಬಿದ್ದು ಮೃತಪಟ್ಟ ಶರತ್ ಮನೆಗೆ ಸಂಸದ ಬಿ.ವೈ. ರಾಘವೇಂದ್ರ ಭೇಟಿ ನೀಡಿ ಪೋಷಕರಿಗೆ ಸಾಂತ್ವಾನ ಹೇಳಿದರು. ಜು.23ರಂದು ಘಟನೆ ನಡೆದಿದ್ದು, 8 ದಿನಗಳ ಬಳಿಕ ಯುವಕ ಶರತ್ ವೃತದೇಹ ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಭದ್ರಾವತಿ ತಾಲೂಕಿನ ಸುಣ್ಣದಹಳ್ಳಿ ಶರತ್ ಮನೆಗೆ ಭೇಟಿನೀಡಿ, ಪೋಷಕರಿಗೆ ಸಾಂತ್ವನ ಹೇಳಿದ್ದಾರೆ. ಈ ವೇಳೆ ಅಧಿಕಾರಿಗಳೊಂದಿಗೆ ಮಾತನಾಡಿ ತಕ್ಷಣ ಪರಣೋತ್ತರ ಪರೀಕ್ಷೆ ನಡೆಸಿ, ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸುವಂತೆ ತಿಳಿಸಿದರು. ಇಂದು ಮೃತದೇಹ ಪತ್ತೆ, ಮರಣೋತ್ತರ ಪರೀಕ್ಷೆಗೆ ರವಾನೆಭದ್ರಾವತಿಯಲ್ಲಿ ಸ್ವಂತ ಉದ್ಯಮ ಮಾಡಿಕೊಂಡಿದ್ದ ಶರತ್, ತನ್ನ ಸ್ನೇಹಿತನೊಂದಿಗೆ ಅರಶಿನಗುಂಡಿ ಜಲಪಾತಕ್ಕೆ ತೆರಳಿದ ಸಂದರ್ಭ ಈ ಘಟನೆ ನಡೆದಿದೆ. ನಿರಂತರ ಒಂದು ವಾರದ ಹುಡುಕಾಟ ನಡೆದಿತ್ತಾದರೂ, ಬಿಡದೇ ಸುರಿದ ಮಳೆ ಕಾರ್ಯಾಚರಣೆಗೆ ಅಡ್ಡಿಯುಂಟುಮಾಡಿತ್ತು. ಮೃತದೇಹವನ್ನು ಭಾನುವಾರ ಬೆಳಿಗ್ಗೆ ಇಲಾಖೆಯೊಂದಿಗೆ ಸ್ಥಳೀಯರು ಹುಡುಕಾಟ ನಡೆಸುವಾಗಿ ಪತ್ತೆಹಚ್ಚಿದ್ದು, ನೀರಿಗೆ ತಾಕಿಕೊಂಡಿದ್ದ ಮರದ ದಿಮ್ಮಿಗಳ ನಡುವೆ ಸಿಲುಕಿಕೊಂಡಿತ್ತು. ಮಧ್ಯಾಹ್ನದ ವೇಳೆಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಕಾಳಾವರದ ರಸ್ತೆಯಲ್ಲಿ ಸಾಗುತ್ತಿದ್ದ ಬೊಲೆನೋ ಕಾರಿಗೆ ದ್ವಿಚಕ್ರ ವಾಹನ ಡಿಕ್ಕಿಯಾಗಿ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಭಾನುವಾರ ಸಂಜೆ ನಡೆದಿದೆ. ದ್ವಿಚಕ್ರ ವಾಹನ ಸವಾರ, ಕಾಳವಾರದ ನಿವಾಸಿ ನರಸಿಂಹ ಶೆಟ್ಟಿ (75) ಮೃತ ದುರ್ದೈವಿ. ಭಾನುವಾರ ಸಂಜೆ ವೇಳೆಗೆ ಕೋಟೇಶ್ವರ ಕಡೆಯಿಂದ ಹಾಲಾಡಿ ಮಾರ್ಗವಾಗಿ ತೆರಳುತ್ತಿದ್ದ ಬೊಲೆನೋ ಕಾರಿಗೆ ಶಾಲೆ ಸಮೀಪದ ಅಡ್ಡ ರಸ್ತೆಯಿಂದ ಬಂದ ದ್ವಿಚಕ್ರ ವಾಹನ ಡಿಕ್ಕಿಯಾಗಿದೆ. ಘಟನೆಯಲ್ಲಿ ಕಾರು ಚಾಲಕ ಹಠಾತ್ತನೇ ಬ್ರೇಕ್ ಹಾಕಿದ್ದರಿಂದ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಲ್ಲು ಕಂಬವನ್ನು ತುಂಡರಿಸಿ ಮುಂದೆ ಸಾಗಿ ದೇವಸ್ಥಾನದ ಕಂಬವೊಂದಕ್ಕೆ ಡಿಕ್ಕಿ ಹೊಡೆದು ನಿಂತಿದೆ. ಗಂಭೀರ ಗಾಯಗೊಂಡಿದ್ದ ದ್ವಿಚಕ್ರ ವಾಹನ ಸವಾರ ನರಸಿಂಹ ಶೆಟ್ಟಿ ಅವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಿದರಾದರೂ, ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಕಾರು ಸಂಪೂರ್ಣ ಜಖಂಗೊಂಡಿದ್ದು, ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕುಂದಾಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಜಡ್ಕಲ್ ಗ್ರಾಮದ ಮೆಕ್ಕೆ ಕೊಳಕೆಹೊಳೆ ಎಂಬಲ್ಲಿ ಜು.23ರಂದು ಮನೆಯಿಂದ ನಾಪತ್ತೆಯಾಗಿದ್ದ ಸುರೇಶ (28) ಎಂಬುವವರ ಮೃತದೇಹ ಶನಿವಾರ ಸಂಜೆ ಹೊಳೆಯಲ್ಲಿ ಪತ್ತೆಯಾಗಿದೆ. ಸುರೇಶ್ ಅವರು ಮನೆಯಿಂದ ಬಹಿರ್ದಸೆಗೆ ಹೋದ ಸಂದರ್ಭ ಕಳೆದ ವಾರ ವಿಪರೀತ ಮಳೆಯಿದ್ದರಿಂದ ತುಂಬಿ ಹರಿಯುವ ಹೊಳೆಗೆ ಬಿದ್ದು ಕೊಚ್ಚಿಹೋಗಿ ಮೃತಪಟ್ಟಿರಬಹುದೆಂದು ಅಂದಾಜಿಸಲಾಗಿದೆ. ಕಾನ್ಕಿ ಹಾಸ್ಕಲ್ ಪಾರೆಯ ಮೆಕ್ಕೆ ಹೊಳೆಯಲ್ಲಿ ಮೃತದೇಹ ಪತ್ತೆಯಾಗಿದೆ. ಕೊಲ್ಲೂರು ಠಾಣೆ ಪಿಎಸ್ಐಗಳಾದ ಜಯಶ್ರೀ, ಸುಧಾರಾಣಿ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ► ಜಲಪಾತಕ್ಕೆ ಬಿದ್ದು ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆ – https://kundapraa.com/?p=68085 .
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು,ಜು.30: ಸ್ನೇಹಿತರೊಂದಿಗೆ ಕಳೆದ ಭಾನುವಾರ ಅರಶಿನಗುಂಡಿ ಜಲಪಾತಕ್ಕೆ ತೆರಳಿದ್ದ ಸಂದರ್ಭ ಕಾಲುಜಾರಿ ನೀರಿನಲ್ಲಿ ಬಿದ್ದು ಕಾಣೆಯಾಗಿದ್ದ ಭದ್ರಾವತಿಯ ಯುವಕ ಶರತ್ ಕುಮಾರನ [23] ಮೃತದೇಹ ಜಲಪಾತದ ಸುಮಾರು 100 ರಿಂದ 70ಮೀ ದೂರದಲ್ಲಿ ಪತ್ತೆಯಾಗಿದೆ. ಶರತ್ ಹಾಗೂ ಸ್ನೇಹಿತ ಗುರುರಾಜ ಜೊತೆಗೂಡಿ ಜು.23ರ ಭಾನುವಾರದಂದು ಭದ್ರಾವತಿಯಿಂದ ಕೊಲ್ಲೂರು ಗ್ರಾಮದ ಅರಶಿನಗುಂಡಿ ಜಲಪಾತ ನೋಡಲು ತೆರಳಿದ್ದರು. ಮಧ್ಯಾಹ್ನ 3-30ರ ಹೊತ್ತಿಗೆ ಜಲಪಾತ ಬಳಿ ವೀಡೀಯೋ ಮಾಡಲು ಹೇಳಿ ಬಂಡೆಯ ಮೇಲೆ ನಿಂತಿದ್ದ ಶರತ್, ಕಾಲು ಜಾರಿ ಸೌಪರ್ಣಿಕ ನದಿಗೆ ಬಿದ್ದಿದ್ದು ನೀರಿನ ಸೆಳೆತಕ್ಕೆ ಸಿಲುಕಿ ನಾಪತ್ತೆಯಾಗಿದ್ದನು. ಈ ಘಟನೆ ಸ್ನೇಹಿತನ ಮೊಬೈಲಿನಲ್ಲಿಯೂ ಸೆರೆಯಾಗಿತ್ತು. ಘಟನೆಯ ಮಾಹಿತಿ ದೊರೆತ ಬಳಿಕ, ಪ್ರಕರಣ ದಾಖಲಿಸಿಕೊಂಡು ಕಳೆದೊಂದು ವಾರದಿಂದ ಕೊಲ್ಲೂರು ಠಾಣೆಯ ಪೊಲೀಸ್ ತಂಡ, ಅರಣ್ಯ ಇಲಾಖೆ ಸಿಬ್ಬಂದಿಗಳು, ಉಡುಪಿಯ ಎಸ್ಡಿಆರ್ಎಫ್ ತಂಡ, ಕುಂದಾಪುರ ಹಾಗೂ ಬೈಂದೂರು ಅಗ್ನಿಶಾಮಕ ದಳದ ಸಿಬ್ಬಂದಿಗಳು ಹುಡುಕಾಟ ನಡೆಸಿದ್ದರು. ಇವರಿಗೆ ಮೂಕಾಂಬಿಕಾ ಪರಿಸರ ಅಭಿವೃದ್ಧಿ ಸಮಿತಿ ಸದಸ್ಯರು,…
