ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆ ವೇಳೆ ಮಗು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ಆರಂಭಗೊಂಡ ಪ್ರತಿಭಟನೆ ಮುಂದುವರಿದಿದ್ದು, ಮಂಗಳವಾರ ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಹಾಗೂ ಎಸ್ಪಿ ಡಾ. ಅರುಣ್ ಕೆ. ಅವರು ಭೇಟಿನೀಡಿ ಪ್ರತಿಭಟನಾಕಾರರನ್ನು ಸಮಾಧಾನಪಡಿಸಿದ್ದಾರೆ. ಈ ವೇಳೆ ಜಿಲ್ಲಾಧಿಕಾರಿ ಡಾ ವಿದ್ಯಾಕುಮಾರಿ ಮಾತನಾಡಿ, ವೈದ್ಯಾಧಿಕಾರಿಗಳ ವಿರುದ್ಧದ ಆರೋಪಗಳಿಗೆ ತಜ್ಞ ವೈದ್ಯರ ತಂಡ ರಚಿಸಿ ಎಲ್ಲಾ ವೈದ್ಯಕೀಯ ದಾಖಲೆಗಳನ್ನು ಪರಿಶೀಲಿಸಿ, ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು. ತಜ್ಞರ ತಂಡ ವರದಿ ಸಲ್ಲಿಸಲು ಒಂದು ವಾರ ಬೇಕಿದ್ದು, ಅಲ್ಲಿಯ ತನಕ ಪ್ರತಿಭಟನೆಯನ್ನು ಕೈಬಿಡುವಂತೆ ಸಾರ್ವಜನಿಕರಿಗೆ ಮನವಿ ಮಾಡಿದರು. ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ ಮಾತನಾಡಿ, ವೈದ್ಯರ ಕರ್ತವ್ಯ ಲೋಪವಿದ್ದರೇ ಸುಪ್ರಿಂ ಕೋರ್ಟ್ ನಿರ್ದೇಶನದಂತೆ ಕ್ರಮಗೊಳ್ಳಬೇಕಿದೆ. ಈ ಪ್ರಕರಣವಲ್ಲದೇ ಹಿಂದೆ ಯಾವುದೇ ಇಂತಹ ಘಟನೆ ಆಗಿದ್ದರೂ ಸಂತ್ರಸ್ಥರು ಮನವಿ ಸಲ್ಲಿಸಿ. ಅದರ ಆಧಾರದಲ್ಲಿಯೇ ಕ್ರಮ ಕೈಗೊಳ್ಳಲಾಗುವುದು. ಘಟನೆಗೆ ಸಂಬಂಧಿಸಿದಂತೆ ಈಗಾಗಲೇ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸರಕಾರದ ಮಹತ್ವಾಕಾಂಕ್ಷಿ ಕಾರ್ಯಕ್ರಮವಾದ ಜನತಾ ದರ್ಶನದ ಮೂಲಕ ದೂರುದಾರರು ಹಾಗೂ ಅಧಿಕಾರಿಗಳನ್ನು ಮುಖಾಮುಖಿ ಮಾಡಿ ಜನರ ಸಮಸ್ಯೆಗಳನ್ನು ಬಗೆಹರಿಸುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ. ದೈನಂದಿನ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಒದಗಿಸಲಾಗುತ್ತಿದ್ದು ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಹೇಳಿದರು. ಬೈಂದೂರು ತಾಲೂಕು ಆಡಳಿತ ಸೌಧದಲ್ಲಿ ಮಂಗಳವಾರ ನಡೆದ ಜನತಾ ದರ್ಶನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ ಜನಸಾಮಾನ್ಯರು ತಮ್ಮ ಪ್ರತಿಯೊಂದು ಸಮಸ್ಯೆಗಳ ಬಗ್ಗೆ ರಾಜಧಾನಿ ಅಲೆದಾಟ ತಪ್ಪಿಸುವ ನೆಲೆಯಲ್ಲಿ ಜಿಲ್ಲಾ ಮತ್ತು ತಾಲೂಕು ಮಟ್ಟದ ಎಲ್ಲಾ ಇಲಾಖೆಗಳ ಅಧಿಕಾರಿಗಳು ತಾಲೂಕು ಕೇಂದ್ರಗಳಲ್ಲಿ ಸೇರಿ ದೂರು ದಾಖಲಿಸಿಕೊಂಡು ತಕ್ಷಣಕ್ಕೆ ಸಾಧ್ಯವಾಗುವ ದೂರುಗಳಿಗೆ ಸ್ಥಳದಲ್ಲಿಯೇ ಪರಿಹಾರ ದೊರಕಿಸಿಕೊಡುವ ವ್ಯವಸ್ಥೆ ಜನತಾ ದರ್ಶನದ ಮೂಲಕ ಆಗಲಿದೆ. ಎಲ್ಲಾ ದೂರುಗಳನ್ನು ಪೋರ್ಟೆಲ್‌ನಲ್ಲಿ ದಾಖಲಿಸಿ ವಿಲೇಮಾಡಲಾಗುತ್ತಿದೆ. ತಕ್ಷಣಕ್ಕೆ ಪರಿಹರಿಸಲಾಗದ ದೂರುಗಳನ್ನು ಸರಕಾರ ಹಾಗೂ ಸಂಬಂಧಿತ ಇಲಾಖೆಗೆ ಕಳುಹಿಸಲಾಗುತ್ತದೆ ಎಂದರು. ಶಾಸಕ ಗುರುರಾಜ ಗಂಟಿಹೊಳೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಜನರ ಬಳಿಗೆ ಅಧಿಕಾರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಹೆರಿಗೆ ವೇಳೆ ಮಗು ಮೃತಪಟ್ಟ ಘಟನೆಗೆ ಆಸ್ಪತ್ರೆಯ ಹೆರಿಗೆ ತಜ್ಞ ವೈದ್ಯರ ನಿರ್ಲಕ್ಷ್ಯ ಕಾರಣ ಎಂದು ಆರೋಪಿಸಿ ಕುಂದಾಪುರ ಸಾರ್ವಜನಿಕ ಆಸ್ಪತ್ರೆ ಮುಂದೆ ಕುಟುಂಬಿಕರು ಹಾಗೂ ಊರಿನವರು ಪ್ರತಿಭಟನೆ ನಡೆಸುತ್ತಿದ್ದಾರೆ. ಗಂಗೊಳ್ಳಿಯ ಗುಡ್ಡದಕೇರಿಯ ಶ್ರೀನಿವಾಸ ಖಾರ್ವಿ ಎಂಬುವವರ ಪತ್ನಿ ಜ್ಯೋತಿ ಖಾರ್ವಿ ಹೆರಿಗಾಗಿ ನ.17ರಂದು ರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದರು. ಸೋಮವಾರ ಬೆಳಗ್ಗೆ ಡಾ. ಚಂದ್ರ ಮೊಗವೀರ ಎಂಬುವವರು ಹೆರಿಗೆ ಮಾಡಿಸಿದ್ದು, ಈ ವೇಳೆ ಮಗು ಮೃತಪಟ್ಟಿದೆ ಎಂದು ತಿಳಿಸಿದ್ದರು. ಮಗುವಿನ ಕುತ್ತಿಗೆಗೆ ಹೊಕ್ಕುಳಬಳ್ಳಿ ಸುತ್ತಿಕೊಂಡು ಸಾವು ಸಂಭವಿಸಿದೆ ಎಂದಿದ್ದರು. ಆಸ್ಪತ್ರೆಗೆ ದಾಖಲು ಮಾಡಿದಾಗ ಗರ್ಭಿಣಿಗೆ ರಕ್ತಸ್ರಾವ ಇದೆ, ಹೊಟ್ಟೆ ನೋವು ಇದೆ ಎಂದರೂ ವೈದ್ಯರು ಕೇಳಿರಲಿಲ್ಲ. ಎಂಟೂವರೆ ತಿಂಗಳಿನ ವೇಳೆ ಸ್ಕಾನಿಂಗ್ ಮಾಡದ ಕಾರಣ ಈಗ ಸ್ಕ್ಯಾನಿಂಗ್ ಮಾಡಿ ಎಂದು ಮನೆಯವರು ಒತ್ತಾಯಿಸಿದರೂ ವೈದ್ಯರು ಸ್ಕಾನಿಂಗ್ ಮಾಡಿಸಲಿಲ್ಲ. ಅಲ್ಲದೇ ಉಡಾಫೆಯಿಂದ ಮಾತಾಡಿದ್ದಾಗಿ ಕುಟುಂಬಿಕರು ಆರೋಪಿಸಿದ್ದಾರೆ. ವೈದ್ಯರ ನಿರ್ಲಕ್ಷ್ಯದಿಂದ ಮಗುವಿನ ಸಾವು ಸಂಭವಿಸಿದೆ ಎಂದು ಆರೋಪಿಸಿ ಕುಟುಂಬಿಕರು…
ಕುಂದಾಪ್ರ ಡಾಟ್ ಕಾಂ ಸುದ್ದಿ.ದುಬೈ: ಕನ್ನಡಿಗರ ಕನ್ನಡ ಕೂಟ ದುಬೈ, ಯುಎಇ ವತಿಯಿಂದ 20ನೇ ವರ್ಷದ ಸಂಭ್ರಮಾಚರಣೆಯ ಕರ್ನಾಟಕ ರಾಜ್ಯೋತ್ಸವವು ಇದೇ ನವೆಂಬರ್ 11ರಂದು ಸಂಜೆ 4ರಿಂದ ಅಲ್ ಕ್ವಾಸಿಸ್ ನಲ್ಲಿರುವ ಕ್ರೆಸೆಂಟ್ ಇಂಗ್ಲಿಷ್ ಶಾಲೆಯ ಹೊರಾಂಗಣ ಸಭಾಂಗಣದಲ್ಲಿ ಅದ್ದೂರಿಯಾಗಿ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿ ನಿವೃತ್ತ ಕಾಪ್ಟನ್ ಮತ್ತು ಏರ್ ಡೆಕ್ಕನ್ ಸಂಸ್ಥಾಪಕರಾದ ಕ್ಯಾಪ್ಟನ್ ಗೋಪಿನಾಥ್ ಅವರಿಗೆ ಅಂತರಾಷ್ಟ್ರೀಯ ಕನ್ನಡ ರತ್ನ ಪ್ರಶಸ್ತಿಯನ್ನುನೀಡಿ ಗೌರವಿಸಲಾಯಿತು. ಅಂತರಾಷ್ಟ್ರೀಯ ಕನ್ನಡ ಹಾಸ್ಯ ರತ್ನ ಪ್ರಶಸ್ತಿಯನ್ನು ಖ್ಯಾತ ಹಾಸ್ಯ ಭಾಷಣಕಾರರಾದ ಗಂಗಾವತಿ ಪ್ರಾಣೇಶ್ ಅವರಿಗೆ ನೀಡಿ ಗೌರವಿಸಿದರೆ, ಕನ್ನಡಿಗರು ಕನ್ನಡ ಕೂಟ ದುಬೈ ಕೊಡಮಾಡುವ ಅಂತರಾಷ್ಟ್ರೀಯ ಡಾ. ಪುನೀತ್ ರಾಜಕುಮಾರ್ ಪ್ರಶಸ್ತಿಯನ್ನು ಅನಿವಾಸಿ ಉದ್ಯಮಿ ಜ್ಹೈನ್ ಗ್ರೂಪ್ ಆಫ್ ಹೋಟೆಲ್ಸ್, ದುಬೈ ಮಾಲೀಕರಾದ ಝಫರುಲ್ಲಾ ಖಾನ್ ಮಂಡ್ಯ ಅವರಿಗೆ ನೀಡಿ ಸತ್ಕರಿಸಲಾಯಿತು. ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಅಜ್ಮಾನ್ ಆಡಳಿತ ಕುಟುಂಬ ಸದಸ್ಯ ಮೊಹಮ್ಮದ್ ಸಈದ್ ಅಲ್ ನಯೋಮಿ ಮತ್ತು ದುಬೈ ನಾಗರಿಕ ಉದ್ಯಮಿ ದಾವೂದ್ ಅಬ್ದುಲ್ಲಾ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸಮೃದ್ಧ ಬೈಂದೂರು – ಸಮೃದ್ಧ ಬೈಂದೂರು ಪರಿಕಲ್ಪನೆಯಡಿ ಆಯೋಜಿಸಲಾದ 25ನೇ ಆವೃತ್ತಿಯ ಕ್ಲೀನ್ ಕಿನಾರ ಕಾರ್ಯಕ್ರಮವನ್ನು ಶಾಸಕ ಗುರುರಾಜ ಶೆಟ್ಟಿ ಗಂಟಿಹೊಳೆ ಅವರು ಉದ್ಘಾಟಿಸಿದರು. ಬಳಿಕ ಅವರು ಮಾತನಾಡಿ ಕ್ಷೇತ್ರದ ಸಮುದ್ರ ತೀರಗಳ ಸ್ವಚ್ಛತೆಗಾಗಿ ಕ್ಲೀನ್ ಕಿನಾರ ಕಾರ್ಯಕ್ರಮವನ್ನು ಸತತವಾಗಿ ನಡೆಸಿಕೊಂಡು ಬರುತ್ತಿರುವ ತಂಡದ ಪರಿಶ್ರಮ ಮತ್ತು ಅವರು ಕೈಗೊಂಡ ಸಂಕಲ್ಪವನ್ನು ಶ್ಲಾಘಿಸಿದರಲ್ಲದೇ ಸ್ವಚ್ಛ ಬೈಂದೂರು ಕಾರ್ಯಕ್ರಮದ ಮೂಲಕ ಇಡೀ ಊರು, ವಿವಿಧ ಸಂಸ್ಥೆಗಳು, ಯುವಕರು, ಎಲ್ಲರೂ ಸೇರಿ ನಮ್ಮ ಬೈಂದೂರು ಕ್ಷೇತ್ರವನ್ನು ಸ್ವಚ್ಛ, ಸುಂದರವನ್ನಾಗಿಸೋಣ ಎಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ಜೀವಶಾಸ್ತ್ರ ವಿಭಾಗದ ಉಪನ್ಯಾಸಕರಾದ ಹರೀಶ್ ವಿ. ಕೋಟ್ಯಾನ್ ಉಪಸ್ಥಿತರಿದ್ದರು. ಉದ್ಘಾಟನೆ ವೇಳೆ ಜಿಪಂ ಮಾಜಿ ಸದಸ್ಯ ಸುರೇಶ್ ಬಟವಾಡಿ, ತಾಪಂ ಮಾಜಿ ಸದಸ್ಯ ಪುಪ್ಪರಾಜ ಶೆಟ್ಟಿ, ಉದ್ಯಮಿ ಬಿ.ಎಸ್. ಸುರೇಶ್ ಶೆಟ್ಟಿ, ರಾಘವೇಂದ್ರ ಸುರಭಿ, ಸದಾನಂದ ಹೋಬಳಿದಾರ್ ಮೊದಲಾದವರು ಉಪಸ್ಥಿತರಿದ್ದರು. ಬೈಂದೂರು ತಾಲೂಕು ಸೌಧದಿಂದ ಸೋಮೇಶ್ವರ ಬೀಚ್ವರೆಗೆ ಹಮ್ಮಿಕೊಳ್ಳಲಾದ ಸ್ವಚ್ಛತಾ ಅಭಿಯಾನ ಹಾಗೂ ಜಾಥಾ ಹಮ್ಮಿಕೊಳ್ಳಲಾಯಿತು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕುಂದಾಪುರ ಹಾಗೂ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ರಜತ ಮಹೋತ್ಸವದ ಅಂಗವಾಗಿ ಕನ್ನಡ ಶಾಲೆ ಉಳಿವಿಗಾಗಿ ಮತ್ತು ಪ್ರೋತ್ಸಾಹಕ್ಕಾಗಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗಾಗಿ ‘ನಾ ಕಂಡಂತೆ ಪೊಲೀಸ್’ ಎಂಬ ವಿಷಯದ ಕುರಿತು ಪ್ರಬಂಧ ಸ್ಪರ್ಧೆ ಕುಂದಾಪುರ ಕಲಾಮಂದಿರದಲ್ಲಿ ಜರುಗಿತು. ಕಾರ್ಯಕ್ರಮ ಉದ್ಘಾಟಿಸಿದ ಕುಂದಾಪುರ ಡಿವೈಎಸ್ಪಿ ಬೆಳ್ಳಿಯಪ್ಪ ಕೆ.ಯು ಅವರು, ಪೊಲೀಸರ ಬಗ್ಗೆ ಸಾರ್ವಜನಿಕ ವಲಯದಲ್ಲಿ ಉತ್ತಮ ಭಾವನೆ ಮೂಡಿಸುವ ಕೆಲಸ ವಿದ್ಯಾರ್ಥಿ ದಿಸೆಯಿಂದಲೇ ಆದರೆ ಹೆಚ್ಚು ಪರಿಣಾಮಕಾರಿಯಾಗುತ್ತದೆ. ಆ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ‘ನಾ ಕಂಡಂತೆ ಪೊಲೀಸ್’ ವಿಷಯದ ಕುರಿತು ಪ್ರಬಂಧ ಸ್ಪರ್ಧೆ ಆಯೋಜಿಸಿರುವುದು ಅರ್ಥಪೂರ್ಣ ಎಂದು ಹೇಳಿದರು. ಪೊಲೀಸರ ಬಗ್ಗೆ ವ್ಯಕ್ತವಾಗುವ ಅಭಿವ್ಯಕ್ತಿ ಮುಕ್ತವಾಗಿರಲಿ. ವಿದ್ಯಾರ್ಥಿಗಳ ಕಂಡ ಹಾಗೆ ಪೊಲೀಸರ ಬಗ್ಗೆ ಬರೆಯಿರಿ. ಅದರಲ್ಲಿ ವಿಷಯಗಳು ನಮಗೆ ಅಗತ್ಯವಾಗುತ್ತದೆ. ತಿದ್ಧಿಕೊಳ್ಳಲು, ಬದಲಾವಣೆ ತಂದುಕೊಳ್ಳಲು,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ತಗ್ಗರ್ಸೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆಯನ್ನು ಸಡಗರದಿಂದ ಆಚರಿಸಲಾಯಿತು. ವಿದ್ಯಾರ್ಥಿ ನಾಯಕ ಕಾರ್ತಿಕ್ ಸಭಾಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಕ್ಕಳಿಗೆ ಆಯೋಜಿಸಿದ ವಿವಿಧ ಸ್ಪರ್ಧೆಗಳ ಬಹುಮಾನ ಪ್ರಾಯೋಜಿಸಿದ ನಮ್ಮ ಶಾಲೆಯ ಹಳೆ ವಿದ್ಯಾರ್ಥಿ ಮಹಾದೇವ .ಎಮ್. ಬಿಲ್ಲವ ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಅತ್ತ್ಯುತ್ತಮ ವಿದ್ಯಾರ್ಥಿ ಪುರಸ್ಕಾರ, ಪ್ರತಿಭಾ ಪುರಸ್ಕಾರ, ಬಹುಮಾನ ವಿತರಣೆ, ಸಾಂಸ್ಕೃತಿಕ ಚಟುವಟಿಕೆ ನಡೆಸಲಾಯಿತು. ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಸುಬ್ರಹ್ಮಣ್ಯ ಪೂಜಾರಿ, ಎಸ್.ಡಿ.ಎಂ.ಸಿ ಸದಸ್ಯರು, ಪೋಷಕರು, ಶಿಕ್ಷಕ ವೃಂದ ಹಾಗೂ ಶಾಲಾ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯ (ಉಡುಪಿ ವಲಯ) ಪುರುಷರ ಕಬಡ್ಡಿ ಪಂದ್ಯಾಟದ ಕಾರ್ಯಕ್ರಮದ ಸಮಾರೋಪ ಸಮಾರಂಭ ಗುರುವಾರ ಜರುಗಿತು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಜಿಪಂ ಮಾಜಿ ಅಧ್ಯಕ್ಷ ಎಸ್. ರಾಜು ಪೂಜಾರಿ ಅವರು ಮಾತನಾಡಿ, ಬೈಂದೂರಿನ ಜನತೆ ಕಬಡ್ಡಿ ಕ್ರೀಡೆಗೆ ತುಂಬಾ ಪ್ರಾಮುಖ್ಯತೆಯನ್ನು ನೀಡುತ್ತಾರೆ. ಅಲ್ಲದೆ ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ ಭಾಗವಹಿಸುವಿಕೆ ಮುಖ್ಯ. ಮಕ್ಕಳಲ್ಲಿ ಆತ್ಮ ವಿಶ್ವಾಸವನ್ನು ಬೆಳಸಲು ಕ್ರೀಡೆ ಅತ್ಯವಶ್ಯಕ ಎಂದು ತಿಳಿಸಿದರು. ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷರಾದ ಶ್ರೀಮುತ್ತಯ್ಯ ಪೂಜಾರಿ ಅವರು ಮಾತನಾಡಿ ತಾವು ಪದವಿ ಹಂತದಲ್ಲಿ ವಿಶ್ವವಿದ್ಯಾನಿಲಯ ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಭಾಗವಹಿಸಿದ ಸಂದರ್ಭ ಹಾಗೂ 30 ವರ್ಷಗಳ ಹಿಂದೆ ಬೈಂದೂರಿನ ಕಾಲೇಜಿನಲ್ಲಿ ಕಬಡ್ಡಿ ಪಂದ್ಯಾವಳಿಯನ್ನು ಆಯೋಜಿಸಿದ ಸಂದರ್ಭವನ್ನು ನೆನೆಸಿಕೊಂಡರು. ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜು ಪ್ರಾಂಶುಪಾಲರಾದ ನಾಗರಾಜ ಶೆಟ್ಟಿ ಅವರು ಮಾತನಾಡಿ ಈ ಒಂದು ಕಬಡ್ಡಿ ಪಂದ್ಯಾಟವನ್ನು ಆಯೋಜಿಸಲು ಸಹಕರಿಸಿದ ಎಲ್ಲರಿಗೂ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಉಡುಪಿಯ ಗಂಗೊಳ್ಳಿಯ ಬಂದರಿನಲ್ಲಿ ಅಗ್ನಿ ದುರಂತ ನಡೆದ ಸ್ಥಳಕ್ಕೆ ಶುಕ್ರವಾರ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಭೇಟಿ ನೀಡಿದರು. ಅಗ್ನಿ ಆಕಸ್ಮಿಕ ನಡೆದ ಸ್ಥಳವನ್ನು ವೀಕ್ಷಿಸಿದ ಸಚಿವರು, ಮೀನುಗಾರಿಕೆ ಇಲಾಖೆಯ ಅಧಿಕಾರಿಗಳು ಹಾಗೂ ಸ್ಥಳೀಯ ಮೀನುಗಾರರೊಂದಿಗೆ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಸಚಿವರು, ಅಗ್ನಿ ದುರಂತದಿಂದ ಸುಮಾರು 13 ರಿಂದ 15 ಕೋಟಿ ರೂ ನಷ್ಟ ಅಂದಾಜಿಸಲಾಗಿದೆ. ಇನ್ನು 15 ದಿನಗಳಲ್ಲಿ ಪರಿಹಾರ ಒದಗಿಸುವ ಪ್ರಯತ್ನ ಮಾಡಲಾಗುವುದು ಎಂದು ಭರವಸೆ ನೀಡಿದರು. ಸ್ಥಳದಲ್ಲಿದ್ದ ಮೀನುಗಾರರು ಹಾಗೂ ಬೋಟ್ ಕಳೆದುಕೊಂಡ ಮಾಲೀಕರಿಗೆ ಸ್ವಾಂತನ ಹೇಳಿದರು. 9 ಬೋಟ್’ಗಳು, ಎರಡು ದೋಣಿಗಳು ಸಂಪೂರ್ಣ ಸುಟ್ಟಿರುವ ಬಗ್ಗೆ ಬೇಸರ ವ್ಯಕ್ತಪಡಿಸಿದ ಸಚಿವರು, ಈ ಕುರಿತು ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಮೀನುಗಾರಿಕೆ ಮತ್ತು ಬಂದರು ಸಚಿವರೊಂದಿಗೆ ಚರ್ಚಿಸಿ ಪರಿಹಾರ ಒದಗಿಸಲಾಗುವುದು ಎಂದರು. ಮುಂದೆ ಇಂತಹ ದುರ್ಘಟನೆ ಮರುಕಳಿಸಬಾರದು. ಮುನ್ನೆಚ್ಚರಿಕೆ ಕ್ರಮವಾಗಿ ಬಂದರಿನಲ್ಲಿ ಅಗ್ನಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಛಾಯಾ ಸಿ ಪೂಜಾರಿ ತಮಿಳುನಾಡು ರಾಜ್ಯದಲ್ಲಿ ನಡೆಯುವ ರಾಷ್ಟ್ರ ಮಟ್ಟದ ಚೆಸ್ ಸ್ಪರ್ಧೆಗೆ ಆಯ್ಕೆಗಿದ್ದಾಳೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ (ಪದವಿಪೂರ್ವ ಶಿಕ್ಷಣ ವಿಭಾಗ) ಚಾಮರಾಜನಗರದಲ್ಲಿ ಆಯೋಜಿಸಿದ ರಾಜ್ಯ ಮಟ್ಟದ ಚೆಸ್ ಸ್ಪರ್ಧೆಯಲ್ಲಿ ವಿಜೇತಳಾಗಿ ಛಾಯಾ ಚಿನ್ನದ ಪದಕ ಪಡೆದಿದ್ದಳು. ಸಾಧಕ ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರುಅಭಿನಂದನೆ ಸಲ್ಲಿಸಿದ್ದಾರೆ.
