Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕ ವಿಜ್ಞಾನ ವಿಭಾಗದ ಆಶ್ರಯದಲ್ಲಿ “ರೆಸ್ಯೂಮ್ ಬಿಲ್ಡಿಂಗ್ “ಕಾರ್ಯಾಗಾರ ನಡೆಯಿತು. ಕಾಲೇಜಿನ ಗಣಕ ವಿಜ್ಞಾನ ವಿಭಾಗದ ಸಹ ಪ್ರಾಧ್ಯಾಪಕ ಹಾಗೂ ಡೀನ್ ಅಕಾಡೆಮಿಕ್ಸ್ ಗಿರಿರಾಜ್ ಭಟ್ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ಪರಿಣಾಮಕಾರಿ ರೆಸ್ಯೂಮ್ ರಚನೆ, ವೃತ್ತಿಪರ ಪ್ರೊಫೈಲ್ ಅಭಿವೃದ್ಧಿ ಹಾಗೂ ಉದ್ಯೋಗಾವಕಾಶಗಳಿಗೆ ಸಿದ್ಧರಾಗುವ ಕುರಿತು ವಿದ್ಯಾರ್ಥಿಗಳಿಗೆ ಉಪಯುಕ್ತ ಮಾರ್ಗದರ್ಶನ ನೀಡಿದರು. ಇದೇ ಸಂದರ್ಭ ಅವರು ವಿದ್ಯಾರ್ಥಿಗಳಿಗೆ ಉದ್ಯೋಗ ಗಿಟ್ಟಿಸುವಲ್ಲಿ ಪ್ರಾಥಮಿಕ ಹಂತದಲ್ಲಿ ರೆಸ್ಯೂಮ್ ಅತ್ಯಂತ ಮಹತ್ವದ್ದಾಗಿದ್ದು, ಉತ್ತಮ ವ್ಯಕ್ತಿತ್ವದ ದರ್ಪಣವಾಗಿ ರೆಸ್ಯೂಮ್ ಮೂಡಿ ಬರಲಿ ಎಂದರು. ಈ ಸಂದರ್ಭ ಕಾಲೇಜಿನ ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥ ಮಹೇಶ್ ಕುಮಾರ್, ಕಾರ್ಯಕ್ರಮ ಸಂಯೋಜಕರು ಮತ್ತು ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಮಹೇಶ್ ಪೂಜಾರಿ ಹಾಗೂ ಶಿವಾನಿ ಅಡಿಗ ಉಪಸ್ಥಿತರಿದ್ದರು. ಬಿಸಿಎ ವಿದ್ಯಾರ್ಥಿಗಳಾದ ಅಮರ್ ಸ್ವಾಗತಿಸಿ, ವೈಷ್ಣವಿ ಅತಿಥಿಗಳನ್ನು ಪರಿಚಯಿಸಿ, ಶಶಿಕಾಂತ್ ವಂದಿಸಿ, ರಿಶಿತಾ ಪ್ರಾರ್ಥಿಸಿ, ಶಿಫಾ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ನಗರದ ಕಿನ್ನಿಮೂಲ್ಕಿ ಬಸ್ ನಿಲ್ದಾಣದ ಬಳಿಯ ಕೈಗಾರಿಕಾ ಸಹಕಾರ ಸಂಘ ಫ್ರಧಾನ ಕಛೇರಿಯ ಎರಡನೇ ಮಹಡಿಯ ಗ್ರೋಸ್ಪೆöÊರ್ ಗ್ರೂಪ್ ಇಲ್ಲಿ ಏಪ್ರಿಲ್ 17ರಂದು ಬೆಳಗ್ಗೆ 10.30ಕ್ಕೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ. ಪಿಯುಸಿ, ಡಿಪ್ಲೋಮಾ ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ ಮಣಿಪಾಲ ಉಡುಪಿ ಅಥವಾ ದೂರವಾಣಿ ಸಂಖ್ಯೆ: 8105618291, 9945856670 ಹಾಗೂ 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಪ್ರಸ್ತುತ ದಿನಗಳಲ್ಲಿ ಸೂರ್ಯನ ಶಾಖ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆ, ಹೀಟ್ ವೇವ್ (ಶಾಖದ ಹೊಡೆತ) / ಹೀಟ್ ವೇವ್ ಸ್ಟ್ರೋಕ್‌ನಿಂದಾಗಿ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇದ್ದು, ಈ ಹಿನ್ನೆಲೆ, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಸಾರ್ವಜನಿಕರು ತಮ್ಮ ಆರೋಗ್ಯ ಕಾಪಾಡಿಕೊಳ್ಳಲು ಈ ಕೆಳಕಂಡ ಸಲಹೆಗಳನ್ನು ಪಾಲಿಸುವಂತೆ ಸೂಚನೆ ನೀಡಿದೆ. ಅತೀ ಹೆಚ್ಚು ತಾಪಮಾನದಿಂದಾಗುವ ಅನಾರೋಗ್ಯವನ್ನು ತಡೆಗಟ್ಟಲು ಸಾರ್ವಜನಿಕರು ಸಾಧ್ಯವಾದಷ್ಟು ವಿಶೇಷವಾಗಿ ಗರಿಷ್ಠ ತಾಪಮಾನದ ಅವಧಿಯಾದ ಮಧ್ಯಾಹ್ನ 12 ರಿಂದ 3 ರವರೆಗೆ ಬಿಸಿಲಿನಲ್ಲಿ ಹೋಗುವುದನ್ನು ತಪ್ಪಿಸಬೇಕು. ಬಾಯಾರಿಕೆ ಇಲ್ಲದಿದ್ದರೂ ಸಹ ಸಾಕಷ್ಟು ನೀರು ಕುಡಿಯಬೇಕು. ಹಗುರವಾದ, ತಿಳಿ ಬಣ್ಣದ, ಸಡಿಲವಾದ ಮತ್ತು ಹತ್ತಿ ಬಟ್ಟೆಗಳನ್ನು ಧರಿಸಬೇಕು. ಬಿಸಿಲಿನಲ್ಲಿ ಹೋಗುವಾಗ ರಕ್ಷಣೆಗಾಗಿ ಕನ್ನಡಕಗಳು, ಛತ್ರಿ/ಟೋಪಿ, ಬೂಟುಗಳು ಅಥವಾ ಚಪ್ಪಲಿಗಳನ್ನು ಬಳಸಬೇಕು. ಹೊರಗಿನ ಉಷ್ಣತೆಯು ಹೆಚ್ಚಿರುವಾಗ ಅಂದರೆ ಮಧ್ಯಾಹ್ನ 12 ರಿಂದ 3 ರ ವರೆಗೆ ಶ್ರಮದಾಯಕ ಚಟುವಟಿಕೆಗಳನ್ನು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಈ ಬಾರಿಯ ಪಿಯುಸಿ ಪರೀಕ್ಷೆಯ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ 6ನೇ ರ‍್ಯಾಂಕ್‌ ಪಡೆದ ಉಪ್ಪುಂದ ರಾಜೇಂದ್ರ ಭಟ್ ಮತ್ತು 9ನೇ ರ‍್ಯಾಂಕ್‌ ಪಡೆದ ರಾಘವೇಶ್ವರ ಭಟ್ ಉಪ್ಪುಂದ ಅವರನ್ನು ಹವ್ಯಕ ಸಭಾ ರಿ. ಕುಂದಾಪುರ ತಾಲೂಕು ಇದರ ವತಿಯಿಂದ ಸನ್ಮಾನಿಸಲಾಯಿತು. ಭಾನುವಾರ ದಿನ ಉಪ್ಪುಂದ ಸತ್ಯನಾರಾಯಣ ಪುರಾಣಿಕರ ಮನೆಯಲ್ಲಿ ನಡೆದ ಸಭೆಯಲ್ಲಿ ನಿವೃತ್ತ ಉಪನ್ಯಾಸಕರಾದ ಡಾ| ಎಂ.ವಿ ನಾರಾಯಣ ಸ್ವಾಮೀ ಅವರು ವಿದ್ಯಾರ್ಥಿಗಳನ್ನು ಸನ್ಮಾನಿಸಿ ಮಾತನಾಡಿ, ವಿದ್ಯಾರ್ಥಿಗಳ ಸಾಧನೆ ಸಮಾಜಕ್ಕೆ ಹೆಮ್ಮೆಯ ಸಂಗತಿ ಎಂದು ಹೇಳಿದರು. ಹವ್ಯಕ ಸಭಾದ ಅಧ್ಯಕ್ಷರಾದ ಮುಖ್ಯ ಶಿಕ್ಷಕ ನಾಗರಾಜ ಭಟ್ ಮಕ್ಕಿ ದೇವಸ್ಥಾನ ಅವರು ಅಧ್ಯಕ್ಷತೆ ವಹಿಸಿದ್ದರು. ಇತ್ತೀಚೆಗೆ ನಿಧನನರಾದ ನಿವೃತ್ತ ಉದ್ಯೋಗಿ ಸಂಘದ ಮಾಜಿ ಅಧ್ಯಕ್ಷರು ಜಗದೀಶ ಅವಭೃತ ಅವರಿಗೆ ಶೃದ್ಧಾಂಜಲಿ ಅರ್ಪಿಸಲಾಯಿತು. ಸಭೆಯಲ್ಲಿ ಸತ್ಯನಾರಾಯಣ ಪುರಾಣಿಕ್, ವಿದ್ವಾನ್ ಶಂಕರನಾರಾಯಣ ಭಟ್, ಸುರೇಶ್ ಭಟ್, ಶ್ರೀನಿವಾಸ ಅವಭೃತ, ಸುರೇಖಾ ಪುರಾಣಿಕ್, ಗಣೇಶ್ ಪುರಾಣಿಕ, ಜಲಜಾಕ್ಷಿ ಭಟ್ ಬೇಳೂರು ಗಣೇಶ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕ್ವಾಂಟಮ್ ನಂತಹ ಆಧುನಿಕ ವಿಷಯಗಳೊಂದಿಗೆ ಕೃಷಿ, ಆರೋಗ್ಯ ಕ್ಷೇತ್ರದ ಬಗ್ಗೆ ಹೆಚ್ಚಿನ ಸಂಶೋಧನೆ ನಡೆಯಬೇಕಿದೆ. ಇದು ಕೃಷಿ ಸಮಸ್ಯೆಗಳ ಸುಧಾರಣೆ ಹಾಗೂ ಉತ್ತಮ ಆರೋಗ್ಯ ಸೇವೆ ಒದಗಿಸಲು ಸಹಕಾರಿಯಾಗುತ್ತದೆ ಎಂದು ಕರ್ನಾಟಕ ವಿಧಾನಸಭಾ ಸ್ಪೀಕರ್ ಯು. ಟಿ. ಖಾದರ್ ಹೇಳಿದರು. ಅವರು ಮೂಡ್ಲಕಟ್ಟೆಯ ಐಎಂಜೆ ಶಿಕ್ಷಣ ಸಂಸ್ಥೆಯಲ್ಲಿ ಇತ್ತೀಚೆಗೆ ನಡೆದ ‘ಕ್ವಾಂಟಮ್ ಕಂಪ್ಯೂಟೇಶನ್, ಪ್ರಿಸಿಸನ್ ಇನ್ಸ್ಟ್ರುಮೆಂಟೇಶನ್ ಮತ್ತು ಎಮರ್ಜಿಂಗ್ ರಿಸರ್ಚ್ ಇನ್ಫ್ರಾಸ್ಟ್ರಕ್ಚರ್’ ವಿಷಯದ ಕುರಿತಾದ ರಾಷ್ಟ್ರೀಯ ಶೃಂಗಸಭೆಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದರು. ಇಂತಹ ಸಂಶೋಧನಾ ಕೇಂದ್ರಗಳಿಗೆ ಸರ್ಕಾರದಿಂದ ಸಬ್ಸಿಡಿ ಒದಗಿಸುವ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರೊಂದಿಗೆ ಚರ್ಚಿಸುವುದಾಗಿ ಸ್ಪೀಕರ್ ಭರವಸೆ ನೀಡಿದರು. ಸಂಶೋಧಕ ಸಪ್ತರ್ಷಿ ಚೌಧರಿ ಮಾತನಾಡಿ, ಮೆಟ್ರೋ ನಗರಗಳಲ್ಲಿ ಮಾತ್ರ ಕಾಣಸಿಗುವ ‘ಕ್ವಾಂಟಮ್ ಕಂಪ್ಯೂಟರ್ ಸಂಶೋಧನಾ ಕೇಂದ್ರ’ ಇಂದು ಮೂಡ್ಲಕಟ್ಟೆಯಂತಹ ಗ್ರಾಮೀಣ ಭಾಗದಲ್ಲಿ ಆರಂಭಗೊಂಡಿರುವುದು ಶ್ಲಾಘನೀಯ ಎಂದು ಅಭಿಪ್ರಾಯಪಟ್ಟರು. ಐಎಂಜೆ ಸಂಸ್ಥೆಯ ಅಧ್ಯಕ್ಷರಾದ ಸಿದ್ದಾರ್ಥ್ ಜೆ.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಅಂಪಾರು ಗ್ರಾಮದ ಬರ್ಲಾಡಿ ನಿವಾಸಿ ಜಯಶ್ರೀ (27) ಎಂಬ ಯುವತಿಯು ಏಪ್ರಿಲ್ 7 ರಿಂದ ನಾಪತ್ತೆಯಾಗಿರುತ್ತಾರೆ. ಅವರು 5 ಅಡಿ 2 ಇಂಚು ಎತ್ತರ, ಸಪೂರ ಶರೀರ, ಕೋಲು ಮುಖ, ಬಿಳಿ ಮೈಬಣ್ಣ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಶಂಕರನಾರಾಯಣ ಪೊಲೀಸ್ ಠಾಣೆಯ ಪಿ.ಎಸ್ ದೂ.ಸಂಖ್ಯೆ: 08259-280299, ಸಿ.ಪಿ.ಐ ದೂ.ಸಂಖ್ಯೆ: 08254-230338, ಎಸ್.ಡಿ.ಪಿ.ಓ ದೂ.ಸಂಖ್ಯೆ: 08254-232338, ಡಿ.ಪಿ.ಓ ದೂ.ಸಂಖ್ಯೆ: 0820-2534777 ಹಾಗೂ ರೇಂಜ್ ದೂ.ಸಂಖ್ಯೆ: 8242220501 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಶಂಕರನಾರಾಯಣ ಪೊಲೀಸ್ ಠಾಣೆಯ ಉಪನಿರೀಕ್ಷಕರ ಕಛೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: 2026ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆ-2ಕ್ಕೆ ನೋಂದಣಿಯನ್ನು ಈಗಾಗಲೇ ಪ್ರಾರಂಭಿಸಲಾಗಿದ್ದು, ಏಪ್ರಿಲ್ 17 ರ ವರೆಗೆ ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ. 2026ರಲ್ಲಿ ರೆಗ್ಯೂಲರ್ ವಿದ್ಯಾರ್ಥಿಗಳಾಗಿ ನೋಂದಾಯಿಸಿಕೊಂಡು ಮತ್ತು ಮೊದಲನೇ ಪರೀಕ್ಷೆಯಲ್ಲಿ ಫಲಿತಾಂಶ ಪೂರ್ಣಗೊಳಿಸದ ವಿದ್ಯಾರ್ಥಿಗಳು ಯಾವುದೇ ಶುಲ್ಕ ಪಾವತಿಸದೇ ಆನ್‌ಲೈನ್ http://tinyurl.com/mvp9k6es ಲಿಂಕ್ ಮೂಲಕ ಅಥವಾ ಅಭ್ಯರ್ಥಿಗಳು ಸಂಬಂಧಿಸಿದ ಕಾಲೇಜಿನ ಪ್ರಾಂಶುಪಾಲರನ್ನು ಸಂಪರ್ಕಿಸಿ PU EXAM PORTAL ಪರೀಕ್ಷೆ-2ಕ್ಕೆ ನೋಂದಾಯಿಸಿಕೊಳ್ಳಬಹುದಾಗಿದೆ. ಸಂಬಂಧಿಸಿದ ಕಾಲೇಜಿನ ಪ್ರಾಂಶುಪಾಲರುಗಳಿಗೆ 2026ರಲ್ಲಿ ಮೊದಲನೆ ಪರೀಕ್ಷೆಯಲ್ಲಿ ಫಲಿತಾಂಶ ಪೂರ್ಣಗೊಳಿಸದ ಹಾಗೂ ಕಾರಣಾಂತರಗಳಿAದ ಪರೀಕ್ಷೆಗೆ ಗೈರು ಹಾಜರಾದ ವಿದ್ಯಾರ್ಥಿಗಳನ್ನು ತಮ್ಮ ಪಿ.ಯು ಎಕ್ಸಾಮ್ ಪೋರ್ಟಲ್ ಲಾಗಿನ್ ಮುಖಾಂತರ ನೋಂದಣಿ ಮಾಡಿಕೊಳ್ಳಬಹುದಾಗಿದೆ. 2026ರಲ್ಲಿ ರೆಗ್ಯೂಲರ್ ವಿದ್ಯಾರ್ಥಿಗಳಾಗಿ ನೋಂದಾಯಿಸಿಕೊಂಡು ಮತ್ತು ಮೊದಲನೇ ಪರೀಕ್ಷೆಯಲ್ಲಿ ಫಲಿತಾಂಶ ಪೂರ್ಣಗೊಳಿಸದ ವಿದ್ಯಾರ್ಥಿಗಳು ಯಾವುದೇ ಶುಲ್ಕ ಪಾವತಿಸದೆ ಪರೀಕ್ಷೆ-2 ಕ್ಕೆ ನೋಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಿದೆ. ಜಿಲ್ಲೆಯ ಎಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರುಗಳು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿ ಪರೀಕ್ಷೆ-2 ಕ್ಕೆ ನೋಂದಾಯಿಸುವಂತೆ ಮಾಡಬೇಕು.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಅಂಬೇಡ್ಕರ್ ಅನುಭವಿಸಿಯ ಯಾತನೆ ಸಮಾಜದ ಕಣ್ಣು ತೆರೆಸಿತ್ತಲ್ಲದೆ ಕೆಳ ಮತ್ತು ಮಧ್ಯಮ ವರ್ಗದವರ ಶಿಕ್ಷಣ ಕ್ರಾಂತಿಗೆ ಮುನ್ನುಡಿ ಬರೆಯಿತು ಎಂದು ಶಿಕ್ಷಕ ಹೆರಿಯ ಮಾಸ್ಟರ್ ಹೇಳಿದರು. ಮಂಗಳವಾರ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಇಂಡಿಕಾ ಕಲಾ ಬಳಗ ಮಣೂರು ಸಹಕಾರದೊಂದಿಗೆ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರ 135ನೇ ಜಯಂತೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು. ಅಸ್ಪ್ರಶ್ಯತೆ ಸಮಾನತೆಯ ಬಗ್ಗೆ ಸತತವಾಗಿ ಹೋರಾಟ ಮಾಡಿ ಈ ದೇಶಕ್ಕೆ ಒಂದು ಸುಂದರ ಅರ್ಥಗರ್ಭಿತ ಸಂವಿಧಾನವನ್ನು ನೀಡಿದ ಹೆಮ್ಮೆ ಅಂಬೇಡ್ಕರ್ ರವರಿಗೆ ಸಲ್ಲುತ್ತದೆ ಅವರು ಬದುಕಿನ ಆಯಾಮಗಳನ್ನು ಗಮನಿಸಿದರೆ ಅತ್ಯಂತ ಕ್ಲಿಷ್ಟಕರ ಸಮಸ್ಯೆಗಳನ್ನು ಅನುಭವಿಸಿ ತನ್ನಂತೆ ಎಲ್ಲರೂ ಅನುಭವಿಸಬಾರದು ಎಂಬ ಚಿಂತನೆಗಳೊಂದಿಗೆ ಆ ಕಾಲದಲ್ಲಿ ಸಂವಿಧಾನದ ಮೂಲಕ ನ್ಯಾಯ ದೊರಕಿಸಿದ್ದಾರೆ.ಇದರ ಪರಿಣಾಮ ನೀವು ನಾವುಗಳು ಇಂದು ಸಮಾಜದಲ್ಲಿ ಮುಂಚೂಣಿಯಲ್ಲಿ ನಿಂತು ಕಾರ್ಯಾಚರಿಸುವಂತೆ ಮಾಡಿದೆ ಎಂದು ಪಂಚವರ್ಣ ಮದ ಈ ಕಾರ್ಯಕ್ರಮ ಇತರ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಪ್ರಾಥಮಿಕ ಶಾಲಾ ವಿಭಾಗದ ಶಿಕ್ಷಕರಿಗಾಗಿ ಭಾಷಾ ಕೌಶಲ್ಯದ ಅಭಿವೃದ್ಧಿ ಹಾಗೂ ವ್ಯಕ್ತಿತ್ವ ವಿಕಸನಕ್ಕೆ ಸಂಬಂಧಿಸಿದಂತೆ ನಾಲ್ಕು ದಿನಗಳ ವಿಶೇಷ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು. ಈ ಕಾರ್ಯಾಗಾರವು ಅನುಭವಿ ಶಿಕ್ಷಣ ತಜ್ಞೆ ಹಾಗೂ ಯೋಗ ಥೆರಪಿಸ್ಟ್ ಆಗಿರುವ ಜಯಶ್ರೀ ಮೃತ್ಯುಜಯ ಹಾಗೂ ಇನ್ನೋರ್ವ ಶಿಕ್ಷಣ ತಜ್ಞೆ ಅನುಪಮಾ ಆಲದಕಟ್ಟಿ ಇವರ ನೇತೃತ್ವದಲ್ಲಿ ಯಶಸ್ವಿಯಾಗಿ ನಡೆಯಿತು. ಕಾರ್ಯಾಗಾರದ ಮುಖ್ಯ ಉದ್ದೇಶವು ಶಿಕ್ಷಕರಲ್ಲಿ ಸಮರ್ಥ ಸಂವಹನ ಕೌಶಲ್ಯವನ್ನು ಬೆಳೆಸುವುದರೊಂದಿಗೆ ಒತ್ತಡ ರಹಿತ ದಿನಚರಿಯನ್ನು ಅನುಸರಿಸುತ್ತಾ, ಉತ್ತಮ ಶಿಕ್ಷಕರಾಗಿ ಹೊಮ್ಮಲು ಸಹಕರಿಸುವುದಾಗಿತ್ತು. ಪ್ರಸ್ತುತ ಶೈಕ್ಷಣಿಕ ವಾತಾವರಣದಲ್ಲಿ ಆಂಗ್ಲ ಭಾಷೆಯ ಪ್ರಾಮುಖ್ಯತೆ ಹಾಗೂ ಶಿಕ್ಷಕರ ಪಾತ್ರ ಎಷ್ಟು ಮಹತ್ವಪೂರ್ಣ ಎಂಬುದನ್ನು ಮನದಟ್ಟಾಗುವಂತೆ ಇಲ್ಲಿ ವಿವರಿಸಲಾಯಿತು. ಜಯಶ್ರೀ ಮೃತ್ಯುಜಯ ಅವರು ವ್ಯಕ್ತಿತ್ವ ವಿಕಸನ ಹಾಗೂ ಸಮರ್ಥ ಸಂವಹನ ಕೌಶಲ್ಯದ ಬಗ್ಗೆ ಪ್ರಾಯೋಗಿಕ ತರಬೇತಿ ನೀಡಿದರು. ಚಟುವಟಿಕೆ ಆಧಾರಿತ ವಿಧಾನಗಳ ಮೂಲಕ ಈ ಕೌಶಲ್ಯದ ಸದ್ಬಳಕೆ ಮಾಡುವ ಬಗ್ಗೆ ಸ್ಪಷ್ಟತೆ ನೀಡಲಾಯಿತು.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳು ಹಾಗೂ ರ‍್ಯಾಗಿಂಗ್‌ ವಿರೋಧಿ & ಮಾದಕ ದ್ರವ್ಯ ವಿರೋಧಿ ಘಟಕಗಳ ಜಂಟಿ ಆಶ್ರಯದಲ್ಲಿ ನಶಾ ಮುಕ್ತ ಅಭಿಯಾನ ಕಾರ್ಯಕ್ರಮವು ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ನಡೆಯಿತು. ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ನಿರಂಜನ ಗೌಡ ಅವರು ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿ, ವಿವಿಧ ಬಗೆಯ ಮಾದಕ ವಸ್ತುಗಳು ಹಾಗೂ ಅವುಗಳಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ವಿದ್ಯಾರ್ಥಿ ಸಮುದಾಯ ಇವುಗಳಿಂದ ದೂರವಿರಬೇಕು, ಆರೋಗ್ಯಪೂರ್ಣ ಜೀವನ ಶೈಲಿಯನ್ನು ಅನುಸರಿಸಬೇಕು ಎಂದರು. ಇದೇ ಸಂದರ್ಭ ಸೈಬರ್ ಕ್ರೈಂ ಕುರಿತು ಮಾಹಿತಿ ನೀಡಿದ ಅವರು, ಇತ್ತೀಚಿನ ದಿನಗಳಲ್ಲಿ ಆನ್‌ಲೈನ್‌ ಮೋಸಗಳು ಹೆಚ್ಚುತ್ತಿರುವುದರಿಂದ ವಿದ್ಯಾರ್ಥಿಗಳು ಈ ಕುರಿತು ಜಾಗೃತರಾಗಬೇಕು. ಅಪರಿಚಿತ ಲಿಂಕ್‌ಗಳು, ಫೋನ್ ಕಾಲ್‌ಗಳು ಮತ್ತು ಸಂದೇಶಗಳಿಗೆ ಎಚ್ಚರಿಕೆಯಿಂದ ಸ್ಪಂದಿಸಬೇಕು ಎಂದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.…

Read More