Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಇಂದಿನ ಕಲುಷಿತ ವಾತಾವರಣದಲ್ಲಿ ಜೀವನವನ್ನು ಸುಂದರವಾಗಿಸಬಲ್ಲ. ಪ್ರೀತಿಗೆ, ಬದಲಾಗಿ ಮನುಷ್ಯ-ಮನುಷ್ಯರ ನಡುವೆ ದ್ವೇಷದ ಬೆಂಕಿ ಹಬ್ಬುತ್ತಿದೆ. ಜಾತಿ-ಧರ್ಮಗಳ ಹೆಸರಿನಲ್ಲಿ ಕಲಹಗಳು ಮತ್ತು ಹಿಂಸೆ-ರಕ್ತಪಾತಗಳು ಹೆಚ್ಚುತ್ತಿವೆ. ಈ ಸಮಸ್ಯೆಗೆ ಪರಿಹಾರ ನೀಡಲು ಸಾಹಿತ್ಯದಿಂದ ಮಾತ್ರ ಸಾಧ್ಯ ಎಂದು ಕೋಟ-ಪಡುಕೆರೆಯ ಲಕ್ಷ್ಮಿ ಸೋಮ ಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ರಾಜೇಂದ್ರ ಎಸ್. ನಾಯಕ್‌ ಹೇಳಿದರು. ಅವರು ಕೋಟ-ಪಡುಕೆರೆಯ ಲಕ್ಷ್ಮಿ ಸೋಮ ಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಸಂಘ ಮತ್ತು ಐಕ್ಯೂಎಸಿ ಆಶ್ರಯದಲ್ಲಿ ನಡೆದ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಕುಂದಾಪುರದ ಜೆಸ್ಸಿ ಎಲಿಜಬೆತ್ ಜೋಸೆಫ್ ಮಲೆಯಾಳದಿಂದ ಅನುವಾದಿಸಿದ ಹೆಂಡತಿ ಕಾದಂಬರಿಯ ಬಿಡುಗಡೆ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇಂದಿನ ಯುವಜನರು ಹೆಚ್ಚು ಹೆಚ್ಚು ಸಾಹಿತ್ಯ ಅಧ್ಯಯನದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು. ಬಾವಿಯೊಳಗಿನ ಕಪ್ಪೆಗಳ ಹಾಗಿರದೆ ವಿಶಾಲವಾದ ಪ್ರಪಂಚದ ಬಗ್ಗೆ ತಿಳಿದುಕೊಳ್ಳಲು ಕನ್ನಡ ಸಾಹಿತ್ಯ ಮಾತ್ರವಲ್ಲದೆ ಬೇರೆ ಬೇರೆ ಭಾಷೆಗಳಿಂದ ಅನುವಾದವಾದ ಸಾಹಿತ್ಯವನ್ನೂ ಓದಿಕೊಳ್ಳುವುದು ಹೆಚ್ಚು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು ಅಲ್ಪಸಂಖ್ಯಾತ ಮುಸ್ಲಿಂ, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಜನಾಂಗದವರಿಂದ ರೇಷ್ಮೆ ನೂಲು ಬಿಚ್ಚಣಿಕೆ ಉದ್ಯಮ ಪ್ರೋತ್ಸಾಹ ಯೋಜನೆ, ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಸಹಾಯಧನ ಯೋಜನೆ, ವಿದೇಶಿ ವಿದ್ಯಾಭ್ಯಾಸ ಸಾಲ ಯೋಜನೆ, ಶ್ರಮಶಕ್ತಿ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ವೃತ್ತಿ ಪ್ರೋತ್ಸಾಹ ಯೋಜನೆ, ನೇರ ಸಾಲ ಯೋಜನೆ ಹಾಗೂ ಸಾಂತ್ವನ ಯೋಜನೆಗಳಿಗೆ ಸಾಲ ಸಹಾಯಧನ ಸೌಲಭ್ಯ ಪಡೆಯಲು ವೆಬ್‌ಸೈಟ್ https://kmdconline.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಅಕ್ಟೋಬರ್ 21 ರವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪ ಸಂಖ್ಯಾತರ ಅಭಿವೃದ್ಧಿ ನಿಗಮ, ಮೌಲಾನಾ ಆಜಾದ್ ಭವನ, ಒಂದನೇ ಮಹಡಿ, ಪಶು ಚಿಕಿತ್ಸಾಲಯ ಹತ್ತಿರ, ಶಿವಳ್ಳಿ, ಮಣಿಪಾಲ ದೂ.ಸಂಖ್ಯೆ: 0820-2574990, ಸಹಾಯವಾಣಿ ಸಂಖ್ಯೆ: 8277799990 ಅಥವಾ ಉಡುಪಿ ತಾಲೂಕು ದೂ.ಸಂಖ್ಯೆ: 0820-2574596, ಕಾರ್ಕಳ ತಾಲೂಕು ದೂ.ಸಂಖ್ಯೆ: 08258-231101 ಹಾಗೂ ಕುಂದಾಪುರ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಫಿಸಿಯೋಥೆರಪಿ ಕಾಲೇಜಿನ ಆಶ್ರಯದಲ್ಲಿ ನಡೆದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಮಂಗಳೂರು ವಲಯ ವಾಲಿಬಾಲ್ ಟೂರ್ನಮೆಂಟ್‌ನ ಪುರುಷರ ವಿಭಾಗದಲ್ಲಿ ಆಳ್ವಾಸ್ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ಚಾಂಪಿಯನ್ಸ್ ಆದರೆ, ಮಹಿಳೆಯರ ವಿಭಾಗದಲ್ಲಿ ಮಂಗಳೂರಿನ ಫಾದರ್ ಮುಲ್ರ‍್ಸ್ ನರ್ಸಿಂಗ್ ಕಾಲೇಜು ಚಾಂಪಿಯನ್ಸ್ ಪಟ್ಟ ಅಲಂಕರಿಸಿತು.   ಪುರುಷ ವಿಭಾಗ ವಿಜೇತರು:ಆಳ್ವಾಸ್ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್, ಮೂಡುಬಿದಿರೆರನ್ನರ್: ಆಳ್ವಾಸ್ ಫಿಸಿಯೋಥೆರಪಿ ಕಾಲೇಜು, ಮೂಡುಬಿದಿರೆಮೊದಲ ರನ್ನರ್-ಅಪ್: ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜು, ಮೂಡುಬಿದಿರೆಎರಡನೇ ರನ್ನರ್-ಅಪ್: ಕೆ.ವಿ.ಜಿ ಮೆಡಿಕಲ್ ಕಾಲೇಜು, ಸುಳ್ಯಮಹಿಳಾ ವಿಭಾಗ ವಿಜೇತರು:ಫಾದರ್ ಮುಲ್ರ‍್ಸ್ ನರ್ಸಿಂಗ್ ಕಾಲೇಜು, ಮಂಗಳೂರುರನ್ನರ್: ಆಳ್ವಾಸ್ ನ್ಯಾಚುರೋಪತಿ ಮತ್ತು ಯೋಗಿಕ್ ಸೈನ್ಸ್ ಕಾಲೇಜು, ಮೂಡುಬಿದಿರೆಮೊದಲ ರನ್ನರ್-ಅಪ್: ಎಂ.ವಿ ಶೆಟ್ಟಿ ಫಿಸಿಯೋಥೆರಪಿ ಕಾಲೇಜು, ಮಂಗಳೂರುಎರಡನೇ ರನ್ನರ್-ಅಪ್: ಕೊಡಗು ಮೆಡಿಕಲ್ ಕಾಲೇಜು, ಮಡಿಕೇರಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ಡಾ. ವಿನಯ್ ಆಳ್ವ, ಆಳ್ವಾಸ್ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲ ಡಾ. ಯತಿಕುಮಾರ್‌ಸ್ವಾಮಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ. ಕೋಟ: ತಲಾಂತರಗಳಿಂದ ಬಳುವಳಿಯಾಗಿ ಬಂದ ರೈತ ಕಾಯಕ ಮುಂದೊಂದು ದಿನ ದೊಡ್ಡ ಆಸ್ತಿಯಾಗಿ ಹೊರಹೊಮ್ಮಲ್ಲಿದೆ ಎಂದು ಕೆ.ಎಂ ಎಫ್ ನಿರ್ದೇಶಕ ಕೆ. ಶಿವಮೂರ್ತಿ ಉಪಾಧ್ಯಾ ಹೇಳಿದರು. ಅವರು ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ , ಪಂಚವರ್ಣ ಮಹಿಳಾ ಮಂಡಲ ಇದರ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ಗೆಳೆಯರ ಬಳಗ ಕಾರ್ಕಡ, ಸ್ನೇಹಕೂಟ ಮಣೂರು, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ, ರೈತಧ್ವನಿ ಸಂಘ ಕೋಟ ಇವರ ಸಹಯೋಗದೊಂದಿಗೆ 49ನೇ ರೈತರೆಡೆಗೆ ನಮ್ಮ ನಡಿಗೆ ಸರಣಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಯುವ ಸಮುದಾಯ ಕೃಷಿ ಕಾಯಕದಲ್ಲಿ ಮಂಚೂಣಿಗೆ ನಿಲ್ಲಬೇಕು, ಸರಕಾರ ಕೃಷಿ ಕಾರ್ಯ ಉಳಿಯಲು ವಿವಿಧ ಯೋಜನೆಗಳನ್ನು ರೂಪಿಸಬೇಕು. ಪ್ರಸ್ತುತ ಭತ್ತದ ಬೆಳೆಗೆ ನೈಜ ಬೆಲೆ‌ ನೀಡಬೇಕು ಎಂದು ಸಭೆಯಲ್ಲಿ ಆಗ್ರಹಿಸಿದರಲ್ಲದೆ ಕೃಷಿಕರನ್ನು ಗುರುತಿಸುವ ಪಂಚವರ್ಣದ ಕಾರ್ಯ ಅತ್ಯಂತ ಶ್ರೇಷ್ಠತೆಯನ್ನು ಪಡೆದುಕೊಂಡಿದೆ ಎಂದರು. ರೈತಧ್ವನಿ ಸಂಘ ಕೋಟ ಅಧ್ಯಕ್ಷ ಎಂ. ಜಯರಾಮ ಶೆಟ್ಟಿ ಮಾತನಾಡಿ, ಕೃಷಿ ಕಾರ್ಯದಲ್ಲಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ. ಬೈಂದೂರು: ತಾಲೂಕು ಕಚೇರಿಯಲ್ಲಿ ತಾಲೂಕಿನ ಜನ ಸಾಮಾನ್ಯರು ವಿವಿಧ ಸಮಸ್ಯೆಗಳ ಪರಿಹಾರಕ್ಕಾಗಿ ನೀಡಿರುವ ಅರ್ಜಿಗಳನ್ನು ವಿಲೇವಾರಿ ಮಾಡದೇ ವಿನಾಕಾರಣ ವಿಳಂಬ ಮಾಡುತ್ತಿರುವ ಬಗ್ಗೆ ಇತ್ತೀಚಿಗೆ ಹಲವು ದೂರುಗಳು ಬಂದ ಹಿನ್ನಲೆಯಲ್ಲಿ ತಾಲೂಕು ಕಚೇರಿಗೆ ಬರುವ ಜನ ಸಾಮಾನ್ಯರ ಕೆಲಸವನ್ನು ಮಾಡಿಕೊಡಲು ವಿಳಂಬ ಮಾಡಿದರೆ ಹಾಗೂ ಸತಾಯಿಸಿದರೆ ಸಹಿಸಲು ಸಾಧ್ಯವಿಲ್ಲ ಎಂದು ಬೈಂದೂರು ಶಾಸಕ ಗುರುರಾಜ್‌ ಗಂಟಿಹೊಳೆ ಎಚ್ಚರಿಕೆ ನೀಡಿದರು. ಅವರು ತಾಲೂಕು ಕಚೇರಿ ಪ್ರಜಾ ಸೌಧದ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಸಿಬ್ಬಂದಿಗಳ ಕಾರ್ಯ ವೈಖರಿ ಬಗ್ಗೆ ವಿವಿಧ ವಿಷಯ ನಿರ್ವಾಹಕ ಸಿಬ್ಬಂದಿಗಳನ್ನು ತರಾಟೆಗೆ ತೆಗೆದುಕೊಂಡು ಮಾತನಾಡಿದರು. ಕಚೇರಿಗೆ ಸಿಬ್ಬಂದಿಗಳು ತಮ್ಮ ಸ್ವಭಾವ ಹಾಗೂ ಕಾರ್ಯ ವೈಖರಿಯನ್ನು ಜನ ಸಾಮಾನ್ಯರಿಗೆ ಅನುಕೂಲವಾಗುವಂತೆ ಬದಲಾಯಿಸಿಕೊಳ್ಳಬೇಕು ಎಂದು ತಾಕೀತು ಮಾಡಿದರು. ಕಚೇರಿಗೆ ಬರುವ ಸಾರ್ವಜನಿಕರಿಗೆ ಸರಿಯಾದ ಮಾಹಿತಿ ನೀಡದೇ ಕಚೇರಿಯೊಳಗೆ ಅಲೆದಾಡಿಸದೇ ಸರಿಯಾದ ಮಾಹಿತಿ ನೀಡಲು ಮಾಹಿತಿ ಕೇಂದ್ರದ ವ್ಯವಸ್ಥೆ ಮಾಡಬೇಕು. ಆರ್.ಆರ್.ಟಿ, 11 ಇ, ಸಾಕಷ್ಟು ಅರ್ಜಿಗಳು ಬಾಕಿ ಇದ್ದು ಅದನ್ನು ತ್ವರಿತವಾಗಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಬ್ರಹ್ಮಾವರ ತಾಲೂಕಿನ ಹೇರಾಡಿ ಗ್ರಾಮದ ಕೂಡ್ಲಿ ಸಮೀಪ ಸರಕಾರಿ ಜಾಗದಲ್ಲಿ ಅಕ್ರಮವಾಗಿ ಕೋಳಿಗಳ ಕಾಲಿಗೆ ಕತ್ತಿ ಕಟ್ಟಿ ಮನೋರಂಜನೆ ಹಾಗೂ ಹಣ ಪಣವಾಗಿ ಕಟ್ಟಿ ಜೂಜಾಟ ನಡೆಯುತ್ತಿದೆ ಎಂಬ ಮಾಹಿತಿ ಮೇರೆಗೆ ಬ್ರಹ್ಮಾವರ ಠಾಣಾ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಾದ ಪ್ರಶಾಂತ್ ಮತ್ತು ರಾಘವೇಂದ್ರ. ಇತರ ಮಂದಿ ಓಡಿ ಹೋಗಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ. ಆರೋಪಿಗಳಿಂದ ₹2,120 ನಗದು, ಎರಡು ಕೋಳಿಗಳು, ಕೋಳಿಯ ಕಾಲಿಗೆ ಕಟ್ಟಿದ್ದ ಬಾಲ್‌ಗಳು ಹಾಗೂ ನೈಲಾನ್ ಹಗ್ಗಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Read More

ಕುಂದಾಪ್ರ ಡಾಟ್ ಕಾಂ‌ ಸುದ್ದಿ. ಬೈಂದೂರು: ಕಾಲೇಜು ಪದವಿ ಜೊತೆಗೆ ಕ್ರೀಯಾತ್ಮಕ ಚಟುವಟಿಕೆಗಳು‌ ಎಷ್ಟು ನಡೆಯುತ್ತದೆ ಎಂಬುದು ಮುಖ್ಯ. ಗುಣಾತ್ಮಕ ಚಟುವಟಿಕೆಗಳು ವಿದ್ಯಾರ್ಥಿಗಳನ್ನು ಮಾನಸಿಕ‌ ಹಾಗೂ ಬೌದ್ಧಿಕವಾಗಿ ಗಟ್ಟಿಗೊಳಿಸುತ್ತವೆ ಎಂದು ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು. ಅವರು ಶುಕ್ರವಾರ ಬೈಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಆಂತರಿಕ ಗುಣಮಟ್ಟ ಭರವಸಾ ಕೋಶ ಮತ್ತು ವಿದ್ಯಾರ್ಥಿ ಕ್ಷೇಮ ಪಾಲನಾ ಸಮಿತಿ ಇದರ 2025-26ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಪರಿಷತ್ತು ಹಾಗೂ ವಿವಿಧ ಚಟುವಟಿಕೆಗಳು‌ ಮತ್ತು ಸುರಭಿ ರಿ. ಸಹಯೋಗದೊಂದಿಗೆ ನಡೆಯುವ ರಂಗ ತರಬೇತಿ ಶಿಬಿರದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು. ಬೈಂದೂರು ಸರಕಾರಿ ಪದವಿ ಕಾಲೇಜು ಗುಣಮಟ್ಟದ ಶಿಕ್ಷಣ ಹಾಗೂ ಪಠ್ಯೇತರ ಚಟುವಟಿಕೆಗಳ ಪಾಲ್ಗೊಳ್ಳುವಿಕೆಯಲ್ಲಿ ಮಾದರಿಯಾಗಿ ರೂಪುಗೊಳ್ಳುತ್ತಿದೆ. ಪ್ರಾಂಶುಪಾಲರು‌ ಮತ್ತು ಉಪನ್ಯಾಸಕರ ತಂಡವೂ ಅದಕ್ಕೆ ಪೂರಕವಾಗಿ ತೊಡಗಿಸಿಕೊಂಡಿದೆ. ಸಂಸ್ಥೆಯ ಮೂಲಭೂತ ಸೌಕರ್ಯವನ್ನು ಸರಕಾರ ಅಥವಾ ಸರಕಾರೇತರ ಸಂಸ್ಥೆಗಳ ಮೂಲಕ ಒದಗಿಸುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು. ಜಿ.ಪಂ ಮಾಜಿ ಅಧ್ಯಕ್ಷ ಎಸ್. ರಾಜು ಪೂಜಾರಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ಘಟಕ ಹಾಗೂ ಪ್ರಾಕ್ತನ ವಿದ್ಯಾರ್ಥಿ ಸಂಘದ ಜಂಟಿ ಆಶ್ರಯದಲ್ಲಿ ರೋವರ್ಸ್ & ರೇಂಜರ್ಸ್ ಸ್ವಯಂ ಸೇವಕರಿಗೆ ಓರಿಯಂಟೇಶನ್ ಕಾರ್ಯಕ್ರಮವನ್ನು ಕಾಲೇಜಿನ ಎ.ವಿ. ಹಾಲ್ ನಲ್ಲಿ ಇತ್ತೀಚಿಗೆ ನಡೆಯಿತು. ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿ, ರೇಂಜರ್ ರಾಜ್ಯ ಪುರಸ್ಕಾರ ಪದವಿ ಪುರಸ್ಕೃತ ಸಮೃದ್ಧಿ ಕಿಣಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ, ಸ್ಕೌಟ್ & ಗೈಡ್ಸ್ ನ ಹಿನ್ನೆಲೆ ಹಾಗೂ ಯುವ ಸಮುದಾಯ ಸ್ಕೌಟ್ ಚಟುವಟಿಕೆಯಲ್ಲಿ ಭಾಗವಹಿಸುವುದರಿಂದ ಸಿಗುವ ಪ್ರಯೋಜನಗಳ ಕುರಿತು ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ರೇಂಜರ್ ಲೀಡರ್ ಜೋಸ್ಲಿನ್ ಡಿ. ಅಲ್ಮೇಡಾ, ಕಾಲೇಜಿನ ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕರು ಹಾಗೂ ಪ್ರಾಕ್ತನ ವಿದ್ಯಾರ್ಥಿ ಸಂಘದ ನೂತನ ಕಾರ್ಯದರ್ಶಿಯಾದ ದೀಪಾ ಪೂಜಾರಿ ಉಪಸ್ಥಿತರಿದ್ದರು. ಕಾಲೇಜಿನ ರೋವರ್ ಸ್ಕೌಟ್ ಲೀಡರ್ ಪ್ರವೀಣ್ ಮೊಗವೀರ ಗಂಗೊಳ್ಳಿ ಕಾರ್ಯಕ್ರಮ ನಿರೂಪಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ನಡೆದ ಮಂಗಳೂರು ವಿ.ವಿ. ಅಂತರ್ ಕಾಲೇಜು ಅಂತರ್ ವಲಯ ಪುರುಷರ ವಾಲಿಬಾಲ್ ಪಂದ್ಯಾಟದಲ್ಲಿ ಆಳ್ವಾಸ್ ಕಾಲೇಜಿನ ಪುರುಷರ ವಾಲಿಬಾಲ್ ತಂಡವು 17ನೇ ಬಾರಿ ಪ್ರಶಸ್ತಿಯನ್ನು ಪಡೆದು, ಶ್ರೀ ಪಾಟೀಲ್ ಸಾಹುಕಾರ್ ಅಂತಯ್ಯ ಶೆಟ್ಟಿ ಮೆಮೋರಿಯಲ್ ರೋಲಿಂಗ್ ಟ್ರೋಫಿಯನ್ನು ಪಡೆದುಕೊಂಡಿದೆ. ಫೈನಲ್ ಪಂದ್ಯಾಟದಲ್ಲಿ ಪುರುಷರ ತಂಡವು ಎಸ್.ಡಿ.ಎಂ. ತಂಡವನ್ನು 3-1 ಸೆಟ್‌ಗಳ ಅಂತರದಿಂದ ಗೆದ್ದು ಚಾಂಪಿಯನ್ ಪಟ್ಟವನ್ನು ಪಡೆಯಿತು. ವೈಯಕ್ತಿಕ ವಿಭಾಗದಲ್ಲಿ ಬೆಸ್ಟ್ ಆಲ್ ರೌಂಡರ್ ಪ್ರಶಸ್ತಿಯನ್ನು ಆಳ್ವಾಸ್‌ನ ರಾಹುಲ್, ಬೆಸ್ಟ್ ಸೆಟ್ಟರ್ ಪ್ರಶಸ್ತಿಯನ್ನು ಆಳ್ವಾಸ್‌ನ ಪುನೀತ್ ಹಾಗೂ ಬೆಸ್ಟ್ ಲಿಬ್ರೊ ಪ್ರಶಸ್ತಿಯನ್ನು ಆಳ್ವಾಸ್‌ನ ಮಂಜುನಾಥ್ ಪಡೆದರು. ವಿಜೇತ ಕ್ರೀಡಾಪಟುಗಳನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅಭಿನಂದಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ವತಿಯಿಂದ ವಿಜ್ಞಾನ ವಿಷಯಗಳ ಬರವಣಿಗೆಯನ್ನು ಪ್ರೋತ್ಸಾಹಿಸುವ ಸಲುವಾಗಿ ಕೃಷಿ, ವಿಜ್ಞಾನ, ತಂತ್ರಜ್ಞಾನ ಮತ್ತು ವೈದ್ಯಕೀಯ ವಿಷಯಗಳ ಮೇಲೆ ಕನ್ನಡದಲ್ಲಿ ಜನವರಿ – 2023 ರಿಂದ ಡಿಸೆಂಬರ್-2025 ರ ಒಳಗೆ ಪ್ರಕಟವಾಗುವ ಪುಸ್ತಕಗಳ ಲೇಖಕರಿಂದ ಶ್ರೇಷ್ಠ ಪುಸ್ತಕ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜನವರಿ 5, 2026 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಅಕಾಡೆಮಿಯ ವೆಬ್‌ಸೈಟ್ https://kstcademy.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಅಕಾಡೆಮಿಯ ಕಚೇರಿ ಪ್ರಕಟಣೆ ತಿಳಿಸಿದೆ.

Read More