ಜಿಲ್ಲೆಯಲ್ಲಿ ಪಶುವೈದ್ಯರ ಕೊರತೆ – ಸದನದಲ್ಲಿ ಸರಕಾರದ ಗಮನ ಸೆಳೆದ ಶಾಸಕ ಗುರುರಾಜ ಗಂಟಿಹೊಳೆ
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಭಾರತೀಯ ವಾಗ್ಮಯ ಬಹುವಾಗಿ ಋಷಿ ಪರಂಪರೆ ಆವರಿಸಿಕೊಂಡಿದೆ. ಅದನ್ನು ಬಿಟ್ಟು ಭಾರತೀಯ ಸಾಹಿತ್ಯವನ್ನು ಕಟ್ಟಿಕೊಡಲು ಸಾಧ್ಯವಿಲ್ಲ, ಋಷಿ ಪರಂಪರೆಯನ್ನು ಭಾರತೀಯತೆಯಿಂದ ಪ್ರತ್ಯೇಕಿಸುವುದೆಂದರೆ ಮಣ್ಣು – ಬೇರು ಬೇರ್ಪಡಿಸಿದಂತೆ ಎಂದು ಚಿಂತಕ ರೋಹಿತ್ ಚಕ್ರತೀರ್ಥ ಹೇಳಿದರು. ಲಾವಣ್ಯ ರಿ. ಬೈಂದೂರು, ರೋಟರಿ ಕ್ಲಬ್ ಬೈಂದೂರು ಜಾಗೂ ಸಮನ್ವಿತ ಬೆಂಗಳೂರು ಸಂಯುಕ್ತ ಆಶ್ರಯದಲ್ಲಿ ಭಾನುವಾರ ರೋಟರಿ ಭವನದಲ್ಲಿ ಆಯೋಜಿಸದ ಕಾರ್ಯಕ್ರಮದಲ್ಲಿ ಸದ್ಯೋಜಾತರ ವಾಚಕ್ನವೀ ಮತ್ತು ಜಿತ್ವರೀ ಕೃತಿಗಳ ಲೋಕಾರ್ಪಣೆಗೊಳಿಸಿ ಮಾತನಾಡಿದರು. ಋಷಿಗಳೆಂದರೆ ಸಮಾಜದಿಂದ ದೂರ ಇರುವವರು ಎಂಬ ತಪ್ಪು ಕಲ್ಪನೆ ಇದೆ. ಆದರೆ ಸಮಾಜದ ಭಾಗವಾಗಿಯೇ ಇದ್ದು, ಮಾರ್ಗದರ್ಶನ ಮಾಡುತ್ತಾ ಲೌಕಿಕ ಸುಖಗಳನ್ನು ತ್ಯಜಿಸಿ ಬದುಕಿದವರು. ನಮ್ಮ ಸಂಸ್ಕೃತಿ ಪರಂಪರೆಯ ಬಗ್ಗೆ ಇರುವ ಅಸಡ್ಡೆಯೇ ಋಷಿ ಪರಂಪರೆಯ ಅಪಹಾಸ್ಯಕ್ಕೆ ಕಾರಣ. ಪ್ರತಿ ಮುನಿಯ ಜೀವನ ಚರಿತ್ರೆಯಲ್ಲಿಯೂ ಬಹುದೊಡ್ಡ ಆದರ್ಶವಿದೆ. ಅಂತಹ ಆದರ್ಶಗಳನ್ನು ಮುಂದಿನ ಪೀಳಿಗೆಗೆ ತಲುಪಿಸುವ ಕೆಲಸ ಮಾಡೋಣ. ಕಟ್ಟುವ ಸಂಸ್ಕೃತಿಯ ಭಾಗವಾಗೋಣ ಎಂದು ಕರೆ ನೀಡಿದರು. ಲೇಖಕ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಜೆಸಿಐ ಉಪ್ಪುಂದ ನೇತೃತ್ವದಲ್ಲಿ ಬೈಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಇವರ ಸಂಯುಕ್ತ ಆಶ್ರಯದಲ್ಲಿ ಬಂಜರು ಭೂಮಿಯನ್ನು ಹಸನಾಗಿಸುವ ಸಂಕಲ್ಪದೊಂದಿಗೆ ಶನಿವಾರ ಶಿರೂರು ಕರಾವಳಿಯಲ್ಲಿ ಆಯೋಜಿಸಲಾದ “ವಿದ್ಯಾರ್ಥಿಗಳಿಂದ ಗದ್ದೆ ನಾಟಿ” ಕಾರ್ಯಕ್ರಮಕ್ಕೆ ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಅವರು ಚಾಲನೆ ನೀಡಿದರು. ಈ ವೇಳೆ ಅವರು ಮಾತನಾಡಿ ವಿದ್ಯಾರ್ಥಿಗಳಿಗೆ ಕೃಷಿಯ ಬಗ್ಗೆ ಆಸಕ್ತಿ ಹಾಗೂ ಅರಿವು ಮೂಡಿಸುವುದು ಅಗತ್ಯ. ಆ ದಿಸೆಯಲ್ಲಿ ಇಂದಿನ ಕಾರ್ಯಕ್ರಮ ಪ್ರಾಯೋಗಿಕ ಅನುಭವ ನೀಡಲಿದೆ. ಇಂತಹ ಪ್ರಯತ್ನಗಳ ಮೂಲಕ ಪರಿಸರ ಕಾಳಜಿ ಹೆಚ್ಚುವಂತಾಗಲಿ ಎಂದರು. ಈ ಸಂದರ್ಭದಲ್ಲಿ ಕಾಲೇಜು ಅಭಿವೃದ್ಧಿ ಸಮಿತಿ ಕಾರ್ಯಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಕಾಲೇಜು ಪ್ರಾಂಶುಪಾಲರಾದ ನಾಗರಾಜ ಶೆಟ್ಟಿ, ಶಿರೂರು ರೈತರ ಸಂಘದ ಅಧ್ಯಕ್ಷ ರವೀಂದ್ರ ಶೆಟ್ಟಿ, ರೈತ ಸಂಘದ ಉಪಾಧ್ಯಕ್ಷರು ವೆಂಕಟ ಪೂಜಾರಿ, ನಿಕಟ ಪೂರ್ವ ಅಧ್ಯಕ್ಷ ನಾಗರಾಜ ಪೂಜಾರಿ, ಅಶೋಕ್ ಶೆಟ್ಟಿ ಕಾರಿಕಟ್ಟೆ, ಯುವಶಕ್ತಿ ಅಧ್ಯಕ್ಷರಾದ ವಿಠಲ ಬಿಲ್ಲವ, ಎನ್ಎಸ್ಎಸ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಪ್ರತಿವರ್ಷ ಸಂಭವಿಸುವ ಕಡಲ ಕೊರೆತ ತಡೆಗೆ ತಮ್ಮ ಅವಧಿಯಲ್ಲಿ ಶಾಶ್ವತ ಪರಿಹಾರವನ್ನು ಕೈಗೊಳ್ಳಲು ಆದ್ಯತೆ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು. ಅವರು ಇಂದು ಪಡುಬಿದ್ರೆಯ ಕಾಡಿಪಟ್ಣದಲ್ಲಿ , ಸಮುದ್ರ ಕೊರೆತ ಪ್ರದೇಶ ವೀಕ್ಷಿಸಿ ಮಾತನಾಡಿ, ಜಿಲ್ಲೆಯಲ್ಲಿ ಹಲವು ವರ್ಷಗಳಿಂದ ಮಳೆಗಾಲದಲ್ಲಿ ಸಮುದ್ರ ಕೊರೆತ ಸಂಭವಿಸುತ್ತಿರುವುದು ಸಾಮಾನ್ಯವಾಗಿದ್ದು ಈ ಬಗ್ಗೆ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಶಾಶ್ವತ ಕಾಮಗಾರಿಯನ್ನು ಕೈಗೊಳ್ಳಲಾಗುವುದು ಎಂದರು. ಜಿಲ್ಲೆಯಲ್ಲಿ ಈ ಬಾರಿ ತಡವಾಗಿ ಮಳೆ ಆರಂಭಗೊಂಡಿದ್ದರು ಸಹ ಪ್ರಾಕೃತಿಕ ವಿಕೋಪದಿಂದ ಇದುವರೆಗೆ ಏಳು ಮಂದಿ ಮೃತಪಟ್ಟಿದ್ದು ಇವರ ಕುಟುಂಬದವರಿಗೆ ತಲಾ ರೂ. ಐದು ಲಕ್ಷಗಳ ಪರಿಹಾರವನ್ನು ವಿತರಿಸಲಾಗಿದೆ ಜಿಲ್ಲೆಯಲ್ಲಿ ಮಳೆಯಿಂದ ಜೀವ ಹಾನಿ ಸಂಭವಿಸದಂತೆ ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲೆಯ ಎಲ್ಲಾ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು. ಮಳೆಯಿಂದ ಮಾನವ ಜೀವ ಹಾನಿ,ಮನೆ ಹಾನಿ, ಜಾನುವಾರು ಹಾನಿಗೆ ಸಂಬಂಧಿಸಿದಂತೆ ತಕ್ಷಣವೇ ಸೂಕ್ತ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಾತ್ರಿ ಕೆಲಸ ಮುಗಿಸಿ ಮನೆಗೆ ತೆರಳುವ ಸಂದರ್ಭ ತಾಲೂಕಿನ ಕೆದೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮಲ್ಯಾಡಿ ಗ್ರಾಮದಲ್ಲಿ ಸ್ಕೂಟರ್ ಸಹಿತ ಕೆರೆಗೆ ಬಿದ್ದು ಮೃತಪಟ್ಟ ದಿನಕರ ಶೆಟ್ಟಿ ಮಲ್ಯಾಡಿ ಅವರ ಮನೆಗೆ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿಯವರು ಭೇಟಿ ನೀಡಿದರು. ಈ ವೇಳೆ ವೈಯಕ್ತಿಕ ಧನಸಹಾಯ ನೀಡಿ ಸಾಂತ್ವನ ಹೇಳಿದರು. ಸರಕಾರದಿಂದ ಪರಿಹಾರ ಒದಗಿಸಿಕೊಡುವ ಬಗ್ಗೆಯೂ ಭರವಸೆ ನೀಡಿದರು. ಈ ಸಂದರ್ಭ ಕೆದೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಶಾನಾಡಿ ಸಂಪತ್ ಕುಮಾರ್ ಶೆಟ್ಟಿ. ಗ್ರಾಮ ಪಂಚಾಯತ್ ಸದಸ್ಯರಾದ ಪ್ರಶಾಂತ್ ಶೆಟ್ಟಿ ಉಳ್ತೂರು, ಸ್ಥಳೀಯರಾದ ಪ್ರಭಾಕರ್ ಶೆಟ್ಟಿ ಮಲ್ಯಾಡಿ, ಗಣೇಶ್ ಶೆಟ್ಟಿ, ಸುಧೀರ್ ಶೆಟ್ಟಿ, ಪ್ರತಾಪ್ ಶೆಟ್ಟಿ ಉಳ್ತೂರು ಹಾಗೂ ಅಂಬರೀಶ್ ಉಪಸ್ಥಿತರಿದ್ದರು. ಇದನ್ನೂ ಓದಿ:► ಮಲ್ಯಾಡಿ: ದ್ವಿಚಕ್ರ ವಾಹನ ಸಹಿತ ಕೆರೆಗೆ ಬಿದ್ದು ವ್ಯಕ್ತಿ ಸಾವು – https://kundapraa.com/?p=67497 .
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕಳೆದ ನಾಲ್ಕು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಕಡಲು ಪ್ರಕ್ಷುದ್ಧಗೊಂಡು ತೀರ ಪ್ರದೇಶದ ಜನರಲ್ಲಿ ಆತಂಕ ಮನೆಮಾಡಿದೆ. ಕೋಡಿ ಕನ್ಯಾನ ಗ್ರಾಮದಲ್ಲಿ ಕಡಲ್ಕೋರೆತ ಈ ಭಾರಿಯೂ ಕಡಲಕೊರೆತ ಉಂಟಾಗಿದ್ದು, ತೀರ ಪ್ರದೇಶದ ರಸ್ತೆ, ಮರಗಳು ಹಾಗೂ ತಾತ್ಕಾಲಿಕ ತಡೆಗೋಡೆಗಳು ಕಡಲಪಾಲಾಗಿವೆ. ಕಡಲಕೊರೆತ ಹೀಗೆಯೇ ಮುಂದುವರಿದರೆ ತೀರ ಪ್ರದೇಶದ ಹಲವು ಮನೆಗಳು ಅಪಾಯ ಎದುರಾಗಲಿದೆ. ಹಲವು ವರ್ಷಗಳಿಮದ ಕೋಡಿ ಕನ್ಯಾನ ಕಡಲಕೊರೆತವಿದ್ದು, ಶಾಶ್ವತ ಪರಿಹಾರ ಒದಗಿಸಿಕೊಡುವಂತೆ ಜನಪ್ರತಿನಿಧಿಗಳಲ್ಲಿ ಮನವಿ ಮಾಡಲಾಗಿತ್ತು. ಅಲ್ಲಲ್ಲಿ ತಾತ್ಕಾಲಿಕ ತಡೆಗೋಡೆ ನಿರ್ಮಿಸಿದ್ದು, ಅದೂ ಕೂಡ ಸಮುದ್ರದಲೆಗಳ ಹೊಡೆತಕ್ಕೆ ಸಿಕ್ಕು ಕುಸಿದುಹೋಗಿದೆ. ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳಲ್ಲಿ ಶಾಶ್ವತ ಪರಿಹಾರ ಒದಗಿಸುವಂತೆ ಹಲವು ಭಾರಿ ಮನವಿ ಮಾಡಲಾಗಿದ್ದು, ಯಾವುದೇ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರು ಅಳಲು ತೋಡಿಕೊಂಡಿದ್ದಾರೆ. * ಈ ಭಾಗದಲ್ಲಿ ಹಲವಾರು ವರ್ಷದಿಂದ ಕಡಲ್ಕೋರೆತ ಸಮಸ್ಯೆ ಇದ್ದು, ರಾಜಕೀಯ ನಾಯಕರ ಇಚ್ಚಾಶಕ್ತಿಯ ಕೊರತೆಯಿಂದ ಯಾವುದೇ ಅಗತ್ಯ ಕೆಲಸಗಳು ಆಗದೇ ಭಾರಿ ಸಮಸ್ಯೆ ಎದುರಾಗಿದೆ. ಸಮುದ್ರ ತಟದಲ್ಲಿ ರೆಸಾರ್ಟ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ/ಬೈಂದೂರು,ಜು.06: ಕರಾವಳಿಯಲ್ಲಿ ಮಳೆಯ ತೀವ್ರತೆ ಮುಂದುವರಿದ ಪರಿಣಾಮ ತಾಲೂಕಿನ ನದಿಗಳು ತಂಬಿ ಹರಿಯುತ್ತಿದೆ. ಸಮುದ್ರ ಪ್ರಕ್ಷುಬ್ದಗೊಂಡು ಅಬ್ಬರಿಸುತ್ತಿದೆ. ಅಲ್ಲಲ್ಲಿ ತಗ್ಗು ಪ್ರದೇಶ ಜಲಾವೃತ, ಪ್ರವಾಹ ಪರಿಸ್ಥಿತಿ ಸೇರಿದಂತೆ ಮಳೆಹಾನಿ ಸಂಭವಿಸುತ್ತಿದೆ. ಕರಾವಳಿಯಲ್ಲಿ ಜೂ.05ರಿಂದ ರೆಡ್ ಅಲರ್ಟ್ ಘೋಷಿಸಲಾಗಿದ್ದು, ವಿಪರೀತ ಮಳೆ ಸುರಿಯುತ್ತಲೇ ಇದೆ. ಕುಂದಾಪುರದ ಪಂಚ ನದಿಗಳಾದ ಸೌರ್ಪಣಿಕ, ಖೇಟ, ಚಕ್ರ, ಕುಬ್ಜ, ವಾರಾಹಿ ನದಿಗಳು ತುಂಬಿ ಹರಿಯುತ್ತಿದೆ. ಕೋಡಿ, ಗಂಗೊಳ್ಳಿ, ಮರವಂತೆ, ಶಿರೂರು ಕರಾವಳಿಯ ಕೆಲ ಭಾಗಗಳಲ್ಲಿ ಸಮುದ್ರ ಕೊರೆತವೂ ಉಂಟಾಗಿದೆ. ಕರಾವಳಿಯಿಂದ ಮಲೆನಾಡಿಗೆ ಸಂಪರ್ಕಿಸುವ ರಸ್ತೆಯಲ್ಲಿ ಗಾಳಿ ಮಳೆಯಿಂದಾಗಿ ಅಲ್ಲಲ್ಲಿ ಮರಗಳು, ಕೆಲವೆಡೆ ವಿದ್ಯುತ್ ಕಂಬಗಳು ಉರುಳಿ ಬಿದ್ದಿದೆ. ಕಾಲ್ತೋಡು ಭಾಗದಲ್ಲಿ ಮನೆ ಮೇಲೆ ಮರಬಿದ್ದು ಭಾಗಶಃ ಹಾನಿಯಾಗಿದೆ. ಚರಂಡಿಯಲ್ಲಿ ಸುಗಮವಾಗಿ ನೀರು ಹರಿಯದ ಕಾರಣ ಅಲ್ಲಲ್ಲಿ ಕೃತ ನೆರೆ ಸೃಷ್ಟಿಯಾಗುತ್ತಿದೆ. ಜಿಲ್ಲೆಯಲ್ಲಿ 196 ಮಿ.ಮಿ ಮಳೆಯಾಗಿದ್ದು, ಉಡುಪಿ ತಾಲೂಕಿನಲ್ಲಿ 325.7 ಮಿ.ಮಿ, ಬ್ರಹ್ಮಾವರದಲ್ಲಿ 206.5 ಮಿ.ಮಿ, ಕಾಪುವಿನಲ್ಲಿ 242.5 ಮಿ.ಮಿ, ಕುಂದಾಪುರದಲ್ಲಿ 170.4…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಜು.೦6: ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾದ್ಯಂತ ಎಲ್ಲಾ ಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಜುಲೈ 07ರಂದು ರಜೆ ಮುಂದುವರಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಭಾರಿ ಮಳೆ ಹಿನ್ನೆಲೆಯಲ್ಲಿ ಜುಲೈ 5 ಹಾಗೂ 6ರಂದು ರಜೆ ಘೋಷಿಸಲಾಗಿದ್ದು, ರೆಡ್ ಅಲರ್ಟ್ ಹಾಗೂ ಮಳೆ ಪ್ರಮಾಣ ಹೆಚ್ಚಿರುವುದರಿಂದ ಜುಲೈ 7ರಂದು ರಜೆ ಮುಂದುವರಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಖಾಸಗಿ ಬಸ್ ಹಾಗೂ ಕ್ಯಾಂಟರ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಬಸ್ ಚಾಲಕ ಸಹಿತ ಎಂಟು ಮಂದಿಗೆ ಗಂಭೀರ ಗಾಯಗೊಂಡ ಘಟನೆ ಆವರ್ಸೆ ಅಂಡರ್ಕಟ್ಟೆ ಎಂಬಲ್ಲಿ ನಡೆದಿದೆ. ಆವರ್ಸೆ ಗೋಳಿಯಂಗಡಿ ರಸ್ತೆಯಲ್ಲಿ ವಿಪರೀತ ಮಳೆಯಿಂದಾಗಿ ರಸ್ತೆ ಕಾಣಿಸುತ್ತಿರಲಿಲ್ಲ ಅಲ್ಲದೇ ಅಪಘಾತದ ಸ್ಥಳದಲ್ಲಿ ರಸ್ತೆಯ ಮೇಲೆಯೇ ವಿದ್ಯುತ್ ಕಂಬ ನೆಡಲಾಗಿರುವುದರಿಂದ ಕ್ಯಾಂಟರ್ ಚಾಲಕ ತೀರಾ ಎಡಗಡೆಗೆ ಚಲಿಸಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ರಸ್ತೆ ಮೇಲೆಯೇ ಹೈ ಟೆನ್ಷನ್ ವಯರ್ ಗಳಿರುವ ವಿದ್ಯುತ್ ಕಂಬವಿರುವ ಬಗ್ಗೆ ಹಲವಾರು ಬಾರಿ ಮೆಸ್ಕಾಂ ಗಮನಕ್ಕೆ ತರಲಾಗಿದ್ದರೂ ಮೆಸ್ಕಾಂ ನಿರ್ಲಕ್ಷ್ಯ ವಹಿಸಿದೆ ಎಂದು ಆರೋಪಿಸಿರುವ ಸ್ಥಳೀಯರು ಅಪಘಾತದಲ್ಲಿ ಗಾಯಗೊಂಡವರಿಗೆ ಮೆಸ್ಕಾಂ ಇಲಾಖೆಯೇ ನೇರ ಹೊಣೆ ಎಂದು ಆಕ್ರೋಶ ಹೊರಹಾಕಿದ್ದಾರೆ.
