Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಬ್ರಹ್ಮಾವರ ಸಕ್ಕರೆ ಕಾರ್ಖಾನೆಯ ಗುಜರಿ ಮಾರಾಟದಲ್ಲಿ 14 ಕೋಟಿ ರೂ. ಹೆಚ್ಚು ಅಕ್ರಮ ನಡೆದಿದೆ ಎಂದು ಉಡುಪಿ ಜಿಲ್ಲಾ ರೈತ ಸಂಘ ಸಲ್ಲಿಸಿದ್ದ ದೂರನ್ನು ದಾಖಲಿಸಿಕೊಂಡಿದ್ದ ಹೆಚ್ಚುವರಿ ಸಿವಿಲ್ ನ್ಯಾಯಾಲಯವು ಪೊಲೀಸರಿಗೆ ಡಿಸೆಂಬರ್ 12ರೊಗಳಗೆ ವರದಿ ಸಲ್ಲಿಸಲು ನಿರ್ದೇಶನ ನೀಡಿತ್ತು. ಇದರ ಬೆನ್ನಲ್ಲೇ ದ.ಕ ಸಹಕಾರಿ ಸಕ್ಕರೆ ಕಾರ್ಖಾನೆಯ ಎಂಡಿ, ಅಧ್ಯಕ್ಷರು, ಆಡಳಿತ ಮಂಡಳಿ, ಬಿಡ್ಡರ್ ಹಾಗೂ ಸಿಬ್ಬಂದಿಗಳ ವಿರುದ್ಧ ಬ್ರಹ್ಮಾವರ ಪೊಲೀಸರು ಎಂಐಆರ್ ದಾಖಲಿಸಿಕೊಂಡಿದ್ದಾರೆ. 18-08-2021ರಿಂದ 05-12-2022ರ ಮಧ್ಯಾವದಿಯಲ್ಲಿ ಸಕ್ಕರೆ ಕಾರ್ಖಾನೆಯ ಸಕ್ಕರೆ ಸ್ಥಾವರ ಮತ್ತು ಯಂತ್ರೋಪಕರಣಗಳ ಮಾರಾಟಕ್ಕೆ ಸಂಬಂಧಿಸಿದಂತೆ ಟೆಂಡರ್ ಕಮ್ ಹರಾಜು ಪ್ರಕ್ರಿಯೆಯಲ್ಲಿ ವಂಚನೆ, ದಾಖಲೆಗಳನ್ನು ರಚಿಸುವಲ್ಲಿ ಹುದ್ದೆಯ ದುರುಪಯೋಗ ಮತ್ತು ವೈಯಕ್ತಿಕ ಲಾಭ ಪಡೆಯುವ ಉದ್ದೇಶದಿಂದ ಪರಸ್ಪರ ಪಿತೂರು ನಡೆಸಿ ಕಾನೂನುಬಾಹಿರ ಟೆಂಡರ್ ಪ್ರಕ್ರಿಯ ಮಾಡುವ ಮೂಲಕ ನಂಬಿಕೆ ದ್ರೋಹ, ದುರುಪಯೋಗ, ವಂಚನೆಯ ಮೂಲಕ ಸುಳ್ಳುದಾಖಲೆಗಳನ್ನು ಸೃಷ್ಟಿಸಿ ಗುಜರಿಯನ್ನು ಮಾರಾಟ ಮಾಡಲಾಗಿದೆ. ಇದು ರೈತರಿಗೆ ಮತ್ತು ಸರಕಾರಕ್ಕೆ 14 ಕೋಟಿಯಷ್ಟು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ ಅ.26: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಗುಲ್ವಾಡಿ, ಕಾವ್ರಾಡಿ, ಬಳ್ಕೂರು ಗ್ರಾಮದ ಸ.ನಂ. 180, 157, 189 ಲ್ಲಿನ 11.90 ಎಕ್ರೆ ವಿಸ್ತೀರ್ಣ ಪ್ರದೇಶದ ಮರಳು ಬ್ಲಾಕ್ ಸಂಖ್ಯೆ 4 ರಲ್ಲಿ ಹಾಗೂ ಜಪ್ತಿ, ಹಳ್ನಾಡು ಗ್ರಾಮದ ಸ.ನಂ. 174, 56 ರಲ್ಲಿನ 5.70 ಎಕ್ರೆ ವಿಸ್ತೀರ್ಣ ಪ್ರದೇಶದ ಮರಳು ಬ್ಲಾಕ್ ಸಂಖ್ಯೆ 6 ರಲ್ಲಿ ಮರಳನ್ನು ಸಾರ್ವಜನಿಕರಿಗೆ ಹಾಗೂ ಸರ್ಕಾರಿ ಕಾಮಗಾರಿಗಳಿಗೆ ಸ್ಯಾಂಡ್ ಆಪ್ ಮೂಲಕ ಪೂರೈಸಲು ಜಿಲ್ಲಾ ಮರಳು ಉಸ್ತುವಾರಿ ಸಮಿತಿಯಲ್ಲಿ ತೀರ್ಮಾನಿಸಲಾಗಿದ್ದು, ಸಾರ್ವಜನಿಕರು ಸದರಿ ಮರಳನ್ನು UಆUPI E-sand APP ಮೂಲಕ ಬುಕ್ಕೀಂಗ್ ಮಾಡಿಕೊಂಡು ಪಡೆದುಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಹಿರಿಯ ಭೂ ವಿಜ್ಞಾನಿಯವರ ಕಚೇರಿ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ರಜತಾದ್ರಿ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2572333, 2950088 ಹಾಗೂ Udupi E-Sand App ದೂ.ಸಂಖ್ಯೆ: 6364024555, 6366745888 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಡುಪಿ ಜಿಲ್ಲೆಯಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರು ಹಲವರಿದ್ದು, ವಿವಿಧ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದ್ದರೂ ಕ್ರೀಡಾ ಕ್ಷೇತ್ರದ ಸಾಧನೆಯಲ್ಲಿ ಸ್ವಲ್ಪಮಟ್ಟಿಗಿನ ಹಿನ್ನೆಡೆ ಕಂಡುಬರುತ್ತದೆ. ವಿದ್ಯಾರ್ಥಿಗಳು ಸಕ್ರಿಯವಾಗಿ ಕ್ರೀಡೆಯಲ್ಲಿ ಪಾಲ್ಗೊಳ್ಳುವ ಮೂಲಕ ಕ್ರೀಡಾ ಕ್ಷೇತ್ರದಲ್ಲಿ ಬದಲಾವಣೆಗೆ ಕಾಲ ಪಕ್ವವಾಗಿದ್ದು, ಪ್ರಸಕ್ತ ಬದಲಾವಣೆ ಸಮಯ ಆಗಲಿ ಎಂದು ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು. ಜಿಲ್ಲಾ ಪಂಚಾಯಿತಿ ಉಪನಿರ್ದೇಶಕರ ಕಚೇರಿ, ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಕುಂದಾಪುರ ವಲಯ, ಕುಂದಾಪುರ ಸರ್ಕಾರಿ ಪದವಿಪೂರ್ವ ಕಾಲೇಜ್ ಪ್ರೌಢಶಾಲಾ ವಿಭಾಗ ಆಶ್ರಯದಲ್ಲಿ ಇಲ್ಲಿನ ಗಾಂಧಿ ಮೈದಾನದಲ್ಲಿ ಗುರುವಾರ ನಡೆದ ಜಿಲ್ಲಾ ಮಟ್ಟದ ಪ್ರಾಥಮಿಕ, ಪ್ರೌಢಶಾಲಾ ಹಾಗೂ ವಿಕಲಚೇತನ ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ಗೌರವ ವಂದನೆ ಸ್ವೀಕರಿಸಿ ಮಾತನಾಡಿದರು. ಕುಂದಾಪುರ ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಅಧ್ಯಕ್ಷತೆ ವಹಿಸಿ, ಕ್ರೀಡಾ ಪಟುಗಳಿಗೆ ಗೆಲುವಿನ ಬಹುಮಾನದ ಗುರುಯಿರಬೇಕು. ಸೋಲು ನಿರಾಸೆಗೆ ದಾರಿಯಾಗಬಾರದು. ಕ್ರೀಡೆಯಲ್ಲಿ ಉತ್ತಮ ಅವಕಾಶಗಳಿದ್ದು, ಬದಲಾವಣೆ ತರುವ ಮೂಲಕ ಸಾಧನೆಯ ಶಿಖರವೇರಬೇಕು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜಡ್ಕಲ್ ವ್ಯವಸಾಯ ಸೇವಾ ಸಹಕಾರಿ ಸಂಘ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಪ್ರಭಾಕರ್ ಶೆಟ್ಟಿ ಅವರು ಪುನರಾಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ದೇವದಾಸ್ ಅವರು ಆಯ್ಕೆಯಾಗಿದ್ದಾರೆ ಈ ವೇಳೆ ನಿರ್ದೇಶಕರುಗಳಾದ ಗುರುರಾಜ್ ಪೂಜಾರಿ, ಮಹಾಬಲ ಪೂಜಾರಿ, ಪುನೀತ್ ಶೆಟ್ಟಿ, ರವೀಂದ್ರಶೆಟ್ಟಿ, ಜೋಸೆಫ್, ವಿನೋದ್ ಜೋರ್ಜ್, ರೋಸಮ್ಮ, ನಾಗರತ್ನ ಶೆಟ್ಟಿ, ಮುತ್ತ, ಸುರೇಂದ್ರ ನಾಯ್ಕ್, ಮನೋಜ್ ಪಿ.ಕೆ, ಸಿಇಓ ವೆಂಕಟರಮಣ ಶರ್ಮ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು: ಸ್ಯಾಂಡಲ್ವುಡ್ ಖ್ಯಾತ ನಟಿ ಮಾನ್ವಿತಾ ಕಾಮತ್ ಮತ್ತೆ ಅಭಿಮಾನಿಗಳ ಮುಂದೆ ಬರಲು ಸಜ್ಜಾಗಿದ್ದಾರೆ. ಗ್ಯಾಪ್ನ ಬಳಿಕ ಮಾನ್ವಿತಾ ಮತ್ತೆ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯ ಕೆಂಡಸಂಪಿಗೆ ಬ್ಯೂಟಿ ಲೋಹಿತ್ ನಿರ್ದೇಶನದ ‘ಕ್ಯಾಪ್ಚರ್’ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬರುತ್ತಿದ್ದಾರೆ. ಕ್ಯಾಪ್ಟರ್ ಸಿನಿಮಾದಲ್ಲಿ ಪ್ರಿಯಾಂಕಾ ಉಪೇಂದ್ರ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ವಿಶೇಷ ಎಂದರೆ ಪ್ರಿಯಾಂಕಾ ಮಗಳ ಪಾತ್ರದಲ್ಲಿ ಮಾನ್ವಿತಾ ನಟಿಸಿದ್ದಾರೆ. ಕ್ಯಾಪ್ಚರ್ ಈಗಾಗಲೇ ಗೊತ್ತಿರುವ ಹಾಗೆ ಇದೊಂದು ಹಾರರ್ ಸಿನಿಮಾ. ಸಂಪೂರ್ಣ ಸಿನಿಮಾ ಸಿಸಿ ಟಿವಿ ಕಾನ್ಸೆಪ್ಟ್ನಲ್ಲಿ ಚಿತ್ರೀಕರಣ ಮಾಡಲಾಗಿದೆ. ವಿಶ್ವದಲ್ಲಿಯೇ ಮೊದಲ ಬಾರಿಗೆ ಈ ರೀತಿಯ ಪ್ರಯತ್ನ ಮಾಡುತ್ತಿರುವುದು ವಿಶೇಷ. ಈಗಾಗಲೇ ಪ್ರಿಯಾಂಕಾ ಉಪೇಂದ್ರ ಅವರ ಫಸ್ಟ್ ಲುಕ್ ರಿಲೀಸ್ ಮಾಡಲಾಗಿದೆ. ಇದೀಗ ಮಾನ್ವಿತಾ ಕೂಡ ನಟಿಸುತ್ತಿದ್ದಾರೆ ಎನ್ನುವ ವಿಚಾರ ಕ್ಯಾಪ್ಚರ್ ಮೇಲಿನ ಕುತೂಹಲ ಹೆಚ್ಚಿಸಿದೆ. ಮಾನ್ವಿತಾ ಈ ಸಿನಿಮಾದಲ್ಲಿ ಸ್ನೇಹಾ ಎನ್ನುವ ಪಾತ್ರದಲ್ಲಿ ನಟಿಸಿದ್ದಾರೆ. ಮೊದಲ ಬಾರಿಗೆ ಹಾರರ್ ಸಿನಿಮಾಗೆ ಬಣ್ಣ ಹಚ್ಚಿದ್ದಾರೆ. ಮಾನ್ವಿತಾ ಕೊನೆಯದಾಗಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ತಾಲೂಕು ಯುವ ಬಂಟರ ಸಂಘ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ರಕ್ತ ನಿಧಿ ಕೇಂದ್ರ ಕುಂದಾಪುರ, ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್, ಡಾ. ಬಿ ಬಿ ಹೆಗ್ಡೆ ಕಾಲೇಜು, ಭಂಡಾಕರ್ಸ್ ಕಾಲೇಜು ಹಾಗೂ ಕಾಳವರ ವರದರಾಜ ಎಂ ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್ ಎಸ್ ಎಸ್ ಘಟಕಗಳ ಸಂಯುಕ್ತ ಆಶ್ರಯದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಇಲ್ಲಿನ ಆರ್ ಎನ್ ಶೆಟ್ಟಿ ಸಭಾಭವನದಲ್ಲಿ ಶನಿವಾರ ನಡೆಯಿತು. ಉದ್ಯಮಿ ಕೇದೂರು ಜಯರಾಮ ಜಿ ಶೆಟ್ಟಿ ಉದ್ಘಾಟಿಸಿ ಶುಭ ಹಾರೈಸಿದರು. ಡಾ. ಮಂದಾರ ಶೆಟ್ಟಿ ಮಾತನಾಡಿ ರಕ್ತದಾನ ಎಲ್ಲಾ ದಾನಗಳಲ್ಲಿ ಅತ್ಯಂತ ಶ್ರೇಷ್ಠ ಹಾಗೂ ಮಹಾದಾನ. ವಾರ್ಷಿಕವಾಗಿ ಸರಾಸರಿ 60,000 ಅಪಘಾತಗಳು ಆಗುತ್ತಿದ್ದು ಈ ಪೈಕಿ 25 ರಿಂದ 30 ಮಿಲಿಯನ್ ಜನರು ಗಾಯಾಳುಗಳಾಗುತ್ತಿದ್ದಾರೆ. ಅವರಿಗೆಲ್ಲ ತುರ್ತಾಗಿ ರಕ್ತದ ಅವಶ್ಯಕತೆ ಬಹಳಷ್ಟು ಇರುತ್ತದೆ. ಆ ನಿಟ್ಟಿನಲ್ಲಿ ಸಂಘ ಸಂಸ್ಥೆಗಳ ನೇತೃತ್ವದಲ್ಲಿ ನಡೆಯುವ ಇಂತಹ ಸ್ವಯಂ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ನಾರಾಯಣ ಗುರು ಯುವಕ ಮಂಡಲ ವತಿಯಿಂದ ನವರಾತ್ರಿ ಪ್ರಯುಕ್ತ ಕುಂದಾಪುರ ದಸರಾ ನಡೆಯುತ್ತಿದ್ದು ಇಲ್ಲಿನ ನಾರಾಯಣ ಗುರು ಕಲ್ಯಾಣ ಮಂದಿರದಲ್ಲಿ ಶ್ರೀ ದೇವಿ ಪೂಜಾಕೈಂಕರ್ಯಗಳು ಜರುಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಅಶೋಕ್ ಪೂಜಾರಿ ಬೀಜಾಡಿ, ಕುಟುಂಬಿಕರು ನಡೆಸಿದ ಚಂಡಿಕಾ ಯಾಗ ಸಂಪನ್ನಗೊಂಡಿದ್ದು ಯಾಗದ ಪೂರ್ಣಾಹುತಿ ವೇಳೆ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ಭೇಟಿ ನೀಡಿದರು. ಕಾಂಗ್ರೆಸ್ ಹಿರಿಯ ಮುಖಂಡ ಮಲ್ಯಾಡಿ ಶಿವರಾಮ ಶೆಟ್ಟಿ, ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಅಶೋಕ್ ಪೂಜಾರಿ ಬೀಜಾಡಿ, ಶ್ರೀ ನಾರಾಯಣ ಗುರು ಯುವಕ ಮಂಡಲದ ಅಧ್ಯಕ್ಷ ಯೋಗೇಶ್ ಪೂಜಾರಿ ಕೋಡಿ ಇದ್ದರು. ಯೋಗೇಶ್ ಪೂಜಾರಿ, ಕುಟುಂಬಿಕರಿಂದ ಭಾನುವಾರ ಅನ್ನಸಂತರ್ಪಣೆ ನಡೆಯಿತು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಾಜಸ್ತಾನ ಹಾಗೂ ಗುಜರಾತ್ ಮೂಲದವರ ಹಲವಾರು ವ?ಗಳಿಂದ ಕುಂದಾಪುರದಲ್ಲಿ ನೆಲೆಸಿ, ವ್ಯಾಪಾರ ಮಾಡುತ್ತಿದ್ದು, ನವರಾತ್ರಿಯ ಸಂದರ್ಭ ದುರ್ಗಾ ಪೂಜಾ ಕಾರ್ಯಕ್ರಮಕ್ಕೆ ನಡೆಸುತ್ತಾ ಬಂದಿದ್ದು, ಮಂಗಳವಾರ ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ ಭೇಟಿ ನೀಡಿದ್ದು, ರಾಜಸ್ಥಾನಿ ಪ್ರಮುಖ ಉದ್ಯಮಿ ಹರೀಶ್ ಸನ್ಮಾನಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಅ23: ಜಿಲ್ಲೆಗೆ ಉದ್ಯೋಗ ಅರಸಿ ಹೊರ ಜಿಲ್ಲೆಗಳಿಂದ ಬಂದಿರುವ ವಲಸೆ ಕಾರ್ಮಿಕರುಗಳ ಮೇಲೆ ದೌರ್ಜನ್ಯಗಳಾಗದಂತೆ ಎಚ್ಚರವಹಿಸಲು ಕ್ರಮ ಕೈಗೊಳ್ಳಬೇಕೆಂದು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ನಗರದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಸಫಾಯಿ ಕರ್ಮಚಾರಿಗಳ ಜಿಲ್ಲಾ ಜಾಗೃತ ಸಮಿತಿ ಸಭೆ ಹಾಗೂ ದೌರ್ಜನ್ಯ ಪ್ರಕರಣಗಳ ಜಿಲ್ಲಾ ಜಾಗೃತಿ ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಾಮಾನ್ಯವಾಗಿ ಹೊರ ಜಿಲ್ಲೆಗಳಿಂದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಕಾರ್ಮಿಕರುಗಳೆ ಉದ್ಯೋಗ ಅರಸಿ ಜಿಲ್ಲೆಗೆ ಬರುತ್ತಿದ್ದಾರೆ. ಅವರುಗಳಿಗೆ ಉದ್ಯೋಗ ನೀಡುವ ಗುತ್ತಿಗೆದಾರರು, ಮಾಲೀಕರು, ಕಾರ್ಮಿಕ ಕಾಯ್ದೆಯಡಿ ಘೋಷಿಸಿರುವ ಕನಿಷ್ಠ ವೇತನ, ಭವಿಷ್ಯ ನಿಧಿ, ಇ.ಎಸ್.ಐ ಸೇರಿದಂತೆ ಮತ್ತಿತರ ಸೌಲಭ್ಯಗಳನ್ನು ಒದಗಿಸಬೇಕು. ಅವರುಗಳನ್ನು ಒಂದು ಸ್ಥಳದಿಂದ ಇನ್ನೊಂದು ಸ್ಥಳಗಳಿಗೆ ಕರೆದೊಯ್ಯುವಾಗ ಗೂಡ್ಸ್ ವಾಹನಗಳನ್ನು ಬಳಸಬಾರದು. ಕಾರ್ಮಿಕರಿಗೆ ತಂಗಲು ಅವಕಾಶ ನೀಡಿದ ಸ್ಥಳದಲ್ಲಿ ಅವರಿಗೆ ಅಗತ್ಯ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ಶೌಚಾಲಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಭಾರತ ದೇಶದ ಅಮೂರ್ತ ಪ್ರಾಕೃತಿಕ ಸಾಂಸ್ಕೃತಿಕ ಪರಂಪರೆಯನ್ನು ಸಂರಕ್ಷಿಸುವ ಉದ್ದೇಶದಿಂದ ಸೇವೆ ಸಲ್ಲಿಸುತ್ತಿರುವ, ರಾಜಧಾನಿ ದೆಹಲಿಯಲ್ಲಿ ಮುಖ್ಯ ಕಛೇರಿ ಹೊಂದಿರುವ ಇಂಟ್ಯಾಕ್ (INTACH) ಸಂಸ್ಥೆ, ಕುಂದಾಪುರದ ಪಂಚಗಂಗಾವಳಿಯನ್ನು ಅಧ್ಯಯನಕ್ಕಾಗಿ ಆರಿಸಿಕೊಂಡು ಈಗಾಗಲೇ ತನ್ನ ಕೆಲಸ ಆರಂಭಿಸಿದೆ. ಇಂಟ್ಯಾಕ್‌ನ ನ್ಯಾಚುರಲ್ ಹೆರಿಟೇಜ್ ಡಿವಿಜನ್‌ನ ಮೂವರು ತಜ್ಞರು ಈಗಾಗಲೇ ಜೂನ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಎರಡು ಬಾರಿ ಆಗಮಿಸಿ ಮಾಹಿತಿ ಸಂಗ್ರಹದ ಪೂರ್ವಭಾವಿ ಕೆಲಸ ಆರಂಭಿಸಿದ್ದಾರೆ. ಇದು ಕುಂದಾಪುರಕ್ಕೆ ಹೆಮ್ಮೆಯ ವಿಚಾರವಾಗಿದೆ. ಇಂಟ್ಯಾಕ್, ನಾಲ್ಕು ದಶಕಗಳ ಇತಿಹಾಸ ಹೊಂದಿರುವ ಪ್ರಪಂಚದ ಶ್ರೇಷ್ಠ ಸರಕಾರೇತರ ಸಂಸ್ಥೆಯಾಗಿದೆ. ಆದರೆ ಕೇಂದ್ರ ಸರಕಾರದ ಇಲಾಖೆಗಳು ಸಂಸ್ಥೆಯ ಅಧ್ಯಯನ ಸಂರಕ್ಷಣೆಯ ಕಾರ್ಯಕ್ಕೆ ನೆರವು ನೀಡುತ್ತಿವೆ. ಪರಿಸರ, ಕಲೆ, ಪಾರಂಪರಿಕ, ಸಂಸ್ಕೃತಿ, ಶಿಲ್ಪಕಲೆ ಮುಂತಾದ ಹಲವು ವಿಷಯಗಳಲ್ಲಿ ಸಂಶೋಧನೆ ನಡೆಸುತ್ತಿರುವ ಈ ಸಂಸ್ಥೆಯ ನ್ಯಾಚುರಲ್ ಹೆರಿಟೇಜ್ ಡಿವಿಜನ್‌ನ ಪ್ರಿನ್ಸಿಪಾಲ್ ಡೈರೆಕ್ಟರ್ ಮನು ಭಟ್ನಾಕರ್, ಸಾಯಿಂಟಿಫಿಕ್ ಆಫೀಸರ್ ಡಾ. ಸುಮೇಶ ಎನ್. ಡುದಾನಿ ಮತ್ತು ಎನ್‌ವಿರೊನ್‌ಮೆಂಟಲ್ ಪ್ಲಾನರ್…

Read More