ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಅಮೆರಿಕಾ ಪ್ರವಾಸದಲ್ಲಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಮೂರು ದಿನಗಳ ಊಟೋಪಚಾರದ ಆತಿಥ್ಯ ನಿರ್ವಹಿಸಿದ ಆಲೂರು ಮೂಲದ ಅನಿವಾಸಿ ಭಾರತೀಯ, ವುಡ್‌ಲ್ಯಾಂಡ್ಸ್ ಹೋಟೆಲ್ ಮಾಲೀಕ ಆನಂದ ಪೂಜಾರಿ, ಅತಿಥ್ಯೋದ್ಯಮದಲ್ಲಿ ಸೈ ಎನಿಸಿಕೊಂಡಿದ್ದಾರೆ. ಪ್ರಧಾನಿ ಮೋದಿ ಅವರು ಅಮೇರಿಕಾ ಪ್ರವಾಸ ಕೈಗೊಂಡಾಗಲೆಲ್ಲಾ ಆನಂದ ಪೂಜಾರಿ ಅವರಿಗೆ ಆತಿಥ್ಯದ ಜವಾಬ್ದಾರಿ ದೊರೆತಿದೆ. ವಾಷಿಂಗ್ಟನ್ ಡಿಸಿಯಲ್ಲಿ ಅವರು 3ನೇ ಬಾರಿಗೆ ಮೋದಿಯವರಿಗೆ ಆತಿಥ್ಯ ನೀಡಿದ್ದಾರೆ. ವಾಷಿಂಗ್ಟನ್ ಡಿಸಿಯಲ್ಲಿಯೇ ವುಡ್‌ಲ್ಯಾಂಡ್ಸ್ ಪ್ಯೂರ್ ವೆಜಿಟೇರಿಯನ್ ಇಂಡಿಯನ್ ಕ್ಯೂಸಿನ್ ನಡೆಸುತ್ತಿರುವ ಅವರು, ಜ್ಯುವಲ್ಸ್ ಆಫ್ ಇಂಡಿಯಾ ಎಂಬ ರೆಸ್ಟೋರೆಂಟ್ ಕೂಡ ಹೊಂದಿದ್ದು, ಇವರ ಹೋಟೆಲ್‌ಗಳಲ್ಲಿ ತಯಾರಾಗುವ ಭಾರತೀಯ ಖಾದ್ಯಗಳು ಅಮೆರಿಕನ್ನರಿಗೂ ಅಚ್ಚುಮೆಚ್ಚು. ಇದನ್ನೂ ಓದಿ: ಕುಂದಾಪ್ರ ಡಾಟ್ ಕಾಂ ಪ್ರಸ್ತುತಿಯ ’ವಿಷನ್ ಬೈಂದೂರು 2033’ ಕಾರ್ಯಕ್ರಮ ಉದ್ಘಾಟನೆ – https://kundapraa.com/?p=67337 . ಬೈಂದೂರು ತಾಲೂಕಿನ ಆಲೂರು ಗ್ರಾಮದ ಕಲ್ಲಂಗಡಿಮನೆ ನಿವಾಸಿ ಬಡಿಯ ಪೂಜಾರಿ ಮತ್ತು ಗಿರಿಜಾ ಪೂಜಾರಿ ದಂಪತಿ ಪುತ್ರರಾದ ಆನಂದ ಅವರು, ವಾಷಿಂಗ್ಟನ್…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಜೆಸಿಐ ಭಾರತದ ಸಲ್ಯೂಟ್ ದಿ ಸೈಲೆಂಟ್ ವರ್ಕರ್ ಕಾರ್ಯಕ್ರಮದ ಭಾಗವಾಗಿ ಜೆಸಿಐ ಉಪ್ಪುಂದ ವತಿಯಿಂದ ಉಪ್ಪುಂದ ಮಾತೃಶ್ರೀ ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸತತ ಒಂಬತ್ತು ವರ್ಷಗಳಿಂದ ಮಯ್ಯಾಡಿ ಗ್ರಾಮದಲ್ಲಿ ಬ್ರ್ಯಾಂಚ್ ಪೋಸ್ಟ್ ಮಾಸ್ಟರ್ ಶಾರದಾ ಅವರನ್ನು ಸನ್ಮಾನಿಸಲಾಯಿತು. ಜೆಸಿಐ ಉಪ್ಪುಂದದ ಅಧ್ಯಕ್ಷರಾದ ಪ್ರದೀಪ್ ಶೆಟ್ಟಿ ಕಾರಿಕಟ್ಟೆ ಸಭಾಧ್ಯಕ್ಷತೆ ವಹಿಸಿದ್ದರು. ವಲಯ ನಿರ್ದೇಶಕ ನಾಗರಾಜ್ ಪೂಜಾರಿ ಉಜ್ಜೇರಿ, ಪೂರ್ವಾಧ್ಯಕ್ಷ ಪ್ರಕಾಶ್ ಭಟ್, ಹಿರಿಯ ಸದಸ್ಯರಾದ ಮಂಜುನಾಥ್ ದೇವಾಡಿಗ, ಪೂರ್ವ ಅಧ್ಯಕ್ಷರಾದ ಮಂಗೇಶ್ ಶಾನುಭೋಗ್, ಜೆಸಿರೇಟ್ ಅಧ್ಯಕ್ಷ ರೇಖಾ ಜೂನಿಯರ್ ಜೆಸಿ ಅಧ್ಯಕ್ಷೆ ಜೆಜೆಸಿ ನಿಶಾ ಸಂತೋಷ ಶೆಟ್ಟಿ ಹಾಗೂ ಇತರರು ಉಪಸ್ಥಿತರಿದ್ದರು. ಪೂರ್ವ ಅಧ್ಯಕ್ಷರಾದ ಸುಬ್ರಮಣ್ಯ ಜಿ. ಸ್ವಾಗತಿಸಿದರು. ಜೆಸಿ ರಮಣಿ ಪರಿಚಯ ವಾಚಿಸಿದರು. ಕಾರ್ಯದರ್ಶಿ ಪುರಂದರ ಧನ್ಯವಾದ ಸಮರ್ಪಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಡುವುದೇ ಅಭಿವೃದ್ಧಿ ಎಂಬ ಕಲ್ಪನೆ ನಮ್ಮಲ್ಲಿದೆ. ಆದರೆ ಶಿಕ್ಷಣ, ಆರೋಗ್ಯ ಮತ್ತು ತಲಾ ಆದಾಯದ ಅಂಶಗಳನ್ನು ಒಟ್ಟು ಸೇರಿಸಿ ಮಾಡಲಾಗುವ ಅಪೇಕ್ಷಿತ ಮಾರ್ಪಾಡುಗಳು ನೈಜ ಅಭಿವೃದ್ಧಿ ಎಂದೆನಿಸಿಕೊಳ್ಳುತ್ತದೆ ಎಂದು ರಾಜ್ಯ ಪಂಚಾಯತ್ ರಾಜ್ ಸಂಪನ್ಮೂಲ ವ್ಯಕ್ತಿ ಎಸ್. ಜನಾರ್ದನ ಮರವಂತೆ ಹೇಳಿದರು. ಅವರು ಉಪ್ಪುಂದ ದೇವಕಿ ಬಿ.ಆರ್. ಸಭಾಂಗಣದಲ್ಲಿ ಕುಂದಾಪ್ರ ಡಾಟ್ ಕಾಂ ನ್ಯೂಸ್ ಪೋರ್ಟೆಲ್ ವತಿಯಿಂದ ಆಯೋಜಿಸಲಾದ ‘ವಿಷನ್ ಬೈಂದೂರು 2033’ ಕಾರ್ಯಕ್ರಮ ಉದ್ಘಾಟಿಸಿ, ಅಭಿವೃದ್ಧಿಯ ಪರಿಕಲ್ಪನೆ ವಿಷಯದ ಬಗ್ಗೆ ವಿಚಾರ ಮಂಡನೆ ಮಾಡಿದರು. ಯುನೈಟೆಟ್ ನೇಷನ್ಸ್ ಡೆವಲಪ್ಮೆಂಟ್ ಪ್ರೋಗ್ರಾಂ ಜಾಗತಿಕವಾಗಿ ಮಾತ್ರವಲ್ಲದೇ ಪ್ರತಿ ದೇಶದ ಮಾನವ ಅಭಿವೃದ್ಧಿಯ ಸೂಚ್ಯಂಕವನ್ನು ಜನರ ಮುಂದಿಡುತ್ತದೆ. ಸದ್ಯ ಜಾಗತಿಕವಾಗಿ ಮಾನವ ಅಭಿವೃದ್ಧಿಯ ಅಂತಿಮ ಹಂತ ‘ಸುಖೀ ಜೀವನ’ ಎಂದು ಕಂಡುಕೊಳ್ಳಲಾಗಿದೆ. ಇದರಲ್ಲಿ ಶಿಕ್ಷಣ, ಆರೋಗ್ಯ, ತಲಾ ಆದಾಯ ಹೆಚ್ಚಳ ಸೇರಿದಂತೆ ಹಲವು ಅಂಶಗಳೂ ಸೇರಿಕೊಂಡಿದೆ. ಪ್ರಸ್ತುತ ಹಲವು ದೇಶಗಳಲ್ಲಿ ಹ್ಯಾಪಿನೆಸ್ ಇಂಡೆಕ್ಸ್ ಅಳೆಯಲಾಗುತದೆ ಎಂದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಕಾಳವಾರದ ಕೆರೆಯಲ್ಲಿ ಭಾನುವಾರ ರಾತ್ರಿ ವೇಳೆ ಮೀನು ಹಿಡಿಯಲು ತೆರಳಿದ್ದ ವ್ಯಕ್ತಿ ಮುಳುಗಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಸತತ ಹುಡುಕಾಟದ ಬಳಿಕ ಸೋಮವಾರ ಪತ್ತೆಯಾಗಿದೆ. ನರಿಕೊಡ್ಲು ಮನೆ ನಿವಾಸಿ ಹರೀಶ್ ಪೂಜಾರಿ (37) ಮೃತ ದುರ್ದೈವಿ. ಭಾನುವಾರ ರಾತ್ರಿ ಕಾಳಾವಾರ ದೇವಸ್ಥಾನದ ಸಮೀಪವಿರುವ ಕೆರೆಗೆ ಮೂವರು ಸ್ನೇಹಿತರು ಒಟ್ಟಾಗಿ ಮೀನು ಹಿಡಿಯಲು ತೆರಳಿದ್ದಾರೆ. ಮೂವರ ಪೈಕಿ ಹರೀಶ್ ನೀರಿಗಿಳಿದು ಈಜುತ್ತಿದ್ದಾಗ ನಿಯಂತ್ರಣ ಕಳೆದುಕೊಂಡು ಮುಳುಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ರಾತ್ರಿಯೇ ಕುಂದಾಪುರ ಗ್ರಾಮಾಂತರ ಠಾಣೆ ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿಗಳು ಹಾಗೂ ಸ್ಥಳೀಯರು ಘಟನಾ ಸ್ಥಳದಲ್ಲಿ ಮಧ್ಯರಾತ್ರಿವರೆಗೂ ಹುಡುಕಾಟ ನಡೆಸಿದ್ದರು. ಆದರೆ ಮೃತದೇಹ ಪತ್ತೆಯಾಗಿರಲಿಲ್ಲ. ಸೋಮವಾರ ಬೆಳಿಗ್ಗೆ ಮುಳುಗು ತಜ್ಞ ಈಶ್ವರ ಮಲ್ಪೆ, ಶಬ್ಬೀರ್ ಮಲ್ಪೆ ಅವರ ತಂಡ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾಳಾವರ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸುಧೀರ್ ಜಿ., ರಾಜಶೇಖರ್, ಪ್ರಕಾಶ್ ಆಚಾರ್ ಹಾಗೂ ಅಗ್ನಿ ಶಾಮಕ ದಳದವರು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮರವಂತೆ ಕಡಲ ಕೋರೆತದಿಂದಾಗಿ ಮೀನುಗಾರಿಕಾ ರಸ್ತೆ, ಮನೆಗಳಿಗೆ ಹಾನಿಯಾಗಿರುವ ಜೊತಗೆ ಮೀನುಗಾರರು ಆತಂಕದಲ್ಲಿ ಬದುಕು ಸ್ಥಿತಿ ಇದೆ. ಆದ್ಯತೆ ಮೇರೆಗೆ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಹಾಗೂ ರಾಜ್ಯದ ಮೀನುಗಾರಿಕಾ ಸಚಿವರಿಗೂ ಮನವಿ ಮಾಡಲಾಗಿದೆ. ಜು.26ರಂದು ಕೇಂದ್ರದ ಅಧಿಕಾರಿಗಳ ತಂಡ ಭೇಟಿ ನೀಡಲಿದ್ದಾರೆ ಎಂದು ಸಂಸದ ಬಿ.ವೈ. ರಾಗವೇಂದ್ರ ಹೇಳಿದರು. ಅವರು ಶುಕ್ರವಾರ ಮರವಂತೆ ಸಮುದ್ರ ತೀರಕ್ಕೆ ಭೇಟಿ ನೀಡಿ ತೌಕ್ತೇ ಚಂಡಮಾರುತದಿಂದ ಉಂಟಾಗಿರುವ ಹಾನಿಯ ಹಾಗೂ ಕಡಲ ಕೊರೆತದ ಬಗ್ಗೆ ಪರಿಶೀಲನೆ ನಡೆಸಿ ಬಳಿಕ ಮಾತನಾಡಿ, ಹಾನಿಯ ಬಗ್ಗೆ ತಕ್ಷಣ ಪರೀಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಳ್ಳುವ ಬಗ್ಗೆ ಅಧಿಕಾರಿಗಳಿಗೆ ಸೂಚಿಸಿದರು. ಇದನ್ನೂ ಓದಿ: ► ಕಡಲ್ಕೊರೆತದಿಂದಾಗಿ ಮರವಂತೆ ಫಿಷರೀಸ್ ರಸ್ತೆಯಲ್ಲಿ ಕಾಣಿಸಿಕೊಂಡ ಬಿರುಕು – https://kundapraa.com/?p=67133 . ಮರವಂತೆ ಮೀನುಗಾರಿಕಾ ಬಂದರು ನಿರ್ಮಾಣಕ್ಕೆ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾಗ 54 ಕೋಟಿ ವೆಚ್ಚ ಮಾಡಲಾಗಿತ್ತು. ಮುಂದುವರಿದ ಕಾಮಗಾರಿಗೆ 80 ಕೋಟಿ ಟೆಂಡರ್ ಆಗಿದ್ದು,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಸರಕಾರಿ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದ ವತಿಯಿಂದ ಅಂತಾರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆಯನ್ನು ರೋಟರಿ ಕಲಾಮಂದಿರಲ್ಲಿ ಆಯೋಜಿಸಲಾಗಿತ್ತು. ಕುಂದಾಪುರ ಪೊಲೀಸ್ ಠಾಣೆಯ ಕ್ರೈಂ ವಿಭಾಗದ ಉಪ ನಿರೀಕ್ಷಕರಾದ ಪ್ರಸಾದ್ ಕುಮಾರ್ ಅವರು ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯ ಗಳ ಪರಿಣಾಮ ಮತ್ತು ಅವುಗಳಿಂದ ಆಗಬಹುದಾದ ಅನಾಹುತಗಳ ಬಗ್ಗೆ ಅರಿವು ಮೂಡಿಸಿದರು. ಈ ಸಂದರ್ಭದಲ್ಲಿ ಕಾಲೇಜಿನ ಉಪಪ್ರಾಂಶುಪಾಲ ಕಿರಣ್ ಹೆಗ್ಡೆ, ದೈಹಿಕ ಶಿಕ್ಷಣ ಶಿಕ್ಷಕ ಪ್ರಕಾಶ್ಚಂದ್ರ ಶೆಟ್ಟಿ, ಸಹ ಶಿಕ್ಷಕ ಗಣೇಶ್ ಕಾಂಚನ್ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ಜೂನಿಯರ್ ಕಾಲೇಜಿನ ಹಳೆ ವಿದ್ಯಾರ್ಥಿ ಹಾಗೂ ಕುಂದಾಪುರದ ಹಾಲಿ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ ಇವರಿಗೆ ಕುಂದಾಪುರ ಜೂನಿಯರ್ ( ಬೋರ್ಡ್ ಹೈಸ್ಕೂಲ್) ಕಾಲೇಜಿನ ಆಡಳಿತ ಸಮಿತಿ ಮತ್ತು ಉಪನ್ಯಾಸಕ ವೃಂದದವರಿಂದ ಸನ್ಮಾನಿಸಲಾಯಿತು. ಜೂನಿಯರ್ ಕಾಲೇಜು ಪ್ರಾಂಶುಪಾಲರಾದ ರಾಮಕೃಷ್ಣ ಬಿ.ಜಿ. ಉಪಪ್ರಾಂಶುಪಾಲರಾದ ಕಿರಣ್ ಹೆಗ್ಡೆ, ಹಿರಿಯ ಉಪನ್ಯಾಸಕ ಭುಜಂಗ ಶೆಟ್ಟಿ, ಪ್ರೌಢಶಾಲಾ ಹಿರಿಯ ಶಿಕ್ಷಕಿ ವಿನುತಾ ಗಾಂವ್ಕರ್, ಉದಯ್ ಕುಮಾರ್ ಶೆಟ್ಟಿ , ಕಾಲೇಜು ಅಭಿವೃದ್ಧಿ ಸಮಿತಿಯ ಅನಂತ್ ಕೃಷ್ಣ ಕೊಡ್ಗಿ, ಮೋಹನದಾಸ್ ಶೆಣೈ ಕೆ ನಾರಾಯಣ್, ಪ್ರೌಢಶಾಲಾ ಮತ್ತು ಕಾಲೇಜಿನ ಉಪನ್ಯಾಸಕರು, ಸಿಬ್ಬಂದಿಗಳು, ಇನ್ನಿತರರು ಉಪಸ್ಥಿತರಿದ್ದರು
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕೇಂದ್ರ ಸರ್ಕಾರ 9 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಶುಕ್ರವಾರ ಬೈಂದೂರು ಬಿಜೆಪಿ ವತಿಯಿಂದ ಉಪ್ಪುಂದ ಕಂಚಿಕಾನುವಿನಲ್ಲಿ ಏರ್ಪಡಿಸಿದ್ದ “ಸಾರ್ವಜನಿಕ ಸಂಪರ್ಕ ಅಭಿಯಾನ ಮತ್ತು ನಾಗೂರು ಲಲಿತಕೃಷ್ಣ ಸಭಾಂಗಣದಲ್ಲಿ ಏರ್ಪಡಿಸಿದ್ದ ವರ್ತಕರ ಸಭೆ” ಕಾರ್ಯಕ್ರಮದಲ್ಲಿ ಸಂಸದ ಬಿ.ವೈ. ರಾಘವೇಂದ್ರ ಅವರು ಭಾಗವಹಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೋಳೆ, ಬಿಜೆಪಿ ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಕಾರ್ಯದರ್ಶಿ ಪ್ರಿಯದರ್ಶಿನಿ ಬೆಸ್ಕೂರು ಸೇರಿದಂತೆ ಪಕ್ಷದ ಮುಖಂಡರು ಮತ್ತು ವರ್ತಕರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಪ್ರತಿಷ್ಠಿತ ರೋಟರಿ ಕ್ಲಬ್ ಬೈಂದೂರು ಇದರ 2023-24ನೇ ಸಾಲಿನ ಅಧ್ಯಕ್ಷರಾಗಿ ಶಿರೂರಿನ ಯುವ ಉದ್ಯಮಿ ರೊ. ಪ್ರಸಾದ ಪ್ರಭು ಅವರು ಆಯ್ಕೆಯಾಗಿರುತ್ತಾರೆ. ಕಾರ್ಯದರ್ಶಿಯಾಗಿ ಶಿಕ್ಷಕ, ಸಂಘಟಕ ರೊ.ಸುಬ್ರಹ್ಮಣ್ಯ ಜಿ.ಉಪ್ಪುಂದ ರವರು ಆಯ್ಕೆಯಾಗಿರುತ್ತಾರೆ ಎಂದು 2022-23 ನೇ ಸಾಲಿನ ಅಧ್ಯಕ್ಷ ರೊ.ಎಚ್. ಉದಯ ಆಚಾರ್ಯ ಅವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನೂತನ ಸರಕಾರವು ಸರಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡಲು ಆದ್ಯತೆ ನೀಡುವ ಜೊತೆಗೆ ಗ್ರಾಮೀಣ ಭಾಗದಲ್ಲಿನ ಸರಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಸೌಲಭ್ಯ ಕಲ್ಪಿಸಿಕೊಡಲು ಆದ್ಯತೆ ನೀಡಬೇಕು ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಹೇಳಿದ್ದಾರೆ. ನಗರ ಪ್ರದೇಶದ ಸರ್ಕಾರಿ ಶಾಲೆಗಳು ಸೂಕ್ತ ದಾನಿಗಳ ಹಾಗೂ ಹಳೆ ವಿದ್ಯಾರ್ಥಿಗಳ ಪ್ರೋತ್ಸಾಹದಿಂದ ಮೂಲಭೂತ ಸೌಕರ್ಯ, ಕಂಪ್ಯೂಟರ್, ಅಗತ್ಯ ಶಿಕ್ಷಕರು, ವಾಹನ ವ್ಯವಸ್ಥೆಯನ್ನು ಹೊಂದುತ್ತಿವೆ ಇದು ಉತ್ತಮ ಬೆಳವಣಿಗೆ ಆದರೆ ಇಂತಹ ವ್ಯವಸ್ಥೆಗಳು ಇಲ್ಲದ ಹಳ್ಳಿ ಪ್ರದೇಶದ ಶಾಲೆಗಳು ಬಾಗಿಲು ಮುಚ್ಚುವ ಪರಿಸ್ಥಿತಿ ಬಂದಿದೆ. ಪಟ್ಟಣ ಹಾಗೂ ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳ ನಡುವೆ ವಿದ್ಯಾರ್ಥಿಗಳ ಸೇರ್ಪಡೆಗೆ ಪೈಪೋಟಿ ನಡೆಯುತ್ತಿದೆ. ಪಟ್ಟಣದ ಶಾಲೆಗಳ ಗುಣಮಟ್ಟ ಗ್ರಾಮೀಣ ಭಾಗದ ಕೆಲವು ಶಾಲೆಗಲ್ಲಿ ಇಲ್ಲದ ಕಾರಣ ಇಂತಹ ಶಾಲೆಗಳು ಮಕ್ಕಳ ಕೊರತೆಯಿಂದ ಮುಚ್ಚುವ ಪರಿಸ್ಥಿತಿಯನ್ನು ಕಾಣುತ್ತಿದ್ದೇವೆ. ವಿಶೇಷವಾಗಿ ನಕ್ಸಲ್ ಪೀಡಿತ ಪ್ರದೇಶದ, ಪಶ್ಚಿಮ ಘಟ್ಟದ ತಪ್ಪಲು ಪ್ರದೇಶದ…
