ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿಯ ಸೇವಾ ಸಂಗಮ ನಿವೇದಿತಾ ಶಿಶು ಮಂದಿರದ ಆಶ್ರಯದಲ್ಲಿ ಮಾತಾ ಪಿತೃ ವಂದನಾ ಕಾರ್ಯಕ್ರಮ ಗಂಗೊಳ್ಳಿಯ ಶ್ರೀ ವೀರ ವಿಠಲ ಸಭಾಗೃಹದಲ್ಲಿ ಶುಕ್ರವಾರ ನಡೆಯಿತು. ಶಿಶು ಮಂದಿರದ ಅಧ್ಯಕ್ಷೆ ಸವಿತಾ ಯು. ದೇವಾಡಿಗ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಪುರೋಹಿತರಾದ ಜಿ.ರಾಘವೇಂದ್ರ ಆಚಾರ್ಯ ಮಾತನಾಡಿ, ಇಂದಿನ ದಿನಗಳಲ್ಲಿ ಮಕ್ಕಳಿಗೆ ತಂದೆ ತಾಯಿಯ ಮೇಲೆ ಪ್ರೀತಿ, ವಿಶ್ವಾಸ, ಗೌರವ ಕಡಿಮೆಯಾಗುತ್ತಿದೆ. ಬಾಲ್ಯದಲ್ಲಿ ಅವರಿಗೆ ಸರಿಯಾದ ಶಿಕ್ಷಣ, ಸೂಕ್ತ ಮಾರ್ಗದರ್ಶನ ನೀಡುವುದು ಅವಶ್ಯಕ. ಹಿಂದಿನ ಕಾಲದಲ್ಲಿ ತಂದೆ ತಾಯಿಯನ್ನು ದೇವರಿಗೆ ಸಮ ಎನ್ನುತ್ತಿದ್ದರು. ಆದರೆ ಕಾಲ ಬದಲಾದಂತೆ ತಂದೆ ತಾಯಿಯರನ್ನು ನೋಡುವ ಶೈಲಿ ಕೂಡ ಬದಲಾಗುತ್ತಿದೆ. ಶಿಶು ಮಂದಿರದ ಶಿಕ್ಷಣದಲ್ಲಿ ಮಾತಾ ಪಿತೃ ವಂದನ ಕಾರ್ಯಕ್ರಮದ ಮೂಲಕ ಮಕ್ಕಳಲ್ಲಿ ತಂದೆ ತಾಯಿಯ ಬಗ್ಗೆ ಪೂಜ್ಯ ಭಾವನೆಯನ್ನು ಬೆಳೆಸಿ ತನ್ಮೂಲಕ ತಂದೆ ತಾಯಿಯನ್ನು ಗೌರವದಿಂದ ಕಾಣುವ ಪ್ರಯತ್ನ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು. ಶಿಶು ಮಂದಿರದ ಸಂಚಾಲಕ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಹನಾ ಅಕ್ವಾಟಿಕ್ ಮತ್ತು ಸ್ಪೋರ್ಟ್ಸ್ ಕ್ಲಬ್ ಅಂಕದಕಟ್ಟೆ,ಕೋಟೇಶ್ವರ ಮತ್ತು ಕಶ್ವಿ ಚೆಸ್ ಸ್ಕೂಲ್ (ರಿ.) ಕುಂದಾಪುರ ಇವರ ಜಂಟಿ ಆಶ್ರಯದಲ್ಲಿ,ಉಡುಪಿ ಜಿಲ್ಲಾ ಚೆಸ್ ಅಸೋಸಿಯೇಷನ್,ಕರ್ನಾಟಕ ರಾಜ್ಯ ಚೆಸ್ ಅಸೋಸಿಯೇಷನ್, ಅಖಿಲ ಭಾರತ ಚೆಸ್ ಫೆಡರೇಶನ್ ಮತ್ತು ಅಂತರಾಷ್ಟ್ರೀಯ ಚೆಸ್ ಫೆಡರೇಶನ್ ಸಹಯೋಗದೊಂದಿಗೆ ಕರ್ನಾಟಕ ರಾಜ್ಯ ( ಬಿಲೋ 2000)ಅಮೆಚೂರ್ ಫಿಡೆ ರೇಟೆಡ್ ಚೆಸ್ ಚಾಂಪಿಯನ್ ಶಿಪ್-2023 ಕೋಟೇಶ್ವರದ ಸಹನಾ ಆರ್ಕಿಡ್ ಹೋಟೆಲ್ ನಲ್ಲಿ ಆರಂಭಗೊಂಡಿತು. ಸರಳವಾಗಿ ನಡೆದ ಉಧ್ಘಾಟನಾ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಚೆಸ್ ಚಾಂಪಿಯನ್ ಮೈಸೂರಿನ ಪ್ರಸಿದ್ಧಿ ಭಟ್ ದೀಪ ಬೆಳಗಿಸಿ ಚಾಲನೆ ನೀಡಿದರು. ಸಹನಾ ಗ್ರೂಪಿನ ಅಧ್ಯಕ್ಷೆ ಸಹನಾ ಎಸ್ ಶೆಟ್ಟಿ, ಕಶ್ವಿ ಚೆಸ್ ಸ್ಕೂಲ್ ನ ಅಧ್ಯಕ್ಷ ನರೇಶ್ ಬಿ, ಕಾರ್ಯದರ್ಶಿ ಪುರುಷೋತ್ತಮ ಕಾಮತ್, ಮುಖ್ಯ ತೀರ್ಮಾನಕಾರ ಅನಿಲ್ ಎನ್ ಜೆ ಉಪಸ್ಥಿತರಿದ್ದರು. ಎಪ್ರಿಲ್ 23ರ ತನಕ ನಡೆಯುವ ಚಾಂಪಿಯನ್ ಶಿಪ್ ನಲ್ಲಿ ಅಗ್ರಸ್ಥಾನದಲ್ಲಿರುವ 4 ಆಟಗಾರರನ್ನು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ ಮಾಡಲಾಗುತ್ತದೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: 2022-2023ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟದ 11 ರ್ಯಾಂಕ್ಗಳನ್ನು ಪಡೆಯುವುದರೊಂದಿಗೆ ಅಭೂತ ಪೂರ್ವ ಸಾಧನೆ ಮೆರೆದ ಕುಂದಾಪುರದ ಏಕೈಕ ಕಾಲೇಜಾಗಿ ಹೊರಹೊಮ್ಮಿದೆ. ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಶೇ.100 ಫಲಿತಾಂಶ ದಾಖಲಿಸಿದೆ. ವಾಣಿಜ್ಯ ವಿಭಾಗದಲ್ಲಿ 141 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 96 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ನಲ್ಲಿ, 44 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, ಓರ್ವ ವಿದ್ಯಾರ್ಥಿ ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಈ ಬಾರಿಯ ವಿಜ್ಞಾನ ವಿಭಾಗದಲ್ಲಿ 238 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 135 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ನಲ್ಲಿ, 102 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಭೌತಶಾಸ್ತ್ರ 03, ರಸಾಯನಶಾಸ್ತç 05, ಗಣಿತಶಾಸ್ತ್ರ 09, ಜೀವಶಾಸ್ತ್ರ 03, ಗಣಕ ವಿಜ್ಞಾನ 30, ಬೇಸಿಕ್ ಮ್ಯಾಥ್ಸ 03, ಲೆಕ್ಕಶಾಸ್ತ್ರ 11, ವ್ಯವಹಾರ ಅಧ್ಯಯನ 05, ಸಂಖ್ಯಾಶಾಸ್ತ್ರ 04, ಕನ್ನಡ 03, ಸಂಸ್ಕೃತ 12 ವಿಷಯವಾರು 100ಕ್ಕೆ 100 ಅಂಕಗಳನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾಕಾರ್ಸ್ ಪದವಿ ಪೂರ್ವ ಕಾಲೇಜು 2022-23ನೇ ಶೈಕ್ಷಣಿಕ ವರ್ಷದ ಸಾಲಿನ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇಕಡಾ 97% ಫಲಿತಾಂಶ ಬಂದಿದೆ. ವಿಜ್ಞಾನ ವಿಭಾಗದಲ್ಲಿ ಪ್ರಾಂಜಲ್ ಮ್ಯಾಥ್ಯೂ ಲೋಬೋ (96.16%), ಶುಭಶ್ರೀ (95.5%), ದಿಶಾ.ಜೆ.ಶೆಟ್ಟಿ (93.33%) ಅತ್ಯತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ದಶಮಿ(97.66%), ನಿಶ್ಮಿತಾ(96), ಪ್ರಣಮ್ಯ ಛಾತ್ರ(95.5%) ಅತ್ಯತ್ತಮ ದರ್ಜೆಯಲ್ಲಿ ಪಾಸಾಗಿದ್ದಾರೆ. ವಿಶೇಷ ಸಾಧನೆಗೈದ ಎಲ್ಲಾ ವಿದ್ಯಾರ್ಥಿಗಳಿಗೆ ಕಾಲೇಜಿನ ಪ್ರಾಂಶುಪಾಲರು, ಆಡಳಿತ ಮಂಡಳಿ, ಶಿಕ್ಷಕರು, ಶಿಕ್ಷಕೇತರರು ಅಭಿನಂದನೆಗಳನ್ನು ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಈದುಲ್ ಫಿತ್ರ್ ಪ್ರಯುಕ್ತ ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ ಕುಂದಾಪುರ ತಾಲೂಕು ಘಟಕದ ನಿಯೋಗ ತಾಲೂಕು ಅಧ್ಯಕ್ಷರಾದ ಎಸ್. ದಸ್ತಗೀರ್ ಸಾಹೇಬ್ ಕಂಡ್ಲೂರುರವರ ನೇತೃತ್ವದಲ್ಲಿ ತ್ರಾಸಿಯ ಹೋಲಿಕ್ರಾಸ್ ವೃದ್ಧಾಶ್ರಮಕ್ಕೆ ಭೇಟಿ ನೀಡಿತು. ವೃದ್ಧಾಶ್ರಮದ ಹಿರಿಯರೊಂದಿಗೆ ಜೊತೆ ನಡೆಸಿ ಅವರಿಗೆ ಹಣ್ಣು ಹಂಪಲು ಹಾಗೂ ಬ್ರೆಡ್ ಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ಮುಹಮ್ಮದ್ ರಫೀಕ್ ಗಂಗೊಳ್ಳಿ, ತಾಲೂಕು ಕೋಶಾಧಿಕಾರಿ ಮುಜಾವರ್ ಅಬು ಮುಹಮ್ಮದ್ ಕುಂದಾಪುರ, ಜಿಲ್ಲಾ ಸಮಿತಿ ಸದಸ್ಯರಾದ ಶಾಬಾನ್ ಹಂಗಳೂರು, ರೆಹಾನ್ ತ್ರಾಸಿ ತಾಲೂಕು ಸಮಿತಿ ಸದಸ್ಯರಾದ ಝಹೀರ್ ನಾಖುದಾ ಹಾಗೂ ಇತರರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮುಸ್ಲಿಂ ಸಮುದಾಯದ ಈದುಲ್ ಫಿತ್ರ್ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಕುಂದಾಪುರ ಹಾಗೂ ಬೈಂದೂರು ತಾಲೂಕಿನ ನಾನಾ ಮಸಿದಿಗಳಲ್ಲಿ ವಿಶೇಷ ಈದ್ ನಮಾಝ್ ನೆರವೇರಿಸಲಾಯಿತು. ಮುಸ್ಲಿಂ ಸಮುದಾಯವರು ಬೆಳಿಗ್ಗೆ ಅರ್ಹರಿಗೆ ಫಿತ್ರ್ ಝಕಾತ್ ನೀಡಿದ ಬಳಿಕ ಹೊಸ ಬಟ್ಟೆ ಧರಿಸಿ ಮಸೀದಿಗೆ ತೆರಳಿ ಪ್ರಾರ್ಥನೆ ಸಲ್ಲಿಸಿದರು. ನಮಾಜ್ ಬಳಿಕ ಪರಸ್ಪರ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: 2022-23 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕುಂದಾಪುರ ಆರ್.ಎನ್. ಶೆಟ್ಟಿ ಪಿಯು ಕಾಲೇಜಿನ ಗಣಕಯಂತ್ರ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ರಾಜೇಶ್ವರಿಗೆ 553 ಅಂಕ ದೊರೆತಿದ್ದು, ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾಳೆ. ಈಕೆ ಕುಂದಾಪುರ ನಿವಾಸಿ ನಾಗಾರ್ಜುನ ಹಾಗೂ ಸರೋಜಾ ದಂಪತಿಗಳ ಪುತ್ರಿ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿಜ್ಞಾನ ವಿಭಾಗದಲ್ಲಿ ಶ್ರೀ ವೆಂಕಟರಮಣ ಪಿಯು ಕಾಲೇಜಿನ ವಿದ್ಯಾರ್ಥಿನಿ ಸೃಷ್ಟಿ ಶೇ.95 ಫಲಿತಾಂಶ ಪಡೆದು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾಳೆ. ಒಟ್ಟು 569 ಅಂಕ ಪಡೆದಿರುವ ಸೃಷ್ಟಿ ಇಂಗ್ಲೀಷ್ನಲ್ಲಿ 91, ಹಿಂದಿ 85, ಫಿಜಿಕ್ಸ್ 97, ಕೆಮಿಸ್ಟ್ರಿ 96, ಮ್ಯಾಥ್ಸ್ 100 ಕಂಪ್ಯೂಟರ್ ಸೈನ್ಸ್ ನಲ್ಲಿ 100 ಅಂಕ ಪಡೆದಿದ್ದಾಳೆ. ಈಕೆ ಉಪ್ರಳ್ಳಿ ಮಡಿಹಿತ್ಲು ಬಾಬು ಪೂಜಾರಿ ಹಾಗೂ ಶ್ರೀಮತಿ ದಂಪತಿಗಳ ಪುತ್ರಿಯಾಗಿದ್ದಾಳೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕುಂದಾಪುರ ಸರಕಾರಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳಿಗೆ ವಾಣಿಜ್ಯ ವಿಭಾಗದಲ್ಲಿ ರ್ಯಾಂಕ್ ದೊರೆತಿದೆ. ವಾಣಿಜ್ಯ ವಿಭಾಗದ ವಿದ್ಯಾರ್ಥಿ ರಾಹುಲ್ ಪೂಜಾರಿ 588 ಅಂಕ ಗಳಿಸಿ ರಾಜ್ಯಕ್ಕೆ 9ನೇ ಸ್ಥಾನ ಪಡೆದಿದ್ದರೆ, ವೈಷ್ಣವಿ 587 ಅಂಕ ಗಳಿಸಿ ರಾಜ್ಯಕ್ಕೆ 10ನೇ ಸ್ಥಾನ ಪಡೆದಿದ್ದಾಳೆ. ಕಾಲೇಜು ಈ ಭಾರಿ ಶೆ.93.23 ಫಲಿತಾಂಶ ದಾಖಲಿಸಿದೆ. ವಿದ್ಯಾರ್ಥಿಗಳನ್ನು ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ಅಭಿನಂಧಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೋಟೇಶ್ವರ ಬಾಂಡ್ಯಾ ಎಜುಕೇಶನಲ್ ಟ್ರಸ್ಟ್ ವಕ್ವಾಡಿ ಗುರುಕುಲ ಪದವಿಪೂರ್ವ ಕಾಲೇಜು ಶೈಕ್ಷಣಿಕ ವರ್ಷ 2022-23ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಪಡೆದಿರುತ್ತದೆ. ಒಟ್ಟು ವಿದ್ಯಾರ್ಥಿಗಳಲ್ಲಿ ಶೇ.48.14 ಉನ್ನತ ಶ್ರೇಣಿಯಲ್ಲಿ, ಶೇ.51.85 ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದು, ವಿಜ್ಞಾನ ವಿಭಾಗದಲ್ಲಿ ಶೇ.41.66 ವಾಣಿಜ್ಯ ವಿಭಾಗದಲ್ಲಿ 53.33 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ತೆರ್ಗಡೆ ಹೊಂದಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಅನನ್ಯ ಆರ್. ಶೆಟ್ಟಿ (578), ದೀಕ್ಷಾ ಎಚ್. ಶೆಟ್ಟಿ(576), ಶ್ರೇಯಾ ಜೆ. ಹೆಗ್ಡೆ (568), ಶ್ರಾವ್ಯಾ ಶೆಟ್ಟಿ(565), ವಿ.ಆರ್.ಭುವನ ಗೌಡ(546), ಶ್ರೇಯಸ್ ಶೆಟ್ಟಿ(535),ತನ್ವಿ ಜಿ. ಶೆಟ್ಟಿ(523), ಶ್ರೀರಕ್ಷಾ ಕೆ.ಎ(516) ಹಾಗೂ ವಿಜ್ಞಾನ ವಿಭಾಗದಲ್ಲಿ ಸಾನಿಯಾ ಶೇಖ್ (562), ದಿಶಾ ಎಚ್. ಶೆಟ್ಟಿ(538), ಭವಿಷ್ ಎಸ್. ಶೆಟ್ಟಿ(535), ವರ್ಷಿತ್ ಎಮ್(529), ಬಸವರಾಜ್ ಮಠದ್(521) ಇವರು ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದು ಸಂಸ್ಥೆಗೆ ಕೀರ್ತಿ ತಂದಿರುತ್ತಾರೆ. ಸಾಧನೆಗೈದ ಎಲ್ಲಾ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಭೋದಕ ಹಾಗೂ…
