ಕುಂದಾಪ್ರ ಡಾಟ್ ಕಾಂ ಸುದ್ದಿ.ಬ್ರಹ್ಮಾವರ: ಅಪ್ರಾಪ್ತ ವಯಸ್ಸಿನ ಬಾಲಕನನ್ನು ಬ್ರಹ್ಮಾವರ ಬಸ್ ನಿಲ್ದಾಣದಿಂದ ಅಪಹರಿಸಿಕೊಂಡು ಕೇರಳಕ್ಕೆ ಕೊಂಡೊಯ್ದು ಅಲ್ಲಿ ಬಲವಂತವಾಗಿ ಕೆಲಸಕ್ಕೆ ಸೇರಿಸಿ ದೌರ್ಜನ್ಯ ಎಸಗಿದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ವಾರಂಬಳ್ಳಿ ಗ್ರಾಮ ಸಾಲಿಕೇರಿಯ ವಿಖ್ಯಾತ್ ಆಚಾರ್ಯ (19) ಆಗೂ ಮಟಪಾಡಿ ಗ್ರಾಮದ ನಿವಾಸಿ ಸುಚಿತ್ ನಾಯಕ್ (20) ಎಂದು ಗುರುತಿಸಲಾಗಿದೆ. ಇವರಿಬ್ಬರು ಜೂನ್ 1ರಂದು ಮುಂಜಾನೆ 8:30ರ ಸುಮಾರಿಗೆ ಬ್ರಹ್ಮಾವರ ಬಸ್ ನಿಲ್ದಾಣದ ಬಳಿಯಿಂದ ಅಪ್ರಾಪ್ತ ಬಾಲಕನನ್ನು ಬಲವಂತವಾಗಿ ಅಪಹರಿಸಿಕೊಂಡು ಕೇರಳದ ತಲಪಾಡಿ ಕುಂಜತ್ತೂರು ಪದವು ಎಂಬಲ್ಲಿಗೆ ಕರೆದೊಯ್ದಿದ್ದರು. ಅಲ್ಲಿ ಆರೋಪಿಗಳು ಬಾಲಕನನ್ನು ಬಲಾತ್ಕಾರವಾಗಿ ವುಡ್ ಕಂಪೆನಿಗೆ ಕೆಲಸಕ್ಕೆ ಸೇರಿಸಿದ್ದರು. ಬಾಲಕ ತನಗೆ ಮನೆಗೆ ಹೋಗಬೇಕೆಂದು ಹಠ ಹಿಡಿದಾಗ, ಜೂ.9ರಂದು ಸುಚಿತ್ ತಾವಿದ್ದ ರೂಮಿನಲ್ಲಿ ಬಾಲಕನಿಗೆ ಹಲ್ಲೆ ನಡೆಸಿದ್ದು, ವಿಖ್ಯಾತ್ ಚೂರಿ ತೋರಿಸಿ ಕೊಲೆ ಬೆದರಿಕೆ ಹಾಕಿ ನಿಂದಿಸಿದ್ದ. ಈ ಕೃತ್ಯವನ್ನು ಇನ್ನೊಬ್ಬ ಮೊಬೈಲ್ನಲ್ಲಿ ವಿಡಿಯೋ ಮಾಡಿರುವುದಾಗಿ ಬಾಲಕನ ತಂದೆ ಬ್ರಹ್ಮಾವರ ಠಾಣೆಯಲ್ಲಿ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದಿ.ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಭಾರತ ಸರ್ಕಾರದ ಶಾಸನಬದ್ಧ ಅಂಗಿಕೃತವಾದ ವಿಶ್ವವಿದ್ಯಾನಿಲಯಗಳಲ್ಲಿ ಪೂರ್ಣಕಾಲಿಕವಾಗಿ ಪಿಯುಸಿ, ಡಿಪ್ಲೋಮಾ, ಪದವಿ, ಸ್ನಾತಕೋತ್ತರ ಪದವಿ, ತಾಂತ್ರಿಕ & ವೃತ್ತಿಪರ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮತೀಯ ಅಲ್ಪಸಂಖ್ಯಾತರ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ ಹಾಗೂ ಸಿಖ್) ಸಮುದಾಯದ ಅರ್ಹ ವಿದ್ಯಾರ್ಥಿಗಳಿಂದ ಶುಲ್ಕ ಮರುಪಾವತಿ ಯೋಜನೆಯ ಸೌಲಭ್ಯ ಪಡೆಯಲು ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್- ಎಸ್.ಎಸ್.ಪಿ ತಂತ್ರಾಂಶವಾದ https://ssp.postmatric.karnataka.gov.in ನಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 30 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ: 8277799990 ಅಥವಾ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಅಲೆವೂರು ರಸ್ತೆ, ಮಣಿಪಾಲ ದೂ.ಸಂಖ್ಯೆ: 0820-2574596 ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ದೂ.ಸಂಖ್ಯೆ: 0820-2574596 ಹಾಗೂ ಕಾರ್ಕಳ ದೂ.ಸಂಖ್ಯೆ: 08258-231101 ಮತ್ತು ಕುಂದಾಪುರ ದೂ.ಸಂಖ್ಯೆ: 08254-230370 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ವಿದ್ಯುತ್ ಸುರಕ್ಷತಾ ಸಪ್ತಾಹದ ಅಂಗವಾಗಿ ಮೆಸ್ಕಾಂ ಸಂಸ್ಥೆಯ ಸಹಯೋಗದೊಂದಿಗೆ ವಿದ್ಯುತ್ ಸುರಕ್ಷತಾ ಸಪ್ತಾಹ ಕಾರ್ಯಾಗಾರವನ್ನು ಗುರುವಾರ ನಡೆಸಲಾಯಿತು. ಮೆಸ್ಕಾಂ ತಲ್ಲೂರಿನ ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿಗಳಾದ ಸುರೇಶ್ ಬಾಬು ಅವರು ಮಳೆಗಾಲದ ಆರಂಭದಲ್ಲಿ ವಿದ್ಯುತ್ ಅವಘಡಗಳ ಸಂಭವ ಬಹಳವಾಗಿರುವುದರಿಂದ ಮಕ್ಕಳಲ್ಲಿ ಸುರಕ್ಷತೆಯ ಜ್ಞಾನ ಅತ್ಯಗತ್ಯ. ಎನ್ನುತ್ತಾ ಅಸುರಕ್ಷಿತವಾದ ವಿದ್ಯುತ್ ಸಂಪರ್ಕದಿಂದ ಪ್ರಾಣಾಪಾಯದ ಸನ್ನಿವೇಶಗಳ ಮಾಹಿತಿಯನ್ನು ವೀಡಿಯೋ ತುಣುಕುಗಳ ಜೊತೆಗೆ ನೀಡಿದರು. ಮೆಸ್ಕಾಂ ತಲ್ಲೂರಿನ ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿಗಳಾದ ಹರೀಶ ಕುಮಾರ್ ಮಕ್ಕಳನ್ನು ಕುರಿತು ವಿದ್ಯುತ್ ಉತ್ಪತ್ತಿ, ಅದನ್ನು ಮನೆ ಮನೆಗೂ ತಲುಪಿಸುವ ವಿಚಾರಗಳ ಬಗ್ಗೆ ಮಾಹಿತಿ ನೀಡುವ ವೀಡಿಯೋ ತುಣುಕು ಮತ್ತು ಛಾಯಾಚಿತ್ರಗಳ, ಪ್ರತಿಕೃತಿಗಳ ಮೂಲಕ ತಿಳಿಸುತ್ತಾ ಮಕ್ಕಳೇ, ವಿದ್ಯುತ್ ತಂತಿಗಳ ಕೆಳಗೆ ಗಾಳಿಪಟಗಳ ಜೊತೆ ಆಡಬೇಡಿ. ತುಂಡಾಗಿ ಬಿದ್ದ ಲೈನ್ ಅನ್ನು ಯಾವತ್ತೂ ಮುಟ್ಟಬೇಡಿರಿ. 1912 ಸಂಖ್ಯೆಗೆ ನಿಮ್ಮ ವಿದ್ಯುತ್ ಸಮಸ್ಯೆಗಳನ್ನು ಹೇಳಿಕೊಳ್ಳಿರಿ. ತಕ್ಷಣವೇ ಮೆಸ್ಕಾಂ ಸಂಸ್ಥೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಮಣೂರು ಪಡುಕರೆ ಗೀತಾನಂದ ಫೌಂಡೇಶನ್ ವತಿಯಿಂದ ಹಮ್ಮಿಕೊಂಡಿರುವ ’ಸೃಷ್ಟಿ 2026’ ಹಸಿರು ಅಭಿಯಾನಕ್ಕೆ ವಡ್ಡರ್ಸೆಯ ನಾರಾಯಣ ಗುರು ವಸತಿ ಶಾಲೆ ಆವರಣದಲ್ಲಿ ನುಗ್ಗೆ, ದೀವಿಗೆ ಹಲಸು ಮತ್ತು ವಿವಿಧ ಹಣ್ಣಿನ ಗಿಡಗಳು ಹಾಗೂ ಶಾಲಾ ಮೈದಾನದ ಸುತ್ತ ನೆರಳನ್ನು ನೀಡುವ ದೊಡ್ಡದಾಗಿ ಬೆಳೆದು ಹೆಮ್ಮರವಾಗುವ ವಿವಿಧ ಜಾತಿಯ ಗಿಡಗಳನ್ನು ನಿಟ್ಟು ಚಾಲನೆ ನೀಡಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಮುಖ್ಯ ಅತಿಥಿ ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ ಸಿ. ಕುಂದರ್ ಅವರು, ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದ್ದು, ಗಿಡಗಳನ್ನು ನೆಡುವುದರ ಜೊತೆಗೆ ಅವುಗಳನ್ನು ಪೋಷಿಸುವ ಜವಾಬ್ದಾರಿಯನ್ನೂ ಎಲ್ಲರೂ ವಹಿಸಬೇಕು ಮತ್ತು ನಮ್ಮ ಸ್ವಯಂಸೇವಕರು ಆ ಕೆಲಸವನ್ನು ಸಹ ವಾರಾಂತ್ಯದಲ್ಲಿ ಅಚ್ಚುಕಟ್ಟಾಗಿ ನಿರ್ವಹಿಸುತ್ತಿದ್ದಾರೆ ಎನ್ನಲು ನಮಗೆ ಹೆಮ್ಮೆ ಎಂದು ಹೇಳಿದರು. ಅತಿಥಿಗಳಾದ ಜನತಾ ಸಂಸ್ಥೆಯ ಶ್ರೀನಿವಾಸ್ ಕುಂದರ್ ಹಾಗೂ ಮಿಥುನ್ ಕುಮಾರ್ ಮಾತನಾಡಿ, ಪರಿಸರ ಉಳಿವಿಗಾಗಿ ಸಮಾಜದ ಸಹಭಾಗಿತ್ವ ಅತ್ಯಗತ್ಯ ಎಂದು ಅಭಿಪ್ರಾಯಪಟ್ಟರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬದುಕನ್ನು ರೂಪಿಸಿಕೊಳ್ಳಲು ಪುಸ್ತಕಗಳು ಮಾರ್ಗದರ್ಶಕ, ವಿದ್ಯಾರ್ಥಿಗಳು ಪುಸ್ತಕವನ್ನು ಓದುವ ಹವ್ಯಾಸವನ್ನು ರೂಪಿಸಿಕೊಳ್ಳಬೇಕು. ಎಲ್ಲ ವಿಚಾರಗಳ ಕುರಿತು ಜ್ಞಾನ ಹೊಂದಿರುವುದು ಅತೀ ಅವಶ್ಯಕ. ಕಾರಂತರು ಕೇವಲ ಒಂದು ಕ್ಷೇತ್ರಕ್ಕೆ ಸೀಮಿತವಾಗದೇ ಪ್ರತಿಯೊಂದು ಕ್ಷೇತ್ರಗಳಲ್ಲಿಯೂ ಕಾರ್ಯನಿರ್ವಹಿಸಿ, ಸಮಾಜಕ್ಕೆ ಅಪಾರವಾದ ಕೊಡುಗೆ ನೀಡುವುದರೊಂದಿಗೆ ಬದುಕಿನ ಮೌಲ್ಯಗಳನ್ನು ತಿಳಿಸಿ ಸಾರ್ಥಕವಾದ ಬದುಕನ್ನು ನಡೆಸಿದವರು ಎಂದು ಡಾ. ಶಿವರಾಮ ಕಾರಂತ ಟ್ರಸ್ಟಿನ ಅಧ್ಯಕ್ಷ ಡಾ. ಗಣನಾಥ ಶೆಟ್ಟಿ ಎಕ್ಕಾರು ಹೇಳಿದರು. ಅವರು ಎಚ್.ಎಂ.ಎಂ ಮತ್ತು ವಿ.ಕೆ.ಆರ್ ಆಚಾರ್ಯ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಕುಂದಾಪುರ ಇಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ ಜಿಲ್ಲೆ ವತಿಯಿಂದ ಮಕ್ಕಳಿಗಾಗಿ ಕಾರಂತರು-೫ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಡಾ. ಕಾರಂತರ ಪರಿಚಯ ಚಿತ್ರಕಲೆಯ ಮೂಲಕ ಕಾರಂತರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಲೆಯ ಉಪಪ್ರಾಂಶುಪಾಲೆ ಶುಭ ಕೆ.ಎನ್., ಕಾರಂತರು ಕನ್ನಡ ಸಾಹಿತ್ಯ ಕಲೆ ಸಂಸ್ಕೃತಿ ಹಾಗೂ ಶಿಕ್ಷಣ ಕ್ಷೇತ್ರಗಳಿಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ರೋಟರಿ ಕ್ಲಬ್ ಗಂಗೊಳ್ಳಿ ಇದರ 2026-27ನೇ ಸಾಲಿನ ಅಧ್ಯಕ್ಷರಾಗಿ ಶಿಕ್ಷಕಿ ಮಾಲಾಶ್ರೀ ಖಾರ್ವಿ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ಗಿರೀಶ ಖಾರ್ವಿ, ಸಾರ್ಜೆಂಟ್ ಅಟ್ ಆರ್ಮ್ಸ್ ಬಿ. ಲಕ್ಷ್ಮೀಕಾಂತ ಮಡಿವಾಳ, ಚುನಾಯಿತ ಅಧ್ಯಕ್ಷ ರಾಮನಾಥ ಚಿತ್ತಾಲ್, ಉಪಾಧ್ಯಕ್ಷ ಉದಯಶಂಕರ ರಾವ್, ತರಬೇತುದಾರ ಎಚ್.ಗಣೇಶ ಕಾಮತ್, ಜೊತೆ ಕಾರ್ಯದರ್ಶಿ ಗೋಪಾಲ ಬಿಲ್ಲವ, ಖಜಾಂಚಿ ಜನಾರ್ದನ ಪೂಜಾರಿ ಪೆರಾಜೆ, ನಿರ್ದೇಶಕರಾಗಿ ರಾಮನಾಥ ಚಿತ್ತಾಲ್, ರಾಘವೇಂದ್ರ ಕುಲಾಲ್, ಕೆ.ರಾಮನಾಥ ನಾಯಕ್, ರಾಘವೇಂದ್ರ ವಿ.ಮೇಸ್ತ, ಸುಗುಣ ಆರ್.ಕೆ., ಚೇರ್ಮೆನ್ಗಳು ನಾರಾಯಣ ಈ.ನಾಯ್ಕ್, ಉಮೇಶ ಎಲ್.ಮೇಸ್ತ, ವಾಸುದೇವ ಶೇರುಗಾರ್, ಪ್ರದೀಪ್ ಡಿ.ಕೆ., ಟಿ.ದಿನಕರ ಶೆಣೈ, ಎಂ.ನಾಗೇಂದ್ರ ಪೈ ಪದಾಧಿಕಾರಿಗಳಾಗಿ ಆಯ್ಕೆಯಾಗಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕಲ್ಯಾಣ ಕ್ರಾಂತಿಯ ನಂತರ ನಶಿಸಿಹೋಗುತ್ತಿದ್ದ ಬಸವಣ್ಣ, ಅಲ್ಲಮಪ್ರಭು ಅಕ್ಕಮಹಾದೇವಿ ಸೇರಿದಂತೆ ಹಲವಾರು ಶರಣರು ರಚಿಸಿದ ಸಾವಿರಾರು ವಚನಗಳನ್ನು ಸಂಗ್ರಹಿಸಿ, ಸಂರಕ್ಷಿಸಿ, ಅವುಗಳನ್ನು ಮುದ್ರಿಸುವ ಮೂಲಕ ವಚನ ಸಾಹಿತ್ಯವೂ ಇಂದಿಗೂ ಜನಮಾನಸದಲ್ಲಿ ಉಳಿಯುವಂತೆ ಮಾಡಿದ ಫ.ಗು ಹಳಕಟ್ಟಿ ಅವರ ಶ್ರಮ ಅವಿರತವಾದುದು ಎಂದು ಕರಾವಳಿ ಅಬಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ ಗಫೂರ್ ಹೇಳಿದರು. ಅವರು ಗುರುವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಡಾ.ಫ.ಗು ಹಳಕಟ್ಟಿಯವರ ಜನ್ಮದಿನ – ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆಯನ್ನು ಉದ್ಘಾಟಿಸಿ, ಡಾ. ಫ.ಗು ಹಳಕಟ್ಟಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು. ವಚನ ಸಾಹಿತ್ಯ ಉಳಿದಾಗ ಸಮಾಜ ಉಳಿಯಲು ಸಾಧ್ಯ. ಶರಣರು ರಚಿಸಿದ ವಚನಗಳು ಅಂದಿನ ಕಾಲಘಟ್ಟದಲ್ಲಿ ಸಮಾಜದಲ್ಲಿ ಬೇರೂರಿದ್ದ ಸತಿಸಹಗಮನ ಪದ್ಧತಿ, ಅಸ್ಪೃಶ್ಯತೆ, ಜಾತಿ ಪದ್ಧತಿ ಸೇರಿದಂತೆ ಹಲವು ಮೌಢ್ಯಗಳನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೃಷಿ ಯಾಂತ್ರೀಕರಣ ಯೋಜನೆಯಡಿ ಕೃಷಿ ಯಂತ್ರೋಪಕರಣಗಳು ಲಭ್ಯವಿದ್ದು, ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ರೈತರು ಜಮೀನಿನ ಆರ್.ಟಿ.ಸಿ, ಆಧಾರ್ ಪ್ರತಿ, 2 ಪಾಸ್ ಪೋರ್ಟ್ ಸೈಜಿನ ಭಾವಚಿತ್ರ, ಬ್ಯಾಂಕ್ ಖಾತೆ ಪುಸ್ತಕದ ಪ್ರತಿ, ಪತ್ರ, ಪ.ಜಾ ಮತ್ತು ಪ.ಪಂ. ಇದ್ದಲ್ಲಿ ಪ್ರಮಾಣ ಪತ್ರ ಹಾಗೂ ರೂ. 100/- ಛಾಪಾ ಕಾಗದಗಳೊಂದಿಗೆ ಹತ್ತಿರದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ. ಸದ್ರಿ ಸೌಲಭ್ಯದ ಪ್ರಯೋಜನ ಪಡೆಯಲು ರೈತರು ಕಡ್ಡಾಯವಾಗಿ ಪ್ರೂಟ್ಸ್ ಐಡಿ ಯನ್ನು ಹೊಂದಿರಬೇಕು. ರೈತರು ಈಗಾಗಲೇ ಪ್ರೂಟ್ಸ್ ಐಡಿ ಯನ್ನು ಹೊಂದಿದ್ದಲ್ಲಿ ಅಥವಾ ಹೊಂದಿರದೆ ಇದ್ದಲ್ಲಿ ತಮ್ಮ ಎಲ್ಲಾ ಆರ್.ಟಿ.ಸಿ ಗಳನ್ನು ಪ್ರೂಟ್ಸ್ ಐಡಿಗೆ ಜೋಡಣೆ ಮಾಡಿಕೊಳ್ಳುವಂತೆ ಉಡುಪಿ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇತ್ತೀಚಿಗೆ ಶ್ರೀಲಂಕಾದ ಕೊಲಂಬೋದಲ್ಲಿ ನಡೆದ ಸಿಲೋನ್ ಮಾಸ್ಟರ್ಸ್ ಇಂಟರ್ನ್ಯಾಷನಲ್ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ 2026ರಲ್ಲಿ ಭಾರತ ದೇಶದಿಂದ ಪ್ರತಿನಿಧಿಸಿದ ಉಡುಪಿ ಜಿಲ್ಲೆಯ ಕೋಡಿ ಕನ್ಯಾಣದ ನಿವಾಸಿ, ನಂಜುಂಡ ಎಫ್.ಸಿ.ಎ. ಅವರು 60+ ವಯೋಮಿತಿ ವಿಭಾಗದ ಶಟಲ್ ಬ್ಯಾಡ್ಮಿಂಟನ್ ಡಬಲ್ಸ್ನಲ್ಲಿ ಚಾಂಪಿಯನ್ ಆಗಿ ಚಿನ್ನದ ಪದಕವನ್ನು ಪಡೆದು ಮತ್ತು ಮಿಕ್ಸೆಡ್ ಡಬಲ್ಸ್ನಲ್ಲಿ ಕಂಚಿನ ಪದಕವನ್ನು ಪಡೆದುಕೊಂಡಿದ್ದಾರೆ. ಕಳೆದ 30 ವರ್ಷಗಳಿಂದ ಬೆಂಗಳೂರಿನಲ್ಲಿ ನಂಜುಂಡ ಅಂಡ್ ಕಂಪನಿಯನ್ನು ಹುಟ್ಟು ಹಾಕಿ ಇದರ ಚಾರ್ಟರ್ಡ್ ಅಕೌಂಟೆಂಟ್ ಆಗಿ ಸೇವೆ ನಿರ್ವಹಿಸಿ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಮತ್ತು ರಾಜ್ಯದ ಸಾಕಷ್ಟು ಸಿಎ ಇಂಟರ್ಮೀಡಿಯಟ್, ಸಿಎ ಫೈನಲ್ ವಿದ್ಯಾರ್ಥಿಗಳಿಗೆ ಸರಿಯಾದ ಮಾರ್ಗದರ್ಶನ ನೀಡಿ ಅವರಿಗೆ ಉದ್ಯೋಗ ಕಲ್ಪಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (MAHE) ಮಣಿಪಾಲ ಇದರ ತಂತ್ರಜ್ಞಾನ ಹಾಗೂ ವಿಜ್ಞಾನ ವಿಭಾಗದ ಸಹ ಉಪ ಕುಲಪತಿಯಾಗಿ (Pro Vice Chancellor – Technology & Science) ಡಾ. ಕರುಣಾಕರ್ ಕೋಟೆಗಾರ್ ಅವರನ್ನು ನೇಮಕ ಮಾಡಲಾಗಿದೆ. ಮಣಿಪಾಲ ವಿಶ್ವವಿದ್ಯಾನಿಲಯ ಜೈಪುರದ ಪ್ರೋ-ಪ್ರೆಸಿಡೆಂಟ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಅವರು, 2026ರ ಜುಲೈ 01ರಿಂದ ಸಹ ಉಪ ಕುಲಪತಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಇದರೊಂದಿಗೆ ಮಣಿಪಾಲ್ ಸಮೂಹ ಸಂಸ್ಥೆಗಳ ಸಲಹಾ ಮಂಡಳಿಯಲ್ಲಿ ಸ್ಥಾನಪಡೆಯಲಿದ್ದಾರೆ. ಮಣಿಪಾಲ ವಿಶ್ವವಿದ್ಯಾನಿಲಯದ ಸಹ ಉಪ ಕುಲಪತಿಯಾಗಿ ನೇಮಕಗೊಂಡಿರುವ ಡಾ. ಕೋಟೆಗಾರ್ ಅವರು ಬೋಧನೆ, ಸಂಶೋಧನೆ ಮತ್ತು ಶೈಕ್ಷಣಿಕ ಆಡಳಿತದಲ್ಲಿ 29ಕ್ಕೂ ಹೆಚ್ಚು ವರ್ಷಗಳ ಸುದೀರ್ಘ ಅನುಭವವನ್ನು ಹೊಂದಿದ್ದಾರೆ. ಮಾರ್ಚ್ 1998 ರಿಂದ ಅವರು ಮಣಿಪಾಲ್ ಸಮೂಹ ಸಂಸ್ಥೆಗಳೊಂದಿಗೆ ಗುರುತಿಸಿಕೊಂಡಿದ್ದಾರೆ. ಎಂಐಟಿ ಮಣಿಪಾಲದ (MIT Manipal) ‘ಡೇಟಾ ಸೈನ್ಸ್ ಮತ್ತು ಕಂಪ್ಯೂಟರ್ ಅಪ್ಲಿಕೇಷನ್ಸ್’ ವಿಭಾಗದಲ್ಲಿ ಪ್ರೊಫೆಸರ್ ಆಗಿ ಹಾಗೂ ಮಾಹೆಯ (MAHE) ‘ಅಂತರರಾಷ್ಟ್ರೀಯ ಸಹಯೋಗ’ ವಿಭಾಗದ…
