Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಸುಂದರ ಬೈಂದೂರನ್ನು ಸಮೃದ್ಧ ಬೈಂದೂರನ್ನಾಗಿ ರೂಪಿಸಲು ಅಧಿಕಾರಿಗಳ ಸಹಕಾರ ಬಹುಮುಖ್ಯವಾಗಿದ್ದು, ಎಲ್ಲರೂ ಜೊತೆಯಾಗಿ ಹೊಸ ಕಲ್ಪನೆಯನ್ನು ಕಟ್ಟಿ ಬೈಂದೂರು ಅಭಿವೃದ್ಧಿಗೆ ಶ್ರಮಿಸಬೇಕಿದೆ. ಸಿಬ್ಬಂದಿ ಕೊರತೆ, ಅಧಿಕಾರ ವ್ಯಾಪ್ತಿಯನ್ನು ನೆಪವಾಗಿಸಿಕೊಂಡು ಅಭಿವೃದ್ಧಿಗೆ ಕುಂಠಿತವಾಗಲು ಬಿಡಬಾರದು. ಜನರ ಸಮಸ್ಯೆಗೆ ತಕ್ಷಣ ಸ್ಪಂದಿಸುವ ಮನೋಭಾವ ಬೆಳೆಸಿಕೊಳ್ಳಿ, ನಿಮ ಸಮಸ್ಯೆಗಳಿಗೆ ಸರಕಾರದ ಮಟ್ಟದಲ್ಲಿ ಬೆಳಕು ಚೆಲ್ಲುವ ಜವಾಬ್ದಾರಿ ನನ್ನದು ಎಂದು ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಗುರುರಾಜ ಶೆಟ್ಟಿ ಗಂಟಿಹೊಳೆ ಹೇಳಿದರು. ಅವರು ಬೈಂದೂರು ಪಟ್ಟಣ ಪಂಚಾಯತ್ ಕಛೇರಿಯಲ್ಲಿ ಶುಕ್ರವಾರ ಹಮಿಕೊಂಡಿದ್ದ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಬೈಂದೂರು ವಿಧಾನಸಭಾ ಕ್ಷೇತ್ರ ನೈಸರ್ಗಿಕವಾಗಿ ಸಮೃದ್ಧವಾದ ಪ್ರದೇಶ. ಆದರೆ ಬೇರೆ ಬೇರೆ ಕಾರಣಗಳಿಂದಾಗಿ ಅಭಿವೃದ್ಧಿಗೆ ಹಿನ್ನಡೆಯಾಗಿದೆ. ಇದು ಮುಂದೆ ಆಗಬಾರದು. ನೈಸರ್ಗಿಕ ಸಂಪತ್ತನ್ನು ಉಳಿಸಿಕೊಳ್ಳುವ ಜೊತೆ ಜೊತೆಗೆ ಮೂಲಭೂತ ಸೌಕರ್ಯಗಳ ಅಭಿವೃದ್ಧಿ, ಪ್ರವಾಸೋದ್ಯಮಕ್ಕೆ ಆದ್ಯತೆ, ಆರೋಗ್ಯ, ನಿವೇಶನ, ಹಕ್ಕುಪತ್ರ, ಮೀನುಗಾರಿಕೆ, ಕೃಷಿ, ಪಶಸಂಗೋಪನೆಗೆ ಸಂಬಂಧಿತ ಸಮಸ್ಯೆಗಳಿಗೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: 2022-23ನೇ ಸಾಲಿನ 10ನೇ ತರಗತಿ ವಾರ್ಷಿಕ ಪರೀಕ್ಷೆಯ ಗುಣಾತ್ಮಕ ಫಲಿತಾಂಶದಲ್ಲಿ ಕುಂದಾಪುರ ವಲಯ ಮಟ್ಟದಲ್ಲಿ ಶಂಕರನಾರಾಯಣದ ಮದರ್ ತೆರೆಸಾ ಶಿಕ್ಷಣ ಸಂಸ್ಥೆ ಪ್ರಥಮ ಸ್ಥಾನ ಪಡೆದುಕೊಂಡಿದೆ. ಶಂಕರನಾರಾಯಣ ಮದರ್ ತೆರೆಸಾ ಮೆಮೋರಿಯಲ್ ಸಂಸ್ಥೆಯು ಕಳೆದ 25ವರ್ಷಗಳಿಂದ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಕಡಿಮೆ ಶುಲ್ಕದಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡುತ್ತ ಬಂದಿದೆ. ಹತ್ತನೇ ತರಗತಿಯಲ್ಲಿ ಅನೇಕ ವರ್ಷಗಳಿಂದ ಉತ್ತಮ ಫಲಿತಾಂಶವನ್ನು ನೀಡುತ್ತಾ ಬಂದಿದ್ದು ಈ ವರ್ಷವೂ ಸಹ ಶೇಕಡ 100 ಫಲಿತಾಂಶದೊಂದಿಗೆ ಶೇಕಡ 95.17 ಗುಣಾತ್ಮಕ ಫಲಿತಾಂಶ ದಾಖಲಿಸುವುದರೊಂದಿಗೆ ಕುಂದಾಪುರ ವಲಯ ಮಟ್ಟದಲಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಮಂಗಳೂರು: ಅರುಣ್ಯ ಫೌಂಡೇಶನ್ ಮತ್ತು ದಾಸ್ ಕುಡ್ಲ ಇವೆಂಟ್ಸ್ ಸಹಯೋಗದಲ್ಲಿ ಎಲ್ಲಾ ವಯೋಮಿತಿಯ ಸ್ಪರ್ಧಿಗಳನ್ನು ಹೊಂದಿರುವಂತಹ ಜಗತ್ತಿನ ಪ್ರಪ್ರಥಮ ಪ್ರಯೋಗ, ಕರಾವಳಿ ಕರ್ನಾಟಕ ಮೆಗಾ ಮ್ಯೂಸಿಕಲ್ ರಿಯಾಲಿಟಿ ಶೋ, ’ಸಿಂಗರ್ಸ್ ಪ್ರೀಮಿಯರ್ ಲೀಗ್ (ಎಸ್ಪಿಎಲ್ 23): ಕರಾವಳಿ ಕೋಯಲ್ ಚಾಂಪಿಯನ್ಸ್ 2023’ ಕಾರ್ಯಕ್ರಮವು ಮೇ 31 ಮತ್ತು ಜೂನ್ 1 ರಂದು ನಗರದ ಕುದ್ಮಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ. ಮೇ 31ರಂದು ಮೊದಲ ಸುತ್ತಿನ ಸಂಗೀತ ಕಾರ್ಯಕ್ರಮ ಹಾಗೂ ಎರಡನೇ ದಿನ ಜೂನ್ 1ರಂದು ಬೆಳಗ್ಗೆ 8:30ಕ್ಕೆ ಸೆಮಿಫೈನಲ್ ನಡೆಯಲಿದೆ. ಜೂ.1ರಂದು ಮಧ್ಯಾಹ್ನ 12:30ಕ್ಕೆ ಅಂತಿಮ ಸುತ್ತು ಹಾಗೂ ಸಂಜೆ, ಪ್ರಶಸ್ತಿ ಪ್ರದಾನ ಮತ್ತು ಬಹುಮಾನ ವಿತರಣಾ ಸಮಾರಂಭ, ’ಪಂಚಭಾಷಾ ರಸಮಂಜರಿ’ ನಡೆಯಲಿದೆ. ಎಸ್ಪಿಎಲ್ 23ರ ಆಯೋಜನೆ ಕಳೆದ ನವೆಂಬರಿನಿಂದ ನಡೆದಿದ್ದು, ರಾಜ್ಯದೆಲ್ಲೆಡೆಯಿಂದ ಒಟ್ಟು 453 ಸ್ಪರ್ಧಿಗಳು ಮೊದಲ ಹಾಗೂ ಮೆಗಾ ಅಡಿ?ನ್‌ನಲ್ಲಿ ಭಾಗವಹಿಸಿದ್ದು, ಅಂತಿಮ ಸುತ್ತಿಗೆ ಒಟ್ಟು 72 ಸ್ಪರ್ಧಿಗಳು ಆಯ್ಕೆಯಾಗಿದ್ದು, 9 ತಂಡಗಳು ಚಾಂಪಿಯನ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಹೋದ್ಯೋಗಿ ಯುವತಿಯರ ಖಾಸಗಿ ದೃಶ್ಯಗಳನ್ನು ಸೆರೆಹಿಡಿದುಕೊಂಡು ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದಡಿ ಕುಂದಾಪುರ ಯುವಕನೋರ್ವನನ್ನು ಎಚ್ಎಎಲ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನಲ್ಲಿ ಕ್ಯಾಟರಿಂಗ್ ವ್ಯವಹಾರ ನಡೆಸುತ್ತಿದ್ದ ರಘುರಾಮ್ ಬಂಧಿತ ಆರೋಪಿ. ನಿಸರ್ಗ ಗಾರ್ಡನ್ನಲ್ಲಿ ಕ್ಯಾಟರಿಂಗ್ ನಡೆಸುತ್ತಿದ್ದ ರಘುರಾಮ್, ಪಶ್ಚಿಮ ಬಂಗಾಳ ಮೂಲದ ಇಬ್ಬರು ಯುವತಿಯರನ್ನು ಕೆಲಸಕ್ಕೆ ಇಟ್ಟುಕೊಂಡಿದ್ದ. ಬಾಗ್ ಮನೆ ಟೆಕ್ಪಾರ್ಕ್ ಹಾಗೂ ಮತ್ತಿತರ ಕಡೆಗಳಿಗೆ ಕ್ಯಾಟರಿಂಗ್ ವ್ಯವಸ್ಥೆ ಕಲ್ಪಿಸುತ್ತಿದ್ದ. ಸಂತ್ರಸ್ತೆ ಕ್ಯಾಟರಿಂಗ್ ನ ಕ್ಯಾಷಿಯರ್ ಆಗಿದ್ದರೆ, ಆಕೆಯ ಸ್ನೇಹಿತೆ ಕೌಂಟರ್ ಮ್ಯಾನೇಜರ್ ಆಗಿದ್ದರು. ಸಂತ್ರಸ್ತೆ ಮತ್ತು ಆಕೆಯ ಸ್ನೇಹಿತೆ ಹಾಗೂ ಆರೋಪಿ ರಘುರಾಮ್ ನಿಸರ್ಗ ಗಾರ್ಡನ್ನಲ್ಲಿ ಒಂದೇ ಮನೆಯಲ್ಲಿ ವಾಸವಾಗಿದ್ದರು. ಮೇ 12ರಂದು ದೂರುದಾರೆ ಸ್ನಾನ ಮಾಡಲು ಬಾತ್ ರೂಮಿಗೆ ಹೋಗಿದ್ದು, ಆಗ ಆರೋಪಿಯು ಬಾತ್ ರೂಮಿನ ಗೋಡೆಯ ಮೇಲಿನಿಂದ ಆಕೆ ಸ್ನಾನ ಮಾಡುವ ದೃಶ್ಯವನ್ನು ಚಿತ್ರೀಕರಿಸುತ್ತಿದ್ದ. ಅದನ್ನು ಗಮನಿಸಿದ ಆಕೆಯ ಸ್ನೇಹಿತೆ ಜೋರಾಗಿ ಕೂಗಿಕೊಂಡಿದ್ದಾಳೆ. ನಂತರ ಆರೋಪಿಯ ಮೊಬೈಲ್ ಕಸಿದುಕೊಂಡಾಗ ಇಬ್ಬರು ಯುವತಿಯರು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪದವೀಧರರು ಉದ್ಯೋಗಕ್ಕೆ ಸೇರುವ ಸಂದರ್ಭ ಸಲ್ಲಿಸುವ ಅಂಕಪಟ್ಟಿಯ ಪರಿಶೀಲನೆ (ವೆರಿಫಿಕೇಶನ್) ಕಡ್ಡಾಯ. ಆದರೆ ಅಂಕಪಟ್ಟಿ ಪರಿಶೀಲನೆಗೆ ಮಂಗಳೂರು ವಿ.ವಿ.ಯ ವಿದ್ಯಾರ್ಥಿಗಳು ದುಬಾರಿ ಶುಲ್ಕ ತೆರಬೇಕಾಗಿದ್ದು, ಇದನ್ನು ಇಳಿಸಲು ಕ್ರಮ ಕೈಗೊಳ್ಳಬೇಕು ಎಂದು ವಿ.ವಿ.ಯ ಉಪಕುಲಪತಿಗಳಿಗೆ ನೂತನ ಶಾಸಕ ಬೈಂದೂರಿನ ಗುರುರಾಜ್ ಗಂಟೆಹೊಳೆ ಟ್ವಿಟ್ ಮೂಲಕ ಮನವಿ ಮಾಡಿದ್ದು ಮನವಿಗೆ ಮಂಗಳೂರು ವಿ.ವಿ. ಸ್ಪಂದಿಸಿದೆ. ಪದವೀಧರ ತನ್ನ 6 ಸೆಮಿಸ್ಟರ್ಗಳ ಅಂಕಪಟ್ಟಿಗಳನ್ನು ಪರಿಶೀಲಿಸಲು 9 ಸಾವಿರ ರೂ. ಮೂಲ ಶುಲ್ಕ ಹಾಗೂ ಇತರ ಶುಲ್ಕ ಸೇರಿ ಒಟ್ಟು 10,800 ರೂ. ಪಾವತಿಸಬೇಕಾಗುತ್ತದೆ. ಇದು ಮಂಗಳೂರು ವಿ.ವಿ.ಯಲ್ಲಿ ಕಲಿತ ಲಕ್ಷಾಂತರ ವಿದ್ಯಾರ್ಥಿಗಳಿಗೆ ಅದರಲ್ಲೂ ಪ್ರಮುಖವಾಗಿ ಗ್ರಾಮಾಂತರ ಪ್ರದೇಶದ ಬಡ ಮಕ್ಕಳಿಗೆ ಹೊರೆಯಾಗಿತ್ತು. ತುಮಕೂರು ರಾಜ್ಯದಲ್ಲಿಯೇ 6 ವಿಷಯಗಳ ಅಂಕಪಟ್ಟಿಗೆ ಕೇವಲ 501 ರೂ. ಶುಲ್ಕವನ್ನಷ್ಟೇ ತೆಗೆದುಕೊಳ್ಳುತ್ತಿದೆ. ಈ ಬಗ್ಗೆ ಮಂಗಳೂರು ವಿ.ವಿ.ಯ ಉಪ ಕುಲಪತಿಗಳು ಉತ್ತಮ ನಿರ್ಧಾರವನ್ನು ಕೈಗೊಂಡು, ಕರಾವಳಿಯ ಲಕ್ಷಾಂತರ ವಿದ್ಯಾರ್ಥಿಗಳಿಗೆ ಮಾಡಿಕೊಡಬೇಕು ಅನುಕೂಲ ಎಂದು ಆಗ್ರಹಿಸಿದ್ದರು.…

Read More

ಕುಂದಾಪ್ರ ಡಾಟ್ ಕಾಮ ಸುದ್ದಿ.ಉಡುಪಿ,ಮೇ20: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪಿ.ಎಂ ಕಿಸಾನ್ ಯೋಜನೆಯಡಿ ಪ್ರೋತ್ಸಾಹಧನ ಪಡೆಯಲು ಫಲಾನುಭವಿ ರೈತರು ಇ-ಕೆವೈಸಿ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದ್ದು, ಇ-ಕೆವೈಸಿ ಮಾಡಿಸಿಕೊಳ್ಳದ ರೈತ ಫಲಾನುಭವಿಗಳಿಗೆ ಯೋಜನೆಯ ಮುಂದಿನ ಕಂತು ಬಿಡುಗಡೆಯಾಗುವುದಿಲ್ಲ. ಕೃಷಿ ಇಲಾಖೆಯ ವತಿಯಿಂದ ಈಗಾಗಲೇ ಈ ಕುರಿತು ಮಾಹಿತಿ ನೀಡಲಾಗಿದ್ದು, ಇದು ಕೊನೆಯ ಅವಕಾಶವಾಗಿದೆ. ಕೂಡಲೇ ರೈತರು ತಮ್ಮ ಆಧಾರ್ ಕಾರ್ಡ್, ಆಧಾರ್ ಜೋಡಣೆಯಾಗಿರುವ ಮೊಬೈಲ್ ನಂಬರ್ ದಾಖಲೆಗಳೊಂದಿಗೆ ಸಮೀಪದ ರೈತ ಸಂಪರ್ಕ ಕೇಂದ್ರ, ಗ್ರಾಮ ಒನ್ ಕೇಂದ್ರ ಅಥವಾ ಸಾಮಾನ್ಯ ಸೇವಾ ಕೇಂದ್ರದಲ್ಲಿ ಇ-ಕೆವೈಸಿ ಮಾಡಿಸಿಕೊಳ್ಳಬಹುದಾಗಿದೆ ಎಂದು ಕುಂದಾಪುರ ತಾಲೂಕು ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆ ಮೂಡ್ಲಕಟ್ಟೆ ಕುಂದಾಪುರ ಆಶ್ರಯದಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯದ ಮಹಿಳೆಯರಿಗಾಗಿ ನಡೆದ ಅಂತರ ವಲಯ ಥ್ರೋಬಾಲ್ ಪಂದ್ಯಾವಳಿಯಲ್ಲಿ ಮೂಡುಬಿದಿರೆ ಆಳ್ವಾಸ್ ಕಾಲೇಜು ಮೂಡುಬಿದಿರೆ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಹೆಬ್ರಿ ಸರಕಾರಿ ಪ್ರಥಮ ದರ್ಜೆ ಕಾಲೇಜು ತಂಡವನ್ನು 2-0 ನೇರ ಸೆಟ್ಗಳಿಂದ ಸೋಲಿಸಿ ಆಳ್ವಾಸ್ ಚಾಂಪಿಯನ್ ಆಯಿತು. ಈ ಅಂತರ ವಲಯ ಪಂದ್ಯಾವಳಿಗೂ ಮುನ್ನ ಇದೇ ಮೈದಾನದಲ್ಲಿ ಮೇ 17ರಂದು ನಡೆದ ಉಡುಪಿ ವಲಯ ಥ್ರೋಬಾಲ್ ಪಂದ್ಯಾವಳಿಯಲ್ಲಿ ಇದೇ ಹೆಬ್ರಿ ತಂಡವನ್ನು ಸೋಲಿಸಿ ಆಳ್ವಾಸ್ ಕಾಲೇಜು ಚಾಂಪಿಯನ್ ಆಗಿತ್ತು. ಇಂಟರ್ಜೋನ್ ಪಂದ್ಯಾವಳಿಯಲ್ಲಿ ಪಧುವ ಕಾಲೇಜು ಮಂಗಳೂರು ತೃತೀಯ ಮತ್ತು ಎಂಎಸ್ಆರ್ಎಸ್ ಕಾಲೇಜು ಶಿರ್ವ ನಾಲ್ಕನೇ ಸ್ಥಾನ ಪಡೆದುಕೊಂಡಿತು. ಉಡುಪಿ ವಲಯದ ಪಂದ್ಯಾವಳಿಯಲ್ಲಿ ಎಸ್.ಎಂ.ಸಿ ಶಿರ್ವ ತೃತೀಯ ಹಾಗೂ ಎಂ.ಎಸ್.ಆರ್.ಎಸ್ ಶಿರ್ವ ನಾಲ್ಕನೇ ಸ್ಥಾನ ಪಡೆದರು. ಐಎಂಜೆ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ಅಂಡ್ ಕಾಮರ್ಸ್ ಈ ಪಂದ್ಯಾವಳಿಯನ್ನು ತಮ್ಮ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಮೇ.21: ಜಿಲ್ಲಾ ವ್ಯಾಪ್ತಿಯಲ್ಲಿ ನಿರ್ವಹಣಾ ಕೆಲಸಗಳ ಕಾರಣದಿಂದ ಮೇ 23 ಹಾಗೂ 24 ರಂದು ಈ ಕೆಳಕಂಡ ಸ್ಥಳಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ. 110/11 ಕೆ.ವಿ ಹಾಲಾಡಿ ವಿದ್ಯುತ್ ಉಪಕೇಂದ್ರದಿAದ ಹೊರಡುವ 11 ಕೆ.ವಿ ಬಿದ್ಕಲ್ಕಟ್ಟೆ ಮತ್ತು ಆವರ್ಸೆ ಮಾರ್ಗಗಳಲ್ಲಿ ಪಾಲನಾ ಕಾಮಗಾರಿ ಹಮ್ಮಿಕೊಂಡಿರುವುದರಿAದ ಬಿದ್ಕಲ್ಕಟ್ಟೆ, ಕಕ್ಕುಂಜೆ, ಹಾಲಾಡಿ-76, ಹೆಸ್ಕತ್ತೂರು, ಹಾಲಾಡಿ-28, ರಟ್ಟಾಡಿ, ಅಮಾಸೆಬೈಲು, ಮಚ್ಚಟ್ಟು, ಹಳ್ಳಾಡಿ-ಹರ್ಕಾಡಿ, ಮೊಳಹಳ್ಳಿ, ಹಾರ್ದಳ್ಳಿ-ಮಂಡಳ್ಳಿ, ಶಂಕರನಾರಾಯಣ ಮತ್ತು ಯಡಾಡಿ-ಮತ್ಯಾಡಿ ಗ್ರಾಮಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೇ 23 ರಂದು ಬೆಳಗ್ಗೆ 9 ರಿಂದ ಸಂಜೆ 5 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಮಾಡಲಾಗುವುದು. 110/33/11 ಕೆ.ವಿ ಕುಂದಾಪುರ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಕುಂದಾಪುರ, ಸಂಗಮ್, ಇಂಡಸ್ಟ್ರೀಯಲ್, ಕುಂಭಾಶಿ, ಅಂಪಾರು, ಜಪ್ತಿ, ಬಳ್ಕೂರು, ಜಪ್ತಿವಾಟರ್ಸಪ್ಲ್ಯೆ, ಗುರುಕುಲ ಮತ್ತು 33/11ಕೆ.ವಿ ಕೋಟ ವಿದ್ಯುತ್ ಉಪಕೇಂದ್ರದಿAದ ಹೊರಡುವ 11 ಕೆ.ವಿ ಕೆದೂರು ಮಾರ್ಗಗಳಲ್ಲಿ ಟ್ರೀ ಟ್ರಿಮ್ಮಿಂಗ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಹಟ್ಟಿಯಂಗಡಿ ಹಾಗೂ ಹೆಮ್ಮಾಡಿ ಪರಿಸರದಲ್ಲಿ ಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಾಟಕ್ಕೆ ಸಂಬಂಧಿಸಿದಂತೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಭೂವಿಜ್ಞಾನಿ ಸಂಧ್ಯಾ ಅವರು ಕಾರ್ಯಾಚರಣೆ ನಡೆಸಿ 5 ಟಿಪ್ಪರ್ ಲಾರಿಗಳನ್ನು ವಶ ಪಡಿಸಿಕೊಂಡಿದ್ದಾರೆ. ಹಟ್ಟಿಯಂಗಡಿ ಗ್ರಾಮದ ಹಟ್ಟಿಕುದ್ರು ಹಾಗೂ ಹೆಮ್ಮಾಡಿ ಗ್ರಾಮದ ಕನ್ನಡಕುದ್ರು ಎಂಬಲ್ಲಿ ಪಂಚಗಂಗವಲ್ಲಿ ನದಿಯಿಂದ ಅನಧಿಕೃತವಾಗಿ ಮರಳುಗಾರಿಕೆ ನಡೆಸಿ ಸಾಗಾಟ ನಡೆಸುತ್ತಿರುವ ಬಗ್ಗೆ ಸಾರ್ವಜನಿಕರಿಂದ ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ ಸ್ವೀಕೃತವಾದ ದೂರಿನ ಮೇರೆಗೆ ಇಲಾಖೆ ಹಿರಿಯ ಭೂವಿಜ್ಞಾನಿ ಸಂದೀಪ್ ಜಿ.ಯು ಅವರ ಮಾರ್ಗದರ್ಶನದಲ್ಲಿ ಶುಕ್ರವಾರ ಮೇ. 19 ರ ರಾತ್ರಿ 10 ಗಂಟೆಗೆ ಹಟ್ಟಿಕುದ್ರು ಎಂಬಲ್ಲಿ ಕಾರ್ಯಾಚರಣೆ ನಡೆಸಿ ಮರಳು ದಕ್ಕೆಯಲ್ಲಿದ್ದ 4 ಲಾರಿಗಳನ್ನು ವಶಕ್ಕೆ ಪಡೆಯಲಾಗಿದೆ. ರಾತ್ರಿ 1 ಗಂಟೆಗೆ ಕನ್ನಡಕುದ್ರು ಎಂಬಲ್ಲಿ ದಾಳಿ ನಡೆಸಿ ಮರಳು ಸಹಿತ 1 ಲಾರಿಯನ್ನು ವಶಕ್ಕೆ ಪಡೆಯಲಾಗಿದೆ. ಈ ಬಗ್ಗೆ ಭೂವಿಜ್ಞಾನಿಯವರು ಪ್ರಕರಣವನ್ನು ದಾಖಲಿಸಿಕೊಂಡಿದ್ದು, ಮುಂದಿನ ಕಾನೂನು ಕ್ರಮ ವಹಿಸುವವರೆಗೆ ಅನಧಿಕೃತ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಇಲ್ಲಿನ ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಸಂಸದ ಬಿ.ವೈ. ರಾಘವೇಂದ್ರ ಹಾಗೂ ಬೈಂದೂರು ಶಾಸಕರಾದ ಗುರುರಾಜ ಶೆಟ್ಟಿ ಗಂಟಿಹೊಳೆ ಅವರು ಭೇಟಿ ನೀಡಿ ದೇವರ ದರ್ಶನ ಪಡೆದರು. ಸರತಿ ಸಾಲಿನಲ್ಲಿಯೇ ದೇವಳ ಪ್ರವೇಶಿಸಿದ ನಾಯಕರು, ದೇವರಿಗೆ ಪೂಜೆ ಸಲ್ಲಿಸಿದರು. ಈ ವೇಳೆ ದೇವಳದ ವತಿಯಿಂದ ಸಂಸದ – ಶಾಸಕರನ್ನು ಗೌರವಿಸಲಾಯಿತು. ಈ ವೇಳೆ ದೇವಳದ ಮಾಜಿ ಧರ್ಮದರ್ಶಿ ಕೃಷ್ಣಪ್ರಸಾದ್ ಅಡ್ಯಂತಾಯ, ಉದ್ಯಮಿಗಳಾದ ಬಿ.ಎಸ್. ಸುರೇಶ್ ಶೆಟ್ಟಿ, ವೆಂಕಟೇಶ ಕಿಣಿ ಮೊದಲಾದವರು ಉಪಸ್ಥಿತರಿದ್ದರು.

Read More