ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಮೀನುಗಾರರು ಮೀನುಗಾರಿಕಾ ಚಟುವಟಿಕೆಗಳನ್ನು ಉತ್ತಮ ರೀತಿಯಲ್ಲಿ ಕೈಗೊಳ್ಳಲು ಅಗತ್ಯವಿರುವ ಮೂಲ ಸೌಕರ್ಯಗಳನ್ನು ಕಲ್ಪಿಸಲು ಸರ್ಕಾರ ಬದ್ದವಾಗಿದೆ. ಅದಕ್ಕೆ ಅಗತ್ಯವಿರುವ ಎಲ್ಲ ರೀತಿಯ ಅನುದಾನವನ್ನು ಸರ್ಕಾರವು ಕಲ್ಪಿಸಲಿದೆ ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಮಾಂಕಾಳ ವೈದ್ಯ ತಿಳಿಸಿದರು. ಅವರು ಮಲ್ಪೆಯ ಮೀನುಗಾರಿಕಾ ಬಂದರು ಆವರಣದಲ್ಲಿ ಮೀನುಗಾರಿಕೆ ಇಲಾಖೆ ವತಿಯಿಂದ ಆಯೋಜಿಸಲಾದ ಮಲ್ಪೆ ಮೀನುಗಾರಿಕಾ ಬಂದರಿನ ಆಧುನೀಕರಣ ಕಾಮಗಾರಿಯ ಶಂಕುಸ್ಥಾಪನೆ ನೆರವೇರಿಸಿ ಮಾತನಾಡುತ್ತಿದ್ದರು. ಜಿಲ್ಲೆಯಲ್ಲಿ 50 ಸಾವಿರಕ್ಕೂ ಹೆಚ್ಚು ಜನ ಮೀನುಗಾರಿಕೆ ಸೇರಿದಂತೆ ಅದಕ್ಕೆ ಪೂರಕವಾಗಿರುವ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ನನ್ನ ಕ್ಷೇತ್ರದ 20 ಸಾವಿರಕ್ಕೂ ಹೆಚ್ಚು ಜನ ಇಲ್ಲಿನ ಮೀನುಗಾರಿಕಾ ಚಟುವಟಿಕೆಗಳನ್ನು ಅವಲಂಬಿಸಿದ್ದಾರೆ. ಮಲ್ಪೆಯು ದೇಶದಲ್ಲಿಯೇ ಅತಿ ಹೆಚ್ಚು ಮೀನುಗಾರಿಕಾ ಉತ್ಪನ್ನಗಳನ್ನು ಮಾಡುವ ಬಂದರಾಗಿದ್ದು ಇಲ್ಲಿನ ಅಗತ್ಯ ಮೂಲಭೂತ ಸೌಕರ್ಯಗಳನ್ನು ಮೀನುಗಾರಿಕಾ ಚಟುವಟಿಕೆಗಳನ್ನು ಕೈಗೊಳ್ಳಲು ಅನುಕೂಲವಾಗುವ ರೀತಿಯಲ್ಲಿ ನಿರ್ಮಿಸಲು ನಮ್ಮ ಸರ್ಕಾರ ಬದ್ದವಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅನುದಾನವನ್ನು ಬಳಕೆ ಮಾಡುವುದರೊಂದಿಗೆ ಇಲ್ಲಿನ ಅಭಿವೃದ್ದಿ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ರಾಜ್ಯದ ಕುಟುಂಬಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಸೆ.22 ರಂದು ಪ್ರಾರಂಭಿಸಿದ್ದು ಸಮೀಕ್ಷೆ ಕಾರ್ಯವು ಪೂರ್ಣಗೊಳ್ಳದ ಕಾರಣ ಸರ್ಕಾರದ ಆದೇಶದಂತೆ ಅ.18 ರವರೆಗೆ ಸಮೀಕ್ಷೆ ಕಾರ್ಯವನ್ನು ಮುಂದೂಡಲಾಗಿರುತ್ತದೆ. ಈ ಸಮೀಕ್ಷೆ ಸಮಯದಲ್ಲಿ ಸಮೀಕ್ಷೆದಾರರು ತಮ್ಮ ವ್ಯಾಪ್ತಿಯ ಮನೆಗಳಿಗೆ ಭೇಟಿ ನೀಡದೆ ಬಿಟ್ಟು ಹೋದಲ್ಲಿ ರಾಜ್ಯ ಮಟ್ಟದ ಸಹಾಯವಾಣಿ 8050770004, ಜಿಲ್ಲಾ ಮಟ್ಟದ ಸಹಾಯವಾಣಿ 0820-2574881, ಉಡುಪಿ/ಬ್ರಹ್ಮಾವರ/ ಕಾಪು ಮಟ್ಟದ ಸಹಾಯವಾಣಿ 0820-2520739, ಬೈಂದೂರು/ಕುಂದಾಪುರ 9972294198, ಕಾರ್ಕಳ-ಹೆಬ್ರಿ 08258-298610 ಸಹಾಯವಾಣಿಗೆ ಕಚೇರಿ ಅವಧಿಯಲ್ಲಿ ಕರೆ ಮಾಡಿದಲ್ಲಿ ಸಮೀಕ್ಷೆದಾರರನ್ನು ಮನೆಗೆ ಕಳುಹಿಸಿ ಸಮೀಕ್ಷೆ ಕಾರ್ಯ ನಡೆಸಲಾಗುವುದು. ಕುಟುಂಬದ ಸದಸ್ಯರು ತಮ್ಮ ಮೊಬೈಲ್/ಲ್ಯಾಪ್ ಟಾಪ್ ನಲ್ಲಿ https://kscbcseldeclaration.karnataka.gov.in ಲಿಂಕ್ ಮೂಲಕ ಸ್ವಯಂ ನೋಂದಣಿಯನ್ನು ಮಾಡಿಕೊಳ್ಳಬಹುದು ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ ಆಶ್ರಯದಲ್ಲಿ ಎನ್ಎಸ್ಎಸ್ ಸ್ವಯಂಸೇವಕರಿಗೆ ಅಭಿವಿನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಸಂಸ್ಥೆಯ ಉಪ-ಪ್ರಾಂಶುಪಾಲ ಹಾಗೂ ನಿಕಟಪೂರ್ವ ಎನ್.ಎಸ್.ಎಸ್ ಕಾರ್ಯಕ್ರಮಾಧಿಕಾರಿ ಡಾ. ಚೇತನ್ ಶೆಟ್ಟಿ ಕೋವಾಡಿ ಮಾತನಾಡಿ, ಪದವಿ ಶಿಕ್ಷಣ ಸಂದರ್ಭದಲ್ಲಿ ಅನುಭವದ ಮೂಲಕ ಬದುಕಿನ ಶಿಕ್ಷಣ ಪಡೆಯಲು ಇರುವ ಮಹತ್ವದ ವೇದಿಕೆ ರಾಷ್ಟ್ರೀಯ ಸೇವಾ ಯೋಜನೆ. ಸಾಮಾಜಿಕ ಜವಾಬ್ದಾರಿ, ಸೇವಾ ಮನೋಭಾವ ಹಾಗೂ ದೇಶಪ್ರೇಮದ ಭಾವನೆಗಳನ್ನು ಎನ್.ಎಸ್.ಎಸ್. ಸ್ವಯಂಸೇವಕರು ಯೋಜನೆಯ ಮೂಲಕ ತಿಳಿಯಬಹುದು ಎಂದರು. ಇದೇ ಸಂದರ್ಭ ರಾಷ್ಟ್ರೀಯ ಸೇವಾ ಯೋಜನೆಯ ಹುಟ್ಟು, ಬೆಳವಣಿಗೆ ಹಾಗೂ ದೈನಂದಿನ ಕಾರ್ಯಚಟುವಟಿಕೆಗಳು ಮತ್ತು ವಾರ್ಷಿಕ ವಿಶೇಷ ಶಿಬಿರದ ಕುರಿತು ಮಾಹಿತಿ ನೀಡಿದರು. ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಕಾಲೇಜಿನ ಎನ್.ಎಸ್.ಎಸ್. ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಸಕ್ರಿಯವಾಗಿ ತೊಡಗಿಸಿಕೊಳ್ಳುವುದರ ಮೂಲಕ ಉತ್ತಮ ಜೀವನ ಮೌಲ್ಯಗಳನ್ನು ಕಟ್ಟಿಕೊಂಡು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಪರ್ಮಿಟ್ ಹೊಂದಿದ್ದರೂ ಕೆಎಸ್‌ಆರ್‌ಟಿಸಿ ಬಸ್ ಸೇವೆಯನ್ನು ಸ್ಥಗೀತಗೊಳಿಸಿ ತಾಲೂಕು ವ್ಯಾಪ್ತಿಯ ಗ್ರಾಮೀಣ ಭಾಗಗಳ ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ. ಕೋರ್ಟ್ ತಡೆ ಇರುವ ಮಾರ್ಗದ ನಿಲ್ದಾಣವನ್ನು ಹೊರತುಪಡಿಸಿ ಬಾಕಿ ಮಾರ್ಗಗಳಿಗೆ ಬಸ್ ಓಡಿಸುವ ವ್ಯವಸ್ಥೆ ಮಾಡಿ. ತಡೆ ನೆಪವೊಡ್ಡಿ ಸಾರ್ವಜನಿಕ ಸೇವೆ ವಿಳಂಬ ಮಾಡುತ್ತಿರುವುದು ಸರಿಯಲ್ಲ ಎಂದು ಬೈಂದೂರು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಮೋಹನ್ ಪೂಜಾರಿ ಹೇಳಿದರು. ಅವರು ಇಲ್ಲಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ಗ್ಯಾರಂಟಿ ಅನುಷ್ಠಾನ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರತಿ ಸಭೆಯಲ್ಲಿಯೂ ಕೆ.ಎಸ್.ಆರ್.ಟಿ.ಸಿ ಸಮಸ್ಯೆ ಬಗ್ಗೆ ಚರ್ಚಿಸಲಾಗುತ್ತಿದ್ದು, ಕಾರಣಗಳನ್ನಷ್ಟೇ ನೀಡುತ್ತಾ ಬರಲಾಗುತ್ತಿದೆ. ಆದರೆ ಯಾವೊಂದು ಕೆಲಸವೂ ಕಾರ್ಯರೂಪಕ್ಕೆ ಬಂದಿಲ್ಲ. ಇದರಿಂದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ. ಈ ವಿಳಂಬ ಧೋರಣೆ ಕೈಬಿಟ್ಟು ಬಸ್ ಸಂಚರಿಸಲು ಸೂಕ್ತ ವ್ಯವಸ್ಥೆ ಮಾಡಿ ಎಂದವರು ಅಧಿಕಾರಿಗಳಿಗೆ ತಾಕೀತು ಮಾಡಿದರು. ಬೈಂದೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣವನ್ನು ಮುಖ್ಯಮಂತ್ರಿಗಳು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಡಾ. ಶಿವರಾಮ ಕಾರಂತರ ಹೆಸರಿನ ಪ್ರಶಸ್ತಿ ಶ್ರೇಷ್ಠವಾದುದು. ಅವರ ಹೆಸರಿನಲ್ಲಿ ಪ್ರಶಸ್ತಿ ಸ್ವೀಕರಿಸಿದ ಎಲ್ಲಾ ಶಿಕ್ಷಕರು ಅಭಿನಂದನಾರ್ಹರು. ಶಿಕ್ಷಕರು ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಿದಾಗ ವಿದ್ಯಾರ್ಥಿಗಳು ಸಾಧನೆ ಮಾಡಲು ಸಾಧ್ಯ ಎಂದು ಉಡುಪಿ ಸರಕಾರಿ ಶಿಕ್ಷಣ ಮತ್ತು ಶಿಕ್ಷಕರ ತರಬೇತಿ ಸಂಸ್ಥೆಯ ಪ್ರಾಂಶುಪಾಲ ಡಾ. ಅಶೋಕ್ ಕಾಮತ್ ಹೇಳಿದರು. ಅವರು ಇತ್ತೀಚಿಗೆ ಕೋಟ ಕಾರಂತ ಥೀಂ ಪಾರ್ಕ್‌ನಲ್ಲಿ ಕಾರಂತ ಪ್ರತಿಷ್ಠಾನ, ಕೋಟತಟ್ಟು ಗ್ರಾಮ ಪಂಚಾಯಿತಿ, ಉಡುಪಿ ಹಾಜಿ ಅಬ್ದುಲ್ಲ ಸಾಹೇಬ್ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್ ಇನ್ನಿತರ ಸಂಘ ಸಂಸ್ಥೆಯ ಆಶ್ರಯದಲ್ಲಿ ನಡೆದ ಕೋಟ ಶಿವರಾಮ ಕಾರಂತ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು. ಸಮಾರಂಭವನ್ನು ಕೋಟ ಕಾರಂತ ಥೀಂ ಪಾರ್ಕ್‌ನಲ್ಲಿ ಕಾರಂತ ಪ್ರತಿಷ್ಠಾನದ ಕಾರ್ಯಧ್ಯಕ್ಷ ಆನಂದ ಸಿ. ಕುಂದರ್ ಉದ್ಘಾಟಿಸಿ ಮಾತನಾಡಿ, ಡಾ. ಶಿವರಾಮ ಕಾರಂತರು ಕೋಟದ ಹೆಮ್ಮೆಯ ಸುಪುತ್ರರು. ಅವರ ಹೆಸರಿನಲ್ಲಿ ಶಿಕ್ಷಕ ಪ್ರಶಸ್ತಿಯನ್ನು ನೀಡುತ್ತಿರುವುದು ಕಾರಂತ ಪ್ರತಿಷ್ಠಾನಕ್ಕೆ ಹೆಮ್ಮೆ ಎಂದರು. ಕೋಟತಟ್ಟು ಗ್ರಾಮ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಒಬ್ಬರು ಮಾಡುವ ಉತ್ತಮ ಕೆಲಸಗಳನ್ನು ಗುರುತಿಸಿ ಗೌರವಿಸಿದಾಗ ಅದು ಹೆಚ್ಚಿನ ಆತ್ಮ ಸಂತೋಷವನ್ನು ಇಬ್ಬರಿಗೂ ತಂದು ಕೊಡುತ್ತದೆ. ಇಂತಹ ಮೌಲ್ಯಗಳನ್ನು ನಾವು ನಿರಂತರವಾಗಿ ಕಾಪಾಡಿಕೊಳ್ಳಬೇಕು ಎಂದು ಲೇಖಕ ನರೇಂದ್ರ ಎಸ್. ಗಂಗೊಳ್ಳಿ ಅಭಿಪ್ರಾಯಪಟ್ಟರು. ಅವರು ತ್ರಾಸಿಯ ಮಿಲೆನಿಯಂ ಹಾಲ್‌ನಲ್ಲಿ ನಡೆದ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದಲ್ಲಿ ಇಲ್ಲಿನ ಯೋಜನಾಧಿಕಾರಿಯದ ಸುಗುಣ ಆರ್.ಕೆ ಅವರಿಗೆ ಎನ್ಎಸ್ಎಸ್ ಶಿಬಿರದ ಪ್ರಾಕ್ತನ ವಿದ್ಯಾರ್ಥಿಗಳು ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ರಾಷ್ಟ್ರೀಯ ಸೇವಾ ಯೋಜನಾಧಿಕಾರಿಯಾಗಿ ಹಲವು ವರ್ಷಗಳ ಕಾಲ ವಾರ್ಷಿಕ ವಿಶೇಷ ಶಿಬಿರಗಳನ್ನು ಯಶಸ್ವಿಯಾಗಿ ನಡೆಸಿಕೊಟ್ಟ ಅರ್ಥಶಾಸ್ತ್ರ ಉಪನ್ಯಾಸಕಿಯಾದ ಸುಗುಣ ಆರ್.ಕೆ ಅವರನ್ನು ವಿಶೇಷವಾಗಿ ಅಭಿನಂದಿಸಿ ಸನ್ಮಾನಿಸಲಾಯಿತು. ವಿಕಾಸ್, ದೇವಿ ಪ್ರಸಾದ್, ಸೃಜನ್, ಪ್ರೀತಂ, ಜಯಶ್ರೀ, ಪ್ರಜ್ಞಾ, ಸುಕ್ಷಿತ, ವಿಜೇತ, ಶಿವಾನಿ, ವೆಲಿಟಾ, ದೀಪ್ತಿ, ಸನ್ನಿಧಿ ಮತ್ತು ಶ್ರೇಯ ಉಪಸ್ಥಿತರಿದ್ದರು. ವಾಣಿಜ್ಯ ಶಾಸ್ತ್ರ ಉಪನ್ಯಾಸಕಿ ಅಕ್ಷಯ ಖಾರ್ವಿ ಶುಭ ಹಾರೈಸಿದರು. ಭಾರತಿ ನಿರೂಪಿಸಿ, ಸುಜನ್ ಖಾರ್ವಿ ಸ್ವಾಗತಿಸಿ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಾರ್ಕಳದ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರೌಢಶಾಲಾ ವಿಭಾಗದ ಬಾಲಕರ ಭಾರ ಎತ್ತುವ ಸ್ಪರ್ಧೆಯಲ್ಲಿ ಕೋಟ ವಿವೇಕ ಪದವಿಪೂರ್ವ ಕಾಲೇಜಿನ 10ನೇ ತರಗತಿಯ ವಿದ್ಯಾರ್ಥಿಗಳಾದ ಮನ್ವಿತ್ 79 KG ವಿಭಾಗದಲ್ಲಿ ಹಾಗೂ ರೋಶನ್ 56 KG ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಹುಬ್ಬಳ್ಳಿಯಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಆರ್ಟ್ಸ್ ಅಂಡ್ ಸೈನ್ಸ್ ಕಾಲೇಜಿನಲ್ಲಿ ವರ್ಡ್‌ಪ್ರೆಸ್ ಉಡುಪಿ ಸಮುದಾಯದ ಸಹಯೋಗದಲ್ಲಿ ಎರಡು ದಿನಗಳ ʼವರ್ಡ್‌ಪ್ರೆಸ್ ಕ್ಯಾಂಪಸ್ ಕನೆಕ್ಟ್ʼ ಶಿಬಿರವು ಯಶಸ್ವಿಯಾಗಿ ಜರುಗಿತು. ಕಂಪ್ಯೂಟರ್ ಸೈನ್ಸ್ ವಿಭಾಗದ ಒಟ್ಟು 120 ವಿದ್ಯಾರ್ಥಿಗಳು ಈ ಶಿಬಿರದಲ್ಲಿ ಭಾಗವಹಿಸಿದ್ದು, ವರ್ಡ್‌ಪ್ರೆಸ್ ಬಳಸಿ ವೆಬ್‌ಸೈಟ್ ನಿರ್ಮಾಣದ ಪ್ರಾಯೋಗಿಕ ತರಬೇತಿಯನ್ನು ನೀಡಲಾಯಿತು. ಕಾರ್ಯಕ್ರಮವನ್ನು ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ಅವರು ವಿದ್ಯಾರ್ಥಿಗಳು ಮುಕ್ತ ತಂತ್ರಜ್ಞಾನಗಳ ಸಹಾಯದಿಂದ ಹೊಸ ಸೃಜನಾತ್ಮಕ ಪ್ರಯತ್ನಗಳಿಗೆ ಕೈಹಾಕಬೇಕು ಎಂದು ಪ್ರೇರೇಪಿಸಿದರು. ಕಾರ್ಯಕ್ರಮದ ಯಶಸ್ಸಿಗೆ ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥ ಗಣೇಶ್ ಕೆ. ಅವರ ಮಾರ್ಗದರ್ಶನದಲ್ಲಿ ವಿಜಯಲಕ್ಷ್ಮಿ ಎನ್. ಶೆಟ್ಟಿ, ರಾಮಚಂದ್ರ ಆಚಾರಿ, ಹಾಗೂ ಚೇತನಾ (ಕಾರ್ಯಕ್ರಮ ಸಂಯೋಜಕಿ) ಅವರು ಶ್ರಮಿಸಿದರು. ವರ್ಡ್‌ಪ್ರೆಸ್ ಉಡುಪಿ ತಂಡದಿಂದ ಶಶಿಕಾಂತ್ ಶೆಟ್ಟಿ (ಸ್ಥಾಪಕ, SabWeb), ಕೆ. ಕೀರ್ತಿ ಪ್ರಭು (ಸೀನಿಯರ್ ಟೆಸ್ಟರ್, QualityKiosk, ಮುಂಬೈ), ಹಾಗೂ ವಿ. ಗೌತಮ್ ನಾವಡ (ಸ್ಥಾಪಕ ಮತ್ತು ನಿರ್ದೇಶಕ, ForthFocus) ಶಿಬಿರವನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕಲೆ, ಸಂಗೀತ, ಭರತನಾಟ್ಯ, ಯಕ್ಷಗಾನದಂತಹ ಕ್ಷೇತ್ರ ಕಲೆಗಳು ಸಂಸ್ಕಾರ ನೀಡುವುದರೊಂದಿಗೆ ನಮ್ಮ ಸಂಸ್ಕ್ರತಿಯನ್ನು ತಿಳಿಸಿಕೊಡುತ್ತದೆ ಎಂದು ಎಡನೀರು ಮಠದ ಮಠಾಧೀಶ ಸಚ್ಚಿದಾನಂದ ಭಾರತೀ ಸ್ವಾಮೀಜಿ ಹೇಳಿದರು. ಅವರು ಗುಂಡ್ಮಿಯ ಸದಾನಂದ ರಂಗ ಮಂಟಪದಲ್ಲಿ ಹಂಗಾರಕಟ್ಟೆ ಐರೋಡಿಯ ಯಕ್ಷಗಾನ ಕಲಾಕೇಂದ್ರದ ವತಿಯಿಂದ ನಡೆಯುತ್ತಿರುವ ನಾಲ್ಕನೇ ವರ್ಷದ ಯಕ್ಷಗಾನ ಸಪ್ತೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದರು. ಪ್ರೇಕ್ಷಕರನ್ನು ಸೆಳೆಯುವ ಪ್ರಯತ್ನ ಮತ್ತು ವಾಣಿಜ್ಯಕರಣದಿಂದ ಯಕ್ಷಗಾನ ಕಲೆಯ ಮೂಲ ಸ್ವರೂಪ ಮರೆಯಾಗುತ್ತಿದೆ. ಯಕ್ಷಗಾನ ಕಲಾಕೇಂದ್ರಗಳ ಮೂಲಕ ಯಕ್ಷಗಾನ ಕಲೆಯ ಮೂಲ ಸ್ವರೂಪ ಉಳಿದುಕೊಂಡಿರುವುದು ಶ್ಲಾಘನೀಯ ಎಂದರು. ಅನುಸರಣೆ, ಅನುಕರಣೆ ಮಾಡುವ ಎರಡು ಬಗೆಯ ಕಲಾವಿದರನ್ನು ನಾವು ಕಾಣುತ್ತಿದ್ದೇವೆ. ಇದರಲ್ಲಿ ಗುರುವಿನ ಮೂಲಕ ಅನುಕರಣೆ ಮಾಡಿ ಕಲಿತ ಕಲಾವಿದರು ಶಾಶ್ವತರಾಗಿರುತ್ತಾರೆ ಎಂದ ಅವರು ಕರಾವಳಿಯ ಜನತೆ ಯಕ್ಷಗಾನದ ಮೂಲಕ ಸಂಸ್ಕಾರವಂತರಾಗಿದ್ದಾರೆ. ಇಂತಹ ಸಂಸ್ಕಾರ ನೀಡುವ ಕಲೆಯನ್ನು ಉಳಿಸಿ ಪ್ರೋತ್ಸಾಹಿಸಬೇಕು ಅಲ್ಲದೇ ಎಲ್ಲ ಕಡೆ ಇಂತಹ ಕಲಾಕೇಂದ್ರಗಳು ಹುಟ್ಟಿಕೊಳ್ಳಬೇಕು ಎಂದು ಹೇಳಿದರು. ಕಲಾಕೇಂದ್ರದ ಅಧ್ಯಕ್ಷ ಆನಂದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬ್ರಹ್ಮಾವರ: ಗ್ರಾಮಾಭಿವೃದ್ಧಿ ಮತ್ತು ಸ್ವ ಉದ್ಯೋಗ ತರಬೇತಿ (ರುಡ್ ಸೆಟ್) ಸಂಸ್ಥೆ ಬ್ರಹ್ಮಾವರ ಇವರ ಆಶ್ರಯದಲ್ಲಿ ಉದ್ಯಮ ಶೀಲಾತಬಿವೃದ್ಧಿ ತರಬೇತಿಯ ಉದ್ಘಾಟನಾ ಸಮಾರಂಭವು ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಬ್ರಹ್ಮಾವರ ಕೌಶಲ್ಯ ಬ್ಯೂಟಿ ಪಾರ್ಲರ್ ಮಾಲಕರು ಹಾಗೂ ಬ್ಯೂಟಿ ಪಾರ್ಲರ್ ತರಬೇತಿಯ ಅತಿಥಿ ಉಪನ್ಯಾಸಕಿ ಶಕೀಲಾ ಹೆಗ್ಡೆ ಮಾತನಾಡಿ, ಉದ್ಯಮದಲ್ಲಿ ಯಾವುದೇ ಕ್ಷೇತ್ರವಾದರೂ ಸರಿಯೇ ಮುಖ್ಯವಾಗಿ ಮಾಡುವ ಕೆಲಸದ ಮೇಲೆ ಪ್ರೀತಿಯಿರಬೇಕು. ಮೊಟ್ಟ ಮೊದಲಿಗೆ ನಮ್ಮನ್ನು ನಾವು ಪ್ರೀತಿಸಬೇಕು, ಆಗ ನಮ್ಮ ಕೆಲಸದ ಮೇಲೆ ನಮಗೆ ಆಸಕ್ತಿ, ಖುಷಿರುತ್ತದೆ. ಏನೇ ತೊಂದರೆಗಳು ಬಂದರೂ ಅವುಗಳನ್ನು ನಿಶ್ಚಿಂತೆಯಿಂದ ಹೋಗಲಾಡಿಸಿ, ಗುರಿ ಸಾಧಿಸುವಲ್ಲಿ ನಾವು ಸಫಲತೆಯನ್ನು ಕಂಡುಕೊಳ್ಳಲು ಸಾಧ್ಯವಾಗುತ್ತದೆ. ಮಹಿಳೆಯರನ್ನು ಅತ್ಯಂತವಾಗಿ ಆಕರ್ಷಿಸುವ ಕ್ಷೇತ್ರವಾಗಿರುವುದು ವಸ್ತ್ರ ವಿನ್ಯಾಸ. ಟೈಲರಿಂಗ್, ಬ್ಯೂಟಿ ಪಾರ್ಲರ್ ಮುಂತಾದ ಅನೇಕ ಕ್ಷೇತ್ರಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಆರ್ಥಿಕವಾಗಿ ಮುಂದೆ ಬರಲು ಸಾಕಷ್ಟು ಅವಕಾಶಗಳು ಇಂದಿನ ಸಾಮಾಜಿಕ ವ್ಯವಸ್ಥೆಯಲ್ಲಿದೆ. ಸರಕಾರದಿಂದ ಹಲವು ಉತ್ತಮ ಸೌಲಭ್ಯಗಳು ಮಹಿಳೆಯರ ಅಭಿವೃದ್ಧಿಗಾಗಿ ಇವೆ,…
