ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಸುಣ್ಣಾರಿಯ ಎಕ್ಸಲೆಂಟ್ ಪ್ರೌಢಶಾಲೆ ವಿಭಾಗದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಸಿದ್ಧತಾ ಕಾರ್ಯಾಗಾರವು ಕುಂದಾಪುರ ಜೆ.ಸಿ.ಐ ಸಹಭಾಗಿತ್ವದಲ್ಲಿ ಶಾಲಾ ವಠಾರದಲ್ಲಿ ಜರುಗಿತು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಡಾ. ಜಗದೀಶ್ ಜೋಗಿ ಅವರು ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳನ್ನು ಹುರಿದುಂಬಿಸಿ ವಿದ್ಯಾರ್ಥಿಗಳ ಪರೀಕ್ಷಾ ಆತಂಕವನ್ನು ದೂರಮಾಡುತ್ತಾ ಸಮಯವು ಅತ್ಯಂತ ಮಹತ್ವಪೂರ್ಣವಾಗಿದ್ದು, ಕಳೆದು ಹೋದ ಸಮಯ ಮರಳಿಬಾರದು, ಎನ್ನುವ ಕಟುಸತ್ಯವನ್ನು ಅರಿತು ಶಿಸ್ತುಬದ್ಧವಾದ ಅಧ್ಯಯನ ನಡೆಸಬೇಕೆಂದರು. ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಅಧ್ಯಯನ ವೇಳಾಪಟ್ಟಿ ಹಾಕಿಕೊಂಡು ನಿರಂತರ ಓದುವುದು ಮತ್ತು ಓದಿದ ವಿಚಾರ ಹೆಚ್ಚು ಮನನ ಮಾಡಿಕೊಳ್ಳುವುದರಿಂದ ನೆನಪಿನಲ್ಲಿ ಇಟ್ಟುಕೊಳ್ಳಲು ಸಾಧ್ಯವೆಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಜೆ.ಸಿ.ಐ ಕುಂದಾಪುರ ಇದರ ಕಾರ್ಯದರ್ಶಿಗಳಾದ ಕಾರ್ತಿಕ್ ಶೆಟ್ಟಿ ಪ್ರಾಸ್ತವಿಕವಾಗಿ ಮಾತನಾಡಿದರು. ಜೆ.ಸಿ.ಐ ಕುಂದಾಪುರ ಇದರ ಅಧ್ಯಕ್ಷರಾದ ಸುಧಾಕರ್ ಕಾಂಚನ್ ಜೆ.ಸಿ.ಐ ನ ಸಮಾಜ ಸೇವೆಯ ಬಗ್ಗೆ ಮಾತನಾಡಿ ವಿದ್ಯಾರ್ಥಿಗಳು ಕ್ರಮಬದ್ಧವಾಗಿ ಓದಿ ಹೆಚ್ಚು ಅಂಕಗಳಿಸುವಂತಾಗಲಿ ಎಂದು ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ, ಎಕ್ಸಲೆಂಟ್ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಅಂಬೇಡ್ಕರ್ ಅವರು ಒಂದು ಸಮುದಾಯದಲ್ಲಿ ಜನಿಸಿದರೂ ಅವರ ಕೊಡುಗೆ, ವ್ಯಕ್ತಿತ್ವ, ಸಾಧನೆ ಕೇವಲ ಒಂದು ಸಮುದಾಯಕ್ಕೆ ಸೀಮಿತವಾಗಿಲ್ಲ. ಅಂಬೇಡ್ಕರ್ ಅವರನ್ನು ಓದಿನ ಮೂಲಕ ಅರಿಯುವುದರಿಂದ ಮಾತ್ರ ನಿಜ ವ್ಯಕ್ತಿತ್ವ ಅರಿವಾಗುವುದು ಎಂದು ದಸಂಸ ಜಿಲ್ಲಾ ಸಂಚಾಲಕ ಮಂಜುನಾಥ ಗಿಳಿಯಾರ್ ಹೇಳಿದರು. ಅವರು ಇಲ್ಲಿನ ಅಂಬೇಡ್ಕರ್ ಭವನದಲ್ಲಿ ಸಮುದಾಯ ಕುಂದಾಪುರ ಸಾಂಸ್ಕೃತಿಕ ಸಂಘಟನೆ ನೇತೃತ್ವದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ, ಬುದ್ದಿಸ್ಟ್ ಸೊಸೈಟಿ ಆಫ್ ಇಂಡಿಯಾ ಸಹಯೋಗದೊಂದಿಗೆ ಆಯೋಜಿಸಲಾದ ಉಡುಪಿ ಜಿಲ್ಲಾ ಮಟ್ಟದ ಅಂಬೇಡ್ಕರ್ ಓದು – ಸ್ವರ್ಧಾ ಕಾರ್ಯಕ್ರಮದಲ್ಲಿ ಮಾತನಾಡಿ ದೇಶದ ಆಡಳಿತದಲ್ಲಿ ಅಂಬೇಡ್ಕರ್ ತನ ಹಾಸುಹೊಕ್ಕಾಗಿದೆ ಎಂದರು. ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎಸ್. ಕಾಂತರಾಜ್ ಅಧ್ಯಕ್ಷತೆ ವಹಿಸಿ ಮಾತನಾಡಿ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಗೌರವ ದೊರೆಯಬೇಕು ಎಂಬ ಕಳಕಳಿ ಅಂಬೇಡ್ಕರ್ ಅವರದ್ದಾಗಿತ್ತು. ಅಂಬೇಡ್ಕರ್ ಅವರು ಇಂದಿಗೂ ಜನರ ಮನಸ್ಸಿನಲ್ಲಿಯೂ ಇದ್ದಾರೆಂದರೆ ಅವರ ವ್ಯಕ್ತಿತ್ವವೇ ಕಾರಣ. ಅಂಬೇಡ್ಕರ್ ಅವರಲ್ಲಿದ್ದ ಜ್ಞಾನದ ಕಾರಣಕ್ಕೆ ದೊಡ್ಡ ಸ್ಥಾನ ದೊರೆಯಿತು ಎಂದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು,ಜ.17: ಯುವಶಕ್ತಿ ಶ್ರೀ ಗಣೇಶೋತ್ಸವ ಸಮಿತಿ (ರಿ.) ಕರಾವಳಿ ಶಿರೂರು ಇದರ ರಜತ ಸಂಭ್ರಮದ ಪ್ರಯುಕ್ತ ಅರುಣ್ ಪಬ್ಲಿಸಿಟಿ ಹಾಗೂ ಯುವ ಶಕ್ತಿ ಉತ್ಸವ ಸಮಿತಿ ಇದರ ಜಂಟಿ ಆಶ್ರಯದಲ್ಲಿ ಕರಾವಳಿ ಸಂಭ್ರಮ – 2023 ಮುನ್ನುಡಿ ಕಾರ್ಯಕ್ರಮ ಜನವರಿ 29ರಂದು ನಡೆಯಲಿದೆ. ಜನವರಿ28 ರಂದು ಬೆಳಿಗ್ಗೆ ಕ್ರೀಡೋತ್ಸವ, ಸ್ಥಳೀಯರಿಗೆ ಆಟೋಟ ಸ್ಪರ್ಧೆ ಹಾಗೂ ಗಾಳಿಪಟ ಸ್ಪರ್ಧೆ ನಡೆಯಲಿದೆ. ಜನವರಿ 29 ರಂದು ಆರೋಗ್ಯ ಶಿಬಿರ, ಬೃಹತ್ ಸಾಂಸ್ಕ್ರತಿಕ ವೈವಿಧ್ಯ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದ ಕುರಿತು ಯವಶಕ್ತಿ ಉತ್ಸವ ಸಮಿತಿ ಹಾಗೂ ಊರ ಹಿರಿಯರ ಸಮ್ಮುಖದಲ್ಲಿ ಕರಾವಳಿ ಸಂಭ್ರಮದ ಪೋಸ್ಟರ್ ಬಿಡುಗಡೆ ಮಾಡಲಾಯಿತು. ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡಿದ ಯುವಶಕ್ತಿ ಉತ್ಸವ ಸಮಿತಿ ಅಧ್ಯಕ್ಷ ಚಂದ್ರ ಮೊಗೇರ್ ಈಗಾಗಲೇ ಹಲವು ಕಾರ್ಯಕ್ರಮಗಳ ಮೂಲಕ ಕರಾವಳಿ ನಿರಂತರ ಸಾಂಸ್ಕ್ರತಿಕ ಚಟುವಟಿಕೆಯಲ್ಲಿ ಗುರುತಿಸಿಕೊಂಡಿದೆ.ಯುವಶಕ್ತಿ ಗಣೇಶೋತ್ಸವ ಸಮಿತಿ 25ನೇ ವರ್ಷದ ಸಂಭ್ರಮದಲ್ಲಿದೆ. ಸಭಾಭವನ ಸಿದ್ದಗೊಂಡಿದ್ದು ಅಡುಗೆಕೋಣೆ ನಿರ್ಮಾಣದ ಯೋಜನೆ ಹೊಂದಿದೆ.ರಜತ ಮಹೋತ್ಸವದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಾಜ್ಯ ಮಟ್ಟದ ಸಿವಿಲ್ ನ್ಯಾಯಾಧೀಶರ ಪರೀಕ್ಷೆಯಲ್ಲಿ, ಕುಂದಾಪುರದಲ್ಲಿ ಸರಕಾರಿ ಸಹಾಯಕ ಅಭಿಯೋಜಕರಾಗಿ ಸೇವೆ ಸಲ್ಲಿಸುತ್ತಿರುವ ಉಡುಪಿ ಕರಂಬಳ್ಳಿಯ ವರ್ಷಶ್ರೀ ಅವರು ತೇರ್ಗಡೆಯಾಗಿದ್ದಾರೆ. ಕರಂಬಳ್ಳಿಯ ನಿವೃತ್ತ ಶಿಕ್ಷಕರಾದ ದಿವಾಕರ್ ಐತಾಳ್ ಮತ್ತು ನಿವೃತ್ತ ಶಿಕ್ಷಕಿ ಜಯಲಕ್ಷ್ಮಿ ಅವರ ಪುತ್ರಿ ವರ್ಷಶ್ರೀ, ಗುಂಡಿಬೈಲ್ ಶಾಲೆ, ನಿಟ್ಟೂರು ಪ್ರೌಡ ಶಾಲೆ, ಉಡುಪಿ ಹೆಣ್ಣುಮಕ್ಕಳ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಣ ಪಡೆದು, 2012ರಲ್ಲಿ ಉಡುಪಿಯ ವೈಕುಂಠ ಬಾಳಿಗ ಕಾನೂನು ಕಾಲೇಜಿನಲ್ಲಿ ಕಾನೂನು ಪದವಿಯನ್ನು ಪಡೆದಿದ್ದರು. ಪ್ರಸ್ತುತ ಕುಂದಾಪುರದ ಎರಡನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್ ಸಿ ನ್ಯಾಯಾಲಯದಲ್ಲಿ ಸರಕಾರಿ ಸಹಾಯಕ ಅಭಿಯೋಜಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಅವರು, ಬೈಂದೂರು ನ್ಯಾಯಾಲಯದ ಮೊದಲ ಸರಕಾರಿ ಸಹಾಯಕ ಅಭಿಯೋಜಕರಾಗಿಯೂ ಸೇವೆಸಲ್ಲಿಸಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು,ಜ.16: ಬೈಂದೂರು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಬೈಂದೂರು ಇಲ್ಲಿ ವಿವೇಕಾನಂದ ಜಯಂತಿ ಹಾಗೂ ಸ್ವಚ್ಛತಾ ಅಭಿಯಾನ ಕಾರ್ಯಕ್ರಮವನ್ನು ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ಜಿಎಂ ಮಂಜುನಾಥ್ ಉದ್ಘಾಟಿಸಿ ವಿವೇಕಾನಂದರ ಆದರ್ಶಗಳನ್ನು ಮಕ್ಕಳಿಗೆ ತಿಳಿಸುವುದರ ಮೂಲಕ ಬಲಿಷ್ಠ ಭಾರತ ನಿರ್ಮಾಣಕ್ಕೆ ನಾವೆಲ್ಲ ಪಣತೊಡೋಣ ಎಂದರು ವಿವೇಕಾನಂದರ ಸ್ತಬ್ಧ ಚಿತ್ರದೊಂದಿಗೆ ನಗರ ಮೆರವಣಿಗೆ ಹಾಗೂ ನಗರ ಸ್ವಚ್ಛತೆಯ ಜಾಥಾವನ್ನು ಪಟ್ಟಣ ಪಂಚಾಯಿತಿನ ಮುಖ್ಯ ಅಧಿಕಾರಿ ನವೀನ್ ಕುಮಾರ್ ಮತ್ತು ಕಂದಾಯ ನಿರೀಕ್ಷಕರಾದ ದೀಪಕ್ ಹಸಿರು ನಿಶಾನೆ ತೋರಿಸಿ ಉದ್ಘಾಟಿಸಿದರು. ಸಾಮಾಜಿಕ ಸೇವಕರ್ತರು ಮತ್ತು ಉದ್ಯಮಿಗಳಾದ ನಿತಿನ್ ನಾರಾಯಣ್ ಇವರು ಮಕ್ಕಳಿಗೆ ವಿವೇಕಾನಂದರ ಚಿಂತನೆಗಳ ಪುಸ್ತಕ ಮಾಲಿಕೆಯನ್ನು ವಿತರಿಸಿದರು ಕಾರ್ಯಕ್ರಮದಲ್ಲಿ ಶಿಕ್ಷಣ ಸಂಯೋಜಕರಾದ ಚಂದ್ರ ದೇವಡಿಗ ಸಮೂಹ ಸಂಪನ್ಮೂಲ ವ್ಯಕ್ತಿ ಶ್ರೀ ಚಂದ್ರನಾರಾಯಣಬಿಲ್ಲವ ದೈಹಿಕ ಶಿಕ್ಷಕರಾದ ಪ್ರಭಾಕರ್ ಎಚ್ ಉಪಸ್ಥಿತರಿದ್ದರು ಶಾಲಾ ಪದವೀಧರ ಮುಖ್ಯೋಪಾಧ್ಯಾಯರಾದ ಜನಾರ್ದನ್ ದೇವಾಡಿಗ ಪ್ರಾಸ್ತಾವಿಕ ಮಾತುಗಳನ್ನಾಡಿದರು ವೀಣಾ ಹೆಗಡೆ ಸರ್ವರನ್ನು ಸ್ವಾಗತಿಸಿದರು ಸರಸ್ವತಿ ಧನ್ಯವಾದ ಸಲ್ಲಿಸಿದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಅಕ್ರಮ ಗೋವಧೆ ಸ್ಥಳಕ್ಕೆ ದಾಳಿ ನಡೆಸಿದ ಕುಂದಾಪುರ ಗ್ರಾಮಾಂತರ ಠಾಣೆ ಪಿಎಸ್ಐ ಪವನ್ ನಾಯಕ್ ಹಾಗೂ ಸಿಬ್ಬಂದಿಗಳು ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಗುಲ್ವಾಡಿ ಗ್ರಾಮದ ಕುದ್ರು ಎಂಬಲ್ಲಿ ಅಬ್ದುಲ್ ಸಮದ್ ಮನೆಯ ಪಕ್ಕದಲ್ಲಿ ಅಕ್ರಮ ಕಸಾಯಿಖಾನೆ ಕಾರ್ಯಾಚರಿಸುತ್ತಿದೆ ಎಂದು ಲಭಿಸಿದ ಖಚಿತ ಮಾಹಿತಿಯಂತೆ ಕಾರ್ಯಾಚರಣೆ ನಡೆಸಲಾಗಿದೆ. ಗೋವುಗಳನ್ನು ಅಕ್ರಮವಾಗಿ ವಧೆ ಮಾಡಿ ಮಾಂಸ ತಯಾರಿಸುತ್ತಿರುವ ಮಾಹಿತಿಯಂತೆ ದಾಳಿ ಮಾಡಿದಾಗ 3 ಜನರು ಓಡಿ ಹೋಗಿದ್ದು, ಆರೋಪಿ ಮೊಹಮ್ಮದ್ ಯೂಸುಬ್ನನ್ನು ಬಂಧಿಸಲಾಗಿದೆ. ಗೋ ಮಾಂಸ, ಗೋವಿನ 2 ತಲೆ, ಗೋವಿನ ಕಾಲುಗಳು ಮತ್ತಿತ್ತರ ತ್ಯಾಜ್ಯಗಳು ಶೆಡ್ನಲ್ಲಿ ಹರಡಿಕೊಂಡಿತ್ತು. ಒಂದು ಜೀವಂತ ಗೋವನ್ನು ಕಟ್ಟಿ ಹಾಕಲಾಗಿತ್ತು. ಅದನ್ನು ಪೊಲೀಸರು ರಕ್ಷಿಸಿದ್ದಾರೆ. ಮೊಹಮ್ಮದ್ ಯೂಸುಬ್, ಮೊಯ್ದಿನ್ ಹಾಗೂ ನಾಸೀರ್ಆಲಿ ಸೇರಿ ಗುಲ್ವಾಡಿ ಬೊಳುಕಟ್ಟೆ ಎಂಬಲ್ಲಿ ರಸ್ತೆ ಬದಿಯಲ್ಲಿ ಮಲಗಿದ್ದ 3 ಗೋವುಗಳನ್ನು ಕಳವು ಮಾಡಿ ಕೃತ್ಯ ಎಸಗಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರೋಟರಿ ಕ್ಲಬ್ ಕುಂದಾಪುರ ಪ್ರಾಯೋಜಿತ ನಾವುಂದ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಇಂಟರಾಕ್ಟ್ ಕ್ಲಬ್ಬಿನಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ ಆಚರಿಸಲಾಯಿತು. ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದ ಕುಂದಾಪುರ ರೋಟರಿ ಕ್ಲಬ್ ಅಧ್ಯಕ್ಷ ವೆಂಕಟೇಶ ನಾವುಂದ ಅವರು ಮಾತನಾಡಿ, ಸ್ವಾಮಿ ವಿವೇಕಾನಂದರು ವಿಶ್ವಕ್ಕೆ ಮಾದರಿ ನಾವು ನೀವು ನಾವು ಕಲಿತ ಶಾಲೆಗೆ, ನಮ್ಮ ಊರಿಗೆ ಮತ್ತು ನಮ್ಮ ಮನೆಗೆ ಮಾದರಿಯಾಗಲು ಪ್ರಯತ್ನಿಸೋಣ ಎಂದರು. ಮುಖ್ಯ ಕುಮಾರ್ ಎಸ್. ಕಾಂಚನ್ ಮಾತನಾಡಿ ಹತ್ತನೆ ತರಗತಿಯ ವಿದ್ಯಾರ್ಥಿಯರಿಗೆ 2022-23ನೇ ಸಾಲಿನ ಪರೀಕ್ಷೆ ಭಯ, ಪರೀಕ್ಷೆ ಎದುರಿಸುವ ರೀತಿ, ಪರೀಕ್ಷೆಗೆ ತಯಾರಿ ಮತ್ತು ಶಿಕ್ಷಣದ ಬಗ್ಗೆ ಸುದೀರ್ಘವಾಗಿ ಮಕ್ಕಳ ಮನಸ್ಸು ನಾಟುವ ರೀತಿಯಲ್ಲಿ ಮಾತನಾಡಿ ಶುಭ ಹಾರೈಸಿದರು. ಶಾಲೆಯ ಮುಖ್ಯ ಶಿಕ್ಷಕಿ ಶಶಿಕಲಾ ಶುಭಾಶಯಗೈದರು ಇಂಟರಾಕ್ಟ್ ಕೋಆರ್ಡಿನೇಟರ್ ಗಣೇಶ್ ಐತಾಳ್, ಶಿಕ್ಷಕ ನಾಗರಾಜ ಉಪಸ್ಥಿತರಿದ್ದರು. ಶಿಕ್ಷಕ ಕೃಷ್ಣ ಮೂರ್ತಿ ಪಿ.ಕೆ. ಸ್ವಾಗತಿಸಿ ಧನ್ಯವಾದಗೈದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಹಳಗೇರಿ ಶ್ರೀ ಕ್ಷೇತ್ರ ತೆಂಕಬೆಟ್ಟು ಶ್ರೀ ಕಾಲಭೈರವ ದೇವಸ್ಥಾನದಲ್ಲಿ ಜನವರಿ 26ರಿಂದ 30ರ ತನಕ ‘ನವೀಕೃತ ಶಿಲಾದೇಗುಲ ಲೋಕಾರ್ಪಣೆ – ಪುನಪ್ರತಿಷ್ಠೆ, ಅಷ್ಟಬಂಧ ಬ್ರಹ್ಮಕಲಶೋತ್ಸವ’ ಮೊದಲಾದ ಧಾರ್ಮಿಕ – ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿದ್ದು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದೇಗುಲದ ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ದಯಾನಂದ ಜೋಗಿ ನಾವುಂದ ಕೋರಿದ್ದಾರೆ. ಅವರು ಬೈಂದೂರು ಪ್ರೆಸ್ ಕ್ಲಬ್ನಲ್ಲಿ ಶುಕ್ರವಾರ ಆಯೋಜಿಸಲಾದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, 5 ದಿನಗಳ ಕಾಲ ಕಂಬದಕೋಣೆ ಗ್ರಾಮದಲ್ಲಿ ನಡೆಯುವ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿವಿಧೆಡೆಗಳಿಂದ ಸಾವಿರಾರು ಭಕ್ತರು ಪಾಲ್ಗೊಳ್ಳುವ ನಿರೀಕ್ಷೆ ಇದ್ದು, ಸಕಲ ತಯಾರಿಗಳನ್ನು ಮಾಡಿಕೊಳ್ಳಲಾಗಿದೆ. ಮಂಗಳೂರು ಕದ್ರಿ ಮಠದ ಶ್ರೀ ರಾಜಯೋಗಿ ನಿರ್ಮಲನಾಥಜೀ ಮಹಾರಾಜ್ ಹಾಗೂ ಯಡಮೊಗೆ ಹಲವರಿ ಮಠದ ಶ್ರೀ ಫೀರ್ ಯೋಗಿ ಜಗದೀಶನಾಥ್ಜಿ ಅವರ ಮಾರ್ಗದರ್ಶನದಲ್ಲಿ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ನವೀಕೃತ ಶಿಲಾದೇಗುಲ ಲೋಕಾರ್ಪಣೆ, ಪುನರ್ಪ್ರತಿಷ್ಠೆ, ಅಷ್ಠಬಂಧ ಬ್ರಹ್ಮಕಲಶೋತ್ಸವ, ಶ್ರೀ ನಾಗದೇವರಿಗೆ ಮಂಡಲೋತ್ಸವ, ಸಾಮೂಹಿಕ ಜೋಗಿ ದೀಕ್ಷಾ ಕಾರ್ಯಕ್ರಮ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ,ಜ.14: ಇಲ್ಲಿನ ಮದರ್ ತೆರೆಸಾ ಶಿಕ್ಷಣ ಸಂಸ್ಥೆಯಲ್ಲಿ ಹತ್ತನೇ ತರಗತಿ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗಾಗಿ ಮುಂಬರುವ ಪರೀಕ್ಷೆಯನ್ನು ಎದುರಿಸುವ ಕುರಿತು ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ನಿವೃತ್ತ ಮುಖ್ಯೋಪಾಧ್ಯಾಯ ಹಾಗೂ ವಾಗ್ಮಿ ಮುನಿರಾಜ್ ರೆಂಜಾಳ ಅವರು ವಿದ್ಯಾರ್ಥಿಗಳಿಗೆ ಭಯವಿಲ್ಲದೆ ಪರೀಕ್ಷೆಯನ್ನು ಎದುರಿಸುವುದು ಹೇಗೆ ಎನ್ನುವುದನ್ನು ತಿಳಿಸುತ್ತಾ ಓದಿನ ಮಹತ್ವವನ್ನು ತಿಳಿಸಿದರು. ಬದುಕಿನ ಪಾಠವನ್ನು ಕಲಿಯುತ್ತಾ ಆತ್ಮವಿಶ್ವಾಸವನ್ನು ಬೆಳೆಸಿಕೊಂಡರೆ ಎಲ್ಲವೂ ಸಾಧ್ಯ ಎಂದು ಹೇಳುತ್ತಾ ವಿದ್ಯಾರ್ಥಿಗಳನ್ನು ಹುರಿದುಂಬಿಸಿದರು. ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಮಂಜುನಾಥ್ ಬಾಯಿರಿ, ಕುಮಾರಿ ಗೀತಾ ಉಪಸ್ಥಿತರಿದ್ದರು. ಪ್ರಭಾರ ಮುಖ್ಯೋಪಾಧ್ಯಾಯಿನಿ ವೈಶಾಲಿ ಶೆಟ್ಟಿ ಅತಿಥಿಗಳನ್ನು ಪರಿಚಯಿಸಿ ಸ್ವಾಗತಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇಗುಲದಲ್ಲಿ ಜ.14 ರಿಂದ 16ರ ವರೆಗೆ ನಡೆಯಲಿರುವ ಮಕರ ಸಂಕ್ರಮಣ ಉತ್ಸವಕ್ಕೆ ಸಂಪೂರ್ಣ ಸಿದ್ಧತೆ ನಡೆದಿದ್ದು, ಸಾವಿರಾರು ಭಕ್ತರು ಬೆಳಿಗ್ಗೆಯಿಂದ ದೇವರ ದರ್ಶನ ಪಡೆಯುತ್ತಿದ್ದಾರೆ. ಜ.14ರಂದು ಬೆಳಗ್ಗೆ 9ಕ್ಕೆ ಶ್ರೀ ಬ್ರಹ್ಮಲಿಂಗೇಶ್ವರ ದೇವರ ಸನ್ನಿಧಿಯಲ್ಲಿ ಮಹಾಮಂಗಳಾರತಿ, ರಾತ್ರಿ 10.30ಕ್ಕೆ ಕೆಂಡಸೇವೆ, ಜ.15, 16 ರಂದು ಬೆಳಗ್ಗೆ ಮಹಾಮಂಗಳಾರತಿ, ರಾತ್ರಿ 9.30ಕ್ಕೆ ಮಂಡಲ ಸೇವೆ, ಜ.14 ರಂದು ಸಂಜೆ 6ರಿಂದ 2.30 ರತನಕ ಕೆಂಡಸೇವೆ, ಜ.17 ರಂದು ಬೆಳಗ್ಗೆ ಸಂಪ್ರೋಕ್ಷಣೆ ನಡೆಯಲಿದೆ. ಕೆಂಡಸೇವೆ,ಮಂಡಲಸೇವೆ, ಮಹಾ ಪೂಜೆ ನಡೆಯುವ ಸಮಯ ಭಕ್ತರ ಪೂಜೆ, ಹಣ್ಣುಕಾಯಿ ಸೇವೆ ಜರಗುವುದಿಲ್ಲವೆಂದು ಆನುವಂಶೀಯ ಆಡಳಿತ ಮೊಕ್ತಸರ ಸಿ. ಸದಾಶಿವ ಶೆಟ್ಟಿ ತಿಳಿಸಿದ್ದಾರೆ. ಹಬ್ಬದ ಸಂದರ್ಭ ಭಕ್ತರು ಸೇವಂತಿಗೆ, ಸಿಂಗಾರ ಹೂವನ್ನು ಬುಟ್ಟಿಯಲ್ಲಿಟ್ಟು ತಲೆಯಲ್ಲಿ ಹೊತ್ತು ಹರಕೆ ರೂಪದಲ್ಲಿ ಶ್ರೀ ದೇವರಿಗೆ ಸಮರ್ಪಿಸುವ ಪದ್ಧತಿ ಇಂದಿಗೂ ಜಾರಿಯಲ್ಲಿದೆ. ಮಾರಣಕಟ್ಟೆ ಕ್ಷೇತ್ರವನ್ನು ಬಡಗಿನ ದೇವರೆಂದು ಭಕ್ತರು ನಂಬಿದ್ದಾರೆ. ಕುಂದಾಪುರ, ಬೈಂದೂರು ಸೇರಿದಂತೆ…
