Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಫೆ.01: ಪರಿಸರ ಸ್ವಚ್ಚತೆ ಪ್ರತಿಯೊಬ್ಬ ನಾಗರಿಕರ ಜವಬ್ದಾರಿಯಾಗಬೇಕು. ವೈಯಕ್ತಿಕ ಸ್ವಚ್ಚತೆ ಜೊತೆಗೆ ಪರಿಸರದ ಕಾಳಜಿ ಮೈಗೂಡಿಸಿಕೊಂಡಾಗ ಉತ್ತಮ ಆರೋಗ್ಯದ ಜೊತೆಗೆ ಸ್ವಸ್ಥ ಸಮಾಜ ನಿರ್ಮಾಣ ಸಾಧ್ಯ ಎಂದು ಕುಂದಾಪುರದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಅಬ್ದುಲ್ ಹುಸೇನ್ ರಹೀಮ್ ಶೇಖ್ ಹೇಳಿದರು. ತಾಲೂಕು ಕಾನೂನು ಸೇವಾ ಸಮಿತಿ, ಕುಂದಾಪುರ ವಕೀಲರ ಸಂಘ, ಪುರಸಭೆ ಕುಂದಾಪುರ, ಅಭಿಯೋಗ ಇಲಾಖೆ ಕುಂದಾಪುರ, ತಾಲ್ಲೂಕು ಆಡಳಿತದ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಸ್ವಚ್ಚತಾ ಕಾರ್ಯಕ್ರಮದ ಅಂಗವಾಗಿ ಸೋಮವಾರದಂದು ಕುಂದಾಪುರದಲ್ಲಿ ನಡೆದ ಸ್ವಚ್ಛತಾ ಅಭಿಯಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಇದೇ ಸಂದರ್ಭ ನ್ಯಾಯಾಧೀಶರು, ನ್ಯಾಯಾಲಯ, ಕಂದಾಯ ಇಲಾಖೆ, ಪುರಸಭೆಯ ಸಿಬ್ಬಂದಿಗಳು, ಪೌರ ಕಾರ್ಮಿಕರು ಕುಂದಾಪುರದ ನ್ಯಾಯಾಲಯದ ಆವರಣ ಹಾಗೂ ಬ್ಲೂವಾಟರ್ ಬಳಿಯಿಂದ ಫೆರ್ರಿ ಪಾರ್ಕ್ ತನಕ ಪಂಚ ಗಂಗಾವಳಿ ನದಿ ತೀರದಲ್ಲಿ ಸ್ವಚ್ಚತಾ ಕಾರ್ಯ ನಡೆಸಿದರು. ಈ ಸಂದರ್ಭ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜು ಎನ್., ಹೆಚ್ಚುವರಿ ಸಿವಿಲ್ ಮತ್ತು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ನಾವಾಡುವ ಭಾಷೆಗಳು ನಮ್ಮ ಪ್ರಾದೇಶಿಕ ಸಂಸ್ಕೃತಿಯ ಭಾಗವೇ ಆಗಿರುತ್ತದೆ. ಭಾಷೆಯ ಬಗ್ಗೆ ಕೀಳರಿಮೆ ತೋರಿಸದೆ ಉಪಯೋಗಿಸಿದಷ್ಟು ಸಮೃದ್ಧವಾಗಿ ಭಾಷೆಯ ಬೆಳವಣಿಗೆ ಸಾಧ್ಯ. ಕುಂದಾಪ್ರ ಭಾಷೆಗೆ ತನ್ನದೇ ಸ್ಥಾನಮಾನ ಹೊಂದಿದ್ದು ಸಾಮಾಜಿಕ ಜಾಲತಾಣದಲ್ಲಿ ವಿಶೇಷ ಖ್ಯಾತಿ ಹೊಂದಿರುವುದು ಹೆಮ್ಮೆಯ ವಿಷಯ ಎಂದು ಹಾಸ್ಯ ಕಲಾವಿದ, ರಂಗಕರ್ಮಿ ನಾಗರಾಜ್ ತೆಕ್ಕಟ್ಟೆ ಅವರು ಹೇಳಿದರು. ಅವರು ಕೋಟದ ಡಾ|| ಶಿವರಾಮ ಕಾರಂತ ಥೀಮ್ ಪಾರ್ಕ್‌ನಲ್ಲಿ ನಡೆದ ಡಾ|| ಶಿವರಾಮ ಕಾರಂತ ಪ್ರತಿಷ್ಠಾನ(ರಿ)ಕೋಟ, ಡಾ|| ಶಿವರಾಮ ಕಾರಂತ ಟ್ರಸ್ಟ್ (ರಿ) ಉಡುಪಿ, ಕೋಟತಟ್ಟು ಗ್ರಾಮ ಪಂಚಾಯತ್, ಇವರ ಆಶ್ರಯದಲ್ಲಿ ನಡೆದ ವಿಚಾರ ಸಂಕಿರಣ, ದತ್ತಿ ಪುರಸ್ಕಾರ, ನಾಟಕ ಪ್ರದರ್ಶನ ಆಹ್ಲಾದ-೨೦೨೩ (ಸಂತಸದ ಕರೆಗಾಳಿ) ಕಾರ್ಯಕ್ರಮದಲ್ಲಿ ದಿ. ಮಂಜುನಾಥ ಕೋಟ ಸ್ಮಾರಕ ದತ್ತಿ ಪುರಸ್ಕಾರ ಪ್ರಶಸ್ತಿ ಸ್ವೀಕರಿಸಿ ಮಾತನಾಡುತ್ತಿದ್ದರು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಉದ್ಯಮಿ ಇಬ್ರಾಹೀಂ ಸಾಬೇಬ್ ಕೋಟ ಅವರು ಸಾಂಸ್ಕೃತಿಕ -ಸಾಹಿತ್ಯಿಕ ಕಾರ್ಯಕ್ರಮಗಳ ಮೂಲಕ ಮನೆಮಾತಾಗಿರುವ ಕಾರಂತ ಥೀಮ್ ಪಾರ್ಕ್ ದತ್ತಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಫೆ.01: ನಾವು ಹಿಂದುಳಿದಿದ್ದೇವೆ ಎಂಬ ಮನ:ಸ್ಥಿತಿಯಿಂದ ಹೊರಬಂದು ವಿದ್ಯಾವಂತರಾಗಿ ಧನಾತ್ಮಕ ಯೋಚನೆ, ಯೋಜನೆಗಳೊಂದಿಗೆ ಬದುಕನ್ನು ರೂಪಿಸಿಕೊಳ್ಳಬೇಕು ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ ಜಯಪ್ರಕಾಶ್ ಹೆಗ್ಡೆ ಹೇಳಿದರು. ಅವರು ಇಂದು ನಗರದ ಅಂಬಲಪಾಡಿ ಜಿಲ್ಲಾ ಸವಿತಾ ಸಮಾಜ ಸಮುದಾಯ ಸಭಾಂಗಣದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಸವಿತಾ ಸಮಾಜ ಉಡುಪಿ ಇವರ ಸಹಯೋಗದಲ್ಲಿ ನಡೆದ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಸವಿತಾ ಮಹರ್ಷಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು. ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಸವಿತಾ ಸಮುದಾಯಕ್ಕೆ ಸದಾ ಸಹಕಾರ ನೀಡುವುದಾಗಿ ತಿಳಿಸಿದರು. ಉಡುಪಿ ಜಿಲ್ಲಾ ಸವಿತಾ ಸಮಾಜದ ಗೌರವಾಧ್ಯಕ್ಷ ಬನ್ನಂಜೆ ಗೋವಿಂದ ಭಂಡಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಸವಿತಾ ಸಮಾಜದ ಪ್ರಧಾನ ಕಾರ್ಯದರ್ಶಿ ಸದಾಶಿವ ಬಂಗೇರ ಕುರ್ಕಾಲು ಸವಿತಾ ಮಹರ್ಷಿಗಳ ಬಗ್ಗೆ ಉಪನ್ಯಾಸ ನೀಡಿದರು. ಕುಂದಾಪುರ ತಾಲೂಕು ಸವಿತಾ ಸಮಾಜದ ಅಧ್ಯಕ್ಷ ಸುಭಾಸ್ ಭಂಡಾರಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಕಲಬುರಗಿಯ ಗುಲಬರ್ಗಾ ವಿಶ್ವವಿದ್ಯಾಲಯ ಹಾಗೂ ನವದೆಹಲಿ ಅಸೋಸಿಯೇ?ನ್ ಆಫ್ ಇಂಡಿಯನ್ ಯುನಿವರ್ಸಿಟಿ ಆಶ್ರಯದಲ್ಲಿ ನಡೆದ ೩೬ನೇ ಅಂತರ ವಿಶ್ವವಿದ್ಯಾಲಯ ಸೌತ್ ಈಸ್ಟ್ ಇಂಡಿಯಾ ವಲಯ ಯುವಜನ ಮೇಳದ ಏಕಾಂಕ ನಾಟಕ ಪ್ರಥಮ ಹಾಗೂ ಜಾನಪದ ನೃತ್ಯದಲ್ಲಿ ದ್ವಿತೀಯ ಸ್ಥಾನ ಪಡೆದ ಆಳ್ವಾಸ್ ಕಾಲೇಜು ರಾ? ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದೆ. ಆಳ್ವಾಸ್ ಕಾಲೇಜು ತಂಡವು ಮಂಗಳೂರು ವಿಶ್ವವಿದ್ಯಾಲಯವನ್ನು ಪ್ರತಿನಿಧಿಸಿತ್ತು. ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ನಿರ್ದೇಶಕ ಜೀವನರಾಮ್ ಸುಳ್ಯ ಮಾರ್ಗದರ್ಶನದಲ್ಲಿ ಭುವನ್ ಮಣಿಪಾಲ್ ನಿರ್ದೇಶಿಸಿದ ಹಾಗೂ ಉಜ್ವಲ್ ಯುವಿ ವಿನ್ಯಾಸ ಮಾಡಿದ ’ದುರ್ಯೋಧ’ ನಾಟಕ ಪ್ರಥಮ ಬಹುಮಾನ ಪಡೆಯಿತು. ಸುರೇಶ್ ಕುಮಾರ್ ನಿರ್ದೇಶನದ ಜಾನಪದ ನೃತ್ಯವು ದ್ವಿತೀಯ ಸ್ಥಾನ ಪಡೆಯಿತು. ಸಾಂಸ್ಕೃತಿಕ ಪ್ರತಿಭೆಗಳಿಗೆ ದತ್ತು ಯೋಜನೆ ಅಡಿಯಲ್ಲಿ ಉಚಿತ ಶಿಕ್ಷಣ ನೀಡುತ್ತಿರುವ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ ಮೋಹನ್ ಆಳ್ವ ವಿಜೇತರನ್ನು ಅಭಿನಂದಿಸಿದರು. ಆಳ್ವಾಸ್ ರಂಗ ಅಧ್ಯಯನ ಕೇಂದ್ರವು ೧೧ ಬಾರಿ ರಾಷ್ಟ್ರೀಯ ರಂಗ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು.ಜ.31: ಕೇವಲ ಅಭಿವೃದ್ದಿ ಕಾರ್ಯಗಳು ಮಾತ್ರ ಊರಿನ ಬೆಳವಣಿಗೆಯನ್ನು ಬಿಂಬಿಸಿವುದಿಲ್ಲ ಬದಲಾಗಿ ಆ ಊರಿನ ಕಲೆ, ಸಂಸ್ಕ್ರತಿಯ ಜೊತೆಗೆ ಚಟುವಟಿಕೆ ಕೂಡ ಊರಿನ ಕೀರ್ತಿಯನ್ನು ಹೆಚ್ಚಿಸುತ್ತದೆ ಎಂದು ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು ಅವರು ಯುವಶಕ್ತಿ ಕರಾವಳಿ ಹಾಗೂ ಅರುಣ್ ಪಬ್ಲಿಸಿಟಿ ಇವರ ಸಹಯೋಗದಲ್ಲಿ ನಡೆದ ಕರಾವಳಿ ಸಂಭ್ರಮ – 2023 ಎರಡನೇ ದಿನದ ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಕರಾವಳಿ ಸಂಭ್ರಮ ಮಾದರಿ ಉತ್ಸವವಾಗಿದೆ ಎಂದರು. ಜಿ.ಪಂ ಮಾಜಿ ಸದಸ್ಯ ಕೆ. ಬಾಬು ಶೆಟ್ಟಿ ಮಾತನಾಡಿ ಶಿರೂರಿನಲ್ಲಿ ನಡೆದ ಕರಾವಳಿ ಉತ್ಸವದ ಕಾರ್ಯಕ್ರಮ ಸಂಘಟಿಸುವ ಇತರ ಸಂಯೋಜಕರಿಗೆ ಮಾದರಿಯಾಗಿದೆ. ಅದ್ಬುತ ಕಾರ್ಯಕ್ರಮದ ಮೂಲಕ ಊರಿನ ಅಭಿವೃದ್ದಿಗೆ ಶ್ರಮಿಸುವ ಯುವಶಕ್ತಿ ಒಗ್ಗಟ್ಟು ಪ್ರಶಂಶನೀಯ ಎಂದರು. ಯುವಶಕ್ತಿ ಉತ್ಸವ ಸಮಿತಿ ಅಧ್ಯಕ್ಷ ಚಂದ್ರ ಮೊಗೇರ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಬೈಂದೂರು ಬಿಜೆಪಿ ಮಂಡಲದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಜಿ.ಪಂ ಮಾಜಿ ಅಧ್ಯಕ್ಷ ಎಸ್.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಯ ಸಮಾರೋಪ ಸಮಾರಂಭದ ಪ್ರಯುಕ್ತ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರ ನಿರ್ದೇಶನದಂತೆ ದೇಶದ ಎಲ್ಲಾ ಕಾಂಗ್ರೆಸ್ ಕಛೇರಿಗಳಲ್ಲಿ ಧ್ವಜಾರೋಹಣ ನೆರವೇರಿಸಲಾಯಿತು. ವಂಡ್ಸೆ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಜಿಲ್ಲಾ ಕಾಂಗ್ರೆಸ್ ಸದಸ್ಯರಾದ ವಂಡಬಳ್ಳಿ ಜಯರಾಮ ಶೆಟ್ಟಿ ಧ್ವಜಾರೋಹಣ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶರತ್ ಕುಮಾರ್ ಶೆಟ್ಟಿ, ಉದಯ ಜಿ.ಪೂಜಾರಿ, ಶ್ರೀನಿವಾಸ ಪೂಜಾರಿ ಕಲ್ಮಡಿ, ರತ್ನಾಕರ ಶೆಟ್ಟಿ, ಗೋವರ್ಧನ್ ಜೋಗಿ, ಚಂದ್ರ ರಾಯಪ್ಪನಡಿ, ಕೊರಗು ಬಿಲ್ಲವ, ರೋಶನ್ ಕುಮಾರ್ ಶೆಟ್ಟಿ, ನಾಗರಾಜ ಪೂಜಾರಿ, ಸಂಪತ್ ಶೆಟ್ಟಿ, ಶೇಷ ಪೂಜಾರಿ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ :ತಾಲೂಕು 18ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಕೋ. ಶಿವಾನಂದ ಕಾರಂತರನ್ನು ಆಯ್ಕೆ ಮಾಡಲಾಗಿದೆ ಎಂದು ಕುಂದಾಪುರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಾ. ಉಮೇಶ್ ಪುತ್ರನ್ ತಿಳಿಸಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲಾ ಅಧ್ಯಕ್ಷರಾದ ನೀಲಾವರ ಸುರೇಂದ್ರ ಅಡಿಗ, ಗೌರವ ಕಾರ್ಯದರ್ಶಿಗಳಾದ ಸುಬ್ರಹ್ಮಣ್ಯ ಶೆಟ್ಟಿ, ನರೇಂದ್ರ ಕುಮಾರ್ ಕೋಟ, ಕೋಶಾಧ್ಯಕ್ಷ ಮನೋಹರ ಪಿ., ತಾಲೂಕು ಪದಾಧಿಕಾರಿಗಳಾದ ದಿನಕರ ಶೆಟ್ಟಿ, ಕೆ. ಎಸ್. ಮಂಜುನಾಥ್, ಅಕ್ಷತಾ ಗಿರೀಶ್ ಐತಾಳ ಅವರು ಭಾಗವಹಿಸಿದ ಸಭೆಯಲ್ಲಿ ಕೋ. ಶಿವಾನಂದ ಕಾರಂತರನ್ನು ಆಯ್ಕೆ ಮಾಡಲಾಯಿತು ಹಾಗೂ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯದ ವಠಾರದಲ್ಲಿ ಸಮ್ಮೇಳನ ಏರ್ಪಡಿಸಲು ನಿರ್ಧರಿಸಲಾಯಿತು. ಕೋ. ಶಿವಾನಂದ ಕಾರಂತರು ನಿವೃತ್ತ ಉಪನ್ಯಾಸಕರಾಗಿದ್ದು, ಗಂಗೊಳ್ಳಿ ಸ.ವಿ. ಶಿಕ್ಷಣ ಸಂಸ್ಥೆಯಲ್ಲಿ ನಾಲ್ಕು ದಶಕಗಳ ಕಾಲ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದರು. ರಂಗ ನಿರ್ದೇಶಕರಾಗಿ ನೂರಾರು ನಾಟಕಗಳನ್ನು ನೀಡಿರುವ ಅವರು ನಟರಾಗಿಯೂ ಖ್ಯಾತರಾದವರು. ಆಕಾಶವಾಣಿಯ ಚಿಂತನ ವಿಭಾಗದ ಸಂಪನ್ಮೂಲ ವ್ಯಕ್ತಿ. ಸಾಹಿತಿಯಾಗಿ ಕಥೆ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಚೆನ್ನೈನ ಕ್ರೆಸೆಂಟ್ ವಿಶ್ವವಿದ್ಯಾನಿಲಯದಲ್ಲಿ ಸೋಮವಾರ ಮುಕ್ತಾಯಗೊಂಡ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳಾ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ ಅನ್ನು ಮಂಗಳೂರು ವಿಶ್ವವಿದ್ಯಾಲಯ ಮುಡಿಗೇರಿಸಿಕೊಂಡಿದ್ದು, ತಂಡದ 10 ಆಟಗಾರರಲ್ಲಿ 9 ಮಂದಿ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳಾಗಿದ್ದಾರೆ. ಟೂರ್ನಿಯಲ್ಲಿ ಕಣಕ್ಕಿಳಿದ ಆರೂ ( ಹೆಚ್ವುವರಿ ಸೇರಿ) ಆಟಗಾರರು ಆಳ್ವಾಸ್ ಕಾಲೇಜಿನ ಕ್ರೀಡಾ ಪ್ರತಿಭೆಗಳು. ಇವರೆಲ್ಲರೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ‘ಕ್ರೀಡಾ ದತ್ತು ಯೋಜನೆ’ಯ ಅಡಿಯಲ್ಲಿ ತರಬೇತಿ ಪಡೆಯುತ್ತಿದ್ದಾರೆ. ಭಾರತೀಯ ಬಾಲ್ ಬ್ಯಾಡ್ಮಿಂಟನ್ ಅಸೋಸಿಯೇಷನ್ ನೀಡುವ ಪ್ರತಿಷ್ಠಿತ ‘ಸ್ಟಾರ್ ಆಫ್ ಇಂಡಿಯಾ’ ಪ್ರಶಸ್ತಿ ಪುರಸ್ಕೃತೆ ಜಯಲಕ್ಷ್ಮಿ ಜಿ. ಅವರು, 8 ಬಾರಿ ಅಖಿಲ ಭಾರತ ಅಂತರ ವಿಶ್ವವಿದ್ಯಾನಿಲಯ ಮಹಿಳಾ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ ಗೆದ್ದಿರುವ ಮಂಗಳೂರು ವಿಶ್ವವಿದ್ಯಾನಿಲಯ ತಂಡದ ಭಾಗವಾಗಿದ್ದರು. ಅವರು ಕರ್ನಾಟಕ ತಂಡದ ನಾಯಕಿಯಾಗಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯವು ಒಟ್ಟು 12 ಬಾರಿ ಪ್ರಶಸ್ತಿ ಪಡೆದಿದ್ದು, ಸತತವಾಗಿ 8 ಬಾರಿ ಪ್ರಶಸ್ತಿಗೆ ಮುತ್ತಿಕ್ಕಿತು. ವಿಜೇತ ತಂಡವನ್ನು ಮೂಡುಬಿದಿರೆ ಆಳ್ವಾಸ್ ಶಿಕ್ಷಣ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ವಿಜ್ಞಾನ ಎಷ್ಟೇ ಮುಂದುವರಿದರೂ ದೇವರು ಅದರ ಅಂತಸತ್ವವಾಗಿ ಉಳಿಯುತ್ತಾನೆ. ಖ್ಯಾತ ವಿಜ್ಞಾನಿಗಳೆಲ್ಲರೂ ದೇವರ ಅಸ್ತಿತ್ವವನ್ನು ಒಪ್ಪಿಕೊಂಡಿದ್ದಾರೆ. ಆದರೆ ಅಲ್ಪಸ್ವಲ್ಪ ತಿಳಿದವರು ದೇವರ ಅಸ್ತಿತ್ವವನ್ನು ಪ್ರಶ್ನಿಸುತ್ತಾರೆ ಎಂದು ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದರು. ತೆಂಕಬೆಟ್ಟು ನವೀಕೃತ ಶ್ರೀ ಕಾಲಭೈರವೇಶ್ವರ ದೇವಸ್ಥಾನದ ಬ್ರಹ್ಮಕಳಶೋತ್ಸವದ ಎರಡನೇ ದಿನ ಶುಕ್ರವಾರ ದೇವಳಕ್ಕೆ ಭೇಟಿನೀಡಿ ದೇವರ ದರ್ಶನ ಪಡೆದು ನಂತರ ಅವರು ಆಶೀರ್ವಚನಗೈದರು. ದೇವರು ಭಕ್ತರಲ್ಲಿ ಭಕ್ತಿ ತುಂಬುವ ಒಂದು ಶಕ್ತಿ. ದೇವಾಲಯಗಳಲ್ಲಿ ಭಯ ಭಕ್ತಿಯಿಂದ ನಾವು ಹೇಗೆ ಇರುತ್ತೇವೆಯೋ, ನಿಜ ಜೀವನದಲ್ಲಿಯೂ ಅದನ್ನು ನಾವು ರೂಢಿಸಿಕೊಳ್ಳಬೇಕು ಎಂದು ಅವರು ಅಭಿಪ್ರಾಯಪಟ್ಟರು. ಮಂಗಳೂರು ಆದಿಚುಂಚನಗಿರಿ ಶಾಖಾಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿ, ಹಲವರಿ ಮಠದ ಶ್ರೀ ಜಗದೀಶಾನಂದನಾಥ ಸ್ವಾಮೀಜಿ ಆಶೀರ್ವಚನ ನೀಡಿದರು. ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಹಾಗೂ ಸಮಿತಿಯ ಪದಾಧಿಕಾರಿಗಳು ಇದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಕಳೆದ ನಾಲ್ಕು ವರ್ಷಗಳ ಹಿಂದೆ ಕೊಲ್ಲೂರು ವ್ಯವಸಾಯ ಸಂಘದಿಂದ ವಿಭಜನೆಗೊಂಡು ಜಡ್ಕಲ್ನಲ್ಲಿ ಸ್ಥಾಪನೆಗೊಂಡ ಈ ಸಂಸ್ಥೆ ಆರಂಭದ ದಿನಗಳಲ್ಲಿ ಸ್ವಲ್ಪ ಮಟ್ಟಿನ ನಷ್ಟವನ್ನು ಹೊಂದಿದ್ದರೂ ಅದನ್ನು ಭರಿಸಿಕೊಂಡು ಇಂದು ಈ ಮಟ್ಟದ ಸಾಧನೆ ಮಾಡಿದ್ದು ಸಣ್ಣ ವಿಷಯವಲ್ಲ. ಆಡಳಿತ ಮಂಡಳಿಯ ಪ್ರಾಮಾಣಿಕ ಪ್ರಯತ್ನ, ಸಿಬ್ಬಂದಿಗಳ ಅವಿರತ ಶ್ರಮ ಹಾಗೂ ಸದಸ್ಯರ ಸಹಕಾರದಿಂದ ಇದು ಸಾಧ್ಯವಾಗಿದೆ ಎಂದು ದ.ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಹೇಳಿದರು. ಅವರು ಶುಕ್ರವಾರ ಜಡ್ಕಲ್ ವ್ಯವಸಾಯ ಸೇವಾ ಸಹಕಾರ ಸಂಘದ ನೂತನ ಕಟ್ಟಡ ’ಸಹಕಾರ ಸಿರಿ’ ಉದ್ಘಾಟಿಸಿ ಮಾತನಾಡಿದರು. ಸಹಕಾರಿ ತತ್ವದಡಿ ವಿಶೇಷ ಕಾರ್ಯಕ್ರಮಗಳನ್ನು ಸಂಘಟಿಸಿ, ಸರ್ಕಾರದ ಯೋಜನೆಗಳನ್ನು ಅರ್ಹ ಸದಸ್ಯ ಫಲಾನುಭವಿಗಳಿಗೆ ತಲುಪಿಸುವ ಮೂಲಕ ಶೀಘ್ರಗತಿಯಲ್ಲಿ ಅನುಷ್ಠಾನಗೊಳಿಸಿದ ಕೀರ್ತಿ ಹಾಗೂ ಅತ್ಯಂತ ಹಿಂದುಳಿದ ಗ್ರಾಮೀಣ ಪ್ರದೇಶದಲ್ಲಿ ಕಾರ್ಯಾಚರಿಸುತ್ತಿರುವ ಮೂಲಕ ತನ್ನ ಗ್ರಾಹಕರಿಗಾಗಿ ಅತ್ಯಂತ ಸುಂದರವಾದ ಹವಾನಿಯಂತ್ರಿತ ಸ್ವಂತ ಕಟ್ಟಡವನ್ನು ನಿರ್ಮಿಸಿದ ಈ…

Read More