ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು. ಸೆ.06: ಕೇಂದ್ರ ಸರ್ಕಾರ ದೇಶದ ಕ್ರೀಡಾ ಕ್ಷೇತ್ರವನ್ನು ಮತ್ತೊಂದು ಮಹತ್ವದ ಘಟ್ಟಕ್ಕೆ ಕೊಂಡೊಯ್ಯಲು ದೇಶದ ಇತಿಹಾಸದಲ್ಲಿ ಮೊದಲ ಪ್ರಯತ್ನವಾಗಿ ದೇಶದಾದ್ಯಂತ ಜಾರಿಗೆ ತಂದಿರುವ “ಸಂಸದ್ ಖೇಲ್ ಮಹೋತ್ಸವ್-2025” ನೋಂದಣಿ ಪ್ರಕ್ರಿಯೆಗೆ ಇಂದು ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಚಾಲನೆ ಕೊಡಲಾಯಿತು. ಈ ವೇಳೆ ಸಂಸದ ಬಿ.ವೈ ರಾಘವೇಂದ್ರ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ 2030ರಲ್ಲಿ “ಕಾಮನ್ ವೇಲ್ತ್ ಗೇಮ್ಸ್” ಹಾಗೂ 2036ರಲ್ಲಿ “ಒಲಿಂಪಿಕ್ ಗೇಮ್ಸ್” ಆಯೋಜನೆ ಮಾಡಲು ಈಗಾಗಲೇ ಪೂರ್ವ ತಯಾರಿ ಮಾಡಿಕೊಂಡಿದೆ. ಈಗಾಗಲೇ “ಖೇಲೋ ಇಂಡಿಯಾ” ಹಾಗೂ “ಫಿಟ್ ಇಂಡಿಯಾ” ಯೋಜನೆ ಜಾರಿಯ ಮೂಲಕ ದೇಶದಲ್ಲಿರುವ ಲಕ್ಷಾಂತರ ಕ್ರೀಡಾ ಪ್ರತಿಭೆಗಳನ್ನು ಮುನ್ನೆಲೆಗೆ ತಂದು ವಿಶ್ವದ ಬಲಿಷ್ಠ ರಾಷ್ಟ್ರಗಳ ಕ್ರೀಡಾ ಪಟುಗಳೊಂದಿಗೆ ಪೈಪೋಟಿ ನಡೆಸಿ ವಿಶ್ವ ಮಟ್ಟದಲ್ಲಿ ತಮ್ಮ ಪ್ರತಿಭೆ ಅನಾವರಣಗೊಳಿಸಿಕೊಂಡಿದ್ದಾರೆ. ಇದರ ಮುಂದುವರೆದ ಭಾಗವಾಗಿ ದೇಶದ ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿರುವ ಇನ್ನೂ ಅನೇಕ ಕ್ರೀಡಾ ಪಟುಗಳನ್ನು ಮತ್ತು ಕ್ರೀಡಾ ಆಸಕ್ತರನ್ನು ಮುನ್ನೆಲೆಗೆ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನ ದ್ವಿತೀಯ ಬಿ.ಎಸ್.ಸಿ ವಿದ್ಯಾರ್ಥಿ ಸಾಕ್ಷತ್ ಶೆಟ್ಟಿ ಅವರು ಉಡುಪಿಯಲ್ಲಿ ನಡೆದ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದ ಚಕ್ರ ಎಸೆತದಲ್ಲಿ ದ್ವಿತೀಯ ಸ್ಥಾನ ಪಡೆದು ಮೈಸೂರು ವಿಭಾಗೀಯ ದಸರಾ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಉಡುಪಿ ಜಿಲ್ಲಾ ಅಮೇಚ್ಯೂರ್ ಅಥ್ಲೆಟಿಕ್ಸ್ ಅಸೋಸಿಯೇಷನ್ ಆಯೋಜಿಸಿದ್ದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಚಕ್ರ ಎಸೆತ ಮತ್ತು ಗುಂಡು ಎಸೆತದಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ದ್ವಿತೀಯ ಬಿ.ಎಸ್.ಸಿ ವಿದ್ಯಾರ್ಥಿ ಕಾರ್ತಿಕ್ ಅವರು ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು ಜಿಲ್ಲಾ ಮಟ್ಟದ ಮಾನ್ಸೂನ್ ಚೆಸ್ ಟೂರ್ನಾಮೆಂಟ್ ನಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ದ್ವಿತೀಯ ಬಿ.ಕಾಮ್ ವಿದ್ಯಾರ್ಥಿನಿ ಶಿವಾನಿ ಅವರು ಉಡುಪಿಯಲ್ಲಿ ನಡೆದ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಕುಸ್ತಿ (75ಕೆ.ಜಿ ಕೆಟಗೆರಿ) ಯಲ್ಲಿ ದ್ವಿತೀಯ ಸ್ಥಾನ ಪಡೆದು ಮೈಸೂರು ವಿಭಾಗೀಯ ದಸರಾ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ವಿಶ್ವಸ್ಥ ಮಂಡಳಿ ಆಡಳಿತ ಮಂಡಳಿ ಬೋಧಕ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಮುದಾಯ ಉಪಶಮನ ಆರೈಕೆ ಕೇಂದ್ರ ವಂಡ್ಸೆ, ನಿರಾಮಯ ಸೊಸೈಟಿಗೆ ಮಾರಣಕಟ್ಟೆ ಸುಬ್ರಹ್ಮಣ್ಯ ಮಂಜ ಚಾರಿಟೇಬಲ್ ಟ್ರಸ್ಟ್ ರಿ., ಚಿತ್ತೂರು ಕೊಡಮಾಡಿದ ಅಂಬ್ಯುಲೆನ್ಸ್ ನ್ನು ಟ್ರಸ್ಟಿಗೆ ಹಸ್ತಾಂತರ ಕಾರ್ಯಕ್ರಮ, ಸೊಸೈಟಿಯ ಸಿಬ್ಬಂದಿಗಳಿಗೆ ತರಬೇತಿ ಕಾರ್ಯಕ್ರಮದ ಉದ್ಘಾಟನಾ ಕಾರ್ಯಕ್ರಮ ಸೋಮವಾರ ನಡೆಯಿತು. ಅಂಬ್ಯುಲೆನ್ಸ್ ನ್ನು ಶೋ ರೂಂನಿಂದ ಟ್ರಸ್ಟಿಗೆ ಸ್ವೀಕಾರ ಮಾಡಿದ ಮಾರಣಕಟ್ಟೆ ಸುಬ್ರಹ್ಮಣ್ಯ ಮಂಜ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ಮಾರಣಕಟ್ಟೆ ಕೃಷ್ಣಮೂರ್ತಿ ಮಂಜರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಇವತ್ತಿನ ಕಾಲಘಟ್ಟಕ್ಕೆ ಅನುಗುಣವಾಗಿ ಆರೋಗ್ಯ ಸೇವೆಯನ್ನು ಮನೆಗೆ ತಲುಪಿಸುವಲ್ಲಿ ಈ ಯೋಜನೆ ಪ್ರಮುಖವಾಗುತ್ತದೆ. ಕರ್ನಾಟಕದಲ್ಲಿ ಪ್ರಥಮವಾಗಿ ಅನುಷ್ಟಾನವಾಗುತ್ತಿರುವ ಈ ಸಮುದಾಯ ಉಪಶಮನ ಆರೈಕೆ ಕೇಂದ್ರ ಯಶಸ್ವಿಯಾಗಿ ಮುನ್ನೆಡೆಯಲಿ. ಶಿಕ್ಷಣ, ಆರೋಗ್ಯ, ಸಾಮಾಜಿಕ ಕ್ಷೇತ್ರಕ್ಕೆ ಸ್ಪಂದಿಸುವುದು ಅತ್ಯಂತ ಅಗತ್ಯವಾಗಿದೆ. ಇದರಿಂದ ಆರ್ಹರಿಗೆ ಪ್ರಯೋಜನ ಸಿಗಲಿ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ನಿರಾಮಯ ಸೊಸೈಟಿ ಅಧ್ಯಕ್ಷರಾದ ಉದಯಕುಮಾರ್ ಶೆಟ್ಟಿ ಮಾತನಾಡಿ, ಈಗಾಗಲೇ ಕೇರಳದಲ್ಲಿ ಯಶಸ್ವಿಯಾಗಿ ಅನುಷ್ಠಾನ ಆಗುತ್ತಿರುವ ಸಮುದಾಯ ಉಪಶಮನ ಆರೈಕೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಕೃತಕ ಬುದ್ಧಿಮತ್ತೆಯ ಬೆಳವಣಿಗೆಯಿಂದ ಸಂವೇದನಾಶೀಲ ಜ್ಞಾನ ಅಥವಾ ಸೂಚ್ಯ ಜ್ಞಾನದ ಬಳಕೆ ಕ್ಷೀಣಿಸುತ್ತಿರುವ ಆತಂಕಕಾರಿ ಎಂದು ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಶರತ್ ಅನಂತಮೂರ್ತಿ ನುಡಿದರು. ಅವರು ಮಿಜಾರಿನ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ 2025-26ನೇ ಸಾಲಿನ ಪ್ರಥಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಗಳ- ಸ್ವಾಗತ ಕಾರ್ಯಕ್ರಮ ’ಆಳ್ವಾಸ್ ಆಗಮನ’ ದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಕೃತಕ ಬುದ್ಧಿ ಮತ್ತೆ ಮೇಲೆ ಸಂಪೂರ್ಣ ಅವಲಂಬನೆಯಾದರೆ ಮನುಷ್ಯನ ಅನುಭವದಿಂದ ಕಲಿಯುವ ಶಕ್ತಿ, ಪ್ರಶ್ನಿಸುವ ಸ್ವಭಾವ, ಆಳವಾದ ಚಿಂತನೆ ಸೃಜಿಸಲಾರದು. ಎಐ ಅನ್ನು ಪ್ರೇರಕ ಶಕ್ತಿಯಾಗಿ ಬಳಸಿಕೊಳ್ಳುವುದು ಸೂಕ್ತ. ಅದು ನಮಗೆ ಹೊಸ ಆಲೋಚನೆಗಳನ್ನು ಹುಟ್ಟಿಸಬಲ್ಲದು, ಆದರೆ ಆ ಆಲೋಚನೆಗಳಿಗೆ ಜೀವ ತುಂಬಲು ಮನುಷ್ಯನಿಂದ ಮಾತ್ರ ಸಾಧ್ಯ ಎಂದರು. ಮೂಲಭೂತ ಜ್ಞಾನ ಗಟ್ಟಿಗೊಳಿಸುವುದರಿಂದ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಮೂಡಿ, ಸಮಸ್ಯೆಗಳನ್ನು ಎದುರಿಸುವ ಸಾಮರ್ಥ್ಯ ಹೆಚ್ಚುತ್ತದೆ. ಭವಿಷ್ಯದ ಸವಾಲುಗಳನ್ನು ನಿಭಾಯಿಸಲು ಸಾಮಾರ್ಥರಾಗುತ್ತಾರೆ. ಅಂತಹ ಶಿಕ್ಷಣದ ಅಗತ್ಯ ನಮ್ಮ ಮುಂದಿದೆ ಎಂದರು. ವೈವಿಧ್ಯತೆಯನ್ನು ಪ್ರೀತಿಸಿ. ಪರಸ್ಪರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯಲ್ಲಿ ಲಲಿತಕಲಾ ಸಂಘ ಹಾಗೂ ಸಾಹಿತ್ಯ ಸಂಘದ ಜಂಟಿ ಆಶ್ರಯದಲ್ಲಿ “ಗಣೇಶ ಉತ್ಸವ – 2025″ನ್ನು ಸಂಭ್ರಮದಿಂದ ಆಚರಿಸಿದರು. ಪ್ರತಿ ವರ್ಷವೂ ಕಾಲೇಜಿನಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಈ ವರ್ಷದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳೇ ರಚಿಸಿದ ವೇದಿಕೆಯಲ್ಲಿ ಸಂಭ್ರಮಾಚರಣೆ ನಡೆಯಿತು. ವಿಶೇಷವಾಗಿ ದ್ವಿತೀಯ ಬಿಸಿಎ ವಿದ್ಯಾರ್ಥಿನಿ ರಮಿತಾ ಬಿಡಿಸಿದ ಗಣೇಶನ ಚಿತ್ರವನ್ನು ಪೂಜಿಸಲಾಯಿತು. ಹಾಗೂ ದ್ವಿತೀಯ ಬಿ.ಕಾಂ ವಿದ್ಯಾರ್ಥಿನಿ ಹರ್ಷಿತಾ ರಚಿಸಿದ ಗಣೇಶನ ಚಿತ್ರಪಟ ವಿಶೇಷ ಆಕರ್ಷಣೆಯಾಗಿತ್ತು. ಕಾರ್ಯಕ್ರಮದ ಕೇಂದ್ರ ಬಿಂದುವಾಗಿ ಗಣೇಶನ ಜನನ ಕಥನವನ್ನು ಅಭಿನಯ ಮತ್ತು ನೃತ್ಯದ ರೂಪಕದಲ್ಲಿ ವಿದ್ಯಾರ್ಥಿಗಳು ಪ್ರದರ್ಶಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರು, ಸಂಸ್ಥೆಯ ಬ್ರ್ಯಾಂಡ್ ಬಿಲ್ಡಿಂಗ್ ನಿರ್ದೇಶಕರು, ಉಪ ಪ್ರಾಂಶುಪಾಲರು, ಲಲಿತಾ ಕಲಾ ಸಂಘ ಹಾಗೂ ಸಾಹಿತ್ಯ ಸಂಘದ ಸಂಯೋಜಕರು ಮತ್ತು ವಿದ್ಯಾರ್ಥಿ ಸಂಯೋಜಕರು, ಉಪನ್ಯಾಸಕ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ದ್ವಿತೀಯ ಬಿಸಿಎ ವಿದ್ಯಾರ್ಥಿನಿ ಶ್ರೀ ರಕ್ಷಾ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ಕ್ಷೇ.ಧ.ಗ್ರಾ.ಯೋಜನೆ ಬಿ.ಸಿ ಟ್ರಸ್ಟ್ ಕುಂದಾಪುರ, ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಶಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ, ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ನಡೆಯುವ ಉಚಿತ ನೇತ್ರ ತಪಾಸಣೆ ಮತ್ತು ಪೊರೆ ಶಸ್ತ್ರ ಚಿಕಿತ್ಸೆ ಶಿಬಿರವು ವಂಡ್ಸೆಯ ಸ.ಮಾ.ಹಿ.ಪ್ರಾ ಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಜನಜಾಗೃತಿ ವೇದಿಕೆಯ ಡಾ. ಅತುಲ್ ಕುಮಾರ್ ಶೆಟ್ಟಿ ಉದ್ಘಾಟಿಸಿ, ಮಾತನಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಲವಾರು ಸಾರ್ವಜನಿಕ ಉಪಯೋಗಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬರುತ್ತಿದೆ. ಶಿಕ್ಷಣ, ಆರೋಗ್ಯ, ಸಾಮಾಜಿಕ, ಕೃಷಿ ಕ್ಷೇತ್ರಕ್ಕೆ ಒತ್ತು ನೀಡುತ್ತಿದೆ. ಸಾರ್ವಜನಿಕರು ಇಂಥಹ ಉಪಯೂಕ್ತ ಶಿಬಿರಗಳ ಪ್ರಯೋಜನ ಪಡೆದುಕೊಳ್ಳಬೇಕು ಎಂದರು. ನಿರಾಮಯ ಸೊಸೈಟಿ ವಂಡ್ಸೆ ಇದರ ಅಧ್ಯಕ್ಷರಾದ ಉದಯಕುಮಾರ್ ಶೆಟ್ಟಿ ಅಡಿಕೆಕೊಡ್ಲು ಮಾತನಾಡಿ, ಆರೋಗ್ಯದ ಬಗ್ಗೆ ಪ್ರತಿಯೊಬ್ಬರು ಕಾಳಜಿ ವಹಿಸಬೇಕು. ಆರೋಗ್ಯ ಸಮಸ್ಯೆಗಳಿಗೆ ತಕ್ಷಣ ಪರಿಹಾರ ಕಂಡುಕೊಳ್ಳಬೇಕು. ಆರೋಗ್ಯದ ದೃಷ್ಟಿಯಿಂದ ನಿರಾಮಯ ಸೊಸೈಟಿ, (ಪಾಲಿಯೇಟಿವ್ ಕೇರ್ ಯೂನಿಟ್) ಸೆ.೧ರಿಂದ ವಂಡ್ಸೆ ಕ್ಲಸ್ಟರ್ನಲ್ಲಿ …
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ ರಿ. ಕರ್ನಾಟಕ – ಕೇರಳ ಹಾಗೂ ಸಮಗ್ರ ಗ್ರಾಮೀಣ ಆಶ್ರಮ ಪೆರ್ನಾಲು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಂಗಳೂರು ದ. ಕ ಜಿಲ್ಲೆ ಇವರ ಸಹಕಾರದೊಂದಿಗೆ ನಮ್ಮ ನ್ಯಾಯಕೂಟ ಉದ್ಘಾಟನಾ ಕಾರ್ಯಕ್ರಮವು ಯುಗಪುರುಷ ಸಭಾಭವನ ಕಿನ್ನಿಗೋಳಿಯಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ನಮ್ಮ ನ್ಯಾಯಕೂಟದ ಅಧ್ಯಕ್ಷರಾಗಿರುವ ಬಾಲರಾಜ್ ಕೋಡಿಕಲ್ ಅವರು ಡೋಲು ಬಾರಿಸುವುದರ ಮೂಲಕ ಹಾಗೂ ಮುಖ್ಯ ಅತಿಥಿಗಳಾಗಿ ಆಗಮಿಸಿರುವ ಮೂಡಬಿದ್ರೆ ತಹಶೀಲ್ದಾರ್ ಶ್ರೀಧರ ಎಸ್. ಮುಂದಲಮನಿ ಅವರು ಡಾ. ಬಿ. ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆಯನ್ನು ಮಾಡುವುದರ ಮೂಲಕ ಉದ್ಘಾಟನೆಯನ್ನು ಮಾಡಿದರು. ಉದ್ಘಾಟನಾ ಮಾತುಗಳನ್ನಾಡಿದ ತಹಶೀಲ್ದಾರ್ ಸಮುದಾಯದ ಜನರಿಗೆ ಸೌಲಭ್ಯಗಳು, ಯೋಜನೆಗಳು ತಲುಪುವಲ್ಲಿ ಅಧಿಕಾರಿಯ ಕರ್ತವ್ಯವನ್ನು ನಿರ್ವಹಿಸುತ್ತೇನೆ ಎಂಬುದಾಗಿ ಭರವಸೆಯ ನುಡಿಗಳನ್ನಾಡಿದರು. ಬಾಲರಾಜ್ ಕೋಡಿಕಲ್ ಅವರು ನಮ್ಮ ನ್ಯಾಯಕೂಟ ವ್ಯವಸ್ಥೆಯು ಸಮುದಾಯದಲ್ಲಿ ಇರಬೇಕಾದ ಅಗತ್ಯತೆ ಹಾಗೂ ನಮ್ಮ ನ್ಯಾಯಕೂಟ ವ್ಯವಸ್ಥೆಯ ಇತಿಹಾಸವನ್ನು ಪರಿಚಯ ಮಾಡಿದರು. ಸಮುದಾಯದಲ್ಲಿನ ಕೌಟುಂಬಿಕ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ರೆಡ್ಕ್ರಾಸ್ ಸಂಸ್ಥೆಯು ಮಾನವ ಜೀವನ ಹಾಗೂ ಆರೋಗ್ಯವನ್ನು ರಕ್ಷಿಸಲು ಯಾವುದೇ ಫಲಾಪೇಕ್ಷಿಯಿಲ್ಲದೇ ಮಾನವೀಯ ನೆಲೆಯಲ್ಲಿ ಸೇವೆ ಸಲ್ಲಿಸುತ್ತಿದ್ದು, ರೆಡ್ಕ್ರಾಸ್ನ ಈ ಕಾರ್ಯವೈಖರಿ ನಿಜಕ್ಕೂ ಶ್ಲಾಘನೀಯ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಹೇಳಿದರು. ಅವರು ಅಂದು ನಗರದ ಅಜ್ಜರಕಾಡು ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ, ಭಾರತೀಯ ರೆಡ್ಕ್ರಾಸ್ ಸಂಸ್ಥೆ ಕರ್ನಾಟಕ ರಾಜ್ಯ ಶಾಖೆ ಮತ್ತು ಭಾರತೀಯ ರೆಡ್ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲೆ ಇವರ ವತಿಯಿಂದ ಜಿನೇವಾ ಒಪ್ಪಂದ ಐತಿಹಾಸಿಕ ಆಚರಣೆಯ ಸಮಾರೋಪ, ವಿಶ್ವಶಾಂತಿಗಾಗಿ ಮತ್ತು ಮಾದಕ ವ್ಯಸನ ವಿರೋಧಿ ಜಾಥಾ, ಸಾಮಾಜಿಕ ಕಾರ್ಯಗಳಿಗೆ ನಿಧಿ ಸಂಗ್ರಹಣೆ ಹಾಗೂ ನೆರೆ ಸಂತ್ರಸ್ತರು ಮತ್ತು ಅರ್ಹ ಫಲಾನುಭವಿಗಳಿಗೆ ಸಾಮಾಗ್ರಿಗಳ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ರೆಡ್ಕ್ರಾಸ್ ಸಂಸ್ಥೆಯು ಸಮಾಜಕ್ಕೆ ಬಲಿಷ್ಠ ರೀತಿಯಲ್ಲಿ ಸೇವೆ ನೀಡುತ್ತಿದ್ದು, ಪ್ರಾಕೃತಿಕ ವಿಕೋಪ, ಬರ ನಿರ್ವಹಣೆ, ತುರ್ತು ಅಗತ್ಯದ ಸಂದರ್ಭದಲ್ಲಿ ರೆಡ್ಕ್ರಾಸ್ ಸಲ್ಲಿಸುತ್ತಿರುವ ಸೇವೆ ಜಾಗತಿಕ ಮಟ್ಟದಲ್ಲಿ ಪ್ರಶಂಸೆಗೆ ಪಾತ್ರವಾಗಿದೆ. ನಿರ್ಗತಿಕರ ಬದುಕಿಗೆ ಆಶಾಕಿರಣವಾಗಿರುವ ಸಂಸ್ಥೆಯು ನಿರಂತರವಾಗಿ ಅಗತ್ಯವಿರುವವರಿಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಮೀನುಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆ ಕಾರ್ಯಕ್ರಮದಡಿ ಮೀನು ಮಾರಾಟಕ್ಕಾಗಿ 4 ಚಕ್ರ ವಾಹನ ಖರೀದಿಗೆ ಸಹಾಯಧನ ಸೌಲಭ್ಯ ನೀಡಲಾಗುತ್ತಿದ್ದು, ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅರ್ಹ ಮೀನುಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 20 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರು ಅಥವಾ ಉಡುಪಿ, ಕುಂದಾಪುರ ಹಾಗೂ ಕಾರ್ಕಳ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವ್ಯಕ್ತಿತ್ವದಲ್ಲಿ ತೃಪ್ತಿ ಎನ್ನುವ ಮೌಲ್ಯವನ್ನು ಅಳವಡಿಸಿಕೊಂಡರೆ ನೆಮ್ಮದಿಯ ಬದುಕು ನಡೆಸಲು ಸಾಧ್ಯವಾಗುತ್ತದೆ ಎಂದು ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ ನುಡಿದರು. ಅವರು ಸೋಮವಾರ ಕುಂದಾಪುರದ ಯಡಾಡಿ ಮತ್ಯಾಡಿಯಲ್ಲಿರುವ ಸುಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಾನೂನು ಬರುವ ಮೊದಲೇ ಸಮಾಜದಲ್ಲಿ ಕೆಲವು ಮೌಲ್ಯಗಳಿದ್ದವು. ಜನರು ಅದಕ್ಕೆ ಗೌರವ ನೀಡುತ್ತಿದ್ದರು. ಆದರೆ ಈಗ ಆ ಸಮಾಜ ಬದಲಾಗಿದೆ. ಶ್ರೀಮಂತರಿಗೆ ಮಣೆ ಹಾಕುವ ಪ್ರವೃತ್ತಿ ತಾಂಡವವಾಡುತ್ತಿದೆ. ಪ್ರಾಮಾಣಿಕತೆಗೆ, ಪ್ರಾಮಾಣಿಕರಿಗೆ ಬೆಲೆ ಇಲ್ಲದ ಹಾಗೇ ಆಗಿದೆ. ದುರಾಸೆ ಎಂಬ ರೋಗ ಇದಕ್ಕೆ ಕಾರಣವಾಗಿದೆ ಎಂದು ವಿವರಿಸಿದರು. ಹಿಂದೆಲ್ಲಾ ತಪ್ಪು ಮಾಡಿದವರಿಗೆ ಅವರನ್ನು ದೂರ ಇಡುವ ಮೂಲಕ ಶಿಕ್ಷೆ ನೀಡಲಾಗುತ್ತಿತ್ತು. ಆದರೆ ಈಗ ಜೈಲಿಗೆ ಹೋಗಿ ಜಾಮೀನಿನ ಮೂಲಕ ಹೊರಗೆ ಬಂದವನಿಗೆ ಹಾರ ತುರಾಯಿ ಹಾಕಿ ಸ್ವಾಗತ ಕೋರುತ್ತೇವೆ. ಪ್ರಾಮಾಣಿಕತೆ, ಮೌಲ್ಯಗಳು ಹಣದ ಮುಂದೆ ಗೌಣ್ಯವಾಗಿವೆ ಎಂದು ವಿಷಾದ ವ್ಯಕ್ತಪಡಿಸಿದರು. ಕ್ರಾಂತಿ ಮೂಲಕ ಬದಲಾವಣೆ ಆದರೆ ಈ…
