ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಸರಕಾರಿ ಜ್ಯೂನಿಯರ್ ಕಾಲೇಜಿನಲ್ಲಿ 2023-24ನೇ ಸಾಲಿನ ಇಂಟರ್ಯಾಕ್ಟ್ ಕ್ಲಬ್ ಪದಪ್ರದಾನ ಸಮಾರಂಭ ಶನಿವಾರ ಜರುಗಿತು. ಬೈಂದೂರು ರೋಟರಿ ಪೂರ್ವಾಧ್ಯಕ್ಷ ಗೋವಿಂದ ನಾಯ್ಕನಕಟ್ಟೆ ಅವರು ನೂತನ ಇಂಟರ್ಯಾಕ್ಟ್ ಅಧ್ಯಕ್ಷೆ ಸಿಂಚನಾ ಹಾಗೂ ಕಾರ್ಯದರ್ಶಿ ವಿಕಾಸ್ ಅವರಿಗೆ ಪದಪ್ರದಾನ ನೆರವೇರಿಸಿದ ಬಳಿಕ ಮಾತನಾಡಿ, 23 ವಿದ್ಯಾರ್ಥಿಗಳಿಂದ ಆರಂಭವಾದ ಇಂಟರ್ಯಾಕ್ಟ್ ಕ್ಲಬ್ ಇಂದು ಪ್ರಪಂಚದ ಪ್ರತಿ ರೋಟರಿ ಕ್ಲಬ್ ಪ್ರಾಯೋಜನೆಯಡಿ 5ಕ್ಕೂ ಹೆಚ್ಚು ಕ್ಲಬ್ಗಳು ಕಾರ್ಯನಿರ್ವಹಿಸುತ್ತಿದೆ. ವಿಧ್ಯಾರ್ಥಿಗಳಿಗೆ ನಾಯಕತ್ವ ಹಾಗೂ ಸೇವೆಯ ಗುಣವನ್ನು ತಿಳಿಸುವುದು ಇಂಟರ್ಯಾಕ್ಟ್ ಕ್ಲಬ್ನ ಮುಖ್ಯ ಉದ್ದೇಶವಾಗಿದ್ದು, ಇದೂ ಹೀಗೆಯೇ ಮುಂದುವರಿದು ದೇಶಕ್ಕೆ ಉತ್ತಮ ಪ್ರಜೆ ಹಾಗೂ ನಾಯಕರನ್ನು ರೂಪಿಸುವ ತನಕವೂ ಸಾಗುತ್ತದೆ ಎಂದರು. ಬೈಂದೂರು ರೋಟರಿ ಕ್ಲಬ್ ಅಧ್ಯಕ್ಷ ಪ್ರಸಾದ ಪ್ರಭು ಅಧ್ಯಕ್ಷತೆ ವಹಿಸಿದ್ದರು. ಉಪಪ್ರಾಂಶುಪಾಲರಾದ ಪದ್ಮನಾಭ ಎಚ್, ವಿದ್ಯಾರ್ಥಿ ನಾಯಕ ಆನಂದ್ ಉಪಸ್ಥಿತರಿದ್ದರು. ನೂತನ ಇಂಟರ್ಯಾಕ್ಟ್ ಅಧ್ಯಕ್ಷೆ ಸಿಂಚನ ತಮ್ಮ ತಂಡವನ್ನು ಪರಿಚಯಿಸಿದರು. ಕಾರ್ಯದರ್ಶಿ ವಿಕಾಸ್ ವರ್ಷದ ಯೋಜನೆಗಳನ್ನು ಸಭೆಯ ಮುಂದಿಟ್ಟರು. ಬೈಂದೂರು…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸಾಧನೆ ಮಾಡುವ ಛಲ ಹಾಗೂ ಮನಸ್ಸು ಹರೇಕಳ ಹಾಜಬ್ಬರಂತೆ ಅಕ್ಷರಕ್ರಾಂತಿ ಹಾಗೂ ತುಳಸಿ ಗೌಡರಂತೆ ಪರಿಸರ ಕಾಳಜಿವಹಿಸಲು ಸಾಧ್ಯವಿದೆ. ಅದಕ್ಕೆ ಶ್ರೀಮಂತಿಕೆ, ಜಾತಿ, ಧರ್ಮ, ಭಾಷೆಯ ಅಗತ್ಯತೆಯಿಲ್ಲ ಎಂದು ಕುಂದಾಪುರ ಡಾ. ಬಿ.ಬಿ.ಹೆಗ್ಡೆ ಪ್ರಥಮದರ್ಜೆ ಕಾಲೇಜಿನ ಉಪಪ್ರಾಂಶುಪಾಲ ಚೇತನ್ ಶೆಟ್ಟಿ ಕೋವಾಡಿ ಹೇಳಿದರು. ಉಪ್ಪುಂದ ಮಾತೃಶ್ರೀ ಸಭಾಭವನದಲ್ಲಿ ಶನಿವಾರ ಇಲ್ಲಿನ ಉಪ್ಪುಂದ ಜೆಸಿಐ 2022-23ನೇ ಸಾಲಿನ 100 ಕಾರ್ಯಕ್ರಮದಲ್ಲಿ ಮಾತನಾಡಿ, ಪದ್ಮಶ್ರೀ ಪುರಸ್ಕೃತರಾದ ಇವರಿಬ್ಬರೂ ಕಡು ಬಡತನದಲ್ಲಿ ಅತ್ಯಂತ ಹಿಂದುಳಿದ ಕುಗ್ರಾಮದಲ್ಲಿ ಜನಿಸಿ, ನಿರಕ್ಷರಕುಕ್ಷಿಗಳಾದರೂ ಕೂಡ ತಾವು ಕಟ್ಟಿದಕೊಂಡ ಕನಸಿನ ಜತೆಗೆ ಸಮಾಜ ಸೇವೆ ಮೂಲಕ ಪ್ರಸ್ತುತ ದೇಶವೇ ಗುರುತಿಸಿದ ಮಾದರಿ ವ್ಯಕ್ತಿಗಳಾಗಿದ್ದಾರೆ. ಅವರ ತತ್ವಾದರ್ಶಗಳನ್ನು ಇಂದಿನ ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಇವರು ಹಾಕಿಕೊಟ್ಟ ಮಾರ್ಗದಲ್ಲಿ ಸಾಗಿದರೆ ಯಶಸ್ಸು ಕಟ್ಟಿಟ್ಟ ಬುತ್ತಿ ಎಂದರು. ಪದ್ಮಶ್ರೀ ಪುರಸ್ಕೃತ ಅಕ್ಷರ ಸಂತ ಹರೇಕಳ ಹಾಜಬ್ಬ ಹಾಗೂ ವೃಕ್ಷಮಾತೆ ತುಳಸಿಗೌಡ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು. 100ನೇ ಕಾರ್ಯಕ್ರಮದ ಅಂಗವಾಗಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನ ಬಿಎಸ್ಸಿ ವಿದ್ಯಾರ್ಥಿ, ಎನ್ಸಿಸಿ ಆರ್ಮಿ ಕೆಡೆಟ್ ಭರತ್ ಬಾಬು ದೇವಾಡಿಗ ಅವರು ಅಖಿತ ಭಾರತ ಮಟ್ಟದ 54ನೇ ಎನ್.ಸಿ.ಸಿ ವಿಶೇಷ ಪ್ರವೇಶ [NCC Special Entry] ಪರೀಕ್ಷೆಯಲ್ಲಿ 15ನೇ ರ್ಯಾಂಕ್ ಗಳಿಸಿದ್ದಾರೆ. ಅಖಿಲ ಭಾರತ ಮಟ್ಟದ ಪರೀಕ್ಷೆಯಲ್ಲಿ 50 ವಿದ್ಯಾರ್ಥಿಗಳು ಮಾತ್ರವೇ ಅರ್ಹತೆ ಪಡೆದಿದ್ದು ಈ ಪೈಕಿ ಭರತ್ ದೇವಾಡಿಗ ಕೂಡ ಓರ್ವರಾಗಿದ್ದಾರೆ. ಇವರನ್ನು ಕೇಂದ್ರದ ಸಿಬ್ಬಂದಿ ಆಯ್ಕೆ ಮಂಡಳಿ [ಎಸ್.ಎಸ್.ಬಿ] – 21 ಭೂಪಾಲ್ ಬೋರ್ಡ್ನಿಂದ ಶಿಫಾರಸು ಮಾಡಲಾಗಿದೆ. ಭರತ್ ತರಬೇತಿಯ ಬಳಿಕ ಲೆಫ್ಟಿನೆಂಟ್ ರ್ಯಾಂಕ್ ಹುದ್ದೆ ಪಡೆಯಲಿದ್ದಾರೆ. ಭರತ್ ಅವರ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರಾದ ಡಿ .ಶುಭಕರಾಚಾರಿ, ಎನ್.ಸಿ.ಸಿ ಸೇನಾ ಅಧಿಕಾರಿ ಕ್ಯಾ. ಅಂಜನ್ ಕುಮಾರ್ ಎ. ಎಲ್, ಭೋದಕ ಮತ್ತು ಬೋಧಕೇತರ ಸಿಬ್ಬಂದಿಗಳು ಅಭಿನಂದನಂದಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕಾರ್ಕಳ: ಕ್ರಿಯೇಟಿವ್ ಪದವಿ ಪೂರ್ವ ಕಾಲೇಜು ಕಾರ್ಕಳ ಇದರ ಎನ್.ಎಸ್.ಎಸ್ ಘಟಕದ ವತಿಯಿಂದ ವಿದ್ಯಾರ್ಥಿಗಳಿಗೆ “PANCHAPRAN PLEGDE” ಎಂಬ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ದೇಶದ ಅಭಿವೃದ್ಧಿಯಲ್ಲಿ ತನ್ನನ್ನು ತಾನು ಸಕ್ರೀಯವಾಗಿ ತೊಡಗಿಸಿಕೊಂಡು, ವಸಾಹತುಶಾಹಿ ಮನಸ್ಥಿತಿಯನ್ನು ಸಂಪೂರ್ಣ ತೊಡೆದು ಹಾಕುವುದರೊಂದಿಗೆ ನಮ್ಮ ಶ್ರೀಮಂತ ಸಂಸ್ಕೃತಿ, ಪರಂಪರೆಯನ್ನು ಉಳಿಸಿ ದೇಶದ ಏಕತೆ ಮತ್ತು ಒಗ್ಗಟ್ಟಿಗೆ ಶ್ರಮಿಸುವುದರೊಂದಿಗೆ ದೇಶಕ್ಕಾಗಿ ಬಲಿದಾನಗೈದ ವೀರಯೋಧರಿಗೆ ಗೌರವ ಸಲ್ಲಿಸುತ್ತಾ ದೇಶ ರಕ್ಷಣೆ ಹಾಗೂ ಪ್ರಗತಿಗೆ ತನ್ನನ್ನು ತಾನು ಸಮರ್ಪಿಸಿಕೊಳ್ಳುವ ಬಗ್ಗೆ ಅರಿವು ಮೂಡಿಸಿ ವಿದ್ಯಾರ್ಥಿಗಳಿಗೆ ಪ್ರಮಾಣವಚನ ಬೋಧಿಸಲಾಯಿತು. ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ವಿದ್ವಾನ್ ಗಣಪತಿ ಭಟ್, ಎನ್.ಎಸ್.ಎಸ್ ಯೋಜನಾಧಿಕಾರಿಯಾದ ಉಮೇಶ್ ಹಾಗೂ ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಕೋಟೇಶ್ವರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಕೆ. ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಅವರು ಆರೋಗ್ಯ ಕೇಂದ್ರಕ್ಕೆ ಬರುವ ರೋಗಿಗಳಿಗೆ ಉತ್ತಮ ಸೇವೆ ಒದಗಿಸುವಂತೆ ಹಾಗೂ ತುರ್ತು ಸಂದರ್ಭದಲ್ಲಿ ಅಗತ್ಯವಿರುವ ಎಲ್ಲಾ ಔಷಧಗಳ ದಾಸ್ತಾನು ಇಟ್ಟುಕೊಳ್ಳುವಂತೆ ಸೂಚನೆ ನೀಡಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪದವಿಪೂರ್ವ ಹಂತದಲ್ಲಿ ವಾಣಿಜ್ಯೇತರ ವಿಭಾಗಗಳಲ್ಲಿ ತೇರ್ಗಡೆಗೊಂಡು ಪ್ರಸ್ತುತ ವಾಣಿಜ್ಯ ಹಾಗೂ ನಿರ್ವಹಣಾ ವಿಭಾಗದಲ್ಲಿ ಪ್ರವೇಶಾತಿ ಪಡೆದ ವಿದ್ಯಾರ್ಥಿಗಳಿಗೆ ಸೇತುಬಂಧ ತರಗತಿಗಳನ್ನು ಕಾಲೇಜಿನ ವಾಣಿಜ್ಯ ವಿಭಾಗದ ಆಶ್ರಯದಲ್ಲಿ ಹಮ್ಮಿಕೊಳ್ಳಲಾಯಿತು. ವಿದ್ಯಾರ್ಥಿಗಳಿಗೆ ಕೈಗಾರಿಕೆ, ಉದ್ಯಮ, ವ್ಯಾಪಾರ ಮುಂತಾದವುಗಳ ಬಗ್ಗೆ ಪ್ರಾತ್ಯಕ್ಷಿತೆಯನ್ನು ನೀಡುವುದು ಮತ್ತು ಪ್ರಾಯೋಗಿಕವಾಗಿ ವಾಣಿಜ್ಯ ವಿಷಯಗಳನ್ನು ಅರ್ಥೈಸುವ ನಿಟ್ಟಿನಲ್ಲಿ ಬೈಂದೂರು ಮಾಜಿ ಶಾಸಕರು ಹಾಗೂ ಸಂಸ್ಥೆಯ ಅಧ್ಯಕ್ಷರಾದ ಬಿ.ಎಮ್. ಸುಕುಮಾರ ಶೆಟ್ಟಿಯವರ ಕೈಗಾರಿಕೆಗಳಾದ ಮುಳ್ಳುಗುಡ್ಡೆ ಸೌಪರ್ಣಿಕ ಹಂಚಿನ ಕಾರ್ಖಾನೆ, ಸೌಪರ್ಣಿಕ ಡೆಕೋರೇಟಿವ್ ಟೈಲ್ಸ್, ಸೌಪರ್ಣಿಕ ಗೇರುಬೀಜ ಕಾರ್ಖಾನೆಗೆ ಭೇಟಿ ನೀಡಲಾಯಿತು. ಈ ಸಂದರ್ಭ ಕಾರ್ಖಾನೆಯ ಮ್ಯಾನೇಜರಾದ ದಯಾನಂದ ಗಾಣಿಗ, ಅಕೌಂಟೆಂಟ್ ಸತೀಶ್ ಅಡಿಗ ಇವರು ವಿದ್ಯಾರ್ಥಿಗಳಿಗೆ ಸೂಕ್ತ ಮಾರ್ಗದರ್ಶನ ಮತ್ತು ಮಾಹಿತಿ ನೀಡಿದರು. ವಾಣಿಜ್ಯ ವಿಭಾಗದ ಮುಖ್ಯಸ್ಥೆ ವೀಣಾ ಭಟ್, ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ರಕ್ಷಿತ್ ರಾವ್ ಗುಜ್ಜಾಡಿ, ವಾಣಿಜ್ಯ ವಿಭಾಗದ ಉಪನ್ಯಾಸಕರಾದ ರಾಜೇಶ್ ಶೆಟ್ಟಿ, ಸತೀಶ್ ಶೆಟ್ಟಿ, ದೀಪ ಪೂಜಾರಿ, ಶರತ್ ಕುಮಾರ್, ಅಕ್ಷಯ್ ಕುಮಾರ್,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಸಾರ್ವಜನಿಕ ಶಿಕ್ಷಣ ಇಲಾಖೆ ಕುಂದಾಪುರ ಆಶ್ರಯದಲ್ಲಿ ಇಲ್ಲಿನ ವಡೇರಹೋಬಳಿಯಲ್ಲಿ ಜರುಗಿದ ಬ್ಲಾಕ್ ಮಟ್ಟದ ಚೆಸ್ ಪಂದ್ಯಾಟದಲ್ಲಿ ಶಂಕರನಾರಾಯಣ ಮದರ್ ಥೆರೆಸಾ ಮೆಮೋರಿಯಲ್ ಸ್ಕೂಲ್ 7ನೇ ತರಗತಿ ವಿದ್ಯಾರ್ಥಿ ಮುತ್ತು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ವಿಜೇತ ವಿದ್ಯಾರ್ಥಿಗೆ ಶಾಲಾ ಶಿಕ್ಷಕರು ಹಾಗೂ ಆಡಳಿತ ಮಂಡಳಿ ಅಭಿನಂದನೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಕಂಡ್ಲೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ ನೀಡಿ ಆಸ್ಪತ್ರೆಯ ಕುಂದುಕೊರತೆ ಪರಿಶೀಲಿಸಿ ಮಾಹಿತಿ ಪಡೆದುಕೊಂಡರು. ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸೇರಿದಂತೆ ಸುತ್ತಲಿನ ಗ್ರಾಮಗಳಿಂದ ಬರುವ ರೋಗಿಗಳಿಗೆ ಉತ್ತಮ ಚಿಕಿತ್ಸೆ ಸಿಗುತ್ತಿರುವ ಬಗ್ಗೆ ವಿಚಾರಿಸಿದರು. ಆಸ್ಪತ್ರೆಯ ವ್ಯವಸ್ಥೆ, ಸಿಬ್ಬಂದಿ ಕೊರತೆ, ಪಿಠೋಪಕರಣ, ಮೂಲಸೌಕರ್ಯಗಳ ಬಗ್ಗೆ ವೈದ್ಯಾಧಿಕಾರಿಯ ಜೊತೆ ಚರ್ಚಿಸಿದರು. ಈ ಸಂದರ್ಭದಲ್ಲಿ ಸಾಮ್ರಾಟ್ ಶೆಟ್ಟಿ, ದಿನೇಶ್ ಆಚಾರ್ಯ, ವಿಜಯ ಪುತ್ರನ್ ಪಕ್ಷದ ಪ್ರಮುಖರು ಗ್ರಾಮ ಪಂಚಾಯತಿಯ ಸರ್ವ ಸದಸ್ಯರು, ಆಸ್ಪತ್ರೆ ಸಿಬ್ಬಂದಿ ವರ್ಗದವರು, ಮತ್ತಿತರು ಉಪಸ್ಥಿತರಿದ್ದರು. ಬಳಿಕ ಕಾವ್ರಾಡಿ ಗ್ರಾಮ ಪಂಚಾಯತ್ಗೆ ಪ್ರಥಮ ಭಾರಿಗೆ ಭೇಟಿ ನೀಡಿ ನೂತನ ಗ್ರಾಮ ಪಂಚಾಯತ್ ಕಟ್ಟಡ ಬಗ್ಗೆ ಪಂಚಾಯತ್ ಸದ್ಯಸರ ಜೊತೆ ಚರ್ಚಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮಂಗಳೂರಿನ ಬಿಎಂಆರ್ ಬಿಲ್ಡರ್ಸ್ ಸಂ ಇವರ ವತಿಯಿಂದ 76ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ವಿದ್ಯಾರ್ಥಿಗಳಿಗಾಗಿ “ನನ್ನ ಕಲ್ಪನೆಯ ಭಾರತ” ಈ ವಿಷಯದ ಕುರಿತಾಗಿ ಆಯೋಜಿಸಿದ ಕನ್ನಡ ಭಾಷಣ ಸ್ಪರ್ಧೆಯಲ್ಲಿ ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ.ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಶ್ರುತಿಕಾ ಉಭಯ ಜಿಲ್ಲೆಗೆ ದ್ವಿತೀಯ ಸ್ಥಾನ ಹಾಗೂ ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗದ ವರ್ಷಾ ರವಿಶಂಕರ್ ಚತುರ್ಥ ಸ್ಥಾನ ಪಡೆದಿರುತ್ತಾರೆ. ವಿವಿಧ ಕಾಲೇಜುಗಳಿಂದ 110 ಸ್ಪರ್ಧಿಗಳು ಭಾಗವಹಿಸಿದ ಸ್ಪರ್ಧೆ ಇದಾಗಿತ್ತು. ವಿದ್ಯಾರ್ಥಿನಿಯರ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಅ.10: ಕರ್ನಾಟಕದ ಕರಾವಳಿ ಕಾವಲು ಪೊಲೀಸ್ ಕೇಂದ್ರ ಕಛೇರಿ ಮಲ್ಪೆಯಲ್ಲಿ, ಅಬ್ದುಲ್ ಅಹದ್, ಐಪಿಎಸ್ರವರ ಉಪಸ್ಥಿತಿಯಲ್ಲಿ ಮರ್ಚೆಂಟ್ ನೇವಿಯ ನಿವೃತ್ತ ಅಧಿಕಾರಿಗಳು ಮತ್ತು ಭಾರತೀಯ ನೌಕಾಸೇನೆ, ಭಾರತೀಯ ತಟರಕ್ಷಣ ಪಡೆಯಲ್ಲಿ ಪ್ರಸ್ತುತ ಕೆಲಸ ಮಾಡುತ್ತಿರುವ ಅಧಿಕಾರಿ, ಸಿಬ್ಬಂದಿಗಳೊಂದಿಗೆ ಸಭೆ ನಡೆಸಿ ಕರ್ನಾಟಕ ಕರಾವಳಿಯ ರಾಷ್ಟ್ರೀಯ ಭದ್ರತೆಯ ಬಗ್ಗೆ ವಿಚಾರ ವಿನಿಮಯ ನಡೆಸಲಾಯಿತು. ಡಾಲ್ಸಿ ಪಿಂಟೋ ಉಪಪ್ರಾಂಶುಪಾಲರು, ಮಂಗಳೂರು ಮರೈನ್ ಕಾಲೇಜು ಹಾಗೂ ಇತರೇ ನಿವೃತ್ತ ಹಾಗೂ ಪ್ರಸ್ತುತ ಸೇವೆಯಲ್ಲಿರುವ ನೌಕಾಧಿಕಾರಿಗಳು ತಮ್ಮ ಕರ್ತವ್ಯದ ಸಮಯದಲ್ಲಿ ಅವರ ಬೇರೆ ಬೇರೆ ದೇಶಗಳ ಪ್ರಯಾಣದ ವೇಳೆ ಆದ ಅವರ ಅನುಭವಗಳನ್ನು ಹಾಗೂ ರಾಷ್ಟ್ರೀಯ ಭದ್ರತೆಯ ಬಗ್ಗೆ ಅನಿಸಿಕೆಯನ್ನು ಹಂಚಿಕೊAಡರು. ಸಭೆಯಲ್ಲಿ ಕರಾವಳಿ ಕಾವಲು ಪೊಲೀಸ್ ಘಟಕದ 9 ಠಾಣೆಗಳ ಪೊಲೀಸ್ ನಿರೀಕ್ಷಕರು ಹಾಗೂ ಉಪ ನಿರೀಕ್ಷಕರುಗಳು ಭಾಗವಹಿಸಿದ್ದರು.
