ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ಹಿರಿಯ ವಿದ್ಯಾರ್ಥಿ ಗೌರವ್ ಹೆಗ್ಡೆ ನಿರ್ದೇಶನದ ಕಿರುಚಿತ್ರ ‘ಮಾಯಾಚಕ್ರ’ದ ಪ್ರೀಮಿಯರ್ ಷೋ ಆಳ್ವಾಸ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸಹಯೋಗದಲ್ಲಿ ಕಾಲೇಜಿನ ಆಡಿಯೋ ವೀಡಿಯೋ ಥಿಯೇಟರ್ನಲ್ಲಿ ನಡೆಯಿತು. ಕಿರುಚಿತ್ರ ವೀಕ್ಷಿಸಿ ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮ್ಯಾನೇಜ್ಮೆಂಟ್ ಟ್ರಸ್ಟಿ ವಿವೇಕ್ ಆಳ್ವ, ಗೌರವ್ ಹೆಗ್ಡೆ ಮತ್ತು ಅವರ ತಂಡದ ಚೊಚ್ಚಲ ಪ್ರಯತ್ನವನ್ನು ಶ್ಲಾಘಿಸಿದರು. ಎಳವೆಯಲ್ಲಿಯೇ ಇಂತಹ ಸೃಜನಾತ್ಮಕ ಕಾರ್ಯಗಳನ್ನು ಕೈಗೊಳ್ಳುವುದು ಸಮಾಜಕ್ಕೆ ಪ್ರೇರಣಾದಾಯಕ. ತನಿಖಾ ಪತ್ರಿಕೋದ್ಯಮದ ಕಥಾಹಂದರ ಹೊಂದಿರುವ ಈ ಕಿರುಚಿತ್ರವು, ಪತ್ರಕರ್ತರು ವೃತ್ತಿ ಜೀವನದಲ್ಲಿ ಎದುರಿಸಬೇಕಾಗುವ ತೊಂದರೆಗಳು, ಸವಾಲುಗಳು ಮತ್ತು ಸಮಾಜದ ಒತ್ತಡಗಳ ನೈಜ ಚಿತ್ರಣವನ್ನು ನೀಡುತ್ತದೆ. ‘ಮಾಯಾಚಕ್ರ’ದ ಇನ್ನೊಂದು ವಿಶೇಷತೆ, ಚಿತ್ರದಲ್ಲಿ ಸ್ಥಳೀಯ ಸ್ಥಳಗಳು ಮತ್ತು ಪ್ರತಿಭೆಗಳನ್ನು ಬಳಸಿರುವುದು. ಈ ಮೂಲಕ ಗ್ರಾಮೀಣ ಸೌಂದರ್ಯವನ್ನು ಕಣ್ತುಂಬಿಕೊಳ್ಳುವುದರ ಜೊತೆಗೆ, ಪ್ರತಿಭಾವಂತರಿಗೆ ತಮ್ಮ ನಟನಾ ಕೌಶಲ್ಯವನ್ನು ತೋರಿಸಲು ವೇದಿಕೆ ಒದಗಿಸಲಾಗಿದೆ ಎಂದರು. ಸಿನಿಮಾದ ನಿರ್ದೇಶಕ ಗೌರವ್ ಹೆಗ್ಡೆ ಮಾತನಾಡಿ, “ಈಗಿನ ರೀಲ್ಸ್ ಜಮಾನದಲ್ಲಿ ದೀರ್ಘ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ ಅನುಷ್ಠಾನಗೊಳಿಸಲಾಗುತ್ತಿರುವ ರೇಷ್ಮೆ ನೂಲು ಬಿಚ್ಚಾಣಿಕೆ ಉದ್ಯಮ ಪ್ರೋತ್ಸಾಹ ಯೋಜನೆ, ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಸಹಾಯಧನ ಯೋಜನೆ, ವಿದೇಶಿ ವಿದ್ಯಾಭ್ಯಾಸ ಸಾಲ ಯೋಜನೆ, ಶ್ರಮಶಕ್ತಿ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ವೃತ್ತಿ ಪ್ರೋತ್ಸಾಹ ಯೋಜನೆ, ನೇರಸಾಲ ಯೋಜನೆ ಹಾಗೂ ಸಾಂತ್ವನ ಯೋಜನೆಗಳಡಿ ಸಾಲ-ಸಹಾಯಧನ ಸೌಲಭ್ಯ ಪಡೆಯಲು ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಜೈನರು, ಬೌದ್ಧರು, ಸಿಖ್ಖರು ಮತ್ತು ಪಾರ್ಸಿ ಜನಾಂಗದ ಅರ್ಹ ಫಲಾನುಭವಿಗಳಿಂದ ವೆಬ್ಸೈಟ್ https://kmdconline.karnataka.gov.in ನಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 16 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (ನಿ), ಮೌಲಾನಾ ಆಝಾದ್ ಭವನ, ಒಂದನೇ ಮಹಡಿ, ಅಲೆವೂರು ರಸ್ತೆ, ಶಿವಳ್ಳಿ ಗ್ರಾಮ, ಮಣಿಪಾಲ ಉಡುಪಿ ಸಹಾಯವಾಣಿ ಸಂಖ್ಯೆ: 8277799990, ಜಿಲ್ಲಾ ಕಚೇರಿ ದೂ.ಸಂಖ್ಯೆ: 0820-2574990 ಅಥವಾ ಉಡುಪಿ ದೂ.ಸಂಖ್ಯೆ:…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ದೀಪಾವಳಿ ಹಬ್ಬ ಆಚರಣೆ ಸಂದರ್ಭದಲ್ಲಿ ತಾತ್ಕಾಲಿಕ ಸುಡುಮದ್ದು ಮಾರಾಟ ಮಾಡುವವರು ಸಂಬಂಧಪಟ್ಟ ಇಲಾಖೆಗಳಿಂದ ನಿರಾಕ್ಷೇಪಣಾ ಪತ್ರವನ್ನು ಪಡೆದು, ನಿಯಮಾನುಸಾರ ಮಾರ್ಗಸೂಚಿಗಳನ್ನು ಪಾಲಿಸುವುದರೊಂದಿಗೆ ಯಾವುದೇ ಅನಾಹುತಗಳು ಸಂಭವಿಸದಂತೆ ಸುರಕ್ಷತಾ ಕ್ರಮಗಳನ್ನು ಅನುಸರಿಸುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ದೀಪಾವಳಿ ಹಬ್ಬದ ಸಮಯದಲ್ಲಿ ತಾತ್ಕಾಲಿಕ ಸುಡುಮದ್ದು ಮಾರಾಟ ಮಳಿಗೆಗಳನ್ನು ತೆರೆಯಲು ಅನುಮತಿ ನೀಡುವ ಕುರಿತು ಚರ್ಚಿಸುವ ಸಲುವಾಗಿ ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ದೀಪಾವಳಿ ಹಬ್ಬ ಹಿನ್ನೆಲೆ ಜಿಲ್ಲಾ ವ್ಯಾಪ್ತಿಯಲ್ಲಿ ನಿಗಧಿಪಡಿಸಿರುವ ತೆರೆದ ಪ್ರದೇಶಗಳಲ್ಲಿ ಹೊಸದಾಗಿ ಪಟಾಕಿ ಮಾರಾಟ ಮಳಿಗೆಗಳನ್ನು ತೆರೆಯುವವರಿಗೆ ಅರ್ಜಿ ಸಲ್ಲಿಸಲು ಅಕ್ಟೋಬರ್ 10 ರ ವರೆಗೆ ಕಾಲಾವಕಾಶ ಕಲ್ಪಿಸಲಾಗಿದೆ. ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಗ್ನಿಶಾಮಕ, ಪೊಲೀಸ್ ಇಲಾಖೆ, ತಹಶೀಲ್ದಾರರ ಕಛೇರಿ ಹಾಗೂ ಸ್ಥಳೀಯ ಸಂಸ್ಥೆಗಳಿಂದ ಪಡೆದ ನಿರಾಕ್ಷೇಪಣಾ ಪತ್ರವನ್ನು ಕಡ್ಡಾಯವಾಗಿ ಸಲ್ಲಿಸಬೇಕು ಎಂದರು. ತಾತ್ಕಾಲಿಕ ಸುಡುಮದ್ದು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಹಾಲಾಡಿ ರಸ್ತೆಯ ಅಮಾಸೆಬೈಲು ಅರಣ್ಯ ಇಲಾಖೆ ಕಚೇರಿಯ ಬಳಿ ಓಮ್ನಿ ಕಾರು ಢಿಕ್ಕಿಯಾಗಿ ಸೈಕಲ್ ಸವಾರ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಸೈಕಲ್ ಸವಾರ ಮಹಾಬಲ ಪೂಜಾರಿ (55) ಗಂಭೀರ ಗಾಯಗೊಂಡವರು. ಓಮ್ನಿ ಚಾಲಕ ವಸೀಮ್ ಕಾರನ್ನು ಅಜಾಗರೂಕತೆಯಿಂದ ಚಲಾಯಿಸಿದ್ದು ಅಪಘಾತಕ್ಕೆ ಕಾರಣ ಎಂದು ತಿಳಿದುಬಂದಿದೆ. ತುರ್ತು ಚಿಕಿತ್ಸೆಯಿಂದ ಉಳಿದ ಜೀವ: ಅಪಘಾತ ನಡೆದ ಸಂದರ್ಭ ಮಹಾಬಲ ಅವರಿಗೆ ಗಂಭೀರ ಗಾಯವಾಗಿದ್ದರಿಂದ ಅವರು ಮೃತಪಟ್ಟಿರಬಹುದೆಂದು ಸ್ಥಳೀಯರು ಭಾವಿಸಿ ದೂರವೇ ನಿಂತಿದ್ದರು. ಈ ಸಂದರ್ಭದಲ್ಲಿ ಕರ್ತವ್ಯಕ್ಕೆ ತೆರಳುತ್ತಿದ್ದ ಪೊಲೀಸ್ ಸಿಬಂದಿ ಶಶಿಧರ ಶೆಟ್ಟಿ ಹಾಲಾಡಿ ಅವರು, ಗಾಯಾಳುವನ್ನು ನೋಡಿ ಉಪಚರಿಸಿದರು. ಸ್ಥಳೀಯರಾದ ನಂದನ್, ಅರುಣ್ ಶೆಟ್ಟಿ ಮತ್ತು ರಾಜೇಶ್ ಅವರ ನೆರವಿನೊಂದಿಗೆ ಕಾರಿನಲ್ಲಿ ಹಾಲಾಡಿ ಆಸ್ಪತ್ರೆಗೆ ಕರೆದುಕೊಂಡು ಹೋದರು.ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಆಸ್ಪತ್ರೆಗೆ ದಾಖಲಿಸಿದರು. ಅಮಾಸೆಬೈಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಸಾಲಿಗ್ರಾಮ ಪಟ್ಟಣ ಪಂಚಾಯತ್ ಆಶ್ರಯದಲ್ಲಿ ಪಟ್ಟಣ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ಪೌರಕಾರ್ಮಿಕರ ದಿನಾಚರಣೆಯನ್ನು ಆಚರಿಸಲಾಯಿತು. ಪೌರಕಾರ್ಮಿಕರಿಗೆ ಕ್ಷೇಮಾಭಿವೃದ್ಧಿ ಕಾರ್ಯಕ್ರಮದ ಸಲುವಾಗಿ ದುಶ್ಚಟಗಳ ಬಗ್ಗೆ ಮಾಹಿತಿಯನ್ನು ಸಂಪನ್ಮೂಲ ವ್ಯಕ್ತಿಯಾದ ಮನೋವೈದ್ಯ ಡಾ. ಪ್ರಕಾಶ್ ತೋಳಾರ್ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಸಾಲಿಗ್ರಾಮ ಪಟ್ಟಣ ಪಂಚಾಯತ್ನ ಅಧ್ಯಕ್ಷೆ ಸುಕನ್ಯಾ ಜೆ. ಶೆಟ್ಟಿ, ಮುಖ್ಯಾಧಿಕಾರಿ ಅಜಯ್ ಭಂಡಾರ್ಕಾರ್, ಉಪಾಧ್ಯಕ್ಷಕರಾದ ಗಿರಿಜಾ ಪೂಜಾರಿ, ಸ್ಥಾಯಿ ಸಮಿತಿ ಸದಸ್ಯರಾದ ಅನುಸೂಯ ಹೇರ್ಳೆ, ಸದಸ್ಯರಾದ ಸಂಜೀವ ದೇವಾಡಿಗ, ರಾಜು ಪೂಜಾರಿ ಇದ್ದರು. ಈ ಹಿನ್ನಲ್ಲೆಯಲ್ಲಿ ಪೌರ ಕಾರ್ಮಿಕರಿಗೆ ವಿವಿಧ ಆಟೋಟ ಸ್ಫರ್ಧೆಯನ್ನು ಆಯೋಜಿಸಿ ಬಹುಮಾನವನ್ನು ನೀಡಲಾಯಿತು ಹಾಗೂ ಪಟ್ಟಣ ಪಂಚಾಯತ್ನ ಸ್ವಚ್ಛತಾ ಸಿಬ್ಬಂದಿಯವರಿಗೆ ಶಾಲು ಹೊದಿಸಿ ಸನ್ಮಾನಿಸಲಾಯಿತು. ಪಟ್ಟಣ ಪಂಚಾಯತ್ನ ಕಿರಿಯ ಆರೋಗ್ಯ ನಿರೀಕ್ಷಕಿ ಮಮತಾ ವಿಜೇತರ ಪಟ್ಟಿಯನ್ನು ವಾಚಿಸಿದರು. ಪ್ರಭಾರ ಕಂದಾಯ ನಿರೀಕ್ಷಕ ಚಂದ್ರಶೇಖರ ಸೋಮಯಾಜಿ ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಇನ್ನರ್ ವೀಲ್ ಕ್ಲಬ್ ಆಫ್ ಬೈಂದೂರು ವತಿಯಿಂದ ಶಿಕ್ಷಣವೇ ಶಕ್ತಿ ಶಿಕ್ಷಣವೇ ಆಸ್ತಿ” ಎಂಬ ಧ್ಯೇಯ ವಾಕ್ಯದಡಿ, ಅಮ್ಮನವರ ತೊಪ್ಪಲು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಸುಮಾರು 20 ಸಾವಿರ ಮೌಲ್ಯದ ಪೀಠೋಪಕರಣಗಳನ್ನು ಕೊಡುಗೆಯಾಗಿ ನೀಡಲಾಯಿತು. ಇನ್ನರ್ ವೀಲ್ ಕ್ಲಬ್ ಅಧ್ಯಕ್ಷರಾದ ಶಾರದಾ ನಾರಾಯಣ್ ಹಾಗೂ ಸದಸ್ಯರಾದ ಲತಿಕಾ ನಂಬಿಯಾರ್ ಅವರ ನೇತೃತ್ವದಲ್ಲಿ ಕೊಡುಗೆಗೆಗಳನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಶಾಲಾ ಎಸ್ಡಿಎಂಸಿ ಉಪಾಧ್ಯಕ್ಷರು, ಇನ್ನರ್ ವೀಲ್ ನ ಸ್ಥಾಪಕ ಅಧ್ಯಕ್ಷರಾದ ಚಂದ್ರಕಲಾ ಎಸ್. ಶೆಟ್ಟಿ, ಕಾರ್ಯದರ್ಶಿ ಚೈತ್ರ ಯಡ್ತರೆ, ಮುಖ್ಯೋಪಾಧ್ಯಾಯರಾದ ನಾಗರಾಜ್ ಬಿ., ಇನ್ನರ್ ವೀಲ್ ನ ಸದಸ್ಯರು ಶಿಕ್ಷಕರು,ಪೋಷಕರು ಹಾಜರಿದ್ದರು. ಕಾರ್ಯಕ್ರಮವನ್ನು ಶಾಲಾ ಉಪನಾಯಕ ಪುಷ್ಕಳ ಸರ್ವರನ್ನು ಸ್ವಾಗತಿಸಿ, ಶಾಲಾ ನಾಯಕಿ ಪ್ರದ್ವಿ ಕೆ. ನಿರೂಪಿಸಿ, ರನಿತಾ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಹಿಂದಿ ಭಾಷೆಯ ಮಹತ್ವ ಹಾಗೂ ವಿವಿಧ ಸಾಹಿತ್ಯ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ಹಿಂದಿಯನ್ನು ಬಳಸುವ ಮತ್ತು ಉತ್ತೇಜಿಸುವ ಕುರಿತು ವಿದ್ಯಾರ್ಥಿಗಳಿಗೆ ಕುಂದಾಪುರ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಹಿಂದಿ ವಿಭಾಗದ ಉಪನ್ಯಾಸಕಿ ಸುಖತಾ ಪ್ರಶಾಂತ್ ಸುವರ್ಣ ಮಾಹಿತಿ ನೀಡಿದರು. ಅವರು ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಹಿಂದಿ ವಿಭಾಗವು ಭಾಷಾ ಸಂಘದ ಸಹಯೋಗದೊಂದಿಗೆ ಆಯೋಜಿಸಿದ ‘ಹಿಂದಿ ದಿವಸ್’ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಹಿಂದಿ ವಿಭಾಗದ ಮುಖ್ಯಸ್ಥರಾದ ಡಾ. ದೀಪಾ, ಸಹಾಯಕ ಪ್ರಾಧ್ಯಾಪಕಿ ರೇವತಿ ಡಿ. ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಸುಹಾಸ್ ಮಲ್ಯ ಪ್ರಾರ್ಥಿಸಿ, ಪ್ರತೀಕ್ಷಾ ಅತಿಥಿಗಳನ್ನು ಪರಿಚಯಿಸಿ, ರಿಷಿತಾ ಕಾರ್ಯಕ್ರಮ ನಿರೂಪಿಸಿ, ಶಿಫಾಶೇಖ್ ಸ್ವಾಗತಿಸಿ, ಇಶಿತಾ ಸಿದ್ದು ವಂದಿಸಿದರು.
ಸದಸ್ಯರ ವಿಶ್ವಾಸವೇ ಸಂಸ್ಥೆಯ ಯಶಸ್ಸು – ಎಚ್. ಜಯಶೀಲ ಶೆಟ್ಟಿ ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಊರಿನ ಜನರ ಆರ್ಥಿಕ ಅಗತ್ಯತೆಗಳಿಗೆ ಪೂರಕವಾಗಿ ಸಹಕಾರಿ ಸಂಸ್ಥೆಯನ್ನು ಆರಂಭಿಸಲಾಗಿದೆ. ಠೇವಣಿದಾರರ ವಿಶ್ವಾಸ ಹಾಗೂ ಪ್ರತಿ ಗ್ರಾಹಕರ ಮನಗೆಲ್ಲುವಲ್ಲಿ ಸಂಸ್ಥೆ ಯಶಸ್ವಿಯಾಗಿದ್ದು, ಸಂಸ್ಥೆ ಆರಂಭಗೊಂಡ ಮೂರೇ ವರ್ಷದಲ್ಲಿ ತೃಪ್ತಿಕರ ಆರ್ಥಿಕ ಪ್ರಗತಿ ಸಾಧಿಸಿದೆ ಎಂದು ಶ್ರೀ ಗುಡೇ ಮಹಾಲಿಂಗೇಶ್ವರ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಎಚ್. ಜಯಶೀಲ ಶೆಟ್ಟಿ ಹೇಳಿದರು. ಅವರು ಗುರುವಾರ ಹೆರಂಜಾಲುವಿನ ಸನ್ಮಾನ ಸಭಾಭವನದಲ್ಲಿ ಜರುಗಿದ ಶ್ರೀ ಗುಡೇ ಮಹಾಲಿಂಗೇಶ್ವರ ಸೌಹಾರ್ದ ಸಹಕಾರಿ ಸಂಘ ಹೆರಂಜಾಲು ಇದರ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಂಘವು ಆರ್ಥಿಕ ವರ್ಷಾಂತ್ಯಕ್ಕೆ 8.52 ಕೋಟಿ ಠೇವಣಿ ಹೊಂದಿದ್ದು, 7.93ಕೋಟಿ ಸಾಲ ನೀಡಿದೆ ವಾರ್ಷಿಕವಾಗಿ 51.88 ಕೋಟಿ ವ್ಯವಹಾರ ನಡೆಸಿ, ನಿವ್ವಳ 7.36 ಲಕ್ಷ ಲಾಭ ಗಳಿಸಿದೆ. ಸಂಸ್ಥೆಯ ವಿವಿಧ ನಿಧಿಗಳಲ್ಲಿ 6.27 ಲಕ್ಷ ಮೀಸಲಿರಿಸಿದ್ದು, 1.05 ಕೋಟಿ ಮೊತ್ತದ ಹಣವನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಬೈಕಿಗೆ ಕಾಡುಹಂದಿ ಢಿಕ್ಕಿ ಹೊಡೆದ ಪರಿಣಾಮ ಬೈಕಿನಲ್ಲಿದ್ದ ಗಂಗೊಳ್ಳಿ ಪೊಲೀಸ್ ಠಾಣೆಯ ಎಎಸ್ಐ ಬನ್ನಾಡಿಯ ನಿವಾಸಿ ಬಸವರಾಜ್ ಪಿ.ಎಂ. ಗಾಯಗೊಂಡ ಘಟನೆ ಇಲ್ಲಿನ ಮಣೂರು ಸಮೀಪ ಮಂಗಳವಾರ ಸಂಭವಿಸಿದೆ. ಗಸ್ತು ಕರ್ತವ್ಯ ಮುಗಿಸಿ ಬೆಳಗಿನ ಜಾವ ಗಂಗೊಳ್ಳಿ ಪೊಲೀಸ್ ಠಾಣೆಯಿಂದ ಮನೆಗೆ ವಾಪಸಾಗುತ್ತಿದ್ದಾಗ ಕಾಡು ಹಂದಿ ಅಡ್ಡ ಬಂದು ಬೈಕ್ ಸಮೇತ ರಸ್ತೆಗೆ ಬಿದ್ದಿದ್ದರು. ಕುಂದಾಪುರ ಕಡೆಯಿಂದ ವೇಗವಾಗಿ ಬಂದ ಟಿಪ್ಪರ್ ಚಾಲಕ ಬೈಕಿನ ಮೇಲೆಯೇ ಚಲಾಯಿಸಿಕೊಂಡು ಪರಾರಿಯಾದನು ಎನ್ನಲಾಗಿದೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ವಿದ್ಯಾರ್ಥಿಗಳು ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಬೇಕು. ಈ ಮೂಲಕ ಪ್ರತಿಭಾನ್ವೇಷಣೆಯೊಂದಿಗೆ ಪ್ರತಿಭೆ ಅನಾವರಣಕ್ಕೆ ಸಹಕಾರಿ ಎಂದು ಕೋಟದ ವಿವೇಕ ವಿದ್ಯಾಸಂಸ್ಥೆಯ ಪ್ರಾಂಶುಪಾಲ ಕೆ. ಜಗದೀಶ ನಾವಡ ಹೇಳಿದರು. ಅವರು ಬುಧವಾರ ಕಾಲೇಜು ಸಭಾಂಗಣದಲ್ಲಿ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ, ಲಕ್ಷ್ಮೀ ಸೋಮ ಬಂಗೇರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕೋಟ-ಪಡುಕರೆ 2025-26ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭ, ಗೀತಾನಂದ ಫೌಂಡೇಶನ್ ವತಿಯಿಂದ ಸ್ಥಳೀಯ ಪದವಿ ಪೂರ್ವ ಕಾಲೇಜಿನಿಂದ ಪದವಿಗೆ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಉಚಿತ ಶುಲ್ಕ ವಿತರಣೆ ಮತ್ತು ಪ್ರತಿಭಾನ್ವೇಷಣೆ ಅಂತರ್ ತರಗತಿ ಸಾಂಸ್ಕೃತಿಕ ಸ್ಪರ್ಧೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಯಾವುದೇ ಸ್ಪರ್ಧೆಗಳಲ್ಲಿ ಸೋಲು ಗೆಲುವು ಸರ್ವೆ ಸಾಮಾನ್ಯ. ಆದರೆ ಅದನ್ನು ಸಮನಾಗಿ ಸ್ವೀಕರಿಸಿದಾಗ ಯಶಸ್ಸಿನ ಮಟ್ಟಿಲು ಏರಲು ಸಾಧ್ಯ. ವಿದ್ಯಾರ್ಥಿಗಳು ಧನಾತ್ಮಕ ಚಿಂತನೆಗಳನ್ನು ಮೈಗೂಡಿಸಿಕೊಳ್ಳಬೇಕು. ಖಾರ ಎಂಬ ಪದ ಬಾಯಿಯನ್ನು ಸುಡಬಲ್ಲದು ಆದರೆ ಅಹಂಕಾರ ದೇಗವನ್ನು ಸುಡಲ್ಪಡುತ್ತದೆ. ಈ ದಿಸೆಯಲ್ಲಿ ವಿದ್ಯಾರ್ಥಿಗಳ ತಮ್ಮ…
