Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಪಶ್ಚಿಮ ಎಷ್ಯಾ ರಾಷ್ಟ್ರಗಳಲ್ಲಿ ಯುದ್ಧ ನಡೆಯುತ್ತಿರುವುದರಿಂದಾಗಿ ದೇಶದಲ್ಲಿ ವಾಣಿಜ್ಯ ಬಳಕೆ ಮಾಡುವ ಅನಿಲ ಸಿಲಿಂಡರ್‌ಗಳ ಸರಬರಾಜಿನಲ್ಲಿ ವ್ಯತ್ಯಾಯ ಉಂಟಾಗಿದೆ. ಇದರಿಂದ ಹೋಟೆಲ್ ಉದ್ಯಮ ನಡೆಸುವವರಿಗೆ ತೊಂದರೆಯಾಗಿದ್ದು ಹೋಟಲ್ ಉದ್ಯಮ ಮುಂದುವರೆಸಲು ಪರ್ಯಾಯ ಉರುವಲುಗಳಾದ ಕಟ್ಟಿಗೆ ಹಾಗೂ ವಿದ್ಯುತ್ ಉರುವಲುಗಳ ಬಳಕೆಗೆ ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಕರೆ ನೀಡಿದರು. ಅವರು ಶುಕ್ರವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಾಣಿಜ್ಯ ಬಳಕೆ ಅನಿಲ ಸಿಲಿಂಡರ್ ಸರಬರಾಜು ಸಮಸ್ಯೆ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಗೃಹ ಬಳಕೆ ಸಿಲಿಂಡರ್‌ಗಳ ಸರಬರಾಜಿನಲ್ಲಿ ಯಾವುದೇ ರೀತಿಯ ವ್ಯತ್ಯಯ ಉಂಟಾಗಿರುವುದಿಲ್ಲ. ವಾಣಿಜ್ಯ ಬಳಕೆಯ ಅನಿಲ ಹೊರ ದೇಶಗಳಿಂದ ಪೂರ್ಣ ಪ್ರಮಾಣದಲ್ಲಿ ಆಮದು ಆಗುತ್ತಿದ್ದು, ಯುದ್ಧ ಭೀತಿಯಿಂದಾಗಿ ಅನಿಲ ಆಮದು ನಿಗಧೀತ ಪ್ರಮಾಣದಲ್ಲಿ ಆಗದೆ ವಾಣಿಜ್ಯ ಬಳಕೆ ಸಿಲಿಂಡರ್‌ಗಳ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿದೆ. ಇದು ತಾತ್ಕಾಲಿಕ ಸಮಸ್ಯೆ ಆಗಿದೆ. ಇದಕ್ಕೆ ಪರ್ಯಾಯ ಉರುವಲುಗಳ ಬಳಕೆಯೊಂದೇ ಮಾರ್ಗ ಎಂದರು.…

Read More

ಕುಂದಾಪ್ರ ಡಾಠ್‌ ಕಾಂ ಸುದ್ದಿ.ಉಡುಪಿ: ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ಉಪ್ಪೂರು ಉಡುಪಿ ಇಲ್ಲಿ ಡಿಪ್ಲೋಮಾ ಇನ್ ಟೂಲ್ ಆಂಡ್ ಡೈ ಮೇಕಿಂಗ್ ಹಾಗೂ ಡಿಪ್ಲೋಮಾ ಇನ್ ಮೆಕೆಟ್ರಾನಿಕ್ಸ್ ತರಗತಿಗಳನ್ನು ನಡೆಸಲಾಗುವುದು. ಎಂ.ಟೆಕ್/ಬಿ.ಇ(ಮೆಕ್ಯಾನಿಕಲ್ ಇಂಜಿನಿಯರಿಂಗ್, ಇ&ಇ,ಎ&ಸಿ) ಎಂ.ಎಸ್ಸಿ(ಎಲೆಕ್ಟ್ರಾನಿಕ್ಸ್, ಫಿಸಿಕ್ಸ್) ವಿದ್ಯಾರ್ಹತೆ ಹೊಂದಿರುವ ಅತಿಥಿ ಉಪನ್ಯಾಸಕರ ಅವಶ್ಯಕತೆ ಇದ್ದು ಆಸಕ್ತ ಅಭ್ಯರ್ಥಿಗಳು ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಸರ್ಕಾರಿ ಪ್ರೌಢಶಾಲೆ ಹತ್ತಿರ, ಕೊಳಲಗಿರಿ ಉಪ್ಪೂರು ದೂ.ಸಂ: 9880510585, 8618760169 ಇ-ಮೇಲ್: gttcudupi@gmail.com ಅನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸಹಜ ಯೋಗದಿಂದ ಮಾನಸಿಕ ಒತ್ತಡವನ್ನು ನಿಯಂತ್ರಿಸಲು ಸಾಧ್ಯ. ಅತ್ಯಂತ ಸರಳವಾದ ಯೋಗ ಕ್ರಿಯೆಗಳು ಮತ್ತು ಕ್ರಮಬದ್ಧವಾದ ಆಹಾರ ಸೇವನೆಯಿಂದ ಒತ್ತಡವನ್ನು ನಿರ್ವಹಿಸಬಹುದು ಎಂದು ಚಂದ್ರಕಾಂತ ಡಿಯೋಡ ಹೇಳಿದರು. ಅವರು ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಆಯೋಜಿಸಿದ ಸಹಜ ಯೋಗ ಕುರಿತ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. 5 ಗೋಷ್ಠಿಯಲ್ಲಿ ನಡೆದ ಈ ಶಿಬಿರದಲ್ಲಿ ಡಾ| ಆಶಿಶ್, ಕಲ್ಪನಾ, ಕೋಪಾಲ್, ಪ್ರಣಮ್, ತಿಮ್ಮಪ್ಪ, ನೀತು, ಡಾ. ವೀರೇಶ್ ಸಂಪನ್ಮೂಲ ವ್ಯಕ್ತಿಗಳಾಗಿ ಮಾಹಿತಿ ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ, ಆಡಳಿತ ನಿಕಾಯಕರು ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳಾದ ರಕ್ಷಿತ್ ರಾವ್ ಗುಜ್ಜಾಡಿ ಮತ್ತು ರೇಷ್ಮಾ ಶೆಟ್ಟಿ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಆರೋಗ್ಯವಂತ ರಾಷ್ಟ್ರದ ಉದಯ ಆರೋಗ್ಯವಂತ ಮಹಿಳೆಯರಿಂದ ಆರಂಭವಾಗುತ್ತದೆ. ಮಹಿಳೆಯರಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುವ ಗರ್ಭಕಂಠ ಕ್ಯಾನ್ಸರ್ ತಡೆಗೆ ಹೆಚ್.ಪಿ.ವಿ ಲಸಿಕೆ ಸಹಕಾರಿಯಾಗಿದ್ದು, ಹೆಣ್ಣು ಮಕ್ಕಳ ಸದೃಢ ಆರೋಗ್ಯವನ್ನು ರಕ್ಷಿಸುವ ನಿಟ್ಟಿನಲ್ಲಿ ಈ ಲಸಿಕಾ ಅಭಿಯಾನ ಕಾರ್ಯಕ್ರಮವು ಒಂದು ಪ್ರಮುಖ ಮೈಲಿಗಲ್ಲಾಗಲಿದೆ ಎಂದು ಉಡುಪಿ -ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಶುಕ್ರವಾರ ನಗರದ ಬ್ರಹ್ಮಗಿರಿ ಸೈಂಟ್ ಸಿಸಿಲಿ ಪ್ರೌಢಶಾಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಹಾಗೂ ರಾಷ್ಟ್ರೀಯ ಆರೋಗ್ಯ ಅಭಿಯಾನ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಹೆಚ್.ಪಿ.ವಿ ಲಸಿಕಾ ಅಭಿಯಾನವನ್ನು ಉದ್ಘಾಟಿಸಿ ಮಾತನಾಡಿದರು. ಹ್ಯೂಮನ್ ಪ್ಯಾಪಿಲೋಮ ವೈರಸ್ ಗರ್ಭಕಂಠ ಸೇರಿದಂತೆ ಅನೇಕ ಮಾದರಿಯ ಕ್ಯಾನ್ಸರ್ ಹರಡಲು ಕಾರಣವಾಗುತ್ತದೆ. ಸಾಮಾನ್ಯವಾಗಿ ಮಹಿಳೆಯರಲ್ಲಿ ಕಂಡುಬರುವ ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟುವ ಉದ್ದೇಶದಿಂದ ಹೆಚ್.ಪಿವಿ ಲಸಿಕಾ ಅಭಿಯಾನಕ್ಕೆ ಜಿಲ್ಲೆಯಲ್ಲಿ ಚಾಲನೆ ನೀಡಲಾಗಿದ್ದು, ಪ್ರಸ್ತುತ ಈ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಹಿರಿಯ ನಾಗರಿಕರ ವೇದಿಕೆ ಕೋಟ ಗಿಳಿಯಾರು ಮಾಸಿಕ ಸಭೆಯಲ್ಲಿ ಹಿರಿಯ ನಾಗರಿಕರ ಆರೋಗ್ಯ ಪಾಲನೆ ಮತ್ತು ಮಾನಸಿಕ ನೆಮ್ಮದಿ ಕುರಿತು ಉಪನ್ಯಾಸ ಕಾರ್ಯಕ್ರಮ ಮೂಡುಗಿಳಿಯಾರಿನ ಅಲ್ಸೆಕೆರೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸಭಾಂಗಣದಲ್ಲಿ ಇತ್ತೀಚಿಗೆ ನಡೆಯಿತು. ವೇದಿಕೆ ಅಧ್ಯಕ್ಷ ಹಂದಕುಂದ ಸೋಮಶೇಖರ ಶೆಟ್ಟಿ ಗಿಳಿಯಾರು ಅಧ್ಯಕ್ಷತೆ ವಹಿಸಿ ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿ ಕುರಿತು ಮಾಹಿತಿ ನೀಡಿದರು. ಉಡುಪಿ ಡಾ| ಎ.ವಿ. ಬಾಳಿಗಾ ಆಸ್ಪತ್ರೆಯ ಖ್ಯಾತ ಮನೋರೋಗ ತಜ್ಞರಾದ ಡಾ| ವಿರೂಪಾಕ್ಷ ದೇವರುಮನೆ ಹಿರಿಯ ನಾಗರಿಕರ ಸ್ವಸ್ತ ಜೀವನ ಸದೃಢ ಆರೋಗ್ಯದ ಬಗ್ಗೆ ಮಾನಸಿಕ ನೆಮ್ಮದಿಯ ಕುರಿತು ಸರಳ ವ್ಯಾಯಾಮದ ಬಗ್ಗೆ ವಿಚಾರಗೋಷ್ಠಿ ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಹೊಸತಾಗಿ ಸೇರ್ಪಡೆಗೊಂಡ ಸದಸ್ಯರಾದ ಗೋಪಾಲ ಕೃಷ್ಣ ಜೋಗಿ, ಸಿ.ಎ. ಬ್ಯಾಂಕ್ ಮಾಜಿ ಅಧ್ಯಕ್ಷ ತಿಮ್ಮ ಪೂಜಾರಿ, ನಿವೃತ್ತ ಉಪನ್ಯಾಸಕ ಶ್ರೀಪತಿ ಜೋಗಿ ಅವರನ್ನು ಮುಖ್ಯ ಅತಿಥಿ ವಿರೂಪಾಕ್ಷ ದೇವರುಮನೆ ಗೌರವಿಸಿದರು. ಹುಟ್ಟುಹಬ್ಬ ಆಚರಿಸಿಕೊಂಡ ಜಿ. ಸರಸ್ವತಿಯಮ್ಮ, ಸುಬ್ರಹ್ಮಣ್ಯ ಹೇರ್ಳೆ, ಸುಶೀಲ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಜಲಜೀವನ್ ಮಿಷನ್ ಪ್ರಧಾನಿಯವರ ಮಹತ್ಮಾಕಾಂಕ್ಷೆಯ ಯೋಜನೆಯಾಗಿದೆ. ಪ್ರತಿ ಮನೆ ಮನೆಗೂ ಸಮರ್ಪಕ ಕುಡಿಯುವ ನೀರು ಪೂರೈಕೆಯಾಗಬೇಕು ಎಂಬುದು ಅವರ ಕನಸು. ಸಂಸದರ ಪ್ರಯತ್ನದ ಫಲವಾಗಿ ಯೋಜನೆ ಬೈಂದೂರು ಕ್ಷೇತ್ರಕ್ಕೆ ದೊರಕಿದ್ದು ಅದರ ಸಮರ್ಪಕ ಅನುಷ್ಠಾನ ಆಗಬೇಕಿದ್ದು, ಯಾವುದೇ ಲೋಪ ಕಂಡುಬಂದರೂ ಅಧಿಕಾರಿಗಳು ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಶಾಸಕ ಗುರುರಾಜ ಗಂಟಿಹೊಳೆ ಎಚ್ಚರಿಸಿದ್ದಾರೆ. ಅವರು ಇಲ್ಲಿನ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಕ್ಷೇತ್ರದಲ್ಲಿ ಜಲಜೀವನ್ ಮಿಷನ್ ಯೋಜನೆ ಅನುಷ್ಠಾನದ ಸಂದರ್ಭ ವಿವಿಧ ತೊಡಕು ಎದುರಾಗಿದೆ. ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಬಗ್ಗೆ ಪದೇ ಪದೇ ಎಚ್ಚರಿಸಲಾಗಿದೆ. ಆದಾಗ್ಯೂ ಅರ್ಧಂಬರ್ಧ ಯೋಜನೆಯನ್ನು ಕೈಗೊಂಡು ಗ್ರಾಮ ಪಂಚಾಯತಿಯಿಂದ ನಿರಪೇಕ್ಷಣಾ ಪತ್ರ ಪಡೆದರೆ ಅದಕ್ಕೆ ಆಯಾ ಪಿಡಿಓಗಳೇ ಹೊಣೆಯಾಗುತ್ತಾರೆ. ಅವರ ಮೇಲೆ ನಿರ್ಣಾಕ್ಷಿಣ್ಯವಾಗಿ ಕಾನೂನು ಕ್ರಮಕ್ಕೆ ಮುಂದಾಗುತ್ತೇವೆ. ಮನೆ ಮನೆಗೆ ಕುಡಿಯುವ ನೀರು ಯೋಜನೆ ಎರಡು ಹಂತದಲ್ಲಿ ಅನುಷ್ಠಾನಗೊಳ್ಳುತ್ತಿದ್ದು, ಜನಜೀವನ್ ಮಿಷನ್ ಮೂಲಕ ನಳ್ಳಿ ಹಾಗೂ ಪೈಪ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಶ್ರೀ ಮಾರಿಯಮ್ಮ ದೇವಸ್ಥಾನ, ಚಿತ್ರಪಾಡಿ- ಸಾಲಿಗ್ರಾಮದೇವಿಯ ಪ್ರತಿಷ್ಠಾ ವರ್ಧಂತ್ಯೋತ್ಸವವು ಬುಧವಾರ ಮತ್ತು  ಗುರುವಾರದಂದು ಸಂಪನ್ನಗೊಂಡಿತು. ಶ್ರೀ ದೇಗುಲದಲ್ಲಿ ಧಾರ್ಮಿಕ ವಿಧಿವಿಧಾನಗಳನ್ನು ಬುಧವಾರ ದೇವತಾ ಪ್ರಾರ್ಥನೆ, ಪುಣ್ಯಾಹ, ಬ್ರಹ್ಮಕಲಶ ಸ್ಥಾಪನೆ, ಕಲಾಹೋಮ, ಕಲಶಾಭಿಷೇಕ, ಮಹಾಪೂಜೆ ,ವಸಂತ ಪೂಜೆ, ಪ್ರಸಾದ ವಿತರಣೆ ಗುರುವಾರ ಮಹಾಪೂಜೆ, ಮಹಾ ಅನ್ನಸಂತರ್ಪಣೆ ಕಾರ್ಯಕ್ರಮಗಳು ಜರಗಿದವು. ಧಾರ್ಮಿಕ ವಿಧಿವಿಧಾನಗಳನ್ನು ದೇಗುಲದ ತಂತ್ರಿ ಕೃಷ್ಣ ಸೋಮಯಾಜಿ ನೇತ್ರತ್ವದಲ್ಲಿ ದೇಗುಲದ ಪ್ರದಾನ ಅರ್ಚಕ ಸುಧೀರ್ ಐತಾಳ್ ಸಮ್ಮುಖದಲ್ಲಿ ಜರಗಿದವು. ದೇಗುಲದ ಅಧ್ಯಕ್ಷ ಆನಂದ್ ಗಾಣಿಗ ದಂಪತಿಗಳು ಧಾರ್ಮಿಕ ಕಾರ್ಯದಲ್ಲಿ ಭಾಗಿಯಾದರು. ಸಾಂಸ್ಕoತಿಕ ಕಾರ್ಯಕ್ರಮದ ಅಂಗವಾಗಿ ಬುಧವಾರ ಶ್ರೀ ಮಾರಿಯಮ್ಮ ಮಹಿಳಾ ಭಜನಾ ಮಂಡಳಿ ಚಿತ್ರಪಾಡಿ ಶ್ರೀರಾಮ ಮಹಿಳಾ ಭಜನಾ ಸಂಘ ಸಾಲಿಗ್ರಾಮ, ಶ್ರೀ ನಂದಿಕೇಶ್ವರ ಭಜನಾ ಮಂಡಳಿ, ಚಿತ್ರಪಾಡಿ ಇವರಿಂದ ಕುಣಿತ ಭಜನೆ ನಡೆಯಿತು. ಪೂರ್ವಾಹ್ನ ವಿಪ್ರ ಮಹಿಳಾ ಸಾಲಿಗ್ರಾಮ ವಲಯ ಇವರಿಂದ ಲಲಿತಾ ಸಹಸ್ರನಾಮ ಪಠಣ, ಬ್ರಹ್ಮಶ್ರೀ ನಾರಾಯಣಗುರು ಮಹಿಳಾ ಬಳಗ ಕೋಟ ಇವರಿಂದ ಚಂಡೆವಾದನ, ರಾತ್ರಿ ಚಿತ್ರಪಾಡಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಇಲ್ಲಿನ ಹರ್ಕೂರಿನಲ್ಲಿ ಬುಧವಾರ ರಾತ್ರಿ ಮನೆಯ ಸಿಟೌಟ್‌ನಲ್ಲಿದ್ದ ಯುವಕ ಮನೆಯ ಹಿಂದಿದ್ದ ಸ್ನಾನ ಗೃಹಕ್ಕೆ ಹೋಗುವಾಗ ಹಠಾತ್ ಕುಸಿದು ಬಿದ್ದು ಅಸ್ವಸ್ಥಗೊಂಡು, ಎದೆ ನೋವಿನಿಂದ ಸಾವನ್ನಪ್ಪಿದ್ದಾರೆ. ಹರ್ಕೂರು ಕಟ್ಟಿನಮಕ್ಕಿಯ ನಿವಾಸಿ ಶಶಿದರ ದೇವಾಡಿಗ (25) ಮೃತ ಯುವಕ. ಅವರು ಬಿಬಿಎ ವ್ಯಾಸಂಗ ಮುಗಿಸಿದ್ದು, ಬೆಂಗಳೂರಿನ ಕಂಪನಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದರು. 4 ವರ್ಷಗಳಿಂದ ವರ್ಕ್ ಪ್ರಮ್ ಹೋಮ್ ನಿಂದ ಊರಲ್ಲಿಯೇ ಇದ್ದರು. ಮಾ.11ರ ಸಂಜೆ 6.40ರ ಸುಮಾರಿಗೆ ಮನೆಯ ಸಿಟೌಟ್‌ನಲ್ಲಿ ಕುಳಿದಿದ್ದ ಶಶಿಧರ್ ಅವರು ಮನೆಯ ಹಿಂದಿದ್ದ ಸ್ಥಾನ ಗೃಹಕ್ಕೆ ಹೋಗುವಾಗ ಹಠಾತ್ ಕುಸಿದು ಬಿದ್ದಿದ್ದಾರೆ. ಕೂಡಲೇ ಅಜ್ಜಿ ಅಕ್ಕಯ್ಯ ಅವರು ಆರೈಕೆ ಮಾಡಿದ್ದು, ಆಗ ತನಗೆ ಉಸಿರು ಕಟ್ಟುತ್ತಿದೆಯೆಂದು ಎದೆ ಹಿಡಿದುಕೊಂಡು ನರಳಾಡಿದರು. ಕೂಡಲೇ ಚಿಕಿತ್ಸೆಗಾಗಿ ಕುಂದಾಪುರದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಬಂದಾಗ, ಪರೀಕ್ಷಿಸಿದ ವೈದ್ಯರು ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ ಆದರೆ ರಾತ್ರಿ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾಗಿ, ಮೃತರ ತಂದೆ ಸದಾಶಿವ ಕೆ. ಉಳ್ಳೂರು 11…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ನಮ್ಮ ಆಲೋಚನೆಗಳು ಶುದ್ಧವಾಗಿದ್ದಲ್ಲಿ ಸಂಸ್ಕಾರವು ಉತ್ತಮವಾಗಿರುತ್ತದೆ. ಮಾಡುವ ಕಾರ್ಯದಲ್ಲಿ ನಿಷ್ಠೆ, ಪರಿಶ್ರಮಗಳು ಇದ್ದಲ್ಲಿ ಯಶಸ್ಸನ್ನು ಕಾಣಲು ಸಾಧ್ಯ. ಸಂಸ್ಕಾರಯುತ ಚಾರಿತ್ರ್ಯ ಅತ್ಯುನ್ನತ ಪ್ರತೀಕ ಎಂದು ಕುಂದಾಪುರದ ಸ್ಪರ್ಧಾ ಸಾರಥಿ ಕೆ.ಎ.ಎಸ್. ಅಕಾಡೆಮಿ ಕುಂದಾಪುರದ ನಿರ್ದೇಶಕರಾದ ಆದರ್ಶ ಕೆಲ ಹೇಳಿದರು. ಅವರು ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಆಯೋಜಿಸಿದ ಜೀವನ ಮೌಲ್ಯ ಸರಣಿ ಉಪನ್ಯಾಸ ಮಾಲಿಕೆಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪ- ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ, ಆಡಳಿತ ನಿಕಾಯಕರು ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳಾದ ರಕ್ಷಿತ್ ರಾವ್ ಗುಜ್ಜಾಡಿ, ರೇಷ್ಮಾ ಶೆಟ್ಟಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ದಿವಿಜ ಅತಿಥಿಗಳನ್ನು ಪರಿಚಯಿಸಿ, ಸಿರಿ ಸ್ವಾಗತಿಸಿ, ಪ್ರಥಾ ಆರ್. ಶೆಟ್ಟಿ ನಿರೂಪಿಸಿ, ಪ್ರತೀಕ್ಷಾ ವಂದಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಜನವರಿಯಲ್ಲಿ ನಡೆದ ಸಿ.ಎ. ಫೌಂಡೇಶನ್ ಪರೀಕ್ಷೆಯಲ್ಲಿ ಆಳ್ವಾಸ್ ಪದವಿ ಕಾಲೇಜಿನ ಒಟ್ಟು 14 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಸಾಧನೆ ಮೆರೆದಿದ್ದಾರೆ. ರಾಷ್ಟ್ರೀಯ ಮಟ್ಟದಲ್ಲಿ ಈ ವಿಭಾಗದಲ್ಲಿ ಶೇಕಡಾ 19.23 ಫಲಿತಾಂಶ ದಾಖಲಾಗಿದ್ದರೆ, ಆಳ್ವಾಸ್ ಕಾಲೇಜು ಶೇಕಡಾ 31 ಫಲಿತಾಂಶ ಪಡೆದಿದೆ.  ಕಾಲೇಜಿನ ಬಿ.ಕಾಂ. ವಿದ್ಯಾರ್ಥಿಗಳಾದ ಶ್ರೇಯಾ ಬಂಗೇರ, ಪ್ರೀಶಾ ಎಸ್., ಜೊವಿಟಾ, ಸೀಮಾ, ಸಚನ್, ಪವಿತ್ರಾ, ಸಿಂಚನಾ ಕೆ., ಅನನ್ಯಾ, ಕುಶಲ್, ಶಿಬಾನಿ, ದೇಕಿ, ಪಲ್ಲವಿ ಮುಧೋಲೆ ಮತ್ತು ಆದಿತ್ಯ ಸಿ.ಎ. ಫೌಂಡೇಶನ್ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶದೊಂದಿಗೆ ಉತ್ತೀರ್ಣರಾಗಿರುತ್ತಾರೆ.ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ, ಪ್ರಾಂಶುಪಾಲ ಡಾ. ಕುರಿಯನ್ ಅಭಿನಂದಿಸಿದ್ದಾರೆ.

Read More