Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಬಸ್ರೂರು ಶ್ರೀ ಶಾರದಾ ಕಾಲೇಜು, ಹಳೆಯ ವಿದ್ಯಾರ್ಥಿಗಳ ಸಂಘ ಹಾಗೂ ಉಡುಪಿ ಅಭಯ ಹಸ್ತ ಚಾರಿಟೇಬಲ್ ಟ್ರಸ್ಟ್ (ರಿ.) ಸಹಭಾಗಿತ್ವದಲ್ಲಿ ಕಶ್ವಿ ಚೆಸ್ ಸ್ಕೂಲ್ (ರಿ.) ಕುಂದಾಪುರ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಬ್ಲಡ್ ಸೆಂಟರ್ ನೇತೃತ್ವದಲ್ಲಿ ರಕ್ತದಾನ ಶಿಬಿರ ಶ್ರೀ ಶಾರದಾ ಕಾಲೇಜು ಬಸ್ರೂರಿನಲ್ಲಿ ನಡೆಯಿತು. ಈ ಶಿಬಿರದಲ್ಲಿ 38 ಯೂನಿಟ್ ರಕ್ತದಾನ ಸಂಗ್ರಹಣೆ ಮಾಡಲಾಯಿತು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಏ.15: ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಂಬಧಿಸಿದಂತೆ, ಸಾಮಾಜಿಕ ಜಾಲತಾಣಗಳಲ್ಲಿ ಜಾಹೀರಾತುಗಳನ್ನು ಪ್ರದರ್ಶಿಸಲು ಪೂರ್ವಾನುಮತಿ ಕಡ್ಡಾಯವಾಗಿ ಪಡೆದುಕೊಳ್ಳಬೇಕೆಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದರು. ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ಜಾಹೀರಾತು ಪ್ರಚಾರಪಡಿಸುವ ಪೂವಾನುಮತಿ ಕುರಿತ ಕಾರ್ಯಗಾರದಲ್ಲಿ ಮಾತನಾಡಿ, ರಾಜಕೀಯ ಪಕ್ಷಗಳು ಚುನಾವಣೆಗೆ ಸ್ಪರ್ಧಿಸಿವ ಆಭ್ಯರ್ಥಿಗಳು, ಚುನಾವಣಾ ಜಾಹೀರಾತುಗಳನ್ನು ಪ್ರಚಾರ ಮಾಡುವ ಮುನ್ನ ಜಿಲ್ಲಾ ಎಂಸಿಎಂಸಿ ಸಮಿತಿಯಿಂದ ಪೂರ್ವ ಪ್ರಾಮಾಣೀಕರಣ ಪಡೆದು ಪ್ರದರ್ಶಿಸಬೇಕು ಎಂದರು. ಜಾಹೀರಾತಿನಲ್ಲಿ ಇತರರಿಗೆ ದೂರುವುದು, ಅಸ್ಪಷ್ಟ ಅಥವಾ ಮಾನ ಹಾನಿಕರ, ಹಿಂಸೆ ಪ್ರಚೋದನೆ, ನ್ಯಾಯಾಲಯ ನಿಂದನೆ, ರಾಷ್ಟ್ರದ ಏಕತೆ ಸಾರ್ವಭೌಮತ್ವಕ್ಕೆ ವಿರುದ್ದ ಹೇಳಿಕೆ ಸೇರಿದಂತೆ ಧಾರ್ಮಿಕ ಕ್ಷೇತ್ರಗಳ ಚಿತ್ರಣ, ದೇಶದ ಸೇನಾಪಡೆಯ ಹಾಗೂ ಸೇನಾ ವ್ಯಕ್ತಿಗಳ ಚಿತ್ರ ಮತ್ತಿತರ ನಿರ್ಬಂಧಿತ ವಿಷಯಗಳನ್ನು ಒಳಗೊಂಡಿರಬಾರದು ಎಂದರು. ಕಾರ್ಯಗಾರದಲ್ಲಿ ತರಬೇತಿ ನೀಡಿದ ಮಾಸ್ಟರ್ ಟ್ರೇನರ್ ಡಾ.ಅಶೋಕ್ ಕಾಮತ್ ಮಾತನಾಡಿ, ಅರ್ಜಿ ಸಲ್ಲಿಸುವವರು ನಿಗಧಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಬೇಕು, ಅರ್ಜಿಯ ಜೊತೆಯಲ್ಲಿ ಜಾಹಿರಾತು ಒಳಗೊಂಡ ಸಿ.ಡಿ.ಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಈ ಭಾರಿ ನನಗೆ ಬಿಜೆಪಿ ಪಕ್ಷ ಬೈಂದೂರು ಎಂಎಲ್‌ಎ ಟಿಕೆಟ್ ನೀಡಬಹುದೆಂಬ ನಿರೀಕ್ಷೆ ಇತ್ತು ಆದರೆ ಅದು ಈಡೇರಿಲ್ಲ. ಪಕ್ಷದ ನಾಯಕರೇ ಕರೆದು ಚುನಾವಣೆಗೆ ತಯಾರಾಗುವಂತೆ ಹೇಳಿ ಈಗ ಟಿಕೆಟ್ ನೀಡದಿರುವುದು ಮನಸ್ಸಿಗೆ ನೋವಾಗಿದೆ ಎಂದು ಉದ್ಯಮಿ, ಸಮಾಜ ಸೇವಕ ಗೋವಿಂದ ಬಾಬು ಪೂಜಾರಿ ಹೇಳಿದರು. ಅವರು ಉಪ್ಪಂದ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಕಛೇರಿಯಲ್ಲಿ ಶನಿವಾರ ಕಾರ್ಯಕರ್ತರೊಂದಿಗೆ ನಡೆಸಿದ ಸಮಾಲೋಚನೆಯಲ್ಲಿ ಈ ವಿಚಾರ ಪ್ರಸ್ತಾಪಿಸಿದರು. ಬಿಜೆಪಿ ಪಕ್ಷದಲ್ಲಿ ಕಳೆದ ಆರು ವರ್ಷಗಳಿಂದ ಸಕ್ರಿಯ ಕಾರ್ಯಕರ್ತನಾಗಿ ತೊಡಗಿಸಿಕೊಂಡು, ಸಮಾಜ ಸೇವೆಯಲ್ಲಿ ನಿರತನಾಗಿದ್ದೇನೆ. ಕಾರ್ಯಕರ್ತರು ಹಾಗೂ ಹಿತೈಶಿಗಳ ಆಶಯದಂತೆ ನಾನು ಕಳೆದ ಆರು ವರ್ಷಗಳಿಂದ ಪಕ್ಷದಲ್ಲಿ ತೊಡಗಿಸಿಕೊಂಡಿದ್ದೆ. ನನ್ನದೇ ಆದ ನೆಲೆಯಲ್ಲಿಯೂ ಪಕ್ಷ ಸಂಘಟನೆಯನ್ನೂ ಮಾಡಿದ್ದೇನೆ ಎಂದರು. ಟಿಕೆಟ್ ಘೋಷಣೆಯ ಬಳಿಕ ಕೆಲವರು ಬಂಡಾಯ ಸಭೆಗೆ ನನ್ನನ್ನು ಆಹ್ವಾನಿಸಿದ್ದರೂ ನಾನು ಹೋಗಿಲ್ಲ. ಆದರೆ ಪಕ್ಷದ ಯಾರೊಬ್ಬ ನಾಯಕರೂ ನನ್ನನ್ನು ಸಂಪರ್ಕಿಸಿಲ್ಲ. ಕಾರ್ಯಕರ್ತರೊಂದಿಗೆ ಚರ್ಚಿಸಿ ಮುಂದಿನ ಮೂರು ದಿನಗಳಲ್ಲಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಸ್ವರ್ಧಿಸಲು ಬೈಂದೂರು ವಿಧಾನಸಭಾ ಕ್ಷೇತ್ರದ ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿ ಪ್ರಸಾದ್ ಶನಿವಾರ ನಾಮಪತ್ರ ಸಲ್ಲಿಸಿದರು. ಬೈಂದೂರು ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಜಗದೀಶ್ ಗಂಗಣ್ಣನವರ್ ಅಭ್ಯರ್ಥಿಯ ನಾಮಪತ್ರ ಸ್ವೀಕರಿಸಿದರು. ಬೈಂದೂರು ತಾಲೂಕಿನ ಆಲೂರು ಗ್ರಾಮದ 28 ವರ್ಷದ ಯುವಕ ಪ್ರಸಾದ್ ಏಕಾಂಗಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರನ್ನು ಬೈಂದೂರು ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ ಅವರು ಶನಿವಾರ ಬೆಳಗ್ಗೆ ಹಾಲಾಡಿಯವರ ನಿವಾಸದಲ್ಲಿ ಭೇಟಿಯಾಗಿ ಆಶೀರ್ವಾದ ಪಡೆದು, ಸಹಕಾರ ಕೋರಿದರು. ಈ ಸಂದರ್ಭದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು, ಪಕ್ಷದ ಹಿರಿಯ ನಾಯಕರು, ಪ್ರಮುಖರು ನನಗೆ ಬೈಂದೂರು ಕ್ಷೇತ್ರದ ಜವಾಬ್ದಾರಿಯನ್ನು ವಹಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ. ಇದು ನನ್ನ ಕರ್ತವ್ಯವೂ ಹೌದು. ಯುವ ನಾಯಕ ಗುರುರಾಜ್ ಅವರಿಗೆ ನಿಮ್ಮೆಲ್ಲರ ಬೆಂಬಲ, ಸಹಕಾರ ಬೇಕಾಗಿದೆ. ನಾನು ಕೂಡ ಬೈಂದೂರು ಭಾಗದಲ್ಲಿ ಪ್ರಚಾರದಲ್ಲಿ ಭಾಗವಹಿಸುತ್ತೇನೆ ಎಂದರು. ಅಭ್ಯರ್ಥಿ ಗುರುರಾಜ್ ಗಂಟಿಹೊಳೆ ಮಾತನಾಡಿ, ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ನಮಗೆಲ್ಲ ಆದರ್ಶಪ್ರಾಯರು. ಅವರ ಆರ್ಶಿವಾದವನ್ನು ಪಡೆದಿದ್ದೇನೆ. ಅವರ ಬೆಂಬಲ, ಸಹಕಾರವಿಂದು ಸಿಕ್ಕಿದೆ. ಈಗ ನನಗೆ ಧೈರ್ಯ ಬಂದಿದೆ. ಅವರ ಸಾಮಾಜಿಕ ಕೈಂಕರ್ಯ ನಮಗೆಲ್ಲ ಮಾದರಿ ಎಂದರು. ಇದೇ ವೇಳೆ ಬೈಂದೂರು ಸುಕುಮಾರ ಶೆಟ್ಟಿ ಅವರೂ ಬೆಂಬಲ ನೀಡಿರುವುದಾಗ ಸ್ಪಷ್ಟಪಡಿಸಿದರು. ಕುಂದಾಪುರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಾನು ಶಾಸಕನಾಗಲು ನೂರಾರು ಕಾರ್ಯಕರ್ತರು ಶ್ರಮ ವಹಿಸಿದ್ದಾರೆ. ನೀವೆಲ್ಲರೂ ನನ್ನ ಮೇಲಿಟ್ಟ ನಂಬಿಕೆಗಳಿಗೆ ನಾನು ಋಣಿಯಾಗಿದ್ದೇನೆ. ನಿಮ್ಮೆಲ್ಲರ ಋಣ ತೀರಿಸಲು ಇನ್ನೊಂದು ಜನ್ಮವೇ ಬೇಕು ಎಂದು ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಹೇಳಿದರು. ಅವರು ಶುಕ್ರವಾರ ಕೋಟೇಶ್ವರದ ಸರಸ್ವತಿ ಸಭಾಂಗಣದಲ್ಲಿ ಬಿಜೆಪಿ ಕಾರ್ಯಕರ್ತರ ಬೃಹತ್ ಸಭೆಯಲ್ಲಿ ಮಾತನಾಡಿ ನಾನು ದೊಡ್ಡ ರಾಜಕಾರಣಿಯಲ್ಲ. ನನಗೆ ವೇಷ ಹಾಕಲು ಬರುವುದಿಲ್ಲ. ಸಹಜವಾಗಿ ಬದುಕಿದ್ದೇನೆ. ನನ್ನ ಇಚ್ಚಾಶಕ್ತಿ ಸ್ಪಷ್ಟವಾಗಿದೆ. ನಾನು ಒಮ್ಮೆ ತೀರ್ಮಾನಿಸಿದರೆ ಅದನ್ನೇ ಪಾಲಿಸುತ್ತೇನೆ. ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಸಾಮಾಜಿಕ ನ್ಯಾಯವನ್ನು ಒಪ್ಪಿಕೊಂಡು ಕೆಲಸ ಮಾಡಿದ್ದೇನೆ. ಜಾತ್ಯಾತೀತವಾಗಿ ನನ್ನನ್ನು ಮತದಾರರು ಆಯ್ಕೆಮಾಡಿದ್ದಾರೆ ಎಂದ ಅವರು ನಾವು ನಿಮಗೆ ಗ್ಯಾರೆಂಟಿ ಕಾರ್ಡ್ ನೀಡುವುದಿಲ್ಲ. ನಿಮಗೆ ನಾನೇ ಗ್ಯಾರೆಂಟಿ ಎಂದರು. ಚುನಾವಣೆ ಎನ್ನುವುದು ಎರಡು ತಂಡಗಳ ನಡುವಿನ ಧರ್ಮ ಯುದ್ಧವಾಗಬೇಕೇ ಹೊರತು ಹೊಲಸು ರಾಜಕೀಯವಾಗಬಾರದು. ಸಭೆಯೊಂದರಲ್ಲಿ ಕಾಂಗ್ರೆಸ್ ಅಭ್ಯರ್ಥಿಯು, ನನಗೆ ವಯಸ್ಸಾಗಿದೆ ಎಂದು ಹೇಳಿದ್ದನ್ನು ಕೇಳಿದೆ. ನನ್ನ ವರಸ್ಸಿನ ಜಾತಕ ಅವರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ಕಾಂಗ್ರೆಸ್ ಎಂ.ಎಲ್.ಎ ಅಭ್ಯರ್ಥಿ ದಿನೇಶ್ ಹೆಗ್ಡೆ ಮೊಳಹಳ್ಳಿ ಅವರು ನಾಮಪತ್ರ ಸಲ್ಲಿಸುವ ಪೂರ್ವಭಾವಿಯಾಗಿ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಸಾರ್ವಜನಿಕ ಸಭೆ ಆಯೋಜಿಸಿತ್ತು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ಬಿಜೆಪಿ ಪಕ್ಷದ ಎಂ.ಎಲ್.ಎ ಅಭ್ಯರ್ಥಿಯಾಗಿ ಪಕ್ಷ ಘೋಷಿಸಿದ ಬಳಿಕ ಬೈಂದೂರು ಬಿಜೆಪಿ ಕಛೇರಿಗೆ ಗುರುರಾಜ ಗಂಟಿಹೊಳೆ ಅವರು ಭೇಟಿ ನೀಡಿದರು. ಈ ವೇಳೆ ಬಿಜೆಪಿ ಕಛೇರಿಯಲ್ಲಿ ಜರುಗಿದ ಅಂಬೇಡ್ಕರ್ ದಿನಾಚರಣೆ ಕಾರ್ಯಕ್ರಮದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಪ್ಪನಮನ ಸಲ್ಲಿಸಿ ಬಳಿಕ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು, ಬೈಂದೂರು ಬಿಜೆಪಿ ಉಸ್ತುವಾರಿ ಕಿಶೋರ್ ಕುಮಾರ್ ಕುಂದಾಪುರ, ಬೈಂದೂರು ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಪ್ರಿಯದರ್ಶಿನಿ ಬೆಸ್ಕೂರು, ಯುವಮೋರ್ಚಾ ಜಿಲ್ಲಾ ಕಾರ್ಯದರ್ಶಿ ಶರತ್ ಶೆಟ್ಟಿ ಉಪ್ಪುಂದ, ಯುವಮೋರ್ಚ ರಾಜ್ಯ ಕಾರ್ಯಕಾರಿಣಿ ಸದಸ್ಯ ಪ್ರಜ್ವಲ್ ಶೆಟ್ಟಿ, ಬೈಂದೂರು ಯುವಮೋರ್ಚಾ ಅಧ್ಯಕ್ಷ ಸಂತೋಷ್ ಸೇರಿದಂತೆ ವಿವಿಧ ಮೋರ್ಚಾಗಳ ಪ್ರಮುಖರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಭೇಟಿ ನೀಡುವ ವೇಳೆ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರೂ ಕಾಣಿಸಿಕೊಂಡಿರುವ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ರಿಷಬ್ ಶೆಟ್ಟಿ ರಾಜಕೀಯಕ್ಕೆ ಬರುತ್ತಾರಾ ಎಂಬ ಚರ್ಚೆ ಎದ್ದಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ನಟ ರಿಷಬ್ ಶೆಟ್ಟಿ, ಕೊಲ್ಲೂರು ದೇವಸ್ಥಾನಕ್ಕೆ ಹೋಗಿದ್ದಾಗ ಮುಖ್ಯಮಂತ್ರಿ ಅವರ ಭೇಟಿ ಆಯಿತು. ನನಗೆ ರಾಜಕೀಯಕ್ಕೆ ಬರುವ ಉದ್ದೇಶವಿಲ್ಲ. ಸದ್ಯ ಕಾಂತರದ ಬರವಣಿಗೆಯಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದೇನೆ ಎಂದು ಟ್ವಿಟ್ ಮಾಡಿದ್ದಾರೆ. ಇನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೂ ಕೂಡ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿ, ರಿಷಬ್ ಅವರದ್ದು ಆಕಸ್ಮಿಕ ಭೇಟಿಯಾಷ್ಟೇ. ಆದರೆ ಅವರ ಸಿದ್ಧಾಂತ ಹಾಗೂ ವಿಚಾರಧಾರೆಗಳು ನಮ್ಮ ಪಕ್ಷಕ್ಕೆ ಹತ್ತಿರವಾಗಿವುದರಿಂದ ಆಗಾಗ ಅವರು ಬಹಿರಂಗವಾಗಿ ನಮ್ಮ ಪಕ್ಷದ ಪರ ಪ್ರತಿಪಾದನೆ ಮಾಡುತ್ತಿದ್ದಾರೆ. ನಟ ಸುದೀಪ್ ಅವರಂತೆ ರಿಷಬ್ ಶೆಟ್ಟಿಯವರನ್ನು ಪ್ರಚಾರಕ್ಕೆ ತೊಡಗಿಸಿಕೊಳ್ಳುವ ಬಗ್ಗೆ ಈಗ ಯಾವುದೇ ಯೋಚನೆ ಇಲ್ಲ, ಅದು ದೇವರ ಇಚ್ಛೆ ಎಂದಿದ್ದಾರೆ.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಸಮಸ್ತ ರಾಜ್ಯದ ಜನರಿಗೆ ಒಳ್ಳೆಯದಾಗಬೇಕು, ರಾಜ್ಯ ಸುಭಿಕ್ಷೆಯಿಂದ ಕೂಡಿರಬೇಕು, ಮುಂದಿನ ವಿಧಾನಸಭಾ ಚುನಾವಣೆ ಭಾರತೀಯ ಜನತಾ ಪಾರ್ಟಿ ಹೆಚ್ಚಿನ ಸ್ಥಾನ ಪಡೆಯುವ ಮೂಲಕ ಮತ್ತೊಮ್ಮೆ ಅಕಾರದ ಚುಕ್ಕಾಣಿ ಹಿಡಿದು ನವನಾಡು ಕಟ್ಟುವ ಸಂಕಲ್ಪದೊಂದಿಗೆ ದೇವರ ಆಶೀರ್ವಾದ ಪಡೆಯಲು ಕೊಲ್ಲೂರು ದೇವಳಕ್ಕೆ ಬಂದಿರುವೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು. ಗುರುವಾರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳಕ್ಕೆ ಪತ್ನಿಯೊಂದಿಗೆ ಭೇಟಿ ನೀಡಿ, ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು. ಸರ್ವೆ ವರದಿ ಆಧರಿಸಿ ಟಿಕೆಟ್:ವಿಧಾನಸಭಾ ಚುನಾವಣೆಯಲ್ಲಿ ಸರ್ವೇ ವರದಿ ಆಧರಿಸಿ ಬಿಜೆಪಿ ಪಕ್ಷದಿಂದ ಟಿಕೆಟ್ ನೀಡಲಾಗಿದೆ, ಟಿಕೆಟ್ ಕೈ ತಪ್ಪಿರುವ ಶಾಸಕ ಎಚ್. ಕೆ. ಕುಮಾರಸ್ವಾಮಿ ಸೇರಿದಂತೆ ಕೆಲವರಿಗೆ ಅಸಮಾಧಾನವಿದೆ, ಅಸಮಾಧಾನಗೊಂಡಿರುವ ಎಲ್ಲ ಶಾಸಕರೊಂದಿಗೆ ಮಾತನಾಡಿ ಪಕ್ಷ ಬಿಡದಂತೆ ಮನವೊಲಿಸಲಾಗುವುದು ಎಂದರು. ಪ್ರಯೋಗ ಶಾಲೆಯಾಗಿ ಅಲ್ಲ:ಉಡುಪಿ ಜಿಲ್ಲೆಯಲ್ಲಿರುವ ಐವರು ಶಾಸಕರುಗಳ ಪೈಕಿ, ನಾಲ್ವರನ್ನು ಬದಲಾಯಿಸಿದ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಉಡುಪಿ ಜಿಲ್ಲೆ…

Read More