Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಅಂಬರ್‌ಗ್ರಿಸ್ [ತಿಮಿಂಗಲ ವಾಂತಿ] ಎಂದು ಹೇಳಿ ವಂಚಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರು ವ್ಯಕ್ತಿಗಳನ್ನು ಬೈಂದೂರು ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ. ಶಿವಮೊಗ್ಗ ಮೂಲದವರಾದ ನಿರಂಜನ್ ಎಸ್ (26), ಮಿಲನ್ ಮೋನಿಶ್ ಶೆಟ್ಟಿ (27), ಪೃಥ್ವಿ ಡಾಮಿಕ್ (31) ಬಂಧಿತರು. ಬೈಂದೂರು ಹೊಸ ನಿಲ್ದಾಣದ ಬಳಿಕ ತಿಮಿಂಗಲದ ವಾಂತಿ ಎಂದು ಹೇಳಿಕೊಂಡು ಮಾರಾಟ ಮಾಡಲು ಹೊಂಚು ಹಾಕುತ್ತಿದ್ದ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ ವಶಕ್ಕೆ ಪಡೆದುಕೊಂಡಿದ್ದಾರೆ. ತಿಮಿಂಗಲ ವಾಂತಿ ಎಂದು ಹೇಳಿ 10 ಲಕ್ಷ ರೂ ಹಣಕ್ಕೆ ಸಾರ್ವಜನಿಕರಿಗೆ ಮಾರಾಟ ಮಾಡಿ ವಂಚಿಸಲು ಯತ್ನಿಸುತ್ತಿದು ಗಮನಕ್ಕೆ ಬಂದಿದೆ. ಆಪಾದಿತರನ್ನು ಬೈಂದೂರು ಪೊಲೀಸರು ವಶಕ್ಕೆ ಪಡೆದಿದ್ದು ಅವರಿಂದ ಸುಮಾರು 3 ಕೆ.ಜಿ 910 ಗ್ರಾಂ ತೂಕದ ಅಂಬರ್ಗ್ರಿಸ್ ಹೊಲುವ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ. ಬೈಂದೂರು ಉಪನಿರೀಕ್ಷಕ ನಿರಂಜನ್ ಗೌಡ, ಸಿಬ್ಬಂದಿಗಳಾದ ಅಶೋಕ್ ರಾತೋಡ್, ಶ್ರೀನಿವಾಸ್, ಸುಜಿತ್ ಕಾರ್ಯಾಚರಣೆ ನಡೆಸಿದ್ದಾರೆ. ಆರೋಪಿಗಳ ವಿರುದ್ಧ ಬೈಂದೂರು ಪೊಲೀಸ್ ಠಾಣೆಯಲ್ಲಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ವಿದ್ಯಾಕುಮಾರಿ ಕೆ. ಐಎಎಸ್ ಅವರನ್ನು ನಿಯೋಜಿಸಲಾಗಿದೆ. ಜಿಲ್ಲಾಧಿಕಾರಿಯಾಗಿದ್ದ ಕೂರ್ಮರಾವ್ ಎಂ. ಅವರನ್ನು ವರ್ಗಾವಣೆ ಮಾಡಲಾಗಿದೆ. ವಿದ್ಯಾಕುಮಾರಿ ಅವರು ಉಳ್ಳಾಲ ತಾಲೂಕಿನ ಹಾವೂರು ಗ್ರಾಮದವರಾಗಿದ್ದು, 2014ರ ಬ್ಯಾಚ್‌ನ ಐಎಎಎಸ್ ಅಧಿಕಾರಿಯಾಗಿದ್ದಾರೆ. ಹುದ್ದೆಯ ನಿರೀಕ್ಷೆಯಲ್ಲಿದ್ದ ಅವರನ್ನು ತಕ್ಷಣದಿಂದ ಜಾರಿಯಾಗುವಂತೆ ಉಡುಪಿ ಜಿಲ್ಲಾಧಿಕಾರಿಯಾಗಿ ವರ್ಗಾವಣೆಗೊಳಿಸಿ ಆದೇಶಿಸಿದ್ದಾರೆ. ಕೂರ್ಮರಾವ್ ಅವರು ಹುದ್ದೆಯ ನಿರೀಕ್ಷೆಯಲ್ಲಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ದ್ವೇಷದ ರಾಜಕಾರಣ ನಡೆಸುತ್ತಾ, ಕೇಂದ್ರ ತನಿಖಾ ಸಂಸ್ಥೆಗಳ ದುರುಪಯೋ ಗ ಪಡಿಸಿಕೊಳ್ಳುತ್ತಿರುವ ಮತ್ತು ಸಾಂವಿಧಾನಿಕ ಸಂಸ್ಥೆಗಳ ಸ್ವಾತಂತ್ರ್ಯವನ್ನು ನಾಶಗೊಳಿಸುತ್ತಿದ್ದಾರೆ ಎಂದು ಆರೋಪಿಸಿ ಕೆ.ಪಿ.ಸಿ.ಸಿ ವತಿಯಿಂದ ರಾಹುಲ್ ಗಾಂಧಿಯವರ ಬೆಂಬಲವಾಗಿ ಇಂದು ದೇಶಾದ್ಯಂತ ಏಕಕಾಲದಲ್ಲಿ ನಡೆದ ಪ್ರತಿಭಟನಾ ಕಾರ್ಯಕ್ರಮದ ಭಾಗವಾಗಿ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬೈಂದೂರು ಮತ್ತು ವಂಡ್ಸೆ ಬ್ಲಾಕ್ ಕಾಂಗ್ರೆಸ್ನ ವತಿಯಿಂದ ಬುಧವಾರ ‘ಮೌನಪ್ರತಿಭಟನೆ’ ನಡೆಯಿತು. ಬೈಂದೂರು ಹೊಸ ಬಸ್ ನಿಲ್ದಾಣದಲ್ಲಿ ನಡೆದ ಪ್ರತಿಭಟನೆಯಲ್ಲಿ ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮದನ್ ಕುಮಾರ್ ಉಪ್ಪುಂದ, ಕಾಂಗ್ರೆಸ್ ಮುಖಂಡರುಗಳಾದ ರಘುರಾಮ ಶೆಟ್ಟಿ ಬಿಜೂರು, ಎಸ್. ರಾಜು ಪೂಜಾರಿ, ಎಸ್. ಪ್ರಕಾಶ್ಚಂದ್ರ ಶೆಟ್ಟಿ, ಕೆ. ಬಾಬು ಶೆಟ್ಟಿ, ಸದಾಶಿವ ಪಡುವರಿ, ನಾಗರಾಜ ಗಾಣಿಗ ಬಂಕೇಶ್ವರ, ಡಾ. ಸುಬ್ರಹ್ಮಣ್ಯ ಭಟ್, ನರಸಿಂಹ ಹಳಗೇರಿ, ಅರವಿಂದ ಪೂಜಾರಿ, ಶೇಖರ ಪೂಜಾರಿ ಉಪ್ಪುಂದ, ಜಗದೀಶ ದೇವಾಡಿಗ, ಮೋಹನ ಪೂಜಾರಿ ಉಪ್ಪುಂದ, ಗಣೇಶ್ ಪೂಜಾರಿ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ದ್ವೇಷದ ರಾಜಕಾರಣ ನಡೆಸುತ್ತಾ, ಕೇಂದ್ರ ತನಿಖಾ ಸಂಸ್ಥೆಗಳ ದುರುಪಯೋಗ ಪಡಿಸಿಕೊಳ್ಳುತ್ತಿರುವ ಮತ್ತು ಸಾಂವಿಧಾನಿಕ ಸಂಸ್ಥೆಗಳ ಸ್ವಾತಂತ್ರ್ಯವನ್ನು ನಾಶಗೊಳಿಸುತ್ತಿದ್ದಾರೆ ಎಂದು ಆರೋಪಿಸಿ ಕೆ.ಪಿ.ಸಿ.ಸಿ ವತಿಯಿಂದ ರಾಹುಲ್ ಗಾಂಧಿಯವರ ಬೆಂಬಲವಾಗಿ ಇಂದು ದೇಶಾದ್ಯಂತ ಏಕಕಾಲದಲ್ಲಿ ನಡೆದ ಪ್ರತಿಭಟನಾ ಕಾರ್ಯಕ್ರಮದ ಭಾಗವಾಗಿ ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕುಂದಾಪುರ ಮತ್ತು ಕೋಟ ಬ್ಲಾಕ್ ಕಾಂಗ್ರೆಸ್ನ ವತಿಯಿಂದ ಬುಧವಾರ ‘ಮೌನಪ್ರತಿಭಟನೆ’ ನಡೆಯಿತು. ಕುಂದಾಪುರ ಶಾಸ್ತ್ರೀ ವೃತ್ತದ ಬಳಿಕ ನಡೆದ ಮೌನ ಪ್ರತಿಭಟನೆಯಲ್ಲಿ ವಿಧಾನಪರಿಷತ್ ಮಾಜಿ ಸಭಾಪತಿ ಪ್ರತಾಪ್ಚಂದ್ರ ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ, ಕಾಂಗ್ರೆಸ್ ಮಖಂಡರಾದ ಮೊಳಹಳ್ಳಿ ದಿನೇಶ್ ಹೆಗ್ಡೆ, ಮಲ್ಯಾಡಿ ಶಿವರಾಮ ಶೆಟ್ಟಿ, ದೇವಾನಂದ ಶೆಟ್ಟಿ, ಕೆದೂರು ಸದಾನಂದ ಶೆಟ್ಟಿ, ಚಂದ್ರಶೇಖರ ಶೆಟ್ಟಿ, ಬಿ. ಹಿರಿಯಣ್ಣ, ವಿಕಾಸ ಹೆಗ್ಡೆ, ಕೃಷ್ಣದೇವ ಕಾರಂತ, ಬೀಜಾಡಿ ಅಶೋಕ್ ಪೂಜಾರಿ, ಗಣೇಶ್ ಶೇರೆಗಾರ, ಮರತ್ತೂರು ಚಂದ್ರಶೇಖರ ಶೆಟ್ಟಿ, ಕೋಡಿ ಅಬ್ದುಲ್ಲಾ, ಭಾಸ್ಕರ ಶೆಟ್ಟಿ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಿ.ಎ. ಫೌಂಡೇಶನ್ ಹಾಗೂ ಇಂಟರ್ ಮೀಡಿಯೇಟ್ ತೇರ್ಗಡೆ ಹೊಂದಿದ ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ಕಾಲೇಜಿನ ವತಿಯಿಂದ ಸನ್ಮಾನಿಸಲಾಯಿತು. ಮೇ 2023ರಲ್ಲಿ ಸಿ.ಎ. ಇಂಟರ್ ಮೀಡಿಯೇಟ್ ಪರೀಕ್ಷೆಯ ಗ್ರೂಪ್ ಎರಡರಲ್ಲಿ ತೇರ್ಗಡೆ ಹೊಂದಿದ ಶ್ರಾವ್ಯ, ರೋಹನ್, ಚೇತನಾ, ಮಂದಾರ್ ಮತ್ತು ಗ್ರೂಪ್ ಒಂದರಲ್ಲಿ ತೇರ್ಗಡೆ ಹೊಂದಿದ ನಾದಶ್ರೀ, ರಂಜನ್, ಶಾಂಭವಿ, ಅನುಷಾ ಹಾಗೂ ಡಿಸೆಂಬರ್ 2022ರಲ್ಲಿ ನಡೆದ ಸಿ.ಎ. ಫೌಂಡೇಶನ್ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ಅಂಕಿತ ಮೊಗವೀರ, ಸುಜನರಾಣಿ, ಸುಚಿ ಸಿ. ಶೆಟ್ಟಿ, ಪನ್ನಗ, ಗಣೇಶ್ ಭಟ್ ಅವರನ್ನು ಸನ್ಮಾನಿಸಲಾಯಿತು. ಸಂಸ್ಥೆಯ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ, ಉಪಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳಾದ ರಕ್ಷಿತ್ ರಾವ್ ಗುಜ್ಜಾಡಿ, ಪ್ರೀತಿ ಹೆಗ್ಡೆ, ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥೆ ವೀಣಾ ಭಟ್ ಹಾಗೂ ಕಾಲೇಜಿನ ಸಿ.ಎ. ಮತ್ತು ಸಿ.ಎಸ್. ಸಂಯೋಜಕರಾದ ಸತೀಶ್ ಶೆಟ್ಟಿ ಹೆಸ್ಕತ್ತೂರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸಾಮಾಜಿಕ ಜೀವನದಲ್ಲಿ ಸಂಘಟನೆ ಅತ್ಯಗತ್ಯ. ಯಾವುದೇ ಸಂಸ್ಥೆ ಬೆಳೆಯಬೇಕಾದರೆ ಸಮಾನ ಮನಸ್ಕ ಸದಸ್ಯರು ಮುಖ್ಯವಾಗಿರಬೇಕು. ಅವರೆಲ್ಲರ ಸತ್ಚಿಂತನೆಗಳ ಜತೆಗೆ ಆಸಕ್ತಿ ಹಾಗೂ ಛಲವಿದ್ದರೆ ಅಸಾಧ್ಯವೆಂಬುವುದು ಯಾವುದೂ ಇಲ್ಲ ಎಂದು ಕಾಲ್ತೋಡು ಸರ್ಕಾರಿ ಆಯುರ್ವೇದ ಕೇಂದ್ರದ ವೈದ್ಯಾಧಿಕಾರಿ ಡಾ. ವೀಣಾ ಕಾರಂತ್ ಹೇಳಿದರು. ಇಲ್ಲಿನ ರೋಟರಿ ಸಮುದಾಯ ಭವನದಲ್ಲಿ ನಡೆದ ಇನ್ನರ್ವೀಲ್ ಕ್ಲಬ್ನ ಪದಗ್ರಹಣ ಸಮಾರಂಭ ಉದ್ಘಾಟಿಸಿ ಮಾತನಾಡಿ ಪರಸ್ಪರ ಗೆಳೆತನದಿಂದ ಕೂಡಿ ಬಾಳುವ ಒಂದು ಕುಟುಂಬದಂತಿರುವ ಇನ್ನರ್‌ವೀಲ್ ಕ್ಲಬ್ನಲ್ಲಿ ಎಲ್ಲಾ ಸಹೋದರಿಯರು ಸಂಘಟಿತರಾಗಿ ಊರಿಗೆ ಹಾಗೂ ಸಮಾಜಕ್ಕೆ ಮಾದರಿಯಾಗುವಂತಹ ಕೆಲಸಗಳನ್ನು ಮಾಡುವಂತಾದಾಗ ಮಾತ್ರ ಶತ್ರುತ್ವ ಮರೆಯಾಗಿ ಕತ್ತಲೆಯ ಒಳಗಿರುವ ಜ್ಞಾನ, ಭರವಸೆಗಳೆಂಬ ಬೆಳಕಿನ ಬೀಜದಂತೆ ಭವಿಷ್ಯದ ಬಾಳು ಬೆಳಗುತ್ತದೆ. ಮಹಿಳೆಯರ ರಕ್ಷಣೆಯ ಬಗ್ಗೆ ಅಲ್ಲಲ್ಲಿ ಜಾಗೃತಿ ಸಮಾವೇಶ, ಕಷ್ಟದಲ್ಲಿರುವವರಿಗೆ, ನೊಂದವರಿಗೆ ತಕ್ಷಣ ಸ್ಪಂದಿಸುವ ಹಾಗೂ ಮಕ್ಕಳಿಗೆ ಪ್ರಕೃತಿ ರಕ್ಷಣೆ, ನೀರಿನ ಮಿತ ಬಳಕೆ, ಪ್ಲಾಸ್ಟಿಕ್ ಮುಕ್ತ ಸಮಾಜ ನಿರ್ಮಾಣ ಮತ್ತು ಆರೋಗ್ಯದ ಬಗ್ಗೆ ಮಾರ್ಗದರ್ಶನ ನೀಡುವ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದೆಹಲಿಯಲ್ಲಿ ನಡೆಯುವ ಸ್ವಾತಂತ್ರೋತ್ಸವದ ಧ್ವಜಾರೋಹಣ ಸಮಾರಂಭಕ್ಕೆ ಕುಂದಾಪುರ ತಾಲೂಕಿನ ಸಿದ್ದಾಪುರದ ಕೆಳಪೇಟೆ ಸೂರ ಪೂಜಾರಿ ಮತ್ತು ಗಿರಿಜಾ ಪೂಜಾರಿ ದಂಪತಿಯನ್ನು ಕೇಂದ್ರ ಸರಕಾರದ ಪ್ರಧಾನಮಂತ್ರಿ ಸಚಿವಾಲಯ ಆಮಂತ್ರಿಸಿದೆ. ಅವರು ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯ ಅಮೃತ ಸರೋವರ ಯೋಜನೆಯಲ್ಲಿ ಸಿದ್ದಾಪುರ ಗ್ರಾಮದ ಬ್ರಹ್ಮಕೆರೆಯನ್ನು 100 ದಿನ ಮಾನವ ಶ್ರಮದ ಮೂಲಕ ಹೂಳೆತ್ತುವ ಕಾರ್ಯವನ್ನು ಇವರು ಮಾಡಿದ್ದರು. ಅಮೃತ ಸರೋವರ ಯೋಜನೆಯ ಮೂಲಕ 100 ದಿನಕ್ಕೂಹೆಚ್ಚು ಕೂಲಿ ಕೆಲಸಮಾಡಿದ ದಂಪತಿಯನ್ನು ಸ್ವಾತಂತ್ರೋತ್ಸವದ ಕಾರ್ಯಕ್ರಮಕ್ಕೆ ಕೇಂದ್ರ ಸರಕಾರವು ಆಮಂತ್ರಿಸಿದೆ. ರಾಜ್ಯದ 34 ಜಿಲ್ಲೆಗಳಲ್ಲಿ ಈ ಯೋಜನೆ ಜಾರಿ ಮಾಡಿದ್ದು, 6 ದಂಪತಿಗಳು ಅಗಸ್ಟ್ 15ರಂದು ನಡೆಯುವ ಸಮಾರಂಭದಲ್ಲಿ ಪಾಲ್ಗೊಳ್ಳಲು ಆಯ್ಕೆಯಾಗಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕೇವಲ ಐದು ಗಂಟೆಯೊಳಗೆ ಸಂತ್ರಸ್ಥೆಯೋರ್ವರಿಗೆ ವಿಧವಾ ವೇತನವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಂಜೂರು ಮಾಡಿಸಿದ್ದಾರೆ. ಜು.4ರ ರಾತ್ರಿ ತೀವ್ರ ಮಳೆಯಿಂದಾಗಿ ರಸ್ತೆ ಕಾಣದೆ ಸ್ಕೂಟರ್ ಸಮೇತ ಕೆರೆಗೆ ಬಿದ್ದು ಕುಂದಾಪುರ ತಾಲೂಕಿನ ಉಳ್ಳೂರು ಗ್ರಾಮದ ದಿನಕರ ಶೆಟ್ಟಿ(53) ಎಂಬುವರು ಮೃತಪಟ್ಟಿದ್ದರು. ಅವರ ಪತ್ನಿ ಎಂ.ಶೀಲಾ ಶೆಟ್ಟಿ ಶನಿವಾರ ಮಧ್ಯಾಹ್ನ 2 ಗಂಟೆಗೆ ಸಚಿವರನ್ನು ಸಾರ್ವಜನಿಕ ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ಭೇಟಿ ಮಾಡಿ, ವಿಧವಾ ವೇತನ ಮಂಜೂರು ಮಾಡಿಸುವಂತೆ ಮನವಿ ಸಲ್ಲಿಸಿದ್ದರು. ಮಹಿಳೆಯ ಮನವಿಗೆ ಸ್ವೀಕರಿಸಿದ ಸಚಿವೆ ಹೆಬ್ಬಾಳ್ವರ್, ತಕ್ಷಣ ಕ್ರಮ ಕೈಗೊಳ್ಳುವಂತೆ ಕುಂದಾಪುರ ತಹಸೀಲ್ದಾರ್ ಶೋಭಾಲಕ್ಷ್ಮೀ ಅವರಿಗೆ ಸೂಚಿಸಿದರು. ಅದರಂತೆ ಸಂಜೆ 6 ಗಂಟೆಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲೆಯ ಪ್ರಾಕೃತಿಕ ವಿಕೋಪ ನಿರ್ವಹಣೆ ಕುರಿತು ನಡೆದ ಸಭೆಯ ನಂತರ ನೊಂದ ಮಹಿಳೆಯ ಪರವಾಗಿ ಅವರ ಸಹೋದರಿ ಮಾಲತಿ ಶೆಟ್ಟಿ ಅವರನ್ನು ಕರೆಯಿಸಿ, ವಿಧವಾ ವೇತನ ಮಂಜೂರಾತಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ,ಜು.10: ವಿಕ್ರಾಂತ್ ರೋಣ ಸಿನಿಮಾ ಖ್ಯಾತಿಯ ನಟಿ ನೀತಾ ಅಶೋಕ್ ತನ್ನ ಕಾಲೇಜು ಗೆಳೆಯನ ಜೊತೆಗೆ ಸಪ್ತಪದಿ ತುಳಿದಿದ್ದಾರೆ. ನೀತಾ ಅಶೋಕ್ ಹಾಗೂ ಸತೀಶ್ ಮೇಸ್ತ ಜೋಡಿಯ ನಿಶ್ಚಿತಾರ್ಥ ಇತ್ತೀಚೆಗೆ ನಡೆದಿತ್ತು. ಕುಂದಾಪುರ ಕೋಟದ ನೀತಾ ಅಶೋಕ್ ಎಂಬಿಎ ಪದವೀಧರರು. ನಟಿ ನೀತಾ ಅಶೋಕ್ ಹಾಗೂ ಸತೀಶ್ಕಾಲೇಜು ಸ್ನೇಹಿತರಾಗಿದ್ದು, ಪರಸ್ಪರ ಪ್ರೀತಿಸುತ್ತಿದ್ದರು. ಇಂದು ತನ್ನ ಹುಟ್ಟೂರು ಕೋಟದ ಸಮೀಪದ ಸಾಲಿಗ್ರಾಮದ ಗುರುನರಸಿಂಹ ಕಲ್ಯಾಣ ಮಂಟಪದಲ್ಲಿ ಅವರು ಹಸೆಮಣೆ ಏರಿದ್ದಾರೆ. ಯಶೋದೆ ಧಾರಾವಾಹಿಯ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿಕೊಟ್ಟ ನೀತಾ ಅಶೋಕ್, ಮುಂದೆ ನಾ ನಿನ್ನ ಬಿಡಲಾರೆ, ಆಶಿಯಾನ್, ನೀಲಾಂಬರಿ ಧಾರಾವಾಹಿಗಳಲ್ಲಿ ಮುಖ್ಯ ಪಾತ್ರದಲ್ಲಿ ನಟಿಸಿದ್ದರು. ತುಳು ಚಿತ್ರರಂಗದಲ್ಲಿ ಜಬರ್ದಸ್ತ್ ಶಂಕರ ಸಿನಿಮಾದಲ್ಲಿ ನಟಿಯಾಗಿ ಕಾಣಿಸಿಕೊಂಡಿದ್ದರು. ವಿಕ್ರಾಂತ್ ರೋಣ ಸಿನಿಮಾದಲ್ಲಿಯೂ ನಟಿಸಿದ್ದಾರೆ. ಹಿಂದಿ ಧಾರಾವಾಹಿಗಳಲ್ಲಿಯೂ ನೀತಾ ಕಾಣಿಸಿಕೊಂಡಿದ್ದರು.

Read More

ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಡಲಕೊರೆತ ತಡೆಗೆ ಶಾಶ್ವತ ಕ್ರಮ ಕೈಗೊಳ್ಳಿ – ಸದನದಲ್ಲಿ ಶಾಸಕ ಕಿರಣ್ ಕೊಡ್ಗಿ

Read More