ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ವಕ್ವಾಡಿಯ ಗುರುಕುಲ ಪಬ್ಲಿಕ್ ಶಾಲೆಯಲ್ಲಿ ಮಕ್ಕಳ ದಿನಾಚರಣೆಯ ಕಾರ್ಯಕ್ರಮವು ಗುರುವಾರದಂದು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲಾ ಆಡಳಿತ ಮಂಡಳಿಯ ಜಂಟಿ ಕಾರ್ಯನಿರ್ವಾಹಕಿ ಅನುಪಮಾ ಎಸ್. ಶೆಟ್ಟಿ ಮಾತನಾಡಿ, ಮಕ್ಕಳ ದಿನಾಚರಣೆಯ ಉದ್ದೇಶವನ್ನು ತಿಳಿಸಿ, ಮಕ್ಕಳಿಗೆ ಶುಭ ಹಾರೈಸಿದರು. ದಿನಾಚರಣೆಯ ಅಂಗವಾಗಿ ಶಾಲಾ ಕಟ್ಟಡವು ಜಗಮಗಿಸುವ ಬೆಳಕಿನ ಸಾಲು ದೀಪಗಳು, ಬಣ್ಣದ ರಂಗೋಲಿಯಿಂದ ಕಂಗೋಳಿಸುವುದರ ಜೊತೆಗೆ ಮಕ್ಕಳ ಸೆಲ್ಫಿ ಕಾರ್ನರ್ ಕೂಡ ಮಾಡಲಾಗಿತ್ತು. ಮಕ್ಕಳ ಖುಷಿಗಾಗಿ ಎಲ್ಲಾ ಶಿಕ್ಷಕರು ಮಕ್ಕಳಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೀಡುವುದರ ಮೂಲಕ ಕಾರ್ಯಕ್ರಮಕ್ಕೆ ಇನ್ನಷ್ಟು ಮೆರುಗು ನೀಡಿದರು. ಕೊನೆಯಲ್ಲಿ ಸಿಹಿ ತಿಂಡಿ ಹಂಚಿ ಒಂದಿಷ್ಟು ಆಟಗಳನ್ನು ಆಡಿಸಿ, ವಿಜೇತರಿಗೆ ಬಹುಮಾನ ನೀಡುವುದರ ಮೂಲಕ ಮಕ್ಕಳ ದಿನವನ್ನು ಮಕ್ಕಳಿಗಾಗಿಯೇ ಮೀಸಲಿಟ್ಟು ಅವರ ಖುಷಿಯಲ್ಲಿ ತಮ್ಮ ಖುಷಿಯನ್ನು ಶಿಕ್ಷಕರು ಕಂಡುಕೊಂಡರು. ಈ ಸಂದರ್ಭದಲ್ಲಿ ಶಾಲಾ ಪ್ರಾಂಶುಪಾಲರಾದ ಸುನಿಲ್ ಪ್ಯಾಟ್ರಿಕ್ ಹಾಗೂ ಶಿಕ್ಷಕ ವೃಂದ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಲೇಖನಬೆಳಗ್ಗೆ ಎದ್ದ ಕೂಡಲೇ ಬಿಸಿ ಬಿಸಿ ಚಹಾ ಕುಡಿಯುವುದು ಹಲವರ ಅಭ್ಯಾಸವಾಗಿದೆ . ಹಾಗೆ ಮಾಡದಿದ್ದರೆ ದಿನವಿಡೀ ಮಂಕಾಗಿರುತ್ತಾರೆ ಎಂಬುದು ಕೆಲವರ ಅಭಿಪ್ರಾಯ. ಇನ್ನು ಕೆಲವರಿಗೆ ಟೀ ಹೊಟ್ಟೆಗೆ ಬೀಳದಿದ್ದರೆ ಕರುಳಿನಲ್ಲಿ ಸಂಗ್ರಹವಾಗಿದ್ದು ಆಚೆ ಹೋಗುವುದೇ ಇಲ್ಲವಂತೆ. ಇದೆಲ್ಲವೂ ಅಭ್ಯಾಸದ ಪರಿಣಾಮವೇ ಹೊರತು ಮತ್ತೇನಲ್ಲ. ಖಾಲಿ ಹೊಟ್ಟೆಗೆ ಟೀ ಕುಡಿಯುವುದರಿಂದ ಈ ಕೆಳಗಿನ ಅಪಾಯಗಳು ಉಂಟಾಗುತ್ತವೆ. ಬೆಳಗ್ಗೆ ಖಾಲಿ ಹೊಟ್ಟೆಗೆ ಟೀ ಕುಡಿಯುವುದರಿಂದಾಗುವ ಪ್ರಯೋಜನಗಳುಚಯಾಪಚಯ ಕ್ರಿಯೆ: ಬೆಳಗ್ಗೆ ಖಾಲಿ ಹೊಟ್ಟೆ ಚಹಾ ಕುಡಿಯುವುದರಿಂದ ಹೊಟ್ಟೆಯಲ್ಲಿ ಆಮ್ಲೀಯ ಮತ್ತು ಕ್ಷಾರೀಯ ಪದಾರ್ಥಗಳ ಅಸಮತೋಲನದಿಂದಾಗಿ ಚಯಾಪಚಯ ವ್ಯವಸ್ಥೆಗೆ ಅಡ್ಡಿ ಉಂಟಾಗುವ ಸಾಧ್ಯತೆ ಇರುತ್ತದೆ. ಆಸಿಡಿಕ್ ಕಂಟೆಂಟ್:ಟೀ ರಿಸರ್ಚ್ ಅಸೋಸಿಯೇಷನ್ ಆಫ್ ಇಂಡಿಯಾ ನಡೆಸಿರುವ ಒಂದು ಅಧ್ಯಯನದ ಪ್ರಕಾರ, ಹಾಲನ್ನು ಚಹಾದೊಂದಿಗೆ ಬೆರೆಸಿದಾಗ, ಹಾಲಿನಲ್ಲಿ ತೂಕ ನಷ್ಟಕ್ಕೆ ಕಾರಣವಾಗಿರುವ ವಸ್ತುಗಳ ಪ್ರಭಾವ ಕಡಿಮೆಯಾಗುತ್ತವೆ. ಇದಲ್ಲದೇ, ಹಾಲಿನಿಂದ ಮಾಡಿದ ಚಹಾವು ಹೊಟ್ಟೆಯ ಆಮ್ಲವನ್ನು ಹೆಚ್ಚಿಸುವ ಮೂಲಕ ನಿಮ್ಮ ಜೀರ್ಣಾಂಗ ವ್ಯವಸ್ಥೆಯ ಮೇಲೆ ಕೆಟ್ಟ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ತಗ್ಗರ್ಸೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆಯ ಅಂಗವಾಗಿ ಗುರುವಾರ ಅರಳು ಪ್ರತಿಭೆ – ವಿದ್ಯಾರ್ಥಿಗಳ ಸೇವೆ ಸಾಧನೆಯನ್ನು ಗುರುತಿಸುವ ಕಾರ್ಯಕ್ರಮ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವೇಳೆ ಶಾಲೆಯ ಆದರ್ಶ ವಿದ್ಯಾರ್ಥಿ ಪ್ರಶಸ್ತಿಯನ್ನು 8ನೆಯ ತರಗತಿ ವಿದ್ಯಾರ್ಥಿನಿ ಆಶಿಕಳಿಗೆ ನೀಡಿ ಸನ್ಮಾನಿಸಲಾಯಿತು.ವಿದ್ಯಾರ್ಥಿಗಳ ಸೇವಾ ಮನೋಭಾವವನ್ನು ಪ್ರೋತ್ಸಾಹಿಸುವ ಸಲುವಾಗಿ ಅತ್ತ್ಯುತ್ತಮ ಸಚಿವ, ಅತ್ತ್ಯುತ್ತಮ ಸ್ವಯಂ ಸೇವಕ ಪ್ರಶಸ್ತಿಗಳನ್ನು ನೀಡಲಾಯಿತು. ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಕೋಶಾಧಿಕಾರಿಯಾದ ಮಹಾದೇವ ಬಿಲ್ಲವ ಅವರು ಮಕ್ಕಳನ್ನುದ್ದೇಶಿಸಿ ಮಾತನಾಡಿ, ಸರ್ಕಾರಿ ಶಾಲೆಯಲ್ಲಿ ಸಿಗುವಂತಹ ಗುಣಮಟ್ಟದ ಶಿಕ್ಷಣ ಹಾಗೂ ಸೌಲಭ್ಯ ಬೇರೆಲ್ಲೂ ಸಿಗಲು ಸಾಧ್ಯವಿಲ್ಲ. ವಿದ್ಯಾರ್ಥಿಗಳ ಇದರ ಸದ್ಭಳಕೆ ಮಾಡಿಕೊಂಡು ಉತ್ತಮ ಶಿಕ್ಷಣ ಪಡೆಯುವಂತಾಗಲಿ ಎಂದರು. ಎಸ್.ಡಿ.ಎ.ಸಿ ಅಧ್ಯಕ್ಷರಾದ ಅಧ್ಯಕ್ಷರಾದ ಸುಬ್ರಹ್ಮಣ್ಯ ಪೂಜಾರಿಯವರು, ಉಪಾಧ್ಯಕ್ಷರಾದ ನಾಗವೇಣಿ, ಎಸ್.ಡಿ.ಎ.ಸಿ ಮಾಜಿ ಅಧ್ಯಕ್ಷರಾದಂತಹ ಪ್ರಭಾಕರ ಗಾಣಿಗ, ವಿದ್ಯಾರ್ಥಿ ನಾಯಕ ವಿನೀತ್, ಉಪನಾಯಕ ಪ್ರೀತೇಶ್,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಇಂದುಶ್ರೀ ಮಹಿಳಾ ಸಂಘ ಗಂಗೊಳ್ಳಿ, ಕಲಾಶ್ರೀ ಶಿಕ್ಷಣ ಪ್ರೇಮಿ ಬಳಗ ಗಂಗೊಳ್ಳಿ ಇವರ ಆಶ್ರಯದಲ್ಲಿ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಪುಣ್ಯಸ್ಮರಣೆ -ನುಡಿ ನಮನ ಕಾರ್ಯಕ್ರಮ ಗಂಗೊಳ್ಳಿಯ ಸ.ವಿ. ಹಿರಿಯ ಪ್ರಾಥಮಿಕ ಶಾಲೆಯ ಟಿ.ವಿಮಲಾ ಪೈ ಸಭಾಂಗಣದಲ್ಲಿ ಬುಧವಾರ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಾಜಿ ಮಂಡಲ ಪ್ರಧಾನ ಬಿ.ಸದಾನಂದ ಶೆಣೈ ಅವರು ಮಾತೃಶ್ರೀ ರತ್ನಮ್ಮ ಹೆಗ್ಗಡೆ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿ, ಮಾತೃಶ್ರೀ ರತ್ನಮ್ಮ ಹೆಗ್ಗಡೆ ಅವರು ಶ್ರೀ ಕ್ಷೇತ್ರ ಧರ್ಮಸ್ಥಳದ ಮೂಲಕ ದೀನ ದಲಿತರಿಗೆ ಅದರಲ್ಲೂ ಶಿಕ್ಷಣಕ್ಕೆ ಒತ್ತು ನೀಡಿ ಕಾರ್ಯಕ್ರಮ ರೂಪಿಸಿದ್ದರು. ಮಹಿಳೆಯರಿಗೆ ಸ್ವಾವಲಂಬಿ ಜೀವನಕ್ಕೆ ಅನೇಕ ಕಾರ್ಯಕ್ರಮಗಳನ್ನು ನೀಡಿ ವಿಶ್ವವೇ ಧರ್ಮಸ್ಥಳವನ್ನು ನೋಡುವಂತೆ ಮಾಡಿದ್ದರು ಎಂದು ಹೇಳಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಗಂಗೊಳ್ಳಿ ಬಿ ಒಕ್ಕೂಟದ ಮಾಜಿ ಅಧ್ಯಕ್ಷೆ ಸುಮಿತ್ರಾ ಜಿ. ಮಾತನಾಡಿದರು. ಅಂಗನವಾಡಿ ಕಾರ್ಯಕರ್ತೆಯರಾದ ಫಿಲೋಮಿನಾ ಫೆರ್ನಾಂಡಿಸ್, ರೇಖಾ ಖಾರ್ವಿ, ನಿಖಿತಾ, ಕಮಲ, ಶೇಷಮ್ಮ, ಶೋಭಾ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: “ಪಠ್ಯ ಶಿಕ್ಷಣ ಕಲಿಸುವ ಒಳಾಂಗಣ ಚಟುವಟಿಕೆಗಳಷ್ಟೇ ಪ್ರಮುಖವಾಗುವುದು. ಆಟೋಟ- ಪಂದ್ಯಾಟಗಳಿಂದ ಮಕ್ಕಳ ಬೆಳವಣಿಗೆಗೆ ಹೊಸ ಆಯಾಮವನ್ನು ನೀಡುವ ಹೊರಾಂಗಣ ಚಟುವಟಿಕೆಗಳು. ಆರ್. ಎನ್ ಶೆಟ್ಟಿ ಪದವಿ ಪೂರ್ವ ಕಾಲೇಜು ಈ ಎರಡೂ ಕ್ಷೇತ್ರಗಳಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ ಒದಗಿಸಿ ಮುಂಚೂಣಿಯಲ್ಲಿರುವುದು ಸಂತಸ ತಂದಿದೆ” ಎಂದು ಉಡುಪಿ ಜಿಲ್ಲೆಯ ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ನಿರ್ದೇಶಕರ ಸಂಘದ ಉಪಾಧ್ಯಕ್ಷರಾದ ರವಿಶಂಕರ್ ಹೆಗ್ಡೆ ಅವರು ಕುಂದಾಪುರ ಆರ್.ಎನ್. ಶೆಟ್ಟಿ ಸಂಯುಕ್ತ ಪ.ಪೂ ಕಾಲೇಜಿನಲ್ಲಿ ವಾರ್ಷಿಕ ಕ್ರೀಡೋತ್ಸವ ಉದ್ಘಾಟಿಸಿವುದರ ಮೂಲಕ ಕೆರ ನೀಡಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ ತಾಲೂಕು ಕ್ರೀಡಾ ಮತ್ತು ಯುವಜನ ಅಧಿಕಾರಿಯಾದ ಕುಸುಮಾಕರ ಶೆಟ್ಟಿ ಮಾತನಾಡಿ, ಕ್ರೀಡೆ ಎನ್ನುವುದು ವಿದ್ಯಾರ್ಥಿಗಳಿಗೆ ಜೀವನದಲ್ಲಿ ಮರು ಪ್ರಯತ್ನಗಳು ಮತ್ತು ಹಲವು ಅವಕಾಶಗಳಿಗೆ ತಾವು ತೆರೆದುಕೊಳ್ಳುವ ಬಗ್ಗೆ ಕಲಿಸುತ್ತದೆ ಎಂದು ಅಭಿಪ್ರಾಯಪಟ್ಟರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕುಂದಾಪುರದ ಕಾಲೇಜು ಆಡಳಿತ ಮಂಡಳಿ ಎಜುಕೇಶನ್ ಸೊಸೈಟಿಯ ಕಾರ್ಯದರ್ಶಿಯವರಾದ ಸೀತಾರಾಮ ನಕ್ಕತ್ತಾ ಅವರು ಕ್ರೀಡಾಕೂಟಕ್ಕೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ತಲ್ಲೂರು ಗ್ರಾಮದ ನಿವಾಸಿ ಗೀತಾ (41) ಅವರು ಕುಂದಾಪುರದ ಸಂಗಮ್ ಬಳಿ ಕೂಲಿ ಕೆಲಸಕ್ಕೆ ಹೋಗಿದ್ದ ವೇಳೆ ಅತಿಯಾದ ಮಾತ್ರೆ ಹಾಗೂ ಇಲಿ ಪಾಷಾಣ ಸೇವಿಸಿ ಅಸ್ವಸ್ಥಗೊಂಡು ಸಾವನ್ನಪ್ಪಿದ ಘಟನೆ ನಡೆದಿದೆ. ಅವರನ್ನು ಕುಂದಾಪುರದ ಸರಕಾರಿ ಆಸ್ಪತ್ರೆಗೆ ದಾಖಲಿಸಿ, ಅಲ್ಲಿಂದ ಉಡುಪಿಯ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಕುಂದಾಪುರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಹೊಸಂಗಡಿ ಗ್ರಾಮದ ಸುರೇಂದ್ರ ಅವರು ಚಲಾಯಿಸುತ್ತಿದ್ದ ಬೈಕ್‌ಗೆ ನಾಯಿ ಅಡ್ಡ ಬಂದ ಪರಿಣಾಮ ಬೈಕ್ ನಿಯಂತ್ರಣ ತಪ್ಪಿ ಸ್ಕಿಡ್ ಆಗಿದೆ. ಪರಿಣಾಮ ಸಹಸವಾರೆ ನಾಗರತ್ನಾ ಅವರು ಗಾಯಗೊಂಡಿದ್ದಾರೆ, ಸಿದ್ದಾಪುರ-ಅಮಾಸೆಬೈಲು ರಸ್ತೆಯಲ್ಲಿ ಜಡ್ಡಿನಬೈಲು ನಂದಿಕೇಶ್ವರ ದೇವಸ್ಥಾನದ ಬಳಿ ಅಪಘಾತ ಸಂಭವಿಸಿದೆ. ಗಾಯಾಳು ನಾಗರತ್ನಾ ಅವರಿಗೆ ಸಿದ್ದಾಪುರ ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಶಂಕರನಾರಾಯಣ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಕೊರ್ಗಿ ಗ್ರಾಮದ ಕಾಡಿನಬೆಟ್ಟು ನಿವಾಸಿ ವಿಶ್ವನಾಥ ಅವರ ಪತ್ನಿ ಸುಶೀಲಾ (56) ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರದಂದು ನಡೆದಿದೆ. ಪತಿ ವಿಶ್ವನಾಥ ಅವರು ಬೆಳಗ್ಗೆ 8 ಗಂಟೆಗೆ ಮನೆಯಿಂದ ಮೊಳಹಳ್ಳಿಗೆ ತೆರಳಿದ್ದು, ಈ ವೇಳೆ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ಮನ ನೊಂದು ಅವರು ಆತ್ಮಹತ್ಯೆ ಮಾಡಿಕೊಂಡಿರುವುದಾಗಿದೆ ಎಂದು ತಿಳಿಯಲಾಗಿದೆ. ಅವರ ಸಹೋದರ ಕುಶಲ ಹಳ್ನಾಡು ಅವರು ನೀಡಿದ ದೂರಿನಂತೆ ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಆನಗಳ್ಳಿಯ ಸೇತುವೆ ಬಳಿ ವಾರಾಹಿ ಹೊಳೆಗೆ ಬಲೆ ಹಾಕಿ ಮೀನು ಹಿಡಿಯಲು ಹೋದ ಸಹದೇವ (69) ಅವರು ಆಕಸ್ಮಿಕವಾಗಿ ಕಾಲು ಜಾರಿ ಹೊಳೆಗೆ ಬಿದ್ದು ಮುಳುಗಿ ಸಾವನ್ನಪ್ಪಿದ ಘಟನೆ ಬುಧವಾರದಂದು ನಡೆದಿದೆ. ಅವರ ಅಳಿಯ ಉದಯ ಅವರು ನೀಡಿದ ದೂರಿನಂತೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್, ಉಡುಪಿ ಜಿಲ್ಲಾ ಪಂಚಾಯತ್ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಸಹಕಾರದೊಂದಿಗೆ ನಡೆದ ಕುಂದಾಪುರ ತಾಲೂಕು ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಗಂಗೊಳ್ಳಿಯ ಸ. ವಿ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಆರಾಧ್ಯ ಎನ್. ಖಾರ್ವಿ ಪ್ರಥಮ ಸ್ಥಾನ ಪಡೆದು ಉಡುಪಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.
