Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಬೋರ್ಡ್ ಹೈಸ್ಕೂಲ್ ವಠಾರದ ರೋಟರಿ ಕಲಾಮಂದಿರದಲ್ಲಿ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕುಂದಾಪುರ ತಾಲೂಕು ಘಟಕ ವತಿಯಿಂದ ಸಾಮಾಜಿಕ ಹೋರಾಟಗಾರ, ಹಿರಿಯ ನೇತಾರ ಮಾಣಿ ಗೋಪಾಲ್ ಅವರ ಆತ್ಮಕಥನ ‘ನಾನು ಮಾಣಿಗೋಪಾಲ’ ಪುಸ್ತಕವನ್ನು ಬಿಡುಗಡೆಗೊಂಡಿತು. ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ| ಎಂ. ಮೋಹನ್ ಆಳ್ವ ಅವರು ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿ, ಮಾಣಿಗೋಪಾಲರು ಶ್ರೀ ಸಾಮಾನ್ಯರ ಜತೆಯಲ್ಲಿದ್ದುಕೊಂಡು, ಬಡವರ ಪರ, ಮೂರ್ತೆದಾರರ ಪರ ಹೋರಾಟ ಮಾಡಿದವರು. ಆ ಕಾಲದಲ್ಲಿ ಅಂತಹ ಹೋರಾಟ ಮಾಡಲು ಗಟ್ಟಿತನ ಇರಬೇಕು. ಬದುಕಿಗೊಂದು ಸ್ಪಷ್ಟ ನಿಲುವು ಬೇಕಿತ್ತು. ಅದೆರಡು ಅವರಲ್ಲಿತ್ತು. ಇಡೀ ಬದುಕಿನುದ್ದಕ್ಕೂ ಸತ್ಯ, ನ್ಯಾಯ, ಧರ್ಮದ ಪರ ಹೋರಾಡಿ, ರಾಜಕೀಯದಲ್ಲೂ ಶುದ್ಧ ಚಾರಿತ್ರ್ಯವನ್ನು ಉಳಿಸಿಕೊಂಡು, ಶುದ್ಧ ಹಸ್ತದ ರಾಜಕಾರಣಕ್ಕೆ ಹೆಸರಾದ ಕುಂದಾಪುರದ ಸಾಕ್ಷಿ ಪ್ರಜ್ನೆಯಂತಿದ್ದರು ಎಂದು ಹೇಳಿದರು. ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮಾತನಾಡಿ, ಅವರೊಂದಿಗೆ ನಮ್ಮ ಕುಟುಂಬಕ್ಕೆ ದೀರ್ಘಕಾಲದ ಒಡನಾಟವಿದೆ. ಬೇರೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಕಾರಂತರು ತಮ್ಮ ಜೀವಿತ ಅವಧಿಯಲ್ಲಿ ನಡೆನುಡಿ ಬಲು ವಿಶಿಷ್ಟವಾದದ್ದು ಅವರ ಸಾಹಿತ್ಯಿಕ ಬದುಕು ಯುವ ಸಮುದಾಯಕ್ಕೆ ಪ್ರೇರಣೆದಾಯಕ ಎಂದು ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಹೇಳಿದರು. ಅವರು ಶನಿವಾರ ಗಿರಿಜಾ ಕಲ್ಯಾಣಮಂಟಪ ದಲ್ಲಿ ಗೆಳೆಯರ ಬಳಗ ಕಾರ್ಕಡ ಇವರ ಆಶ್ರಯದಲ್ಲಿ ಡಾ. ಕೋಟ ಶಿವರಾಮ ಕಾರಂತ ಜನ್ಮದಿನಾಚರಣೆ ಅಂಗವಾಗಿ ಗೆಳೆಯರ ಬಳಗ ಕಾರಂತ ಪುರಸ್ಕಾರ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಕಾರಂತರು ವಿಶ್ವಮಟ್ಟದಲ್ಲಿ ತಮ್ಮ ಸಾಹಿತ್ಯ, ವಿವಿಧ ರಂಗವನ್ನು ಪರಿಚಯಿಸಿಕೊಂಡವರು ಅಂತಹ ಮಹಾನ್ ಚೇತನ ಹೆಸರಿನಲ್ಲಿ ಪುರಸ್ಕಾರ ಏರ್ಪಡಿಸಿದ ಗೆಳೆಯರ ಬಳಗಕ್ಕೆ ಕೃತಜ್ಞತೆ ಸಲ್ಲಿಸಬೇಕು ಎಂದರು. ಇದೇ ವೇಳೆ ಸಾಹಿತಿ ಎಚ್. ಶಕುಂತಲ ಭಟ್ ಹಳೆಯಂಗಡಿ ಅವರಿಗೆ ಗೆಳೆಯರ ಬಳಗ ಕಾರಂತ ಪುರಸ್ಕಾರ ನೀಡಲಾಯಿತು. ಕಲ್ಕೂರ ಪ್ರತಿಷ್ಠಾನ ಮಂಗಳೂರು ಇದರ ಅಧ್ಯಕ್ಷ ಎಸ್. ಪ್ರದೀಪ್ ಕುಮಾರ್ ಕಲ್ಕೂರ ಕಾರಂತರ ಭಾವ ಚಿತ್ರಕ್ಕೆ ಪುಷ್ಭನಮನ ಸಲ್ಲಿಸಿದರು. ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಶಿರೂರು ಕೆಳಪೇಟೆಯಲ್ಲಿ ಆಟೋ ರಿಕ್ಷಾಕ್ಕೆ ಬೊಲೆರೋ ಪಿಕಪ್ ವಾಹನವೊಂದು ಡಿಕ್ಕಿ ಹೊಡೆದು ರಿಒ್ಷಾ ಚಾಲಕ ಮೃತಪಟ್ಟ ಘಟನೆ ನಡೆದಿದೆ. ಹಡವಿನಕೋಣೆ ನ್ಯೂ ಕಾಲೋನಿ ನಿವಾಸಿ ಕರಾ ಇಲಿಯಾಸ್(49) ಮೃತ ರಿಕ್ಷಾ ಚಾಲಕ ಮಲ್ಪೆಯಿಂದ ಭಟ್ಕಳಕ್ಕೆ ತೆರಳುತ್ತಿದ್ದ ಮೀನಿನ ವಾಹನ ಶಿರೂರು ಮಾರ್ಕೆಟ್ ಕಡೆಗೆ ತೆರಳುತ್ತಿದ್ದ ಆಟೋ ರಿಕ್ಷಾಕ್ಕೆ ಹಿಂದಿನಿಂದ ಡಿಕ್ಕಿ ಹೊಡೆದಿದೆ.ರಿಕ್ಷಾ ಡಿಕ್ಕಿಯಾದ ರಭಸಕ್ಕೆ ರಿಕ್ಷಾ ನಜ್ಜುನುಜ್ಜಾಗಿದ್ದು ರಿಕ್ಷಾ ಚಾಲಕ ಸ್ಥಳದಲ್ಲೆ ಮೃತಪಟ್ಟಿದ್ದಾನೆ. ಬೈಂದೂರು ಆರಕ್ಷಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ಬಿ.ಇಡಿ ವ್ಯಾಸಾಂಗಕ್ಕಾಗಿ ಸರ್ಕಾರದಿಂದ ಮಾನ್ಯತೆ ಪಡೆದ ರಾಜ್ಯದ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಬಿ.ಇಡಿ ಕಾಲೇಜುಗಳಲ್ಲಿನ ಸರ್ಕಾರಿ ಕೋಟಾದಡಿ ಸೀಟುಗಳ ದಾಖಲಾತಿಗಾಗಿ ಇಲಾಖಾ ವೆಬ್‌ಸೈಟ್ www.schooledecation.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ನವೆಂಬರ್ 3 ಕೊನೆಯ ದಿನ. ಜಿಲ್ಲಾ ನೋಡೆಲ್ ಕೇಂದ್ರವಾಗಿ ಡಯಟ್ ಉಡುಪಿ ಕಾರ್ಯನಿರ್ವಹಿಸಲಿದ್ದು, ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ ಏಳು ದಿನಗಳ ಒಳಗಾಗಿ ಕಡ್ಡಾಯವಾಗಿ ಮೂಲ ದಾಖಲೆಗಳೊಂದಿಗೆ ಸಂಸ್ಥೆಯಲ್ಲಿ ಪರಿಶೀಲನೆಗಾಗಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸೋನಿಕ್ ಟಿ ಮೊ.ನಂ: 9901236348 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಾಂಶುಪಾಲರ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಸುವಿಧಾ ಸೌಹರ್ಧ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಲಿಮಿಟೆಡ್ ಇದರ ನಿರ್ದೇಶಕರಾಗಿರುವ ವಂಡ್ಸೆ ಕಟ್ಟೆಮನೆ ಹೇಮಂತ್ ಕುಮಾರ್ ಶೆಟ್ಟಿ  (59) ಅವರು ಶುಕ್ರವಾರ ಬೆಂಗಳೂರಿನಲ್ಲಿ ನಿಧನ ಹೊಂದಿದ್ದಾರೆ. ಅವರು ಜ್ಯೋತಿ ಲ್ಯಾಬೋರಟರಿ ಲಿಮಿಟೆಡ್ ಕಂಪೆನಿಯಲ್ಲಿ  ಜೋನಲ್ ಕಮರ್ಸಿಯಲ್ ಮೇನೇಜರ್ ಆಗಿ ಸೇವೆ ಸಲ್ಲಿಸುತಿದ್ದರು. ಮೃತರು ಪತ್ನಿ ಮತ್ತು ಪುತ್ರಿಯನ್ನು ಅಗಲಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಶನಿವಾರಕನ್ನಡ ವಿಭಾಗ ಮತ್ತು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಕುಂದಾಪುರ ಹಾಗೂ ಸುವ್ವಿ ಪಬ್ಲಿಕೇಷನ್ಸ್ ಶಿಕಾರಿಪುರ ಇದರ ಸಂಯುಕ್ತ ಆಶ್ರಯದಲ್ಲಿ ವೈದೇಹಿಯವರ ಸಾಹಿತ್ಯ ಮರುಚಿಂತನೆ ಕುರಿತು ಒಂದು ದಿನದ ರಾಷ್ಟ್ರಮಟ್ಟದ ವೆಬಿನಾರ್ ಮತ್ತು ಕೃತಿ ಲೋಕಾರ್ಪಣೆ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ಜರುಗಿತು. ಕಾರ್ಯಕ್ರಮಕ್ಕೆ ಉದ್ಘಾಟಕರಾಗಿ ಆಗಮಿಸಿದ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರಾದ ಅನುಪಮ ಎಸ್. ಶೆಟ್ಟಿ ಮಾತನಾಡಿ, ವೈದೇಹಿಯವರು ಕುಂದಾಪುರ ಮಹಿಳೆಯರ ಕಷ್ಟಗಳನ್ನು ತಮ್ಮದೇ ಆದ ಭಾಷೆಗಳಲ್ಲಿ ಬರೆಯುತ್ತಿದ್ದರು ಮತ್ತು ಮಹಿಳಾ ಜೀವನದ ಎಲ್ಲಾ ಮಜಲುಗಳನ್ನು ಅವರ ಕೃತಿಗಳಲ್ಲಿ ಕಾಣಬಹುದಾಗಿದೆ ಎಂದರು. ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಕೇರಳ ಕೇಂದ್ರೀಯ ವಿಶ್ವ ವಿದ್ಯಾನಿಲಯದ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ಸೌಮ್ಯ ಹೇರಿಕುದ್ರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ, ವೈದೇಹಿಯವರ ಕಥೆಗಳಲ್ಲಿ ಸ್ತ್ರೀ ಸಾಮಾನ್ಯರನ್ನು ಕೇಂದ್ರೀಕರಿಸಿ ಸುಮಾರು 70 ಮತ್ತು 80ರ ದಶಕದ ಮಹಿಳೆಯ ಕಷ್ಟ ಮತ್ತು ಬದುಕಿನಲ್ಲಿ ಎದುರಾಗುವ ಸವಾಲುಗಳ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ತಂತ್ರಜ್ಞಾನ, ವೈದ್ಯಕೀಯ, ಮೆಕ್ಯಾನಿಕ್, ಬೋಧನೆ ಸೇರಿದಂತೆ ಹತ್ತಾರು ರೀತಿಯ ಉದ್ಯೋಗದ ಅವಕಾಶಗಳು ಸೇನೆಯಲ್ಲಿ ಇವೆ. ಅದನ್ನು ಅರಿತುಕೊಂಡು ಸದ್ಬಳಕೆ ಮಾಡಿಕೊಳ್ಳುವಲ್ಲಿ ಇಂದಿನ ಯುವ ಪೀಳಿಗೆ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಮಾಜಿ ಸೈನಿಕರು, ಲೇಖಕರು ಆಗಿರುವ ಬೈಂದೂರು ಚಂದ್ರಶೇಖರ  ನಾವುಡ  ಅಭಿಪ್ರಾಯಪಟ್ಟರು.  ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ, ಎಸ್.ವಿ ಕಾಮರ್ಸ್ ಕ್ಲಬ್ ಗಂಗೊಳ್ಳಿ ಮತ್ತು ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಶ್ರೀ ನಾರಾಯಣ ಗುರು ಜನ ಸೇವಾ ಬಳಗದ ಸಂಯುಕ್ತ ಆಶ್ರಯದಲ್ಲಿ ಇಲ್ಲಿನ ರೋಟರಿ ಸಭಾಂಗಣದಲ್ಲಿ ನಡೆದ ಭಾರತೀಯ ಸೇನೆಯಲ್ಲಿ ಉದ್ಯೋಗಾವಕಾಶಗಳ ಕುರಿತಾದ ಮಾಹಿತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಸೈನ್ಯ ಸೇರುವುದೆಂದರೆ ಕೇವಲ ಯುದ್ಧ ಮಾಡುವುದು ಎಂದು ಅರ್ಥವಲ್ಲ. ದೇಶಪ್ರೇಮದ ಮನೋಭಾವನೆಯೊಂದಿಗೆ ಅಲ್ಲಿರುವ  ವಿವಿಧ ಉದ್ಯೋಗಗಳಲ್ಲಿ ನಮ್ಮನ್ನು ತೊಡಗಿಸಿಕೊಳ್ಳುವ ಮೂಲಕ ಉತ್ತಮವಾದ ಬದುಕನ್ನು ಕಟ್ಟಿಕೊಳ್ಳಲು ಕೂಡ ಸಾಧ್ಯವಿದೆ ಎಂದರು. ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ. ಸಿ. ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ  ಬೈಂದೂರು ಚಂದ್ರಶೇಖರ ನಾವುಡ ಅವರನ್ನು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್ ವಿಭಾಗ ವತಿಯಿಂದ ರೆಸ್ಟ್ ಕೊಡರ್ ಅಕಾಡೆಮಿಯ ಸಹಯೋಗದಲ್ಲಿ “ಎಂ.ಇ.ಆರ್.ಎನ್. ಸ್ಟಾಕ್ ” ವಿಷಯದ ಬಗ್ಗೆ ಎರಡು ದಿನದ ಕಾರ್ಯಾಗಾರ ಜರುಗಿತು. ಸಂಪನ್ಮೂಲ ವ್ಯಕ್ತಿಯಾಗಿ ರೆಸ್ಟ್ ಕೊಡರ್ ಅಕಾಡೆಮಿ, ಸೀನಿಯರ್ ಸಾಫ್ಟ್ ವೇರ್ ಡೆವೆಲಪರ್ ಸಯ್ಯದ್ ಇಮ್ರಾನ್ ಆಗಮಿಸಿದ್ದರು. ಸಂಸ್ಥೆಯ ಅಧ್ಯಕ್ಷರಾದ ಸಿದ್ದಾರ್ಥ ಜೆ. ಶೆಟ್ಟಿ , ಪ್ರಾಚಾರ್ಯರಾದ ಡಾ. ರಾಮಕೃಷ್ಣ ಹೆಗಡೆ, ವಿಭಾಗದ ಮುಖ್ಯಸ್ಥರಾದ ಮುರಳೀಧರ ಬಿ.ಕೆ., ಕಾರ್ಯಕ್ರಮದ ಸಂಚಾಲಕರಾದ ಡಾ. ಮಂಜುನಾಥ ಲಮಾಣಿ, ಪ್ಲೇಸ್ಮೆಂಟ್ ಡೀನ್ ಡಾ. ಅಣ್ಣಾಮಲೈ ಹಾಗು ಪ್ಲೇಸ್ಮೆಂಟ್ ಆಫೀಸರ್ ಪ್ರಸಾದ್ ಸಮ್ಮುಖದಲ್ಲಿ ಎಂಐಟಿಕೆ ರೆಸ್ಟ್ ಕೊಡರ್ ಅಕಾಡೆಮಿಯ ಜೊತೆಗೆ ಒಡಂಬಡಿಕೆ ಮಾಡಿಕೊಂಡಿತು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸನಾತನ ಧರ್ಮವನ್ನು ಹೊಂದಿದ ಭಾರತೀಯರಿಗೆ ಸಂಸ್ಕೃತಿಯ ಬೇರು ಗಟ್ಟಿಯಾಗಿದೆ. ಈ ಸಾಂಸ್ಕೃತಿಕ ಪರಂಪರೆಯನ್ನು, ಮಾನವ ಧರ್ಮವನ್ನು ಅರ್ಥೈಸಿಕೊಳ್ಳುವ ಮೂಲಕ ಜೀವನದ ಅರ್ಥವನ್ನು ತಿಳಿಯಬಹುದು ಎಂದು ಉಡುಪಿಯ ಉಜ್ವಲ್ ಗ್ರೂಪ್ಸ್ ನ ಆಡಳಿತ ನಿರ್ದೇಶಕರಾದ ಅಜಯ್ ಪಿ. ಶೆಟ್ಟಿ ಹೇಳಿದರು. ಅವರು ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಆಯೋಜಿಸಿದ ಜೀವನ ಮೌಲ್ಯ ಉಪನ್ಯಾಸ ಮಾಲಿಕೆಯನ್ನು ಉದ್ಘಾಟಿಸಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪ-ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ, ಕಾಲೇಜಿನ ಆಡಳಿತ ನಿಕಾಯಕರು ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳಾದ ರಕ್ಷಿತ್ ರಾವ್, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ರೇಷ್ಮಾ ಶೆಟ್ಟಿ ಉಪಸ್ಥಿತರಿದ್ದರು. ಶಯನ ಅತಿಥಿಗಳನ್ನು ಪರಿಚಯಿಸಿದರು. ಅಭಿಷೇಕ್ ಪ್ರಾರ್ಥಿಸಿ, ವಿದ್ಯಾರ್ಥಿಗಳಾದ ಮಿಥಿಲೇಶ್ ನಿರೂಪಿಸಿ, ರೇಷ್ಮಾ ಸ್ವಾಗತಿಸಿ, ಮೇಘನಾ ವಂದಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರಿನ ಹೆಸರಾಂತ ಮೊಬೈಲ್ ಮಾರಾಟ ಮಳಿಗೆ ‘ಪ್ರೀತಿ ಮೊಬೈಲ್ಸ್’ನಲ್ಲಿ ‘ದೀಪಾವಳಿ’ ಹಬ್ಬದ ಅಂಗವಾಗಿ ಗ್ರಾಹಕರಿಗೆ ವಿವಿಧ ಕೊಡುಗೆಗಳನ್ನು ನೀಡಲಾಗುತ್ತಿದೆ. ಪ್ರತಿ ಸ್ಮಾರ್ಟ್ ಪೋನ್ ಖರೀದಿಯ ಮೇಲೆಯೂ ಖಚಿತ ಕೊಡುಗೆಗಳು, ಇಎಂಐ ಸೌಲಭ್ಯ, ಜೊತೆಗೆ ಲಕ್ಕಿ ಕೂಪನ್, ಮೆಗಾ ಎಕ್ಸ್’ಚೆಂಚ್ ಆಫರ್, ಉಚಿತ ಸ್ಕ್ರೀನ್ ಬದಲಾವಣೆ ಸೇರಿದಂತೆ ಹಲವು ಕೊಡುಗೆಗಳನ್ನು ಒಳಗೊಂಡಿದೆ. ಲಕ್ಕಿ ಕೂಪನ್‌ನಲ್ಲಿ ಕಾರು, ಬೈಕ್‌, ಸ್ಮಾರ್ಟ್‌ ಟಿವಿ ಸಹಿತ ಹಲವು ಕೊಡುಗೆಗಳನ್ನು ಗೆಲ್ಲುವ ಅವಕಾಶವಿದೆ. ಐಫೋನ್, ಮೋಟೋರೊಲ, ವಿವೋ, ರೆಡ್ಮಿ, ಒಪ್ಪೋ, ರೀಯಲ ಮೀ, ಸಾಮಸಾಂಗ್, ಐಟೇಲ್, ಲಾವಾ, ಗೂಗಲ್ ಪಿಕ್ಸೆಲ್, ನಥಿಂಗ್ ನೋಕಿಯಾ, ಸೇರಿದಂತೆ ಎಲ್ಲಾ ಸ್ಮಾರ್ಟ್ ಮತ್ತು ನಾರ್ಮಲ್‌ ಮೊಬೈಲ್‌ ಸಹಿತ ಎಸ್ಸರೀಸ್ ಐಟಂಗಳೂ,ಬಜಾಜ್,ಎಚ್ ಡಿ ಬಿ,ಐಡಿಎಫ್‌ಸಿ,ಹೋಮ್ ಕ್ರೆಡಿಟ್, ಸಾಮಸಾಂಗ್ ಫೈನಾನ್ಸ್, ವಹನರೆಡ್ಮಿ ಫೈನಾನ್ಸ್ ಟಿವಿಎಸ್ ಫೈನಾನ್ಸ್ ಸೇರಿದಂತೆ ಎಲ್ಲಾ ಕಂಪನಿಗಳಿಂದ ಇಐಎಂಐ ಸೌಲಭ್ಯ ಕೂಡ ಇದೆ. ವಿಶೇಷವಾಗಿ ಎಲ್ಲಾ ಬ್ಯಾಂಕಿನ ಕ್ರೆಡಿಟ್ ಕಾರ್ಡ್ ನ ಮೇಲೇ 10% ಡಿಸ್ಕೌಂಟ್ ಆಫರ್.…

Read More