ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಂಡ್ಸೆ ಅಂಚೆ ಕಛೇರಿಯಲ್ಲಿ ಕಳೆದ 42 ವರ್ಷಗಳಿಂದ ಗ್ರಾಮೀಣ ಅಂಚೆ ಸೇವಕರಾಗಿ ಕಾರ್ಯನಿರ್ವಹಿಸಿ ವಯೋ ನಿವೃತ್ತರಾದ ಆನಂದ ನಾಯ್ಕ್ ನ್ಯಾಗಳಮನೆ ವಂಡ್ಸೆ ಇವರಿಗೆ ಬೀಳ್ಕೊಡುಗೆ ಕಾರ್ಯಕ್ರಮ ವಂಡ್ಸೆ ಅಂಚೆ ಕಛೇರಿ ಹಾಗೂ ಶಾಖಾ ಕಛೇರಿ ಸಿಬ್ಬಂದಿಗಳ ವತಿಯಿಂದ ನಡೆಯಿತು. ವಂಡ್ಸೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಉದಯ ಕುಮಾರ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ವಂಡ್ಸೆ ಉಪ ಅಂಚೆ ಕಛೇರಿಯ ಅಂಚೆ ಪಾಲಕರಾದ ಸುರೇಖಾ ಜೆ.ಶೆಟ್ಟಿ, ನಿವೃತ್ತ ಬಿ.ಎಸ್.ಎನ್.ಎಲ್ ಅಧಿಕಾರಿ ಜಿ. ಶ್ರೀಧರ ಶೆಟ್ಟಿ, ಕೊಲ್ಲೂರು ದೇವಳದ ಮಾಜಿ ಧರ್ಮದರ್ಶಿ ವಂಡಬಳ್ಳಿ ಜಯರಾಮ ಶೆಟ್ಟಿ, ವಾತ್ಸಲ್ಯ ಕಾಂಪ್ಲೆಕ್ಸ್ ವಂಡ್ಸೆ ಇದರ ಮಾಲಕರಾದ ಆನಂದ ಶೆಟ್ಟಿ ಸಬ್ಲಾಡಿ, ವೈದ್ಯರಾದ ಡಾ.ಗೋಪಾಲಕೃಷ್ಣ ಐತಾಳ್ ಉಪಸ್ಥಿತರಿದ್ದರು. ಸಾರ್ಥಕ ಸೇವೆ ಸಲ್ಲಿಸಿ ನಿವೃತ್ತಿ ಹೊಂದುತ್ತಿರುವ ಆನಂದ ನಾಯ್ಕ ಅವರ ಸೇವೆಯ ಕುರಿತು ಅತಿಥಿಗಳು ಮೆಚ್ಚುಗೆಯ ಮಾತುಗಳನ್ನಾಡಿದರು. ಸಭಿಕರ ಪರವಾಗಿ ಶಿವರಾಮ ಹೊಳ್ಳ, ಪೋಸ್ಟ್ ಮ್ಯಾನ್ ರಾಜು ದೇವಾಡಿಗ, ಶೈಲಶ್ರೀ ಅನಿಸಿಕೆ ಹಂಚಿಕೊಂಡರು. ಸನ್ಮಾನ, ಗೌರವ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು.ಜು.2: ರಾಜ್ಯ ಸರಕಾರ ನೀಡಿರುವ ಆಶ್ವಾಸನೆಯಂತೆ ಗ್ಯಾರಂಟಿ ಯೋಜನೆ ಜಾರಿಗೆ ಸಂಬಂಧಿಸಿ ಸಚಿವ ಸಂಪುಟ ಸಭೆ ಇಂದು ನಡೆದಿದ್ದು, ಸಂಪುಟ ತೀರ್ಮಾನಗಳ ಬಗ್ಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಜಂಟಿ ಮಾಧ್ಯಮಗೋಷ್ಟಿಯಲ್ಲಿ ಮಾಹಿತಿ ನೀಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ವೇಳೆ ಮಾತನಾಡಿ, ಜನ ವಿಶ್ವಾಸ ಇಟ್ಟು ಅಧಿಕಾರ ಕೊಟ್ಟಿದ್ದಾರೆ. ನಾವು ಬಸವಣ್ಣನ ನಾಡಿನವರು. ಕೊಟ್ಟ ಮಾತಿಗೆ ಬದ್ಧ. 5 ಗ್ಯಾರಂಟಿಗಳನ್ನು ನೀಡುವ ಸಂಬಂಧ ತೀರ್ಮಾನ ಮಾಡಿದ್ದೇವೆ ಎಂದರು. ಗೃಹಜ್ಯೋತಿ:200 ಯೂನಿಟ್ ಉಚಿತ ವಿದ್ಯುತ್. ಈ ಯೋಜನೆಯ ದುರ್ಬಳಕೆ ತಡೆಯಲು ಫಲಾನುಭವಿಗಳು ಹಿಂದಿನ ಒಂದು ವರ್ಷದ ಅವಧಿಯಲ್ಲಿ ಬಳಕೆ ಮಾಡಿರುವ ವಿದ್ಯುತ್ ಸರಾಸರಿಯನ್ನು ಗಣನೆಗೆ ತೆಗೆದುಕೊಂಡು, ಅದರ ಜೊತೆಗೆ 10% ವಿದ್ಯುತನ್ನು ಹೆಚ್ಚುವರಿಯಾಗಿ ಉಚಿತವಾಗಿ ನೀಡಲಾಗುವುದು. ಜುಲೈ 1ರ ವರೆಗೆ ಬಳಕೆ ಮಾಡಿರುವ ವಿದ್ಯುತ್ ಬಿಲ್ ಅನ್ನು ಬಳಕೆದಾರರು ಕಟ್ಟಬೇಕಿದ್ದು, ಆಗಸ್ಟ್ ನಿಂದ ಎಲ್ಲರೂ ಯೋಜನೆಯ ಲಾಭ ಪಡೆಯಬಹುದಾಗಿದೆ. ಬಾಡಿಗೆದಾರರಿಗೂ ಅನ್ವಯವಾಗಲಿದೆ. ಶಕ್ತಿ:ವಿದ್ಯಾರ್ಥಿನಿಯರು ಸೇರಿದಂತೆ ಕರ್ನಾಟಕದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ಶಾಸಕರಾದ ಗುರುರಾಜ ಶೆಟ್ಟಿ ಗಂಟಿಹೊಳೆ ಅವರು ಗುರುವಾರ ಭೇಟಿ ನೀಡಿ ಕಾಲೇಜಿನ ಎಲ್ಲಾ ಸೌಲಭ್ಯಗಳನ್ನು ಖುದ್ದು ಪರಿಶೀಲಿಸಿದರು. ಬಳಿಕ ನಡೆದ ಸಭೆಯನ್ನುದ್ದೇಶಿಸಿ ಅವರು ಮಾತನಾಡಿ, ಕಾಲೇಜಿನ ಅಭಿವೃದ್ಧಿಗಾಗಿ ಚಿಂತಿಸುವ ʼಪರಿವರ್ತನʼ ಎಂಬ ತಂಡವನ್ನು ಸಿದ್ಧಗೊಳಿಸಿಕೊಂಡು ಕಾರ್ಯಯೋಜನೆಯನ್ನು ರೂಪಿಸುವಂತೆ ಹಾಗೂ ಈ ಯೋಜನೆಯಲ್ಲಿ ವಿದ್ಯಾರ್ಥಿಗಳು, ಪೋಷಕರು, ಕಾಲೇಜಿನ ಹಳೆಯ ವಿದ್ಯಾರ್ಥಿಗಳು, ಗ್ರಾಮಸ್ಥರು, ಕಾಲೇಜಿನ ಬಗ್ಗೆ ಕಾಳಜಿಯಳ್ಳ ಜನರನ್ನು ಈ ಯೋಜನೆಯಲ್ಲಿ ತೊಡಗಿಸಿಕೊಳ್ಳುವಂತೆ ತಿಳಿಸಿದರು. ಈ ವೇಳೆ ಕಾಲೇಜಿನ ಪ್ರಾಂಶುಪಾಲರಾದ ನಾಗರಾಜ ಶೆಟ್ಟಿ ಹಾಗೂ ಬೋಧಕ, ಬೋಧಕೇತರ ಸಿಬ್ಬಂದಿಗಳು, ಕಾಲೇಜಿನ ನಿಕಟಪೂರ್ವ ಕಾರ್ಯಾಧ್ಯಕ್ಷರಾದ ದೀಪಕಕುಮಾರ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸರಕಾರಿ ಶಾಲೆಗಳ ಪ್ರಗತಿ ಹಾಗೂ ವಿದ್ಯಾರ್ಥಿಗಳಿಗೆ ಪೂರಕ ವಾತಾವರಣ ಕಲ್ಪಿಸುವ ಶಕ್ತಿ ಸರಕಾರಿ ಶಾಲಾ ಶಿಕ್ಷಕರಿಗಿದೆ. ಸಮಾಜಕ್ಕೆ ಕನ್ನಡ ಮಾಧ್ಯಮ ಶಾಲೆಗಳು ಸಶಕ್ತವಾಗಿದೆ ಹಾಗೂ ಅದರ ಉಳಿವು ಸಾಧ್ಯವಿದೆ ಎಂಬ ವಿಶ್ವಾಸ ಮೂಡಿಸಬೇಕಾದ ಜವಾಬ್ದಾರಿ ಶಿಕ್ಷಕರದ್ದಾಗಿದೆ ಎಂದು ಬೈಂದೂರು ವಿಧಾನಸಬಾ ಕ್ಷೇತ್ರದ ಶಾಸಕ ಗುರುರಾಜ ಶೆಟ್ಟಿ ಗಂಟಿಹೊಳೆ ಹೇಳಿದರು. ಅವರು ಗುರುವಾರ ಬೈಂದೂರು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿದ ಬಳಿಕ ಬೈಂದೂರು ತಾಲೂಕು ಸರಕಾರಿ ಹಾಗೂ ಅನುದಾನಿತ ಶಾಲಾ ಮುಖ್ಯೋಪಧ್ಯಾಯರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಪೋಷಕರಲ್ಲಿ ಹಿಂದಿನಂತೆ ಆಂಗ್ಲ ಮಾಧ್ಯಮದ ವ್ಯಾಮೋಹವಿಲ್ಲ. ಆದರೆ ಸೌಲಭ್ಯಗಳ ಬಗ್ಗೆ ಅವರು ವಿಶೇಷ ಮುತುವರ್ಜಿ ವಹಿಸುತ್ತಾರೆ. ಸರಕಾರಿ ಶಾಲೆಗಲ್ಲಿ ಮೂಲಭೂತ ಸೌಕರ್ಯ, ಗುಣಮಟ್ಟದ ಶಿಕ್ಷಣ ದೊರೆಯುವಂತಾದರೆ ಸರಕಾರಿ ಶಾಲೆಗಳಲ್ಲಿಯೂ ಮಕ್ಕಳು ದಾಖಲಾತಿ ಸಹಜವಾಗಿ ಏರುತ್ತದೆ. ವಿದ್ಯಾರ್ಥಿಗೆ ತಕ್ಕುದಾಗಿ ಶಿಕ್ಷಕರ ಅನುಪಾತ, ಮೂಲಭೂತ ಸೌಕರ್ಯಗಳನ್ನು ಹೊಂದಿವುದು ಬಹುಮುಖ್ಯವಾಗಿದೆ ಎಂದರು. ಕನ್ನಡ ಶಾಲೆಗಳ ಉಳಿವಿಗೆ ಯೋಜನೆ:ಪ್ರಜಾಪ್ರಭತ್ವದಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ವಲಯ ವ್ಯಾಪ್ತಿಯ ಸರ್ಕಾರಿ ಶಾಲಾ ಪ್ರಾರಂಭ ಅತ್ಯಂತ ವಿಜೃಂಭಣೆಯಿಂದ ನಡೆದಿರುವುದು ಅತ್ಯಂತ ಶ್ಲಾಘನೀಯ ಹಾಗೂ ಮಕ್ಕಳ ಹಿತದ್ರಷ್ಟಿಯಿಂದ ಒಳ್ಳೆಯ ಬೆಳವಣಿಗೆ. ಆದರೆ ಇದು ಕೇವಲ ಶಾಲಾ ಪ್ರಾರಂಭಕ್ಕೆ ಮಾತ್ರ ಸ್ಥಿಮಿತವಾಗಿರದೆ ಶಾಲೆಯ ಮುಂದಿನ ಬೆಳವಣಿಗೆಗೆ ರಹದಾರಿಯಾಗಲಿ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಹೇಳಿದ್ದಾರೆ. ಕುಂದಾಪುರ ವಲಯ ವ್ಯಾಪ್ತಿಯ ಹಲವಾರು ಸರ್ಕಾರಿ ಶಾಲೆಗಳಲ್ಲಿ ಶೂನ್ಯ ಶಿಕ್ಷಕರಿದ್ದಾರೆ. ಇಂತಹ ಶಾಲೆಗಳಿಗೆ ಶೀಘ್ರ ಶಿಕ್ಷಕರ ನೇಮಕವಾಗಲಿ ಹಾಗೂ ಎಷ್ಟೋ ಶಾಲೆಗಳಲ್ಲಿ ಕುಡಿಯುವ ನೀರು, ನೈರ್ಮಲ್ಯ, ಸೂಕ್ತ ಕಟ್ಟಡ ಇಲ್ಲದಿರುವುದು, ಆಟದ ಮೈದಾನದ ಕೊರತೆ, ಸಾರಿಗೆ ಸಮಸ್ಯೆ, ಸಮಯಕ್ಕೆ ಸರಿಯಾಗಿ ಸಮವಸ್ತ್ರ, ಪಠ್ಯ ಪುಸ್ತಕ ಇತ್ಯಾದಿ ಅಗತ್ಯತೆಗಳು ಪೂರೈಕೆಯಾಗದಿರುವುದು, ಕೆಲವೊಂದು ಅಧ್ಯಾಪಕರು ಸರಿಯಾಗಿ ಕರ್ತವ್ಯ ನಿರ್ವಹಿಸದೆ ಇಲ್ಲದಿರುವುದು ಸೇರಿದಂತೆ ಹಲವಾರು ಸಮಸ್ಯೆಗಳ ಪರಿಹಾರಕ್ಕೂ ಸಂಬಂಧಿತರು ಗಮನ ಹರಿಸಬೇಕು ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಆಗ್ರಹಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ವಲಯದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಹೆಸಕುತ್ತೂರು ಇಲ್ಲಿ 2023 – 24 ನೇ ಸಾಲಿನ ಹೊಸ ಶೈಕ್ಷಣಿಕ ವರ್ಷಕ್ಕೆ ಸಂಭ್ರಮದ ಚಾಲನೆ ನೀಡಲಾಯಿತು. ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಕೃಷ್ಣ ಕೆದ್ಲಾಯರು ಪ್ರಾರಂಭೋತ್ಸವಕ್ಕೆ ಚಾಲನೆ ನೀಡಿದರು. ಶೈಕ್ಷಣಿಕ ಘೋಷಣೆ, ಬೇಂಡು ವಾದನದೊಂದಿಗೆ ಬಲೂನು ಹಿಡಿದು, ಬಣ್ಣದ ಮುಖವಾಡಗಳನ್ನು ಧರಿಸಿ ವಿದ್ಯಾರ್ಥಿಗಳು ಊರ ಬೀದಿಗಳ ಮುಖಾಂತರ ಮೆರವಣಿಗೆಯಲ್ಲಿ ಸಾಗಿದರು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಸರಕಾರದ ವತಿಯಿಂದ ಒದಗಿಸಲಾದ ಪಠ್ಯ ಪುಸ್ತಕ ಹಾಗೂ ಸಮವಸ್ತ್ರ ವಿತರಣೆ ಮಾಡಲಾಯಿತು. ಸ್ಥಳೀಯ ಗ್ರಾಮ ಪಂಚಾಯಿತ್ ಸದಸ್ಯರಾದ ರಾಘವೇಂದ್ರ ಶೆಟ್ಟಿ ಹಾಗೂ ಅಶೋಕ ಮೊಗವೀರ, ಎಸ್ ಡಿ ಎಂ ಸಿ ಉಪಾಧ್ಯಕ್ಷರಾದ ಗಾಯತ್ರಿ ಆಚಾರ್, ಎಸ್ ಡಿ ಎಂ ಸಿ ಸದಸ್ಯರು, ಪೋಷಕರು ಹಾಗೂ ಶಾಲಾ ಶಿಕ್ಷಕರಾದ ಸಂಜೀವ ಎಂ, ಜಯರಾಮ ಶೆಟ್ಟಿ, ವಿಜಯಾ ಆರ್,ವಿಜಯ ಶೆಟ್ಟಿ, ರವೀಂದ್ರ ನಾಯಕ್ ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಇಲಾಖಾ ಅಧಿಕಾರಿಗಳೊಂದಿಗೆ ಸಭೆ ಕುಂದಾಪುರ ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ಜರುಗಿತು. ಈ ವೇಳೆ ಅವರು ಅಧಿಕಾರಿಗಳಿಂದ ಕ್ಷೇತ್ರದ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಪಡೆದು ಬಳಿಕ ಮಾತನಾಡಿ, ಕುಡಿಯುವ ನೀರು ಸಮಸ್ಯೆಯನ್ನು ಆದ್ಯತೆಯ ನೆಲೆಯಲ್ಲಿ ಪರಿಹರಿಸಲು ಕ್ರಮ ಕೈಗೊಳ್ಳಬೇಕು. ಜಲಜೀವನ್ ಮಿಷನ್ ಯೋಜನೆಯಡಿ ಪೈಪ್ ಲೈನ್, ಟ್ಯಾಂಕ್ ನಿರ್ಮಾಣಕ್ಕೆ ಮೀಸಲು ಅರಣ್ಯದಿಂದ ತಾಂತ್ರಿಕ ಅಡಚಣೆಗಳು ಆಗುತ್ತಿದ್ದು ಇದನ್ನು ಪರಿಹರಿಸಿಕೊಳ್ಳಬೇಕು. ಡೀಮ್ಡ್ ಫಾರೆಸ್ಟ್ ಸಮಸ್ಯೆಯ ಗೊಂದಲಕ್ಕೆ ಅರಣ್ಯ ಇಲಾಖೆ ಹಾಗೂ ಕಂದಾಯ ಇಲಾಖೆ ಜಂಟಿ ಸರ್ವೇ ಮಾಡುವ ಮೂಲಕ ಸಮಸ್ಯೆ ಪರಿಹಾರ ಮಾಡಬೇಕು. ಸಮಸ್ಯೆಗಳು ಎದುರಾದ ನನ್ನ ಗಮನಕ್ಕೆ ತನ್ನಿ ಪರಿಹಾರಕ್ಕೆ ಒಟ್ಟಾಗಿ ಪ್ರಯತ್ನಿಸೋಣ ಎಂದರು. ಶಾಸಕ ಪ್ರಶ್ನೆಗೆ ಪ್ರತಿಕ್ರಿಯಿಸಿದ ಕುಂದಾಪುರ ತಹಶೀಲ್ದಾರ್ ಶೋಭಾಲಕ್ಷ್ಮೀ ಎಚ್. ಎಸ್ ಅವರು, ಮಳೆಗಾಲದ ಮುನ್ನೆಚ್ಚರಿಕೆ ಬಗ್ಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ತಾಲೂಕು ಮಟ್ಟದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮಂಗಳೂರು: ಅರುಣ್ಯ ಫೌಂಡೇಶನ್ ಹಾಗೂ ದಾಸ್ ಕುಡ್ಲ ಇವೆಂಟ್ಸ್ ಜಂಟಿಯಾಗಿ ಆಯೋಜಿಸಿರುವ ‘ಎಸ್ಪಿಎಲ್23 ಕರಾವಳಿ ಕೋಯಲ್ ಚಾಂಪಿಯನ್ಸ್’ ಎರಡು ದಿನಗಳ ಸಂಗೀತ ಸಂಭ್ರಮಕ್ಕೆ ಗಣ್ಯರು, ಸ್ಫರ್ಧಿಗಳು, ಸಭಿಕರ ಸಮ್ಮುಖದಲ್ಲಿ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು. ಜ್ಞಾನೋದಯದ ಉದಯ ಗುರೂಜಿ ದೀಪ ಬೆಳಗುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, “ಸಂಗೀತ ಮನಸ್ಸನ್ನು ಮುದಗೊಳಿಸುವ ಕಲೆಯಾಗಿದ್ದು, ಕೆಲವರಿಗಷ್ಟೇ ಒಲಿದಿರುತ್ತದೆ. ಆದರೆ ಪ್ರತಿಯೊಬ್ಬರೂ ಸಂಗೀತವನ್ನು ಅಸ್ವಾದಿಸುವ ಕಲೆಯನ್ನು ಹೊಂದಿರುತ್ತಾರೆ” ಎಂದರು. ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಸುರೇಶ್ ಬಳ್ಳಾಲ್, ” ದಾಸ್ ಕುಡ್ಲ ಹಾಗೂ ಅರುಣ್ಯ ಫೌಆಂಡೇಶನ್ ಕಾರಣದಿಂದಾಗಿ, ಕೊರೊನೋತ್ತರ ಕಾಲದಲ್ಲಿ ಸಂಗೀತಕ್ಕೆ ಬೇಕಿರುವ ವೇದಿಕೆ ಪುನಃ ಲಭಿಸಿದ್ದು, ಕಲಾವಿದರು ಇಂತಹ ಸುವರ್ಣಾವಕಾಶವನ್ನು ಸದುಪಯೋಗಪಡಿಸಿಕೊಳ್ಳಿ” ಎಂದು ಯುವ ಕಲಾವಿದರಿಗೆ ಕರೆ ನೀಡಿದರು. ದೊಡ್ಮನೆ ಅಪ್ಪು ಯುವ ಸೇನೆಯ ಸ್ಥಾಪಕಾಧ್ಯಕ್ಷರಾದ ಕೆ. ಆರ್. ಜನಾರ್ಧನ್ ಬಾಬು ಮಾತನಾಡಿ, ಇಂತಹ ಕಾರ್ಯಕ್ರಮಗಳು ನಿರಂತರವಾಗಿ ನಡೆಯಲಿ ಹಾಗೂ ಇತರರಿಗೂ ಪ್ರೇರಣೆಯಾಗಲಿ ಎಂದು ಆಶಿಸಿದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಬೈಂದೂರು ಸರಕಾರಿ ಮಾದರಿಯ ಪ್ರಾಥಮಿಕ ಶಾಲೆಯಲ್ಲಿ ಬೈಂದೂರು ಇಲ್ಲಿಯ ಶಾಲಾ ಪ್ರಾರಂಭೋತ್ಸವ ನಡೆಯಿತು. ಶಾಲೆಗೆ ಬಂದ ಮಕ್ಕಳನ್ನು ಸ್ವಾಗತಿಸಿಕೊಂಡು ಪುಸ್ತಕ ಸಮವಸ್ತ್ರಗಳನ್ನು ನೀಡಲಾಯಿತು ಸಂದರ್ಭದಲ್ಲಿ ಎಸ್ಟಿಎಂಸಿಯ ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಸಂಜೀವ ದೇವಡಿಗ ಉಪಾಧ್ಯಕ್ಷರಾದ ಸುಮತಿ ಹಾಗೂ ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರು ಪೋಷಕರು ಶಿಕ್ಷಕರು ಉಪಸ್ಥಿತರಿದ್ದರು. ಶಾಲಾ ಪದವೀಧರ ಮುಖ್ಯೋಪಾಧ್ಯಾಯರಾದ ಜನಾರ್ದನ್ ದೇವಾಡಿಗ ಪ್ರಾಸ್ತಾವಿಕ ಮಾತುಗಳನ್ನಾಡಿದರು ಶಿಕ್ಷಕರಾದ ಗಣಪತಿ ಹೋಬಳಿಧಾರ್ ಸರ್ವರನ್ನು ಸ್ವಾಗತಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಕೆರಾಡಿ ಗ್ರಾಮದ ಚಪ್ಪರಮಕ್ಕಿ ಕೂರ್ಕೊಗೆ ಎಂಬಲ್ಲಿ ನಿರ್ಜನ ಪ್ರದೇಶದ ರಸ್ತೆ ಬದಿಯಲ್ಲಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕೆರಾಡಿ ನಿವಾಸಿಯಾದ ಶಶಿಕಾಂತ್ (25) ಮೃತ ಯುವಕ. ರಸ್ತೆ ಬದಿಯಲ್ಲಿ ಬೈಕ್ ನಿಲ್ಲಿಸಿ ಹೋಗಿರುವುದನ್ನು ಗಮನಿಸಿದ ಶಶಿಕಾಂತನ ಮೊಬೈಲ್ಗೆ ಸ್ನೇಹಿತರು, ಆತನಿಗೆ ಕರೆ ಮಾಡಿದಾಗ ಪ್ರತಿಕ್ರಿಯಿಸದೇ ಇದ್ದುದರಿಂದ ಸಂಶಗೊಂಡು ಅಭಯಾರಣ್ಯದಲ್ಲಿ ಹುಡುಕುತ್ತಿರುವಾಗ ಚಾಕಟೆ ಮರಕ್ಕೆ ಸುತ್ತಿಕೊಂಡಿರುವ ಕುಮ್ಟಿ ಬೀಳಿಗೆ ಪಾಲ್ಸ್ನ ಬೀಳನ್ನು ಕಟ್ಟಿ ಇನ್ನೂಂದು ತುದಿಯನ್ನು ಕುತ್ತಿಗೆಗೆ ಉರಳು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡುಬಂದಿದೆ. ಮೃತ ಶಶಿಕಾಂತ್ ರಾಷ್ಟೀಯ ಮಟ್ಟದ ಹ್ಯಾಂಡ್ಬಾಲ್ ಆಟಗಾರ, ರಾಜ್ಯಮಟ್ಟದ ಕ್ರಿಕೆಟ್ ಆಟಗಾರನಾಗಿದ್ದ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
