Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶುದ್ಧ ಮನಸ್ಸಿನಿಂದ ಭಗವಂತನ ಸೇವೆ ಮಾಡಿದಾಗ ಮನಸ್ಸಿನ ಅಂತರಂಗ ಶುದ್ಧಿಯಾಗುತ್ತದೆ. ಕೇವಲ ನಮ್ಮ ಅಂತರಂಗ ಶುದ್ಧಿಯಾದರೇ ಸಾಲದು ಎಂಬ ನೆಲೆಯಲ್ಲಿ ಭಕ್ತರ ಅನುಕೂಲಕ್ಕಾಗಿ ಮಹಾಲಿಂಗೇಶ್ವರ ಸಾಂಸ್ಕೃತಿಕ ವೇದಿಕೆಯ ಸದಸ್ಯರು ಮಾಡಿದ ಸಮಾಜ ಸೇವೆಯ ಕಾರ್ಯ ಸಮಾಜಕ್ಕೊಂದು ಮಾದರಿಯಾಗಿದೆ ಎಂದು ಧಾಮಿ೯ಕ ಮುಖಂಡ, ತೆಕ್ಕಟ್ಟೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಮಲ್ಯಾಡಿ ಶಿವರಾಮ ಶೆಟ್ಟಿ ಹೇಳಿದರು. ತೆಕ್ಕಟ್ಟೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭಕ್ತಾಧಿಗಳಿಗೆ ದೀಪ ಬೆಳಗಿಸಲು ಅನುಕೂಲವಾಗುವಂತೆ ತೆಕ್ಕಟ್ಟೆ ಶ್ರೀ ಮಹಾಲಿಂಗೇಶ್ವರ ಸಾಂಸ್ಕೃತಿಕ ವೇದಿಕೆ ಇವರ ನೇತೃತ್ವದಲ್ಲಿ ಕೊಡುಗೆಯಾಗಿ ನೀಡಿದ ದೀಪಗಳ ಸ್ಟಾಂಡ್ ನಲ್ಲಿ ದೀಪ ಬೆಳಗುವುದರ ಮೂಲಕ ಉದ್ಘಾಟಿಸಿ ದೇವಳಕ್ಕೆ ಹಸ್ತಾಂತರ ಮಾಡಿ ಅವರು ಮಾತನಾಡಿದರು. ದೇವಳದ ಉತ್ಸವ ಸಮಿತಿ ಅಧ್ಯಕ್ಷ ರಾಮಮೂತಿ೯ ಪುರಾಣಿಕ್, ದೇವಳದ ಅರ್ಚಕ ಜನಾ೯ಧನ್ ಐತಾಳ್, ಉದ್ಯಮಿ ಸಂತೋಷ ನಾಯ್ಕ್ ತೆಕ್ಕಟ್ಟೆ, ಕಿರಣ್ ಪೂಜಾರಿ, ತೆಕ್ಕಟ್ಟೆ ಶ್ರೀ ಮಹಾಲಿಂಗೇಶ್ವರ ಸಾಂಸ್ಕೃತಿಕ ವೇದಿಕೆ ಅಧ್ಯಕ್ಷ ಆನಂದ ಕಾಂಚನ್, ಸುಧೀಂದ್ರ ಗಾಣಿಗ, ವಿಶ್ವನಾಥ್ ಆಚಾರ್,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಭಾರತ ಕಂಡ ಮಹಾನ್ ಚೇತನ ಡಾ. ಬಿ.ಆರ್. ಅಂಬೇಡ್ಕರ್ ಅವರು ತೋರಿದ ದಾರಿಯಲ್ಲಿ ಮುನ್ನಡೆಯುವ ಜೊತೆಗೆ ಅವರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕಿರುವುದು ಪ್ರತಿಯೋಬ್ಬ ನಾಗರಿಕನ ಕರ್ತವ್ಯವಾಗಿದೆ ಎಂದು ಬೈಂದೂರಿನ ರಂಗಕರ್ಮಿ ಗಣೇಶ್ ಕಾರಂತ್ ಹೇಳಿದರು. ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ, ತಾಲೂಕು ಮಹಿಳಾ ಒಕ್ಕೂಟ ಬೈಂದೂರು ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಮಹಿಳಾ ಸಂಘ ಬೈಂದೂರು ಆಶ್ರಯದಲ್ಲಿ ಮಂಗಳವಾರ ಡಾ. ಬಿ. ಆರ್. ಅಂಬೇಡ್ಕರ್ ಪರಿನಿರ್ವಾಣ ದಿನದ ಅಂಗವಾಗಿ ಬೈಂದೂರಿನ ಪರಿಶಿಷ್ಟ ವರ್ಗದ ಆಶ್ರಮ ಶಾಲೆಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಹಣ್ಣು ಹಂಪಲು ವಿತರಿಸಿ ಮಾತನಾಡಿ, ಶೋಷಿತರು ದನಿಯಾಗಿದ್ದ ಅಂಬೇಡ್ಕರ್ ಅವರು ಪ್ರಪಂಚಕ್ಕೆ ಮಾದರಿಯಾದ ಸಂವಿಧಾನವನ್ನು ನೀಡಿದರು. ಅದರ ಪ್ರಯೋಜವನ್ನು ಪಡೆದು ಮುಖ್ಯವಾಹಿನಿಗೆ ಬಂದವರು, ತಮ್ಮ ಸಮುದಾಯದ ಬಡವರು, ಶೋಷಿತರ ಬಗ್ಗೆ ಕಾಳಹಿ ವಹಿಸುವುದು ಅತಿಮುಖ್ಯವಾಗಿದೆ ಎಂದರು. ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥ ಎಂ.ಜಿ ಕಾರ್ಯಕ್ರಮ ಉದ್ಘಾಟಿಸಿ, ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದಕ್ಷಿಣ ಕನ್ನಡ ಯುವ ವಕೀಲ ಕುಲದೀಪ್ ಶೆಟ್ಟಿ ಯವರ ಮೇಲೆ ಪುಂಜಾಲಕಟ್ಟೆ ಪೊಲೀಸರು ನಡೆಸಿರುವ ದೌರ್ಜನ್ಯವನ್ನು ಖಂಡಿಸಿ ಕುಂದಾಪುರ ವಕೀಲರ ಸಂಘದ ಅಧ್ಯಕ್ಷ ಬನ್ನಾಡಿ ಸೋಮನಾಥ ಹೆಗ್ಡೆಯವರ ನೇತೃತ್ವದಲ್ಲಿ ವಕೀಲರ ಸಂಘದಿಂದ ಬುಧವಾರ ಬೆಳಿಗ್ಗೆ ಕುಂದಾಪುರ ವಕೀಲರ ಭವನದ ಮುಂಭಾಗದಲ್ಲಿ ದೌರ್ಜನ್ಯಕ್ಕೊಳಗಾದ ವಕೀಲರ ಪರವಾಗಿ ಅವರಿಗೆ ನೈತಿಕ ಬೆಂಬಲವನ್ನು ಸೂಚಿಸಲಾಯಿತು. ಡಿ.3 ರಂದು ಮಂಗಳೂರಿನ ಯುವ ವಕೀಲರಾದ ಕುಲದೀಪ್ ಶೆಟ್ಟಿ ಅವರ ಮೇಲೆ ಬಂಟ್ವಾಳದ ಪುಂಜಾಲಕಟ್ಟೆಯ ಠಾಣೆಯ ಪೊಲೀಸರು ನಡೆಸಿದ ದೌರ್ಜನ್ಯವನ್ನು ವಕೀಲರ ಸಂಘದ ಅಧ್ಯಕ್ಷರಾದ ಬನ್ನಾಡಿ ಸೋಮನಾಥ್ ಹೆಗ್ಡೆ ತೀವ್ರವಾಗಿ ಖಂಡಿಸಿದರು. ನ್ಯಾಯಾಲಯದ ಆದೇಶದಂತೆ ಈ ಕೂಡಲೇ ತಪ್ಪಿತಸ್ಥ ಪೊಲೀಸರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅಗ್ರಹಿಸಿದರು. ಈ ಸಂದರ್ಭದಲ್ಲಿ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಜೆ. ಶ್ರೀನಾಥ್ ರಾವ್, ಉಪಾಧ್ಯಕ್ಷರಾದ ಬೀನಾ ಜೊಸೆಫ್, ಜತೆ ಕಾರ್ಯದರ್ಶಿ ರಿತೇಶ್ ಬಿ ಹಾಗೂ ಕೋಶಾಧಿಕಾರಿ ಹಾಲಾಡಿ ದಿನಕರ್ ಕುಲಾಲ್ ಹಾಗೂ ಹಿರಿಯ, ಕಿರಿಯ & ಮಹಿಳಾ…

Read More

ಕುಂದಾಪ್ರ ಡಾಟ್ ಕಾಂ ವರದಿ.ಇಂಗ್ಲೆಂಡಿನ ಪ್ರದರ್ಶನ ಕಲೆಗಳ ಇತಿಹಾಸದಲ್ಲೇ ಮೊದಲ ಬಾರಿಗೆ, ಬಯಲಾಟ ಯು.ಕೆ ತಂಡದಿಂದ ಹವ್ಯಾಸಿ ಕಲಾವಿದರಿಂದ, ಇಂಗ್ಲೆಂಡಿನ ಮಿಲ್ಟನ್ ಕೀನ್ಸ್ ನಗರದಲ್ಲಿ ಯಕ್ಷಗಾನ ಬ್ಯಾಲೆ ‘ಜಟಾಯು ಮೋಕ್ಷ’ ಪ್ರದರ್ಶನ ಗೊಂಡಿತು. ಈ ಭಾರಿ ಪ್ರದರ್ಶನಗೊಂಡ ಯಕ್ಷಗಾನ ಬ್ಯಾಲೆ ಜಟಾಯು ಮೋಕ್ಷದ ಪರಿಕಲ್ಪನೆ, ಭಾವರೂಪ, ಸಂಗೀತ ಸಂಯೋಜನೆ ಹಾಗೂ ನಿರ್ದೇಶನವನ್ನು ಉಡುಪಿ ಯಕ್ಷಸಂಜೀವ ಯಕ್ಷಗಾನ ಕೇಂದ್ರದ ನಿರ್ದೇಶಕರಾದ, ಗುರು ಶ್ರೀ ಬನ್ನಂಜೆ ಸಂಜೀವ ಸುವರ್ಣ ಅವರ ಮಾಡಿದ್ದರು. ಅವರ ಮಗ ಶಿಶಿರ ಸುವರ್ಣ ಅದನ್ನ ಇಲ್ಲಿ ಇಂಗ್ಲಡಿನಲ್ಲಿ, ಬಯಲಾಟ ಯು.ಕೆಯ ಕೆಲಾವಿದರಿಗೆ ಬಹಳ ಶ್ರದ್ದೆ ಹಾಗೂ ತಾಳ್ಮೆಯಿಂದ ನಿರ್ದೇಶಿಸಿದರು. ಡಾ. ಗುರುಪ್ರಸಾದ್ ಪಟ್ವಾಲ್ ಹಾಗೂ ಗಿರೀಶ್ ಪ್ರಸಾದ್ ಈ ಪ್ರಯತ್ನದಲ್ಲಿ ಸಹಕಾರಿ ಆದರು. ಯಕ್ಷಗಾನ ಕಲೆಯ ಪೂರ್ವರಂಗದ ಕೋಡಂಗಿ ಹಾಗೂ ಬಾಲಗೋಪಾಲ ನೃತ್ಯದ ಸವಿಯನ್ನ ಜನರಿಗೆ ಉಣಿಸಿದರು ಬಯಲಾಟ ಯು.ಕೆಯ ಕಲಾವಿದರು. ಸ್ಕೊಟ್ಲಾಂಡಿನ ಆಬಾರ್ದೀನಲ್ಲಿ ನೆಲೆಸಿರುವ ಮಂಗಳೂರು ಮೂಲದ ನವೀನ ಹಾಗೂ ನವ್ಯ ಕಿರೋಡಿಯನ್ ಅವರ ಸುಪುತ್ರರಾದ ತನಿಷ್ ಮತ್ತು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇತ್ತೀಚಿಗೆ ಹೊಸಪೇಟೆಯಲ್ಲಿ ನಡೆದ ಕರ್ನಾಟಕ ಸ್ಟೇಟ್ ಸೀನಿಯರ್ ಪವರ್ಲಿಫ್ಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ತಗ್ಗರ್ಸೆಯ ಯುವತಿ ಸೌಮ್ಯ ಬಿ. ದ್ವಿತೀಯ ಸ್ಥಾನವನ್ನು ಪಡೆದು ಬೆಳ್ಳಿ ಪದಕ ಗೆದ್ದುಕೊಂಡಿದ್ದಾಳೆ. ಈ ಮೊದಲು ದಾವಣಗೆರೆಯಲ್ಲಿ ನಡೆದ ‘ಕರ್ನಾಟಕ ರಾಜ್ಯ ಬೆಂಚ್ ಪ್ರೆಸ್ ಪವರ್ ಲಿಫ್ಟಿಂಗ್ ಚಾಂಪಿಯನ್‌ಶಿಪ್‌ 2022’ ರ ಜೂನಿಯರ್ ವಿಭಾಗದಲ್ಲಿ ಬೆಳ್ಳಿ ಪದಕ, ಮೈಸೂರಿನಲ್ಲಿ ನಡೆದಿದ್ದ ಕರ್ನಾಟಕ ರಾಜ್ಯ ಜ್ಯೂನಿಯರ್, ಸಬ್ ಜ್ಯೂನಿಯರ್ ಹಾಗೂ ಮಾಸ್ಟರ್ ಪವರ್ ಲಿಫ್ಟಿಂಗ್ ಚಾಂಪಿಯನ್‌ಶಿಪ್‌ – 22ರ ಜ್ಯೂನಿಯರ್ ವಿಭಾಗದಲ್ಲಿ ಕಂಚಿನ ಪದಕದೊಂದಿಗೆ ತೃತೀಯ ಸ್ಥಾನ ಪಡೆದುಕೊಂಡಿದ್ದರು. ಈಕೆ ಬೈಂದೂರು ತಗ್ಗರ್ಸೆಯ ಬಾಬು ಪೂಜಾರಿ ಹಾಗೂ ಮೋಹಿನಿ ದಂಪತಿಗಳ ಪುತ್ರಿಯಾಗಿದ್ದು, ಬ್ರಹ್ಮಾವರ ವೀರಮಾರುತಿ ಜಿಮ್’ನಲ್ಲಿ ತರಬೇತಿ ಪಡೆದಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ದೈಹಿಕ ಶಿಕ್ಷಣ ಕಾಲೇಜು ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಜಂಟಿ ಆಶ್ರಯದಲ್ಲಿ ನಡೆದ ‘ಜಾಕೆ ಪರಮೇಶ್ವರ ಗೌಡ ಮೆಮೋರಿಯಲ್ ರೋಲಿಂಗ್ ಟ್ರೋಫಿ’ಯ ಅಂತರಕಾಲೇಜು ಪುರುಷರ ಖೋಖೋ ಚಾಂಪಿಯನ್ಶಿಫ್ನಲ್ಲಿ ಆಳ್ವಾಸ್ ತಂಡ ಸತತ 14ನೇ ಬಾರಿ ಸಮಗ್ರ ಪ್ರಶಸ್ತಿ ತನ್ನದಾಗಿಸಿಕೊಂಡಿತು. ಎರಡು ದಿನಗಳ ಕಾಲ ನಡೆದ ಸ್ಪರ್ಧೆಯಲ್ಲಿ ಮಂಗಳೂರು ವಿವಿಯ 25ಕಾಲೇಜುಗಳು ಭಾಗವಹಿಸಿದ್ದವು. ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಆಳ್ವಾಸ್ ಕಾಲೇಜಿನ ಆಡಳಿತ ಅಧಿಕಾರಿ ಬಾಲಕೃ? ಶೆಟ್ಟಿ, ಆಳ್ವಾಸ್ ದೈಹಿಕ ಶಿಕ್ಷಣ ಕಾಲೇಜಿನ ಪ್ರಾಚಾರ್ಯ ಮಧು ಜಿ.ಆರ್ ಹಾಗೂ ಜಡ್ಕಲ್ನ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ ನಿರ್ದೆಶಕ ಶೇಶಪ್ಪ ಗೌಡ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಊರಿನ ದೇವಾಲಯಗಳು ಅಭಿವೃದ್ಧಿ ಹೊಂದುವುದರಿಂದ ಊರಿಗೆ ಸುಭಿಕ್ಷೆ ಉಂಟಾಗುತ್ತದೆ. ಕೋಟೇಶ್ವರದ ಶ್ರೀ ಕೋಟಿಲಿಂಗೇಶ್ವರ ದೇವಾಲಯದ ಪ್ರಸಕ್ತ ಆಡಳಿತ ಸಮಿತಿಯವರು ಗ್ರಾಮಸ್ಥರು ಮತ್ತು ಭಕ್ತಾಭಿಮಾನಿಗಳನ್ನು ಸೇರಿಸಿಕೊಂಡು ಒಳ್ಳೆಯ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿದ್ದಾರೆ. ಭಕ್ತರಿಗೆ ಇನ್ನಷ್ಟು ಅನುಕೂಲತೆಗಳನ್ನು ಕಲ್ಪಿಸುವ ಮತ್ತು ದೇವರ ಸೇವೆಗಾಗಿ ರಜತ ರಥ ನಿರ್ಮಿಸುವ ಅವರ ಯೋಜನೆಗಳು ಶೀಘ್ರ ಕಾರ್ಯಗತಗೊಳ್ಳಲಿ ಎಂದು ಕೋಟ ಶ್ರೀ ಅಮೃತೇಶ್ವರೀ ದೇವಳ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಆನಂದ ಸಿ. ಕುಂದರ್ ಹಾರೈಸಿದರು. ಕೋಟೇಶ್ವರ ಕೊಡಿಹಬ್ಬದ ಸಾಂಸ್ಕೃತಿಕ ಸರಣಿ ಕಾರ್ಯಕ್ರಮಗಳಿಗೆ ದೇವಳ ರಂಗಮಂದಿರದಲ್ಲಿ ಚಾಲನೆ ನೀಡಿ ಅವರು ಮಾತನಾಡಿದರು. ಕೋಟ ಅಮೃತೇಶ್ವರೀ ದೇವಳದ ಜೀರ್ಣೋದ್ಧಾರ ಕಾರ್ಯಗಳಲ್ಲಿ ಭಕ್ತರು ಮತ್ತು ದಾನಿಗಳ ನೆರವನ್ನು ಸ್ಮರಿಸಿಕೊಂಡ ಅವರು, ತಮ್ಮ ಸಮಿತಿ ಅಲ್ಲಿ ಎಲ್ಲಾ ಅಭಿವೃದ್ಧಿ ಕಾರ್ಯಗಳನ್ನು ಪೂರೈಸಿ ಸಾಕಷ್ಟು ಹಣ ಉಳಿಸಿದೆ ಎಂದರು. ಕೋಟೇಶ್ವರ ದೇವಾಲಯದವರ ಬೆಳ್ಳಿ ರಥ ಯೋಜನೆಗೆ ಎರಡು ಕೆ.ಜಿ. ಬೆಳ್ಳಿ ತಾನು ನೀಡುವುದಾಗಿ ಘೋಷಿಸಿದರು. ರಾಷ್ಟ್ರೀಯ ಸ್ವಯಂ ಸೇವಕ ಸಂಘದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಕುಂಭಾಸಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನಕ್ಕೆ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಟುಂಬ ಸಮೇತರಾಗಿ ಸೋಮವಾರ ಭೇಟಿ ನೀಡಿ ಶ್ರೀ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಯಶಸ್ವಿ ಚಲನಚಿತ್ರವಾದ ಕಾಂತಾರದ ಮೂಹರ್ತ ಆನೆಗುಡ್ಡೆ ದೇವಸ್ಥಾನದಲ್ಲಿ ನಡೆದಿತ್ತು. ಚಿತ್ರದ ಯಶಸ್ಸಿನ ಬಳಿಕ ರಿಷಬ್ ಪತ್ನಿ ಪ್ರಗತಿ ಶೆಟ್ಟಿ, ಮಕ್ಕಳಾದ ರಣ್ವಿತ್ ಶೆಟ್ಟಿ, ರಾಧ್ಯಾ ಶೆಟ್ಟಿ ಮತ್ತು ಕುಟುಂಬಿಕರು ಆನೆಗುಡ್ಡೆ ವಿನಾಯಕನಿಗೆ ಪ್ರಿಯವಾದ ಮುಡಿಅಕ್ಕಿ, ಕಡಬು ಸೇವೆ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭ ದೇವಳದಿಂದ ರಿಷಬ್ ಶೆಟ್ಟಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಆನೆಗುಡ್ಡೆ ದೇವಸ್ಥಾನದ ಆಡಳಿತ ಮೊಕ್ತೇಸರ ಕೆ. ಶ್ರೀರಮಣ ಉಪಾಧ್ಯಾಯ, ಹಿರಿಯ ಮೊಕ್ತೇಸರ ಕೆ. ಸೂರ್ಯನಾರಾಯಣ ಉಪಾಧ್ಯಾಯ, ಪರ್ಯಾಯ ಅರ್ಚಕರಾದ ಕೆ. ದೇವಿದಾಸ್ ಉಪಾಧ್ಯಾಯ, ಅರ್ಚಕ ಮಂಡಳಿ ಸದಸ್ಯರು, ಸಿಬ್ಬಂದಿಗಳು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಎಳಜಿತ ಶ್ರೀ ರಾಮಕೃಷ್ಣ ಕುಟೀರದ 50 ವಿದ್ಯಾರ್ಥಿಗಳಿಗೆ, ಉದ್ಯಮಿ, ಬೆಂಗಳೂರು ಶ್ರೀ ಮೂಕಾಂಬಿಕಾ ಕೇಟರರ್ಸ್ ಮಾಲಕ ರಾಘವ ಗೌಡ ಅವರು ಕೊಡುಗೆಯಾಗಿ ನೀಡಿದ ವಸ್ತ್ರಗಳನ್ನು ವಿತರಿಸಿದರು. ಉದ್ಯಮಿ ಸದಾನಂದ ಪ್ರಭು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ವಸ್ತ್ರಗಳನ್ನು ವಿತರಿಸಿದರು. ಈ ವೇಳೆ ಎಳಜಿತ ಶ್ರೀ ರಾಮಕೃಷ್ಣ ಕುಟೀರದ ಶ್ರೀ ಸತ್ಯಸ್ವರೂಪಾನಂದ ಸ್ವಾಮೀಜಿ, ನೇತ್ರಾವತಿ ಗೌಡ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪದವಿಪೂರ್ವ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಉಡುಪಿ ಆಯೋಜಿಸಿದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ. ವಾಣಿಜ್ಯ ವಿಭಾಗದ ವಿದ್ಯಾರ್ಥಿ ಆರ್ಯ ಮೊಗವೀರ ‘ಗುಂಡು ಎಸೆತ’ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ ಆಗಿರುತ್ತಾನೆ. ವಿದ್ಯಾರ್ಥಿಯ ಕ್ರೀಡಾ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪ ಪ್ರಾಂಶುಪಾಲರು, ಬೋಧಕ, ಬೋಧಕೇತರ ವೃಂದದವರು ಅಭಿನಂದಿಸಿದ್ದಾರೆ.

Read More