Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೇಂದ್ರ ಸರಕಾರದ ಪ್ರಧಾನಮಂತ್ರಿಗಳ ಉದ್ಯೋಗ ಸೃಜನ ಯೋಜನೆ (ಪಿ.ಎಂ.ಇ.ಜಿ.ಪಿ) ಯಡಿ ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ಹಾಗೂ ನಗರ ಪ್ರದೇಶದಲ್ಲಿ ಸ್ವ-ಉದ್ಯೋಗ ಆರಂಭಿಸಲು ಆಸಕ್ತಿ ಇರುವ ಅರ್ಹ 18 ವರ್ಷ ಮೇಲ್ಪಟ್ಟ ಯುವಕ ಹಾಗೂ ಯುವತಿಯರಿಂದ ವೆಬ್‌ಸೈಟ್ http://www.kviconline.gov.in/pmegpeportal/jsp/pmegponline.jsp ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಯೋಜನೆಯಡಿ ಗರಿಷ್ಠ ಯೋಜನಾ ವೆಚ್ಚ 50 ಲಕ್ಷ ರೂ. ಉತ್ಪಾದನಾ ಚಟುವಟಿಕೆ ಮತ್ತು 20 ಲಕ್ಷ ರೂ. ಆಯ್ದ ಸೇವಾ ಘಟಕಕ್ಕೆ ಬ್ಯಾಂಕ್ ಸಾಲದೊಂದಿಗೆ ಹೊಸ ಕೈಗಾರಿಕೆ ಉತ್ಪಾದನೆ ಚಟುವಟಿಕೆ ಹಾಗೂ ಆಯ್ದ ಕೆಲವು ಸೇವಾ ಘಟಕ ಸ್ಥಾಪಿಸುವವರಿಗೆ ಅವಕಾಶವಿದ್ದು, ಗ್ರಾಮೀಣ ಪ್ರದೇಶದಲ್ಲಿ ಸ್ಥಾಪಿಸುವ ಘಟಕಗಳಿಗೆ ಯೋಜನಾ ವೆಚ್ಚದ ಮೇಲೆ ಶೇ. 25 ರಿಂದ 35 ರ ವರೆಗೆ ಹಾಗೂ ನಗರ ಪ್ರದೇಶದಲ್ಲಿ ಸ್ಥಾಪಿಸುವ ಘಟಕಗಳಿಗೆ ಯೋಜನಾ ವೆಚ್ಚದ ಮೇಲೆ ಶೇ.15 ರಿಂದ 25 ರ ವರೆಗೆ ಸಹಾಯಧನ ನೀಡಲಾಗುವುದು.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಜನ ಸಾಮಾನ್ಯರು ಹೆದ್ದಾರಿ ಟೋಲ್ ಪಾವತಿಸುವುದರೊಂದಿಗೆ ಸಂಚಾರ ಕೈಗೊಳ್ಳುತ್ತಾರೆ. ಟೋಲ್ ಶುಲ್ಕ ಪಡೆದ ಗುತ್ತಿಗೆದಾರರು ಹೆದ್ದಾರಿ ನಿರ್ವಹಣೆಯನ್ನು ಉತ್ತಮವಾಗಿ ಮಾಡುವುದರೊಂದಿಗೆ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು. ಆದರೆ ಇತ್ತೀಚಿನ ದಿನಗಳಲ್ಲಿ ಹೆದ್ದಾರಿಯಲ್ಲಿ ಅಪಘಾತದಿಂದ ಪ್ರಾಣ ಕಳೆದುಕೊಳ್ಳುತ್ತಿರುವ ಸಂಖ್ಯೆ ಹೆಚ್ಚುತ್ತಿದೆ. ಹೀಗಾಗದಂತೆ ಎಚ್ಚರ ವಹಿಸಬೇಕು ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೆದ್ದಾರಿ ಪ್ರಾಧಿಕಾರದ ಅಭಿಯಂತರರುಗಳಿಗೆ ಸೂಚನೆ ನೀಡಿದರು. ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 66 ರ ಕಾಮಗಾರಿಗಳ ಪ್ರಗತಿಯ ಬಗ್ಗೆ ಚರ್ಚಿಸಲು ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಷ್ಟ್ರೀಯ ಹೆದ್ದಾರಿಯಲ್ಲಿ ಕಳೆದ ಎರಡು ವರ್ಷದಿಂದ 250 ಕ್ಕೂ ಹೆಚ್ಚು ರಸ್ತೆ ಅಪಘಾತಗಳು ಉಂಟಾಗಿ ಸಾವು-ನೋವುಗಳು ಉಂಟಾಗಿವೆ. ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಳೆದ ಎರಡು ತಿಂಗಳಿಂದ ರಸ್ತೆ ಅಪಘಾತದಲ್ಲಿ 8 ಕ್ಕೂ ಹೆಚ್ಚು ಜನ ಅಪಘಾತದ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ರಾಷ್ಟ್ರೀಯ ಹೆದ್ದಾರಿಯ ಗುತ್ತಿಗೆದಾರರು ಟೋಲ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಉಡುಪಿ ಡಿ.ಎ.ಆರ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎ.ಆರ್. ಎಸ್. ಐ ಶಂಕರ್ ಅವರು ರಾಷ್ಟ್ರಪತಿ ಪದಕದ ಗೌರವಕ್ಕೆ ಪಾತ್ರರಾಗಿದ್ದಾರೆ . ಬೆಂಗಳೂರಿನ ರಾಜಭವನದಲ್ಲಿ ಆ. 30ರಂದು ನಡೆದ ರಾಷ್ಟ್ರಪತಿ ಪದಕ ಪ್ರದಾನ ಸಮಾರಂಭ – 2025 ಕಾರ್ಯಕ್ರಮದಲ್ಲಿ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಅವರು ಪದಕ ಪ್ರದಾನ ಮಾಡಿದರು. ಕರ್ತವ್ಯದ ಜೊತೆಯಲ್ಲಿ ಕ್ರೀಡಾಭ್ಯಾಸದಲ್ಲಿ ತೊಡಗಿಕೊಂಡು ಅಂತರಾಷ್ಟ್ರೀಯ ಹಾಗೂ ರಾಷ್ಟ್ರಮಟ್ಟದ ಕ್ರೀಡೆಯಲ್ಲಿ ಭಾಗವಹಿಸಿ ಇದುವರೆಗೆ 57 ಪದಕ ಪಡೆದಿರುವ ಅವರು ತಮ್ಮ ಕ್ರೀಡಾ ಸಾಧನೆಯ ಮೂಲಕ ಇಲಾಖೆಯ ಘನತೆಯನ್ನು ಹೆಚ್ಚಿಸಿರುತ್ತಾರೆ. 2014ರಲ್ಲಿ ಮಲೇಶಿಯಾದಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ಮಾಸ್ಟರ್ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಭಾಗವಹಿಸಿ 4×100, 4×400 ಮೀಟರ್ ರಿಲೇ ಓಟದಲ್ಲಿ ಚಿನ್ನ ಹಾಗೂ 100, 200 ಮೀಟರ್ ಓಟದಲ್ಲಿ ಬೆಳ್ಳಿ ಪದಕ ಗಳಿಸಿರುತ್ತಾರೆ. ಅಲ್ಲದೆ ಜಿಲ್ಲಾ ಹಾಗೂ ರಾಜ್ಯ ಮಟ್ಟದ ಪೊಲೀಸ್ ವಾರ್ಷಿಕ ಕ್ರೀಡಾಕೂಟದಲ್ಲಿ ಭಾಗವಹಿಸಿ ಹಲವು ಪದಕಗಳಿಗೆ ಭಾಜನರಾಗಿರುತ್ತಾರೆ. 26 ವರ್ಷದಿಂದ ಪೊಲೀಸ್ ಇಲಾಖೆಯಲ್ಲಿ ಅತ್ಯಂತ ದಕ್ಷತೆ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಇಲ್ಲಿನ ಕೋಟದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ ನಡೆಯುತ್ತಿರುವ ಗಣೇಶೋತ್ಸವಕ್ಕೆ ಸುವರ್ಣ ಮಹೋತ್ಸವ ಸಂಭ್ರಮ ಈ ಹಿನ್ನಲ್ಲೆಯಲ್ಲಿ ಸತತ 9ದಿನಗಳ ವಿಜೃಂಭಣೆಯ ಕಾರ್ಯಕ್ರಮಗಳು ಕೋಟದ ಅಮೃತೇಶ್ವರೀ ದೇಗುಲದಲ್ಲಿ ಗೀತಾನಂದ ದರ್ಬಾರ್ ವೈಭವದ  ಸಭಾಂಗಣದಲ್ಲಿ ದೊಡ್ಡ ಗಣೇಶನಿಗೆ ವಿಶೇಷ ಪೂಜೆ ಧಾರ್ಮಿಕ ವಿಧಿ ವಿಧಾನಗಳು ನಡೆಯುತ್ತಿದೆ. ಪ್ರತಿದಿನ ಅನ್ನಸಂತರ್ಪಣೆ ಕಾರ್ಯಕ್ರಮದಲ್ಲಿ ಸಾವಿರಾರು ಭಕ್ತರು ಭಾಗಿಯಾಗುತ್ತಿದ್ದು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗುತ್ತಿದೆ. ಇದೇ ಸೆ.4ರಂದು ಗಣೇಶೋತ್ಸವ ಸಮಾಪನಗೊಳ್ಳಲಿದ್ದು ಕೋಟದ ರಾಷ್ಟ್ರೀಯ ಹೆದ್ದಾರಿ ಮೆರವಣಿಗೆ ಮೂಲಕ ಪಡುಕರೆ ಕಡಲಲ್ಲಿ ಗಣೇಶ ಲೀನಗೊಳ್ಳಲಿದ್ದಾನೆ. ಇಲ್ಲಿನ ಸಮಿತಿಯ ಗೌರವಾಧ್ಯಕ್ಷ, ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ. ಕುಂದರ್ ಕನಸಿನ ಯೋಜನೆಯಂತೆ ಈ ಬಾರಿಯ ಸುವರ್ಣ ಮಹೋತ್ಸವವನ್ನು ಪರಿಸರಸ್ನೇಹಿ ಗಣೇಶೋತ್ಸವವಾಗಿಸುವ ನಿಟ್ಟಿನಲ್ಲಿ ದಿನಂಪ್ರತಿ ಗಣೇಶೋತ್ಸವಕ್ಕೆ ಆಗಮಿಸಿದ ಭಕ್ತಾಧಿಗಳಿಗೆ ಹಸಿರು ಗಿಡ ನೀಡುವ ಹಾಗೂ ಬಟ್ಟೆ ಚೀಲ ವಿತರಿಸಿ, ಪ್ಲಾಸ್ಟಿಕ್ ಮುಕ್ತ ಗಣೇಶೋತ್ಸವವಾಗಿಸಲು ಪಣತೊಟ್ಟು ಗೀತಾನಂದದ ಸೇವಕರು ಕಾರ್ಯನಿರ್ವಹಿಸುತ್ತಿದ್ದಾರೆ.ಇದಕ್ಕಾಗಿ ಈಗಾಗಲೇ 5ಸಾವಿರ ಗಿಡಗಳನ್ನು ಕಾಯ್ದಿರಿಸಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ,ಕುಂದಾಪುರ: ಇನ್‌ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರೀಸ್ ಆಫ್ ಇಂಡಿಯಾ ನಡೆಸುವ ಸಿ.ಎಸ್. ಎಕ್ಸಿಕ್ಯೂಟಿವ್ ಗ್ರೂಪ್-I, ಗ್ರೂಪ್-II ಮತ್ತು ಸಿ.ಎಂ.ಎ. ಇಂಟರ್‌ಮೀಡಿಯೆಟ್ ಗ್ರೂಪ್-I ಜೂನ್ ನಲ್ಲಿ ನಡೆದ ಪರೀಕ್ಷೆಯಲ್ಲಿ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಉತ್ಕೃಷ್ಟ್ಟ ಸಾಧನೆಗೈದಿದ್ದಾರೆ. ಸಿ.ಎಸ್. ಎಕ್ಸಿಕ್ಯೂಟಿವ್ ಗ್ರೂಪ್-I ರಲ್ಲಿ ಶ್ರೇಯಾ, ಪೂಜಾ ಶೆಟ್ಟಿ, ಆಯುಶ್, ಪೃಥ್ವೀಶ್ ಹೆಬ್ಬಾರ್, ಗ್ರೂಪ್-II ರಲ್ಲಿ ನಿಖಿತಾ ಆರ್. ಪೂಜಾರಿ ಹಾಗೂ ಯಶವಂತ್‌ ಸಿ.ಎಂ.ಎ. ಇಂಟರ್‌ಮೀಡಿಯೆಟ್ ಗ್ರೂಪ್-I ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಹಾಗೂ ವೀ-ರೀಚ್ ಸಂಸ್ಥೆಯ ಪಠ್ಯ ಪ್ರವಚನ, ಮಧ್ಯಂತರ ಮಾದರಿ ಪರೀಕ್ಷೆ ಹಾಗೂ ನುರಿತ ತರಬೇತುದಾರರಿಂದ ತರಬೇತಿ, ಸಲಹೆ ಮತ್ತು ಮಾರ್ಗದರ್ಶನ ಪಡೆದು ವಿದ್ಯಾರ್ಥಿಗಳು ಈ ಸಾಧನೆಗೈದಿದ್ದಾರೆ. ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ-ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.  

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್ ರಿ. ಇದರ 2025-27ನೇ ಸಾಲಿನ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಉದ್ಯಮಿ ಬಿಜು ಜಿ. ನಾಯರ್ ಆಯ್ಕೆಯಾಗಿದ್ದಾರೆ. ಗೌರವಾಧ್ಯಕ್ಷರಾಗಿ ಎಂ. ಚಂದ್ರಶೇಖರ್ ಹೆಗ್ಡೆ, ಗೌರವ ಕಾರ್ಯದರ್ಶಿಗಳಾಗಿ ಗ್ರೆಗರಿ ಡಿ’ಸಿಲ್ವಾ, ಉಪಾಧ್ಯಕ್ಷರಾಗಿ ಚಂದ್ರಶೇಖರ್ ಶೆಟ್ಟಿ ಮತ್ತು ಪ್ರಮೋದ್ ಶೆಟ್ಟಿ ಹೆಗ್ಗುಂಜಿ, ಪ್ರಧಾನ ಕಾರ್ಯದರ್ಶಿಗಳಾಗಿ ಮೇಜರ್ ಜಿ. ಬಾಲಕೃಷ್ಣ ಶೆಟ್ಟಿ, ಕೋಶಾಧಿಕಾರಿಗಳಾಗಿ ವಿಕ್ರಂ ಪ್ರಭು, ಸಂಘಟನಾ ಕಾರ್ಯದರ್ಶಿಗಳಾಗಿ ದೇವದಾಸ್ ಶೆಟ್ಟಿ, ಸಹ ಕಾರ್ಯದರ್ಶಿಗಳಾಗಿ ಶ್ರೀಧರ್ ವಿ. ಶೆಟ್ಟಿ, ಕಾರ್ಯಕಾರಿ ಸಮಿತಿಯ ಸದಸ್ಯರುಗಳಾಗಿ ಹರೀಶ್ ಕುಂದರ್, ಎಚ್. ಸುಭಾಷ್ ಚಂದ್ರ ಶೆಟ್ಟಿ, ಡಾ. ಎಸ್ ಮಹೇಶ್ ಶೆಟ್ಟಿ, ಬಿರ್ತಿ ರಾಜೇಶ್ ಶೆಟ್ಟಿ, ಅಬ್ದುಲ್ ಸಲಾಂ, ಡಾ. ಕಿರಣ್ ಶೆಟ್ಟಿ, ರೋಹಿತ್ ಶೆಟ್ಟಿ ಮತ್ತು ಜೇಮ್ಸ್ ಒಲಿವರ್, ಲೆಕ್ಕಪರಿಶೋಧಕರಾಗಿ ಸಿಎ ಪದ್ಮನಾಭ ಕಾಂಚನ್ ಅವರು ಆಯ್ಕೆಯಾಗಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಪಂಗಡದವರ ಆರ್ಥಿಕ ಅಭಿವೃದ್ಧಿಗಾಗಿ ಅನುಷ್ಠಾನಗೊಳಿಸಲಾದ ಭೂ ಒಡೆತನ ಯೋಜನೆ, ಗಂಗಾ ಕಲ್ಯಾಣ ಯೋಜನೆ, ಸ್ವಯಂ ಉದ್ಯೋಗ ಕಾರ್ಯಕ್ರಮಗಳು ಹಾಗೂ ಮೈಕ್ರೋ ಕ್ರೆಡಿಟ್ (ಪ್ರೇರಣಾ) ಯೋಜನೆಗಳ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ವೆಬ್‌ಸೈಟ್  https://sevasindhu.karnataka.gov.in ನಲ್ಲಿ ನೇರವಾಗಿ ಅಥವಾ ಗ್ರಾಮಒನ್, ಬೆಂಗಳೂರು ಒನ್ ಹಾಗೂ ಕರ್ನಾಟಕ ಒನ್ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.  ಅರ್ಜಿ ಸಲ್ಲಿಸಲು ಸೆಪ್ಟಂಬರ್ 17 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ, ಬಿ. ಬ್ಲಾಕ್, ಕೊಠಡಿ ಸಂಖ್ಯೆ 307, ರಜತಾದ್ರಿ, ಮಣಿಪಾಲ ಅಥವಾ ನಿಗಮಗಳ ವೆಬ್‌ಸೈಟ್ ಅಥವಾ ಕಲ್ಯಾಣಮಿತ್ರ ಸಹಾಯವಾಣಿ ಸಂಖ್ಯೆ 9482300400 ಅನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕೊರಗ ಅಭಿವೃದ್ಧಿ ಬೆಳ್ಮಣ್‌ ಸಂಘದ 2025- 26ನೇ ಸಾಲಿನ ಅಧ್ಯಕ್ಷರಾಗಿ ಶಶಿಕಲಾ ನಕ್ರೆ ಮತ್ತು ಉಪಾಧ್ಯಕ್ಷರಾಗಿ ಸುರೇಖಾ ಮುಂಡ್ಕೂರು ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ಸುಪ್ರೀತಾ ಮುಂಡ್ಕೂರು, ಜೊತೆ ಕಾರ್ಯದರ್ಶಿಯಾಗಿ ಲಲಿಲಾ ಮುಂಡ್ಕೂರು,ಕೊಶಾಧಿಕಾರಿಯಾಗಿ ರೋಹಿತ್‌ ಇನ್ನಾ, ಒಕ್ಕೂಟಕ್ಕೆ ಸುಪ್ರಿತಾ ಮುಂಡ್ಕೂರು, ಶೀನಾ ಇನ್ನಾ ಮತ್ತು ಗುಲಾಬಿ ಇನ್ನಾ ಹಾಗೂ ಜಿಲ್ಲಾ ಸಮಿತಿಗೆ ಸುನಿಲ್‌ ಕಾರ್ಕಳ ಮತ್ತು ತಾಲೂಕು ಸಮಿತಿಗೆ ರಮಣಿ ಇನ್ನಾ ಆಯ್ಕೆಯಾದರು. ಮುಖ್ಯ ಅತಿಥಿ ಬೊಗ್ರ ಕೊಕ್ಕರ್ಣೆ ಸಂಘಟನೆ ಇತಿಹಾಸದ ಕುರಿತು ಮಾತನಾಡಿದರು. ನರಸಿಂಹ ಪೆರ್ಡೂರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ರೋಹಿತ್ ಇನ್ನಾ ಸ್ವಾಗತಿಸಿದ, ಶೀನಾ ಇನ್ನಾ ಧನ್ಯವಾದಗೈದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಡುಪಿ, ಭಂಡಾರ್ಕರ್ಸ್ ಪದವಿ ಪೂರ್ವ ಕಾಲೇಜು ಕುಂದಾಪುರ, ರೋಟರಿ ಕ್ಲಬ್ ಕುಂದಾಪುರ ಸನ್ ರೈಸ್ ಆಶ್ರಯದಲ್ಲಿ ನಡೆದ ಜಿಲ್ಲಾಮಟ್ಟದ ಶಟಲ್ ಬ್ಯಾಡ್ಮಿಂಟನ್  2025ರ ಪಂದ್ಯಾಟದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಪ್ರಜ್ವಲ್ ಪೈ ಎಂ. ಅವರು ಜಿಲ್ಲಾ ಮಟ್ಟದಲ್ಲೂ ಅತ್ಯುತ್ತಮ ಪ್ರದರ್ಶನದೊಂದಿಗೆ ರಾಜ್ಯಮಟ್ಟದಲ್ಲಿ ನಡೆಯುವ ಪಂದ್ಯ ಕೂಟಕ್ಕೆ ಆಯ್ಕೆಯಾಗಿದ್ದಾರೆ. ಈ ಸಾಧನೆಗೈದ ವಿದ್ಯಾರ್ಥಿಗೆ ಸಂಸ್ಥೆಯ ಆಡಳಿತ ಮಂಡಳಿಯವರು, ಪ್ರಾಂಶುಪಾಲರು ಶಿಕ್ಷಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ)ಉಡುಪಿ ಜಿಲ್ಲೆ ಹಾಗೂ ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾ ನಗರ ಇವರ ಜಂಟಿ ಆಶ್ರಯದಲ್ಲಿ  ಉಡುಪಿ ಜಿಲ್ಲಾ ಮಟ್ಟದ ಬಾಲಕ – ಬಾಲಕಿಯರ ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡದಲ್ಲಿ ಪ್ರತಿನಿಧಿಸಿದ ವಿದ್ಯಾರ್ಥಿ ಶಿಫಾನ್  ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ವಿದ್ಯಾರ್ಥಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.

Read More