ಕುಂದಾಪ್ರ ಡಾಟ್ ಕಾಂ ವರದಿ.ಕುಂದಾಪುರ: ತಾಲೂಕಿನ ಹಳ್ಳಿಹೊಳೆಯ ದಿನೇಶ್ ಬೋವಿ ಅವರು ʼಪರಿಸರ ಉಳಿಸಿʼ ಎಂಬ ಸಂದೇಶದೊಂದಿಗೆ ಸತತ 11 ತಿಂಗಳ ಕಾಲ ಉಡುಪಿಯಿಂದ ಲಡಾಕ್ ತನಕ 3,300 ಕಿಮೀ ಯಾತ್ರೆಯನ್ನು ಸೈಕಲ್‌ನಲ್ಲಿ ಪ್ರಯಾಣಿಸುವ ಮೂಲಕ ವಿಶಿಷ್ಟ ಸಾಧನೆ ಮಾಡಿದ್ದಾರೆ. 2024ರ ಅ.15ರಂದು ಉಡುಪಿಯಿಂದ ಸೈಕಲ್ ಮೂಲಕ ಲಡಾಖ್ ಗೆ ಪ್ರಯಾಣ ಬೆಳೆಸಿದ್ದ ದಿನೇಶ್, 2025ರ ಸೆ.15ರಂದು ಲಡಾಖ್ ತಲುಪಿ ಸತತ 330 ದಿನಗಳ ಸೈಕಲ್ ಯಾತ್ರೆಯನ್ನು ಸಂಪೂರ್ಣಗೊಳಿಸಿದ್ದಾರೆ. ಕರ್ನಾಟಕದಿಂದ ಆರಂಭಗೊಂಡ ಸೈಕಲ್ ಪ್ರಯಾಣ ಗೋವಾ, ಮಹಾರಾಷ್ಟ್ರ, ಗುಜರಾತ್, ರಾಜಸ್ಥಾನ, ಪಂಜಾಬ್, ಹರಿಯಾಣ ಮೂಲಕವಾಗಿ ಜಮು ಕಾಶ್ಮೀರ ತಲುಪಿದ್ದು 8 ರಾಜ್ಯಗಳಿಗೆ ಭೇಟಿ ನೀಡಿದ್ದಾರೆ. ಲಡಾಕ್‌ಗೆ 11 ತಿಂಗಳಿಗಿಂತ ಬೇಗ ತಲುಪ ಬಹುದಾಗಿದ್ದರೂ, ಕಾಶ್ಮೀರದ ಥಾಂಗ್ ಗ್ರಾಮದ ರಸ್ತೆ ವರ್ಷದಲ್ಲಿ 6 ತಿಂಗಳು ಮಾತ್ರ ತೆರೆದಿರುತ್ತದೆ. ಹಾಗಾಗಿ 1 ತಿಂಗಳು ಮುಂಬೈಯಲ್ಲಿ ವಿಶ್ರಾಂತಿ ಮಾಡಿದ್ದರೆ, 3 ತಿಂಗಳು ಗುಜರಾತಿನಲ್ಲಿ ತಂಗಿದ್ದರು. 11 ತಿಂಗಳ ಸೈಕಲ್ ಪ್ರಯಾಣದಲ್ಲಿ ಒಟ್ಟು ಸುಮಾರು 1.5 ಲಕ್ಷ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ರ ಅಲೆಮಾರಿ/ ಅರೆ ಅಲೆಮಾರಿ ಜನಾಂಗದ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಅಲೆಮಾರಿ/ ಅರೆ ಅಲೆಮಾರಿ ಜನಾಂಗದ ಮೆಟ್ರಿಕ್ ನಂತರದ ಅರ್ಹತಾ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ ಮತ್ತು ವಿದ್ಯಾಸಿರಿ ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ವೆಬ್‌ಸೈಟ್ https://ssp.postmatric.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಅಕ್ಟೋಬರ್ 31 ರ ವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಇಲಾಖಾ ಸಹಾಯವಾಣಿ ಸಂಖ್ಯೆ: 8050770005 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಅಮಾಸೆಬೈಲು: ಜ್ಯುವೆಲ್ಲರಿ ಶಾಪ್‌ನಿಂದ ಚಿನ್ನ ಖರೀದಿಸಿ ಹಣ ಕೊಡದೆ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಅಮಾಸೆಬೈಲು ಪೊಲೀಸರು ಬಂಧಿಸಿದ್ದಾರೆ. ಪ್ರವೀಣ್ ಬಂಧಿತ ಆರೋಪಿ. ಹೊಸಂಗಡಿಯ ಶ್ರೀಕೃಷ್ಣ ಜ್ಯುವೆಲ್ಲರಿಯಿಂದ 2024ರ ನ.3ರಂದು ಸಂತೋಷ ಎಂದು ಹೆಸರು ಹೇಳಿಕೊಂಡು ಕಾರಿನಲ್ಲಿ ಬಂದ ವ್ಯಕ್ತಿ ಗಿಪ್ಟ್ ಕೊಡುವ ಬಗ್ಗೆ 30 ಸಾವಿರ ರೂ. ಮೌಲ್ಯದ 2 ಚಿನ್ನದ ಉಂಗುರಗಳನ್ನು ಖರೀದಿ ಮಾಡಿದ್ದನು. ಹಣವನ್ನು ನೆಫ್ಟ್ ಮೂಲಕ ಹಾಕಿರುವುದಾಗಿ ಮೊಬೈಲ್ ಪೋನ್ ತೋರಿಸಿ ಉಂಗುರಗಳನ್ನು ತೆಗೆದುಕೊಂಡು ಹೋಗಿದ್ದನು. ಆದರೆ ಹಣ ಖಾತೆಗೆ ಜಮಾ ಆಗದ ಬಗ್ಗೆ ಆತನಿಗೆ ದೂರವಾಣಿ ಕರೆ ಮಾಡಿ ವಿಚಾರಿಸಿದ್ದು, ಆತ ನಾಳೆ ಕೊಡುವುದಾಗಿ ಹೇಳಿ ವಂಚಿಸಿದ್ದನು. ಈ ಬಗ್ಗೆ ಅಮಾಸೆಬೈಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು, ತಲೆಮರೆಸಿಕೊಂಡಿದ್ದ ಆರೋಪಿ ಪ್ರವೀಣ್ ಎಂಬಾತನನ್ನು ಸೆ.29ರಂದು ಬಂಧಿಸಿ, ಕಾರು ಮತ್ತು ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಲಲಿತ ಕಲಾ ಸಂಘದ ಆಶ್ರಯದಲ್ಲಿ ‘ದಾಂಡಿಯ 2025’ ನೃತ್ಯ ಕಾರ್ಯಕ್ರಮ ಜರುಗಿತು. ಕಾಲೇಜಿನ ಸಾಂಸ್ಕೃತಿಕ ತಂಡದಿಂದ ವಿನೂತನ ಶೈಲಿಯಲ್ಲಿ ದಾಂಡಿಯ ನೃತ್ಯ ಪ್ರಕಾರವನ್ನು ಕಾಲೇಜಿನ ಪ್ರಾಂಗಣದಲ್ಲಿ ನೆರವೇರಿಸಲಾಯಿತು. ಈ ಸಂದರ್ಭ ಕಾಲೇಜಿನ ಪ್ರಾಂಶುಪಾಲರಾದ ಡಾ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ, ಆಡಳಿತ ನಿಕಾಯಕರು ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ರಕ್ಷಿತ್ ರಾವ್ ಗುಜ್ಜಾಡಿ, ಲಲಿತ ಕಲಾ ಸಂಘದ ಸಂಯೋಜಕರಾದ ದೀಪಿಕಾ ಜಿ., ನಿರ್ಮಲ ಬಿಲ್ಲವ, ರೇವತಿ ಡಿ., ಬೋಧಕ-ಬೋಧಕೇತರರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ವಿದ್ಯಾರ್ಥಿನಿ ಶ್ರೀರಕ್ಷಾ ನಿರೂಪಿಸಿ, ಸ್ವಾಗತಿಸಿ, ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿಕುಂದಾಪುರ: ಇಲ್ಲಿನ ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರಕಾರಿ ಕಾಲೇಜಿನ ಉದ್ಯೋಗ ಮಾಹಿತಿ ಕೋಶ ಮತ್ತು ಆಂತರಿಕ ಗುಣಮಟ್ಟ ಭರವಸಾ ಕೋಶ ಆಶ್ರಯದಲ್ಲಿ ಮ್ಯಾಜಿಕ್ ಬಸ್ ಫೌಂಡೇಶನ್ ಸಹಯೋಗದೊಂದಿಗೆ ಅಂತಿಮ ಪದವಿ ವಿದ್ಯಾರ್ಥಿಗಳಿಗೆ ಐದು ದಿನಗಳ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಾಗಾರವು ಸೋಮವಾರ ಉದ್ಘಾಟನೆಗೊಂಡಿತು. ಕಾರ್ಯಕ್ರಮವನ್ನು ಸ್ಟೀವನ್ ಡಿಕೋಸ್ಟ್ ಅವರು ಉದ್ಘಾಟಿಸಿದರು. ಪ್ರಾಂಶುಪಾಲರಾದ ರಾಮರಾಯ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು. ಮ್ಯಾಜಿಕ್ ಬಸ್ ಸಂಸ್ಥೆಯ ಜಾಬೀಸ್, ಪೂಜಿತಾ, ಹಫೀಜ್ ಹಾಗೂ ಸಂತೋಷ್ ತರಬೇತಿ ನೀಡಿದರು. ಐ.ಕ್ಯೂ.ಎ.ಸಿ. ಸಂಚಾಲಕ ನಾಗರಾಜ ಯು., ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ನಾಗರಾಜ ವೈದ್ಯ ಎಂ., ಸ್ನಾತಕ ಪದವಿ ಉದ್ಯೋಗ ಮಾಹಿತಿ ಕೋಶದ ಸಂಚಾಲಕ ಮನೋಹರ್ ಬಿ. ಹಾಗೂ ಮ್ಯಾಜಿಕ್ ಬಸ್ ಸಂಸ್ಥೆಯ ಕಾರ್ಯಕ್ರಮ ವ್ಯವಸ್ಥಾಪಕ ಭಾರ್ಗವ ಉಪಸ್ಥಿತರಿದ್ದರು. ಎಂ.ಕಾಂ. ವಿದ್ಯಾರ್ಥಿನಿ ರಶ್ಮಿ ಕಾರ್ಯಕ್ರಮ ನಿರೂಪಿಸಿ, ಸ್ನಾತಕೋತ್ತರ ಪದವಿ ಉದ್ಯೋಗ ಕೋಶದ ಸಂಚಾಲಕ ಡಾ. ಉದಯ ಶೆಟ್ಟಿ ಕೆ. ಸ್ವಾಗತಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜಿನ ವತಿಯಿಂದ 5ನೇ ವರ್ಷದ ಶ್ರೀ ಶಾರದಾ ಪೂಜೆಯು ಕಾಲೇಜಿನ ಜಸ್ಟಿಸ್ ಕೆ. ಎಸ್. ಹೆಗ್ಡೆ ಕೇಂದ್ರ ಗ್ರಂಥಾಲಯದಲ್ಲಿ ನೆರವೇರಿತು. ಕಾರ್ಯಕ್ರಮದ ಅಂಗವಾಗಿ ಗ್ರಂಥಾಲಯವನ್ನು ಮೈಸೂರು ದಸರಾ ಶೈಲಿಯ ಗೊಂಬೆಗಳಿಂದ ಅಲಂಕರಿಸಲಾಗಿತ್ತು. ಬಗೆ ಬಗೆಯ ದೀಪಗಳು, ಆಯುರ್ವೇದ ಗ್ರಂಥಗಳು, ಫಲಪುಷ್ಪ ಹಾಗೂ ರಂಗೋಲಿಗಳಿಂದ ಇಡೀ ವಾತವರಣವನ್ನು ಹಬ್ಬದ ಆಚರಣೆಗಾಗಿ ಸಜ್ಜುಗೊಳಿಸಲಾಗಿತ್ತು. ಮುದ್ದು ಮಕ್ಕಳ ಕಲರವ ಮತ್ತು ವಿದ್ಯಾರ್ಥಿಗಳ ಸಾಂಪ್ರದಾಯಿಕ ವೇಷಭೂಷಣವು ಕಾರ್ಯಕ್ರಮಕ್ಕೆ ಹೊಸ ಮೆರುಗು ನೀಡಿತು. ಪೂಜಾ ವಿಧಿಯಲ್ಲಿ ದೇವಿ ಸ್ತೋತ್ರ ಪಾರಾಯಣ, ಭಜನೆ, ಕುಂಕುಮಾರ್ಚನೆ, ಶಾರದಾ ಪೂಜೆ, ವಾಚನ-ಪ್ರವಚನ, ರಸಪ್ರಶ್ನೆ, ಸಂಖ್ಯಾ ಬಂಧ(ಸುಡೋಕು), ಅಷ್ಟಾವಧಾನ ಸೇವೆ ಹಾಗೂ ಪ್ರಸಾದ ವಿತರಣೆ, ವಂದೇ ಮಾತರಂ ನಡೆಯಿತು. ಅಂತೆಯೇ ಆಳ್ವಾಸ್ ಪದವಿ ಕಾಲೇಜಿನ ಗ್ರಂಥಾಲಯದಲ್ಲಿ ನೂತನ ಶಾರದಾ ಬಿಂಬದ ಪ್ರತಿಷ್ಠಾಪನೆಯೊಂದಿಗೆ ಶಾರದಾ ಪೂಜೆ ನಡೆಯಿತು. ಅನಂತ ಪದ್ಮನಾಭ ಅಸ್ರಣ್ಣರು ಪೂಜಾ ವಿಧಿ ವಿಧಾನ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಎಂ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಭಾರತೀಯ ಜನತಾ ಪಾರ್ಟಿ, ಹಿಂದುಳಿದ ವರ್ಗಗಳ ಮೋರ್ಚಾ ಬೈಂದೂರು ಇವರ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 171ನೇ ಜನ್ಮ ದಿನಾಚರಣೆಯ ಅಂಗವಾಗಿ ನಡೆದ ನಾರಾಯಣ ಗುರುಗಳ ಭಾವಚಿತ್ರ ಬಿಡಿಸುವ ಸ್ಪರ್ಧೆಯಲ್ಲಿ ಗಂಗೊಳ್ಳಿಯ ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಏಳನೆಯ ತರಗತಿಯ ವಿದ್ಯಾರ್ಥಿ ಸಂಜಿತ್ ಎಂ. ದೇವಾಡಿಗ ದ್ವಿತೀಯ ಸ್ಥಾನವನ್ನು ಗಳಿಸಿರುತ್ತಾನೆ. ಈತ ಗಂಗೊಳ್ಳಿಯ ಚಿತ್ರಕಲಾ ಶಿಕ್ಷಕ ಮಾಧವ ದೇವಾಡಿಗ ಮತ್ತು ಉಪನ್ಯಾಸಕಿ ಸಾವಿತ್ರಿ ಎಸ್. ದಂಪತಿ ಪುತ್ರ. ವಿದ್ಯಾರ್ಥಿಯ ಸಾಧನೆಗೆ ಶಾಲಾ ಎಸ್‌ಡಿಎಂಸಿ ಬಳಗ, ಮುಖ್ಯೋಪಾಧ್ಯಾಯರು, ಬೋಧಕ ಮತ್ತು ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಕೋಟದ ಅಮೃತೇಶ್ವರೀ ಹಲವು ಮಕ್ಕಳ ತಾಯಿ ದೇಗುಲದಲ್ಲಿ ವಾರ್ಷಿಕ ಶರನ್ನವರಾತ್ರಿ ಉತ್ಸವದ ಎಂಟನೇ ದಿನದ ಅಂಗವಾಗಿ ಚಂಡಿಕಾ ಸಪ್ತಸತಿ ಪಾರಾಯಣ, ದುರ್ಗಾಹೋಮ ಕಾರ್ಯಕ್ರಮಗಳು ಸೇವಾಕರ್ತರಾಗಿ ಉದ್ಯಮಿ ಮುನಿಯಾಲು ಉದಯ್ ಕುಮಾರ್ ಶೆಟ್ಟಿ ದಂಪತಿಗಳು, ಲೋಹಿತ್ ಕುಂದರ್, ಅಶೋಕ್ ಶೆಟ್ಟಿ ಬನ್ನಾಡಿ ಭಾಗಿಯಾಗುವ ಮೂಲಕ ನೆರವೆರಿತು. ಧಾರ್ಮಿಕ ಕೈಂಕರ್ಯವನ್ನು ವೇ. ಮೂ ಮಧುಸೂದನ ಬಾಯರಿ ನೇತೃತ್ವದಲ್ಲಿ ಜರಗಿತು. ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ ಆನಂದ್ ಸಿ. ಕುಂದರ್ ಸೇವಾಕರ್ತ ಕುಟುಂಬಕ್ಕೆ ಪ್ರಸಾದ ವಿತರಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ದೇಗುದ ಆಡಳಿತಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಗಣೇಶ್ ನೆಲ್ಲಿಬೆಟ್ಟು, ಸುಭಾಷ್ ಶೆಟ್ಟಿ, ಸುಧಾ ಎ. ಪೂಜಾರಿ, ಜ್ಯೋತಿ ಡಿ.ಕಾಂಚನ್, ಶಿವ ಪೂಜಾರಿ, ರತನ್ ಐತಾಳ್, ಚಂದ್ರ ಆಚಾರ್, ಸುಬ್ರಾಯ ಜೋಗಿ, ಮಾಜಿ ಟ್ರಸ್ಟಿಗಳಾದ ಚಂದ್ರ ಪೂಜಾರಿ, ದೇಗುಲದ ವ್ಯವಸ್ಥಾಪಕ ಗಣೇಶ್ ಹೊಳ್ಳ, ಅರ್ಚಕ ಪ್ರತಿನಿಧಿಗಳು ಉಪಸ್ಥಿತರಿದ್ದರು. ಅಪರಾಹ್ನ ಮಹಾ ಅನ್ನಸಂತರ್ಪಣೆ ಕಾರ್ಯಕ್ರಮಗಳು ಜರಗಿತು. ಅಮೃತ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ರಾಜ್ಯದಲ್ಲಿರುವ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಪ್ರಾರಂಭಿಸಲಾಗಿದ್ದು, ಸದರಿ ಸಮೀಕ್ಷೆಗೆ ನಿಯೋಜನೆಗೊಂಡ ಗಣತಿದಾರರು ತಮಗೆ ನಿಯೋಜಿಸಲಾಗಿರುವ ಸಮೀಕ್ಷಾ ಬ್ಲಾಕ್‌ಗಳಲ್ಲಿ ಸಮೀಕ್ಷೆಯನ್ನು ನಿರ್ವಹಿಲು ಆದೇಶಿಸಲಾಗಿರುತ್ತದೆ. ಯಾವುದೇ ಗಣತಿದಾರರು ಸಮೀಕ್ಷೆಯಲ್ಲಿ ನಿಷ್ಕಾಳಜಿ ತೋರುವಂತಿಲ್ಲ. ಗಣತಿದಾರರು ಸಮೀಕ್ಷೆಯಲ್ಲಿ ನಿರಾಸಕ್ತಿ ಅಥವಾ ಅಸಡ್ಡೆ, ತೋರಿದ್ದಲ್ಲಿ, ಅನಗತ್ಯ ನೆಪಗಳನ್ನು ಹೇಳಿ ಗಣತಿ ಕಾರ್ಯದಲ್ಲಿ ನಿರ್ಲಕ್ಷ್ಯ ತೋರಿದ್ದಲ್ಲಿ ನಿರ್ದಾಕ್ಷಿಣ್ಯವಾಗಿ ಇಲಾಖಾ ವಿಚಾರಣೆ ನಡೆಸಲು ಹಾಗೂ ಸರ್ಕಾರದ ಕೆಲಸದಲ್ಲಿ ನಿಷ್ಕಾಳಜಿ ತೋರಿದ್ದಕ್ಕೆ ಶಿಸ್ತುಕ್ರಮ ಜರುಗಿಸಲು ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಿಕ್ಷಣದಲ್ಲಿ ಪದವಿಯ ಜೊತೆಗೆ ಜೀವನ ಮೌಲ್ಯಗಳು ಅತ್ಯವಶ್ಯಕವಾಗಿ ಬೇಕಾಗುತ್ತದೆ. ಉದ್ಯೋಗ, ಪದವಿ, ಶಿಕ್ಷಣ ಇವೆಲ್ಲವೂಗಳಿಗಿಂತ ಉತ್ತಮ ವ್ಯಕ್ತಿತ್ವ ಬೆಳೆಸಿಕೊಳ್ಳುವುದು ಮುಖ್ಯವಾಗಿರುತ್ತದೆ. ಜೀವನವನ್ನು ಮೌಲ್ಯಯುತ ಮತ್ತು ನೈತಿಕವಾಗಿ ರೂಪಿಸಿಕೊಳ್ಳುವ ಕುರಿತು ತಿಳುವಳಿಕೆ ಬೇಕಾಗುತ್ತದೆ. ಮೊದಲು ನೖತಿಕತೆ ಮತ್ತು ಒಳ್ಳೆಯತನವನ್ನು ಕಲಿಯಬೇಕು ಎಂದು ಕುಂದೇಶ್ವರ ದೇವಸ್ಥಾನದ ಆಡಳಿತ ಮೋಕ್ತೇಸರರು ವಾಸುದೇವ ಯಡಿಯಾಳಿ ಅಭಿಪ್ರಾಯಪಟ್ಟರು. ಅವರು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜು ಮತ್ತು ಕುಂದೇಶ್ವರ ದೇವಸ್ಥಾನದ ಸಹಯೋಗದಲ್ಲಿ ನಡೆದ ಒಂದು ದಿನದ ಜೀವನ ಮೌಲ್ಯ- ನೈತಿಕ ಶಿಕ್ಷಣ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಆಡಳಿತ ಮಂಡಳಿಯ ಕಾರ್ಯದರ್ಶಿಗಳಾದ ಯು. ಎಸ್. ಶೆಣೈ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಸಮುದಾಯ ಬಾನುಲಿ ಕೇಂದ್ರ ರೇಡಿಯೋ ಕುಂದಾಪ್ರ 89.6 ಎಫ್. ಎಮ್. ಇದರ ಕಾರ್ಯಕ್ರಮ ನಿರ್ವಾಹಕಿ ಜ್ಯೋತಿ ಸಾಲಿಗ್ರಾಮ ಕಾರ್ಯಕ್ರಮ ನಿರೂಪಿಸಿ, ರಾಜ್ಯಶಾಸ್ತ್ರ ಉಪನ್ಯಾಸಕಿ ಅಕ್ಷತಾ ಸ್ವಾಗತಿಸಿ, ಕಂಪ್ಯೂಟರ್ ಉಪನ್ಯಾಸಕ ರಾಮಚಂದ್ರ ಆಚಾರ್ಯ ವಂದಿಸಿದರು.…
