ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ರಾಜ್ಯದಲ್ಲಿ ಕೈಗಾರಿಕಾ ವಲಯ ಕೋವಿಡ್-19 ಬಳಿಕ ಚೇತರಿಸಿಕೊಳ್ಳುತ್ತಿದ್ದು, ಸರಕಾರವೂ ಕೈಗಾರಿಕಾ ಕ್ಷೇತ್ರದ ಉತ್ತೇಜನಕ್ಕಾಗಿ ಅಗತ್ಯ ಕ್ರಮ ಕೈಗೊಂಡಿದೆ. ಪ್ರಸ್ತುತ ವರ್ಷ ಕರ್ನಾಟಕ ಕೈಗಾರಿಕಾ ವಲಯದ ಉತ್ತಮ ಪ್ರಗತಿ ಸಾಧಿಸಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್. ನಿರಾಣಿ ಹೇಳಿದರು. ಅವರು ಭಾನುವಾರ ಸಂಜೆ ಸಹಕಾರ ಸಚಿವ ಎಸ್. ಟಿ. ಸೋಮಶೇಖರ ಅವರೊಂದಿಗೆ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ ರಾಜ್ಯದಲ್ಲಿ ಉದ್ಯೋಗ ಸೃಷ್ಟಿಗಾಗಿ ಹಲವು ಕ್ರಮಗಳನ್ನು ಕೈಗೊಂಡಿದ್ದು, ಹೊಸ ಕೈಗಾರಿಕಾ ವಲಯ, ಒಂದು ದೇಶ ಒಂದು ಪ್ರಾಡೆಕ್ಟ್ ಯೋಜನೆ, ಹೂಡಿಕೆದಾರ ಸ್ನೇಹಿ ನಿಯಮಗಳ ಮಾರ್ಪಾಡು, ಕಡಿಮೆ ಬಡ್ಡಿದರದಲ್ಲಿ ಸಾಲ ಮೊದಲಾದ ಯೋಜನೆಯನ್ನು ಕೈಗೊಳ್ಳಲಾಗಿದೆ. ಇತರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕ ಕೈಗಾರಿಕಾ ಪ್ರಗತಿಯಲ್ಲಿ ದೇಶದಲ್ಲಿಯೇ ಮೊದಲ ಸ್ಥಾನದಲ್ಲಿದೆ ಎಂದರು. ಈ ಸಂದರ್ಭ ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ, ಜಿಲ್ಲಾ ಕೇಂದ್ರ ಸಹಕಾರಿ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ರಾಜ್ಯದಲ್ಲಿ ಪೈಲೆಟ್ ಕಾರ್ಯಕ್ರಮವಾಗಿ ದೇಶದಲ್ಲಿಯೇ ಮೊದಲ ಭಾರಿಗೆ ಸಣ್ಣ ರೈತರ ಟ್ರ್ಯಾಕ್ಟರ್ಗಳಿಗೆ ಎಕರೆಗೆ ರೂ. 250ರಂತೆ ಗರಿಷ್ಠ 5 ಎಕರೆ ತನಕ ಡೀಸೆಲ್ ಸಬ್ಸಿಡಿ ನೀಡಲು ನಿರ್ಧರಿಸಲಾಗಿದೆ. ಈ ಯೋಜನೆ ಎಪ್ರಿಲ್ 1ರಿಂದ ಜಾರಿಗೆ ಬಂದಿದ್ದು, ಇದಕ್ಕಾಗಿ ರೂ.500 ಕೋಟಿ ಮೀಸಲಿರಿಸಲಾಗಿದೆ ಎಂದು ರಾಜ್ಯ ಕೃಷಿ ಸಚಿವ ಬಿ. ಸಿ. ಪಾಟೀಲ್ ಹೇಳಿದರು. ಅವರು ಭಾನುವಾರ ಸಂಜೆ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳಕ್ಕೆ ಕುಟುಂಬಿಕರೊಂದಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು. ನಮ್ಮ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಬೆಳೆ ಪರಿಹಾರವನ್ನು ರೂ.6,000 ದಿಂದ ರೂ.28,000ಕ್ಕೆ ಹೆಚ್ಚಿಸಲಾಗಿದೆ. ಪ್ರಧಾನಮಂತ್ರಿ ಕಿಸಾನ್ ಸನ್ಮಾನ್ ಯೋಜನೆ ಕರ್ನಾಟಕದಲ್ಲಿ ಸಮರ್ಪಕವಾಗಿ ಅನುಷ್ಠಾನ ಮಾಡಿದ್ದಕ್ಕಾಗಿ, ರಾಜ್ಯ ದೇಶದಲ್ಲಿಯೇ ಪ್ರಥಮ ಸ್ಥಾನದಲ್ಲಿದೆ ಎಂದರು. ಸಚಿವ ಸಂಪುಟ ಪುನರ್ ರಚನೆ ಬಗ್ಗೆ ಪ್ರತಿಕ್ರಿಯಿಸಿ, ರಾಜ್ಯಕ್ಕೆ ಪ್ರತಿಭಾರಿಯೂ ಕೇಂದ್ರ ನಾಯಕರು ಭೇಟಿ ನೀಡಿದ ಸಂದರ್ಭ ಸಂಪುಟ ಪುನರ್ ರಚನೆಯ ವಿಚಾರ ಮುನ್ನೆಲೆಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಗಂಗೊಳ್ಳಿಯಲ್ಲಿ ಗುಡಿಸಲಿಗೆ ಬೆಂಕಿ ತಗುಲಿ ವ್ಯಕ್ತಿಯೋರ್ವರು ಸಜೀವ ದಹನವಾದ ಘಟನೆ ಭಾನುವಾರ ಬೆಳಿಗ್ಗೆ ನಡೆದಿದೆ. ಗಂಗೊಳ್ಳಿ ದೊಡ್ಡಹಿತ್ಲು ನಿವಾಸಿ ಗಣೇಶ್ ಖಾರ್ವಿ (42) ಮೃತ ದುರ್ದೈವಿ. ಮೀನುಗಾರಿಕೆ ಬೋಟಿನಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಗಣೇಶ ಖಾರ್ವಿ ಅವರು, ಬೆಳಿಗ್ಗೆ ಗಂಗೊಳ್ಳಿ ಬಂದರಿನಲ್ಲಿರುವ ಬೋಟಿನ ಬಳಿ ತೆರಳಿ ಮತ್ತೆ ಮನೆಯಲ್ಲಿ ಬಂದು ಮಲಗಿದ್ದರು. ಬೆಳಿಗ್ಗೆ ಸುಮಾರು 8:30ರ ಹೊತ್ತಿಗೆ ಮನೆಯಲ್ಲಿ ಕಾಣಿಸಿಕೊಂಡ ಆಕಸ್ಮಿಕ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿದ ಗಣೇಶ ಖಾರ್ವಿ ಮಂಚದ ಮೇಲೆ ಮಲಗಿದ್ದಲ್ಲೆ ಸುಟ್ಟು ಸಜೀವ ದಹನಗೊಂಡಿದ್ದಾರೆ. ಮೃತ ಗಣೇಶ್ ಹೊಸ ಮನೆ ಕಟ್ಟುತ್ತಿದ್ದು ಮನೆ ಸಮೀಪದಲ್ಲೇ ಪುಟ್ಟ ಗುಡಿಸಲಿನಲ್ಲಿ ಪತ್ನಿ ಜೊತೆ ವಾಸಿಸುತ್ತಿದ್ದರು. ಇವರ ಪತ್ನಿ ಬೆಳಿಗ್ಗೆ ಕೆಲಸಕ್ಕೆ ಹೋಗಿದ್ದರಿಂದ ಮನೆಯಲ್ಲಿ ಮತ್ಯಾರು ಇದ್ದಿರಲಿಲ್ಲ. ದಟ್ಟ ಹೊಗೆಯನ್ನು ಗಮನಿಸಿದ ಅಕ್ಕಪಕ್ಕದ ಮನೆಯವರು ಮನೆಗೆ ತಗುಲಿದ ಬೆಂಕಿಯನ್ನು ನಂದಿಸುವ ಕಾರ್ಯ ಮಾಡಿದರೂ ಗಣೇಶ ಖಾರ್ವಿ ಮನೆಯ ಒಳಗೆ ಇರುವುದು ಆರಂಭದಲ್ಲಿ ಯಾರಿಗೂ ತಿಳಿದಿರಲಿಲ್ಲ. ಬಳಿಕ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಆರೋಗ್ಯ ಸಮಸ್ಯೆಗಳಿಗೆ ರಾಮಬಾಣದಂತೆ ಪರಿಹಾರ ಒದಗಿಸಬಲ್ಲ ‘ಆಲೆ’ – ಸಿರಿಧಾನ್ಯ ಹೆಲ್ತ್ ಮಿಕ್ಸ್ ಉತ್ಪನ್ನಗಳನ್ನು ಶ್ರೀ ರಾಮ ವಿದ್ಯಾಕೇಂದ್ರದ ಅಧ್ಯಕ್ಷ ಕಲ್ಲಡ್ಕ ಪ್ರಭಾಕರ ಭಟ್ ಅವರು ಬಿಡುಗಡೆಗೊಳಿಸಿದರು. ಇತ್ತೀಚಿಗೆ ನಡೆದ ಕಾರ್ಯಕ್ರಮದಲ್ಲಿ ಹಿಂದೂ ಸಂಘಟನೆಯ ಪ್ರಮುಖ, ಉದ್ಯಮಿ ಶ್ರೀಧರ್ ಬಿಜೂರು ಅವರ ಮಾಲೀಕತ್ವದಲ್ಲಿ ಆರಂಭಗೊಂಡಿರುವ ‘ಆಲೆ’ – ಸಿರಿಧಾನ್ಯಗಳ ಉತ್ಪನ್ನಗಳನ್ನು ಬಿಡುಗಡೆಗೊಳಿಸಿ ಶುಭಹಾರೈಸಿದರು. ಈ ಸಂದರ್ಭ ಉದ್ಯಮಿಗಳಾದ ಡಾ. ಗೋವಿಂದ ಬಾಬು ಪೂಜಾರಿ, ವಾಸು ಗಂಗೊಳ್ಳಿ ಮೊದಲಾದವರು ಉಪಸ್ಥಿತರಿದ್ದರು. ಉತ್ತಮ ಆರೋಗ್ಯಕ್ಕಾಗಿ ಆಲೆ – ಹೆಲ್ತ್ ಮಿಕ್ಸ್:ಪ್ರಸ್ತುತ ದಿನಗಳಲ್ಲಿ ಮಕ್ಕಳು ಹಾಗೂ ಹಿರಿಯರು ಹಲವು ಬಗೆಯ ಆರೋಗ್ಯ ಸಮಸ್ಯೆಗಳಿಂದ ಬಳುತ್ತಿದ್ದಾರೆ. ಇಂತಹ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಭೂಮಿಯಲ್ಲಿ ಸಹಜ ಕೃಷಿಯಿಂದ ಬೆಳೆದ ಸಮತೋಲಿತ ಪೌಷ್ಠಿಕಾಂಶಗಳ ಆಗರವಾದ ಸಿರಿಧಾನ್ಯಗಳ ಸೇವನೆ ಅತ್ಯಗತ್ಯ. ಸಿರಿಧಾನ್ಯಗಳು ಸುಲಭ ಜೀರ್ಣಕ್ರಿಯೆಗೆ ಸಹಕಾರಿಯಾಗುತ್ತದೆ ಹಾಗೂ ಮನುಷ್ಯನ ನರನಾಡಿಗಳಲ್ಲಿ ಚೈತನ್ಯ ತುಂಬಿ ಮೂಳೆ ಹಾಗೂ ಮಾಂಸ ಖಂಡಗಳನ್ನು ಸದೃಢಗೊಳಿಸುವ ಸಾಮರ್ಥ್ಯ ಹೊಂದಿದೆ. ಹೀಗೆ ಸಿರಿಧಾನ್ಯವನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿಉಡುಪಿ,ಏ03: ನಿವೃತ್ತ ಪೊಲೀಸರಿಗೆ ಸರಕಾರ ಜಾರಿಗೊಳಿಸಿರುವ ಆರೋಗ್ಯ ಭಾಗ್ಯ ಯೋಜನೆಯು ಇನ್ನಷ್ಟು ಪರಿಣಾಮಕಾರಿಯಾಗಿ, ಸಮರ್ಪಕವಾಗಿ ಜಾರಿಗೊಳ್ಳುವಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸಿ.ಎಸ್.ಪಿ ನಿವೃತ್ತ ಸಹಾಯಕ ಪೊಲೀಸ್ ಉಪನಿರೀಕ್ಷಕ ಮ್ಯಾಥ್ಯೂ ಅರ್ಚಿಬಾಲ್ ಡಿ ಸೋಜಾ ಹೇಳಿದರು. ಅವರು ಶನಿವಾರ, ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಕರ್ನಾಟಕ ರಾಜ್ಯ ಪೊಲೀಸ್ ಧ್ವಜ ದಿನಾಚರಣೆ ಅಂಗವಾಗಿ, ಉಡುಪಿಯ ಪೊಲೀಸ್ ಕವಾಯತು ಮೈದಾನ (ಚಂದು ಮೈದಾನ) ದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗೌರವ ವಂದನೆ ಸ್ವೀಕರಿಸಿ ಮಾತನಾಡಿದರು. ನಿವೃತ್ತ ಪೊಲೀಸರಿಗೆ ಒದಗಿಸಿರುವ ಆರೋಗ್ಯ ಭಾಗ್ಯ ಯೋಜನೆಯನ್ನು ನಿರ್ದಿಷ್ಟ ಕೆಲವು ಆಸ್ಪತ್ರೆಗಳಲ್ಲಿ ಮಾತ್ರ ಜಾರಿಗೊಳಿಸಿದ್ದು, ಚಿಕಿತ್ಸೆ ನೀಡುವ ಅಸ್ಪತ್ರೆಗಳ ಸಂಖ್ಯೆಯನ್ನು ವಿಸ್ತರಿಸಬೇಕು ಅಲ್ಲದೇ ಚಿಕಿತ್ಸಾ ವೆಚ್ಚವನ್ನು 1 ಲಕ್ಷ ರೂಗಳಿಗೆ ಮಾತ್ರ ಸೀಮಿತಗೊಳಿಸಿದ್ದು, ಇದನ್ನು ಹೆಚ್ಚುಗೊಳಿಸಬೇಕು , ಪೊಲೀಸ್ ಅಧಿಕಾರಿ ಮತ್ತುಸಿಬ್ಬಂದಿಗಳು ಯಾವುದೇ ದುಶ್ಚಟಗಳಿಗೆ ಒಳಗಾಗದೇ ಉತ್ತಮ ಆರೋಗ್ಯವನ್ನು ಕಾಪಾಡಿಕೊಂಡು, ಸಮಾಜಕ್ಕೆ ಉತ್ತಮ ಸೇವೆ ಸಲ್ಲಿಸಬೇಕು ಎಂದರು. ಕಾರ್ಯಕ್ರಮದಲ್ಲಿ ಪೊಲೀಸ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪಂಚ ರಾಜ್ಯ ಚುನಾವಣೆ ಬಳಿಕ 12 ದಿನಗಳಲ್ಲಿ ಸತತ 10 ಬಾರಿ ಪೆಟೋಲ್ ಮತ್ತು ಡೀಸೆಲ್ ಬೆಲೆ ಎರಿಸಿರುವುದರಿಂದ ತೈಲ ಬೆಲೆ ಲೀಟರ್ ಗೆ 7 ರೂಪಾಯಿ ಹೆಚ್ಚಳವಾಗಿದ್ದು ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದು, ಸರಕಾರ ಕೂಡಲೇ ತೈಲ ಬೆಲೆ ಇಳಿಸಬೇಕೆಂದು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ್ ಶೆಟ್ಟಿ ಆಗ್ರಹಿಸಿದ್ದಾರೆ. ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ 250 ರೂಪಾಯಿ ಹೆಚ್ಚಳ ಮಾಡಿರುವುದರಿಂದ ಹೋಟೆಲ್ ಮತ್ತು ವಾಣಿಜ್ಯ ಮಾಲಿಕರಿಗೆ ತೀವ್ರ ಹೊಡೆತ ಬಿದ್ದಿದ್ದು,ಇದರಿಂದ ನೇರ ಗ್ರಾಹಕರ ಮೇಲೆ ಬೆಲೆ ಏರಿಕೆ ಬಿಸಿ ಪ್ರಾರಂಭವಾಗಲಿದೆ. ಡೀಸೆಲ್ ಬೆಲೆ ಏರಿಕೆಯಿಂದ ಎಲ್ಲಾ ಸರಕುಗಳ ಬೆಲೆ ಪುನಃ ಹೆಚ್ಚಳವಾಗಲು ಪ್ರಾರಂಭವಾಗಿದ್ದು ಇದರಿಂದ ಶ್ರೀ ಸಾಮಾನ್ಯನಿಗೆ ಬಾರಿ ಹೊಡೆತ ಬೀಳಲಿದೆ . ಹಿಂದೆ ಯುಪಿಎ ಸರಕಾರವಿದ್ದಾಗ ತೈಲ ಬೆಲೆ 10 ರಿಂದ 20 ಪೈಸ ಎರಿದಾಗ ಗ್ಯಾಸ್ ಸೆಲೆಂಡರ್ ದರ 5 ರೂಪಾಯಿ ಹೆಚ್ಚಳವಾದಾಗ ರಸ್ತೆಗಿಳಿದು ಪ್ರತಿಭಟನೆ ಮಾಡಿದ ಬಿಜೆಪಿ ಮುಖಂಡರು…
ಕುಂದಾಪ್ರ ಡಾಟ್ ಕಾಂ | ಕಾಲೇಜು ಪ್ರಕಟಣೆಯುವ ಪೀಳಿಗೆ ಇಂದಿನ ಸ್ಪರ್ಧಾತ್ಮಕ ಜಗತ್ತಿನ ವೇಗದೊಂದಿಗೆ ಹೆಜ್ಜೆಯಿರಿಸಲು, ಸ್ಪರ್ಧಾತ್ಮಕತೆಗೆ ಅನುಗುಣವಾಗಿ ಭವಿಷ್ಯವನ್ನು ರೂಪಿಸಿಕೊಳ್ಳಲು ಶಿಕ್ಷಣ ಸಂಸ್ಥೆಗಳನ್ನು ಆಯ್ಕೆ ಬಹುಮುಖ್ಯ. ಕಾಲದ ಅವಶ್ಯಕತೆಯನ್ನು ಅರಿತು, ಗ್ರಾಮೀಣ ಭಾಗದ ವಿದ್ಯಾರ್ಥಿಗಳನ್ನು ಭವಿಷ್ಯದ ಶ್ರೇಷ್ಠ ಪ್ರಜೆಗಳಾಗಿ ರೂಪಿಸುವ ಜವಾಬ್ದಾರಿಯೊಂದಿಗೆ, ರೂಪುಗೊಂಡ ದಕ್ಷ ತಂಡ ವರ್ಷದಿಂದ ಸಮರ್ಪಣಾ ಎಜುಕೇಶನ್ ಟ್ರಸ್ಟ್ (ರಿ) ಎಂಬ ಸಂಸ್ಥೆಯ ಮೂಲಕ ಜೊತೆಸೇರಿದೆ. ಕುಂದಾಪುರ ತಾಲೂಕಿನ ಹೆಮ್ಮಾಡಿಯ ಹೃದಯ ಭಾಗದಲ್ಲಿರುವ ಜನತಾ ಸ್ವತಂತ್ರ್ಯ ಪದವಿಪೂರ್ವ ಕಾಲೇಜು ಪ್ರಸಕ್ತ ಸಾಲಿನಿಂದ ಸಮರ್ಪಣಾ ಎಜುಕೇಶನ್ ಟ್ರಸ್ಟ್ ನೇತೃತ್ವಲ್ಲಿ ಮುನ್ನಡೆಯುತ್ತಿದ್ದು; ದಕ್ಷ ಆಡಳಿತ ಮಂಡಳಿ, ಅನುಭವಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕ ವೃಂದದ ನೇತೃತ್ವದಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಗೆ ಮುನ್ನುಡಿ ಬರೆಯಲು ಸಜ್ಜಾಗಿದೆ. ಆಡಳಿತ ಮಂಡಳಿ:ಅನುಭವಿ ಹಾಗೂ ಬೋಧನೆಯಲ್ಲಿ ಪ್ರಸಿದ್ಧಿ ಪಡೆದಿರುವ ನಾಲ್ವರು ಉಪನ್ಯಾಸಕರು ಸೇರಿ ಗ್ರಾಮೀಣ ಭಾಗದಲ್ಲಿ ಉತ್ತಮ ಶಿಕ್ಷಣ ನೀಡುವ ಸದಾಶಯದೊಂದಿಗೆ ಸಮರ್ಪಣಾ ಎಜುಕೇಶನಲ್ ಟ್ರಸ್ಟ್ ರಚಿಸಿ ಆ ಮೂಲಕ ಗುಣಮಟ್ಟದ ಶಿಕ್ಷಣ ನೀಡಲು ಪಣತೊಟ್ಟಿದ್ದಾರೆ. ಅದರಂತೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನ ಅಧ್ಯಾಪಕರ ಸಂಘದ ವತಿಯಿಂದ ಪರೀಕ್ಷಾ ಭಯ ಹೋಗಲಾಡಿಸುವುದು ಕುರಿತು ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ವಿಶೇಷ ಉಪನ್ಯಾಸ ನಡೆಯಿತು. ಕುಂದಾಪುರದ ಶ್ರೀ ಮಾತಾ ಅಸ್ಪತ್ರೆಯ ಮನಃಶಾಸ್ತ್ರಜ್ಞರಾದ ಡಾ. ಪ್ರಕಾಶ್ ತೋಳಾರ್ ಮಾತನಾಡಿ ಮೊದಲು ಓದುವುದರ ಮೂಲಕ ಪ್ರಯತ್ನ ಪಡಬೇಕು. ಎಂದಿಗೂ ಫಲಿತಾಂಶದ ಬಗ್ಗೆ ಯೋಚಿಸಬೇಡಿ. ನಿಮ್ಮ ಕೈಯ್ಯಲ್ಲಿರುವುದು ಕೇವಲ ಸತತ ಪ್ರಯತ್ನ ಮಾತ್ರ. ನಿಮ್ಮ ಉತ್ತಮ ಪ್ರಯತ್ನದಿಂದ ಉತ್ತಮ ಫಲಿತಾಂಶ ಸಾಧ್ಯವಾಗುತ್ತದೆ. ನಕಾರಾತ್ಮಕ ಆಲೋಚನೆಗಳಿಗೆ ಎಂದಿಗೂ ಅವಕಾಶವನ್ನು ಕೊಡಬೇಡಿ. ಸಕಾರಾತ್ಮಕ ಆಲೋಚನೆಗಳು ನಿಮ್ಮದಾಗಿರಲಿ ಎಂದು ಆಶಿಸಿದರು. ಪರೀಕ್ಷಾ ಭಯ ಮತ್ತು ಆತಂಕವನ್ನು ಹೋಗಲಾಡಿಸುವಲ್ಲಿ ಕೆಲವು ಸೂಕ್ತ ಸಲಹೆಗಳನ್ನು ಅವರು ವಿದ್ಯಾರ್ಥಿಗಳಿಗೆ ನೀಡಿದರು ಎಸ್.ಕ್ಯೂ ಆರ.ಆರ್.ಆರ್ ಎಂಬ ಸರಳ ಸೂತ್ರವನ್ನು ಓದಿನಲ್ಲಿ ಅಳವಡಿಸಿಕೊಳ್ಳಬೇಕು. ಮೊದಲು ಓದುವಾಗ ಮೇಲ್ನೋಟ ಮಾಡಿಕೊಳ್ಳಿ, ನಂತರ ಆ ವಿಷಯಕ್ಕೆ ಕುರಿತ ಪ್ರಶ್ನೆಗಳನ್ನು ತಯಾರಿಸಿ ಉತ್ತರ ಪಡೆದುಕೊಳ್ಳಿ. ನಂತರ ಚೆನ್ನಾಗಿ ಓದಿ ಮತ್ತು ಕೊನೆಯಲ್ಲಿ ಪುನರಾರ್ವರ್ತನೆ ಮಾಡಿ ಎಂದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಆಳಸಮುದ್ರದ ಮೀನುಗಾರಿಕೆಗೆ ತೆರಳಿದ್ದ ಬೋಟೊಂದು ಅಲೆಗಳ ಒತ್ತಡಕ್ಕೆ ಸಿಲುಕಿ ಮುಳುಗಡೆಯಾಗಿದ್ದು, ಬೋಟಿನಲ್ಲಿದ್ದ ಐದು ಮಂದಿ ಮೀನುಗಾರರನ್ನು ರಕ್ಷಿಸಲಾಗಿದೆ. ಮುಳುಗಡೆಯಾಗುತ್ತಿದ್ದ ಬೋಟಿನಲ್ಲಿದ್ದ ತಾಂಡೇಲಾ ನಾಗಪ್ಪ ರಾಮ ಅಂಬಿಗ, ಕಲಾಸಿಯವರಾದ ಸಚಿನ್ ಉಲ್ಲಾಸ, ದೀಪಕ್ ಖಾರ್ವಿ, ಸುಭಾಷ್ ಗಾಂಗೇಶ್ವರ, ಸೂರಜ್ ಕುಮಾರ್ ಭಗತ್ ಅವರನ್ನು ಇನ್ನೊಂದು ಬೋಟಿನಲ್ಲಿದ್ದ ಮೀನುಗಾರರು ರಕ್ಷಿಸಿ ಸುರಕ್ಷಿತವಾಗಿ ದಡಕ್ಕೆ ಕರೆತಂದಿದ್ದಾರೆ. ಘಟನೆ ವಿವರ:ಉದ್ಯಾವರ ಸಂಪಿಗೆನಗರದ ಮುಹಮ್ಮದ್ ಹನೀಫ್ ಮಾಲೀಕತ್ವದ ಮನಾಲ್ ಹೆಸರಿನ ಬೋಟು ಮಲ್ಪೆಯಿಂದ ಆಳಸಮುದ್ರದ ಮೀನುಗಾರಿಕೆಗೆ ತೆರಳಿತ್ತು. ಮಧ್ಯರಾತ್ರಿ ಗಂಗೊಳ್ಳಿಯಿಂದ ನೇರ ಆಳ ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಗಾಳಿಯ ಅಬ್ಬರಕ್ಕೆ ಸಮುದ್ರದ ಅಲೆಗಳ ಒತ್ತಡಕ್ಕೆ ಇಂಜಿನ್ ಕೆಳಭಾಗದ ಪೈಬಲ್ ಶೀಟ್ ಒಡೆದಿದೆ ಎನ್ನಲಾಗಿದೆ. ಬಳಿಕ ನೀರು ಬೋಟಿನೊಳಗೆ ನುಗ್ಗಲು ಪ್ರಾರಂಭವಾಗಿದ್ದು, ಕೂಡಲೇ ಹತ್ತಿರದಲ್ಲಿದ್ದ ರಾಜರಕ್ಷಾ ಬೋಟಿನವರಿಗೆ ಮಾಹಿತಿ ನೀಡಲಾಯಿತು. ಸ್ಥಳಕ್ಕೆ ಬಂದ ರಾಜರಕ್ಷಾ ಬೋಟಿನವರು ಐವರು ಮೀನುಗಾರರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆ ವೇಳೆ ಬೋಟು ಸಮುದ್ರಪಾಲಾಗಿದ್ದು, ಸುಮಾರು 45ಲಕ್ಷ ರೂ. ನಷ್ಟ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿ ನಿರಂತರ ಚಟುವಟಿಕೆಗಳನ್ನು ಕಂಡು ಬೆಂಗಳೂರಿನ ಉದ್ಯಮಿ ನಾರಾಯಣ ಹರಿದಾಸ್ ಕಾಮತ್ ರವರು ಸಿ.ಸಿ.ಕ್ಯಾಮೆರಾ ಹಾಗೂ ಟಾಟಾ ಮೋಟರ್ ಫೈನಾನ್ಸ್ ಉಪಾಧ್ಯಕ್ಷರಾದ ಸುಜೀರ್ ಲಕ್ಷ್ಮೀನಾರಾಯಣ ನಾಯಕ್ ಸೋಲಾರ್ ಲೈಟ್ನ್ನು ಕೊಡುಗೆಯಾಗಿ ನೀಡಿದ್ದಾರೆ. ಇವರಿಬ್ಬರನ್ನೂ ಇತ್ತೀಚೆಗೆ ಗೊಂಬೆಯಾಟ ಅಕಾಡೆಮಿಯ ವತಿಯಿಂದ ಗೊಂಬೆ ಮನೆಯಲ್ಲಿ ಹರಿಕೃಷ್ಣ ಪುನರೂರು, ಮಾಜಿ ಅಧ್ಯಕ್ಷರು ,ಕನ್ನಡ ಸಾಹಿತ್ಯ ಪರಿಷತ್ತು ,ರಘುನಾಥ್ ನಾಯಕ್, ಮಾಜಿ ಡೆಪ್ಯೂಟಿ ಚೀಫ್ ಎಲೆಕ್ಟ್ರಿಕಲ್ ಇಂಜಿನಿಯರ್, ಕೊಂಕಣ್ ರೈಲ್ವೆ , ಪ್ರೊ. ವರದೇಶ್ ಹಿರೇಗಂಗೆ, ಮುಖ್ಯಸ್ಥರು, ಗಾಂಧಿಯನ್ ಸೆಂಟರ್ ಫಾರ್ ಫಿಲೋಸೊಫಿಕಲ್ ಆಟ್ಸ್ ಆಂಡ್ ಸೈನ್ಸ್, ಮಾಹೆ, ಮಣಿಪಾಲ, ನಿವೃತ್ತ ಉಪನ್ಯಾಸಕ ಪ್ರೊ. ವೆಂಕಟೇಶ್ ಪೈ, ಪತ್ರಿಕೆ ವರದಿಗಾರರಾದ ಜಾನ್ ಡಿ’ಸೋಜಾ, ಕಾಸರಗೋಡಿನ ಉದ್ಯಮಿ ಸದಾಶಿವ ಭಟ್, ಮಣಿಪಾಲದ ಪನವಾರ ಕೊಂಕಣಿ ಮಾಸ ಪತ್ರಿಕೆಯ ಸಂಪಾದಕ ಜ್ಞಾನದೇವ ಮಲ್ಯ ಮುಂತಾದ ಗಣ್ಯರ ಸಮ್ಮಖದಲ್ಲಿ ಅಕಾಡೆಮಿಯ ಅಧ್ಯಕ್ಷರಾದ ಭಾಸ್ಕರ್ ಕೊಗ್ಗ ಕಾಮತ್ರು ಸನ್ಮಾನಿಸಿದರು.
