ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ವಿದ್ಯಾರ್ಥಿಗಳು ಭಾನುವಾರ ರೋಟೇಟಿಂಗ್ ರೂಬಿಕ್ ಕ್ಯೂಬ್ ಮೂಲಕ ಎರಡು ಪ್ರತ್ಯೇಕ ಗಿನ್ನಿಸ್ ದಾಖಲೆ ಬರೆದಿದ್ದಾರೆ. ಮೊದಲ ದಾಖಲೆಯಾಗಿ ನ.30ರಂದು ಹಟ್ಟಿಯಂಗಡಿ ಸಿದ್ಧಿವಿನಾಯಕ ವಸತಿ ಶಾಲೆಯ 50 ವಿದ್ಯಾರ್ಥಿಗಳು 6000 ಕ್ಯೂಬ್ ಗಳನ್ನು ಬಳಸಿಕೊಂಡು 19.198 ಚ.ಮೀ ವಿಸ್ತೀರ್ಣದಲ್ಲಿ ಒಂದು ಬದಿಯಲ್ಲಿ ದೇಶದ ಹಾಕಿ ಮಾಂತ್ರಿಕ ಮೇಜರ್ ಧ್ಯಾನಚಂದ್ ಹಾಗೂ ಇನ್ನೊಂದು ಬದಿಯಲ್ಲಿ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧು ಅವರ ಡ್ಯುಯಲ್ ಸೈಡೆಡ್ ರೋಟೇಟಿಂಗ್ ಫಸಲ್ ರೂಬಿಕ್ ಕ್ಯೂಬ್ ಮೊಸಾಯಿಕ್ ಭಾವಚಿತ್ರವನ್ನು ಅನಾವರಣಗೊಳಿಸುವ ಮೂಲಕ ಈ ಹಿಂದಿನ ಕಝಾಕಿಸ್ತಾನದ ಝೆಂಗಿಸ್ ಐಟ್ಜಾನೋವ್ 5100 ಕ್ಯೂಬ್ ಗಳೊಂದಿಗೆ ನಿರ್ಮಿಸಿದ್ದ 15.878 ಚ.ಮೀಟರ್ ವಿಸ್ತಿರ್ಣದ ದಾಖಲೆಯನ್ನು ಮುರಿದು ನೂತನ ಗಿನ್ನಿಸ್ ದಾಖಲೆ ಮಾಡಿದ್ದರು. ಎರಡನೇ ದಾಖಲೆಯಾಗಿ ಹಟ್ಟಿಯಂಗಡಿ ಸಿದ್ಧಿವಿನಾಯಕ ವಸತಿ ಶಾಲೆಯ ಸಂಸ್ಥಾಪಕ ಹಾಗೂ ಹಿರಿಯ ಧಾರ್ಮಿಕ ನೇತಾರರಾಗಿದ್ದ ಹೆಚ್. ರಾಮಚಂದ್ರ ಭಟ್ ಅವರ ಮೊಸಾಯಿಕ್ ಭಾವಚಿತ್ರವನ್ನು ಭಾನುವಾರ ಮಧ್ಯಾಹ್ನ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ನೀವೆಷ್ಟೇ ಆರ್ಥಿಕ ಶ್ರೀಮಂತಿಕೆಯಿದ್ದರೂ ಆರೋಗ್ಯ ಶ್ರೀಮಂತಿಕೆಯಿಲ್ಲದಿದ್ದರೆ ನೆಮ್ಮದಿಯ ಜೀವನ ಸಾಗಿಸಲಾಗದು ಎಂದು ಕುಂದಾಪುರ ಉಪವಿಭಾಗಾಧಿಕಾರಿ ರಶ್ಮಿ ಎಸ್ ಆರ್ ಹೇಳಿದರು. ಅವರು ನವೋದಯ ಗ್ರಾಮವಿಕಾಸ ಚಾರಿಟೇಬಲ್ ಟ್ರಸ್ಟ್ ಮಂಗಳೂರು, ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘ ನಾವುಂದ ಹಾಗೂ ಆದರ್ಶ ಆಸ್ಪತ್ರೆ ಉಡುಪಿ ಸಹಯೋಗದಲ್ಲಿ ಭಾನುವಾರ ನಾವುಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಆಯೋಜಿಸಲಾಗಿದ್ದ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಆರೋಗ್ಯವಂತ ದೇಹ ಹೊಂದಿರುವ ಪ್ರತಿಯೊಬ್ಬ ವ್ಯಕ್ತಿ ಕನಿಷ್ಟ ವರ್ಷಕ್ಕೊಂದು ಬಾರಿಯಾದರೂ ರಕ್ತದಾನ ಮಾಡುವ ಶಪಥ ಮಾಡಬೇಕು. ಅದು ಮಾತ್ರ ರಕ್ತದ ಕೊರತೆಯಿಂದ ಬಳಲುತ್ತಿರುವ ಅದೆಷ್ಟೋ ರೋಗಿಗಳ ಬದುಕಿಗೆ ನಾವು ಕೊಡುವ ಅಮೂಲ್ಯ ದೇಣಿಗೆಯಾಗಬಹುದು ಎಂದವರು ಹೇಳಿದರು. ಉಡುಪಿಯ ಆದರ್ಶ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಚಂದ್ರಶೇಖರ್ ಮಾತನಾಡಿ, ನಿಯಮಿತ ಆಹಾರ, ಆಗಿದ್ದಾಂಗೆ ಆರೋಗ್ಯ ತಪಾಸಣೆಯಿಂದ ಆರೋಗ್ಯ ರಕ್ಷಣೆ ಸಾಧ್ಯ. ಉತ್ತಮ ಆರೋಗ್ಯ ವಿಮೆಯಿಂದ ಮಾಡಿಸಿಕೊಳ್ಳುವುದೇ ದುಬಾರಿ ಚಿಕಿತ್ಸಾ…
ಸರಕಾರಿ ಪದವಿಪೂರ್ವ ಕಾಲೇಜು ಬೈಂದೂರು | ವಾರ್ಷಿಕೋತ್ಸವ ಸಮಾರಂಭ 2023 ನೇರಪ್ರಸಾರ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕಾರ್ಕಳ: ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನ ಮತ್ತು “ಗ್ರೀನ್ ಸೋಲ್” ಸಂಸ್ಥೆಯ ಸಹಕಾರ ಹಾಗೂ ಸಾರ್ವಜನಿಕರಿಂದ ಬಳಸಿದ ಪಾದರಕ್ಷೆಗಳನ್ನು ಸಂಗ್ರಹಿಸಿ ಅದನ್ನು ಉನ್ನತ ತಂತ್ರಜ್ಞಾನದ ಮೂಲಕ ಮರುಬಳಕೆ ಮಾಡಿ ಶಾಲೆಯ ಬಡಮಕ್ಕಳಿಗೆ ಹಂಚುವ ವಿನೂತನ ಮತ್ತು ಮಾದರಿ ಕಾರ್ಯಕ್ರಮ ನಡೆಯಿತು. ಉಡುಪಿ, ದಕ್ಷಿಣಕನ್ನಡ ಜಿಲ್ಲೆಗಳನ್ನೊಳಗೊಂಡ ಅತ್ಯಂತ ಬಡತನ ಹೊಂದಿದ ಶಾಲೆಯ ಮಕ್ಕಳಿಗೆ ಪಾದರಕ್ಷೆಯನ್ನು ಒದಗಿಸುವ ಅಭಿಯಾನ “ಗ್ರೀನ್ ಸೋಲ್” ಎಂಬ ಸಂಸ್ಥೆಯೊಂದಿಗೆ ಸೇರಿ ನಡೆಸಲಾಗುತ್ತಿದೆ. ಅವಿನಾಶ್ ಕಾಮತ್ ರವರ ಕನಸಿನ ಯೋಜನೆಗೆ ಕ್ರಿಯೇಟಿವ್ ವಿದ್ಯಾ ಸಂಸ್ಥೆಯೂ ಕೈ ಜೋಡಿಸಿದ್ದು ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಸಹಸಂಸ್ಥಾಪಕರಾದ ಅಶ್ವತ್ ಎಸ್. ಎಲ್ ಭಾಗಿಯಾಗಿ ಮಾತನಾಡಿ ಗ್ರಾಮೀಣ ಪ್ರದೇಶದ ಕನಿಷ್ಟ ಅವಶ್ಯಕತೆಗಳನ್ನೂ ಪೂರೈಸಿಕೊಳ್ಳಲಾಗದ ವಿದ್ಯಾರ್ಥಿಗಳಿಗೆ ಈ ಯೋಜನೆ ವರದಾನವಾಗಲಿದೆ. “ನಡಿಗೆ” ಯೋಜನೆಯಲ್ಲಿ ಸಾರ್ವಜನಿಕರ ಸಹಕಾರದೊಂದಿಗೆ ಕಾರ್ಕಳ ಪರಿಸರದಿಂದ ಒಂದು ಸಾವಿರಕ್ಕೂ ಅಧಿಕ ಪಾದರಕ್ಷೆಗಳ ಜೊತೆಯನ್ನು “ಗ್ರೀನ್ ಸೋಲ್” ಸಂಸ್ಥೆಗೆ ಹಸ್ತಾಂತರಿಸಲಾಯಿತು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದಾಂಪತ್ಯ ಜೀವನದ ಬೆಳ್ಳಿಹಬ್ಬವನ್ನು ಪತ್ನಿಯ ನಿಧನಪೂರ್ವ ಬಯಕೆಯಂತೆ ನಡೆಸಿ, ಮಾದರಿ ಪತಿ ಪಟ್ಟಿಗೆ ಸೇರಿದ್ದಾರೆ. ದಾಂಪತ್ಯ ಜೀವನದ 25ರ ಸಂಭ್ರಮ ಪತ್ನಿ ಛಾಯಾಪ್ರತಿಕೃತಿ ಜೊತೆ ಆಚರಿಸಿಕೊಂಡ ಚಿತ್ರ ಸೋಸಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ. ಕುಂದಾಪುರ ಸಪ್ತಗಿರಿ ಕೋಆಪರೇಟಿವ್ ಸೊಸೈಟಿ ಸಂಸ್ಥಾಪಕ ಸದ್ಗುರು ಚಂದ್ರಶೇಖರ್ ಎಂಬುವವರು ಇಂತಹದ್ದೊಂದು ಕಾರ್ಯಕ್ರಮ ಆಯೋಜಿಸಿದ್ದರು. ವಿವಾಹ ಮಹೋತ್ಸವ ಬೆಳ್ಳಿಹಬ್ಬ ಆಚರಣೆ ಹೀಗೆ ಇರಬೇಕು ಎನ್ನುವ ಪತ್ನಿ ಸುಮಾ ಅವರ ಕನಸಾಗಿತ್ತು. ಆದರೆ ಅವರು ಕಳೆದ ತಿಂಗಳು ಅನಾರೋಗ್ಯದಿಂದ ಮೃತಪಟ್ಟಿದ್ದರು. ಬಡಾಕೆರೆ ಶ್ರೀ ಲಕ್ಷ್ಮೀಜನಾರ್ದನ ಸಭಾಂಗಣ ಮಂಟಪದಲ್ಲಿ ಪತ್ನಿಯಷ್ಟೇ ಎತ್ತರದ ಛಾಯಾಪ್ರತಿಕೃತಿ ನಿರ್ಮಿಸಿ ಪತ್ನಿಯ ಬಯಕೆ ಈಡೇರಿಸಿದ್ದು, ಈ ವಿನೂತನ ಕಾರ್ಯಕ್ರಮದಲ್ಲಿ ನೂರಾರು ಜನ ಭಾಗಿಯಾಗಿದ್ದರು. ಪತಿ ಹಾಗೂ ಹೆಣ್ಣು ಮಕ್ಕಳ ನಡುವೆ ನಿಲ್ಲಿಸಿದ ಸುಮಾ ಛಾಯಾಪ್ರತಿಕೃತಿ ಎನ್ನುವುದು ಗೊತ್ತಾಗದಷ್ಟು ನೈಜವಾಗಿದ್ದರೆ, ಭಾಗವಹಿಸಿದವರ ಹಾರೈಸಿದವರ ನಗುವಿನೊಂದಿಗೆ ಕಣ್ಣೀರು ಮಿಳಿತಗೊಂಡಿತ್ತು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕಾರ್ಕಳ: ತ್ರಿಶಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಾರ್ಷಿಕೋತ್ಸವ ಸಮಾರಂಭ “ವಸುಧೈವ ಕುಟುಂಬಕಂ” ಎಂಬ ಕಲ್ಪನೆಯಲ್ಲಿ ಜರುಗಿತು. ಸಮಾರಂಭದಲ್ಲಿ ಮಿಲಾಗ್ರಿಸ್ ಚರ್ಚ್ನ ಧರ್ಮಗುರುಗಳಾದ ವಲೇರಿಯನ್ ಮೆಂಡೊನ್ಸಾ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡುತ್ತಾ, ಕ್ರಿಯೇಟಿವ್ ಶಿಕ್ಷಣ ಸಂಸ್ಥೆ ಸಮಾಜದಲ್ಲಿ ಜವಾಬ್ದಾರಿಯುತವಾದ ಒಂದು ಸಮುದಾಯವನ್ನು ನಿರ್ಮಾಣ ಮಾಡುವ ಕನಸು ಕಂಡು ಉತ್ತಮ ರೀತಿಯಿಂದ ಮುನ್ನಡೆಯುತ್ತಿದೆ. ಉಡುಪಿ ಪ್ರಾಂತ್ಯದಲ್ಲಿ ಕ್ರಿಯೇಟಿವ್ನ ಹೆಸರು ಇತ್ತೀಚೆಗೆ ಎಲ್ಲ ಕಡೆ ಕೇಳಲಾರಂಭಿಸಿದೆ. ಉನ್ನತವಾದ ಯಶಸ್ಸು ಕೀರ್ತಿ ಲಭಿಸಲಿ ಎಂದು ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕ್ರಿಯೇಟಿವ್ ವಿದ್ಯಾಸಂಸ್ಥೆಯ ಸಹ ಸಂಸ್ಥಾಪಕರಲ್ಲಿ ಓರ್ವರಾದ ಡಾ. ಗಣನಾಥ ಶೆಟ್ಟಿಯವರು ಮಾತನಾಡಿ ವಿದ್ಯಾರ್ಥಿಗಳ ವಿಶೇಷವಾದ ಬೆಳವಣಿಗೆಗಳಿಗೆ ತ್ರಿಶಾ ಪದವಿ ಪೂರ್ವ ಕಾಲೇಜಿನಲ್ಲಿ ಎಲ್ಲ ರೀತಿಯ ಸಹಕಾರ ನೀಡಲಾಗುತ್ತಿದೆ. ವಿದ್ಯಾರ್ಥಿಗಳು ಮುಂಬರುವ ವಾರ್ಷಿಕ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಒಳ್ಳೆಯ ಅಂಕಗಳನ್ನು ಗಳಿಸಲಿ ಎಂದು ಆಶಿಸಿದರು. ಸಹ ಸಂಸ್ಥಾಪಕರಾದ ಅಶ್ವತ್ ಎಸ್. ಎಲ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಹ ಸಂಸ್ಥಾಪಕರಾದ ವಿದ್ವಾನ್ ಗಣಪತಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಶಿಕ್ಷಣ ಕ್ಷೇತ್ರದಲ್ಲಿ ಮಾದರಿ ಸಂಸ್ಥೆ ರೂಪಿಸುವ ಕನಸಿನೊಂದಿಗೆ ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯನ್ನು ಸ್ಥಾಪಿಸಿರುವ ಸಂಸ್ಥಾಪಕರನ್ನು ಗೌರವಿಸುವ “ಸಪ್ತಸ್ವರ” ಕಾರ್ಯಕ್ರಮ ಕಲ್ಯಾಣಪುರದ “ಮಿಲಾಗ್ರಿಸ್ ತ್ರಿಶತಮಾನೋತ್ಸವ” ಸಭಾ ಭವನದಲ್ಲಿ ನಡೆಯಿತು. ಕಾರ್ಯಕ್ರಮಕ್ಕೆ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಪ್ತ ಸಂಸ್ಥಾಪಕರೂ ಆಗಮಿಸಿ ಗೌರವವನ್ನು ಸ್ವೀಕರಿಸಿ, ಮಾತನಾಡಿದರು. ಸಂಸ್ಥಾಪಕರಲ್ಲಿ ಓರ್ವರಾದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಿದ್ವಾನ್ ಗಣಪತಿ ಭಟ್ ಅವರು ತ್ರಿಶಾ ವಿದ್ಯಾ ಸಂಸ್ಥೆಯನ್ನು ಆರಂಭಿಸಿದಾಗ ಸಹಜವಾಗಿ ಎಲ್ಲರಲ್ಲೂ ಕುತೂಹಲ ನಿರೀಕ್ಷೆಗಳಿದ್ದವು. ಇಂದು ಸಂಸ್ಥೆಯನ್ನು ಉತ್ತಮ ರೀತಿಯಲ್ಲಿ ಬೆಳೆಸಲಾಗುತ್ತಿದೆ ಎಂದು ಅಭಿಪ್ರಾಯ ಪಟ್ಟರು, ಸಂಸ್ಥಾಪಕರಾದ ಅಮೃತ್ ರೈ ಮಾತನಾಡಿ ಯಾವ ವಿದ್ಯಾರ್ಥಿಯೂ ಶಿಕ್ಷಣದ ವ್ಯವಸ್ಥೆಯಲ್ಲಿ ಹಿಂದುಳಿಯಬಾರದೆಂಬ ಉದ್ದೇಶ ಹೊಂದಿದ್ದೇವೆ. ಸಂಸ್ಥೆ ಸದಾಕಾಲ ವಿದ್ಯಾರ್ಥಿಗಳ ಅಭ್ಯುದಯ ಬಯಸುತ್ತದೆ ಎಂದು ತಿಳಿಸಿದರು. ಸಂಸ್ಥಾಪಕರಾದ ಆದರ್ಶ ಎಂ.ಕೆ ಸಂಸ್ಥೆ ಇದುವರೆಗೆ ಎದುರಿಸಿದ ಸವಾಲುಗಳು ಹಾಗೂ ಸಮಸ್ಯೆಗಳನ್ನು ಮೆಲುಕು ಹಾಕಿದರು. ಇನ್ನೋರ್ವ ಸಂಸ್ಥಾಪಕರಾದ ಅಶ್ವತ್ ಎಸ್. ಎಲ್ ಮಾತನಾಡಿ ನಮ್ಮ ತಂದೆ ತಾಯಿ ಹಾಗೂ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸೋನಿ ಟಿವಿಯ ಕೌನ್ ಬನೇಗಾ ಕರೋಡ್ಪತಿ (ಕೆಬಿಸಿ) ಜೂನಿಯರ್ 15ನೇ ಸೀಸನ್ನಲ್ಲಿ ಭಾಗವಹಿಸಿದ ಶಿರೂರಿನ ಪ್ರತಿಷ್ಟಾ ಶೆಟ್ಟಿ 11 ಸುತ್ತುಗಳ ತನಕ ಪ್ರವೇಶ ಪಡೆದು 6.40 ಲಕ್ಷ ರೂಪಾಯಿ ಗೆದ್ದಿದ್ದಾರೆ. ಪ್ರತಿಷ್ಟಾ ಶೆಟ್ಟಿ ಅವರು, ಬೈಂದೂರು ಕಬೈಲು ಜಾಡಿಮನೆ ನಾಗರಾಜ ಶೆಟ್ಟಿ ಮತ್ತು ಶಿರೂರು ಕೆಳಹೊಸ್ಮನೆ ಪ್ರಫುಲ್ಲಾ ಶೆಟ್ಟಿ ದಂಪತಿಗಳ ಪುತ್ರಿಯಾಗಿದ್ದು, ಪ್ರಸ್ತುತ ಪೊಷಕರೊಂದಿಗೆ ಗುಜರಾತಿನ ವಾಪಿಯಲ್ಲಿ ನೆಲೆಸಿದ್ದು, 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದಾರೆ. ಕಾರ್ಯಕ್ರಮದಲ್ಲಿ ಒಟ್ಟು 11 ಸುತ್ತುಗಳವರೆಗೆ ಪ್ರವೇಶ ಪಡೆದು 6.40 ಲಕ್ಷ ಬಹುಮಾನ ಗೆದ್ದಿದ್ದಾರೆ. ಭರತನಾಟ್ಯ ಕಲಾವಿದೆಯೂ ಆಗಿರು ಪ್ರತಿಷ್ಠಾ, 2022ರ ಮಿಸ್ ಟೀನ್ ಗುಜರಾತ್ ಸ್ಪರ್ಧೆಯಲ್ಲಿ ಭಾಗವಹಿಸಿ ರನ್ನರ್ ಆಫ್ ಆಗಿದ್ದರು. ಪ್ರತಿಷ್ಠಾ ಭಾಗವಹಿಸಿದ್ದ ಕಾರ್ಯಕ್ರಮ ಸೋನಿ ಟಿವಿಯಲ್ಲಿ ಬುಧವಾರ ಹಾಗೂ ಗುರುವಾರ ಪ್ರಸಾರವಾಗಲಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಗೋವಾದಲ್ಲಿ ನಡೆದ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ದೈವಿಕ ಕತೆಯನ್ನು ಹೊಂದಿರುವ ʼಕಾಂತಾರʼ ಸಿನಿಮಾ ಚೊಚ್ಚಲ ಆವೃತ್ತಿಯ ʼಸಿಲ್ವರ್ ಪಿಕಾಕ್ ಅವಾರ್ಡ್’ ತನ್ನದಾಗಿಸಿಕೊಂಡಿದೆ. ಸಿನಿಮಾದ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರಿಗೆ ವಿಶೇಷ ಜ್ಯೂರಿ ಅವಾರ್ಡ್ ಲಭಿಸಿದೆ. ಸೋಷಿಯಲ್ ಮೀಡಿಯಾದಲ್ಲಿ ಪತ್ರವೊಂದನ್ನು ಹಂಚಿಕೊಂಡಿರುವ ರಿಷಬ್ ಶೆಟ್ಟಿ ಈ ಪ್ರಶಸ್ತಿಯನ್ನು ಶಂಕರ್ ನಾಗ್ ಅವರಿಗೆ ಅರ್ಪಿಸಿದ್ದಾರೆ. ʼ54ನೇ ಗೋವಾ ಇಂಟರ್ ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಆಫ್ ಇಂಡಿಯಾ ಸ್ಪೆಷಲ್ ಜ್ಯೂರಿ ಅವಾರ್ಡ್ ಹೊರಕಿದ್ದು ಎಂದೂ ಮರೆಯಾಗದ ಕ್ಷಣಗಳಲ್ಲಿ ಉಳಿದುಕೊಳ್ಳುತ್ತದೆ ಎಂದು ರಿಷಬ್ ಪತ್ರ ಆರಂಭಿಸಿದ್ದಾರೆ. 1979ರಲ್ಲಿ ನನ್ನ ಸ್ಫೂರ್ತಿಯಾದ ಶಂಕರ್ ನಾಗ್ ಸರ್ ಅವರಿಗೆ ʼಒಂದಾನೊಂದು ಕಾಲದಲ್ಲಿʼ ಚಿತ್ರಕ್ಕೆ ಅತ್ಯುತ್ತಮ ನಟ ಎಂಬ ಪ್ರಶಸ್ತಿ ಇದೇ ಚಿತ್ರೋತ್ಸವದಲ್ಲಿ ದೊರಕಿದ್ದು, ಅವರು ತೋರಿಸಿರುವ ದಾರಿಯಲ್ಲಿ ನಡೆಯಲು ಪ್ರಯತ್ನಿಸುತ್ತಿರುವ ನನಗೆ ಇಂದು ಈ ಅವಾರ್ಡ್ ದೊರೆತಿದ್ದು ಅತ್ಯಂತ ಸಂತಸ ನೀಡಿದೆ ಎಂದು ರಿಷಬ್ ಬರೆದಿದ್ದಾರೆ. ʼಕಾಂತಾರʼವನ್ನು ನೋಡಿ ಬೆಂಬಲಿಸಿ ಮೆಚ್ಚುಗೆ ವ್ಯಕ್ತಪಡಿಸಿದ ಕನ್ನಡಿಗರು,…
