ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಗಾಡಿ ಕೂಸ ಪೂಜಾರಿ ತನ್ನ ವೃತ್ತಿ ಕಾಯಕದ ಜತೆ ಅವಿಭಜಿತ ಜಿಲ್ಲೆಗಳ ಕಂಬಳ ಕ್ಷೇತ್ರದಲ್ಲಿ ತನ್ನದೇ ಆದ ಛಾಪನ್ನು ಮೂಡಿಸಿದ್ದಾರೆ ಎಂದು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಾರಕೂರು ಶಾಂತರಾಮ ಶೆಟ್ಟಿ ಹೇಳಿದರು. ಅವರು ಶನಿವಾರ ಕೋಟ ಮಾಂಗಲ್ಯ ಮಂದಿರದಲ್ಲಿ ಇತ್ತೀಚಿಗೆ ಅಗಲಿದ ಕಾಯಕ ಯೋಗಿ ಗಾಡಿ ಕೂಸ ಪೂಜಾರಿಯವರ ನುಡಿನಮನ ಕಾರ್ಯಕ್ರಮದಲ್ಲಿ ಮಾತನಾಡಿ ತನ್ನ ಜೀವತ ಅವಧಿಯಲ್ಲಿ ಗಾಡಿ ಕೂಸ ಪೂಜಾರಿಯವರ ಸೇವೆ ಅನನ್ಯ ,ಎತ್ತಿನ ಗಾಡಿಯಲ್ಲಿ ಪ್ರಸಿದ್ಧ ಮಾತ್ರವಲ್ಲದೆ ಎರಡು ಜಿಲ್ಲೆಗಳ ಕಂಬಳ ಕ್ಷೇತ್ರದಲ್ಲಿ ಅಸಾಮಾನ್ಯ ಸಾಧನೆಯ ಪುಟ ತೆರೆದಿದ್ದಾರೆ ಆ ಕಾಲಘಟ್ಟದಲ್ಲಿ ಎತ್ತಿನಗಾಡಿಯ ಮೂಲಕ ಜನಸಾಮಾನ್ಯರ ಹೃದಯದಲ್ಲಿ ಗಾಡಿ ಕೂಸಣ್ಣ ಎಂಬ ಪ್ರೀತಿಗೆ ಪಾತ್ರರಾಗಿದ್ದರು ಎಂದು ತಮ್ಮ ಮತ್ತು ಅವರ ಸ್ನೇಹದ ದಿನಗಳನ್ನು ನೆನಪಿಸಿದರು. ಈ ಸಂದರ್ಭದಲ್ಲಿ ಚಿತ್ರಪಾಡಿಯ ಕಾರ್ತಟ್ಟು ಅಘೋರೇಶ್ಚರ ದೇಗುಲದ ಅಧ್ಯಕ್ಷ ಚಂದ್ರಶೇಖರ ಕಾರಂತ್ ನುಡಿನಮನ ಸಲ್ಲಿಸಿದರು. ಈ ವೇಳೆ ಹಲವು ಗಣ್ಯರು ಉಪಸ್ಥಿತರಿದ್ದು ಕೂಸ ಪೂಜಾರಿ ಭಾವಚಿತ್ರಕ್ಕೆ ಪುಷ್ಭನಮನ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕ ವಿಜ್ಞಾನ ವಿಭಾಗದ ಆಶ್ರಯದಲ್ಲಿ “ಹ್ಯಾಕಥಾನ್” ಕಾರ್ಯಕ್ರಮವನ್ನು ಸಂಸ್ಥೆಯ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು, ಪ್ರಾಯೋಗಿಕ ಕಲಿಕೆಗೆ ನಮ್ಮ ಸಂಸ್ಥೆಯಲ್ಲಿ ಮನ್ನಣೆಯನ್ನು ನೀಡಲಾಗುತ್ತಿದೆ. ಹ್ಯಾಕಥಾನ್ ಪ್ರಾಯೋಗಿಕ ಕಲಿಕೆಗೆ ಆದ್ಯತೆ ನೀಡುವ ಮಹತ್ವದ ಕಾರ್ಯಕ್ರಮ. ವಿದ್ಯಾರ್ಥಿಗಳಲ್ಲಿ ತಾಂತ್ರಿಕ ಕೌಶಲ್ಯಗಳನ್ನು ವರ್ಧಿಸಲು ಇಂತಹ ಕಾರ್ಯಕ್ರಮ ಅತ್ಯಂತ ಉಪಯುಕ್ತ ಎಂದರು. ಹ್ಯಾಕಥಾನ್ನಲ್ಲಿ ವಿದ್ಯಾರ್ಥಿಗಳನ್ನು ತಂಡಗಳಾಗಿ ವಿಭಜಿಸಿ, ತಂತ್ರಜ್ಞಾನವನ್ನು ಬಳಸಿಕೊಂಡು ನೈಜ ಜೀವನದ ವಿವಿಧ ತಂತ್ರಜ್ಞಾನ ಸಂಬAಧಿತ ಸಮಸ್ಯೆಗಳಿಗೆ ಪರಿಹಾರ ಕಂಡು ಹಿಡಿಯಲು ಅವಕಾಶ ಕಲ್ಪಿಸಲಾಯಿತು. 24 ಗಂಟೆಗಳ ಕಾಲ ನಡೆದ ಈ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು ತಮ್ಮ ಸೃಜನಶೀಲತೆ ಹಾಗೂ ತಾಂತ್ರಿಕ ಕೌಶಲ್ಯಗಳನ್ನು ಪ್ರದರ್ಶಿಸಿದರು. ಬಿಸಿಎ ವಿಭಾಗದ ಮುಖ್ಯಸ್ಥರಾದ ಮಹೇಶ್ ಕುಮಾರ್ ಅವರು ಹ್ಯಾಕಥಾನ್ ಕಾರ್ಯಕ್ರಮದ ಉದ್ದೇಶಗಳು ಮತ್ತು ಅದರ ಪ್ರಾಮುಖ್ಯತೆ ಕುರಿತು ವಿವರಿಸಿದರು. ಕಾರ್ಯಕ್ರಮದಲ್ಲಿ ಉಪ-ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಇವರ ವತಿಯಿಂದ ಪ್ರಸಕ್ತ ಶೈಕ್ಷಣಿಕ ಸಾಲಿಗೆ ಖಾಸಗಿ ಕೃಷಿ ಕಾಲೇಜುಗಳ ಸಂಯೋಜನೆಗಾಗಿ ಆಸಕ್ತಿ ಹೊಂದಿರುವ ಹಾಗೂ ರಾಜ್ಯದ ಸೊಸೈಟಿ ನೊಂದಣಿ ಕಾಯ್ದೆಯಡಿಯಲ್ಲಿ ನೋಂದಾಯಿಸಲಾದ ಮಂಡಳಿಗಳು, ಸೊಸೈಟಿಗಳು ಹಾಗೂ ಟ್ರಸ್ಟ್ ಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಸಂಸ್ಥೆಗಳು ಬಿ.ಎಸ್ಸಿ ಕೃಷಿ, ಬಿ.ಟೆಕ್ ಕೃಷಿ ಇಂಜಿನಿಯರಿಂಗ್, ಬಿ.ಟೆಕ್ ಕೃಷಿ ಬಯೋಟೆಕ್ನಾಲಜಿ, ಬಿ.ಟೆಕ್ ಫುಡ್ ಟೆಕ್ನಾಲಜಿ, ಬಿ.ಎಸ್ಸಿ ಅರಣ್ಯ, ಬಿ.ಎಸ್ಸಿ ಕಮ್ಯೂನಿಟಿ ವಿಜ್ಞಾನ, ಬಿ.ಎಸ್ಸಿ ಫುಡ್ ನ್ಯೂಟ್ರೀಶನ್ ಮತ್ತು ಡಯಟ್ರಿಕ್ಸ್, ಬಿ.ಎಸ್ಸಿ ತೋಟಗಾರಿಕೆ ಮತ್ತು ಬಿ.ಎಸ್ಸಿ ರೇಷ್ಮೆ ಕೃಷಿ ಪದವಿ ಪ್ರಾರಂಭಿಸಲು ಅರ್ಜಿ ಸಲ್ಲಿಸಬಹುದಾಗಿದೆ. ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಅಫಿಲಿಯೇಶನ್ಗಾಗಿ ಕನಿಷ್ಠ ಮಾನದಂಡಗಳನ್ನು www.uahs.edu.in ಜಾಲತಾಣದಲ್ಲಿ ಪ್ರಕಟಿಸಿದ್ದು, ಅಧಿಸೂಚಿಸಿದ ಮಾನದಂಡಗಳಂತೆ ಪ್ರಸಕ್ತ ಶೈಕ್ಷಣಿಕ ಸಾಲಿಗೆ ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿರುವ ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು, ಚಿತ್ರದುರ್ಗ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕರಾವಳಿ ದೈವಗಳ ನೆಲೆತಾಣವಾಗಿ ಸದಾ ಪವಾಡಗೈಯುವ ಕ್ಷೇತ್ರವಾಗಿ ರೂಪುಗೊಂಡಿದೆ ಅದರಲ್ಲಿ ಬಬ್ಬು ಸ್ವಾಮಿ ಮಹಿಳೆ ಜಗತ್ ಪ್ರಸಿದ್ಧವಾಗಿದೆ ಎಂದು ಕದ್ರಿ ಮಂಜುನಾಥೇಶ್ವರ ಕಾಲೇಜಿನ ಪ್ರಾಂಶುಪಾಲ ರಘುರಾಜ್ ಕದ್ರಿ ಅಭಿಪ್ರಾಯಪಟ್ಟರು. ಅವರು ಶುಕ್ರವಾರ ಇಲ್ಲಿನ ಗುಂಡ್ಮಿ-ಸಾಸ್ತಾನದ ಶ್ರೀ ಕಂಬಿಗಾರ ಶ್ರೀ ಬಬ್ಬುಸ್ವಾಮಿ ಮತ್ತು ಪರಿವಾರ ದೈವಸ್ಥಾನ ಸಿರಿ ಸಿಂಗಾರ ನೇಮೋತ್ಸವದ ಧಾರ್ಮಿಕ ಸಭೆಯಲ್ಲಿ ಮಾತನಾಡಿದರು. ಗುಂಡ್ಮಿಯ ಬಬ್ಬು ಸ್ವಾಮಿ ಕ್ಷೇತ್ರ ತನ್ನದೆ ಆದ ಇತಿಹಾಸವನ್ನು ಹೊಂದಿದೆ. ಆದರೆ ಅಭಿವೃದ್ಧಿ ಹೊರಗಿರುವುದು ಬೇಸರ ತಂದಿದೆ, ಇದರ ಅಭಿವೃದ್ಧಿಗೆ ಪ್ರತಿಯೊಬ್ಬರು ಕೈಜೋಡಿಸಿ ಎಂದು ಮನವಿ ಮಾಡಿ ಬಬ್ಬು ಸ್ವಾಮಿ ದೈವದ ಮಹಿಮೆಗಳ ಬಗ್ಗೆ ಸವಿಸ್ತಾರವಾಗಿ ತಿಳಿಸಿ ಬ್ರಹ್ಮಶ್ರೀ ನಾರಾಯಣ ಗುರು ಹಾಗೂ ಅಂಬೇಡ್ಕರ್ ರವರ ದಾರಿಯಲ್ಲಿ ಮುನ್ನಡೆದ್ದರಿಂದ ಇವತ್ತು ಈ ಹಂತದಲ್ಲಿ ಬೆಳೆಯಲು ಸಾಧ್ಯವಾಗಿದೆ ಎಂದರು. ಈ ಸಂದರ್ಭದಲ್ಲಿ ಸಮಾಜಸೇವಕರಾದ ಹಂಗಾರಕಟ್ಟೆ ಇಬ್ರಾಹಿಂ ಸಾಹೇಬ್, ಜೋಸೆಫ್ ಮೆನೆಜಸ್, ಸಾಂಸ್ಕೃತಿಕ ಚಿಂತಕ ಚಂದ್ರ ಆಚಾರ್ ಕೋಟ, ಸಬಿತಾ ಗುಂಡ್ಮಿ, ಕೊರಗ ಪೂಜಾರಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಹೆಬ್ರಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ತನ್ನ ತಾಯಿಯೊಂದಿಗೆ ಇರುವ ಚಿತ್ರವನ್ನು ಹೆಬ್ರಿ ಎಸ್.ಆರ್. ಸಮೂಹ ಶಿಕ್ಷಣ ಸಂಸ್ಥೆಯ ಪಿಯುಸಿ ವಿದ್ಯಾರ್ಥಿ ಪರೀಕ್ಷಿತ್ ಮಂದಾರ ಆಚಾರ್ ಬಿಡಿಸಿ ಉಡುಪಿಗೆ ಪ್ರದಾನ ಮಂತ್ರಿ ನರೇಂದ್ರ ಮೋದಿ ಅವರು ಆಗಮಿಸಿದ ವೇಳೆ ಪ್ರಧಾನಿ ಜೊತೆ ಆಗಮಿಸಿದ ತಂಡಕ್ಕೆ ಹಸ್ತಾಂತರಿಸಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರು ತಾಯಿಯೊಂದಿಗೆ ಇರುವ ಚಿತ್ರವನ್ನು ಬಿಡಿಸಿ ಪರೀಕ್ಷಿತ್ ಮಂದಾರ ಆಚಾರ್ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು. ಇದೀಗ ಪ್ರಧಾನಿಯಿಂದ ಚಿತ್ರಕಲಾವಿದ ಪರೀಕ್ಷಿತ್ ಮಂದಾರ ಆಚಾರ್ ಅವರಿಗೆ ಅಭಿನಂದನಾ ಪತ್ರ ಲಭಿಸಿದೆ. ಪತ್ರಿಕಾ ಮಾಧ್ಯಮಗಳು ಮತ್ತು ದೃಶ್ಯ ಮಾಧ್ಯಮಗಳು ಆ ಚಿತ್ರವನ್ನು ಪ್ರಕಟಿಸಿ ಪ್ರೋತ್ಸಾಹಿಸಿದ್ದರು. ಬಹುಮುಖ ಪ್ರತಿಭೆಯ ಪರೀಕ್ಷಿತ್ ಆಚಾರ್ ಬ್ರಹ್ಮಾವರ ತಾಲ್ಲೂಕು ನಾಲ್ಕೂರು ಗ್ರಾಮ ಮಾರಾಳಿಯ ಮಂದಾರ ಆಚಾರ್ ವೀಣಾ ಆಚಾರ್ ದಂಪತಿಯ ಪುತ್ರ. ಪರೀಕ್ಷಿತ್ ಸಹೋದರಿ ಎಸ್. ಆರ್. ವಿದ್ಯಾರ್ಥಿನಿ ಪ್ರಣಮ್ಯ ಆಚಾರ್ ಕೂಡ ಬಹುಮುಖ ಪ್ರತಿಭೆಯಾಗಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನಲ್ಲಿ ಶುಕ್ರವಾದಂದು ಕಾಲೇಜು ಆವರಣದಲ್ಲಿ ಎರಡನೇ ವರ್ಷದ ಪದವಿ ಪ್ರದಾನ ಸಮಾರಂಭ ಮತ್ತು ವಾರ್ಷಿಕ ದಿನಾಚರಣೆಯನ್ನು ಆಯೋಜಿಸಲಾಗಿತ್ತು. ಮುಖ್ಯ ಅತಿಥಿಯಾಗಿ ಬೆಂಗಳೂರಿನ ಆರ್ಜಿಯುಎಚ್ಎಸ್ ನ ಸೆನೆಟ್ ಸದಸ್ಯೆ ಮತ್ತು ಮಂಗಳೂರಿನ ಡಾ. ಎಂ. ವಿ. ಶೆಟ್ಟಿ ಫಿಸಿಯೋಥೆರಪಿ ಕಾಲೇಜಿನ ಉಪ ಪ್ರಾಂಶುಪಾಲರಾದ ವೈಶಾಲಿ ಶ್ರೀಜಿತ್ ಅವರು ತಮ್ಮ ಅಮೂಲ್ಯವಾದ ಮಾತುಗಳಿಂದ ಪದವೀಧರರನ್ನು ಪ್ರೇರೇಪಿಸಿದರು. ಗೌರವ ಅತಿಥಿಯಾಗಿ ಕುಂದಾಪುರದ ಸರ್ಕಾರಿ ಜನರಲ್ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಚಂದ್ರ ಮರಕಳ ಅವರು ಸಭೆಯನ್ನುದ್ದೇಶಿಸಿ ಮಾತನಾಡಿದರು ಮತ್ತು ಸಂಸ್ಥೆಯ ಪ್ರಯತ್ನಗಳನ್ನು ಶ್ಲಾಘಿಸಿದರು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಐಎಂಜೆ ಸಂಸ್ಥೆಗಳ ಶೈಕ್ಷಣಿಕ ನಿರ್ದೇಶಕ ಡಾ. ಎಸ್. ಎನ್. ಭಟ್; ಪ್ರಾಂಶುಪಾಲರಾದ ಜೆನ್ನಿಫರ್ ಫ್ರೀಡಾ ಮೆನೆಜಸ್; ಮತ್ತು ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನ ಉಪ ಪ್ರಾಂಶುಪಾಲರಾದ ರೂಪಶ್ರೀ ಕೆ. ಎಸ್ ಮತ್ತು ಪೀಡಿಯಾಟ್ರಿಕ್ಸ್ ವಿಭಾಗದ ಮುಖ್ಯಸ್ಥರಾದ ಚಂದ್ರಶೇಖರ ಉಪಸ್ಥಿತರಿದರು. ಈ ಸಮಾರಂಭದಲ್ಲಿ, ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತ ಇದು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಡಾ. ಶಿವರಾಮ ಕಾರಂತ ಪ್ರತಿಷ್ಠಾನ, ಕೋಟತಟ್ಟು ಗ್ರಾಮ ಪಂಚಾಯತ್ ಕೊಡಮಾಡುವ ಕರಾವಳಿ ಕಣ್ಮಣಿ ದಿವಂಗತ ಕೆ.ಸಿ. ಕುಂದರ್ ಸ್ಮಾರಕ ಉದ್ಯಮ ಪುರಸ್ಕಾರಕ್ಕೆ ಉದ್ಯಮದಲ್ಲಿ ತಮ್ಮದೆ ವಿಶಿಷ್ಠವಾದ ಸ್ಥಾನ ಗಳಿಸಿರುವ ಮತ್ತು ಸಾಧನೆ ಮಾಡಿರುವ ಅಲೆನ್ ರೋಹನ್ ವಾಜ್ ಕಲ್ಯಾಣಪುರ ಮತ್ತು ಗಣೇಶ ಪೂಜಾರಿ ಬಾರ್ಕೂರು ಅವರನ್ನು ಆಯ್ಕೆ ಮಾಡಲಾಗಿದೆ. ಇದೇ ಮೇ ತಿಂಗಳ 3ರ ಭಾನುವಾರ ಮಧ್ಯಾಹ್ನ 4.00 ಗಂಟೆಗೆ ಸರಿಯಾಗಿ ಕಾರಂತ ಥೀಮ್ ಪಾರ್ಕ್ನಲ್ಲಿ ಪುರಸ್ಕಾರವನ್ನು ಪ್ರದಾನ ಮಾಡಲಾಗುವುದೆಂದು ಪ್ರತಿಷ್ಠಾನದ ಅಧ್ಯಕ್ಷ ಆನಂದ ಸಿ. ಕುಂದರ್, ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ, ಪಂಚಾಯತ್ ಪಿಡಿಓ ರವೀಂದ್ರ ರಾವ್, ಕಾರ್ಯದರ್ಶಿ ಸುಮತಿ ಅಂಚನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2025 ರ ಕ್ಯಾಲೆಂಡರ್ ವರ್ಷದಲ್ಲಿ (ಜನವರಿಯಿಂದ ಡಿಸೆಂಬರ್) ಕನ್ನಡದಲ್ಲಿ ಪ್ರಕಟವಾದ ಕೃತಿಗಳಿಗೆ, ಅವುಗಳ ಮುದ್ರಣ, ಮುಖಪುಟ ವಿನ್ಯಾಸ, ಗುಣಮಟ್ಟವನ್ನು ಪರಿಗಣಿಸಿ ವಿವಿಧ “ಕನ್ನಡ ಪುಸ್ತಕ ಸೊಗಸು ಬಹುಮಾನ” ಗಳಿಗಾಗಿ ವೆಬ್ಸೈಟ್ https://kpp.karnataka.gov.in ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಪ್ರಕಾಶಕರು, ಮುದ್ರಕರು ಹಾಗೂ ಕಲಾವಿದರು ಅರ್ಜಿ ಸಲ್ಲಿಸಬಹುದಾಗಿದ್ದು, ಪುಸ್ತಕದ ಹೆಸರು, ಲೇಖಕರ ಹೆಸರು, ಪ್ರಕಟವಾದ ವರ್ಷ, ಪ್ರಕಾಶಕರ ಹೆಸರು, ಮುದ್ರಣಾಲಯದ ಹೆಸರು, ಮುಖಪುಟ ಚಿತ್ರ ರಚನೆಯ ಕಲಾವಿದರ ಹೆಸರು, ಚಿತ್ರ ಕಲಾವಿದರ ಪೂರ್ಣ ವಿಳಾಸ, ದೂರವಾಣಿ ಸಂಖ್ಯೆಗಳ ವಿವರಗಳೊಂದಿಗೆ ಪುಸ್ತಕದ ಎರಡು ಪ್ರತಿಗಳನ್ನು ಅರ್ಜಿ ನಮೂನೆಯೊಂದಿಗೆ ಮೇ.11 ರ ಒಳಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560002 ವಿಳಾಸಕ್ಕೆ ಕಳುಹಿಸಿಕೊಡಬಹುದಾಗಿದೆ. ಸಲ್ಲಿಸಲಾಗುವ ಪುಸ್ತಕಗಳನ್ನು ಯಾವುದೇ ಕಾರಣಕ್ಕೂ ಹಿಂದಿರುಗಿಸಲಾಗುವುದಿಲ್ಲ. ಕೊನೆಯ ದಿನಾಂಕ ಮುಗಿದ ನಂತರ ಬಂದ ಪುಸ್ತಕಗಳನ್ನು ಬಹುಮಾನಕ್ಕೆ ಪರಿಗಣಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರಮ ಸಂಸ್ಕೃತಿಯ ಪ್ರತೀಕವಾದ ಪ್ರಾಚ್ಯ ವಸ್ತುಗಳ ಬಗ್ಗೆ ವಿದ್ಯಾರ್ಥಿಗಳ ಅರಿವು ಮಹತ್ವವಾದದ್ದು. ಅವುಗಳ ಬಳಕೆಯ ಹಿಂದಿನ ವೈಜ್ಞಾನಿಕ ಕಾರಣಗಳನ್ನು ವಿದ್ಯಾರ್ಥಿಗಳು ತಿಳಿದುಕೊಳ್ಳಬೇಕು ಎಂದು ಉದಯವಾಣಿ ದಿನಪತ್ರಿಕೆಯ ಹಿರಿಯ ವರದಿಗಾರರಾದ ಪ್ರಶಾಂತ್ ಪಾದೆ ಹೇಳಿದರು. ಅವರು ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಗುರುವಾರ ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ಆಯೋಜಿಸಿದ ಪ್ರಾಚ್ಯ ವಸ್ತುಗಳ ಪ್ರದರ್ಶನದಲ್ಲಿ ತೀರ್ಪುಗಾರರಾಗಿ ಹಾಗೂ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಇನ್ನೋರ್ವ ಮುಖ್ಯ ಅತಿಥಿ ಕುಂದಾಪುರ ಡಾಟ್ ಕಾಮ್ನ ಸಂಪಾದಕ ಸುನಿಲ್ ಹೆಚ್. ಜಿ. ಮಾತನಾಡಿ, ಪ್ರತಿ ಪ್ರಾಚ್ಯ ವಸ್ತುಗಳ ಹಿಂದೆ ಬೆವರಿನ ಮೂಲದ, ಶ್ರಮ ಸಂಸ್ಕೃತಿಯ ಕಥೆ ಇದೆ. ದೀರ್ಘಕಾಲ ಬಾಳಿಕೆ ಬರುವ ಮತ್ತು ಮರುಬಳಕೆಯ ವಸ್ತುಗಳನ್ನು ಹಿರಿಯರು ಯಥೇಚ್ಛವಾಗಿ ಬಳಸುತ್ತಿದ್ದರು. ಇದು ಅವರ ಪರಿಸರ ಕಾಳಜಿಯನ್ನು ಧ್ವನಿಸುತ್ತದೆ. ಇಂದು ಮರುಬಳಕೆಯಾಗದ ಪ್ಲಾಸ್ಟಿಕ್ ನಂತಹ ವಸ್ತುಗಳಿಂದ ಪ್ರಕೃತಿ ನಾಶವಾಗುತ್ತಿದೆ. ಈ ಕುರಿತು ವಿದ್ಯಾರ್ಥಿಗಳು ಚಿಂತಿಸಬೇಕು ಎಂದರು. ಕಾಲೇಜಿನ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಉಡುಪಿ ನಗರಸಭೆಯ 2025-26 ನೇ ಸಾಲಿನ ಎಸ್.ಎಫ್.ಸಿ ಅನುದಾನದ ಶೇ.7.25ರ ಇತರೆ ಹಿಂದುಳಿದ ವರ್ಗಗಳ ಕಲ್ಯಾಣ ಕಾರ್ಯಕ್ರಮದಡಿ ಹಾಗೂ ವ್ಯಕ್ತಿ ಸಂಬಂಧಿತ ಕಾರ್ಯಕ್ರಮದಡಿ ಸಣ್ಣ ಉದ್ದಿಮೆಗೆ ಸಹಾಯಧನ ನೀಡುವ ಸಲುವಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ನಿಗದಿತ ಅರ್ಜಿಯೊಂದಿಗೆ ಪೂರಕ ದಾಖಲಾತಿಗಳನ್ನು ಸಲ್ಲಿಸಲು ಏಪ್ರಿಲ್ 21 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಡುಪಿ ನಗರಸಭೆಯ ಪೌರಾಯುಕ್ತರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
