ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಧಾರ್ಮಿಕ ಕ್ಷೇತ್ರಗಳಲ್ಲಿರುವುದು ಕೇವಲ ಎರಡು ಪಕ್ಷಗಳು. ಒಂದು ಕೃಷ್ಣಪಕ್ಷ ಅಂದರೆ ಕರ್ಮ, ಇನ್ನೊಂದು ಶುಕ್ಲಪಕ್ಷ ಅಂದರೆ ಜ್ಞಾನ. ನಮ್ಮಲ್ಲಿರುವ ರಾಗದ್ವೇಷ, ಮನೆಯ ಸಮಸ್ಯೆಗಳ ಚರ್ಚೆ ದೇವಳದ ಚೌಕಟ್ಟಿನಲ್ಲಿ ಸಲ್ಲುವುದಿಲ್ಲ. ಹೀಗಾಗಿ ಅಚ್ಚ ಭಾರತೀಯರಾಗಿ ಆತ್ಮ, ದೇಹಶುದ್ದರಾಗಿ ಯೋಗ-ಭಾಗ್ಯಕ್ಕಾಗಿ ಧಾರ್ಮಿಕ ಪರಂಪರೆಯಲ್ಲಿ ಭಾಗವಹಿಸುವ ಮೂಲಕ ನಮ್ಮ ಪರಮೋನ್ನತಿಗಾಗಿ ಪ್ರಾರ್ಥಿಸಬೇಕು ಎಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆರಾಡಿ ಚಂದ್ರಶೇಖರ ಶೆಟ್ಟಿ ಹೇಳಿದರು. ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಅಷ್ಟಬಂಧ ಹಾಗೂ ಬ್ರಹ್ಮಕಲಶೋತ್ಸವದ ಪ್ರಯುಕ್ತ ಮಂಗಳವಾರ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಹಿಂದೆ ಅನೇಕ ವರ್ಷಗಳಿಂದ ನಮ್ಮ ಧರ್ಮ ಸಂಸ್ಕೃತಿ ಮೇಲೆ ಆಕ್ರಮಣಗಳು ನಡೆದಿದ್ದರೂ ನಮ್ಮ ಸಂಸ್ಕೃತಿಯನ್ನು ಬೇಧಿಸಲು ಯಾರಿಂದಲೂ ಸಾಧ್ಯವಾಗಿಲ್ಲ. ಅಂತಹ ಅದ್ಭುತವಾದ ಶಕ್ತಿ ನಮ್ಮ ಸಂಸ್ಕೃತಿ, ಧರ್ಮಕ್ಕೆ ಇದೆ. ಮುಂದಿನ ದಿನಗಳಲ್ಲಿ ನಮ್ಮ ಈ ಪವಿತ್ರವಾದ ಸಂಸ್ಕೃತಿ, ಸಂಸ್ಕಾರಯುಕ್ತ ಜೀವನ ಮೌಲ್ಯಗಳು ಉಳಿಯಬೇಕಾದರೆ ಮನೆ ಮನಗಳು ಧರ್ಮಕ್ಷೇತ್ರವಾಗಬೇಕು. ಉತ್ತಮ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರಮಾ.02: ಅಡಿಕೆ ಕೊಯ್ಯಲು ತೆರಳಿದ್ದ ವ್ಯಕ್ತಿ ವಿದ್ಯುತ್ ತಗುಲಿ ಮೃತಪಟ್ಟ ಘಟನೆ ನಾಡ ಸಮೀಪದ ಕೋಣ್ಕಿ ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಕೋಣ್ಕಿ ಅಂಗಡಿಬೆಟ್ಟು ನಿವಾಸಿ ಭುಜಂಗ ಶೆಟ್ಟಿ (58) ಮೃತಪಟ್ಟಿದ್ದಾರೆ. ತಮ್ಮ ತೋಟದ ಅಡಿಕೆ ಕೊಯ್ಯಲು ಭುಜಂಗ ಶೆಟ್ಟಿ ಅವರು ತೆರಳಿದ್ದರು. ಅಡಿಕೆ ಕೊಯ್ಯುತ್ತಿದ್ದ ವೇಳೆ ತೋಟದಲ್ಲಿ ಹಾದುಹೊಗಿದ್ದ ವಿದ್ಯುತ್ ತಂತಿಗೆ ಕೊಕ್ಕೆ ತಾಕಿದ ಪರಿಣಾಮ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಗಂಗೊಳ್ಳಿ ಪೊಲೀಸ್ ಪಿಸ್ಐ ವಿನಯ ಕೊರ್ಲಪಾಟಿ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಸಾಗಿಸಿದ್ದಾರೆ. ಪೊಲೀಸ್ ಹೆಡ್ ಕಾನ್ಸಟೇಬಲ್ ಕೇಶವ, ಚಾಲಕ ದಿನೇಶ್ ದಿನೇಶ್ ಬೈಂದೂರು, ಅಂಬುಲೆನ್ಸ್ ಚಾಲಕ ಇಬ್ರಾಹಿಂ ಗಂಗೊಳ್ಳಿ ಹಾಗೂ ಸ್ಥಳೀಯರು ಮೃತದೇಹವನ್ನು ಮರಣೋತ್ತರ ಪರೀಕ್ಷಗೆ ಕೊಂಡೊಯ್ಯಲು ಸಹಕರಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಕೊಡ್ಲಾಡಿ ಮಾರ್ಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಬೆಂಗಳೂರಿನ ಬೆಳಕು ತಂಡ ಬಣ್ಣ ಬಳಿದು ಹೊಸ ನೋಟ ಬೀರುವಂತೆ ಮಾಡಿದ್ದು, ಮೆಚ್ಚುಗೆಗೆ ಪಾತ್ರವಾಗಿದೆ. ಬೆಂಗಳೂರಿನ ಬೆಳಕು ಸಂಸ್ಥೆಯ 25 ಜನರ ತಂಡ ಎರಡು ದಿನಗಳ ಕಾಲ ಶಾಲೆಯಲ್ಲಿ ಬಿಡುಬಿಟ್ಟು ಶಾಲಾ ಕಟ್ಟಡಗಳಿಗೆ ಸುಣ್ಣ ಬಣ್ಣ ಬಳಿದು ಶಾಲೆಗೆ ನವರೂಪ ನೀಡಿದ್ದಾರೆ. ತಂಡದ ಕಲಾವಿದರು ಭಾರತ, ಕರ್ನಾಟಕ, ಉಡುಪಿ ಜಿಲ್ಲೆಯ ಭೂಪಟ, ವರ್ಣಮಾಲೆ, ಭೂಗೋಳ, ಮಾನವನ ದೇಹದ ಅಂಗಾಗಗಳು ಸೇರಿದಂತೆ ಹಲವು ಚಿತ್ರಕಲೆಗಳನ್ನು ಗೋಡೆಯ ಮೇಲೆ ಅಂದವಾಗಿ ಬಿಡಿಸಿದ್ದಾರೆ. ಅಂದಾಜು 1 ಲಕ್ಷಕ್ಕೂ ಮಿಕ್ಕಿ ವೆಚ್ಚದಲ್ಲಿ ಸುಣ್ಣ ಬಣ್ಣ ಹಾಗೂ ಪರಿಕರಗಳನ್ನು ಬೆಳಕು ತಂಡ ಶಾಲೆಗೆ ದೇಣಿಗೆಯಾಗಿ ನೀಡಿದೆ. ಬೆಳಕು ತಂಡ 10ಕ್ಕೂ ಅಧಿಕ ಸರಕಾರಿ ಶಾಲೆ ನವೀಕರಣ, ಅನಾಥಾಶ್ರಮ ಗೋಶಾಲೆ ಇತ್ಯಾದಿ ಸಮಾಜಮುಖಿ ಕಾರ್ಯಗಳಲ್ಲಿ ಕಳೆದ ನಾಲ್ಕು ವರ್ಷಗಳಿಂದ ತೊಡಗಿಕೊಂಡಿದೆ ಎನ್ನುತ್ತಾರೆ ಮಂಡ್ಯ ಅಪ್ಸರ ಆರ್ಟ್ಸ್ ವಿನಯ್ ಎರಡನೇ ದಿನದ ಕೊನೆಯಲ್ಲಿ ನಡೆದ ಸಭಾ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶ್ರೀ ಸಂಸ್ಥಾನ ಗೋಕರ್ಣ ಶ್ರೀರಾಮಚಂದ್ರಪುರ ಮಠದ ಪೀಠಾಧಿಪತಿ ಶ್ರೀ ರಾಘವೇಶ್ವರ ಭಾರತಿ ಮಹಾಸ್ವಾಮಿಗಳ ದಿವ್ಯ ಉಪಸ್ಥಿತಿಯಲ್ಲಿ ದೇವಳದ ತಂತ್ರಿ ಕೊಲ್ಲೂರು ಮಂಜುನಾಥ ಅಡಿಗ ನೇತೃತ್ವದಲ್ಲಿ ಪ್ರಧಾನ ಅರ್ಚಕ ಪ್ರಕಾಶ ಉಡುಪ ಹಾಗೂ ಋತ್ವಿಜರಿಂದ ಬೆಳಿಗ್ಗೆ ೯-೦೨ಕ್ಕೆ ಸಲ್ಲುವ ಮೀನ ಲಗ್ನದಲ್ಲಿ ಶ್ರೀ ದುರ್ಗಾಪರಮೇಶ್ವರೀ ದೇವರ ಪುನರ್ಪ್ರತಿಷ್ಠೆ, ಶ್ರೀಈಶ್ವರ ದೇವರ ಪುನರ್ಪ್ರತಿಷ್ಟೆ, ಅಷ್ಟಬಂಧ ಲೇಪನ, ಕಲಶ ಪ್ರತಿಷ್ಠೆ, ಜೀವನ್ಯಾಸಗಳು, ಪ್ರಾಣ ಪ್ರತಿಷ್ಠಾಪನೆ, ತತ್ವಹವನ, ಪೂರ್ಣ ಕಲಾಹವನ, ನಿರೀಕ್ಷಾ ಪೂಜೆ ವಿಜೃಂಭಣೆಯಿಂದ ನೆರವೇರಿತು. ಉಪ್ಪುಂದ ಶ್ರೀ ಲಕ್ಷ್ಮೀ ವೆಂಕಟರಮಣ ಭಜನಾ ಮಂಡಳಿಯ ಸದಸ್ಯರ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಗಾನಮಾಲಾ ಧ್ವನಿಸುರುಳಿಯನ್ನು ಶ್ರೀರಾಘವೇಶ್ವರ ಮಹಾಸ್ವಾಮಿಗಳು ಲೋಕಾರ್ಪಣೆಗೊಳಿಸಿ ಆಶೀರ್ವಚನ ನೀಡಿದ ಶ್ರೀಗಳು, ಯಾವುದೇ ಧಾರ್ಮಿಕ ಪುಣ್ಯ ಕಾರ್ಯಗಳಲ್ಲಿ ಭಾಗ್ಯ ಇದ್ದವರು ಮಾತ್ರ ಭಾಗಿಯಾಗುತ್ತಾರೆ. ಎಲ್ಲರಿಗೂ ಈ ಸದಾವಕಾಶ ಸಿಗುವುದಿಲ್ಲ. ಇದಕ್ಕೆ ನಾವು ಕೂಡ ಹೊರತಾಗಿಲ್ಲ. ನಾವು ಈ ಸನ್ನಿಧಾನಕ್ಕೆ ಭೇಟಿನೀಡುವುದು ಪೂರ್ವ ನಿಗದಿತ ಕಾರ್ಯಕ್ರಮವಾಗಿರಲಿಲ್ಲಾ. ಆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬೆಂಗಳೂರು ನಾಗರಬಾವಿ ಸಮೀಪ ಮಾಳಗಾಳದ ಮಧು ಸ್ವೀಟ್ಸ್ & ಕಾಂಡಿಮೆಂಟ್‌ಗೆ ಪ್ರಕಾಶ ಎನ್ನುವ ವ್ಯಕ್ತಿ ಬಂದು ಹಣವನ್ನು ಕೇಳಿ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಅನ್ನಪೂರ್ಣೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ. ಮಂಗಳವಾರ ಸಂಜೆ ಕಾಂಡಿಮೆಂಟ್ಸ್ ಮಾಲೀಕರಾದ ರಘುನಾಥ ಅವರಿಗೆ ಹಾಗೂ ಬುಧವಾರ ಬೆಳಿಗ್ಗೆ ಅವರ ಸಹೋದರ ದಯಾನಂದ ಶೆಟ್ಟಿ ಅವರಿಗೆ ಬೆದರಿಕೆ ಹಾಕಿ ಅಂಗಡಿಯ ಗಾಜು ಪುಡಿಗೈದಿರುವುದು ಹಾಗೂ ಮನೆಯ ಬಳಿ ತೆರಳಿ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ರಘುನಾಥ ಶೆಟ್ಟಿ ಅವರು ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಬಂಟ್ಸ್ ಸೇವಾದಳದ ಪ್ರಮುಖರು ಕರಾವಳಿಯ ಉದ್ಯಮಿಗಳು ಅಂಗಡಿ ಬಳಿ ಜಮಾಯಿಸಿ ಘಟನೆಯನ್ನು ಖಂಡಿಸಿದರು. ಬಳಿಕ ಪೊಲೀಸ್ ಠಾಣೆಗೆ ಭೇಟಿ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. ಮಧ್ಯಾಹ್ನದ ವೇಳೆಗೆ ಆರೋಪಿಯನ್ನು ಬಂಧಿಸಲಾಗಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ನಿಲ್ಲದ ರೌಡಿಗಳ ದಾಂದಲೆ: ಕ್ಯಾಂಡಿಮೆಂಟ್ಸ್ ಗಾಜು ಪುಡಿಗೈದು ಬೆದರಿಕೆ – https://kundapraa.com/?p=65178 . ಬೆಂಗಳೂರಿನಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ, ಮಾ.01: ಭಾರತದ ಸ್ವಾತಂತ್ರ್ಯೋತ್ಸವ ಮತ್ತು ಸಂಸ್ಥೆಯ ನಾಲ್ಕನೇ ವಾರ್ಷಿಕೋತ್ಸವದ ಹಿನ್ನಲೆಯಲ್ಲಿ ಬುಕ್ ಬ್ರಹ್ಮ “ಸ್ವಾತಂತ್ರ್ಯೋತ್ಸವ ಕಥಾ ಸ್ಫರ್ಧೆ”ಯ ಜೊತೆಗೆ 2022ನೇ ಸಾಲಿನಲ್ಲಿ ಪ್ರಕಟವಾದ ಕಾದಂಬರಿಗೆ ಪುರಸ್ಕಾರ ನೀಡಲು ನಿರ್ಧರಿಸಿದೆ. 2022ನೇ ಸಾಲಿನಲ್ಲಿ ಪ್ರಕಟಗೊಂಡಿರುವ ಅತ್ಯುತ್ತಮ ಕಾದಂಬರಿಗೆ ಒಂದು ಲಕ್ಷ ರೂಪಾಯಿ ನಗದು ಬಹುಮಾನ ನೀಡಲಾಗುವುದು. ಈ ಒಂದು ಲಕ್ಷದಲ್ಲಿ 75 ಸಾವಿರ ರೂಪಾಯಿ ಲೇಖಕರಿಗೆ ಹಾಗೂ 25 ಸಾವಿರ ಪ್ರಕಾಶಕರಿಗೆ ವಿತರಿಸಲಾಗುತ್ತದೆ. ಮೆಚ್ಚುಗೆ ಪಡೆಯುವ ನಾಲ್ಕು ಕಾದಂಬರಿಗಳಿಗೆ ತಲಾ 5 ಸಾವಿರ ರೂಪಾಯಿ ಬಹುಮಾನ ನೀಡಲಾಗುವುದು. ಈ ಪೈಕಿ 3 ಸಾವಿರ ರೂಪಾಯಿ ಲೇಖಕರಿಗೆ ಹಾಗೂ 2 ಸಾವಿರ ರೂಪಾಯಿಗಳನ್ನು ಪ್ರಕಾಶಕರಿಗೂ ನೀಡಲಾಗುತ್ತದೆ. ಕಥಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆಯುವ ಕಥೆಗೆ 50 ಸಾವಿರ ರೂಪಾಯಿ ನಗದು ಬಹುಮಾನ ಇರಲಿದೆ. ದ್ವೀತಿಯ ಸ್ಥಾನ ಪಡೆಯುವ ಕಥೆಗೆ 25 ಸಾವಿರ ರೂಪಾಯಿ, ತೃತೀಯ ಸ್ಥಾನಕ್ಕೆ 15 ಸಾವಿರ ರೂಪಾಯಿ ನಗದು ಬಹುಮಾನ ಇರಲಿದೆ. ಉಳಿದಂತೆ ಐದು ಕಥೆಗಳಿಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು: ಸರ್ಕಾರಿ ನೌಕರರಿಗೆ 17% ವೇತನ ಹೆಚ್ಚಳವನ್ನು ಏಪ್ರಿಲ್ 1 ರಿಂದ ಜಾರಿಗೆ ತರಲಾಗುವುದು ಎಂದು ಇದೀಗ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಸರ್ಕಾರದ ಅಧಿಕೃತ ಆದೇಶದ ಬೆನ್ನಲ್ಲೇ ಅನಿರ್ದಿಷ್ಟ ಮುಷ್ಕರವನ್ನು ತಕ್ಷಣ ವಾಪಸ್ ತೆಗೆದುಕೊಂಡಿದ್ದೇವೆ ಎಂದು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಏಪ್ರಿಲ್ 1ರಿಂದ ಶೇ.17ರಷ್ಟು ವೇತನ ಹೆಚ್ಚಿಸಿ ಎಂದು ಸರ್ಕಾರ ಆದೇಶ ನೀಡಿದೆ. ಈ ಸರ್ಕಾರದ ಆದೇಶವನ್ನು ಸಾಮೂಹಿಕವಾಗಿ ಒಪ್ಪಿಕೊಳ್ಳುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಭರವಸೆಗಳು ಸಿಗುತ್ತವೆ ಎಂಬ ನಿರೀಕ್ಷೆಯಲ್ಲಿದ್ದೇವೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅನಿರ್ದಿಷ್ಟ ಅವಧಿಯ ಮುಷ್ಕರವನ್ನು ವಾಪಸ್ ಪಡೆದಿದ್ದೇವೆ ಎಂದು ಮಾಹಿತಿ ನೀಡಿದರು. ವೇತನ ಹೆಚ್ಚಳ ಮಾಡುವಂತೆ ಆಗ್ರಹಿಸಿ ಇಂದಿನಿಂದ ಸರ್ಕಾರಿ ನೌಕರರು ಮುಷ್ಕರ ಕೈಗೊಂಡಿದ್ದರು. ಈ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಸುದ್ದಿಗಾರರೊಂದಿಗೆ ಮಾತನಾಡಿ, 17% ವತನ ಹೆಚ್ಚಳ ಮಾಡುವುದಾಗಿ ತಿಳಿಸಿದರು. ಇದೀಗ ಸಿಎಂ ಸೂಚನೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ, ಮಾ.01 : ಬೆಂಗಳೂರು ನಗರದಲ್ಲಿ ಬೇಕರಿ, ಕ್ಯಾಂಟಿನ್, ಹೋಟೆಲ್ ನಡೆಸುವವರಿಗೆ ಬೆದರಿಕೆ, ಹಲ್ಲೆ ಮಾಡುವ ಪ್ರಕರಣಗಳು ಆಗಾಗ್ಗೆ ನಡೆಯುತ್ತಲೇ ಇದ್ದು, ಇಂದು ಮತ್ತೆ ಅಂತಹದ್ದೊಂದು ಪ್ರಕರಣ ಮರುಕಳಿಸಿದೆ. ಕ್ಯಾಂಡಿಮೆಟ್ಸ್ ಗಾಜು ಪುಡಿಗೊಳಿಸಿ ದಾಂದಲೆ ನಡೆಸಲಾಗಿದೆ. ನಗರದ ನಾಗರಬಾವಿ ಸಮೀಪ ಮಾಳಗಾಳಾದಲ್ಲಿನ ಕುಂದಾಪುರ ಮೂಲದ ಸಹೋದರ ರಾಘುನಾಥ ಶೆಟ್ಟಿ ಹಾಗೂ ದಯಾನಂದ ಶೆಟ್ಟಿ ಎಂಬುವವರ ಮಧು ಕಾಂಡಿಮೆಂಟ್ಸ್’ಗೆ ಮಂಗಳವಾರ ಸಂಜೆ ಸಾಯಂಕಾಲ ಪ್ರಕಾಶ ಎನ್ನುವ ವ್ಯಕ್ತಿ ತೆರಳಿ 500ರೂಪಾಯಿ ನೀಡುವಂತೆ ಬೇಡಿಕೆ ಇರಿಸಿದ್ದಾನೆ. ಅಂಗಡಿ ಮಾಲಿಕ ಹಣ ನೀಡಲು ಸಾಧ್ಯವಿಲ್ಲ ಎಂದಾಗ ರಾತ್ರಿ ಹೊತ್ತು ಅವರ ಮನೆಗೆ ಬಂದು ಚಾಕು ತೋರಿಸಿ ಜೀವ ಬೆದರಿಕೆ ಹಾಕಿರುತ್ತಾನೆ. ಪುನಃ ಬುಧವಾರ ಬೆಳಿಗ್ಗೆ ಬಂದು ಅಂಗಡಿ ಮಾಲಿಕನಿಗೆ ಬೆದರಿಕೆ ಹಾಕಿದ್ದಲ್ಲದೇ, ಕಾಂಡಿಮೆಂಟ್ಸ್ ಗ್ಲಾಸ್ ಒಡೆದು ಬೆದರಿಕೆ ಹಾಕಿ ಅಲ್ಲಿಂದ ತೆರಳಿದ್ದಾನೆ. ಅಂಗಡಿಗೆ ಬಂದು ಗಾಜು ಒಡೆದಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಆರೋಪಿಯನ್ನು ಬಂಧಿಸುವಂತೆ ನಾಗರಿಕರು ಆಗ್ರಹಿಸಿದ್ದಾರೆ. ಘಟನೆಯನ್ನು ಖಂಡಿಸಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನೆಹರು ಯುವ ಕೇಂದ್ರ ಉಡುಪಿ ಹಾಗೂ ಯುವಕಾರ್ಯ ಕ್ರೀಡಾಲಯ ಇವರ ಪ್ರಾಯೋಜಕತ್ವದಲ್ಲಿ ಕುಂದಾಪುರ ಭoಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ಮೂರು ದಿನಗಳ ಯುವ ನಾಯಕತ್ವ ಮತ್ತು ಸಮುದಾಯ ಬೆಳವಣಿಗೆ ಶಿಬಿರ ಕಾಲೇಜಿನ ಎ ವಿ ಹಾಲ್ ನಲ್ಲಿ ಉದ್ಘಾಟನೆಗೊಂಡಿತು. ಕುಂದಾಪುರದ ಸಹಾಯಕ ಆಯುಕ್ತರಾದ ರಶ್ಮಿ ಆರ್. ಇವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ನಾಯಕತ್ವ ಶಿಬಿರದ ಅಗತ್ಯತೆ ಹಾಗೂ ಅದರ ಉಪಯುಕ್ತತೆ ಬಗ್ಗೆ ಶಿಬಿರಾರ್ಥಿಗಳಿಗೆ ತಿಳಿಸಿ ಶುಭ ಕೋರಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಕಾಲೇಜಿನ ಆಡಳಿತ ಮಂಡಳಿಯ ಹಿರಿಯ ಸದಸ್ಯರಾದ ಶಾಂತಾರಾಮ ಪ್ರಭು ಇವರು ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಎನ್. ಪಿ ನಾರಾಯಣ ಶೆಟ್ಟಿ ವಹಿಸಿದ್ದರು. ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ಶುಭಕರಾಚಾರಿ ಹಾಗೂ ಎನ್ ಎಸ್ ಎಸ್ ಯೋಜನಾಧಿಕಾರಿಗಳಾದ ಅರುಣ್ ಎ. ಎಸ್. ಹಾಗೂ ರಾಮಚಂದ್ರ ಆಚಾರ್ ಸಭೆಯಲ್ಲಿಯಲ್ಲಿ ಉಪಸ್ಥಿತರಿದ್ದರು. ನೆಹರು ಯುವ ಕೇಂದ್ರದ ಜಿಲ್ಲಾ ಯುವ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಫೆ.28: 7ನೇ ವೇತನ ಆಯೋಗ ಜಾರಿ, ಹೊಸ ಪಿಂಚಣಿ ನೀತಿ ವಿರೋಧಿಸಿ ಹಳೇ ಪಿಂಚಣಿ ನೀತಿಗೆ ಆಗ್ರಹಿಸಿ ಮುಷ್ಕರಕ್ಕೆ ಸರಕಾರಿ ನೌಕರರು ಮುಂದಾಗಿದ್ದಾರೆ. ಮಾರ್ಚ್ 1ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಯಲಿದೆ. ಸರ್ಕಾರಿ ಸಂಘದ ನೌಕರರಲ್ಲಿ ಯಾವುದೇ ಒಡಕಿಲ್ಲ. ಎಲ್ಲ ಸರ್ಕಾರಿ ನೌಕರರು ಒಗ್ಗಟ್ಟಾಗಿದ್ದೇವೆ ಎಂದರು. ಬೇಡಿಕೆ ಈಡೇರದಿದ್ದರೆ ಅನಿರ್ದಿಷ್ಟಾವಧಿ ಕರ್ತವ್ಯಕ್ಕೆ ಗೈರಾಗುತ್ತೇವೆ ಎಂದು 40 ಸಂಘಟನೆಗಳ 10 ಲಕ್ಷ ನೌಕರರು ಪಟ್ಟು ಹಿಡಿದಿದ್ದಾರೆ. ಈ ಸಂಬಂಧ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರು ವಿಧಾನಸೌಧದಲ್ಲಿ ಸರ್ಕಾರಿ ನೌಕರರ ಸಂಘದ ನಿಯೋಗದ ಜೊತೆ ಸಭೆ ನಡೆಸಿ, ಸಂಧಾನಕ್ಕೆ ಯತ್ನಿಸಿದರು. ಬೇಡಿಕೆ ಈಡೇರಿಸಲು ಕ್ರಮ ತೆಗೆದುಕೊಳ್ಳುವುದಾಗಿ ಸಿಎಂ ಹೇಳಿದ್ದಾರೆ. ಮುಷ್ಕರದಿಂದ ಸಾರ್ವಜನಿಕರಿಗೆ ಸಮಸ್ಯೆ ಆಗಲಿದೆ. ಹೋರಾಟ ಕೈಬಿಡುವಂತೆ ಮನವಿ ಮಾಡಿದರು. ಆದರೆ ಸರ್ಕಾರಿ ನೌಕರರು ಒಪ್ಪದ ಕಾರಣ ಸಂಧಾನ ಸಭೆ ವಿಫಲವಾಗಿದೆ. ಪರಿಸ್ಥಿತಿ ವಿಷಮ ಆಗದಂತೆ ತಡೆಯಲು ಮಂಗಳವಾರ ರಾತ್ರಿ 9:30ಕ್ಕೆ ಸಿಎಂ ಬೊಮ್ಮಾಯಿತುರ್ತುಸಭೆ ಕರೆದಿದ್ದಾರೆ. ಒಂದೊಮ್ಮೆ ಸಂಧಾನ ವಿಫಲವಾದರೆ…
