Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಏಳಜಿತ ಶ್ರೀ ರಾಮಕೃಷ್ಣ ಕುಟೀರಕ್ಕೆ ಶುಕ್ರವಾರ ಭೇಟಿ ನೀಡಿದ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಮ್ಯಾನೇಜಿಂಗ್ ಟ್ರಸ್ಟೀ, ಉದ್ಯಮಿ ಡಾ. ಗೋವಿಂದ ಬಾಬು ಪೂಜಾರಿ ಅವರು ಕುಟೀರದ ವಿದ್ಯಾರ್ಥಿಗಳ ಸಂಗೀತ ಕಲಿಕೆಗಾಗಿ ಅಂದಾಜು ರೂ.50,000 ಮೌಲ್ಯದ ಕೀಬೋರ್ಡ್ ಹಾಗೂ ಇನ್ನಿತರ ಸಂಗೀತ ಪರಿಕರಗಳನ್ನು ಕೊಡುಗೆಯಾಗಿ ನೀಡಿದರು. ಈ ವೇಳೆ ಅವರು ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ವಿದ್ಯಾರ್ಥಿಗಳಿಗೆ ಧಾರ್ಮಿಕ ಮಂತ್ರ ಪಠಣ, ಸಂಗೀತ ಅಭ್ಯಾಸ ಮೊದಲಾದವುಗಳನ್ನು ಕಲಿಸುವ ಮೂಲಕ ಅವರನ್ನು ಸಂಸ್ಕಾರವಂತರನ್ನಾಗಿ ಮಾಡುವ ಕಾರ್ಯವನ್ನು ಹಲವಾರು ವರ್ಷಗಳಿಂದ ಮಾಡುತ್ತಾ, ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೇ ಸೇವಾ ಕಾರ್ಯವನ್ನು ಕೈಗೊಂಡಿರುವುದು ಸಂತಸದ ಸಂಗತಿಯಾಗಿದೆ. ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಇನ್ನಷ್ಟು ಉತ್ತಮ ಕಾರ್ಯಗಳು ನಡೆಯುವಂತಾಗಲಿ ಎಂದು ಶುಭಕೋರಿದರು. ಶ್ರೀ ರಾಮಕೃಷ್ಣ ಕುಟೀರದ ಶ್ರೀ ಸತ್ಯಸ್ವರೂಪಾನಂದ ಸ್ವಾಮೀಜಿ ಅವರು ಸ್ವಾಗತಿಸಿ, ವಂದಿಸಿದರು. ಈ ವೇಳೆ ವಿದ್ಯಾರ್ಥಿಗಳು ವಿವಿಧ ಸ್ತೋತ್ರ ಪಠಣ ಮಾಡಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಗು, ಅಳು, ಸಾರ್ಥಕತೆ, ಧನ್ಯತಾ ಭಾವ, ಹಳೆಯ ನೆನಪುಗಳು, ತುಂಟಾಟಗಳ ಮೆಲುಕು, ಏನೋ ಒಂದನ್ನು ಗಳಿಸಿದ ಮನೋಭಾವ, 22 ವರ್ಷಗಳ ಹಿಂದಿನ ಸಹಪಾಠಿಗಳೆಲ್ಲರೂ ಒಂದೇ ಸಭೆಯಲ್ಲಿ, 22 ವರ್ಷಗಳ ಹಿಂದಿನ ಗುರುಗಳೆಲ್ಲರೂ ಒಂದೇ ವೇದಿಕೆಯಲ್ಲಿ… ಇವೆಲ್ಲವೂ ಕಾಣಸಿಕ್ಕಿದ್ದು ಇತ್ತೀಚಿಗೆ ಕುಂದಾಪುರ ತಾಲೂಕಿನ ಚಿತ್ತೂರಿನ ಸಕಲ ಕನ್ವೆನ್ಷನ್ ಹಾಲ್ ನಲ್ಲಿ. ಹೌದು, 2000-01ನೇ ಸಾಲಿನಲ್ಲಿ ಹತ್ತನೇ ತರಗತಿಯ ಓದನ್ನು ಸರ್ಕಾರಿ ಪ್ರೌಢಶಾಲೆ (ಇಂದಿನ ಕರ್ನಾಟಕ ಪಬ್ಲಿಕ್ ಸ್ಕೂಲ್) ನೆಂಪು-ವಂಡ್ಸೆಯಲ್ಲಿ ಮುಗಿಸಿದ ವಿದ್ಯಾರ್ಥಿಗಳೆಲ್ಲರೂ ಆವತ್ತು ಪುನರ್ಮಿಲನ-ಗುರುವಂದನ ಎಂಬ ಶೀರ್ಷಿಕೆಯಡಿ ನಡೆಸಿದ ಕಾರ್ಯಕ್ರಮದ ಹೈಲೈಟ್ಸ್ಗಳಿವು. ಸುಮಾರು ನಾಲ್ಕಾರು ತಿಂಗಳುಗಳ ಹಿಂದೆ ಕಂಡ ಕನಸೊಂದು ಆವತ್ತು ನನಸಾದ ದಿನ. ಆ ದಿನಗಳಲ್ಲಿ ಸಹೋದ್ಯೋಗಿಗಳಾಗಿದ್ದ ಶಿಕ್ಷಕರೆಲ್ಲರೂ ಶಾಲೆಯ ಪರಿಸರದಲ್ಲಿ ಅಥವಾ ಪರಿಸರದ ಇತಿಹಾಸದಲ್ಲಿ ನಡೆದ ಮೊಟ್ಟಮೊದಲ ಗುರುವಂದನ ಕಾರ್ಯಕ್ರಮದಲ್ಲಿ ಭಾಗಿಯಾದ ಹೆಮ್ಮೆಯ ಕ್ಷಣ. ಒಂದು ರೀತಿಯಲ್ಲಿ ಇದು ಹೆಚ್ಚಿನ ಶಿಕ್ಷಕರುಗಳಿಗೂ ಪುನರ್ಮಿಲನವಾದ ದಿನ. ಓದನ್ನು ಮುಗಿಸಿ ಬೇರೆ ಬೇರೆ ಊರುಗಳಲ್ಲಿ ತಮ್ಮ ತಮ್ಮ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಕೆ. ಪ್ರತಾಪಚಂದ್ರ ಶೆಟ್ಟಿ ಅವರು ಕೆಪಿಸಿಸಿ ಸದಸ್ಯತ್ವಕ್ಕೆ ಸಲ್ಲಿಸಿದ ರಾಜೀನಾಮೆಯನ್ನು ಅಂಗೀಕರಿಸದಿರಲು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್. ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ ಅವರು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ ಬರೆದಿದ್ದಾರೆ. ಕೆ. ಪ್ರತಾಪಚಂದ್ರ ಶೆಟ್ಟಿಯವರು ಕುಂದಾಪುರ ಯುವ ಕಾಂಗ್ರೆಸ್, ಬ್ಲಾಕ್ ಕಾಂಗ್ರೆಸ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, ಕೆಪಿಸಿಸಿ ಕಾರ್ಯದರ್ಶಿ ಹಾಗೂ ಉಪಾಧ್ಯಕ್ಷರು, ಎಐಸಿಸಿ ಸದಸ್ಯರು, ಹೀಗೆ ಪಕ್ಷದ ವಿವಿಧ ಸ್ಥರಗಳಲ್ಲಿ ಕೆಲಸ ಮಾಡಿ ಪಕ್ಷದ ನಿಷ್ಟಾವಂತ ಕಾರ್ಯಕರ್ತ ಮತ್ತು ನಾಯಕರಾಗಿ ಗುರುತಿಸಿಕೊಂಡು 4 ಬಾರಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾಗಿ, 3 ಬಾರಿ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿನ ಸದಸ್ಯರಾಗಿ ಹಾಗೂ ಸಭಾಪತಿಯಾಗಿ ಸೇವೆ ಸಲ್ಲಿಸಿದವರು. ಇದನ್ನೂ ಓದಿ► ಕೆಪಿಸಿಸಿ ಸದಸ್ಯತ್ವಕ್ಕೆ ಕೆ. ಪ್ರತಾಪಚಂದ್ರ ಶೆಟ್ಟಿ ರಾಜೀನಾಮೆ – https://kundapraa.com/?p=64529 . ಅವರು ತಮ್ಮ ರಾಜಕೀಯ ಜೀವನದಲ್ಲಿ ಸಜ್ಜನ, ಸಚ್ಚಾರಿತ್ರ್ಯ, ದಕ್ಷ ಕಳಂಕರಹಿತ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: 30ನೇ ಅಖಿಲ ಕರ್ನಾಟಕ ಮಕ್ಕಳ ವಿಜ್ಞಾನ ಸಮಾವೇಶದಲ್ಲಿ ಭಾಗವಹಿಸಿದ ತಾಲೂಕಿನ ಸಿದ್ಧಾಪುರ ಪ್ರೌಢಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ಶ್ರೀನಿಧಿ ರಾಷ್ಟ್ರ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾಳೆ. “ಆರೋಗ್ಯ ಮತ್ತು ಯೋಗಕ್ಷೇಮಕಾಗಿ ಜೀವಿ ಪರಿಸರ ವ್ಯವಸ್ಥೆಯನ್ನು ಅರ್ಥ ಮಾಡಿಕೊಳ್ಳೋಣ” ಎಂಬ ಮುಖ್ಯ ವಿಷಯದ ಮೇಲೆ ನಡೆದ ಈ ಬಾರಿಯ ಸಮಾವೇಶದಲ್ಲಿ ಪರಿಸರ ವ್ಯವಸ್ಥೆ ಮತ್ತು ಆರೋಗ್ಯಕ್ಕಾಗಿ ತಾಂತ್ರಿಕ ನಾವಿನ್ಯತೆ ಎಂಬ ಉಪವಿಷಯವನ್ನು ಆಧರಿಸಿ ಶ್ರೀನಿಧಿ “ಗ್ರಾಮೀಣ ಜನರ ಚಿತ್ತ ಕಾಂಕ್ರೀಟೀಕರಣದತ್ತ” ಎಂಬ ಅಧ್ಯಯನವನ್ನು ನಡೆಸಿದ್ದಳು. ಶಾಲೆಯ ವಿಜ್ಞಾನ ಶಿಕ್ಷಕಿ ಪೂರ್ಣಿಮಾ ವಿ. ಭಟ್ ಅವರ ಮಾರ್ಗದರ್ಶನದಲ್ಲಿ ನಡೆದ ಈ ಅಧ್ಯಯನವನ್ನು ತನ್ನ ತರಗತಿಯ ಸಹಪಾಠಿ ರಚನಾಳ ಜೊತೆಗೂಡಿ ನಡೆಸಿದ್ದಳು. ಮನೆಯಂಗಳಕ್ಕೆ ಬಳಸುವ ಇಂಟರ್ ಲಾಕ್ ಗಳಲ್ಲಿ ಅಗತ್ಯ ತಾಂತ್ರಿಕ ಬದಲಾವಣೆ ಮಾಡಿಕೊಳ್ಳುವ ಮೂಲಕ ಹರಿದುಹೋಗಬಹುದಾದ ಮಳೆನೀರನ್ನು ಅಂತರ್ಜಲದ ಭಂಡಾರಕ್ಕೆ ಸೇರಿಸಬಹುದು ಎಂಬ ಸಲಹೆಯೂ ಈ ಅಧ್ಯಯನ ಒಳಗೊಂಡಿದೆ. ಈ ಅಧ್ಯಯನವನ್ನು ಪರಿಣಾಮಕಾರಿಯಾಗಿ ಮಂಡಿಸಿದ ಕುಮಾರಿ ಶ್ರೀನಿಧಿ ತೀರ್ಪುಗಾರರ ಪ್ರಶ್ನೆಗಳಿಗೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ರೆಡ್ ಕ್ರಾಸ್ ಸಂಸ್ಥೆಯ ಕುಂದಾಪುರ ಘಟಕ, ಕಾಲೇಜಿನ ಯುಥ್ ರೆಡ್ ಕ್ರಾಸ್, ಎನ್.ಎಸ್.ಎಸ್, ಎನ್.ಸಿ.ಸಿ ಮತ್ತು ರೇಂಜರ್ಸ್ ಮತ್ತು ರೋವರ್ಸ್ ಇವರ ಸಂಯುಕ್ತಾಶ್ರಯದಲ್ಲಿ ರಕ್ತದಾನ ಶಿಬಿರ ನಡೆಯಿತು. ಕಾರ್ಯಕ್ರಮವನ್ನು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಕುಂದಾಪುರ ಘಟಕದ ಅಧ್ಯಕ್ಷರಾದ ಜಯಕರ ಶೆಟ್ಟಿ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲ ಡಾ ಎನ್.ಪಿ.ನಾರಾಯಣ ಶೆಟ್ಟಿ ವಹಿಸಿದ್ದರು. ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಕುಂದಾಪುರ ಘಟಕದ ಕಾರ್ಯದರ್ಶಿ ಸೀತಾರಾಮ ಶೆಟ್ಟಿ, ಖಜಾಂಚಿ ಶಿವರಾಂ ಶೆಟ್ಟಿ, ಸದಸ್ಯರಾದ ಡಾ. ಸೋನಿ ಡಿಕೋಸ್ತಾ, ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ ಜಿ.ಎಂ.ಗೊಂಡ, ಭಂಡಾರ್ಕಾರ್ಸ್ ಪದವಿ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ಶುಭಕರಾಚಾರಿ ರೆಡ್ ಕ್ರಾಸ್ ಘಟಕದ ಕಾರ್ಯಕ್ರಮಾಧಿಕಾರಿ ಸತ್ಯನಾರಾಯಣ ರೇಂಜರ್ಸ್ ಮತ್ತು ರೋವರ್ಸ್ ಇದರ ರಿತಿನ್ ಮತ್ತು ಅಕ್ಷತಾ ಉಪಸ್ಥಿತರಿದ್ದರು. ಸುಮಾರು 201ಯುನಿಟ್ ರಕ್ತ ಸಂಗ್ರಹಿಸಿ ಭಾರತೀಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮೊಗವೀರ ಮಹಾಜನ ಸೇವಾ ಸಂಘ (ಬಗ್ವಾಡಿ ಹೋಬಳಿ-1941) ಮುಂಬೈ, ಕುಂದಾಪುರ ಶಾಖೆ ನೇತೃತ್ವದಲ್ಲಿ ಸಮಾಜದ ಪ್ರತೀಕವಾಗಿ ಕುಂದಾಪುರದಲ್ಲಿ ಚಿಕನ್ಸಾಲ್ ರಸ್ತೆಯಲ್ಲಿ ಸುಮಾರು 10 ಕೋಟಿಗೂ ಮಿಕ್ಕಿ ವೆಚ್ಚದಲ್ಲಿ ಸುಸಜ್ಜಿತವಾದ ಸಭಾಭವನದ ನಿರ್ಮಾಣವಾಗಿದ್ದು, ಜ.22ರಂದು ಲೋಕಾರ್ಪಣೆಗೊಳ್ಳಲಿದೆ ಎಂದು ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕ, ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ ಕುಂದಾಪುರ ಶಾಖೆಯ ಗೌರವಾಧ್ಯಕ್ಷ ನಾಡೋಜ ಡಾ| ಜಿ.ಶಂಕರ್ ಹೇಳಿದರು. ಅವರು ಕುಂದಾಪುರದಲ್ಲಿ ನಡೆದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, 60,000 ಚದರ ಅಡಿ ವಿಸ್ತಿರ್ಣದ ಕಟ್ಟಡ ವ್ಯವಸ್ಥಿತ ಮಾದರಿಯಲ್ಲಿ, ವಾಸ್ತು ವಿನ್ಯಾಸದೊಂದಿಗೆ, ವ್ಯವಸ್ಥಿತವಾಗಿ ನಿರ್ಮಾಣಗೊಂಡಿರುವ ಈ ಸಭಾಭವನ ಮೂರು ಮಹಡಿಗಳನ್ನು ಹೊಂದಿದೆ. ಸಂಪೂರ್ಣ ಹವಾನಿಯಂತ್ರಿತ ವ್ಯವಸ್ಥೆ , ಎರಡು ಲಿಪ್ಟ್ ವ್ಯವಸ್ಥೆ , 850 ಜನ ಸಾಮಾಥ್ರ್ಯದ ಸಭಾಂಗಣ , 450 ಜನ ಸಾಮಾಥ್ರ್ಯದ ಭೋಜನಾಲಯ, ಬಫೆಗೆ ಪ್ರತ್ಯೇಕ ಕೌಂಟರ್, ಸಸ್ಯಹಾರಿ – ಮಾಂಸಹಾರಿಗೆ ಪ್ರತ್ಯೇಕ ಅಡುಗೆಮನೆ, ಮಿನಿಹಾಲ್ ಸೌಲಭ್ಯವಿದೆ ಎಂದರು. ಜನವರಿ 22ರಂದು ಮೊಗವೀರ ಭವನ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಯಳಜಿತ ಶ್ರೀ ರಾಮಕೃಷ್ಣ ಕುಟೀರದಲ್ಲಲಿ ಸ್ವಾಮಿ ವಿವೇಕಾನಂದರ 161ನೇ ಜನ್ಮ ಜಯಂತಿ ಸಪ್ತಾಹ ಕಾರ್ಯಕ್ರಮಗಳು ಯಶಸ್ವಿಯಾಗಿ ಸಂಪನ್ನಗೊಂಡಿತು. ಸ್ವಾಮಿ ವಿವೇಕಾನಂದ ಜನ್ಮ ಜಯಂತಿ ಅಂಗವಾಗಿ ವಿವಿಧ ಶಾಲೆಗಳಲ್ಲಿ ಹಾಗೂ ಕುಟೀರದಲ್ಲಿ ವಿದ್ಯಾರ್ಥಿಗಳಿಗಾಗಿ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಪ್ರತಿದಿನ ನಡೆಯುತ್ತಿದ್ದ ಸಭಾ ಕಾರ್ಯಕ್ರಮದಲ್ಲಿ ಮಕ್ಕಳು ಹಲವಾರು ವಿಷಯಗಳನ್ನು ತಿಳಿದುಕೊಳ್ಳುವುದರೊಂದಿಗೆ ತಾವು ಕೂಡಾ ಸ್ವಾಮೀಜಿಯವರ ಜೀವನದ ಕುರಿತು ಮಾತನಾಡಿ, ಪ್ರಶ್ನೆಗಳನ್ನು ಕೇಳಿ, ಉತ್ತರಗಳನ್ನು ನೀಡಿ, ಭಕ್ತಿ ಗೀತೆಗಳನ್ನು ಹಾಡಿ, ಸ್ತೋತ್ರಗಳನ್ನು ಪಟಿಸಿ, ಕಾರ್ಯಕ್ರಮ ಕ್ಕೆ ಸಾರ್ಥಕ್ಯವನ್ನು ತಂದುಕೊಟ್ಟರು. ಪ್ರತಿನಿತ್ಯದ ಪೂಜಾ ಕಾರ್ಯಗಳೊಂದಿಗೆ ನಡೆದ ಸಮಾರೋಪ ಸಮಾರಂಭ ದಲ್ಲಿ ತೊಂಡ್ಲೆ ಶಾಲೆಯ ಮುಖ್ಯ ಶಿಕ್ಷಕರಾದ ಗೋವಿಂದರಾಯ ಎಸ್. ಹಾಗೂ ಏಳಜಿತ್ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ಜ್ಯೋತಿ ಹೆಚ್, ಎಸ್, ಮತ್ತು ಬಾಬುಗೌಡ ಹೋಳ್ಳಿಕೇರಿ, ನಾಗರಾಜ್ ಗೌಡರು, ಕೇದಿಗೆ ಮನೆ, ಉಪಸ್ಥಿತರಿದ್ದರು. ಅನಿವಾಸಿ ಭಾರತೀಯ ಸದನದಾಸ್, ಪತ್ರಕರ್ತ ಅರುಣ್ ಕುಮಾರ್ ಶಿರೂರು, ಶಿಕ್ಷಕರಾದ ಮಾದವ ಬಿಲ್ಲವ, ಶಂಕರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಸದಸ್ಯತ್ವಕ್ಕೆ (ಕೆಪಿಸಿಸಿ) ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಕೆ. ಪ್ರತಾಪಚಂದ್ರ ಶೆಟ್ಟಿ ಅವರು ರಾಜೀನಾಮೆ ನೀಡಿದ್ದಾರೆ. ಎಐಸಿಸಿ ಕಾರ್ಯದರ್ಶಿ, ಕೇರಳ ಶಾಸಕ ರೋಸಿ ಎಂ. ಜಾನ್ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ದ್ರುವ ನಾರಾಯಣ್ ಅವರು ಪ್ರತಾಪಚಂದ್ರ ಶೆಟ್ಟಿಯವರ ನಿವಾಸಕ್ಕೆ ಭೇಟಿ ನೀಡಿದ ಮರುದಿನವೇ ರಾಜೀನಾಮೆ ನೀಡಿರುವುದು ಕುತೂಹಲಕ್ಕೆ ಕಾರಣವಾಗಿದೆ. ನಾಲ್ಕು ಭಾರಿ ಶಾಸಕರು, ಎರಡು ಭಾರಿ ವಿಧಾನ ಪರಿಷತ್ ಸದಸ್ಯರು ಹಾಗೂ ಒಂದು ಅವಧಿಗೆ ವಿಧಾನಪರಿಷತ್ ಸಭಾಪತಿಯಾಗಿ ಸೇವೆ ಸಲ್ಲಿಸಿ ಕೆಲ ದಿನಗಳಿಂದ ಸಕ್ರೀಯ ರಾಜಕಾರಣದಿಂದ ದೂರ ಉಳಿದು ರೈತ ಸಂಘದಲ್ಲಿ ಸಕ್ರೀಯವಾಗಿದ್ದ ಪ್ರತಾಪ್‌ಚಂದ್ರ ಶೆಟ್ಟಿ ಅವರು, ಈಗ ಕೆಪಿಸಿಸಿ ಸದಸ್ಯತ್ವಕ್ಕೆ ರಾಜಿನಾಮೆ ನೀಡಿದ್ದಾರೆ. ಸದ್ಯ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯರಾಗಿ ಮುಂದುವರಿಯಲಿರುವ ಅವರು, ಉತ್ಸಾಹಿಗಳಿಗೆ ಅವಕಾಶ ಮಾಡಿಕೊಡಲು ಈ ನಿರ್ಧಾರ ಕೈಗೊಂಡಿರುವುದಾಗಿ ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಸುಣ್ಣಾರಿಯ ಎಕ್ಸಲೆಂಟ್ ಪ್ರೌಢಶಾಲೆ ವಿಭಾಗದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಸಿದ್ಧತಾ ಕಾರ್ಯಾಗಾರವು ಕುಂದಾಪುರ ಜೆ.ಸಿ.ಐ ಸಹಭಾಗಿತ್ವದಲ್ಲಿ ಶಾಲಾ ವಠಾರದಲ್ಲಿ ಜರುಗಿತು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಡಾ. ಜಗದೀಶ್ ಜೋಗಿ ಅವರು ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳನ್ನು ಹುರಿದುಂಬಿಸಿ ವಿದ್ಯಾರ್ಥಿಗಳ ಪರೀಕ್ಷಾ ಆತಂಕವನ್ನು ದೂರಮಾಡುತ್ತಾ ಸಮಯವು ಅತ್ಯಂತ ಮಹತ್ವಪೂರ್ಣವಾಗಿದ್ದು, ಕಳೆದು ಹೋದ ಸಮಯ ಮರಳಿಬಾರದು, ಎನ್ನುವ ಕಟುಸತ್ಯವನ್ನು ಅರಿತು ಶಿಸ್ತುಬದ್ಧವಾದ ಅಧ್ಯಯನ ನಡೆಸಬೇಕೆಂದರು. ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಅಧ್ಯಯನ ವೇಳಾಪಟ್ಟಿ ಹಾಕಿಕೊಂಡು ನಿರಂತರ ಓದುವುದು ಮತ್ತು ಓದಿದ ವಿಚಾರ ಹೆಚ್ಚು ಮನನ ಮಾಡಿಕೊಳ್ಳುವುದರಿಂದ ನೆನಪಿನಲ್ಲಿ ಇಟ್ಟುಕೊಳ್ಳಲು ಸಾಧ್ಯವೆಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಜೆ.ಸಿ.ಐ ಕುಂದಾಪುರ ಇದರ ಕಾರ್ಯದರ್ಶಿಗಳಾದ ಕಾರ್ತಿಕ್ ಶೆಟ್ಟಿ ಪ್ರಾಸ್ತವಿಕವಾಗಿ ಮಾತನಾಡಿದರು. ಜೆ.ಸಿ.ಐ ಕುಂದಾಪುರ ಇದರ ಅಧ್ಯಕ್ಷರಾದ ಸುಧಾಕರ್ ಕಾಂಚನ್ ಜೆ.ಸಿ.ಐ ನ ಸಮಾಜ ಸೇವೆಯ ಬಗ್ಗೆ ಮಾತನಾಡಿ ವಿದ್ಯಾರ್ಥಿಗಳು ಕ್ರಮಬದ್ಧವಾಗಿ ಓದಿ ಹೆಚ್ಚು ಅಂಕಗಳಿಸುವಂತಾಗಲಿ ಎಂದು ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ, ಎಕ್ಸಲೆಂಟ್ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಅಂಬೇಡ್ಕರ್ ಅವರು ಒಂದು ಸಮುದಾಯದಲ್ಲಿ ಜನಿಸಿದರೂ ಅವರ ಕೊಡುಗೆ, ವ್ಯಕ್ತಿತ್ವ, ಸಾಧನೆ ಕೇವಲ‌ ಒಂದು ಸಮುದಾಯಕ್ಕೆ ಸೀಮಿತವಾಗಿಲ್ಲ. ಅಂಬೇಡ್ಕರ್ ಅವರನ್ನು‌ ಓದಿನ ಮೂಲಕ ಅರಿಯುವುದರಿಂದ ಮಾತ್ರ ನಿಜ ವ್ಯಕ್ತಿತ್ವ ಅರಿವಾಗುವುದು ಎಂದು ದಸಂಸ ಜಿಲ್ಲಾ ಸಂಚಾಲಕ ಮಂಜುನಾಥ ಗಿಳಿಯಾರ್ ಹೇಳಿದರು. ಅವರು ಇಲ್ಲಿನ ಅಂಬೇಡ್ಕರ್ ಭವನದಲ್ಲಿ ಸಮುದಾಯ ಕುಂದಾಪುರ ಸಾಂಸ್ಕೃತಿಕ ಸಂಘಟನೆ ನೇತೃತ್ವದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ, ಬುದ್ದಿಸ್ಟ್ ಸೊಸೈಟಿ ಆಫ್ ಇಂಡಿಯಾ ಸಹಯೋಗದೊಂದಿಗೆ ಆಯೋಜಿಸಲಾದ ಉಡುಪಿ ಜಿಲ್ಲಾ ಮಟ್ಟದ ಅಂಬೇಡ್ಕರ್ ಓದು – ಸ್ವರ್ಧಾ ಕಾರ್ಯಕ್ರಮದಲ್ಲಿ ಮಾತನಾಡಿ ದೇಶದ ಆಡಳಿತದಲ್ಲಿ ಅಂಬೇಡ್ಕರ್ ತನ ಹಾಸುಹೊಕ್ಕಾಗಿದೆ ಎಂದರು. ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎಸ್. ಕಾಂತರಾಜ್ ಅಧ್ಯಕ್ಷತೆ ವಹಿಸಿ‌ ಮಾತನಾಡಿ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಗೌರವ ದೊರೆಯಬೇಕು‌ ಎಂಬ ಕಳಕಳಿ‌ ಅಂಬೇಡ್ಕರ್ ಅವರದ್ದಾಗಿತ್ತು. ಅಂಬೇಡ್ಕರ್ ಅವರು ಇಂದಿಗೂ ಜನರ ಮನಸ್ಸಿನಲ್ಲಿಯೂ ಇದ್ದಾರೆಂದರೆ ಅವರ ವ್ಯಕ್ತಿತ್ವವೇ ಕಾರಣ. ಅಂಬೇಡ್ಕರ್ ಅವರಲ್ಲಿದ್ದ ಜ್ಞಾನದ ಕಾರಣಕ್ಕೆ ದೊಡ್ಡ ಸ್ಥಾನ ದೊರೆಯಿತು ಎಂದರು.…

Read More