ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಗ್ರಾಮ ಆಡಳಿತಾಧಿಕಾರಿಯಾಗಿ ಚಲುವರಾಜ್ ಇವರ ಸೇವೆಯಲ್ಲಿ ಪ್ರಾಮಾಣಿಕತೆ ನಿಜಕ್ಕೂ ಶ್ಲಾಘನೀಯ ಎಂದು ಐರೋಡಿ ಗ್ರಾಮಪಂಚಾಯತ್ ಮಾಜಿ ಅಧ್ಯಕ್ಷ ಐರೋಡಿ ವಿಠ್ಠಲ್ ಪೂಜಾರಿ ಹೇಳಿದರು. ಅವರು ಇತ್ತೀಚಿಗೆ ಐರೋಡಿ ಗ್ರಾಮಪಂಚಾಯತ್ ಸಭಾಂಗಣದಲ್ಲಿ ಐರೋಡಿ ಮತ್ತು ಬಾಳ್ಕುದ್ರು ಗ್ರಾಮ ಆಡಳಿತಾಧಿಕಾರಿಯಾಗಿ ಕಾರ್ಯ ನಿರ್ವಹಿಸಿ ಪದೋನ್ನತಿ ಹೊಂದಿದ ಗ್ರಾಮ ಆಡಳಿತಾಧಿಕಾರಿ ಚೆಲುವರಾಜ್ ಇವರನ್ನು ಐರೋಡಿ ಗ್ರಾಮ ಪಂಚಾಯತ್ ವತಿಯಿಂದ ಇತ್ತೀಚೆಗೆ ಸನ್ಮಾನಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು. ಗ್ರಾಮವ್ಯವಸ್ಥೆಯಲ್ಲಿ ಕಾರ್ಯಭಾರ ಕ್ಲಿಷ್ಟಕರ ದಿನಕ್ಕೊಂದರಂತೆ ಜನಸಾಮಾನ್ಯರ ಸಮಸ್ಯೆಯ ನಡುವೆ ಜನಸ್ನೇಹಿಯಾಗಿ ಕಾರ್ಯನಿರ್ವಹಿಸಿದ ಹೆಗ್ಗಳಿಕೆ ಚಲುವರಾಜ್ ಇವರದ್ದಾಗಿದೆ ಎಂದು ಅವರ ಆಡಳಿತ ವ್ಯವಸ್ಥೆ ದಿನಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಈ ವೇಳೆ ಚಲುಚರಾಜ್ ಇವರನ್ನು ಗ್ರಾಮಪಂಚಾಯತ್ ಹಾಗೂ ಗ್ರಾಮಸ್ಥರ ಪರವಾಗಿ ಗೌರವ ಸಂಮ್ಮಾನ ನೀಡಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಆಡಳಿತಾಧಿಕಾರಿ ಡಾ. ಸೂರಜ್ ಕುಮಾರ್, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ವಾಸುದೇವ ಕೋಟ್ಯಾನ್, ನಿಕಟಪೂರ್ವ ಸದಸ್ಯರಾದ ಶಿವರಾಮ್ ಶ್ರೀಯಾನ್ ಮತ್ತು ಶೇಖರ ಪೂಜಾರಿ, ಗ್ರಾಮ ಸಹಾಯಕರಾದ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕೋಟದ ಜನತಾ ಫಿಶ್ಮೀಲ್ ಆ್ಯಂಡ್ ಆಯಿಲ್ ಪ್ರಾಡಕ್ಟ್ಸ್ ವತಿಯಿಂದ ದೀಪಾವಳಿ ಹಬ್ಬದ ಅಂಗವಾಗಿ ಹಬ್ಬ – 2026 ಕಾರ್ಯಕ್ರಮವು ಸಂಸ್ಥೆಯಲ್ಲಿ ಸಂಭ್ರಮದಿಂದ ಆಯೋಜಿಸಲಾಯಿತು. ಕಾರ್ಯಕ್ರಮವು ಸಂಸ್ಥೆಯ ಎಂಡಿ ಆನಂದ್ ಸಿ. ಕುಂದರ್ ದಂಪತಿಗಳು ಉದ್ಘಾಟಿಸಿ, ಮಾತನಾಡಿ, ಹಬ್ಬಗಳ ಮಹತ್ವ, ಉದ್ಯೋಗಿಗಳ ನಡುವಿನ ಸೌಹಾರ್ದತೆ ಹಾಗೂ ಸಂಸ್ಥೆಯ ಸಾಮೂಹಿಕ ಬೆಳವಣಿಗೆಯಲ್ಲಿ ಇಂತಹ ಕಾರ್ಯಕ್ರಮಗಳ ಪಾತ್ರವನ್ನು ವಿವರಿಸಿದರು. ಸಂಸ್ಥೆಯ ನಿರ್ದೇಶಕರುಗಳಾದ ಪ್ರಶಾಂತ್ ಕುಂದರ್ ಹಾಗೂ ರಕ್ಷಿತ್ ಕುಂದರ್ ಉದ್ಯೋಗಿಗಳನ್ನು ಉದ್ದೇಶಿಸಿ ಮಾತನಾಡಿ, ಸಂಸ್ಥೆಯ ಅಭಿವೃದ್ಧಿಯಲ್ಲಿ ಉದ್ಯೋಗಿಗಳ ಸಮರ್ಪಣೆ, ತಂಡದ ಮನೋಭಾವ ಮತ್ತು ಪರಸ್ಪರ ಸಹಕಾರದ ಮಹತ್ವವನ್ನು ತಿಳಿಸಿದರು. ಕಾರ್ಯಕ್ರಮದ ಅಂಗವಾಗಿ ಜನತಾ ಫಿಶ್ಮೀಲ್ ಸಂಸ್ಥೆಯ ಉದ್ಯೋಗಿಗಳಿಂದ ಆಕರ್ಷಕ ನೃತ್ಯ ಪ್ರದರ್ಶನ, ಸಮೂಹ ಗಾಯನ, ಹಾಸ್ಯಮಯ ಕಿರುನಾಟಕ ಹಾಗೂ ಪೌರಾಣಿಕ ನಾಟಕ ಪ್ರದರ್ಶನಗೊಂಡಿತು. ಗೀತಾನಂದ ಟ್ರಸ್ಟ್ ನಿರ್ದೇಶಕರುಗಳಾದ ದಿವ್ಯಲಕ್ಷ್ಮೀ ಪಿ ಕುಂದರ್ ಮತ್ತು ವೈಷ್ಣವಿ ಆರ್ ಕುಂದರ್ ನೇತೃತ್ವದಲ್ಲಿ ಆಯೋಜಿಸಲಾದ ‘ಗೆಸ್ ದಿ ಪ್ರೈಸ್’ ಸ್ಪರ್ಧೆಯು ಕಾರ್ಯಕ್ರಮಕ್ಕೆ ಮತ್ತಷ್ಟು ಮನರಂಜನೆಯ ಮೆರುಗು ನೀಡಿತು. ಉದ್ಯೋಗಿಗಳೊಂದಿಗೆ ಸಂವಾದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಮಂಗಳೂರು ವಿಶ್ವವಿದ್ಯಾನಿಲಯ, ಜಿಲ್ಲಾ ಪಂಚಾಯತ್ ಉಡುಪಿ, ಯುವಜನ ಕ್ರೀಡಾ ಸಬಲೀಕರಣ ಇಲಾಖೆ, ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು, ಲಯನ್ಸ್ ಕ್ಲಬ್ ಉಡುಪಿ ಅಮೃತ್ ಸಂಯುಕ್ತ ಆಶ್ರಯದಲ್ಲಿ ವಿಶೇಷ ಚೇತನ ವಿದ್ಯಾರ್ಥಿಗಳ ಅಥ್ಲೆಟಿಕ್ಸ್ ಕ್ರೀಡಾಕೂಟದ ಉದ್ಘಾಟನಾ ಸಮಾರಂಭವು ಬುಧವಾರ ಅಜ್ಜರಕಾಡು ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ನಡೆಯಿತು. ಉಡುಪಿ ಜಿಲ್ಲಾ ಅಥ್ಲೆಟಿಕ್ಸ್ ಅಸೋಸಿಯೇಷನ್ ಅಧ್ಯಕ್ಷರಾದ ಹರಿಪ್ರಸಾದ್ ರೈ ಉದ್ಘಾಟನೆ ನೆರವೇರಿಸಿ ಮಾತನಾಡಿ, ವಿಶೇಷ ಚೇತನ ವಿದ್ಯಾರ್ಥಿಗಳು ಅಚ್ಚುಕಟ್ಟಾಗಿ ನಡೆಸಿದ ಪಥಸಂಚಲನ ಅವರನ್ನು ತರಬೇತಿಗೊಳಿಸಿದ ಸಂಸ್ಥೆಗಳ ಮತ್ತು ಪೋಷಕರ ಬದ್ಧತೆಗೆ ಹಿಡಿದ ಕನ್ನಡಿಯಾಗಿದೆ. ಕ್ರೀಡಾಕೂಟಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದರೆ ದೈಹಿಕ ಹಾಗೂ ಮಾನಸಿಕ ಕ್ಷಮತೆ ವೃದ್ಧಿಯಾಗುವುದು ಎಂದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಾಂಶುಪಾಲರಾದ ನಿತ್ಯಾನಂದ ವಿ ಗಾಂವ್ಕರ್ ಅವರು, ವಿಶೇಷ ಚೇತನ ಮಕ್ಕಳನ್ನು ಸ್ವಂತ ಮಕ್ಕಳಂತೆ ನೋಡಿಕೊಳ್ಳುವ ಸಂಸ್ಥೆಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಕ್ರೀಡಾಕೂಟದ ಔಚಿತ್ಯದ ಕುರಿತು ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಲಯನ್ಸ್ ಕ್ಲಬ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪ್ರತಿಭಾ ಕಾರಂಜಿ ಎಂಬುದು ಒಂದು ವಿಶಿಷ್ಟವಾದ, ಗುಣಾತ್ಮಕವಾದ ಹಾಗೂ ಸೃಜನಾತ್ಮಕ ಕಾರ್ಯಕ್ರಮ. ವಿದ್ಯಾರ್ಥಿಗಳು ಇದನ್ನು ಸ್ಪರ್ಧೆ ಎಂದು ಪರಿಗಣಿಸದೆ ಒಂದು ಹಬ್ಬದ ರೀತಿಯಲ್ಲಿ ಇದರಲ್ಲಿ ಪಾಲ್ಗೊಂಡು ತಮ್ಮ ಪ್ರತಿಭೆಯನ್ನು ಪ್ರದರ್ಶಿಸುವುದರ ಜೊತೆಗೆ ಸ್ಪರ್ಧಾ ಮನೋಭಾವ, ಆತ್ಮವಿಶ್ವಾಸ, ಸಮಯಪ್ರಜ್ಞೆ, ನಾಯಕತ್ವ ಗುಣ ಹಾಗೂ ಪರಸ್ಪರ ಸಹಕಾರದ ಮನೋಭಾವವನ್ನು ಬೆಳೆಸಿಕೊಳ್ಳಬೇಕು. ಪ್ರತಿಯೊಂದು ಕ್ಷೇತ್ರದಲ್ಲೂ ಪ್ರತಿಭೆಗೆ ಅವಕಾಶ, ಪ್ರೋತ್ಸಾಹ ದೊರೆಯುತ್ತದೆ. ಆದರೆ ನಿರಂತರ ಪ್ರಯತ್ನ ಮಾಡುತ್ತಿರಬೇಕು ಎಂದು ಬೈಂದೂರು ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ಸುಧಾಕರ ಆಚಾರ್ಯ ತ್ರಾಸಿ ಹೇಳಿದರು. ಅವರು ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಬೈಂದೂರು ವಲಯ ಹಾಗೂ ಎಂ.ಭಾಸ್ಕರ ಪೈ ಸರಕಾರಿ ಪ್ರೌಢಶಾಲೆ ಗುಜ್ಜಾಡಿ ಇವರ ಸಹಯೋಗದೊಂದಿಗೆ ಗುಜ್ಜಾಡಿಯ ಎಂ.ಭಾಸ್ಕರ ಪೈ ಸರಕಾರಿ ಪ್ರೌಢಶಾಲೆಯಲ್ಲಿ ಗುರುವಾರ ಆಯೋಜಿಸಲಾಗಿದ್ದ ಹೆಮ್ಮಾಡಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ 2026-27ಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ಮಂಜುನಾಥ ಕಾರ್ಯಕ್ರಮದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬಹುಕಾಲದ ನಿರೀಕ್ಷೆಯ ವಂದೇ ಭಾರತ್ ರೈಲು ಬೈಂದೂರು ರೈಲ್ವೆ ನಿಲ್ದಾಣಕ್ಕೆ ಮೂಕಾಂಬಿಕಾ ರೋಡ್ ನಿಲ್ದಾಣದಲ್ಲಿ ನಿಲುಗಡೆಯಾಗುತ್ತಿರುವುದು ಬೈಂದೂರು ರೈಲು ನಿಲ್ದಾಣದ ಮುಕುಟಕ್ಕೆ ಇನ್ನೊಂದು ಗರಿ ಸೇರಿದೆ ಎಂದು ಬೈಂದೂರು ರೈಲ್ವೆ ಯಾತ್ರಿ ಸಂಘದ ಅಧ್ಯಕ್ಷ ಜಯಾನಂದ ಹೋಬಳಿದಾರ್ ಹೇಳಿದರು. ಅವರು ಗುರುವಾರ ಇಲ್ಲಿನ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನೂತನ ರೈಲು ಸೇವೆಯ ಆರಂಭವು ಬೆಂಗಳೂರು, ದಕ್ಷಿಣ ಕನ್ನಡ ಕರಾವಳಿ ಹಾಗೂ ಗೋವಾ ನಡುವಿನ ಸಾರಿಗೆ ಸಂಪರ್ಕಕ್ಕೆ ಹೊಸ ಆಯಾಮ ನೀಡುವ ನಿರೀಕ್ಷೆಯಿದೆ. ವಂದೇ ಭಾರತ್ ರೈಲು ಸೇವೆಯಿಂದ ಬೆಂಗಳೂರು ಮತ್ತು ಕರಾವಳಿ ಭಾಗದ ನಡುವಿನ ಪ್ರಯಾಣಕ್ಕೆ ಮತ್ತಷ್ಟು ಅನುಕೂಲವಾಗಲಿದೆ. ವಿಶೇಷವಾಗಿ ಈ ಭಾಗದ ಜನರಿಗೆ ಬೆಂಗಳೂರು ಹಾಗೂ ಗೋವಾಕ್ಕೆ ಪ್ರಯಾಣಿಸಲು ಉತ್ತಮ ಅವಕಾಶ ದೊರೆಯಲಿದೆ. ಇದಲ್ಲದೆ ಉಡುಪಿ, ಕೊಲ್ಲೂರು ಮೂಕಾಂಬಿಕಾ ಕ್ಷೇತ್ರ, ಮುರ್ಡೇಶ್ವರ, ಗೋಕರ್ಣ, ಕಾರವಾರ ಹಾಗೂ ಗೋವಾದಂತಹ ಪ್ರಮುಖ ಧಾರ್ಮಿಕ ಮತ್ತು ಪ್ರವಾಸಿ ತಾಣಗಳಿಗೆ ನೇರ ರೈಲು ಸಂಪರ್ಕ ಲಭ್ಯವಾಗಲಿದೆ. ಪ್ರವಾಸಿಗರು,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮೂಡ್ಲಕಟ್ಟೆ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸ್ನಾತಕೋತ್ತರ ಅಧ್ಯಯನ ವಿಭಾಗದ ವತಿಯಿಂದ ಎಂಬಿಎ ಪ್ರಥಮ ಮತ್ತು ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ಉಪ್ಪುಂದದ ಸುಮುಖ ಸರ್ಜಿಕಲ್ ಹಾಗೂ ಯಳಜಿತ್ನ ಕಾಲ್ತೋಡದಲ್ಲಿರುವ ಅಡ್ಕ್ರೀಟ್ ಕನ್ಸ್ಟ್ರಕ್ಷನ್ ಟೆಕ್ನಾಲಜಿ ಸಂಸ್ಥೆಗಳಿಗೆ ಕೈಗಾರಿಕಾ ಭೇಟಿ ಆಯೋಜಿಸಲಾಯಿತು. ಈ ಭೇಟಿಯ ಉದ್ದೇಶ ವಿದ್ಯಾರ್ಥಿಗಳಿಗೆ ಕೈಗಾರಿಕೆಗಳ ಕಾರ್ಯವೈಖರಿ, ಉತ್ಪಾದನಾ ಪ್ರಕ್ರಿಯೆ, ನಿರ್ವಹಣಾ ವಿಧಾನಗಳು ಹಾಗೂ ಉದ್ಯಮಗಳ ಪ್ರಾಯೋಗಿಕ ಕಾರ್ಯಚಟುವಟಿಕೆಗಳ ಕುರಿತು ಅರಿವು ಮೂಡಿಸುವುದಾಗಿತ್ತು. ಇಂತಹ ಕೈಗಾರಿಕಾ ಭೇಟಿಗಳು ವಿದ್ಯಾರ್ಥಿಗಳಿಗೆ ತರಗತಿಯಲ್ಲಿ ಕಲಿತ ಸೈದ್ಧಾಂತಿಕ ಜ್ಞಾನವನ್ನು ಪ್ರಾಯೋಗಿಕವಾಗಿ ಅರ್ಥಮಾಡಿಕೊಳ್ಳಲು ಮತ್ತು ಕೈಗಾರಿಕಾ ಕ್ಷೇತ್ರದ ಅನುಭವವನ್ನು ಪಡೆಯಲು ಸಹಕಾರಿಯಾಗುತ್ತವೆ. ಈ ಸಂದರ್ಭದಲ್ಲಿ ಎಂಬಿಎ ವಿಭಾಗದ ಮುಖ್ಯಸ್ಥರಾದ ಡಾ. ಸುಚಿತ್ರಾ ಪೂಜಾರಿ ಹಾಗೂ ಇತರ ಉಪನ್ಯಾಸಕರು ಉಪಸ್ಥಿತರಿದ್ದರು. ಪ್ರಥಮ ಮತ್ತು ದ್ವಿತೀಯ ವರ್ಷದ ಎಂಬಿಎ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಮಿತ್ರಮಂಡಳಿ, ಕೋಟ ಇವುಗಳ ಆಶ್ರಯದಲ್ಲಿ ನಡೆದ ನವೆಂಬರ್ ತಿಂಗಳ ನಂನಮ್ಮೊಳಗೆ ಸಾಹಿತ್ಯಾವಲೋಕನ ಕಾರ್ಯಕ್ರಮದಲ್ಲಿ ಸುಮನಾ ಆರ್ ಹೇರ್ಳೆಯವರ ಮಕ್ಕಳ ಹಾಡುಗಳ ಸಂಕಲನ ಬಣ್ಣದ ಚಿಟ್ಟೆ ಇತ್ತೀಚಿಗೆ ಲೋಕಾರ್ಪಣೆಗೊಂಡಿತು. ಕುಂದಾಪುರದ ಶಸ್ತ್ರಚಿಕಿತ್ಸಾ ತಜ್ಞ ಡಾ. ಉಮೇಶ್ ಭಟ್ ಕೃತಿ ಲೋಕಾರ್ಪಣೆಗೊಳಿಸಿ, ಸಾಹಿತ್ಯದ ಎಲ್ಲ ಪ್ರಕಾರಗಳಲ್ಲೂ ಕೈಯಾಡಿಸಿದ ಸುಮನಾ ಹೇರ್ಳೆಯವರ ಸಾಧನೆ, ನಿರಂತರ ಸಾಹಿತ್ಯ ಕೃಷಿ ಪ್ರಶಂಸನೀಯ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಜಿಲ್ಲಾ ಸಾಹಿತ್ಯ ಪರಿಷತ್ ಅಧ್ಯಕ್ಷ ನೀ. ಸುರೇಂದ್ರ ಅಡಿಗ ಬಣ್ಣದ ಚಿಟ್ಟೆ ಕೃತಿಯು ಕನ್ನಡ ಭಾಷಾ ಶಿಕ್ಷಕರು ಕೈಪಿಡಿಯಾಗಿ ಬಳಸಬಹುದಾದಂತಹ ಉತ್ತಮ ಮಕ್ಕಳ ಹಾಡುಗಳ ಸಂಕಲನ ಎಂದರು. ಹಿರಿಯ ಸಾಹಿತಿ ಚಿತ್ರಪಾಡಿ ಉಪೇಂದ್ರ ಸೋಮಯಾಜಿ ಸ್ವಾಗತಿಸಿ, ಪೂರ್ಣಿಮಾ ಅಧಿಕಾರಿ ಕೃತಿಯನ್ನು ಪರಿಚಯಿಸಿದರು. ಮಹಾಲಕ್ಷ್ಮಿ ಸೋಮಯಾಜಿ ನಿರೂಪಿಸಿದರು. ಕೃತಿಯಲ್ಲಿನ ಕೆಲವು ಹಾಡುಗಳನ್ನು ಪುಟಾಣಿಗಳಾದ, ಸ್ಕಂದ, ಅಹನಾ, ಶ್ರೀಜಿತ್ ಮತ್ತು ಮನೋಮಯ್ ಹಾಡಿದರು. ಉಡುಪಿ ಜಿಲ್ಲಾ ಕಸಾಪ ಕೋಶಾಧಿಕಾರಿ ಮನೋಹರ ಭಟ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಕ್ಷೇತ್ರ ಸಮನ್ವಯಾಧಿಕಾರಿಗಳ ಕಚೇರಿ ಬೈಂದೂರು, ಸಮೂಹ ಸಂಪನ್ಮೂಲ ಕೇಂದ್ರ ಪಡುಕೋಣೆ ಇವರ ಸಹಭಾಗಿತ್ವದಲ್ಲಿ ಆಲೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪಡುಕೋಣೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಬುಧವಾರ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ ಅಧ್ಯಕ್ಷ ಶರತ್ ಪೂಜಾರಿ ವಹಿಸಿದ್ದರು. ಆಲೂರು ಹರ್ಕೂರು ವ್ಯವಸಾಯ ಸೇವಾ ಬ್ಯಾಂಕ್ ಅಧ್ಯಕ್ಷ ಮಂಜಯ್ಯ ಶೆಟ್ಟಿ ಅವರು ಕಾರ್ಯಕ್ರಮ ಉದ್ಘಾಟಿಸಿ, ಶುಭ ಹಾರೈಸಿದರು. ಆಲೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ರಾಜೇಶ್ ಎನ್. ದೇವಾಡಿಗ, ಮಾಜಿ ಉಪಾಧ್ಯಕ್ಷೆ ಸಿಂಗಾರಿ, ಗ್ರಾಪಂ. ಮಾಜಿ ಸದಸ್ಯ ಸುಬ್ಬಣ್ಣ ಶೆಟ್ಟಿ, ಪ್ರಸನ್ನ ಕುಮಾರ್ ಶೆಟ್ಟಿ, ಬೈಂದೂರು ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ್ ನಾಯ್ಕ್, ಕ್ಷೇತ್ರ ಸಮನ್ವಯಾಧಿಕಾರಿ ಪ್ರದೀಪ್ ಕುಮಾರ್ ಶೆಟ್ಟಿ, ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ರಘುರಾಮ್ ದೇವಾಡಿಗ, ಪ್ರತಿಭಾ ಕಾರಂಜಿಯ ನೋಡೆಲ್ ಅಧಿಕಾರಿ ಸತ್ಯನಾ ಕೊಡೇರಿ, ಬಿಆರ್ಪಿ ಮಂಜುನಾಥ ದೇವಾಡಿಗ, ಆಲೂರು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಅಜ್ಜರಕಾಡು ಇಲ್ಲಿ ನಡೆದ ಜಿಲ್ಲಾ ಮಟ್ಟದ ಈಜು ಸ್ಪರ್ಧೆಯಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ರೋಶನಿ ಪಿ. ದೇವಾಡಿಗ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಅವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಾಲೆ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕುಂದಾಪುರ ಇದರ ವತಿಯಿಂದ ಸರಕಾರಿ ಪ್ರೌಢಶಾಲೆ ಹಾಲಾಡಿಯಲ್ಲಿ ಜರುಗಿದ 14 ಮತ್ತು 17 ವರ್ಷ ವಯೋಮಾನದೊಳಗಿನ ವೃತ್ತಮಟ್ಟದ ಥ್ರೋಬಾಲ್ ಪಂದ್ಯಾಟದಲ್ಲಿ, ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಪ್ರತಿಭೆ ಮೆರೆದು ಅಭೂತಪೂರ್ವ ಸಾಧನೆ ಮಾಡಿದ್ದಾರೆ. 17 ವರ್ಷ ವಯೋಮಿತಿಯೊಳಗಿನ ವಿಭಾಗದ ಹುಡುಗರ ಮತ್ತು ಹುಡುಗಿಯರ ಎರಡೂ ತಂಡಗಳು ಪ್ರಥಮ ಸ್ಥಾನ ಪಡೆದುಕೊಂಡು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿವೆ. 14 ವರ್ಷ ವಯೋಮಿತಿಯೊಳಗಿನ ವಿಭಾಗದ ಹುಡುಗಿಯರ ಮತ್ತು ಹುಡುಗರ ತಂಡಗಳು ದ್ವಿತೀಯ ಸ್ಥಾನ ಪಡೆದುಕೊಂಡಿವೆ. ವಿದ್ಯಾರ್ಥಿಗಳ ಈ ಸಾಧನೆಗೆ ಸುಜ್ಞಾನ ಎಜುಕೇಷನಲ್ ಟ್ರಸ್ಟ್ನ ಅಧ್ಯಕ್ಷರಾದ ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ ಹಾಗೂ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ಪ್ರದೀಪ್ ಕುಮಾರ್ ಅವರು ಹರ್ಷ ವ್ಯಕ್ತಪಡಿಸಿ, ವಿಜೇತ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ. ವಿದ್ಯಾರ್ಥಿಗಳಿಗೆ ಶಾಲೆಯ ಎಲ್ಲಾ ದೈಹಿಕ ಶಿಕ್ಷಣ ಶಿಕ್ಷಕರು ಸೂಕ್ತ ಮಾರ್ಗದರ್ಶನ ಮತ್ತು…
