Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಈ ಭಾರಿ ಮತ್ತೆ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ಸಿಗದ ಬಗ್ಗೆ ಬೇಸರವಿದೆ. ಸ್ಪರ್ಧಿಸಬೇಡಿ ಎಂದು ಮುಂಚಿತವಾಗಿ ತಿಳಿಸದಿರುವುದಕ್ಕೂ ನೋವಿದೆ. ಸದ್ಯ ಬಿಜೆಪಿ ಬಿಡುವ ಪ್ರಶ್ನೆಯೇ ಇಲ್ಲ. ಬೈಂದೂರು ಬಿಜೆಪಿ ಅಭ್ಯರ್ಥಿಯನ್ನು ಬೆಂಬಲಿಸುವ ಬಗ್ಗೆ ಇನ್ನೆರಡು ದಿನಗಳಲ್ಲಿ ನನ್ನ ನಿಲುವು ಸ್ಪಷ್ಟಪಡಿಸುತ್ತೇನೆ ಎಂದು ಬೈಂದೂರು ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಹೇಳಿದರು. ಅವರು ತಮ್ಮ ನಿವಾಸದಲ್ಲಿ ಆಯೋಜಿಸಲಾಗಿದ್ದ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ,ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ದೂರವಾಣಿ ಮೂಲಕ ದುಡುಕಿನ ನಿರ್ಧಾರಕ್ಕೆ ಬಾರದಂತೆ ಸಲಹೆ ನೀಡಿದ್ದಾರೆ. ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ತಮ್ಮೊಂದಿಗೆ ಬರುವಂತೆ ಆಹ್ವಾನಿಸಿದ್ದಾರೆ ಆದರೆ ಬಿಜೆಪಿ ತೊರೆಯಲ್ಲ ಎಂದು ಸ್ಪಷ್ಟಪಡಿಸಿದ್ದೇನೆ. ಯಡಿಯೂರಪ್ಪ ಅವರು ಮುಂದೆ ಉತ್ತಮ ಅವಕಾಶ ಸಿಗಲಿದ್ದು, ದುಡುಕಿ ನಿರ್ಧಾರ ಮಾಡದಂತೆ ಸಲಹೆ ಮಾಡಿದ್ದಾರೆ. ಬೈಂದೂರು ಅಭ್ಯರ್ಥಿ ಬಗ್ಗೆ ಅಸಮಾಧಾನವಿಲ್ಲ ಎಂದು ಹೇಳಿದರು. ತಾನು ಶಾಸಕನಾದ ಹೊಸತರಲ್ಲಿ ಕಾಂಗ್ರೆಸ್ ಜೆಡಿಎಸ್ ಸರ್ಕಾರವಿದ್ದು, ನಂತರ ಎರಡು ವರ್ಷ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮೂಡ್ಲಕಟ್ಟೆ ಐಎಂಜೆ ವಿದ್ಯಾಸಂಸ್ಥೆಯಲ್ಲಿ ಸಂಸ್ಥಾಪಕರ ದಿನಾಚರಣೆಯು ನಡೆಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಡಿವೈನ್ ಪಾರ್ಕ್ನ ಎಸ್ ಎಚ್ ಆರ್ ಎಫ್ ವಿಭಾಗದ ವೈದ್ಯಕೀಯ ನಿರ್ದೇಶಕರಾದ ಡಾ. ವಿವೇಕ್ ಎ. ಉಡುಪರವರು ಆಗಮಿಸಿದ್ದರು. ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದ ಅವರು ಐ.ಎಂ.ಜಯರಾಮ ಶೆಟ್ಟಿಯವರು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗಾಗಿ ಸ್ಥಾಪಿಸಿದ ಸಂಸ್ಥೆಯ ಉದ್ಧೇಶ ಇಡೇರುತ್ತಿದೆಯಲ್ಲದೆ. ಅವರ ಮಗನಾದ ಶ್ರೀ ಸಿದ್ಧಾರ್ಥ ಜೆ. ಶೆಟ್ಟಿಯವರು ಸಂಸ್ಥೆಯನ್ನು ಉನ್ನತಮಟ್ಟಕ್ಕೆ ಕೊಂಡೊಯ್ಯುತ್ತಿದ್ದಾರೆ ಎಂದು ತಿಳಿಸಿದರು. ಸಂಸ್ಥೆಯಲ್ಲಿ ಸಿಗುತ್ತಿರುವ ಮೌಲ್ಯಯುತ ಶಿಕ್ಷಣಕ್ಕಾಗಿ ಅವರು ಎಲ್ಲರನ್ನು ಅಭಿನಂದಿಸಿದರು. ಚಿಕ್ಕ ವಯಸ್ಸಿನಿಂದಲೂ ತಮಗೆ ಐ.ಎಂ.ಜಯರಾಮ ಶೆಟ್ಟಿಯವರು ಸ್ಪೂರ್ತಿ ಎಂದು ತಿಳಿಸಿದರು. ಐಎಂಜೆ ಸಂಸ್ಥೆಗಳ ನಿರ್ದೇಶಕರಾದ ದೋಮ ಚಂದ್ರಶೇಖರ್ರವರು ಮಾತನಾಡಿ ಸಂಸ್ಥಾಪಕರ ಸಾಧನೆಗಳ ಬಗ್ಗೆ ಒಂದು ಪುಸ್ತಕವನ್ನು ಬಿಡುಗಡೆ ಮಾಡುವುದು ಸೂಕ್ತ ಏಕೆಂದರೆ ಅದು ಯುವಜನತೆಗೆ ಸ್ಪೂರ್ತಿಯಾಗುತ್ತದೆ ಎಂದು ಅಭಿಪ್ರಾಯಪಟ್ಟರು. ಇದೇ ಸಂದರ್ಭದಲ್ಲಿ ಶ್ರೀದೇವಿ ಆಂಬುಲೆನ್ಸ್ ಸರ್ವಿಸ್, ಕುಂದಾಪುರದ ಶ್ರೀ ವಾಸುದೇವ ಹಂದೆ ಅವರಿಗೆ ಅವರ ನಿರಂತರ ಸಮಾಜ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಉಡುಪಿ ಲೋಕಾಯುಕ್ತ ಪೊಲೀಸ್ ಠಾಣಾ ವಿಭಾಗದ ವತಿಯಿಂದ ಬೈಂದೂರು ಆಡಳಿತ ಸೌಧದಲ್ಲಿ ಬುಧವಾರ ಬೈಂದೂರು ತಾಲೂಕು ವ್ಯಾಪ್ತಿಗೆ ಸಂಬಂಧಿಸಿದಂತೆ ಸಾರ್ವಜನಿಕ ಅಹವಾಲು ಸ್ವೀಕಾರ ಹಾಗೂ ಜನಸಂಪರ್ಕ ಸಭೆ ನಡೆಯಿತು. ಈ ವೇಳೆ ಉಡುಪಿ ವಿಭಾಗದ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕ ಕೆ.ಸಿ. ಪ್ರಕಾಶ್, ಸಾರ್ವಜನಿಕರ ದೂರಗಳ ಸ್ವೀಕರಿಸಿ ಮಾತನಾಡಿ ಸಾರ್ವಜನಿಕ ಕೆಲಸಗಳನ್ನು ನಿಗದಿತ ಕಾಲಮಿತಿಯಲ್ಲಿ ಮಾಡಿಕೊಡುವುದು ಅಧಿಕಾರಿಗಳ ಆದ್ಯ ಕರ್ತವ್ಯವಾಗಿದೆ. ಸರಿಯಾದ ಸಮಯಕ್ಕೆ ಸರಕಾರಿ ಅಧಿಕಾರಿಗಳಿಂದ ಕೆಲಸಗಳು ಆಗದಿದ್ದಾಗ ಸಹಜವಾಗಿ ಸಾರ್ವಜನಿಕರು ಸಿಟ್ಟುಗೇಳುತ್ತಾರೆ. ಇಂತಹ ಪರಿಸ್ಥಿತಿಯನ್ನು ಎದುರಿಸುವ ಬದಲಿಗೆ ಅವರಿಗೆ ತಿಳಿಹೇಳುವ ಹಾಗೂ ಸಕಾಲದಲ್ಲಿ ಯಾವುದೇ ಅಪೇಕ್ಷೆ ಇಲ್ಲದೇ ಕೆಲಸ ಮಾಡಿಕೊಡುವ ಮನೋಭಾವ ಮುಖ್ಯವಾಗಿದೆ ಎಂದರು. ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕ ಕೆ.ಸಿ. ಪ್ರಕಾಶ್, ಪೊಲೀಸ್ ನಿರೀಕ್ಷಕರಾದ ಜಯರಾಮ ಡಿ. ಗೌಡ ಮತ್ತು ರಫೀಕ್ ಎಂ ಸಾರ್ವಜನಿಕರ ದೂರುಗಳನ್ನು ಆಲಿಸಿದರು. ಈ ವೇಳೆ ತಹಶೀಲ್ದಾರ್ ಶ್ರೀಕಾಂತ್ ಹೆಗ್ಡೆ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಭಾರತಿ, ವೃತ್ತ ನಿರೀಕ್ಷಕ ಸಂತೋಷ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬಿಜೆಪಿ ಪಕ್ಷ ತನ್ನ ಎರಡನೇ ಪಟ್ಟಿ ಬಿಡುಗಡೆಗೊಳಿಸಿದ್ದು, ಬೈಂದೂರು ಕ್ಷೇತ್ರಕ್ಕೆ ಗುರುರಾಜ ಗಂಟಿಹೊಳೆ ಅವರನ್ನು ಅಭ್ಯರ್ಥಿಯಾಗಿ ಘೋಷಿಸಲಾಗಿದೆ. ಈ ಮೂಲಕ ಬೈಂದೂರು ಹಾಲಿ ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಅವರಿಗೆ ಟಿಕೆಟ್ ಮಿಸ್ ಆಗಿದೆ. ಬೈಂದೂರು ಬಿಜೆಪಿ ಅಭ್ಯರ್ಥಿ ಆಕಾಂಕ್ಷಿಗಳ ಪಟ್ಟಿಯಲ್ಲಿ ಹಲವು ಹೆಸರುಗಳಿದ್ದು ಭಾರಿ ಜಟಾಪಟಿ ಏರ್ಪಟ್ಟಿತ್ತು. ಮೊದಲ ಪಟ್ಟಿಯಲ್ಲಿ ಜಿಲ್ಲೆಯ ನಾಲ್ಕು ಕ್ಷೇತ್ರಗಳಿಗೆ ಮಾತ್ರ ಅಭ್ಯರ್ಥಿ ಅಂತಿಮಗೊಳಿಸಲು ಸಾಧ್ಯವಾಗಿತ್ತು. ಕೊನೆಗೂ ಕಗ್ಗಂಟಾಗಿದ್ದ ಬೈಂದೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹೆಸರು ಘೋಷಣೆಯಾಗಿದ್ದು, ಚುನಾವಣಾ ಕಣ ರಂಗೇರಲಿದೆ. ಟಿಕೆಟ್ ಘೋಷಣೆಯಾಗುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ಹರ್ಷ ವ್ಯಕ್ತಪಡಿಸಿದ್ದು, ಸೋಶಿಯಲ್ ಮೀಡಿಯಾಗಳಲ್ಲಿ ಬಡವರ ಮನೆ ಹುಡುಗನಿಗೆ ಟಿಕೆಟ್‍ ದೊರೆತಿದೆ ಎಂದು ಸಂದೇಶದೊಂದಿಗಿನ ಪೋಸ್ಟ್ ವೈರಲ್ ಆಗುತ್ತಿದೆ. ಬೈಂದೂರು ಕ್ಷೇತ್ರದಲ್ಲಿ ಕಳೆದ ಎರಡೂವರೆ ದಶಕಗಳಿಂದಲೂ ರಾಷ್ಟ್ರೀಯ ಪಕ್ಷಗಳ ನಡುವೆ ಹಣಾಹಣಿ ನಡೆಯುತ್ತಿದ್ದು, ಈ ಭಾರಿಯೂ ಕಾಂಗ್ರೆಸ್ ಪಕ್ಷದ ಕೆ. ಗೋಪಾಲ ಪೂಜಾರಿ ಹಾಗೂ ಬಿಜೆಪಿ ಪಕ್ಷದ ಗುರುರಾಜ ಗಂಟಿಹೊಳೆ ಅವರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಾಜ್ಯ ವಿಧಾನಸಭಾ ಚುನಾವಣೆಗೆ ಸರ್ವ ತಯಾರಿಗಳು ನಡೆಯುತ್ತಿದ್ದು, ಈ ನಡುವೆ ಬಿಜೆಪಿ ಪಕ್ಷ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆಗೊಳಿಸಿದೆ. ಈ ಪೈಕಿ ಉಡುಪಿ ಜಿಲ್ಲೆಯ 5 ಕ್ಷೇತ್ರಗಳ ಪೈಕಿ ಬೈಂದೂರು ಕ್ಷೇತ್ರ ಹೊರತುಪಡಿಸಿ ಉಳಿದ ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಣೆ ಮಾಡಿದೆ. ಕುಂದಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಕಿರಣ್ ಕುಮಾರ್ ಕೊಡ್ಗಿ, ಕಾರ್ಕಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ವಿ. ಸುನಿಲ್ ಕುಮಾರ್, ಉಡುಪಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಯಶಪಾಲ್ ಸುವರ್ಣ, ಕಾಪು ವಿಧಾನಸಭಾ ಕ್ಷೇತ್ರದ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಸುರೇಶ್ ಶೆಟ್ಟಿ ಗುರ್ಮೆ ಅವರನ್ನು ಕಣಕ್ಕಿಳಿಸಲಾಗುತ್ತಿದೆ. ಬೈಂದೂರು ಹಾಲಿ ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ, ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ಉಡುಪಿಯ ರಘುಪತಿ ಭಟ್ ಹಾಗೂ ಕಾಪುವಿನ ಲಾಲಾಜಿ ಆರ್. ಮೆಂಡನ್ ಅವರಿಗೆ ಟಿಕೆಟ್ ಮಿಸ್ ಆಗಿದೆ. ರಾಜ್ಯ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್‌ ಹಾಗೂ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಅವರಿಗೆ ಈ ಭಾರಿ ಬಿಜೆಪಿಯಿಂದ ಸ್ಪರ್ಧಿಸಲು ಟಿಕೆಟ್ ನಿರಾಕರಿಸಲಾಗಿದೆ. ಪಕ್ಷದ ವರಿಷ್ಠರು ಹಾಲಿ ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಅವರಿಗೆ ಪೋನ್ ಮೂಲಕ ಸಂಪರ್ಕಿಸಿದ್ದು, ಈ ಭಾರಿ ತಮಗೆ ಟಿಕೆಟ್ ನೀಡಲಾಗುತ್ತಿಲ್ಲ. ಹೊಸ ಅಭ್ಯರ್ಥಿಗೆ ಬೆಂಬಲ ನೀಡುವಂತೆ ಸೂಚಿಸಿದ್ದಾರೆ. /ಕುಂದಾಪ್ರ ಡಾಟ್ ಕಾಂ ಸುದ್ದಿ/ ಸುಕುಮಾರ ಶೆಟ್ಟಿ ಅವರು ಟಿಕೆಟ್ ವಂಚಿತರಾಗಿರುವ ವಿಚಾರ ತಿಳಿಯುತ್ತಿದ್ದಂತೆ ಸುಕುಮಾರ ಶೆಟ್ಟಿ ಅವರ ನಿವಾಸಕ್ಕೆ ಅವರ ಅಭಿಮಾನಿಗಳು ತೆರಳಿ ಬಿಜೆಪಿ ಪಕ್ಷದ ವರಿಷ್ಠರ ನಡೆಯ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ. ಬೈಂದೂರು ಬಿಜೆಪಿ ಪಕ್ಷದ ಪ್ರಮುಖರ ಭೇಟಿ ನೀಡಿದ್ದಾರೆ ಎನ್ನಲಾಗಿದೆ. ಬೈಂದೂರು ಬಿಜೆಪಿಯಿಂದ ಎರಡು ಅವಧಿಗೆ ಸ್ಪರ್ಧಿಸಿದ್ದ ಸುಕುಮಾರ ಶೆಟ್ಟಿ ಅವರು ಒಂದು ಭಾರಿ ಸೋತು, ಎರಡನೇ ದೊಡ್ಡ ಅಂತರದಿಂದಲೇ ಗೆಲುವ ಸಾಧಿಸಿದ್ದರು. ಅವರ ಅವಧಿಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳೂ ಕಾರ್ಯಗಳು ನಡೆದಿದ್ದವು. ಸುಕುಮಾರ ಶೆಟ್ಟು ಪಕ್ಷದ ಕಾರ್ಯಕರ್ತರೊಂದಿಗೆ ಹೊಂದಿದ್ದ ಸಂಘರ್ಷ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ಬಿಜೆಪಿ ಪಕ್ಷದ ಎಂಎಲ್‌ಎ ಟಿಕೆಟ್ ಅಕಾಂಕ್ಷಿ ಆಗಿರುವ ಹಿರಿಯ ಮುಖಂಡ ಕೆ. ಬಾಬು ಶೆಟ್ಟಿ ಅವರಿಗೆ ಟಿಕೆಟ್ ದೊರೆಯುವ ಸಾಧ್ಯತೆ ಇದೆ ಎಂಬ ಮಾಹಿತಿ ಎಲ್ಲೆಡೆ ಹರಿದಾಡಿದ್ದು, ಮಂಗಳವಾರ ಬಿಜೆಪಿ ಕಾರ್ಯಕರ್ತರು ನೂರಾರು ಸಂಖ್ಯೆಯಲ್ಲಿ ಜಮಾಯಿಸಿ ಬೆಂಬಲ ವ್ಯಕ್ತಪಡಿಸಿದ ಘಟನೆ ನಡೆದಿದೆ. ಬೆಳಿಗ್ಗೆಯೇ ಅವರ ಮನೆಯ ಮುಂದೆ ನೆರೆದಿದ್ದ ಕಾರ್ಯಕರ್ತರನ್ನು ಉದ್ದೇಶಿಸಿ ಟಿಕೆಟ್ ಆಕಾಂಕ್ಷಿ ಕೆ. ಬಾಬು ಶೆಟ್ಟಿ ಅವರು ಮಾತನಾಡಿ, ಪಕ್ಷದಕ್ಕಾಗಿ ಮೂರು ದಶಕಗಳಿಂದ ದುಡಿಯುತ್ತಿರುವ ನಾನು ಟಿಕೆಟ್‌ಗಾಗಿ ಬೇಡಿಕೆ ಇರಿಸಿದ್ದೇನೆ. ಅದಕ್ಕೆ ತಕ್ಕಂತೆ ನಮಗೆ ಟಿಕೆಟ್ ದೊರೆಯುವ ಸಾಧ್ಯತೆ ಇದೆ ಎಂಬ ಮಾಹಿತಿಗಳು ಬರುತ್ತಿದೆ. ಏನೇ ಆದರೂ ಪಕ್ಷದ ಗೆಲುವಿಗಾಗಿ ಶ್ರಮಿಸೋಣ ಎಂದರು. ಈ ವೇಳೆ ಉಪಸ್ಥಿತರಿದ್ದ ಹಿರಿಯ ಮುಖಂಡ ಕೆ. ನಾರಾಯಣ ಹೆಗ್ಡೆ, ಸದಾಶಿವ ಪಡುವರಿ, ಮಹೇಂದ್ರ ಪೂಜಾರಿ ನಾವುಂದ, ಪುಪ್ಪರಾಜ್ ಶೆಟ್ಟಿ ಶಿರೂರು, ಪ್ರವೀಣಕುಮಾರ್ ಶೆಟ್ಟಿ ಕಡ್ಕೆ ಮೊದಲಾದವರು ಒಮ್ಮತದ ಅಭಿಪ್ರಾಯ ವ್ಯಕ್ತಪಡಿಸಿ, ಬಾಬು ಶೆಟ್ಟಿ ಅವರಿಗೆ ಈ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬೈಂದೂರು ವಿಧಾನಸಭಾ ಕ್ಷೇತ್ರದ ಗಡಿಭಾಗದಲ್ಲಿ ಒಟ್ಟು ಮೂರು ಚೆಕ್ ಪೋಸ್ಟ್ ಇದ್ದು, ಪೊಲೀಸ್ ಸಿಬ್ಬಂದಿಗಳು ಹಾಗೂ ಪ್ಯಾರಾ ಮಿಲಿಟರಿ ಸಿಬ್ಬಂದಿ 3 ಪಾಳಿಯಲ್ಲಿ ದಿನವಿಡಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೈಂದೂರು ಚುನಾವಣಾಧಿಕಾರಿ ಗಂಗಣ್ಣನವರರ್ ರಾತ್ರಿ ವೇಳೆಯಲ್ಲಿ ಕೊಲ್ಲೂರು ದಳಿ ಹಾಗೂ ಶಿರೂರು ಚೆಕ್ ಪೊಸ್ಟಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶಿರೂರು ರಾಷ್ಟ್ರೀಯ ಹೆದ್ದಾರಿ 66, ಕೊಲ್ಲೂರು ದಳಿಯ ರಾಷ್ಟ್ರೀಯ ಹೆದ್ದಾರಿ 766ಸಿ ಹಾಗೂ ಹೊಸಂಗಡಿ ರಾಜ್ಯ ಹೆದ್ದಾರಿಯಲ್ಲಿ ಚೆಕ್ ಪೋಸ್ಟ್ ಇದ್ದು, ಈ ಮಾರ್ಗದಲ್ಲಿ ಸಂಚರಿಸುವ ವಾಹನಗಳನ್ನು ತಪಾಸಣೆ ನಡೆಸಲಾಗುತ್ತಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಎಲ್ಲಾ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು, ಸಮರ್ಪಕ ನೀರಿನ ವ್ಯವಸ್ಥೆ ಮಾಡುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಸೂಚನೆ ನೀಡಿದರು. ಅವರು ಕುಂದಾಪುರ ತಾಲೂಕು ಪಂಚಾಯತ್ ಸಭಾಂಗಣದಲ್ಲಿ, ಕುಂದಾಪುರ ಮತ್ತು ಬೈಂದೂರು ವ್ಯಾಪ್ತಿಯಲ್ಲಿ ಕುಡಿಯುವ ನೀರು ಪೂರೈಕೆ ಕುರಿತಂತೆ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಲಭ್ಯವಿರುವ ನೀರಿನ ಲಭ್ಯತೆ, ಟ್ಯಾಂಕರ್ ಮೂಲಕ ನೀರು ನೀಡಲು ಅಗತ್ಯವಿರುವ ಕುಟುಂಬಗಳ ಸಂಖ್ಯೆಯನ್ನು ನಿಖರವಾಗಿ ತಿಳಿದುಕೊಂಡು, ಪಿಡಿಓ ಗಳು ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಇಂಜಿನಿಯರ್ ಗಳನ್ನು ಗ್ರಾಮ ಪಂಚಾಯತ್‌ವಾರು ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು. ಪ್ರಸಕ್ತ ಸಾಲಿನಲ್ಲಿ ಇದುವರೆಗೂ ಮಳೆಯಾಗದಿರುವ ಕಾರಣ ಮುಂದಿನ ಎರಡು ತಿಂಗಳುಗಳನ್ನು ಗಮನದಲ್ಲಿಟ್ಟುಕೊಂಡು,ನೀರಿನ ಸಮರ್ಪಕ ಪೂರೈಕೆಗೆ, ಲಭ್ಯವಿರುವ ನೀರಿನ ಮೂಲಗಳು ಮತ್ತು ಪರ್ಯಾಯ ಮೂಲಗಳ ಬಗ್ಗೆ ಕ್ರಮವಹಿಸಲು ತಿಳಿಸಿದರು. ಚುನಾವಣೆ ಸಂದರ್ಭದಲ್ಲಿ ಮತಗಟ್ಟೆಗಳಿಗೆ ಆಗಮಿಸುವ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕಲೆ – ಕಲಾವಿದರಿಗೆ ಪ್ರೋತ್ಸಾಹ ಸಮಾಜದ ಆದ್ಯ ಕರ್ತವ್ಯವಾಗಬೇಕು ಎಂದು ಕರ್ನಾಟಕ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ಇಲ್ಲಿನ ಶಾಸರದ ವೇದಿಕೆಯಲ್ಲಿ ಸುರಭಿ ರಿ. ಬೈಂದೂರು ಆಶ್ರಯದಲ್ಲಿ ಆಯೋಜಿಸಲಾದ 3 ದಿನಗಳ ಸುರಭಿ ಜೈಸಿರಿ ಕಾರ್ಯಕ್ರಮದ ಸಮಾರೋಪದಲ್ಲಿ ಉಪ್ಪಿನಕುದ್ರು ಗೊಂಬೆಯಾಟದ ಸೂತ್ರಧಾರ ಭಾಸ್ಕರ ಕೊಗ್ಗ ಕಾಮತ್ ಅವರಿಗೆ ಬಿಂದುಶ್ರೀ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು. ಬಹಳಷ್ಟು ಜಾನಪದ ಕಲೆಗಳು ಇಂದು ಅವಸಾನದಂಚಿನಲ್ಲಿವೆ. ಸಮಾಜ, ಸರಕಾರದ ಪ್ರೋತ್ಸಾಹದ ಕೊರತೆಯಿಂದ ಹಾಗಾಗಿದೆ. ಹೊಸ ಪೀಳಿಗೆಗೆ ಅವುಗಳನ್ನು ಪರಿಚಯಿಸುವ ಕಾರ್ಯ ನಡೆಯಬೇಕು. ಯಕ್ಷಗಾನ ಗೊಂಬೆಯಾಟದ ಸೊಗಡನ್ನು ವಿಶ್ವದೆಲ್ಲೆಡೆ ಪಸರಿಸಿದ ಕೊಗ್ಗ ಕಾಮತ್ ಹಾದಿಯಲ್ಲಿ ಅವರ ಮಗ ಭಾಸ್ಕರ ಕೊಗ್ಗ ಕಾಮತ್ ಹೆಜ್ಜೆ ಹಾಕಿರುವುದು ಕಲೆಯ ಉಳಿವಿನ ದೃಷ್ಟಿಯಿಂದ ಶ್ಲಾಘನೀಯ ಎಂದರು. ಪ್ರಶಸ್ತಿ ಸ್ವೀಕರಿಸಿದ ಭಾಸ್ಕರ ಕೊಗ್ಗ ಕಾಮತ್ ಅವರು ಮಾತನಾಡಿ ಜಾನಪದ ಕಲೆಗಳು ಉಳಿದರೆ ಉತ್ತಮ ಸಮಾಜದ ನಿರ್ಮಾಣ ಸಾಧ್ಯ. ಜನರ ಸಹಕಾರದಿಂದ…

Read More