ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಹೆಮ್ಮಾಡಿಯ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜು, ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ಹಾಗೂ ಲಯನ್ಸ್ ಕ್ಲಬ್ ಉಡುಪಿ ಲಕ್ಷ್ಯ ಇವರ ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ಕುರಿತು ಮಾಹಿತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಪ್ರಾಂಶುಪಾಲರಾಗಿರುವ ಶ್ರೀ ಗಣೇಶ ಮೊಗವೀರರವರು ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ಅಧ್ಯಕ್ಷರಾದ ವಸಂತರಾಜ್ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ ವೃತ್ತಿ ಮಾರ್ಗದರ್ಶನದ ಅಗತ್ಯತೆಯ ಕುರಿತು ಮಾತನಾಡಿದರು.ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದ ಲಯನ್ಸ್ ಕ್ಲಬ್ ಉಡುಪಿ ಲಕ್ಯ್ಯ ಇದರ ಅಧ್ಯಕ್ಷರಾದ ಧನುಷ್ ಕೆ ಇವರು ವಿದ್ಯಾರ್ಥಿ ಬದುಕಿಗೆ ಇಂತಹ ನೂರಾರು ಕಾರ್ಯಕ್ರಮಗಳ ಅಗತ್ಯತೆ ಬಹಳಷ್ಟಿದೆ ಎಂದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಲಯನ್ಸ್ ಜಿಲ್ಲಾ ಕ್ಯಾಬಿನೆಟ್ ಕಾರ್ಯದರ್ಶಿ ಜಿಲ್ಲೆ 317 ರವಿರಾಜ್ ನಾಯಕ್ ರವರು ವೃತ್ತಿ ಮಾರ್ಗದರ್ಶನದ ಕುರಿತಾಗಿ ಸವಿಸ್ತಾರವಾಗಿ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಉಡುಪಿ ಲಯನ್ಸ್ ಕ್ಲಬ್ ಲಕ್ಷ್ಯ ಇದರ ಉಪಾಧ್ಯಕ್ಷರಾದ ರಘುನಾಥ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕಾರ್ಕಳ: ಶಿಕ್ಷಕ ಮತ್ತು ಶಿಕ್ಷಕ ವೃತ್ತಿಗಳು ಅತ್ಯಂತ ಶ್ರೇಷ್ಠವಾದದ್ದು ವಿದ್ಯಾರ್ಥಿಗಳಲ್ಲಿ ಸದ್ಭಾವನೆಯನ್ನು ಬೆಳೆಸುತ್ತಾ, ಶಿಕ್ಷಕನೂ ಅಧ್ಯಯನಶೀಲನಾಗಬೇಕು. ನಿರಂತರವಾಗಿ ಗುರುತರವಾದ ಜವಾಬ್ದಾರಿಯಿಂದ ಬೋಧನೆ ಮಾಡುವವರಾಗಬೇಕು ಎಂದು ಪ್ರೊ.ಬಿ.ಪದ್ಮನಾಭ ಗೌಡ ಕರೆನೀಡಿದರು. ಅವರು ಕಾರ್ಕಳದ ಕ್ರಿಯೇಟಿವ್ ಪ. ಪೂ. ಕಾಲೇಜಿನಲ್ಲಿ ಶಿಕ್ಷಕರ ದಿನದ ಪ್ರಯುಕ್ತ ಆಚರಿಸಲಾದ ‘ಗುರುದೇವೋ ಭವ’ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಇನ್ನೋರ್ವ ಅತಿಥಿ ಚೇತನಾ ವಿಶೇಷ ಶಾಲೆಯ ಮುಖ್ಯೋಪಾಧ್ಯಾಯಿನಿ ಹೇಮಲತಾ ಶೆಟ್ಟಿ ಮಾತನಾಡಿ ಗುರುಗಳೆಂದರೆ ಅಪಾರ ಗೌರವದಿಂದ ಕಾಣಬೇಕಾದ ವ್ಯಕ್ತಿ, ಅಂತಹ ವ್ಯಕ್ತಿತ್ವಕ್ಕೆ ಜಗತ್ತಿನಲ್ಲಿ ಅಪೂರ್ವ ಮನ್ನಣೆಯಿದೆ ಎಂದು ನುಡಿದರು. ಈ ಸಂದರ್ಭದಲ್ಲಿ ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯಲ್ಲಿ ಸೇವೆ ಸಲ್ಲಿಸುತ್ತಿರುವ ಹಿಂದಿ ಉಪನ್ಯಾಸಕ ವಿನಾಯಕ ಜೋಗ್ ಹಾಗೂ ಜೀವಶಾಸ್ತ್ರ ಉಪನ್ಯಾಸಕ ಆದಂ ಶೇಕ್ ಅವರನ್ನು ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು. ನಂತರ ಸಂಸ್ಥೆಯ ಉಪನ್ಯಾಸಕರಿಗೆ ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಭಾರತದ ಕೊನೆಯ ಭೂಮಿ ಧನುಷ್ಕೋಡಿಗೆ ಬೈಕ್ ಮೂಲಕ ತೆರಳಿದ ಯುವಕರ ತಂಡವೊಂದು ಅಲ್ಲಿನ ಕೊನೆಯ ರಸ್ತೆಯಲ್ಲಿ ಕುಂದಾಪ್ರದ ನಕ್ಷೆಯನ್ನೊಳಗೊಂಡ ಧ್ವಜ ಹಾರಿಸಿ ತಮ್ಮೂರ ಅಭಿಮಾನ ಮೆರೆದಿದ್ದಾರೆ. ಅಗಸ್ಟ್ 28ರಂದು ಕುಂದಾಪುರದಿಂದ ತೆರಳಿದ್ದ ಬೈಕರ್ಗಳಾದ ಸುದರ್ಶನ್ ಹೆಬ್ಬಾರ್, ಕೆ. ಶ್ರೀಹರ್ಷ ಯಡಿಯಾಳ್ ಹಾಗೂ ಗುರುಪ್ರಸಾದ್ ಮಂಜ ಅವರನ್ನೊಳಗೊಂಡ ನಮ್ಮ ಕೆ2ಡಿ ತಂಡವು, ಅ.30ರಂದು ಭಾರತದ ಕೊನೆಯ ರಸ್ತೆ ಧನುಷ್ಕೋಡಿಗೆ ತಲುಪಿದ್ದರು. ಅಲ್ಲಿ ತಮ್ಮ ಪ್ರಯಾಣದ ನೆನಪು ಹಾಗೂ ತಮ್ಮೂರಿನ ಅಭಿಮಾನಕ್ಕಾಗಿ ಕುಂದಾಪುರದ ನಕ್ಷೆಯನ್ನೊಳಗೊಂಡ ಧ್ವಜವನ್ನು ಹಾರಿಸಿದ್ದಾರೆ. ಆರು ದಿನಗಳ ಒಟ್ಟು ಪ್ರಯಾಣದಲ್ಲಿನ ತಮ್ಮ ಅನುಭವವನ್ನು ಕುಂದಾಪ್ರ ಡಾಟ್ ಕಾಂ ಜೊತೆಗೆ ಹಂಚಿಕೊಂಡ ಅವರು, ಇದು ಕುಂದಾಪುರ ಹಾಗೂ ನಮ್ಮ ತಂಡಕ್ಕೆ ಹೆಮ್ಮೆಯ ಕ್ಷಣವಾಗಿದೆ ಎಂದಿದ್ದಾರೆ. ಧನುಷ್ಕೋಡಿ ರಾಮೇಶ್ವರಂ ದ್ವೀಪದ ಬಳಿಯಿರುವ ದಕ್ಷಿಣದ ತುತ್ತತುದಿಯಲ್ಲಿರುವ ಒಂದು ಗ್ರಾಮವಾಗಿದ್ದು, ರಾಮಸೇತು ನಿರ್ಮಾಣ ಕಾರ್ಯ ಅಲ್ಲಿಂದಲೇ ಆರಂಭವಾಯಿತು ಎಂಬ ಪ್ರತೀತಿ ಇದೆ. ಬಂಗಳಕೊಲ್ಲಿ ಹಾಗೂ ಹಿಂದೂ ಮಹಾ ಸಾಗರ ಸಂಗಮದ ಸ್ಥಳವಾದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಡಾ. ಅರುಣ್ ಕೆ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ನೀಡಿದೆ. ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಅಕ್ಷಯ್ ಹಾಕಿ ಮಚ್ಚಂದ್ರ ಅವರನ್ನು ವರ್ಗಾವಣೆ ಮಾಡಲಾಗಿದೆ. ಡಾ. ಅರುಣ್ ಕೆ ಅವರು ಕಲ್ಬುರ್ಗಿ ಪೊಲೀಸ್ ತರಬೇತಿ ಸಂಸ್ಥೆಯ ಪ್ರಾಂಶುಪಾಲರಾಗಿ ಕರ್ತವ್ಯದಲ್ಲಿದ್ದರು. ಕರಾವಳಿ ಕಾವಲು ಪೊಲೀಸ್ನ ಪೊಲೀಸ್ ವರಿಷ್ಠಾಧಿಕಾರಿ ಅಬ್ದುಲ್ ಅಹದ್ ಅವರನ್ನು ಬೆಂಗಳೂರು ಸಿಟಿ ಸೆಂಟ್ರಲ್ ಡಿವಿಜನ್ ಡಿಸಿಪಿಯಾಗಿ ವರ್ಗಾವಣೆಗೊಳಿಸಿ ಅಂಶು ಕುಮಾರ್ ಅವರನ್ನು ನೇಮಕ ಮಾಡಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ಸಾಗರ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯು ಕಳೆದ ಸಾಲಿನಲ್ಲಿ ರೂ.243 ಕೋಟಿ ವ್ಯವಹಾರ ನಡೆಸಿ ರೂ 44.09 ಲಕ್ಷ ನಿವ್ವಳ ಲಾಭ ಗಳಿಸಿದೆ. ಸದಸ್ಯರಿಗೆ ಶೇ.13 ಡಿವಿಡೆಂಟ್ ಘೋಷಿಸಲಾಗಿದೆ ಎಂದು ಸೊಸೈಟಿಯ ಅಧ್ಯಕ್ಷ ಕೆ. ಗೋಪಾಲ ಪೂಜಾರಿ ಹೇಳಿದರು. ಸೋಮವಾರ ನಡೆದ ಸೊಸೈಟಿಯ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ ಸಂಘವು 21 ವರ್ಷ ಪೂರೈಸಿದೆ. ಏಳು ಶಾಖೆಗಳನ್ನು ಹೊಂದಿದ್ದು, ಬೈಂದೂರಿನ ಪ್ರಧಾನ ಕಚೇರಿ ಕಟ್ಟಡ ನಿರ್ಮಾಣಕ್ಕೆ ನಿವೇಶನ ಖರೀದಿಸಲಾಗಿದ್ದು ಸಂಸ್ಥೆ ಬೆಳ್ಳಿ ಹಬ್ಬ ಆಚರಿಸುವ ವೇಳೆಗೆ ಸಾಗರ ಸೌಧ ಲೋಕಾರ್ಪಣೆಗೊಳ್ಳಲಿದೆ. ಕುಂದಾಪುರ ಶಾಖೆ ಸ್ವಂತ ನಿವೇಶನ ಕಟ್ಟಡ ಹೊಂದಿದ್ದು, ಸಿದ್ಧಾಪುರ ಶಾಖೆಗೂ ಸ್ವಂತ ನಿವೇಶನ ಖರೀದಿಸಲು ನಿರ್ಣಯಿಸಲಾಗಿದೆ. ಆಡಳಿತ ಮಂಡಳಿ, ಸಿಬ್ಬಂದಿ ಸಹಕಾರದಿಂದ ಸೊಸೈಟಿ ಪ್ರಗತಿ ಸಾಧಿಸುತ್ತಿದೆ ಎಂದು ಅವರು ಹೇಳಿದರು. ಉತ್ತಮ ಠೇವಣಿ ಹಾಗೂ ಸಾಲ ವಸೂಲಾತಿ ಮಾಡಿದ ಸಿದ್ಧಾಪುರ ಶಾಖೆಯ ಪ್ರಬಂಧಕಿ ಕವಿತಾ ಪೂಜಾರಿ ಹಾಗೂ ಸಿಬ್ಬಂದಿ ರವೀಂದ್ರ ಪೂಜಾರಿ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ 46ನೇ ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸಭೆಯು ಇಲ್ಲಿನ ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ಸಭಾಭವನದಲ್ಲಿ ಭಾನುವಾರ ಜರುಗಿತು. ಮಹಾಸಭೆಯ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಮಾತನಾಡಿ, ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘವು 46 ವರ್ಷಗಳುದ್ದಕ್ಕೆ ಏರುಗತಿಯ ಪ್ರಗತಿಯನ್ನು ದಾಖಲಿಸುತ್ತ ಬಂದಿದೆ. ವರದಿ ವರ್ಷದಲ್ಲಿ ರೂ.1015 ಕೋಟಿ ವ್ಯವಹಾರ ನಡೆಸಿ, ರೂ 5.07 ಕೋಟಿ ಲಾಭ ಗಳಿಸಿದೆ. ಸದಸ್ಯರಿಗೆ ಶೇ.15 ಡಿವಿಡೆಂಡ್ ನೀಡಲು ನಿರ್ಧರಿಸಲಾಗಿದೆ. ಗ್ರಾಹಕರ ಸಹಕಾರ, ನಿಧಿಗಳ ಸಮರ್ಪಕ ನಿರ್ವಹಣೆ, ಸಮಯೋಜಿತ ಹೂಡಿಕೆಗಳಿಂದಾಗಿ ಸಂಘವು ಉತ್ತಮ ಪ್ರಗತಿ ಸಾಧಿಸಿದೆ ಎಂದು ಹೇಳಿದರು. ಸಂಘವು ವರ್ಷದಲ್ಲಿ ರೂ. 219.17 ಕೋಟಿ ಠೇವಣಿ ಸಂಗ್ರಹಿಸಿ, ರೂ. 177.66 ಕೋಟಿ ಸಾಲ ನೀಡಿದೆ. ವಿವಿಧ ಸಂಸ್ಥೆಗಳಲ್ಲಿ ರೂ. 91.21 ಕೋಟಿ ಹೂಡಿಕೆ ಮಾಡಿದೆ. ರೂ.27.98 ಕೋಟಿ ನಿಧಿಗಳು, ರೂ.2.41 ಕೋಟಿ ಪಾಲು ಬಂಡವಾಳ ಹೊಂದಿದೆ. ರೂ.16.88 ಕೋಟಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: 2023-24ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟಗೊಂಡಿದ್ದು, ರಾಜ್ಯದ 31 ಶಿಕ್ಷಕರ ಪೈಕಿ ಕೋಟ ವಿವೇಕ ಬಾಲಕಿಯರ ಪ್ರೌಢಶಾಲೆಯ ಕಲಾ ಶಿಕ್ಷಕ ನರೇಂದ್ರ ಕುಮಾರ್ ಕೋಟ ಅವರು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕೋಟ ವಿವೇಕ ಬಾಲಕಿಯರ ಫ್ರೌಡಶಾಲೆಯ ಮೂಲಕ ವೃತ್ತಿ ಬದುಕು ಆರಂಭಿಸಿದ ನರೇಂದ್ರ ಕುಮಾರ್ ಕೋಠ ಅವರು ವಿದ್ಯಾರ್ಥಿಗಳ ನೆಚ್ಚಿನ ಶಿಕ್ಷಕರಾಗಿದ್ದಾರೆ. ಪಠ್ಯ ಪಠ್ಯೇತರ ಶಿಕ್ಷಣದೊಂದಿಗೆ ಮಕ್ಕಳ ಭೌದ್ದಿಕ ವಿಕಸನಕ್ಕೆ ಸಹಕಾರಿಯಾಗುವ ಹಲವು ಸೃಜನಶೀಲ ಚಟುವಟಿಕೆಗಳನ್ನು ನಿರಂತರವಾಗಿ ಮಾಡುತ್ತಾ ಬರುತ್ತಿದ್ದಾರೆ. ಪಠ್ಯೇಟರ ಚಟುವಟಿಕೆಗಳಲ್ಲಿ ಬೇಸಿಗೆ ಶಿಬಿರ, ಪರೀಕ್ಷೆ ಭಯ ಹೊಗಲಾಡಿಸಲು ತರಬೇತಿ, ಪುಸ್ತಕ ಪ್ರಕಟಣೆ ಹೀಗೆ ವಿವಿಧ ಕಾರ್ಯಚಟುವಟಿಕೆಗಳನ್ನು ಆಯೋಜಿಸುತ್ತಲೇ ಬರುತ್ತಿದ್ದಾರೆ. ರಾಜ್ಯ ಮಟ್ಟದ ತರಬೇತುದಾರರೂ ಆಗಿರುವ ನರೇಂದ್ರ ಕುಮಾರ್ ಅವರು ಹತ್ತಾರು ವ್ಯಕ್ತಿತ್ವ ವಿಕಸನ ಕಾರ್ಯಕ್ರಮಗಳಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ತೊಡಗಿಸಿಕೊಂಡಿದ್ದಾರೆ. ಉತ್ತಮ ನಿರೂಪಕರಾಗಿ ಹಲವು ಕಾರ್ಯಕ್ರಮಗಳನ್ನು, ಟಿವಿ ಸಂದರ್ಶನಗಳನ್ನು ಯಶಸ್ವಿಯಾಗಿ ನಡೆಸಿದ್ದಾರೆ. ಸಾಹಿತ್ಯ – ಸಾಂಸ್ಕೃತಿಕ ಕಾರ್ಯಕ್ರಮವನ್ನು ಸಂಘಟಿಸಿದ ಕೀರ್ತಿ ಇವರದ್ದು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಾರೊಂದು ಓವರ್ಟೇಕ್ ಮಾಡುವ ಭರದಲ್ಲಿ ನಡೆದ ಸರಣಿ ಅಪಘಾತದಲ್ಲಿ ರಿಕ್ಷಾದಲ್ಲಿ ಸಂಚರಿಸುತ್ತಿದ್ದ ಯುವತಿ ಸಾವನ್ನಪ್ಪಿದ ಘಟನೆ ತಾಲೂಕಿನ ಮೂಡ್ಲಕಟ್ಟೆ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ. ಘಟನೆಯಲ್ಲಿ ಅಂಪಾರು ಗ್ರಾಮದ ಯುವತಿ ಅಂಬಿಕಾ (22) ಮೃತಪಟ್ಟಿದ್ದು, ಆಕೆಯ ಸಹೋದರ ಶಾಂತರಾಮ ಹಾಗೂ ಸಂಬಂಧಿ ನಯನಕುಮಾರ್ ಗಂಭೀರ ಗಾಯಗೊಂಡಿದ್ದಾರೆ. ಮೂಡ್ಲಕಟ್ಟೆ ಸಮೀಪ ಶುಕ್ರವಾರ ಸಂಜೆ ವೇಳೆಗೆ ಬಸ್ರೂರು ಕಡೆಯಿಯಿಂದ ಬರುತ್ತಿದ್ದ ಕಾರು ಚಾಲಕ ಮುಂಭಾಗದ ಇನ್ನೊಂದು ಕಾರನ್ನು ಓವರ್ ಟೇಕ್ ಮಾಡುತ್ತಿದ್ದ ವೇಳೆ ಎದುರಿನಿಂದ ಬರುತ್ತಿದ್ದ ಆಟೋರಿಕ್ಷಾಕ್ಕೆ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿಯ ರಭಸಕ್ಕೆ ಆಟೋ ರಿಕ್ಷಾ ಎದುರಿದ್ದ ಕಾರಿನ ಮೇಲೆ ಪಲ್ಟಿಯಾಗಿದೆ. ಪರಿಣಾಮ ರಿಕ್ಷಾದಲ್ಲಿದ್ದ ಅಂಬಿಕಾ ಗಂಭೀರ ಗಾಯಗೊಂಡು ಸಾವನ್ನಪ್ಪಿದ್ದಾರೆ. ರಿಕ್ಷಾದಲ್ಲಿದ್ದ ಶಾಂತಾರಾಮ್ ಹಾಗೂ ನಯನ್ ಕುಮಾರ್ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೃತ ಅಂಬಿಕಾ ಅವರು ವಡೇರಹೋಬಳಿಯ ಸಂಬಂಧಿಯ ಮನೆಯಿಂದ ಸಹೋದರ ಶಾಂತಾರಾಮ ಹಾಗೂ ನಯನಕುಮಾರ್ ಜೊತೆಗೆ ಆಟೋದಲ್ಲಿ ತನ್ನ ಮನೆಯಾದ ಅಂಪಾರಿಗೆ ಪ್ರಯಾಣಿಸುತ್ತಿದ್ದು, ಈ ವೇಳೆ ಅವಘಡ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ತಾಲೂಕು ಯುವ ಬಂಟರ ಸಂಘದ ವತಿಯಿಂದ ನಡೆಯುವ 2023-24ನೇ ಸಾಲಿನ ತಂದೆ ಅಥವಾ ತಾಯಿಯನ್ನು ಕಳೆದುಕೊಂಡ ಬಂಟ ಸಮುದಾಯದ ವಿದ್ಯಾರ್ಥಿಗಳಿಗೆ ನೀಡಲಾಗುವ ‘ಆಸರೆ’ ಪೋತ್ಸಾಹಧನ ಹಾಗು ವಿಕಲಚೇತನ ವಿದ್ಯಾರ್ಥಿಗಳಿಗೆ ನೀಡಲಾಗುವ ‘ನವಚೇತನ’ ಪೋತ್ಸಾಹಧನದ ಸಮಿತಿಯ ಸಂಚಾಲಕರಾಗಿ ಕುಂದಾಪುರದ ಖ್ಯಾತ ನಿರೂಪಕ ಹಾಗು ಸಿಪ್ಲಾ ಕಂಪನಿ ಉದ್ಯೋಗಿ ಸಂದೇಶ್ ಶೆಟ್ಟಿ ಸಳ್ವಾಡಿ ಆಯ್ಕೆಯಾಗಿರುತ್ತಾರೆ. ಕಳೆದ 11 ವರ್ಷಗಳಿಂದ ಪ್ರತಿಷ್ಠಿತ ಔಷದ ಕಂಪನಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಬೆನಕ ಇವೆಂಟ್ಸ್ ಅಂಡ್ ಮ್ಯಾನೇಜ್ಮೆಂಟ್ ಸಂಸ್ಥೆಯ ಮೂಲಕ ಕಾರ್ಯಕ್ರಮ ಸಂಘಟಿಸಿ ಹಾಗು ನಿರೂಪಿಸಿ ಪ್ರಸಿದ್ಧ ನಿರೂಪಕರೆನಿಸಿಕೊಂಡಿದ್ದಾರೆ. ಪ್ರಸ್ತುತ ಜೆಸಿಐ ಕುಂದಾಪುರ ಸಿಟಿ ಘಟಕದ ಕಾರ್ಯದರ್ಶಿಯಾಗಿ ಹಾಗು ಕುಂದಾಪುರ ಯುವ ಬಂಟರ ಸಂಘದ ದಶಮ ಸಂಭ್ರಮದ ಕಾರ್ಯಕಾರಿ ಸಮಿತಿಯ ಸಕ್ರೀಯ ಸದಸ್ಯರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.= ಎಂದು ಕುಂದಾಪುರ ತಾಲೂಕು ಯುವ ಬಂಟರ ಸಂಘದ ಗೌರವಾಧ್ಯಕ್ಷರಾದ ಬಿ ಉದಯ ಕುಮಾರ್ ಶೆಟ್ಟಿ ಹಾಗೂ ಅಧ್ಯಕ್ಷರಾದ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ..
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಗರದ ಪ್ರಸಿದ್ಧ ಆಸ್ಪತ್ರೆಗಳಲ್ಲೊಂದಾದ ಶ್ರೀಮಾತಾ ಆಸ್ಪತ್ರೆಯಲ್ಲಿ ಖ್ಯಾತ ವೈದ್ಯೆ ಡಾ. ಪುಪ್ಪಿಂದರ್ ಧುನ್ಪುತ್ ಪೂರ್ಣಾವಧಿಗೆ ಸೇವೆ ನೀಡಲಿದ್ದು, ಶುಕ್ರವಾರ ಆಸ್ಪತ್ರೆ ವತಿಯಿಂದ ಅವರನ್ನು ಸ್ವಾಗತಿಸಲಾಯಿತು. ಎಂಬಿಬಿಎಸ್, ಎಂಡಿ ಪದವಿ ಹೊಂದಿರುವ ಡಾ. ಪುಪ್ಪಿಂದರ್ ಧುನ್ಪುತ್ ಅವರು ಹನ್ನೆರಡು ವರ್ಷಗಳಿಂದ ಮಣಿಪಾದಲ್ಲಿ ಸೇವೆ ಸಲ್ಲಿಸಿದ್ದು, ಸೆ.1ರಿಂದ ಶ್ರೀಮಾತಾ ಆಸ್ಪತ್ರೆಯಲ್ಲಿ ಕಾಯಂ ಆಗಿ ಸೇವೆ ಸಲ್ಲಿಸುತ್ತಾರೆ. ಕುಂದಾಪುರದಲ್ಲಿ ಮೊದಲ ಭಾರಿಗೆ ಮಹಿಳಾ ಫಿಸಿಶಿಯನ್ ಸೇವೆ ನೀಡಿತ್ತಿದ್ದಾರೆ. ಹೃದಯ ರೋಗ, ಮಧುಮೇಹ, ಅಧಿಕ ರಕ್ತದೊತ್ತಡ, ಥೈರಾಯ್ಡ್, ಚರ್ಮದ ಸಮಸ್ಯೆ ಸಹಿತ ಅನೇಕ ರೋಗಗಳ ಚಿಕಿತ್ಸೆಯಲ್ಲಿ ಪ್ರಸಿದ್ದಿ ಪಡೆದಿದ್ದಾರೆ. ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ.ಪ್ರಕಾಶ ತೋಳಾರ್, ಡಾ. ಸತೀಶ್ ಪೂಜಾರಿ, ಡಾ. ಸವಿತಾ ಪ್ರಕಾಶ ತೋಳಾರ್, ನೇಹಾ ಸತೀಶ್ ಪೂಜಾರಿ ಉಪಸ್ಥಿತರಿದ್ದರು.
