ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಡುಪಿ ಜಿಲ್ಲಾ ಸೌಹಾರ್ದ ಸಹಕಾರಿ ಒಕ್ಕೂಟ ನಿ. ಇದರ ನಿರ್ದೇಶಕರಾಗಿ ಬೈಂದೂರಿನ ಭೀಮೇಶ್ ಕುಮಾರ್ ಎಸ್. ಜಿ ಆಯ್ಕೆಯಾಗಿದ್ದಾರೆ. ಅವರು ಬೈಂದೂರಿನ ಕಾಮಾಕ್ಷಿ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ನಲ್ಲಿ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಭೀಮೇಶ್ ಅವರು ಯಶಸ್ವಿ ಉದ್ಯಮಿಯಾಗಿ ಗುರುತಿಸಿಕೊಂಡಿದ್ದು, ಬೈಂದೂರಿನಲ್ಲಿ ಮಹಾವೀರ ಡೆವಲಪರ್ಸ್ ಮೂಲಕ ಮೊದಲ ಭಾರಿಗೆ ಮಹಾವೀರ ವಸತಿ ಸಮುಚ್ಛಯವನ್ನು ನಿರ್ಮಿಸಿದ್ದರು. ಇವರೊಂದಿಗೆ ಪುಣ್ಯಶ್ರೀ ಕನ್ಸ್ಟ್ರಕ್ಷನ್ಸ್ ಹಾಗೂ ಬನಶ್ರೀ ಪೆಟ್ರೋಲಿಯಂನ ಆಡಳಿತ ಪಾಲುದಾರರಾಗಿ ಉದ್ಯಮವನ್ನು ಮುನ್ನಡೆಸುತ್ತಿದ್ದಾರೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿದ್ಯಾರ್ಥಿಗಳು ಪಠ್ಯಕ್ರಮದ ಚೌಕಟ್ಟಿಗೆ ಸೀಮಿತರಾಗದೆ, ಮೂಲ ವಿಜ್ಞಾನದಲ್ಲಿ ಲಭ್ಯವಿರುವ ವಿವಿಧ ಸಂಶೋಧನಾ ಅವಕಾಶಗಳಿಗೆ ಸಿದ್ಧರಾಗುತ್ತಾರೆ. ಶೀಘ್ರವಾಗಿ ಬದಲಾಗುತ್ತಿರುವ ವಿಜ್ಞಾನ ಲೋಕಕ್ಕೆ ತಮ್ಮನ್ನು ತಾವು ತೆರೆದುಕೊಳ್ಳುವತ್ತ ಯೋಚಿಸಬೇಕು. ವಿದ್ಯಾರ್ಥಿಗಳು ಹೆಚ್ಚಿನ ಸಮಯವನ್ನು ಸ್ವಅಧ್ಯಯನಕ್ಕೆ ಮೀಸಲಿಡಬೇಕು ಎಂದು ಚೈನೀಸ್ ಅಕಾಡೆಮಿ ಆಫ್ ಸೈನ್ಸಸ್ ಬೀಜಿಂಗ್ ಇಲ್ಲಿ ಪೋಸ್ಟ್ ಡಾಕ್ಟರೇಟ್ ಫೆಲೋ ಆಗಿರುವ ಡಾ. ಕೃಷ್ಣ ಯಮನಪ್ಪ ಪೂಜಾರಿ ಹೇಳಿದರು. ಅವರು ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಕೋಟೇಶ್ವರ ಇಲ್ಲಿನ ವಿಜ್ಞಾನ ಸಂಘದ ವತಿಯಿಂದ ಬಿ.ಎಸ್ಸಿ. ವಿದ್ಯಾರ್ಥಿಗಳಿಗೆ ಪದವಿ ನಂತರದ ಸಂಶೋಧನಾ ಅವಕಾಶಗಳ ಬಗ್ಗೆ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಮಾತನಾಡಿದರು. ಪ್ರಾಂಶುಪಾಲರಾದ ರಾಮರಾಯ ಆಚಾರ್ಯ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ, ವಿದ್ಯಾರ್ಥಿಗಳು ಇಂತಹ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು ಎಂದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ನಾಗರಾಜ ವೈದ್ಯ ಎಂ., ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಶೇಕರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ ಆಶ್ರಯದಲ್ಲಿ ಕಾರಂತ ಜನ್ಮ ದಿನೋತ್ಸವದ ಪ್ರಯುಕ್ತ ಉಡುಪಿಯ ಎಂ.ಜಿ.ಎಂ ಕಾಲೇಜಿನ ಸಭಾಂಗಣದಲ್ಲಿ ನಡೆದ ಡಾ. ಶಿವರಾಮ ಕಾರಂತ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಗಂಗೊಳ್ಳಿಯ ಸ್ಯಾಕ್ಸೋಫೋನ್ ಬಾಲ ಪ್ರತಿಭೆ ಸಂಜಿತ್ ಎಂ. ದೇವಾಡಿಗ ಅವರಿಂದ ಸ್ಯಾಕ್ಸೋಫೋನ್ ವಾದನ ಕಾರ್ಯಕ್ರಮ ನಡೆಯಿತು. ರಿದಂ ಪ್ಯಾಡ್ ನಲ್ಲಿ ನಿತ್ಯಾನಂದ ದೇವಾಡಿಗ ಮತ್ತು ತಾಳದಲ್ಲಿ ಮಾಧವ ದೇವಾಡಿಗ ಸಹಕರಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕಲಾಕದಂಬ ಆರ್ಟ್ ಸೆಂಟರ್ ಸಂಸ್ಥೆ ಬೆಂಗಳೂರು 16ನೇ ವರ್ಷದ ಕಾಳಿಂಗ ನಾವಡ ಪ್ರಶಸ್ತಿ ಪ್ರದಾನ ಸಮಾರಂಭ ಬೆಂಗಳೂರಿನ ಚೆನ್ನಮ್ಮನಕೆರೆ ಪರಂಪರಾ ಸಭಾಂಗಣದಲ್ಲಿ ಯಶಸ್ವಿಯಾಗಿ ನಡೆಯಿತು. 42 ವರ್ಷಗಳಿಂದ ಯಕ್ಷಗಾನ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಪ್ರಸಿದ್ಧ ಭಾಗವತ ರಾಘವೇಂದ್ರ ಮಯ್ಯ ಹಾಲಾಡಿ ಅವರಿಗೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಸಾಹಿತಿಗಳಾದ ಕೆ.ಇ.ರಾಧಾಕೃಷ್ಣ, ಖಾಸಗಿ ವಾಹಿನಿಯ ಸಂಪಾದಕ ರವೀಂದ್ರ ಭಟ್, ಯಕ್ಷಗಾನದ ಚಂಡೆ ವಾದಕ ಕೋಟ ಶಿವಾನಂದ, ಕಲಾ ಪೋಷಕ ಪದ್ಮಾ ನವನೀತ್, ನರಸಿಂಹ ಸೋಮಯಾಜಿ, ಕೃಷ್ಣಮೂರ್ತಿ ಅಡಿಗ, ಪ್ರಕಾಶ್ ಭಟ್, ಗಣಪಯ್ಯ ನಾವಡ ಹಾಗೂ ಕಲಾಕದಂಬದ ನಿರ್ದೇಶಕ ಡಾ. ರಾಧಾಕೃಷ್ಣ ಉರಾಳ, ದೇವರಾಜ ಕರಬ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಮೂಡಿಸುವ ಸಲುವಾಗಿ ‘ವಿಧಿಕ್ತ-2025’ ಅಂತರ್-ತರಗತಿ ಸ್ಪರ್ಧೆಯ ಉದ್ಘಾಟನೆ ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ಇತ್ತೀಚಿಗೆ ನಡೆಯಿತು. ಮೂಟ್ಕೋರ್ಟ್ ಮಾದರಿ ಆಧಾರಿತ ಈ ಕಾರ್ಯಕ್ರಮವನ್ನು ಕುಂದಾಪುರ ಎಜುಕೇಶನ್ ಸೊಸೈಟಿ ರಿ., ಕುಂದಾಪುರ ಇದರ ಕಾರ್ಯದರ್ಶಿಗಳಾದ ಸೀತಾರಾಮ ನಕ್ಕತಾಯ ನ್ಯಾಯ ದೇವತೆಯ ಕಣ್ಣಿಗೆ ಕಟ್ಟಿದ ಕಪ್ಪು ಪಟ್ಟಿಯನ್ನು ಬಿಡಿಸುವ ಮೂಲಕ ಚಾಲನೆ ನೀಡಿ, ಎಲ್ಲಾ ವಿದ್ಯಾರ್ಥಿಗಳಿಗೂ ಕಾನೂನು ಮಾಹಿತಿ ಅಗತ್ಯ ಮತ್ತು ಕಾನೂನು ಶಿಕ್ಷಣದ ಅರಿವು ಮಹತ್ವವಾದದ್ದು ಎಂದು ಹೇಳಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಉಪ-ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ ಆಶಯ ನುಡಿಗಳನ್ನಾಡಿದರು. ವಾಣಿಜ್ಯ ವಿಭಾಗದ ಮುಖ್ಯಸ್ಥೆ ವೀಣಾ ವಿ. ಭಟ್ ಪ್ರಾಸ್ತಾವಿಸಿದರು. ವಿದ್ಯಾರ್ಥಿನಿ ಮನೀಷಾ ಪ್ರಾರ್ಥಿಸಿದರು. ಕಾರ್ಯಕ್ರಮದ ಸಂಯೋಜಕರಾದ ಸತೀಶ್ ಶೆಟ್ಟಿ ಹೆಸ್ಕುತ್ತೂರು ಸ್ವಾಗತಿಸಿ, ವಾಣಿಜ್ಯ ವಿಭಾಗದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಕಾನೂನು ಕಾಲೇಜಿನ ವತಿಯಿಂದ ‘ಸೈಬರ್ ಕ್ರೈಮ್, ಡ್ರಗ್ ಟ್ರಾಫಿಕಿಂಗ್ ಹಾಗೂ ಸೋಶಿಯಲ್ ಆ್ಯಂಡ್ ಲೀಗಲ್ ಇಂಪ್ಲಿಕೇಶನ್ಸ್’ ವಿಷಯದ ಕುರಿತು ವಿಶೇಷ ಉಪನ್ಯಾಸವನ್ನು ಸೋಮವಾರದಂದು ವಿದ್ಯಾಗಿರಿ ಕ್ಯಾಂಪಸ್ನಲ್ಲಿ ಜರುಗಿತು. ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ, ಐಪಿಎಸ್ ಮಾತನಾಡಿ, “ಸೈಬರ್ ಅಪರಾಧಗಳು ಇಂದು ಅತ್ಯಂತ ಸಂಕೀರ್ಣ ಹಾಗೂ ಕಾನೂನು ಜಾರಿಗೆ ಅತಿ ದೊಡ್ಡ ಸವಾಲಾಗಿ ಪರಿಣಮಿಸಿವೆ. ವಂಚಕರು ಈಗ ಅಸಲಿಯಂತೆ ಕಾಣುವ, ನಕಲಿ ಹೂಡಿಕೆ ವೆಬ್ಸೈಟ್ ಲಿಂಕ್ಗಳನ್ನು ಸೃಷ್ಟಿಸುತ್ತಿದ್ದಾರೆ. ಜನರು ಅವುಗಳ ಮೇಲೆ ಕ್ಲಿಕ್ ಮಾಡಿದಾಗ ನಕಲಿ ಅಪ್ಲಿಕೇಶನ್ ಡೌನ್ಲೋಡ್ ಆಗಿ, ಜನರು ಅದನ್ನು ನಿಜವೆಂದು ನಂಬಿ ನಿರಂತರವಾಗಿ ಹಣ ಹೂಡುತ್ತಾರೆ. ಈ ಹಣ ವಂಚಕರ ‘ಮ್ಯೂಲ್ ಅಕೌಂಟ್’ (ಬೇರೊಬ್ಬರ ಹೆಸರಿನಲ್ಲಿ ತೆರೆಯಲಾದ ಆದರೆ ಸೈಬರ್ ವಂಚಕರಿಂದ ನಿಯಂತ್ರಿಸಲ್ಪಡುವ ಬ್ಯಾಂಕ್ ಖಾತೆ) ಗಳಿಗೆ ವರ್ಗಾಯಿಸಲಾಗುತ್ತದೆ. ಈ ಖಾತೆಗಳು ಹಲವು ರಾಜ್ಯಗಳಲ್ಲಿ ಹರಡಿರುವುದರಿಂದ ಹಣದ ವರ್ಗಾವಣೆಯನ್ನು ಪತ್ತೆಹಚ್ಚುವುದು ಕಷ್ಟವಾಗುತ್ತದೆ. ನಂತರ ಈ ಹಣವನ್ನು ನಗದಾಗಿ ಬದಲಾಯಿಸಿ ಬಿಟ್ಕಾಯಿನ್ಗೆ ಪರಿವರ್ತಿಸಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಪ್ರಕೃತಿ ಸಂಜೀವಿನಿ ಕೋಟ ಗ್ರಾಮ ಪಂಚಾಯತ್ ನೇತೃತ್ವದಲ್ಲಿ ಕೋಟ ಗ್ರಾಮ ಪಂಚಾಯತ್ ಸಹಯೋಗದೊಂದಿಗೆ ಪ್ರಸಾದ್ ನೇತ್ರಾಲಯ ಉಡುಪಿ ಅವರಿಂದ ಉಚಿತ ನೇತ್ರ ತಪಾಸಣೆ ಶಿಬಿರವು ಇಲ್ಲಿನ ಪಂಚಾಯತ್ ಸಭಾಭವನದಲ್ಲಿ ಜರಗಿತು. ಪ್ರಕೃತಿ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಮಾಲತಿ ಶೇಖರ್ ಅಧ್ಯಕ್ಷತೆ ವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಉಡುಪಿ ಪ್ರಸಾದ್ ನೇತ್ರಾಲಯದ ವೈದ್ಯರಾದ ಡಾ. ಪ್ರೇಮ್ ಕಣ್ಣಿನ ಆರೋಗ್ಯದ ಬಗ್ಗೆ ಮಾಹಿತಿ ನೀಡಿದರು. ಒಕ್ಕೂಟದ ಸಾರ್ವಜನಿಕ ಸಂಪರ್ಕ ಅಧಿಕಾರಿ ಗಣೇಶ್ ಹಾಗೂ ಬಿ.ಆರ್.ಪಿ.ಪಿ.ಆರ್.ಐ ರೀತಾ, ಎನ್.ಎಲ್.ಆರ್.ಎಂ. ಸಿಬ್ಬಂದಿಗಳು, ಪದಾಧಿಕಾರಿಗಳು ಇದ್ದರು. ಕೋಟ ಗ್ರಾಮ ಪಂಚಾಯತ್ ಕಾರ್ಯದರ್ಶಿ ಜಲಜ ಪ್ರಸ್ತಾವನೆ ಸಲ್ಲಿಸಿದರು. ಎಂಬಿಕೆ ಪ್ರೇಮ ಆಚಾರ್ ನಿರೂಪಿಸಿ, ಒಕ್ಕೂಟದ ಎಲ್ ಸಿ.ಆರ್.ಪಿ ಲಲಿತಾ ಸ್ವಾಗತಿಸಿ, ಎಲ್.ಸಿ.ಆರ್.ಪಿ. ಪ್ರತಿಮಾ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ನಮ್ಮ ಜೀವನ ಶೈಲಿ ಹಾಗೂ ಆಹಾರ ಪದ್ಧತಿಯ ಕಾರಣದಿಂದ ಅನೇಕ ರೋಗಗಳು ನಮ್ಮನ್ನು ಸುತ್ತಿಕೊಳ್ಳುತ್ತಿದೆ. ಪ್ರತಿನಿತ್ಯ ಯೋಗ ಅಭ್ಯಾಸ ಮಾಡುವುದರಿಂದ ಹಾಗೂ ನಮ್ಮ ಜೀವನ ಶೈಲಿಯಲ್ಲಿ ಬದಲಾವಣೆ ಮಾಡಿಕೊಳ್ಳುವುದರಿಂದ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಯೋಗದ ಮಹತ್ವನ್ನು ಅರಿತು, ಯೋಗವನ್ನು ತಮ್ಮ ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳುವುದರಿಂದ ಆರೋಗ್ಯ ರಕ್ಷಣೆ ಮಾಡಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯಂತಿ ಖಾರ್ವಿ ಹೇಳಿದರು. ಅವರು ಜೇಸಿಐ ಗಂಗೊಳ್ಳಿ ಮತ್ತು ರೋಟರಿ ಕ್ಲಬ್ ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ಹಮ್ಮಿಕೊಳ್ಳಲಾದ 15 ದಿನಗಳ ಉಚಿತ ಯೋಗ ತರಬೇತಿ ಶಿಬಿರವನ್ನು ಗಂಗೊಳ್ಳಿಯ ಸ.ವಿ. ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ಭಾನುವಾರ ಉದ್ಘಾಟಿಸಿ ಮಾತನಾಡಿದರು. ಪತ್ರಕರ್ತ ಬಿ. ರಾಘವೇಂದ್ರ ಪೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗಂಗೊಳ್ಳಿ ಸರಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಎಸ್ಡಿಎಂಸಿ ಮಾಜಿ ಅಧ್ಯಕ್ಷ ಮೊಹಮ್ಮದ್ ನೂರ್ ಫಾಜಿಲ್ ಮತ್ತು ಯೋಗ ತರಬೇತುದಾರ ಸುಕೇಶ್ ಆಚಾರ್ಯ ಶುಭ ಹಾರೈಸಿದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮದ್ದುಗುಡ್ಡೆ ಬಳಿ ಸಾರ್ವಜನಿಕರ ಸ್ಥಳದಲ್ಲಿ ಅಂದರ್ ಬಾಹರ್ ಜುಗಾರಿ ಆಟ ಆಡುತ್ತಿದ್ದವರನ್ನು ಕುಂದಾಪುರ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ. ಠಾಣೆಯ ಉಪನಿರೀಕ್ಷಕರಾದ ನಂಜಾ ನಾಯ್ಕ್ ಅವರು ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿ ಆರೋಪಿಗಳಾದ ಮಿಥುನ ಖಾರ್ವಿ, ಚಂದ್ರ ಪೂಜಾರಿ, ರೆಹಮತ್, ನಿರಂಜನ್ ನಾಯಕ್ ಎಂಬುವರನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ಅಂದರ್ ಬಾಹರ್ ಜುಗಾರಿ ಆಟಕ್ಕೆ ಬಳಸಿದ ನಗದು 2,660 ರೂ, ಬಿಳಿ ಬಣ್ಣದ ಪಾಲೀಥಿನ್ ಚೀಲ, ಡೈಮಾನ್, ಆಟಿನ್, ಇಸ್ಪೀಟ್ ಕಳವಾರ್ ಚಿತ್ರಗಳಿರುವ 52 ಇಸ್ಪೀಟ್ ಎಲೆಗಳು ನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಪಟ್ಟಣಪಂಚಾಯತ್ ಸುವರ್ಣ ಮಹೋತ್ಸವ ಸಂಭ್ರಮದ ಹೊಸ್ತಿಲಲ್ಲಿದೆ, ಪುರಸಭೆಯಿಂದ ಪಟ್ಟಣಪಂಚಾಯತ್ ನಡೆದು ಬಂದ ಹಾದಿ ಅತ್ಯದ್ಭುತ, ಈ ಹಿನ್ನಲ್ಲೆಯಲ್ಲಿ ಇದೀಗ ಸಂಭ್ರಮಾಚರಣೆಗೆ ಸ್ವಚ್ಛತಾ ಅಭಿಯಾನ ಮುನ್ನುಡಿ ಬರೆದಿದೆ ಎಂದು ಸಾಲಿಗ್ರಾಮ ಪಟ್ಟಣಪಂಚಾಯತ್ ಅಧ್ಯಕ್ಷೆ ಸುಕನ್ಯಾ ಜೆ. ಶೆಟ್ಟಿ ನುಡಿದರು. ಅವರು ಭಾನುವಾರ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾಮಂಡಲ ಇವರ ನೇತೃತ್ವದಲ್ಲಿ ಹಂದಟ್ಟು ಮಹಿಳಾ ಬಳಗ, ಮಣೂರು ಫ್ರೆಂಡ್ಸ್, ಜೆಸಿಐ ಕೋಟ ಸಿನಿಯರ್ ಲಿಜನ್, ಗೆಳೆಯರ ಬಳಗ ಕಾರ್ಕಡ, ಆಶ್ರಿತ ಕಾಲೇಜು ಕೋಟ ಸಹಯೋಗದೊಂದಿಗೆ ಸಾಲಿಗ್ರಾಮ ಪಟ್ಟಣಪಂಚಾಯತ್ ಸಂಯೋಜನೆಯೊಂದಿಗೆ 275ನೇ ಪರಿಸರಸ್ನೇಹಿ ಅಭಿಯಾನದ ಪ್ರಯುಕ್ತ ಸುವರ್ಣ ಮಹೋತ್ಸವ ಸಮರ್ಪಿತ ಸಾಲಿಗ್ರಾಮ ರಾಷ್ಟ್ರೀಯ ಹೆದ್ದಾರಿ ಎರಡು ದಿಕ್ಕುಗಳನ್ನು ಪ್ಲಾಸ್ಟಿಕ್ ಮುಕ್ತ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು. ಪಂಚವರ್ಣ ಸಂಘಟನೆ ಸಾಲಿಗ್ರಾಮ ಪಟ್ಟಣಪಂಚಾಯತ್ ಕೃತಜ್ಞತೆಗಳನ್ನು ಸಲ್ಲಿಸಿದ್ದು ಅಕ್ಟೋಬರ್ 25ರಂದು ನಡೆಯಲಿರುವ ಕಾರ್ಯಕ್ರಮಸಲ್ಲಿ ಭಾಗಿಯಾಗಲು ಕರೆ ನೀಡಿದರು. ಪಟ್ಟಣಪಂಚಾಯತ್ ಸ್ಥಾಯೀ ಸಮಿತಿಯ ಅನುಸೂಯ ಹೇರ್ಳೆ, ಆರೋಗ್ಯ ನಿರೀಕ್ಷಕಿ…
