ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸ್ಕೂಟರ್‌ಗೆ ಕಾರು ಢಿಕ್ಕಿಯಾಗಿ ಸವಾರ ಗಾಯಗೊಂಡ ಘಟನೆ ಇಲ್ಲಿನ ಕಸಬಾ ಗ್ರಾಮದ ಆಭರಣ ಜ್ಯುವೆಲ್ಲರ್ ಶಾಫ್ ಹತ್ತಿರ, ಪ್ರಭಾತ್ ಟ್ರೇಡರ್ಸ್ ಶಾಪ್ ಎದುರುಗಡೆ ಪುರಸಭಾ ರಸ್ತೆಯಲ್ಲಿ ಮಂಗಳವಾರ ಬೆಳಗ್ಗೆ ಸಂಭವಿಸಿದೆ. ಗಾಯಗೊಂಡ ವ್ಯಕ್ತಿ ಕೆ. ವೆಂಕಟರಮಣ ಶೆಣೈ ಎಂದು ಗುರುತಿಸಲಾಗಿದೆ. ರಸ್ತೆ ಬದಿ ನಿಲ್ಲಿಸಿದ್ದ ಕಾರನ್ನು ಚಾಲಕ ವಿಶ್ವೇಶ್ ಯಾವುದೇ ಸೂಚನೆ ನೀಡದೆ ವೇಗ ಹಾಗೂ ನಿರ್ಲಕ್ಷ್ಯತನದಿಂದ ಮುಂದಕ್ಕೆ ಚಲಾಯಿಸಿ ವೆಂಕಟರಮಣ ಶೆಣೈ ಅವರಿಗೆ ಹಿಂದಿನಿಂದ ಢಿಕ್ಕಿ ಹೊಡೆದಿದ್ದಾರೆ. ಇದರ ಪರಿಣಾಮ ಅವರಿಗೆ ಎಡಕಾಲಿನ ಮುಂಗಾಲು ಗಂಟಿಗೆ ಒಳ ಜಕಂ ಹಾಗೂ ಪಾದದ ಬಳಿ ತರಚಿದ ಗಾಯವಾಗಿದೆ. ಗಾಯಗೊಂಡ ಅವರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಮುಂಗಾರು ಹಂಗಾಮಿಗೆ ಮುಖ್ಯ ಬೆಳೆಯಾದ ಮಳೆಯಾಶ್ರಿತ ಭತ್ತವನ್ನು ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಬೆಳೆ ವಿಮೆ ಯೋಜನೆಯಡಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಕಚೇರಿಗಳಲ್ಲಿ ಹಾಗೂ ಸ್ಥಳಿಯಾಡಳಿತ ಸಂಸ್ಥೆಗಳಲ್ಲಿ ವಿಮಾ ಮೊತ್ತ ಪ್ರತಿ ಹೆಕ್ಟೇರ್‌ಗೆ 75,600 ರೂ. ಗಳಂತೆ ವಿಮಾ ಕಂತಿನ ದರವನ್ನು ಪ್ರತಿ ಹೆ.ಗೆ 1512 (2%) ರೂ. ಗಳಂತೆ ನಿಗಧಿಪಡಿಸಿದ್ದು, ನೋಂದಣಿಗಾಗಿ ಅಧಿಸೂಚಿಸಲಾಗಿರುತ್ತದೆ. ರೈತರು ಬೆಳೆ ವಿಮೆ ಯೋಜನೆಯಡಿ ನೋಂದಣಿ ಮಾಡಿಕೊಳ್ಳಲು ಜುಲೈ 31 ಕೊನೆ ದಿನವಾಗಿರುತ್ತದೆ. ಬೆಳೆ ಸಾಲ ಪಡೆಯದ ರೈತರು ಪಹಣಿ ಪತ್ರ, ಖಾತೆ ಪಾಸ್ ಪುಸ್ತಕ/ಬ್ಯಾಂಕ್ ಪಾಸ್ ಪುಸ್ತಕ, ಕಂದಾಯ ರಸೀದಿ ಮತ್ತು ಆಧಾರ್ ಸಂಖ್ಯೆಗಳನ್ನು ಒದಗಿಸಿ ವಾಣಿಜ್ಯ ಬ್ಯಾಂಕ್‌ಗಳು ಅಥವಾ ಗ್ರಾಮೀಣ ಮಟ್ಟದ ವ್ಯವಸಾಯ ಸೇವಾ ಸಹಕಾರ ಸಂಘಗಳು, ಸಾರ್ವಜನಿಕ ಸೇವಾ ಕೇಂದ್ರ, ಗ್ರಾಮ ಒನ್ ಮತ್ತು ವಿಮಾ ಸಂಸ್ಥೆಗಳನ್ನು ಸಂಪರ್ಕಿಸಿ, ಬೆಳೆ ವಿಮೆಗೆ ನೋಂದಾಯಿಸಿಕೊಳ್ಳಬಹುದಾಗಿದೆ. ಅಧಿಸೂಚಿತ ಘಟಕದಲ್ಲಿ ಬೆಳೆ ವಿಮಾ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಎಂಬಿಎ ವಿಭಾಗದ ವತಿಯಿಂದ ಒಂದು ದಿನದ ಇಂಡಸ್ಟ್ರಿಯಲ್ ವಿಸಿಟ್ ಕೈಗೊಳ್ಳಲಾಯಿತು. ಈ ಪ್ರಯುಕ್ತ ಸ್ಥಳೀಯ ACEBOND ಕೈಗಾರಿಕೆಗೆ ಭೇಟಿ ನೀಡಿದರು. ಈ ಭೇಟಿಯ ವಿದ್ಯಾರ್ಥಿಗಳಿಗೆ ಕೈಗಾರಿಕಾ ಕಾರ್ಯ ವೈಖರಿ ಹಾಗೂ ನಿರ್ವಹಣಾ ಪದ್ಧತಿಗಳ ಬಗ್ಗೆ ಪ್ರಾಯೋಗಿಕ ಜ್ಞಾನ ಪಡೆದುಕೊಂಡರು .ಭೇಟಿಯ ವೇಳೆ ವಿದ್ಯಾರ್ಥಿಗಳು ಉತ್ಪಾದನಾ ಪ್ರಕ್ರಿಯೆ, ಗುಣಮಟ್ಟ ನಿಯಂತ್ರಣ, ಮಾನವ ಸಂಪನ್ಮೂಲ ನಿರ್ವಹಣೆ, ಮಾರುಕಟ್ಟೆ ತಂತ್ರಗಳು ಹಾಗೂ ಹಣಕಾಸು ನಿರ್ವಹಣೆಯ ಕುರಿತು ಕಂಪನಿಯ ಅಧಿಕಾರಿಗಳಿಂದ ಮಾಹಿತಿ ಪಡೆದರು. ಕಂಪನಿಯ ವಿವಿಧ ವಿಭಾಗಗಳನ್ನು ವೀಕ್ಷಿಸಿದ ವಿದ್ಯಾರ್ಥಿಗಳು ಕೈಗಾರಿಕಾ ಕಾರ್ಯಾಚರಣೆಯ ನೈಜ ಅನುಭವವನ್ನು ಪಡೆದರು.ಕಂಪನಿಯ ಅಧಿಕಾರಿಗಳು ವಿದ್ಯಾರ್ಥಿಗಳಿಗೆ ಕೈಗಾರಿಕಾ ಕ್ಷೇತ್ರದಲ್ಲಿನ ಅವಕಾಶಗಳು, ಸವಾಲುಗಳು ಹಾಗೂ ವೃತ್ತಿ ಬೆಳವಣಿಗೆಯ ಕುರಿತು ಮಾರ್ಗದರ್ಶನ ನೀಡಿದರು. ವಿದ್ಯಾರ್ಥಿಗಳು ತಮ್ಮ ಸಂದೇಹಗಳನ್ನು ನಿವಾರಿಸಿಕೊಂಡು, ನಿರ್ವಹಣಾ ಶಿಕ್ಷಣದೊಂದಿಗೆ ಪ್ರಾಯೋಗಿಕ ಅನುಭವದ ಮಹತ್ವವನ್ನು ಅರಿತುಕೊಂಡರು.ಈ ಕೈಗಾರಿಕಾ ಭೇಟಿಯು ವಿದ್ಯಾರ್ಥಿಗಳ ಶೈಕ್ಷಣಿಕ ಜ್ಞಾನವನ್ನು ವಿಸ್ತರಿಸುವುದರ ಜೊತೆಗೆ ಕೈಗಾರಿಕಾ ಕ್ಷೇತ್ರದ ಬಗ್ಗೆ ಹೆಚ್ಚಿನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜಿನ ವಿದ್ಯಾರ್ಥಿ ಡಾ. ಪ್ರಣೀಲ್ ರೋಡ್ರಿಗಸ್ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯದ ಘಟಿಕೋತ್ಸವದಲ್ಲಿ ಎರಡು ಪ್ರತಿಷ್ಠಿತ ಚಿನ್ನದ ಪದಕಗಳನ್ನು ಮುಡಿಗೇರಿಸಿಕೊಂಡು ಶೈಕ್ಷಣಿಕ ಕ್ಷೇತ್ರದಲ್ಲಿ ಅಪೂರ್ವ ಸಾಧನೆ ಮೆರೆದಿದ್ದಾರೆ. ಪ್ರಥಮ ವರ್ಷದಿಂದ ಅಂತಿಮ ವರ್ಷದವರೆಗೆ ಅತ್ಯುತ್ತಮ ಶೈಕ್ಷಣಿಕ ಸಾಧನೆ ದಾಖಲಿಸಿ ವಿಶ್ವವಿದ್ಯಾನಿಲಯದಲ್ಲಿ ಪ್ರಥಮ ರ‍್ಯಾಂಕ್ ಗಳಿಸಿದ ಹಿನ್ನೆಲೆಯಲ್ಲಿ ಸೀತಾರಾಂ ಜಿಂದಾಲ್ ಸಂಸ್ಥೆ ನೀಡುವ ‘ಸೀತಾರಾಂ ಜಿಂದಾಲ್ ಚಿನ್ನದ ಪದಕ’ ಅವರಿಗೆ ಲಭಿಸಿದೆ. ಜೊತೆಗೆ, ಆಯುಷ್ ವಿಭಾಗದಲ್ಲಿ ಅತ್ಯಧಿಕ ಅಂಕಗಳನ್ನು ಗಳಿಸಿ ವಿಶ್ವವಿದ್ಯಾನಿಲಯದಲ್ಲಿ ಪ್ರಥಮ ಸ್ಥಾನ ಪಡೆದ ಸಾಧನೆಗಾಗಿ ಮತ್ತೊಂದು ಚಿನ್ನದ ಪದಕಕ್ಕೂ ಭಾಜನರಾಗಿದ್ದಾರೆ. ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯದ ಘಟಿಕೋತ್ಸವ ಸಮಾರಂಭದಲ್ಲಿ ರಾಜ್ಯದ ಮಾನ್ಯ ಮುಖ್ಯಮಂತ್ರಿಗಳಿಂದ ಈ ಎರಡೂ ಪ್ರತಿಷ್ಠಿತ ಚಿನ್ನದ ಪದಕಗಳನ್ನು ಸ್ವೀಕರಿಸುವ ಮೂಲಕ ಡಾ. ಪ್ರಣೀಲ್ ರೋಡ್ರಿಗಸ್ ಮತ್ತೊಂದು ಮಹತ್ವದ ಗೌರವಕ್ಕೆ ಪಾತ್ರರಾಗಿದ್ದಾರೆ. ಉಡುಪಿ ಮೂಲದ ಪ್ರೇಮಿಲ್ ರೋಡ್ರಿಗಸ್ ಮತ್ತು ಮೆಲ್ವಿನ್ ರೋಡ್ರಿಗಸ್ ದಂಪತಿಯ ಏಕೈಕ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣಾ ಪ್ರಕ್ರಿಯೆಯಲ್ಲಿ ಹೊಸ ಮತದಾರರ ಪಟ್ಟಿಯನ್ನು ತಯಾರಿಸಲಾಗುತ್ತಿದ್ದು, ಈ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬ ಅರ್ಹ ಮತದಾರರು ಭಾಗವಹಿಸಿ, ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ನೋಂದಾಯಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಕರೆ ನೀಡಿದರು. ಅವರು ಮಂಗಳವಾರ ಕುಂದಾಪುರದ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ 2026 ರ ಸಂಬಂಧ ಕುಂದಾಪುರ ವಿಧಾನಸಭಾ ಕ್ಷೇತ್ರದ ಚುನಾಯಿತ ಜನಪ್ರತಿನಿಧಿಗಳು, ಮೇಲ್ವಿಚಾರಕರು, ಮತಗಟ್ಟೆ ಅಧಿಕಾರಿಗಳು ಹಾಗೂ ಮತಗಟ್ಟೆ ಏಜೆಂಟ್ ಅವರಿಗೆ ಆಯೋಜಿಸಿದ್ದ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಪ್ರಜಾ ಪ್ರಾತಿನಿದ್ಯ ಕಾಯ್ದೆ ಅಡಿಯಲ್ಲಿ ಮತದಾರರ ಪಟ್ಟಿ ತಯಾರಿಸುವುದು ಸಂವಿಧಾನಾತ್ಮಕ ಕರ್ತವ್ಯ. ಈ ನಿಟ್ಟಿನಲ್ಲಿ ದೇಶದಾದ್ಯಂತ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ರಮವು ನಡೆಯುತ್ತಿದೆ. 2025 ರ ಮತದಾರರ ಪಟ್ಟಿಯಲ್ಲಿರುವ ಹೆಸರುಗಳಿಗೆ ಸಂಬಂಧಿಸಿದಂತೆ 2002 ರಲ್ಲಿರುವ ಮತದಾರರ ಪಟ್ಟಿಯ ಮತದಾರರ ಕುಟುಂಬದ ಸಂತತಿಗಳಿಗೆ ಮ್ಯಾಪಿಂಗ್ ಮಾಡಿ ಲಿಂಕ್ ಮಾಡಲಾಗುತ್ತಿರುವುದರಿಂದ ಯಾವ ಅರ್ಹ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿಯ ಶ್ರೀ ನಾರಾಯಣ ಗುರು ಜನ ಸೇವಾ ಬಳಗದ ವತಿಯಿಂದ ಇಲ್ಲಿನ ಮ್ಯಾಂಗನೀಸ್ ರಸ್ತೆಯ ಅಂಗನವಾಡಿ ಕೇಂದ್ರಕ್ಕೆ ಸೀಲಿಂಗ್ ಫ್ಯಾನ್ ಮತ್ತು ಮಕ್ಕಳಿಗೆ ಕಲಿಕೆಯ ಪರಿಕರಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಶ್ರೀ ನಾರಾಯಣ ಗುರು ಜನಸೇವಾ ಬಳಗದ ಅಧ್ಯಕ್ಷ ಗೋಪಾಲ ಪೂಜಾರಿ, ಉಪಾಧ್ಯಕ್ಷೆ ಮಮತಾ ಪೂಜಾರಿ, ಪ್ರಧಾನ ಕಾರ್ಯದರ್ಶಿ ಹರ್ಷೇಂದ್ರ ಆಚಾರ್ಯ, ನಾಗಭೂಷಣ ಶೇಟ್, ನರೇಂದ್ರ ಎಸ್ ಗಂಗೊಳ್ಳಿ ಮತ್ತು ಅಂಗನವಾಡಿ ಕೇಂದ್ರದ ಸಹಾಯಕಿ ಸೀಮಾ ಖಾರ್ವಿ ಮೊದಲಾದವರು ಉಪಸ್ಥಿತರಿದ್ದರು. ಅಂಗನವಾಡಿ ಶಿಕ್ಷಕಿ ಸಂಗೀತ ಶುಭ ಹಾರೈಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನಲ್ಲಿ ಸೋಮವಾರ ಕುಂದಾಪುರದ ಸರ್ಕಾರಿ ತಾಲ್ಲೂಕು ಆಯುಷ್ ಆಸ್ಪತ್ರೆಯ ಸಹಯೋಗದೊಂದಿಗೆ ಕಾಲೇಜು ಸಭಾಂಗಣದಲ್ಲಿ ಅಂತರಾಷ್ಟ್ರೀಯ ಯೋಗ ದಿನವನ್ನು ಆಚರಿಸಿತು. ದೈಹಿಕ, ಮಾನಸಿಕ ಮತ್ತು ಭಾವನಾತ್ಮಕ ಯೋಗಕ್ಷೇಮವನ್ನು ಕಾಪಾಡಿಕೊಳ್ಳಲು ಯೋಗದ ಮಹತ್ವವನ್ನು ಉತ್ತೇಜಿಸಲು ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮವು ಗಣ್ಯರನ್ನು ಆತ್ಮೀಯವಾಗಿ ಸ್ವಾಗತಿಸುವುದರೊಂದಿಗೆ ಪ್ರಾರಂಭವಾಯಿತು. ಕುಂದಾಪುರದ ಸರ್ಕಾರಿ ತಾಲ್ಲೂಕು ಆಯುಷ್ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಶಿಲ್ಪಾ ಕೆ. ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು ಮತ್ತು ಪ್ರಾಂಶುಪಾಲರಾದ ಜೆನ್ನಿಫರ್ ಫ್ರೀಡಾ ಮೆನೆಜಸ್, ಉಪ ಪ್ರಾಂಶುಪಾಲರಾದ ರೂಪಶ್ರೀ ಕೆ. ಎಸ್, ಬೋಧಕ, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಡಾ. ಶಿಲ್ಪಾ ಕೆ. ಸಭೆಯನ್ನುದ್ದೇಶಿಸಿ ಮಾತನಾಡಿದರು ಮತ್ತು ಆರೋಗ್ಯಕರ ಜೀವನಶೈಲಿಯನ್ನು ಮುನ್ನಡೆಸುವಲ್ಲಿ ಯೋಗದ ಮಹತ್ವವನ್ನು ಎತ್ತಿ ತೋರಿಸಿದರು. ದೈಹಿಕ ಸದೃಢತೆ, ಮಾನಸಿಕ ಶಾಂತಿ ಮತ್ತು ಒಟ್ಟಾರೆ ಯೋಗಕ್ಷೇಮವನ್ನು ಸುಧಾರಿಸಲು ನಿಯಮಿತವಾಗಿ ಯೋಗಾಭ್ಯಾಸ ಮಾಡುವಂತೆ ಅವರು ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಯನ್ನು ಪ್ರೋತ್ಸಾಹಿಸಿದರು. ಯೋಗ ಪ್ರದರ್ಶನ ಅಧಿವೇಶನವನ್ನು ನಡೆಸಲಾಯಿತು, ಈ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬೆಳ್ವೆ ವ್ಯವಸಾಯ ಸೇವಾ ಸಹಕಾರಿ ಸಂಘ ನಿ. ಇದರ ಮಹತ್ವಾಕಾಂಕ್ಷಿ ಯೋಜನೆಯಾದ ನೂತನ ತೆಂಗಿನ ಎಣ್ಣೆ ಘಟಕದ ಉದ್ಘಾಟನೆ ಹಾಗೂ ‘ಸಹಕಾರಿ ಬ್ರ್ಯಾಂಡ್’ ತೆಂಗಿನ ಎಣ್ಣೆ ಉತ್ಪನ್ನಗಳ ಮಾರುಕಟ್ಟೆಗೆ ಬಿಡುಗಡೆ ಸಮಾರಂಭವು ಸೋಮವಾರ ಬೆಳ್ವೆ ಸಂಘದ ಪ್ರಧಾನ ಕಚೇರಿ ಆವರಣದಲ್ಲಿ ನೆರವೇರಿತು. ಕಾರ್ಯಕ್ರಮದಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ ಅವರು ದೀಪ ಬೆಳಗಿಸಿ, ಯಂತ್ರೋಪಕರಣಗಳಿಗೆ ಚಾಲನೆ ನೀಡಿ, ಮಾತನಾಡಿ, “ತೆಂಗು ಬೆಳೆಗಾರರು ಬೆಲೆ ಏರಿಳಿತ, ರೋಗಬಾಧೆ ಹಾಗೂ ಮಾರುಕಟ್ಟೆ ಸಮಸ್ಯೆಯಿಂದ ಸಂಕಷ್ಟದಲ್ಲಿದ್ದಾರೆ. ಈ ಘಟಕದ ಮೂಲಕ ಸಂಘದ ಸದಸ್ಯರ ತೋಟದಿಂದಲೇ ನೇರವಾಗಿ ಕಾಯಿ ಖರೀದಿಸಿ, ಮಾರುಕಟ್ಟೆ ದರದಲ್ಲೇ ಹಣ ಪಾವತಿಸುವ ವ್ಯವಸ್ಥೆ ಮಾಡಲಾಗಿದೆ. ಇದರಿಂದ ಮಧ್ಯವರ್ತಿಗಳ ಹಾವಳಿ ತಪ್ಪಿ ರೈತರಿಗೆ ಪೂರ್ಣ ಲಾಭ ಸಿಗಲಿದೆ” ಎಂದರು. ಅತಿ ಹೆಚ್ಚು ಸದಸ್ಯರನ್ನು ಹೊಂದಿರುವ ಬೆಳ್ವೆ ಸಂಘವು ಕೇವಲ ಬ್ಯಾಂಕಿಂಗ್‌ಗೆ ಸೀಮಿತವಾಗದೆ ಉತ್ಪಾದನಾ ಕ್ಷೇತ್ರಕ್ಕೆ ಇಳಿದಿರುವುದು ಶ್ಲಾಘನೀಯ ಎಂದು ಶಾಸಕರು ಮೆಚ್ಚುಗೆ ವ್ಯಕ್ತಪಡಿಸಿದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ : ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ಅಧಿನಿಯಮ, 1993ರ 5ನೇ ಪ್ರಕರಣದ ಉಪ ಪ್ರಕರಣ (5) ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಜಿಲ್ಲೆಯ ಕುಂದಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಧೀನಕ್ಕೆ ಒಳಪಡುವ ಪ್ರದೇಶಗಳನ್ನು ಪ್ರಾದೇಶಿಕ ಚುನಾವಣಾ ಕ್ಷೇತ್ರಗಳಾಗಿ ವಿಭಜಿಸಿ, ಆ ಕ್ಷೇತ್ರಕ್ಕೆ ಹಂಚಿಕೆ ಮಾಡಲ್ಪಟ್ಟ ಸದಸ್ಯ ಸ್ಥಾನಗಳ ಸಂಖ್ಯೆಗಳ ವಿವರವನ್ನು ಪ್ರಕಟಿಸಲಾಗಿರುತ್ತದೆ. ಹೊಸಾಡು – 1:ಕಂಚಗೋಡು, ಜನತಾ ಕಾಲೋನಿ-1, ಜನತಾ ಕಾಲೋನಿ-11, ಖಾರ್ವಿಕೇರಿ ಹೊಸಾಡು ಗ್ರಾಮದ ವಾರ್ಡ್ 1 ರಲ್ಲಿ ಮನೆ ನಂಬ್ರ 1 ರಿಂದ 201 ರ ತನಕ (ಪೂ : ಕೆ ಸಿ ಡಿ ಸಿ ಗೇರು ತೋಟ, ಪ : ಅರಬ್ಬಿ ಸಮುದ್ರ, ಉ : ತ್ರಾಸಿ ಕಂಚುಗೋಡು ರಸ್ತೆ ಹಾಗೂ ದ : ಗುಜ್ಜಾಡಿ ಕಂಚುಗೋಡು ರಸ್ತೆ). ಹಂಚಿಕೆಯಾಗಿರುವ ಸ್ಥಾನಗಳ ಸಂಖ್ಯೆ-3. ಹೊಸಾಡು – 2:ಗಾಣದಮಕ್ಕಿ, ಕೇರಿಕೊಡ್ಲು, ಕಮ್ಮಾರಕೊಡ್ಲು, ಕಾಳುಮನೆ, ಕೋಟೆಮಕ್ಕಿ, ಮುಳ್ಳಿಕಟ್ಟಿ, ಕಡೇರಮನೆ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದೇಹ ಮತ್ತು ಮನಸ್ಸನ್ನು ಕೂಡಿಸಿ ವ್ಯಕ್ತಿತ್ವವನ್ನು ಅರಳಿಸುವ ಯೋಗವು ಭಾರತದ ಪತಂಜಲಿ ಮಹರ್ಷಿಗಳ ಮಹಾನ್ ಕೊಡುಗೆ, ವಿಶ್ವದಾದ್ಯಂತ ಯೋಗವನ್ನು ಜೀವನದ ಒಂದು ಭಾಗವನ್ನಾಗಿ ಮಾಡಿಕೊಂಡಿದ್ದಾರೆ ಎಂದು ಮಾನ್ಯ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎಚ್. ಶೋಭಾ ಶೆಟ್ಟಿ ಹೇಳಿದರು. ಅವರು ಇಲ್ಲಿನ ಕೆದೂರು ಸರಕಾರಿ ಪ್ರೌಢಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು. ಶಾಲಾ ಮುಖ್ಯೋಪಾಧ್ಯಾಯರಾದ ಉದಯ ಕುಮಾರ್ ಶೆಟ್ಟಿ ಅವರು ಪ್ರಾಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು. ವಿದ್ಯಾರ್ಥಿಗಳು ನಿತ್ಯವೂ ಯೋಗವನ್ನು ಅಭ್ಯಾಸ ಮಾಡಿದರೆ ಸಕಾರಾತ್ಮಕ ಯೋಚನೆ ಬೆಳೆದು ಭವಿಷ್ಯ ಉಜ್ವಲವಾಗುತ್ತದೆ ಎಂದು ನುಡಿದರು. ದೈಹಿಕ ಶಿಕ್ಷಣ ಶಿಕ್ಷಕಿ ರತ್ನಾ ಯೋಗದ ಮಹತ್ವವನ್ನು ಹೇಳುತ್ತಾ ವಿದ್ಯಾರ್ಥಿಗಳಿಂದ ಧ್ಯಾನ, ಪ್ರಾಣಾಯಾಮ, ಸೂರ್ಯ ನಮಸ್ಕಾರ ಹಾಗೂ ವಿವಿಧ ಯೋಗಾಸನಗಳನ್ನು ಮಾಡಿಸಿದರು. ಸಮೂಹ ಸಂಪನ್ಮೂಲ ವ್ಯಕ್ತಿ ಸುಚಿತ್ರಾ, ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶಿಕ್ಷಕ ರಮೇಶ ಕುಲಾಲ್ ಎನ್. ಕಾರ್ಯಕ್ರಮ ನಿರೂಪಿಸಿ, ಶಿಕ್ಷಕಿ ರತ್ನಾ ಕೃತಜ್ಞತೆ ಸಲ್ಲಿಸಿದರು.
