Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸರ್‌ಎಂ ವಿಶ್ವೇಶ್ವರಯ್ಯನವರ ಜನ್ಮದಿನಾಚರಣೆ ಪ್ರಯುಕ್ತ ದೇಶದಾದ್ಯಂತ ಆಚರಿಸುತ್ತಿರುವ ಇಂಜಿನಿಯರ್ಸ್ ಡೇ ಕಾರ್ಯಕ್ರಮವನ್ನು ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ನವರು ಸೋಮವಾರದಂದು ಆರ್. ಎನ್. ಶೆಟ್ಟಿ ಸಭಾಂಗಣದಲ್ಲಿ ನಡೆಸಿದರು. ಮೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಯಶವಂತ ಅವರನ್ನು ಲಯನ್ಸ್ ಕ್ಲಬ್‌ನ ಹಿರಿಯ ಸದಸ್ಯರು, ನಿವೃತ್ತ ಬ್ಯಾಂಕ್ ಉದ್ಯೋಗಿ ಹಳ್ನಾಡು ಬಿ. ಜಯರಾಮ ಶೆಟ್ಟಿ ಅವರು ಫಲ ಪುಷ್ಪ ನೀಡಿ ಸನ್ಮಾನಿಸಿ ಗೌರವಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಂದಾಪುರ ಕೋಸ್ಟಲ್‌ನ ಅಧ್ಯಕ್ಷರಾದ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ವಲಯಾಧ್ಯಕ್ಷರಾದ ವಸಂತರಾಜ ಶೆಟ್ಟಿ, ಸ್ಥಾಪಕ ಅಧ್ಯಕ್ಷ ಅಶೋಕ ಶೆಟ್ಟಿ ಸಂಸಾಡಿ, ಹೈದರಾಬಾದ್ ಹೋಟೆಲ್ ಉದ್ಯಮಿ ನೆಲಗೊಂಡ ಸುಧಾಕರ ಶೆಟ್ಟಿ ಜನ್ಸಾಲೆ, ಬೈಂದೂರು ಬಂಟರ ಸಂಘದ ಮಾಜಿ ಅಧ್ಯಕ್ಷರಾದ ಶಶಿಧರ ಶೆಟ್ಟಿ ಸಾಲ್ಗದ್ದೆ, ಪಶು ವೈದ್ಯ ಡಾ. ಪ್ರಶಾಂತ್ ಶೆಟ್ಟಿ ಮುಖ್ಯ ಅತಿಥಿಗಳಾಗಿ ಆಗಮಿಸಿದರು. ನಿಕಟ ಪೂರ್ವ ಅಧ್ಯಕ್ಷ ಉದಯ್ ಶೆಟ್ಟಿ ಮಚ್ಚಟ್ಟು, ಪ್ರಕಾಶ ಶೆಟ್ಟಿ ಚೋರ್ಮಕ್ಕಿ, ಗಣೇಶ್ ಬೈಂದೂರು,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಬೈಂದೂರು ವಿಧಾನ ಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ವಂಡ್ಸೆ ಹೋಬಳಿ ಹಾಗೂ ಬೈಂದೂರು ಹೋಬಳಿಯ ಅರ್ಹ ಎಲ್ಲಾ 94ಸಿ ಅರ್ಜಿಗಳನ್ನು  ಕಂದಾಯ ಇಲಾಖೆಯ ಅಧಿಕಾರಿಗಳ ಸಹಕಾರದೊಂದಿಗೆ ವಿಲೇವಾರಿ ಮಾಡಲಾಗಿದೆ. ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರು ವಂಡ್ಸೆ ಹೋಬಳಿಯ 94ಸಿ ಕಡತಗಳ ಬಗ್ಗೆ ತಾಲೂಕು ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ, ಮಾತನಾಡಿ, ಕಳೆದ ಎರಡು ವರ್ಷ ಗಳಲ್ಲಿ ಸುಮಾರು 800 ಹಕ್ಕು ಪತ್ರಗಳನ್ನು ವಿತರಿಸಲಾಗಿದೆ ಎಂದರು. ಭಾಗಶಃ ಡೀಮ್ಡ್ ವ್ಯಾಪ್ತಿಯಲ್ಲಿ ವಂಡ್ಸೆ ಹೋಬಳಿಯ 460 & ಬೈಂದೂರು ಹೋಬಳಿಯ 117 ಅರ್ಜಿಗಳು ಹಾಗೂ ಕುಮ್ಕಿ ವ್ಯಾಪ್ತಿಯಲ್ಲಿ ವಂಡ್ಸೆ ಹೋಬಳಿಯಲ್ಲಿ 936 ಅರ್ಜಿಗಳು ಹಾಗೂ ಬೈಂದೂರು ಹೋಬಳಿಯಲ್ಲಿ 248 ಅರ್ಜಿಗಳು ಇರುವುದಾಗಿದೆ. ಭಾಗಶಃ ಡೀಮ್ಡ್ ಫಾರೆಸ್ಟ್ ಅರ್ಜಿಗಳನ್ನು ಅರಣ್ಯ ಇಲಾಖೆಯ ಜಂಟಿ ಸರ್ವೇ ಮೂಲಕ ವಿಲೇವಾರಿ ಮಾಡುವ ಪ್ರಕ್ರಿಯೆ ಯನ್ನು ತ್ವರಿತ ಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಉಳಿದಂತೆ ಕುಮ್ಕಿ ವ್ಯಾಪ್ತಿಯಲ್ಲಿನ 94 ಸಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಪ್ರಯುಕ್ತ ಶಾಲಾ ಶಿಕ್ಷಣ ಇಲಾಖೆ, ಉಡುಪಿ ಜಿಲ್ಲಾ ಪಂಚಾಯತ್ ಆಶ್ರಯದಲ್ಲಿ ನಡೆದ ಬ್ಲಾಕ್ ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಗಂಗೊಳ್ಳಿಯ ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಏಳನೆಯ ತರಗತಿಯ ವಿದ್ಯಾರ್ಥಿ ಸಂಜಿತ್ ಎಂ. ದೇವಾಡಿಗ ಪ್ರಥಮ ಸ್ಥಾನವನ್ನು ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ. ಈತ ಗಂಗೊಳ್ಳಿಯ ಚಿತ್ರಕಲಾ ಶಿಕ್ಷಕ ಮಾಧವ ದೇವಾಡಿಗ ಮತ್ತು ಉಪನ್ಯಾಸಕಿ ಸಾವಿತ್ರಿ ಎಸ್. ದಂಪತಿ ಪುತ್ರ. ವಿದ್ಯಾರ್ಥಿಯ ಈ ಸಾಧನೆಗೆ ಶಾಲಾ ಎಸ್‌ಡಿಎಂಸಿ ಬಳಗ, ಮುಖ್ಯೋಪಾಧ್ಯಾಯರು, ಬೋಧಕ ಮತ್ತು ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಚರ್ಮ ಕುಶಲಕರ್ಮಿಗಳ ಸರ್ವತೋಮುಖ ಅಭಿವೃದ್ಧಿüಗಾಗಿ ಡಾ. ಬಾಬು ಜಗಜೀವನ್ ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನ ಕ್ರಿಯಾ ಯೋಜನೆಯಡಿಯಲ್ಲಿ ಅನುಷ್ಠಾನಗೊಳಿಸಲಾದ ವಿವಿಧ ಆರ್ಥಿಕ ಅಭಿವೃದ್ಧಿ ಯೋಜನೆಗಳ ಸೌಲಭ್ಯ ಪಡೆಯಲು ಅರ್ಹ ಪರಿಶಿಷ್ಟ ಜಾತಿಯ ಚರ್ಮ ಕುಶಲಕರ್ಮಿಗಳಿಂದ ಸೇವಾಸಿಂಧು ಪೋರ್ಟಲ್ https://sevasindhu.karnataka.gov.in/, https://sevasindhuservices.karnataka.gov.in ಮೂಲಕ ಬೆಂಗಳೂರು ಒನ್, ಕರ್ನಾಟಕ ಒನ್ ಮತ್ತು ಗ್ರಾಮ ಒನ್ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 8 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ನಿಗಮದ ಜಿಲ್ಲಾ ಸಂಯೋಜಕರು, ಉಡುಪಿ ಮೊಬೈಲ್ ಸಂ: 9880486220, 6362891017 ಅನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ಸಂಯೋಜಕರ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷಾ ಕಾರ್ಯವು ಇಂದಿನಿಂದ (ಸೆಪ್ಟಂಬರ್ 15) 45 ದಿನಗಳ ಕಾಲ ನಡೆಯಲಿದ್ದು, ಸಮೀಕ್ಷಾ ಕಾರ್ಯದಲ್ಲಿ ಯಾವುದೇ ಲಿಂಗತ್ವ ಅಲ್ಪಸಂಖ್ಯಾತರು ಸಮೀಕ್ಷೆಯಲ್ಲಿ ಬಿಟ್ಟು ಹೋಗದಂತೆ ಸಮೀಕ್ಷಾ ಕಾರ್ಯವನ್ನು ಯಶಸ್ವಿಗೊಳಿಸಬೇಕು ಎಂದು ಅಧಿಕಾರಿಗಳಿಗೆ ಹಾಗೂ ಸಮೀಕ್ಷಾದಾರರಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಬೇಸ್ ಲೈನ್ ಸರ್ವೇ ನಡೆಸುವ ಕುರಿತು ನಡೆದ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನ ಸಮಿತಿಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಲಿಂಗತ್ವ ಅಲ್ಪಸಂಖ್ಯಾತರ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸ್ಥಿತಿಗತಿ ಕುರಿತಂತೆ ನಿಖರ ಮಾಹಿತಿ ಸಂಗ್ರಹಿಸಿ, ಮುಂದಿನ ದಿನಗಳಲ್ಲಿ ಲಿಂಗತ್ವ ಅಲ್ಪಸಂಖ್ಯಾತರಿಗೆ ಸರ್ಕಾರದಿಂದ ಲಭ್ಯವಿರುವ ಯೋಜನೆ ಹಾಗೂ ಸವಲತ್ತುಗಳನ್ನು ಸೂಕ್ತ ರೀತಿಯಲ್ಲಿ ತಲುಪಿಸಲು ಹಾಗೂ ಬಜೆಟ್‌ನಲ್ಲಿ ಅನುದಾನ ಮೀಸಲಿರಿಸಲು ಈ ಸಮೀಕ್ಷೆಯು ಅನುಕೂಲವಾಗಲಿದೆ ಎಂದರು. ಜಿಲ್ಲೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆಯು ಸರ್ಕಾರಿ ರಜಾ ದಿನಗಳನ್ನು ಹೊರತುಪಡಿಸಿ,…

Read More

ಕುಂದಾಪ್ರ ಡಾಟ್‌ ಕಾಂಸುದ್ದಿ.ಕೋಟ: ಧ್ವನಿ ವರ್ಧಕ ಬಳಕೆಯ ಕಾರಣಕ್ಕೆ ಯಕ್ಷಗಾನ ಮೇಳಗಳ ಪ್ರದರ್ಶನಕ್ಕೆ ಅಡ್ಡಿಯಾಗುತ್ತಿರುವ ಪ್ರಸಂಗಗಳು ಎದುರಾಗುತ್ತಿರುವುದರಿಂದ ಬಡಗುತಿಟ್ಟಿನ ಬಹುತೇಕ ಮೇಳಗಳ ಯಜಮಾನರು, ಮುಖ್ಯಸ್ಥರು ರವಿವಾರ ಕೋಟ ಈ ಅಮೃತೇಶ್ವರೀ ದೇಗುಲದಲ್ಲಿ ಸಭೆ ನಡೆಸಿ ಪರಿಹಾರ ಸೂತ್ರಗಳ ಬಗ್ಗೆ ಭಾನುವಾರ ಚರ್ಚಿಸಿದರು. ಕೋಟದ ಶ್ರೀ ಅಮೃತೇಶ್ವರೀ ಯಕ್ಷಗಾನ ಮೇಳದ ಯಜಮಾನರಾದ ಆನಂದ್ ಸಿ. ಕುಂದರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕೆಲ ತಿರ್ಮಾನಗಳನ್ನು ಕೈಗೊಳ್ಳಲಾಯಿತು. ಈ ಬಗ್ಗೆ ವಿವಿಧ ಮೇಳಗಳ ಯಜಮಾನರಾದ ಮಂದಾರ್ತಿ ಧನಂಜಯ ಶೆಟ್ಟಿ ಅಮೃತೇಶ್ವರಿ ಮೇಳದ ಯಜಮಾನರಾದ ಆನಂದ ಸಿ. ಕುಂದರ್, ಮಾರಣಕಟ್ಟೆ ಮೇಳದ ಸದಾಶಿವ ಶೆಟ್ಟಿ, ರಘುರಾಮ್ ಶೆಟ್ಟಿ ಮಡಾಮಕ್ಕಿ ಮೇಳದ ಶಶಿಧರ ಶೆಟ್ಟಿ, ಹಾಲಾಡಿ ಮೇಳದ ಅಮರನಾಥ ಶೆಟ್ಟಿ ಗೋಳಿಗರಡಿ ಮೇಳದ ವಿಟ್ಠಲ ಪೂಜಾರಿ, ಆಜ್ರಿ ಮೇಳದ ಅಶೋಕ್ ಶೆಟ್ಟಿ ತಮ್ಮ ತಮ್ಮ ಅಭಿಪ್ರಾಯಗಳನ್ನು ತಿಳಿಸಿದರು. ಪಿ. ಕಿಶನ್ ಹೆಗ್ಡೆ ಮಾತನಾಡಿ, ರಾತ್ರಿ ವೇಳೆ ಧ್ವನಿವರ್ಧಕ ಬಳಕೆಗೆ ಅನುಮತಿ ನಿರಾಕರಿಸಿ ಪ್ರದರ್ಶನವನ್ನು ಸ್ಥಗಿತಗೊಳಿಸುವ ಪ್ರಸಂಗಗಳು ಅಲ್ಲಲ್ಲಿ ನಡೆಯುತ್ತಿದೆ.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಪದವಿಪೂರ್ವ ಶಿಕ್ಷಣ ಇಲಾಖೆಯವರು ಆಯೋಜಿಸಿದ ತಾಲ್ಲೂಕು ಮಟ್ಟದ ಬಾಲಕರ ವಾಲಿಬಾಲ್ ಪಂದ್ಯಾಟದಲ್ಲಿ ಜನತಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ತಾಲ್ಲೂಕು ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ,ಬೋಧಕೇತರ ವೃಂದದವರು

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯು ಜಿ.ಎಸ್.ಬಿ. ಮಹಿಳಾ ಮಂಡಳಿ, ಪುತ್ತೂರು ಇವರ ಸಹಯೋಗದಲ್ಲಿ ಆದಿತ್ಯವಾರದಂದು ಕೊಂಕಣಿ ರಂಗ ತರಂಗ ಮತ್ತು ಸಾಹಿತ್ಯ ಸಂಭ್ರಮ-3 ಕಾರ್ಯಕ್ರಮವನ್ನು ಪುತ್ತೂರಿನ ಸುಕ್ರತೀಂದ್ರ ಕಲಾಮಂದಿರದಲ್ಲಿ ಜರುಗಿತು. ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಧರ್ಮದರ್ಶಿ ವ್ಯವಸ್ಥಾಪಕರಾದ ಡಾ. ಆಶೋಕ್ ಪ್ರಭು ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿ, ʼಪ್ರಸ್ತುತ ಕಾಲದಲ್ಲಿ ಕೊಂಕಣಿ ಭಾಷೆಯನ್ನು ಬಳಸುವುದು ಕಡಿಮೆಯಾಗುತ್ತಿದೆ. ಆದ್ದರಿಂದ ಕೊಂಕಣಿ ಮಾತಾನಾಡುವುದನ್ನು ಮನೆಯಿಂದಲೇ ಪ್ರಾರಂಭಿಸಬೇಕು. ಆಗ ಮಾತ್ರ ಕೊಂಕಣಿ ಭಾಷೆಯನ್ನು ಬೆಳೆಸಬಹುದುʼ ಎಂದರು. ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಜೋಕಿಂ ಸ್ಟ್ಯಾನಿ ಆಲ್ವಾರಿಸ್ರ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ʼಕರ್ನಾಟಕ ಸರ್ಕಾರವು ಸಾಹಿತ್ಯ, ಕಲೆ, ಜಾನಪದ ಕ್ಷೇತ್ರದ ಬೆಳವಣಿಗಾಗಿ ಕೊಂಕಣಿ ಸಾಹಿತ್ಯ ಅಕಾಡೆಮಿಯ ರಚನೆ ಮಾಡಿದೆ. ಅಕಾಡೆಮಿಯು ಜನರ ಹತ್ತಿರ ಹೋಗಿ, ಜನರಿಗೆ ಅಕಾಡೆಮಿಯ ಬಗ್ಗೆ ಪರಿಚಯಿಸಿ ಸಾಹಿತ್ಯ, ಕಲೆ, ಜಾನಪದ ಕ್ಷೇತ್ರದಲ್ಲಿ ದುಡಿದವರನ್ನು ಹತ್ತಿರ ತರಲು ಪ್ರಯತ್ನಿಸುತ್ತಿದೆʼ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಉಡುಪಿ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕುಂದಾಪುರ ಹಾಗೂ ಕರ್ನಾಟಕ ಪಬ್ಲಿಕ್ ಸ್ಕೂಲ್ ಕೋಟೇಶ್ವರ ಇವರ ಸಂಯುಕ್ತಾಶ್ರಯದಲ್ಲಿ ನಡೆದ, ಕುಂದಾಪುರ  ತಾಲೂಕು ಮಟ್ಟದ 17ರ ವಯೋಮಾನದ ಬಾಲಕರ ಫುಟ್ ಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ಬಾಲಕರ ತಂಡವು ಪ್ರಥಮ ಸ್ಥಾನ ಪಡೆದು  ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಅವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ, ಹಾಗೂ ಸೈಂಟ್ ಮೇರಿಸ್ ಪದವಿ ಪೂರ್ವ ಕಾಲೇಜು ಶಿರ್ವ ಇವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಫುಟ್ಬಾಲ್ ಪಂದ್ಯಾಟದಲ್ಲಿ ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡವು ಕಾರ್ಕಳ ತಾಲೂಕು ತಂಡವನ್ನು ಪ್ರತಿನಿಧಿಸಿ, ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.  ವಿದ್ಯಾರ್ಥಿನಿಯಾರಾದ ಮಾನಸ ವಿ. ನಾಯಕ್, ಹರ್ಷಿತ ವಿ. ನಾಯಕ್, ಆದ್ಯ ಎಸ್. ಪಡ್ರೆ, ಆರುಷಿ, ಪೂರ್ವಿ ಎಸ್. ಕಡಕೋಲ್ಮಠ ರಾಜ್ಯಮಟ್ಟಕ್ಕೆ ಆಯ್ಕೆಯಾಗಿ ಕಾಲೇಜಿಗೆ ಕೀರ್ತಿ ತಂದಿರುತ್ತಾರೆ. ವಿಜೇತ ವಿದ್ಯಾರ್ಥಿನಿಯರ ಸಾಧನೆಗೆ ಆಡಳಿತ ಮಂಡಳಿ, ಬೋಧಕ – ಬೋಧಕೇತರ ವರ್ಗದವರು ಅಭಿನಂದಿಸಿ ಶುಭ ಹಾರೈಸಿದ್ದಾರೆ.

Read More