Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಬಿಲ್ಲವರ ಹಿತರಕ್ಷಣಾ ವೇದಿಕೆ ಗಂಗೊಳ್ಳಿ ಮತ್ತು ಕಲಾಶ್ರೀ ಶಿಕ್ಷಣ ಪ್ರೇಮಿಗಳ ಬಳಗ ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮವು ಗಂಗೊಳ್ಳಿಯ ಡಾ. ಅಂಬೇಡ್ಕರ್ ಭವನದಲ್ಲಿ ಮಂಗಳವಾರ ಜರಗಿತು. ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯಂತಿ ಖಾರ್ವಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿದ್ದ ಕುಂದಾಪುರ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಉಮೇಶ ಟಿ. ಎಲ್. ಶುಭಾ ಶಂಸನೆಗೈದರು. ಗಂಗೊಳ್ಳಿ ಗ್ರಾಮದ ಅಂಗನವಾಡಿ ಕಾರ್ಯಕರ್ತೆಯರಾದ ಫಿಲೋಮಿನಾ ಫೆರ್ನಾಂಡಿಸ್, ಶೇಷಮ್ಮ, ಶೋಭಾ ಎಸ್., ಕಮಲಾ, ರೇಖಾ ಕೆ., ಸಂಗೀತಾ, ಸಹನಾ ಹಾಗೂ ನಿಖಿತಾ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಗಂಗೊಳ್ಳಿ ಬಿಲ್ಲವರ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಗೋಪಾಲ ಪೂಜಾರಿ, ಅಂಗನವಾಡಿ ಮೇಲ್ವಿಚಾರಕಿ ರೇಖಾ ಕೆ., ಸರಕಾರಿ ಕಿರಿಯ ಪ್ರಾಥಮಿಕ (ಹವೇ) ಶಾಲೆ ಮುಖ್ಯ ಶಿಕ್ಷಕ ಗುರುರಾಜ್ ಆಚಾರ್ಯ, ಸಹಶಿಕ್ಷಕ ಯೋಗೀಶ್, ಜಿ.ವಿ.ಆರ್.ಲಕ್ಷ್ಮಣ ಪೂಜಾರಿ, ಎಸ್‌ಡಿಎಂಸಿ ಅಧ್ಯಕ್ಷೆ ಸವಿತಾ ಖಾರ್ವಿ, ಅರ್ಚನಾ ಮಹಿಳಾ ಮಂಡಲ ಅಧ್ಯಕ್ಷೆ ಜ್ಯೋತಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಕಾಯ್ದೆ ಅಧಿನಿಮಯ 1997 ರ ಕಲಂ 25 ರನ್ವಯ ಹಾಗೂ ಧಾರ್ಮಿಕ ಪರಿಷತ್ತಿನ ಜಿಲ್ಲಾ ಧಾರ್ಮಿಕ ಪರಿಷತ್‌ನ ಸಭೆಯ ನಿರ್ಣಯದಂತೆ ಜಿಲ್ಲೆಯಲ್ಲಿರುವ ಪ್ರವರ್ಗ ಸಿ ಗೆ ಸೇರಿದ ಬ್ರಹ್ಮಾವರ ತಾಲೂಕಿನ ಮೂಡಹಡು ಗ್ರಾಮದ ಯಡಬೆಟ್ಟು ಶ್ರೀ ಗೋಪಾಲಕೃಷ್ಣ ದೇವಸ್ಥಾನಕ್ಕೆ ವ್ಯವಸ್ಥಾಪನ ಸಮಿತಿಯನ್ನು ಮೂರು ವರ್ಷಗಳ ಅವಧಿಗೆ ರಚಿಸಲು ಆಸಕ್ತ ಭಕ್ತಾದಿಗಳು ಹಾಗೂ ಸಾರ್ವಜನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಕನಿಷ್ಠ 25 ವರ್ಷ ಮೇಲ್ಪಟ್ಟ ಆಸಕ್ತ ಭಕ್ತಾದಿಗಳು ಯಾವುದೇ ಒಂದು ಅಧಿಸೂಚಿತ ಸಂಸ್ಥೆಯ/ ದೇವಾಲಯದ ವ್ಯವಸ್ಥಾಪನಾ ಸಮಿತಿಗೆ ಮಾತ್ರ ಸದಸ್ಯತ್ವ ಕೋರಿ ಅರ್ಜಿಯನ್ನು ನಮೂನೆ-1(ಬಿ) (22 ನೇ ನಿಯಮ) ನಮೂನೆಯಲ್ಲಿ ಭರ್ತಿ ಮಾಡಿದ ಅರ್ಜಿಯನ್ನು ಏಪ್ರಿಲ್ 17 ರ ಒಳಗಾಗಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ಆಯುಕ್ತರು, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ, ಕೊಠಡಿ ಸಂಖ್ಯೆ 206, ಬಿ ಬ್ಲಾಕ್,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಸಮಾಜಸೇವೆಯೇ ಜೀವಾಳವಾಗಿರಿಸಿಕೊಂಡು ತನ್ನ ಚೌಕಟ್ಟಿನೊಳಗೆ ನಿರಂತರ ಕಾರ್ಯಕ್ರಮಗಳನ್ನು ನೀಡುವ ಪಂಚವರ್ಣದ ಕಾರ್ಯವೈಕರಿ ನಿಜಕ್ಕೂ ಮೆಚ್ಚುವಂತ್ತದ್ದು ಎಂದು ಹಿರಿಯ ಪತ್ರಕರ್ತ ಚಂದ್ರಶೇಖರ್ ಬೀಜಾಡಿ ಹೇಳಿದರು. ಅವರು ಕೋಟದ ಪಂಚವರ್ಣ ಕಛೇರಿಯಲ್ಲಿ ಸದಸ್ಯ ಗಣೇಶ್ ಕಾಸನಗುಂದು ಇವರ ಹುಟ್ಟುಹಬ್ಬದ ಅಂಗವಾಗಿ ಹಮ್ಮಿಕೊಂಡ ಗುರುವಂದನಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಪ್ರಸ್ತುತ ಯುವ ಸಮೂಹ ದಿಕ್ಕು ತಪ್ಪಿ ಬದುಕುವ ಕಾಲಘಟ್ಟದಲ್ಲಿ ನಾವುಗಳು ಕಾಣುತ್ತೇವೆ ಆದರೆ ಇಲ್ಲಿನ ಈ ಯುವಕ ಪಡೆ ಹೊಸ ಹೊಸ ಆಲೋಚನೆಗಳ ಮೂಲಕ ಸಮಾಜದ ಒಳಿತಿಗೆ ಶ್ರಮಿಸುತ್ತಿದೆ ಇದು ಅಭಿನಂದನಾರ್ಹ ಕಾರ್ಯವಾಗಿದೆ ಅಂತಯೇ ಪಂಚವರ್ಣದ ಸ್ವಚ್ಛತಾ ಕಾರ್ಯ ಹೊಸ ಅಧ್ಯಾಯಕ್ಕೆ ಮುನ್ನುಡಿ ಬರೆಯಲಿದೆ. ಇಲ್ಲಿನ ಸಂಘಟಕರ ಕ್ರೀಯಾಶೀಲತೆ ಹೊಸ ಮನ್ವಂತರ ಸೃಷ್ಠಿಸುವಂತ್ತಾಗಿದೆ ಎಂದು ತಮ್ಮ ಆಶಯ ವ್ಯಕ್ತಪಡಿಸಿದರು. ಇದೇ ವೇಳೆ ಪಂಚವರ್ಣದ ಸದಸ್ಯ ಗಣೇಶ್ ಹುಟ್ಟುಹಬ್ಬದ ಅಂಗವಾಗಿ ಅವರ ಬಾಲ್ಯದ ಶಿಕ್ಷಕರಾದ ಜೂಲಿಯ ಟೀಚರ್, ಸಹಾಯಕಿ ಜಲಜ ಶೇಖರ್,ಪ್ರಾಥಮಿಕ ಶಾಲಾ ನಿವೃತ್ತ ಶಿಕ್ಷಕ ಕೊಯ್ಕೂರು ಸೀತಾರಾಮ ಶೆಟ್ಟಿ ಇವರುಗಳನ್ನು ನಿವೃತ್ತ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಭಾರತೀಯ ಸೇನೆ/ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2 (ಎ), 3 (ಎ) ಹಾಗೂ (3ಬಿ) ಗಳ ಅರ್ಹ ಅಭ್ಯರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನ ಮೊದಲನೇ ತಂಡದ ಆಯ್ಕೆಯ ಪೂರ್ವಸಿದ್ದತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಯನ್ನು ಉಚಿತವಾಗಿ ನೀಡುತ್ತಿದ್ದು, ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ (ಬಾಲಕರಿಗೆ ಮಾತ್ರ) ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಏಪ್ರಿಲ್ 21 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಕೊಠಡಿ ಸಂಖ್ಯೆ: 304, ಬಿ ಬ್ಲಾಕ್, ಎರಡನೇ ಮಹಡಿ, ರಜತಾದ್ರಿ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2574881 ಅಥವಾ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: 2024 -25ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯು ಫಲಿತಾಂಶ ಪ್ರಕಟಗೊಂಡಿದ್ದು ಕುಂದಾಪುರ ಭಾಗದ ಪ್ತತಿಷ್ಟಿತ ಶಿಕ್ಷಣ ಸಂಸ್ಥೆ ಹೆಮ್ಮಾಡಿಯ ಜನತಾ ಪದವಿ ಪೂರ್ವ ಕಾಲೇಜು ಸತತ ಮೂರನೇ ವರ್ಷವೂ ಶೇಕಡಾ ನೂರು ಫಲಿತಾಂಶದೊಂದಿಗೆ ಸಾರ್ವತ್ರಿಕ ದಾಖಲೆ ಸೃಷ್ಟಿಸಿದೆ . ವಿಜ್ಞಾನ ವಿಭಾಗದಲ್ಲಿ 204 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು 113 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಹಾಗೂ 113 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ . ವಾಣಿಜ್ಯ ವಿಭಾಗದಲ್ಲಿ 88 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 36 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಹಾಗೂ 52 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಸಾಧನೆ ಮಾಡಿದ್ದಾರೆ .ವಿಜ್ಞಾನ ವಿಭಾಗದಲ್ಲಿ- ಶ್ರದ್ದಾ ಎಸ್. ಮೊಗವೀರ (591), ಅಮೂಲ್ಯ (586 ), ಸಾನಿಕ ಎಸ್. ದೇವಾಡಿಗ (586 ), ಶೋಭಿತ್ (584), ಅಭಿದೀಪ್ ಹೆಬ್ಬಾರ್ (583 ), ಇಶ್ರ‍್ರಾ (582), ಚಿರಂತನ್ (581 ), ಸ್ವಾತಿ ಭಟ್ (581 ), ರಕ್ಷಿತಾ (579 ), ಅದಿತಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಹಾದು ಹೋಗಿರುವ ರಾಷ್ಟೀಯ ಹೆದ್ದಾರಿ ರಸ್ತೆಯ ಅಭಿವೃದ್ಧಿ ಕಾಮಗಾರಿಗಳು, ರಸ್ತೆ ನಿರ್ವಹಣೆಯನ್ನು ವ್ಯವಸ್ಥಿತವಾಗಿ ನಿರ್ವಹಿಸಿ, ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುಕೂಲ ಮಾಡಿ ಕೊಡಬೇಕು ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ರಾಷ್ಟೀಯ ಹೆದ್ದಾರಿ ಅಭಿಯಂತರರಿಗೆ ಸೂಚನೆ ನೀಡಿದರು. ಅವರು ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ರಾಷ್ಟ್ರೀಯ ಹೆದ್ದಾರಿ-66 ರಲ್ಲಿ ಬ್ರಹ್ಮಾವರ ತಾಲೂಕಿನ ಆಕಾಶವಾಣಿ ಜಂಕ್ಷನ್‌ನಿಂದ ಬ್ರಹ್ಮಾವರ ಮಹೇಶ್ ಆಸ್ಪತ್ರೆ ಜಂಕ್ಷನ್ ವರೆಗೆ ಫ್ಲೆಓವರ್ ಅಥವಾ ಅಂಡರ್‌ಪಾಸ್ ನಿರ್ಮಿಸುವ ಕುರಿತು ಹಾಗೂ ರಾಷ್ಟ್ರೀಯ ಹೆದ್ದಾರಿಗೆ ಸಂಬಂಧಿಸಿದ ಕುಂದು ಕೊರತೆಗಳ ಕುರಿತು ಚರ್ಚಿಸುವ ಸಲುವಾಗಿ ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ 100 ಕಿ.ಮೀ.ಗೂ ಹೆಚ್ಚು ಉದ್ದ ರಾಷ್ಟೀಯ ಹೆದ್ದಾರಿ 66 ಹಾದು ಹೋಗಿದ್ದು, ಪೂರ್ಣ ಪ್ರಮಾಣದಲ್ಲಿ ಸರ್ವಿಸ್ ರಸ್ತೆ, ಮೂಲಭೂತ ಸೌಕರ್ಯಗಳಾದ ಚರಂಡಿ, ದಾರಿದೀಪ, ಸೇರಿದಂತೆ ಮತ್ತಿತರ ನಿರ್ವಹಣೆ ಕೊರತೆಯಿಂದಾಗಿ ಹೆದ್ದಾರಿಯಲ್ಲಿ ಸಾರ್ವಜನಿಕರ ಸುಗಮ…

Read More

‌ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: 2024-25ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿಗೆ ಶೇ.90.48 ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾದ 127 ವಿದ್ಯಾರ್ಥಿಗಳಲ್ಲಿ 114 ವಿದ್ಯಾರ್ಥಿಗಳು ತೇರ್ಗಡೆಗೊಂಡಿದ್ದು, 27 ವಿದ್ಯಾರ್ಥಿಗಳು ವಿಶಿಷ್ಠ ದರ್ಜೆಯಲ್ಲಿ, 68 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 17 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಮತ್ತು ಇಬ್ಬರು ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಸಂಸ್ಕೃತ ವಿಷಯದಲ್ಲಿ 13 ವಿದ್ಯಾರ್ಥಿಗಳು 100 ಅಂಕಗಳನ್ನು ಪಡೆದಿದ್ದರೆ, ಗಣಿತಶಾಸ್ತçದಲ್ಲಿ ಹಾಗೂ ವ್ಯವಹಾರ ಅಧ್ಯಯನದಲ್ಲಿ ತಲಾ ಒಬ್ಬ ವಿದ್ಯಾರ್ಥಿ 100 ಅಂಕಗಳನ್ನು ಪಡೆದಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 577 ಅಂಕಗಳನ್ನು ಪಡೆದಿರುವ ಕ್ಷಮಾ ಆರ್.ಆಚಾರ್ಯ ಕಾಲೇಜಿನ ಅಗ್ರ ಸ್ಥಾನಿಯಾಗಿ ಮೂಡಿ ಬಂದಿದ್ದಾಳೆ. ವಿಜ್ಞಾನ ವಿಭಾಗದಲ್ಲಿ ಶ್ರಾವ್ಯ 576 ಅಂಕಗಳನ್ನು ಪಡೆದು ಪ್ರಥಮ ಸ್ಥಾನ ಪಡೆದಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಶ್ರಾವ್ಯ (576), ದಿವ್ಯಾ ಡಿ.ಮೇಸ್ತ (565), ಸೃಷ್ಟಿ (559), ಪ್ರಥಮ್ ಟಿ.ನಾಯಕ್ (553), ಸುಶ್ಮಿತಾ (545), ಶ್ರೀರಕ್ಷಾ ಶೆಣೈ (544), ಮೊತಾಸೀನ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಒಂದು ಸರಕಾರಿ ಅಥವಾ ಅನುದಾನಿತ ಶಾಲೆ ಶತಮಾನ ಕಾಣುವುದು ಸುಲಭದ ಮಾತಲ್ಲ ಅದನ್ನು ಮುನ್ನಡೆಸುವ ಮಹತ್ಕಾರ್ಯ ನಿಜಕ್ಕೂ ಅಭಿನಂದನಾರ್ಹವಾಗಿದೆ ಎಂದು ಉಡುಪಿ ಮತ್ತು ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅಭಿಪ್ರಾಯಪಟ್ಟರು. ಅವರು ಮಂಗಳವಾರ ಸಾಸ್ತಾನದ ಪಾಂಡೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಇದರ ಶತಮಾನೋತ್ಸವ ಸಂಭಮದ ಅಂಗವಾಗಿ ಶತಾವರ್ತ ಸಂಭ್ರಮ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತಮಾಡಿದರು. ಸರಕಾರಿ ಮತ್ತು ಅನುದಾನಿತ ಶಾಲೆಗಳ ಸ್ಥಿತಿಗತಿ ಅವಲೋಕಿಸಿದರೆ ಬಾರಿ ಕ್ಲಿಷ್ಟಕರವಾಗಿದೆ. ಈ ದಿಸೆಯಲ್ಲಿ ಶಾಲಾಭಿವೃದ್ಧಿಗೆ ಬೇಕಾದ ಸಮಿತಿಗಳ ಮೂಲಕ ಶಾಲೆ ಉಳಿಸಿ ಬೆಳೆಸುವ ಪ್ರಯತ್ನ ಶ್ಲಾಘನೀಯ ಎಂದರಲ್ಲದೆ ದೇಶ ಕಟ್ಟುವ ಶಿಕ್ಷಣ ಅದರಲ್ಲೂ ಎಲ್ಲಾ ಜಾತಿಮತ ಧರ್ಮಗಳನ್ನು ಮೀರಿ ಸಂಘರ್ಷ ಇಲ್ಲದ ಶಿಕ್ಷಣ ನಮ್ಮ ಮಕ್ಕಳಿಗೆ ಸಿಗುವಂತ್ತಾಗಬೇಕು ಈ ನಿಟ್ಟಿನಲ್ಲಿ ಪಾಂಡೇಶ್ವರ ಈ ಶಾಲೆಯ ಅಭಿವೃದ್ಧಿ ಅದಕ್ಕೆ ಬೇಕಾದ ಮೂಲಸೌಕರ್ಯಗಳ ಅನುಕೂಲತೆಯ ವಾತಾವರಣ ಸೃಷ್ಠಿಯಾಗಲಿ ತನ್ಮೂಲ ಇಡೀ ವ್ಯವಸ್ಥೆ ಮಾದರಿ ಶಾಲೆಯಾಗಿ ಅನುದಾನಿತ ವ್ಯವಸ್ಥೆಗೆ ಮುನ್ನುಡಿ ಬರೆಯಲಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಕರ್ನಾಟಕ ರಾಜ್ಯ ಪದವಿ ಪೂರ್ವ ಶಿಕ್ಷಣದ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಆಳ್ವಾಸ್ ಪದವಿ ಪೂರ್ವ ಕಾಲೇಜಿನ ವಿಜ್ಞಾನ, ವಾಣಿಜ್ಯ ಹಾಗೂ ಕಲಾ ವಿಭಾಗಗಳಲ್ಲಿ ಒಟ್ಟು 45 ವಿದ್ಯಾರ್ಥಿಗಳು ರಾಜ್ಯದ ಪ್ರಥಮ 10 ರ್ಯಾಂಕ್‍ಗಳಲ್ಲಿ ಸ್ಥಾನವನ್ನು ಪಡೆಯುವ ಮೂಲಕ ಸಂಸ್ಥೆಯು ಶೈಕ್ಷಣಿಕ ಕ್ಷೇತ್ರದಲ್ಲಿ ಸಾರ್ವತ್ರಿಕ ದಾಖಲೆಯನ್ನು ನಿರ್ಮಿಸಿದೆ. ವಿಜ್ಞಾನ ವಿಭಾಗದಲ್ಲಿ ಸಂಸ್ಥೆಯ ಬಿಂದು ನವಲೆ, ರಾಜ ಯದು ವಂಶಿ ಯಾದವ್ ಹಾಗೂ ವಿಜೇತ್ ಜಿ ಗೌಡ 598 ಅಂಕ ಗಳಿಸುವ ಮೂಲಕ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾರೆ. ಅಕ್ಷಯ್ ಎಂ. ಹೆಗ್ಡೆ ಹಾಗೂ ಪ್ರೇಕ್ಷಾ ಎಂ. ಎಸ್.  597 ಅಂಕಗಳೊಂದಿಗೆ ತೃತೀಯ ಸ್ಥಾನ, ಪದ್ಮಾವತಿ ಮಲ್ಲೇಶಪ್ಪ 596 ಅಂಕಗಳೊಂದಿಗೆ 4ನೇ ಸ್ಥಾನ, ದರ್ಶನ್ ಶೆಟ್ಟಿ 595 ಅಂಕಗಳೊಂದಿಗೆ 5ನೇ ಸ್ಥಾನ, ವೈಭವ್ ಎಂ, ಚೈತನ್ಯ, ಸ್ಪಂದನ 594 ಅಂಕಗಳೊಂದಿಗೆ 6ನೇ ಸ್ಥಾನ, ವರ್ಷ 593 ಅಂಕಗಳೊಂದಿಗೆ 7ನೇ ಸ್ಥಾನ, ನೇತ್ರಾ ಪಾಲ್, ಸೃಷ್ಟಿ, ಚಿನ್ಮಯಿ, ಪ್ರಣಾಮ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: 2024-25ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಕಾರ್ಕಳ ಕ್ರಿಯೇಟಿವ್ ಪದವಿಪೂರ್ವ ಕಾಲೇಜು ಸತತ 4ನೇ ವರ್ಷವೂ ಶೇಖಡಾ 100 ಫಲಿತಾಂಶದೊಂದಿಗೆ ಸಾರ್ವತ್ರಿಕ ದಾಖಲೆ ಸೃಷ್ಟಿಸಿದೆ. ಪರೀಕ್ಷೆ ಬರೆದ ಎಲ್ಲಾ 692 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲೇ ತೇರ್ಗಡೆ ಹೊಂದುವ ಮೂಲಕ ವಿಶೇಷ ಸಾಧನೆಗೈದಿದ್ದಾರೆ. ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಾದ ಮೇಘನಾ ಯು. ವೈ 594 ಅಂಕಗಳೊಂದಿಗೆ ರಾಜ್ಯಕ್ಕೆ 6ನೇ ಸ್ಥಾನ, ಅಮೃತ ಬಸವರಾಜ್ ಬಣಕಾರ್ 592 ಅಂಕಗಳೊಂದಿಗೆ ರಾಜ್ಯಕ್ಕೆ 8ನೇ ಸ್ಥಾನ, ಶ್ರೀನಿಧಿ ಡಿ 591 ಅಂಕಗಳೊಂದಿಗೆ ರಾಜ್ಯಕ್ಕೆ 9ನೇ ಸ್ಥಾನ, ಪ್ರಜ್ವಲ್ ಎಸ್. ಎನ್ 590 ಅಂಕಗಳೊಂದಿಗೆ ರಾಜ್ಯಕ್ಕೆ 10ನೇ ಸ್ಥಾನ, ತೇಜಸ್ ವಿ. ನಾಯಕ್ 590 ಅಂಕಗಳೊಂದಿಗೆ ರಾಜ್ಯಕ್ಕೆ 10ನೇ ಸ್ಥಾನ ಗಳಿಸಿದ್ದಾರೆ. ಒಟ್ಟು ಪರೀಕ್ಷೆಗೆ ಹಾಜರಾದ 592 ವಿದ್ಯಾರ್ಥಿಗಳಲ್ಲಿ 38 ವಿದ್ಯಾರ್ಥಿಗಳು 97% ಕ್ಕಿಂತ ಅಧಿಕ, 168 ವಿದ್ಯಾರ್ಥಿಗಳು 95%ಕ್ಕಿಂತ ಅಧಿಕ, 379 ವಿದ್ಯಾರ್ಥಿಗಳು 90% ಕ್ಕಿಂತ ಅಧಿಕ, ಹಾಗೂ…

Read More