ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಳೆದ ಇಪ್ಪತ್ತೈದು ವರ್ಷದಿಂದ ಹಾಲಾಡಿ ಸಾಧಿಸಿದಿ ಜನಪ್ರಿಯತೆ, ಗಳಿಸಿದ ಪ್ರೀತಿ, ಒಳ್ಳೆಯ ತನದೊಟ್ಟಿಗೆ ಅಭ್ಯರ್ಥಿ ಕಿರಣ್ ಕೊಡ್ಗಿ ನಿಷ್ಕಳಂಕ ವ್ಯಕ್ತಿತ್ವ ಕುಂದಾಪುರದಲ್ಲಿ ನಿರೀಕ್ಷೆಗೂ ಮೀರಿ ಮತದಾರರು ಸ್ಪಂದಿಸಿದ್ದು, ಒಳ್ಳೆಯ ತನ ಗೆದ್ದಿದೆ. ಹಾಗೆ ಬಿಜೆಪಿ ವಿರೋಧ ಪಕ್ಷದ ಸಾಲಿನಲ್ಲಿದ್ದು, ಕಾಂಗ್ರೆಸ್ ಕೊಟ್ಟ ಗ್ಯಾರೆಂಟಿ ಈಡೇರಿಸದಿದ್ದರೆ ಕಾರ್ಯಕರ್ತರು ಬೀದಿಗಳಿದು ಹೋರಾಟಕ್ಕೂ ಸಿದ್ದರಾಗಬೇಕು ಎಂದು ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಕರೆ ಕೊಟ್ಟರು. ಕುಂದಾಪುರ ಮಂಡಲ ಬಿಜೆಪಿ ಕೋಟೇಶ್ವರ ಸರಸ್ವತಿ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಆಯೋಜಿಸಿದ ನೂತನ ಶಾಸಕ ಕಿರಣ್ ಕುಮಾರ್ ಕೊಡ್ಗಿ ಅಭಿನಂದನೆ ಹಾಗೂ ಕಾರ್ಯಕರ್ತರ ಕೃತಜ್ಞತೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಕುಂದಾಪುರ ಮಂಡಲ ಬಿಜೆಪಿ ಅಧ್ಯಕ್ಷ ಶಂಕರ ಅಂಕದಕಟ್ಟೆ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ಕೊಯಿಲಾಡಿ ಸುರೇಶ್ ನಾಯಕ್, ಮಾಜಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ಶಾಸಕ ಕಿರಣ್ ಕುಮಾರ್ ಕೊಡ್ಗಿ, ಕುಂದಾಪುರ ಚುನಾವಣಾ ಉಸ್ತುವಾರಿ ಶ್ಯಾಮಲಾ ಕುಂದರ್, ಮಹಿಳಾ ಮೋರ್ಚಾ ಜಿಲ್ಲಾ ಉಪಾಧ್ಯಕ್ಷೆ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿಬೆಂಗಳೂರು: ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುತ್ತದೆ. 5 ಗ್ಯಾರಂಟಿಗಳಿಗೆ ತಾತ್ವಿಕವಾಗಿ ಸಂಪುಟದಲ್ಲಿ ಒಪ್ಪಿಗೆ ನೀಡಿದ್ದೇವೆ. ನಾವು ಕರ್ನಾಟಕವನ್ನು ಆರ್ಥಿಕ ದಿವಾಳಿಗೆ ಸಿಲುಕಿಸದೆ ನಾವು ಗ್ಯಾರಂಟಿಗಳನ್ನು ಈಡೇರಿಸುತ್ತೇವೆ ಎಂದು ರಾಜ್ಯದ ನೂತನ ಸಿಎಂ ಸಿದ್ದರಾಮಯ್ಯ ಹೇಳಿದರು. ಕಾಂಗ್ರೆಸ್ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿ ಮೊದಲ ಸಚಿವ ಸಂಪುಟ ಸಭೆಯಲ್ಲಿ ಐದು ಗ್ಯಾರಂಟಿ ಯೋಜನೆಗಳಿಗೆ ಒಪ್ಪಿಗೆ ನೀಡಲಾಗಿದೆ. ಇದರಿಂದ 50 ಸಾವಿರ ಕೋಟಿ.ರೂ ಹೊರೆಯಾಗಬಹುದು ಎಂದು ಅಂದಾಜಿಸಲಾಗಿದೆ. ಗೃಹ ಜ್ಯೋತಿ ಯೋಜನೆಯಡಿ ತಿಂಗಳಿಗೆ 200 ಯೂನಿಟ್ ಉಚಿತ ವಿದ್ಯುತ್ ನೀಡುತ್ತೇವೆ. ಇದಕ್ಕೆ ಸುಮಾರು ತಿಂಗಳಿಗೆ 1200 ಕೋಟಿ ರೂ. ಆಗಬಹುದು. ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ಮನೆ ಯಜಮಾನಿಗೆ ಪ್ರತಿ ತಿಂಗಳು 200 ರೂ. ಹಾಕಲಾಗುವುದು. ಅನ್ನ ಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿ, ಈ ವರ್ಷದ ಪದವೀದರ, ಪಿಎಚ್ಡಿ, ಎಂಬಿಬಿಎಸ್ ಪದವೀದರ ನಿರುದ್ಯೋಗಿಗಳಿಗೆ ಎರಡೂವರೆ ವರ್ಷಗಳ ವರೆಗೆ ತಿಂಗಳಿಗೆ ಮೂರು ಸಾವಿರ ರೂ. ನೀಡಲಾಗುವುದು. ಈ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಮೇ19: ನಾರಾಯಣ ನೇತ್ರಾಯಲಯದ ಅಧ್ಯಕ್ಷ, ಕುಂದಾಪುರ ತಾಲೂಕು ಶಂಕರನಾರಾಯಣ ಮೂಲದ ಡಾ। ಭುಜಂಗ ಶೆಟ್ಟಿ (69) ಇಂದು ನಿಧನರಾದರು. ಇಂದು ಆಸ್ಪತ್ರೆಗೆ ತೆರಳಿ ಕಣ್ಣಿನ ರೋಗಿಗಳಿಗೆ ಚಿಕಿತ್ಸೆ ನೀಡಿ ಮನೆಗೆ ವಾಪಸ್ಸಾಗಿದ್ದ ಭುಜಂಗ ಶೆಟ್ಟಿ ಅವರಿಗೆ ಸಂಜೆ ತೀವ್ರ ಹೃದಯಾಘಾತ ಉಂಟಾಗಿತ್ತು. ಹೃದಯಾಘಾತ ಸಂಭವಿಸಿದ್ದ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಭುಜಂಗ ಶೆಟ್ಟಿ ಅವರು ದೇಶದ ಖ್ಯಾತ ನೇತ್ರ ತಜ್ಞರಾಗಿದ್ದರು. ಭುಜಂಗ ಶೆಟ್ಟಿ ಅವರು ಬಾಲ್ಯದ ಶಿಕ್ಷಣವನ್ನು ಶಂಕರನಾರಾಯಣ ಹಾಗೂ ಸಾಗರ ಕಾರ್ಗಲ್‌ನಲ್ಲಿ ಪಡೆದಿದ್ದರು. 1978 ರಲ್ಲಿ ಬೆಂಗಳೂರು ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ಮಾಡಿದ್ದರು. 1982 ರಲ್ಲಿ ಬೆಂಗಳೂರು ವೈದ್ಯಕೀಯ ಕಾಲೇಜಿನ ಮಿಂಟೋ ಆಪ್ತಾಲ್ಮಿಕ್ ಆಸ್ಪತ್ರೆಯಲ್ಲಿ ನೇತ್ರಶಾಸ್ತ್ರದಲ್ಲಿ ರೆಸಿಡೆನ್ಸಿ ತರಬೇತಿ ಪಡೆದಿದ್ದರು. 80ರ ದಶಕದಲ್ಲಿ ಸಣ್ಣ ಕ್ಲಿನಿಕ್ನಲ್ಲಿ ನೇತ್ರ ಚಿಕಿಯ್ಸಾಲಯವನ್ನು ಪ್ರಾರಂಭಿಸಿದ ಡಾ. ಭುಜಂಗ ಶೆಟ್ಟಿ ನಾರಾಯಣ ನೇತ್ರಾಯಲದ ಅಧ್ಯಕ್ಷರಾಗಿದ್ದರು. ಭುಜಂಗ ಶೆಟ್ಟಿ ನಾರಾಯಣ ನೇತ್ರಾಲಯದಲ್ಲಿ ವಿವಿಧ ಉಪವಿಭಾಗಗಳ ಅಭಿವೃದ್ಧಿಯನ್ನು ಸಕ್ರಿಯವಾಗಿ ಪ್ರೋತ್ಸಾಹಿಸಿದ್ದಾರೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು: 2,000 ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ವಾಪಸ್ ಪಡೆದಿದೆ. ಇನ್ನು ಮುಂದೆ ಗ್ರಾಹಕರಿಗೆ 2,000 ರೂ. ಮುಖಬೆಲೆಯ ನೋಟುಗಳನ್ನು ನೀಡದಂತೆ ಆರ್ಬಿಐ ಬ್ಯಾಂಕ್ಗಳಿಗೆ ಸೂಚನೆ ನೀಡಿದೆ. 2000 ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂತೆಗೆದುಕೊಳ್ಳಬೇಕು. ಅವುಗಳನ್ನು 2023ರ ಸೆಪ್ಟೆಂಬರ್ 30 ರೊಳಗೆ ಬ್ಯಾಂಕ್ಗಳಲ್ಲಿ ಬದಲಾಯಿಸಿಕೊಳ್ಳಿ ಎಂದು ಆರ್ಬಿಐ ಪ್ರಕಟಣೆ ಮೂಲಕ ಸೂಚಿಸಿದೆ. ಭಾರತೀಯ ರಿಸರ್ವ್ ಬ್ಯಾಂಕ್ (RBI) 19 ಪ್ರಾದೇಶಿಕ ಕಚೇರಿಗಳು ಮತ್ತು ಇತರ ಬ್ಯಾಂಕುಗಳು ಮೇ 23 ರಿಂದ 2,000 ರೂ. ನೋಟುಗಳನ್ನು ತೆಗೆದುಕೊಳ್ಳಲು ಪ್ರಾರಂಭಿಸುತ್ತವೆ. ಅವು ಕಾನೂನುಬದ್ಧವಾದ ಟೆಂಡರ್ ಆಗಿರುತ್ತವೆ ಎಂದು RBI ತಿಳಿಸಿದೆ. 2016ರ ನ.9 ರಂದು ರಾತ್ರೋರಾತ್ರಿ ಪ್ರಧಾನಿ ನರೇಂದ್ರ ಮೋದಿ ಅವರು ಹೆಚ್ಚಿನ ಮೌಲ್ಯದ 1,000 ಮತ್ತು 500 ನೋಟುಗಳನ್ನು ಬ್ಯಾನ್ ಮಾಡಲಾಗಿದೆ ಎಂದು ಘೋಷಿಸಿದ್ದರು. ನಂತರ 2,000 ನೋಟು ಮುದ್ರಿಸಲು ಪ್ರಾರಂಭಿಸಲಾಗಿತ್ತು. ವಿನಿಮಯ ಮಾಡಿಕೊಳ್ಳಬಹುದಾದ 2,000 ರೂ. ನೋಟುಗಳ ಮೊತ್ತಕ್ಕೆ ಮಿತಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ಅವರು ಬಿಜೆಪಿ ತ್ರಾಸಿ ಮಹಾಶಕ್ತಿ ಕೇಂದ್ರ ವ್ಯಾಪ್ತಿಯಲ್ಲಿ ವಿಜಯೋತ್ಸವದ ರೋಡ್ ಶೋ ಮೂಲಕ ಮತದಾರರಿಗೆ ಕೃತಜ್ಞತೆ ಸಲ್ಲಿಸಿದರು. ಮುಳ್ಳಿಕಟ್ಟೆ, ತ್ರಾಸಿ, ಕಂಚುಗೋಡು, ಹೊಸಪೇಟೆ, ಗಂಗೊಳ್ಳಿ, ಗುಜ್ಜಾಡಿ ಹಾಗೂ ನಾಯಕವಾಡಿ ಪ್ರದೇಶದಲ್ಲಿ ತೆರೆದ ವಾಹನದಲ್ಲಿ ರೋಡ್ ಶೋ ನಡೆಸಿದ ಶಾಸಕ ಗುರುರಾಜ್ ಗಂಟಿಹೊಳೆ ಅವರಿಗೆ ಜನರು ಅದ್ದೂರಿ ಸ್ವಾಗತ ನೀಡಿದರು. ಚುನಾವಣೆಯಲ್ಲಿ ಗೆಲುವಿಗೆ ಸಹಕರಿಸಿದ ಮತದಾರರಿಗೆ ಕೃತಜ್ಞತೆ ಸಲ್ಲಿಸಿದ ಶಾಸಕ ಗುರುರಾಜ್ ಗಂಟಿಹೊಳೆ, ಜನರ ನಿರೀಕ್ಷೆಗೆ ತಕ್ಕಂತೆ ಕಾರ್ಯಕರ್ತರ ಶಾಸಕನಾಗಿ ಕಾರ್ಯ ನಿರ್ವಹಿಸುತ್ತೇನೆ. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದರೂ ಪರವಾಗಿಲ್ಲ. ಕ್ಷೇತ್ರದ ಅಭಿವೃದ್ಧಿಗೆ ಹಾಗೂ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತೇನೆ. ಜನರು ನನ್ನ ಮೇಲೆ ಇಟ್ಟರುವ ಭರವಸೆಗಳನ್ನು ಉಳಿಸಿಕೊಳ್ಳುವ ನಂಬಿಕೆ ಇದ್ದು, ಮುಂದಿನ ಐದು ವರ್ಷಗಳ ಕಾಲ ಬೈಂದೂರಿನ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುವುದಾಗಿ ಅವರು ಭರವಸೆ ನೀಡಿದರು. ದಾರಿಯುದ್ದಕ್ಕೂ ಜನರು ಶಾಸಕ ಗುರುರಾಜ್ ಗಂಟಿಹೊಳೆ ಅವರಿಗೆ ಹೂಮಾಲೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಗಂಗನಾಡು ವನಕೊಡ್ಲು ಶ್ರೀ ಮಹಾಲಿಂಗೇಶ್ವರ ಮಹಿಷಮರ್ದಿನಿ ದೇವಸ್ಥಾನದಲ್ಲಿ ಮೇ 20 ರಿಂದ ಮೇ 26ರವರೆಗೆ ಪ್ರತಿಷ್ಠಾಪನೆ, ಅಷ್ಟಬಂಧ ಬ್ರಹ್ಮಕುಂಭಾಭಿಷೇಕ, ಶೈವೋತ್ಸವ ಮಹಾರಂಗ ಪೂಜಾ, ದೀಪಾರಾಧನೆ ನಡೆಯಲಿದೆ ಎಂದು ದೇವಳದ ಅನುವಂಶಿಕ ಆಡಳಿತ ಮೊಕ್ತಸರ ಡಾ. ಯಡ್ತರೆ ರಾಜಮೋಹನ್ ಶೆಟ್ಟಿ ತಿಳಿಸಿದ್ದಾರೆ. ಬೈಂದೂರು ಪ್ರೆಸ್ ಕ್ಲಬ್ಬಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮೇ 22ರಂದು ಬೆಳಗ್ಗೆ ಶಿಖರ ಪ್ರತಿಷ್ಠೆ, ಪ್ರಾಸಾದ ಪ್ರತಿಷ್ಠೆ, ಮಹಾಲಿಂಗೇಶ್ವರ ದೇವರ ಪ್ರತಿಷ್ಠೆ, ಮಹಿಷಮರ್ದಿನಿ ಮತ್ತು ಗಣಪತಿ ದೇವರ ನೂತನ ಬಿಂಬ ಪ್ರತಿಷ್ಠೆ, ಪಾರ್ವತಿ ದೇವಿಯ ಪ್ರತಿಷ್ಠೆ, ಜೀವಕಲಶಾಭಿಷೇಕ, ಪ್ರತಿಷ್ಠಾ ಪೂಜೆ, ಆಚಾರ್ಯ ದಕ್ಷಿಣೆ, ಪ್ರತಿಜ್ಞಾವಿಧಿ ಮಹಾಪೂಜೆ ನಡೆಯಲಿದೆ. ಸಂಜೆ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ನಿಟ್ಟೆ ಸ್ವಾಯುತ್ತ ವಿಶ್ವವಿದ್ಯಾಲಯ ಕುಲಪತಿ ಡಾ.ಎನ್. ವಿನಯ ಹೆಗ್ಡೆ, ಮಂಗಳೂರು ತೇಜಸ್ವಿನಿ ಆಸ್ಪತ್ರೆಯ ವೈದ್ಯ ಡಾ.ಎಂ.ಶಾಂತರಾಮ ಶೆಟ್ಟಿ ಅವರಿಗೆ ಗೌರವಾರ್ಪಣೆ ಇರಲಿದೆ. ಪುತ್ತೂರು ವಿವೇಕಾ ನಂದ ವಿದ್ಯಾಸಂಸ್ಥೆಯ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್, ಸಂಸದ ಬಿ.ವೈ. ರಾಘವೇಂದ್ರ, ಪೊಳಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಮೇ.19: ಪ್ರಸಕ್ತ ಸಾಲಿನ ಸಿಇಟಿ ಪರೀಕ್ಷೆಗಳು ಮೇ 20 ಮತ್ತು 21 ರಂದು ನಡೆಯಲಿದ್ದು, ಇದಕ್ಕಾಗಿ ಉಡುಪಿಯಲ್ಲಿ 6, ಕಾರ್ಕಳದಲ್ಲಿ 2, ಕುಂದಾಪುರದಲ್ಲಿ 2 ಹಾಗೂ ಬ್ರಹ್ಮಾವರದಲ್ಲಿ 2 ಸೇರಿದಂತೆ ಒಟ್ಟು 12 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗುತ್ತಿದ್ದು, ಜಿಲ್ಲೆಯಲ್ಲಿ ಒಟ್ಟು 5712 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ (ಪ್ರಭಾರ) ಪ್ರಸನ್ನ ಹೆಚ್ ತಿಳಿಸಿದರು. ಅವರು ಇಂದು ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ, 2023 ನೇ ನಾಲಿನ ಸಿಇಟಿ ಪರೀಕ್ಷೆ ಮತ್ತು ದ್ವಿತೀಯ ಪಿ.ಯು.ಸಿ ಪೂರಕ ಪರೀಕ್ಷೆ ನಡೆಸುವ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಿಇಟಿ ಪರೀಕ್ಷೆ ಕುರಿತು ಪ್ರಶ್ನೆಪತ್ರಿಕೆಯನ್ನು ಜಿಲ್ಲಾ ಖಜಾನೆಯಲ್ಲಿ ಸೂಕ್ತ ಪೊಲೀಸ್ ಭದ್ರತೆಯಲ್ಲಿ ಇಡುವಂತೆ ತಿಳಿಸಿದ ಅವರು, ಖಜಾನೆಯಲ್ಲಿ ಸಿಸಿಟಿವಿ ವ್ಯವಸ್ಥೆ ಅಳವಡಿಸುವಂತೆ ಹಾಗೂ ಪ್ರಶ್ನೆ ಪತ್ರಿಕೆ ವಿತರಣೆಗೆ ನೇಮಿಸಿರುವ ತಾಲೂಕುಗಳ ತಹಶೀಲ್ದಾರ್ಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ರೋಡ್ ಶೋ ಮೂಲಕ ಮತದಾರರಿಗೆ ಕೃತಜ್ಞತೆ ಸಲ್ಲಿಸಲು ಆಗಮಿಸಿದ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ಅವರಿಗೆ ಗುಜ್ಜಾಡಿ ಬಸ್ ನಿಲ್ದಾಣದ ಬಳಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಅದ್ದೂರಿ ಸ್ವಾಗತ ನೀಡಿದರು. ತೆರೆದ ವಾಹನದಲ್ಲಿ ಗುಜ್ಜಾಡಿಯ ವಿವಿಧೆಡೆ ರೋಡ್ ಶೋ ನಡೆಸಿದ ಶಾಸಕ ಗುರುರಾಜ್ ಗಂಟಿಹೊಳೆ, ಚುನಾವಣೆಯಲ್ಲಿ ಗೆಲುವಿಗೆ ಸಹಕರಿಸಿದ ಮತದಾರರಿಗೆ ಕೃತಜ್ಞತೆ ಸಲ್ಲಿಸಿದರು. ಜನರ ನಿರೀಕ್ಷೆಗೆ ತಕ್ಕಂತೆ ಕಾರ್ಯಕರ್ತರ ಶಾಸಕನಾಗಿ ಕಾರ್ಯ ನಿರ್ವಹಿಸಿ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುವುದಾಗಿ ಅವರು ಭರವಸೆ ನೀಡಿದರು. ಬೈಂದೂರು ಮಂಡಲ ಅಧ್ಯಕ್ಷ ದೀಪಕಕುಮಾರ್ ಶೆಟ್ಟಿ, ತಾಪಂ ಮಾಜಿ ಸದಸ್ಯ ಕರಣ್ ಪೂಜಾರಿ, ಬಿಜೆಪಿ ಮುಖಂಡ ಉಮೇಶ ಮೇಸ್ತ, ಗಂಗೊಳ್ಳಿ ಮತ್ತು ಗುಜ್ಜಾಡಿ ಗ್ರಾಪಂ ಸದಸ್ಯರು, ವಿವಿಧ ಶಕ್ತಿ ಕೇಂದ್ರಗಳ ಅಧ್ಯಕ್ಷರು, ಬಿಜೆಪಿ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಎಸ್.ಎಸ್.ಎಲ್.ಸಿ ಗಣಿತ ವಿಷಯದಲ್ಲಿ ಕಡಿಮೆ ಅಂಕ ಬಂದಿದೆಯಾ? ಆದರೂ ವಿಜ್ಞಾನ ವಿಷಯ ತೆಗೆದುಕೊಂಡು ಸಾಧನೆ ಮಾಡಬೇಕೆಂಬ ಆಕಾಂಕ್ಷೆ ಇದೆಯೇ? ಗಣಿತದಲ್ಲಿ ಕಡಿಮೆ ಅಂಕ ಪಡೆದು ವಿಜ್ಞಾನ ವಿಭಾಗದಲ್ಲಿ ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಮದರ್ ತೆರೇಸಾ ಪದವಿ ಪೂರ್ವ ಕಾಲೇಜಿನಲ್ಲೊಂದು ಸದಾವಕಾಶವಿದೆ. ಅದುವೇ ಹೋಂ ಸೈನ್ಸ್ ( ಗೃಹ ವಿಜ್ಞಾನ – PCBH) ವಿಭಾಗ. ಈ ವಿಭಾಗವನ್ನು ಆಯ್ಕೆ ಮಾಡಿಕೊಂಡರೆ ತಾಂತ್ರಿಕ ಕ್ಷೇತ್ರವನ್ನು ಹೊರತುಪಡಿಸಿ ಬೇರೆಲ್ಲಾ ಕ್ಷೇತ್ರಗಳಲ್ಲಿ ಮುಂದುವರೆಯಲು ನೀಟ್ ಬರೆಯಲು ಅವಕಾಶವಿದೆ. ತನ್ಮೂಲಕ ವೈದ್ಯಕೀಯ ಕ್ಷೇತ್ರದ ಬೇರೆ ಬೇರೆ ಕೋರ್ಸುಗಳನ್ನು ಅಂದರೆ ಎಂ.ಬಿ.ಬಿ.ಎಸ್, ವೆಟರ್ ನರಿ, ಪ್ಯಾರಾ ಮೆಡಿಕಲ್, ಆಯುರ್ವೇದಿಕ್, ಡಯಟಿಶಿಯನ್ ಮತ್ತು ಹೋಮಿಯೋಪತಿಯಂತಹ ಮೊದಲಾದ ಕ್ಷೇತ್ರಗಳಲ್ಲೂ ಸಾಧನೆ ಮಾಡಬಹುದು. ಇದಲ್ಲದೆ ಬಿ. ಎಸ್ ಸಿ ನರ್ಸಿಂಗ್, ಇಂಟರಿಯರ್ ಡೆಕೋರೇಷನ್, ಹಾಗೂ ಜೈವಿಕ ವಿಜ್ಞಾನ ದಲ್ಲಿ ಪದವಿ, ಸ್ನಾತಕೋತ್ತರ ಪದವಿ ಪಡೆಯುವ ವಿಫುಲ ಅವಕಾಶಗಳು ಇದೆ. ಇದರ ಸಂಪೂರ್ಣ ಸದುಪಯೋಗ ವನ್ನು ಆಸಕ್ತ ಗ್ರಾಮೀಣ ವಿದ್ಯಾರ್ಥಿಗಳು…
119- ಕುಂದಾಪುರ ವಿಧಾನಸಭಾ ಕ್ಷೇತ್ರದ ಅಂತಿಮ ಫಲಿತಾಂಶ ಪಟ್ಟಿ
