ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವದ ಪ್ರಯುಕ್ತ ಖಾದ್ಯ ಮತ್ತು ಪಾನೀಯ ತಯಾರಿಕಾ ಸ್ಪರ್ಧೆಯನ್ನು ಏರ್ಪಡಿಸಲಾಯಿತು. ಈ ಸ್ಪರ್ಧೆಯಲ್ಲಿ ಅತೀ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದರು. ಸಂಸ್ಥೆಯ ಕಾರ್ಯದರ್ಶಿಯವರಾದ ಕೆ. ರಾಧಾಕೃಷ್ಣ ಶೆಣೈ ಅವರು ವಿದ್ಯಾರ್ಥಿಗಳು ತಯಾರಿಸಿದ ವಿವಿಧ ಬಗೆಯ ತಿಂಡಿ ತಿನಿಸುಗಳನ್ನು ನೋಡಿ ಮೆಚ್ಚುಗೆ ವ್ಯಕ್ತಪಡಿಸಿದರು. ಪ್ರೌಢಶಾಲಾ ಮುಖ್ಯೋಪಾಧ್ಯಾಯ ಕೃಷ್ಣ ಅಡಿಗ, ಪೂರ್ವ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಪ್ರಮೀಳಾ ಡಿಸೋಜಾ, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ರೇಷ್ಮಾ ಡಿಸೋಜಾ ಅವರು ಈ ಸ್ಪರ್ಧೆಯನ್ನು ವೀಕ್ಷಿಸಿದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಕರ್ನಾಟಕ ಘಟಕವು ಹಲವು ವರ್ಷಗಳಿಂದ ಮಾಡುತ್ತಿರುವ ನಿಸ್ವಾರ್ಥ ಸೇವೆಗೆ ಅಗತ್ಯ ಬೆಂಬಲ ಹಾಗೂ ಮೆಚ್ಚುಗೆ ಸಿಗುತ್ತಿಲ್ಲ. ಈ ರೀತಿಯ ನಿರ್ಲಕ್ಷ್ಯದ ನಡುವೆ ನಾನು ನನ್ನ ಸೇವೆಯನ್ನು ಹೇಗೆ ಮುಂದುವರಿಸಲಿ ಅಥವಾ ನನ್ನ ಸಹೋದ್ಯೋಗಿಗಳನ್ನು ಹೇಗೆ ಪ್ರೇರೇಪಿಸಲಿ ಎಂಬುದು ನನ್ನನ್ನು ಪ್ರಶ್ನೆಯಾಗಿ ಕಾಡುತ್ತಿದೆ ಎಂದು ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ರಾಷ್ಟ್ರೀಯ ಪ್ರಧಾನ ಕಚೇರಿಯ ಅಧಿಕಾರಿಗಳ ನಿಲುವಿನ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಭಾರತ್ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್ ಸಿಂಧಿಯಾ. ಅವರು ಭಾನುವಾರ ಮೂಡಬಿದಿರೆಯ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಕನ್ನಡ ಭವನದಲ್ಲಿ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ರಾಷ್ಟ್ರೀಯ ಪ್ರಧಾನ ಕಚೇರಿ, ಕರ್ನಾಟಕ ರಾಜ್ಯ ಘಟಕ, ದಕ್ಷಿಣ ಕನ್ನಡ ಘಟಕ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಂಯುಕ್ತ ಆಶ್ರಯದಲ್ಲಿ ನಡೆದ ಭಾರತ್ ಸ್ಕೌಟ್ಸ್ ಆ್ಯಂಡ್ ಗೈಡ್ಸ್ನ ರಾಷ್ಟ್ರ ಮಟ್ಟದ ‘ಮೆಸೆಂಜರ್ ಆಫ್ ಪೀಸ್ ಸ್ಟಾರ್ ಅವಾರ್ಡ್ 2023’ ಹಾಗೂ ರಾಷ್ಟ್ರಪತಿ ಪುರಸ್ಕಾರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಸಾಲಿಗ್ರಾಮ ಪಟ್ಟಣಪಂಚಾಯತ್ ಅಭಿವೃದ್ಧಿ ಪಥಕ್ಕೆ ಸುವರ್ಣ ಮಹೋತ್ಸವ ಮುನ್ನುಡಿ ಬರೆಯಲಿ ಎಂದು ಕುಂದಾಪುರದ ಶಾಸಕ ಕಿರಣ್ ಕುಮಾರ್ ಕೊಡ್ಗಿ ಹೇಳಿದರು. ಅವರು ಶನಿವಾರ ಸಾಲಿಗ್ರಾಮ ಶ್ರೀ ಗುರುನರಸಿಂಹ ದೇಗುಲದ ಬಯಲು ರಂಗಮಂದಿರದಲ್ಲಿ ಸಾಲಿಗ್ರಾಮ ಪಟ್ಟಣಪಂಚಾಯತ್ ಸುವರ್ಣ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡ ಸಭಾ ಕಾರ್ಯಕ್ರಮದಲ್ಲಿ ಪಟ್ಟಣಪಂಚಾಯತ್ ಸುವರ್ಣ ಪಥ ಮುಖಪುಟ ಬಿಡುಗಡೆಗೊಳಿಸಿ ಮಾತನಾಡಿದರು. ಒಂದು ಪಟ್ಟಣಪಂಚಾಯತ್ ಅಭಿವೃದ್ಧಿ ಹೊಂದಬೇಕಾದರೆ ಆ ಕಾಲಘಟ್ಟದಲ್ಲಿ ಆಡಳಿತದಲ್ಲಿರುವ ಸರಕಾರಗಳ ಅನುದಾನದ ಮೇಲೆ ಅವಲಂಬಿತವಾಗುವುದಲ್ಲದೆ ಪ್ರಸ್ತುತ ಶಾಸಕರಾಗಿ ಅನುದಾನದ ಕೊರತೆ ಎದುರಿಸುತ್ತಿದ್ದೇವೆ. ಈ ದಿಸೆಯಲ್ಲಿ ಸುವರ್ಣ ಮಹೋತ್ಸವದ ಅಂಗವಾಗಿ ಒಂದಿಷ್ಟು ಯೋಜನೆ ಯೋಚನೆಗಳನ್ನಿರಿಸಿ ತ್ಯಾಜ್ಯ ವಿಲೇವಾರಿ ಘಟಕ ಸ್ಥಾಪಿಸಿ ಹೊಸಭಾಷ್ಯ ಬರೆದಿದೆ ಇದು ಪ್ರಶಂಸನೀಯ ಕಾರ್ಯ ಎಂದು ಸುವರ್ಣ ಮಹೋತ್ಸವಕ್ಕೆ ಶುಭಹಾರೈಸಿದರು. ಮಾಜಿ ಸಚಿವ ಕೆ. ಜಯಪ್ರಕಾಶ್ ಹೆಗ್ಡೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಆಗಿನ ಕಾಲಘಟ್ಟದಲ್ಲಿ ಪಟ್ಟಣಪಂಚಾಯತ್ ಚುಕ್ಕಾಣಿ ಹಿಡಿದ ಸಂದರ್ಭದಲ್ಲಿ ಅಭಿವೃದ್ಧಿಯತ್ತ ಪಟ್ಟಣಪಂಚಾಯತ್ ಕೊಂಡ್ಯೊಯ್ದ ಸಂದರ್ಭವನ್ನು ನೆನಪಿಸಿ ಪ್ಲಾಸ್ಟಿಕ್ ತ್ಯಾಜ್ಯದಿಂದಗಾಗುವ ದುಷ್ಪರಿಣಾಮಗಳ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಸರಕಾರದ ಉಚಿತ ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿದ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಲಾರಿಯನ್ನು ಗಂಗೊಳ್ಳಿ ಪೊಲೀಸರು ವಶಕ್ಕೆ ಪಡೆದು, ಓರ್ವನನ್ನು ಬಂಧಿಸಿದ್ದಾರೆ. ಶುಕ್ರವಾರದಂದು ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ತ್ರಾಸಿ ಗ್ರಾಮದ ಬೀಚ್ ಹತ್ತಿರದ ಕ್ರಾಸ್‌ಬಳಿ ಬೈಂದೂರು – ಕುಂದಾಪುರ ರಾ.ಹೆ-66ರ ಬಳಿಯ ರಸ್ತೆಯಲ್ಲಿ ಕುಂದಾಪುರ ಆಹಾರ ನಿರೀಕ್ಷಕ ಸುರೇಶ್ ಹೆಚ್.ಎಸ್ ಅವರಿಗೆ ಲಾರಿಯಲ್ಲಿ ಸರಕಾರದ ಉಚಿತ ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿದ ಅಕ್ಕಿಯನ್ನು ಕಾನೂನು ಬಾಹಿರವಾಗಿ ರವಾನಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ದೊರೆತ ಮೇರೆಗೆ, ಗಂಗೊಳ್ಳಿ ಪೊಲೀಸ್ ಠಾಣಾ ಸಿಬ್ಬಂದಿಗಳೊಂದಿಗೆ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ. ಈ ವೇಳೆ ಲಾರಿಯಲ್ಲಿ ಚಾಲಕ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಕಲ್ಯಾಣಪುರ ಸೋಲೂರು ಹೋಬಳಿ ನಂಜುಂಡ ಕೆ.ಆರ್ (28) ಎಂಬಾತನನ್ನು ಲಾರಿಯಲ್ಲಿರುವ ಲೋಡಿನ ಬಗ್ಗೆ ವಿಚಾರಿಸಿದಾಗ ಅಕ್ಕಿಯ ಚೀಲ ಎಂಬುದಾಗಿ ತಿಳಿಸಿದ್ದಾನೆ. ಭಟ್ಕಳದ ಶಫೀಕ್ ಸಾಹೇಬ್ ಎನ್ನುವವರು ತನ್ನ ಲಾರಿ 214 ಚೀಲ ಗಳಲ್ಲಿ ಒಟ್ಟು 107 ಕ್ವಿಂಟಾಲ್ ಅಕ್ಕಿಯನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯ ಪಾರಂಪಳ್ಳಿಯ ಘನ ತ್ಯಾಜ್ಯ ಘಟಕದ ಉದ್ಘಾಟನೆ ವಿರೋಧಿಸಿ ಸ್ಥಳೀಯರು ಶುಕ್ರವಾರ ರಾತ್ರಿ ಹಾಗೂ ಶನಿವಾರ ಬೆಳಗ್ಗೆ ಕಪ್ಪು ಪಟ್ಟಿ ಧರಿಸಿ ಘಟಕದ ಸಮೀಪ ಪ್ರತಿಭಟನೆ ನಡೆಸಿದರು. ಘಟಕದಿಂದ ಸ್ಥಳೀಯರಿಗೆ ಸಮಸ್ಯೆಯಾಗಲಿದ್ದು ಪರಿಸರಕ್ಕೆ ಹಾನಿಯಾಗಲಿದೆ ಹಾಗೂ ಸಿ.ಆರ್.ಝಡ್. ಅನುಮತಿ ಇದುವರೆಗೆ ಸಿಕ್ಕಿಲ್ಲ. ಲೋಕಾಯುಕ್ತದಲ್ಲಿ ಪ್ರಕರಣ ಇತ್ಯರ್ಥಕ್ಕೆ ಬಾಕಿ ಇದೆ. ಸ್ಥಳೀಯರು ಹೈಕೋರ್ಟ್‌ನಲ್ಲಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ಹಂತದಲ್ಲಿದೆ. ಹೀಗಾಗಿ ಉದ್ಘಾಟನೆ ನಡೆಸಿರುವುದು ಕಾನೂನುಬಾಹಿರ ಎಂದು ಆಕ್ರೋಶ ವ್ಯಕ್ತಪಡಿಸಿದರು ಹಾಗೂ ಮುಂದೆ ಘಟಕದ ವಿರುದ್ಧವಾಗಿ ತೀರ್ಪು ಬಂದು ಕೋಟ್ಯಾಂತರ ರೂ ಹಾನಿಯಾದರೆ ಅದಕ್ಕೆ ಅಧಿಕಾರಿಗಳು, ಇಂದಿನ ಜನಪ್ರತಿನಿಧಿಗಳು ನೇರ ಹೊಣೆಯಾಗುತ್ತಾರೆ ಎಂದು ಹೋರಾಟಗಾರರ ಪರವಾಗಿ ಕಾಂಗ್ರೆಸ್ ಜಿಲ್ಲಾ ಹಿಂದುಳಿದ ಘಟಕದ ಉಪಾಧ್ಯಕ್ಷ ನಾಗೇಂದ್ರ ಪುತ್ರನ್ ಎಚ್ಚರಿಕೆ ನೀಡಿದರು. ಈ ಸಂದರ್ಭ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಆಹೋರಾತ್ರಿ ನಡೆಸಿ ಪ್ರತಿಭಟನೆಯಲ್ಲಿ ಪ.ಪಂ.ಸದಸ್ಯ ಶ್ರೀನಿವಾಸ್ ಅಮೀನ್, ಕಾಂಗ್ರೆಸ್ ಜಿಲ್ಲಾ ಹಿಂದುಳಿದ ಘಟಕದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕ, ರಾಷ್ಟ್ರೀಯ ಸೇವಾ ಯೋಜನೆ, ರೋವರ‍್ಸ್ ರೇಂಜರ‍್ಸ್, ಎನ್.ಸಿ.ಸಿ ಮತ್ತು ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಕುಂದಾಪುರ, ಎನ್.ಸಿ.ಡಿ ವಿಭಾಗ ಸಾರ್ವಜನಿಕ ಆಸ್ಪತ್ರೆ ಕುಂದಾಪುರ, ಪ್ರಾಥಮಿಕ ಆರೋಗ್ಯ ಕೇಂದ್ರ ಬಸ್ರೂರು, ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ ಪ್ರಸಾದ್ ನೇತ್ರಾಲಯ ಉಡುಪಿ, ಆಟೋ ರಿಕ್ಷಾ ಚಾಲಕರು ಮತ್ತು ಮಾಲಕರ ಸಂಘ ಬಸ್ರೂರು, ರಥಬೀಧಿ ಪ್ರೆಂಡ್ಸ್ ಬಸ್ರೂರು, ಬಸ್ರೂರು ಸ್ಪೋಟ್ಸ್ ಕ್ಲಬ್, ಮಹಿಷಮರ್ಧಿನಿ ಮೊಗವೀರ ಯುವಕ ಮಂಡಲ ಬಸ್ರೂರು, ನ್ಯೂ ಸ್ಪೋಟ್ಸ್ ಕ್ಲಬ್ ಬಳ್ಕೂರು ಇವರ ಸಹಯೋಗದಲ್ಲಿ ಬ್ರಹತ್ ರಕ್ತದಾನ ಶಿಬಿರ, ಉಚಿತ ಆರೋಗ್ಯ ತಪಾಸಣಾ ಶಿಬಿರ, ಉಚಿತ ನೇತ್ರ ತಪಾಸಣಾ ಶಿಬಿರವು ಕಾಲೇಜಿನ ಆವರಣದಲ್ಲಿ ಶನಿವಾರದಂದು ಜರುಗಿತು. ಕಾರ್ಯಕ್ರಮ ಉದ್ಘಾಟಿಸಿದ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಕುಂದಾಪುರ ಇದರ ಅಧ್ಯಕ್ಷರಾದ ಜಯಕರ ಶೆಟ್ಟಿ ಮಾತನಾಡಿ, ಉಡುಪಿ ಜಿಲ್ಲೆಯಲ್ಲಿ ಕುಂದಾಪುರ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ಯಕ್ಷಗಾನ ಕಲೆಯ ಹೆಸರಲ್ಲಿ ನಡೆಸುವ “ರಾಜ್ಯೋತ್ಸವ ಯಕ್ಷಗಾನ ತಾಳಮದ್ದಳೆ” ಕಾರ್ಯಕ್ರಮವು 50ನೇ ವರ್ಷದ ಸುವರ್ಣ ಸಂಭ್ರಮದ “ಸುವರ್ಣಾಕ್ಷ” ಕಾರ್ಯಕ್ರಮ ನವೆಂಬರ್ 01 & 02ರಂದು ನಡೆಯಲಿದೆ ಎಂದು ಕಾಲೇಜಿನ ವಿಶ್ವಸ್ಥ ಮಂಡಳಿಯ ಉಪಾಧ್ಯಕ್ಷರಾದ ಕೆ. ಶಾಂತಾರಾಮ್ ಪ್ರಭು ಹೇಳಿದರು. ಅವರು ಕಾಲೇಜಿನಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ನ.01 ಮತ್ತು 02ರಂದು ಎರಡು ದಿನಗಳ ಕಾಲ ವಿವಿಧ ಕಾರ್ಯಕ್ರಮಗಳು ಇಲ್ಲಿನ ಆರ್.ಎನ್ ಶೆಟ್ಟಿ ಸಭಾಂಗಣದಲ್ಲಿ ನಡೆಯಲಿವೆ. ರಾಜ್ಯೋತ್ಸವ ಯಕ್ಷಗಾನ, ತಾಳಮದ್ದಲೆ, ಡಾ. ಹೆಚ್. ಶಾಂತಾರಾಮ್ ಯಕ್ಷಗಾನ ಪುರಸ್ಕಾರ ಪ್ರದಾನ, ಯಕ್ಷಗಾನ ಪ್ರದರ್ಶನ, ವಿಚಾರಗೋಷ್ಠಿ, ಯಕ್ಷಗಾನ ವಸ್ತು ಸಂಗ್ರಹಾಲಯ ಉದ್ಘಾಟನೆ ಕಾಯಕ್ರಮಗಳು ನಡೆಯಲಿವೆ ಎಂದರು. ನವೆಂಬರ್ 1ರಂದು ಶನಿವಾರ ಬೆಳಿಗ್ಗೆ 9.30ಕ್ಕೆ 50ನೇ ವಷದ ಯಕ್ಷಗಾನ ತಾಳಮದ್ದಲೆ ಮತ್ತು “ಸುವಣಾಕ್ಷ” ಕಾರ್ಯಕ್ರಮದ ಉದ್ಘಾಟನೆಯನ್ನು ಉಡುಪಿ ವಿಧಾಸಭಾ ಕ್ಷೇತ್ರದ ಮಾಜಿ ಶಾಸಕರಾದ ಪ್ರಮೋದ್ ಮಧ್ವರಾಜ್ ಅವರು ನೆರವೇರಿಸಲಿದ್ದಾರೆ. ಕಾಲೇಜಿನ ವಿಶ್ವಸ್ಥ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ತೆಕ್ಕೆಟ್ಟೆಯ ವಿಶ್ವ ವಿನಾಯಕ ಸಿ.ಬಿ.ಎಸ್.ಇ ಸ್ಕೂಲ್ ಪ್ಲೇ ಸ್ಕೂಲ್, ಎಲ್.ಕೆ.ಜಿ ಹಾಗೂ ಯು.ಕೆ.ಜಿ ಮಕ್ಕಳು ಎಲ್ಲೋ ಕಲರ್ ಡೇಯನ್ನು ಆಚರಿಸಿದರು. ಮಕ್ಕಳಲ್ಲಿ ಬಣ್ಣಗಳನ್ನು ಗುರುತಿಸಿ ನೆನಪಿನಲ್ಲಿಟ್ಟುಕೊಳ್ಳುವ ಕೌಶಲವನ್ನು ವೃದ್ದಿಸುವ ಸಲುವಾಗಿ ಪ್ರತಿ ತಿಂಗಳು ವಿವಿಧ ಬಣ್ಣಗಳ ದಿನಾಚರಣೆಯನ್ನು ಮಾಡಿ ಮಕ್ಕಳಿಗೆ ಬಣ್ಣಗಳ ಅರಿವನ್ನು ಮೂಡಿಸುವ ಕಾರ್ಯಕ್ರಮವನ್ನು ನಡೆಸಲಾಗುತ್ತದೆ. ಆ ಪ್ರಯುಕ್ತ ವಿದ್ಯಾರ್ಥಿಗಳು ಹಳದಿ ಬಣ್ಣದ ವಿವಿಧ ತಿನಿಸುಗಳು ಹಾಗೂ ವಸ್ತುಗಳನ್ನು ಪ್ರದರ್ಶಿಸಿದರು. ತರಗತಿ ಕೋಣೆಗಳಲ್ಲಿ ಹಳದಿ ಬಣ್ಣದ ವಸ್ತುಗಳ ಅಲಂಕಾರವನ್ನು ಮಾಡಿ ವಿದ್ಯಾರ್ಥಿಗಳು ನಲಿದಾಡಿದರು. ವಿದ್ಯಾರ್ಥಿಗಳು ನೃತ್ಯ ಹಾಗೂ ವಿವಿಧ ಕಾರ್ಯಕ್ರಮಗಳನ್ನು ನಡೆಸಿದರು. ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಹಳದಿ ಬಣ್ಣದ ಉಡುಗೆಗಳನ್ನು ತೊಟ್ಟು ಸಂಭ್ರಮಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಮ್ಯಾನೇಜಿಂಗ್ ಡೈರೆಕ್ಟರ್ ಎಂ. ಪ್ರಭಾಕರ ಶೆಟ್ಟಿ, ಪ್ರಾಂಶುಪಾಲ ನಿತಿನ್ ಡಿ ಅಲ್ಮೇಡಾ, ಕಿಂಡರ್ ಗಾರ್ಟನ್ ಸಂಯೋಜಕಿ ವಿಲಾಸಿನಿ ಶೆಟ್ಟಿ, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಶಾಲಾ ಸಿಬ್ಬಂದಿಯವರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಾಂಪ್ರದಾಯಿಕವಾಗಿ ನಡೆಯುವ ದೀಪಾವಳಿ ಹಬ್ಬ ಕೃಷಿ ಸಂಬಂಧಿಯಾಗಿದ್ದು, ಪೌರಾಣಿಕ ಹಿನ್ನೆಲೆಯನ್ನು ಹೊಂದಿದೆ. ದೀಪಾವಳಿಯ ಸಂದರ್ಭದಲ್ಲಿ ನಡೆಯುವ ಬಲೀಂದ್ರ ಪೂಜೆ, ಲಕ್ಷ್ಮಿ ಪೂಜೆ, ತುಳಸಿ ಪೂಜೆ, ಗೋಪೂಜೆ ಈ ಎಲ್ಲಾ ಆಚರಣೆಗಳು ವಿದ್ಯಾರ್ಥಿಗಳಿಗೆ ತಿಳಿದಿರಬೇಕು ಎಂದು ಹೆಮ್ಮಾಡಿಯ ಜನತಾ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಜಗದೀಶ್ ಶೆಟ್ಟಿ ಹೇಳಿದರು. ಅವರು ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗ ಆಯೋಜಿಸಿದ ದೀಪಾವಳಿ ಸಂಭ್ರಮ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ ಅವರು ಅಧ್ಯಕ್ಷತೆ ವಹಿಸಿದ್ದರು. ಕನ್ನಡ ವಿಭಾಗದ ಪ್ರಾಧ್ಯಾಪಕರಾದ ರಶ್ಮಿತಾ ಶೆಟ್ಟಿ ಅತಿಥಿಗಳನ್ನು ಪರಿಚಯಿಸಿದರು. ಇಂಗ್ಲೀಷ್ ವಿಭಾಗದ ಪ್ರಾಧ್ಯಾಪಕಿ ಸ್ವಾತಿ ಜಿ. ರಾವ್ ಬಹುಮಾನಿತರ ಪಟ್ಟಿ ವಾಚಿಸಿದರು. ಕಾರ್ಯಕ್ರಮದ ಸಂಯೋಜಕಿ ರೇಷ್ಮಾ ಶೆಟ್ಟಿ ಸ್ವಾಗತಿಸಿ, ವಿದ್ಯಾರ್ಥಿನಿ ಶರಣ್ಯ ಶೆಟ್ಟಿ ನಿರೂಪಿಸಿ, ಪ್ರವೀಣಾ ಎಮ್. ಪೂಜಾರಿ ವಂದಿಸಿದರು. ಈ ಸಂದರ್ಭ ಲಕ್ಷ್ಮಿ ಪೂಜೆ, ಗೋಪೂಜೆ, ಬಲೀಂದ್ರ ಪೂಜೆಯನ್ನು ಕಾಲೇಜಿನ ಆವರಣದಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ : ಜೆಸಿಐ ಗಂಗೊಳ್ಳಿ ಘಟಕವು ತನ್ನ ಸ್ಥಾಪನೆಯ ಮೊದಲ ವರ್ಷದಲ್ಲೇ ́ಅತ್ಯುತ್ತಮ ನೂತನ ಘಟಕ ಪ್ರಶಸ್ತಿʼಯನ್ನು ತನ್ನ ಮುಡಿಗೇರಿಸಿಕೊಂಡಿದೆ. ಅನೇಕ ಸಮಾಜಮುಖಿ ಮತ್ತು ಸೃಜನಾತ್ಮಕ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಹಮ್ಮಿಕೊಂಡು ಅತ್ಯುತ್ತಮ ಸಾಧನೆ ದಾಖಲಿಸಿರುವ ಗಂಗೊಳ್ಳಿ ಜೇಸಿಐ ಘಟಕಕ್ಕೆ ಮಂಗಳೂರಿನ ಸ್ವಸ್ತಿಕ್ ವಾಟರ್ ಫ್ರೆಂಡ್‌ನಲ್ಲಿ ನಡೆದ ಜೆಸಿಐ ಇಂಡಿಯಾ ಝೋನ್ ಘಿಗಿರ ಝೋನ್‌ಕಾನ್ ವಲಯ ಸಮ್ಮೇಳನದಲ್ಲಿ ಅತ್ಯುತ್ತಮ ನೂತನ ಘಟಕ ಪ್ರಶಸ್ತಿ ಪ್ರದಾನ ಮಾಡಲಾಯಿತು. ಜೇಸಿಐ ಗಂಗೊಳ್ಳಿ ಘಟಕದ ಅಧ್ಯಕ್ಷ ರೋಶನ್ ಖಾರ್ವಿ, ಕಾರ್ಯದರ್ಶಿ ನಾಗರಾಜ ಖಾರ್ವಿ ಮೊದಲಾದವರು ಉಪಸ್ಥಿತರಿದ್ದರು.
