ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದೆಹಲಿಯಲ್ಲಿ ನಡೆಯುವ ಸ್ವಾತಂತ್ರೋತ್ಸವದ ಧ್ವಜಾರೋಹಣ ಸಮಾರಂಭಕ್ಕೆ ಕುಂದಾಪುರ ತಾಲೂಕಿನ ಸಿದ್ದಾಪುರದ ಕೆಳಪೇಟೆ ಸೂರ ಪೂಜಾರಿ ಮತ್ತು ಗಿರಿಜಾ ಪೂಜಾರಿ ದಂಪತಿಯನ್ನು ಕೇಂದ್ರ ಸರಕಾರದ ಪ್ರಧಾನಮಂತ್ರಿ ಸಚಿವಾಲಯ ಆಮಂತ್ರಿಸಿದೆ. ಅವರು ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯ ಅಮೃತ ಸರೋವರ ಯೋಜನೆಯಲ್ಲಿ ಸಿದ್ದಾಪುರ ಗ್ರಾಮದ ಬ್ರಹ್ಮಕೆರೆಯನ್ನು 100 ದಿನ ಮಾನವ ಶ್ರಮದ ಮೂಲಕ ಹೂಳೆತ್ತುವ ಕಾರ್ಯವನ್ನು ಇವರು ಮಾಡಿದ್ದರು. ಅಮೃತ ಸರೋವರ ಯೋಜನೆಯ ಮೂಲಕ 100 ದಿನಕ್ಕೂಹೆಚ್ಚು ಕೂಲಿ ಕೆಲಸಮಾಡಿದ ದಂಪತಿಯನ್ನು ಸ್ವಾತಂತ್ರೋತ್ಸವದ ಕಾರ್ಯಕ್ರಮಕ್ಕೆ ಕೇಂದ್ರ ಸರಕಾರವು ಆಮಂತ್ರಿಸಿದೆ. ರಾಜ್ಯದ 34 ಜಿಲ್ಲೆಗಳಲ್ಲಿ ಈ ಯೋಜನೆ ಜಾರಿ ಮಾಡಿದ್ದು, 6 ದಂಪತಿಗಳು ಅಗಸ್ಟ್ 15ರಂದು ನಡೆಯುವ ಸಮಾರಂಭದಲ್ಲಿ ಪಾಲ್ಗೊಳ್ಳಲು ಆಯ್ಕೆಯಾಗಿದ್ದಾರೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕೇವಲ ಐದು ಗಂಟೆಯೊಳಗೆ ಸಂತ್ರಸ್ಥೆಯೋರ್ವರಿಗೆ ವಿಧವಾ ವೇತನವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಂಜೂರು ಮಾಡಿಸಿದ್ದಾರೆ. ಜು.4ರ ರಾತ್ರಿ ತೀವ್ರ ಮಳೆಯಿಂದಾಗಿ ರಸ್ತೆ ಕಾಣದೆ ಸ್ಕೂಟರ್ ಸಮೇತ ಕೆರೆಗೆ ಬಿದ್ದು ಕುಂದಾಪುರ ತಾಲೂಕಿನ ಉಳ್ಳೂರು ಗ್ರಾಮದ ದಿನಕರ ಶೆಟ್ಟಿ(53) ಎಂಬುವರು ಮೃತಪಟ್ಟಿದ್ದರು. ಅವರ ಪತ್ನಿ ಎಂ.ಶೀಲಾ ಶೆಟ್ಟಿ ಶನಿವಾರ ಮಧ್ಯಾಹ್ನ 2 ಗಂಟೆಗೆ ಸಚಿವರನ್ನು ಸಾರ್ವಜನಿಕ ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ಭೇಟಿ ಮಾಡಿ, ವಿಧವಾ ವೇತನ ಮಂಜೂರು ಮಾಡಿಸುವಂತೆ ಮನವಿ ಸಲ್ಲಿಸಿದ್ದರು. ಮಹಿಳೆಯ ಮನವಿಗೆ ಸ್ವೀಕರಿಸಿದ ಸಚಿವೆ ಹೆಬ್ಬಾಳ್ವರ್, ತಕ್ಷಣ ಕ್ರಮ ಕೈಗೊಳ್ಳುವಂತೆ ಕುಂದಾಪುರ ತಹಸೀಲ್ದಾರ್ ಶೋಭಾಲಕ್ಷ್ಮೀ ಅವರಿಗೆ ಸೂಚಿಸಿದರು. ಅದರಂತೆ ಸಂಜೆ 6 ಗಂಟೆಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲೆಯ ಪ್ರಾಕೃತಿಕ ವಿಕೋಪ ನಿರ್ವಹಣೆ ಕುರಿತು ನಡೆದ ಸಭೆಯ ನಂತರ ನೊಂದ ಮಹಿಳೆಯ ಪರವಾಗಿ ಅವರ ಸಹೋದರಿ ಮಾಲತಿ ಶೆಟ್ಟಿ ಅವರನ್ನು ಕರೆಯಿಸಿ, ವಿಧವಾ ವೇತನ ಮಂಜೂರಾತಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ,ಜು.10: ವಿಕ್ರಾಂತ್ ರೋಣ ಸಿನಿಮಾ ಖ್ಯಾತಿಯ ನಟಿ ನೀತಾ ಅಶೋಕ್ ತನ್ನ ಕಾಲೇಜು ಗೆಳೆಯನ ಜೊತೆಗೆ ಸಪ್ತಪದಿ ತುಳಿದಿದ್ದಾರೆ. ನೀತಾ ಅಶೋಕ್ ಹಾಗೂ ಸತೀಶ್ ಮೇಸ್ತ ಜೋಡಿಯ ನಿಶ್ಚಿತಾರ್ಥ ಇತ್ತೀಚೆಗೆ ನಡೆದಿತ್ತು. ಕುಂದಾಪುರ ಕೋಟದ ನೀತಾ ಅಶೋಕ್ ಎಂಬಿಎ ಪದವೀಧರರು. ನಟಿ ನೀತಾ ಅಶೋಕ್ ಹಾಗೂ ಸತೀಶ್ಕಾಲೇಜು ಸ್ನೇಹಿತರಾಗಿದ್ದು, ಪರಸ್ಪರ ಪ್ರೀತಿಸುತ್ತಿದ್ದರು. ಇಂದು ತನ್ನ ಹುಟ್ಟೂರು ಕೋಟದ ಸಮೀಪದ ಸಾಲಿಗ್ರಾಮದ ಗುರುನರಸಿಂಹ ಕಲ್ಯಾಣ ಮಂಟಪದಲ್ಲಿ ಅವರು ಹಸೆಮಣೆ ಏರಿದ್ದಾರೆ. ಯಶೋದೆ ಧಾರಾವಾಹಿಯ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿಕೊಟ್ಟ ನೀತಾ ಅಶೋಕ್, ಮುಂದೆ ನಾ ನಿನ್ನ ಬಿಡಲಾರೆ, ಆಶಿಯಾನ್, ನೀಲಾಂಬರಿ ಧಾರಾವಾಹಿಗಳಲ್ಲಿ ಮುಖ್ಯ ಪಾತ್ರದಲ್ಲಿ ನಟಿಸಿದ್ದರು. ತುಳು ಚಿತ್ರರಂಗದಲ್ಲಿ ಜಬರ್ದಸ್ತ್ ಶಂಕರ ಸಿನಿಮಾದಲ್ಲಿ ನಟಿಯಾಗಿ ಕಾಣಿಸಿಕೊಂಡಿದ್ದರು. ವಿಕ್ರಾಂತ್ ರೋಣ ಸಿನಿಮಾದಲ್ಲಿಯೂ ನಟಿಸಿದ್ದಾರೆ. ಹಿಂದಿ ಧಾರಾವಾಹಿಗಳಲ್ಲಿಯೂ ನೀತಾ ಕಾಣಿಸಿಕೊಂಡಿದ್ದರು.
ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಡಲಕೊರೆತ ತಡೆಗೆ ಶಾಶ್ವತ ಕ್ರಮ ಕೈಗೊಳ್ಳಿ – ಸದನದಲ್ಲಿ ಶಾಸಕ ಕಿರಣ್ ಕೊಡ್ಗಿ
ಜಿಲ್ಲೆಯಲ್ಲಿ ಪಶುವೈದ್ಯರ ಕೊರತೆ – ಸದನದಲ್ಲಿ ಸರಕಾರದ ಗಮನ ಸೆಳೆದ ಶಾಸಕ ಗುರುರಾಜ ಗಂಟಿಹೊಳೆ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಭಾರತೀಯ ವಾಗ್ಮಯ ಬಹುವಾಗಿ ಋಷಿ ಪರಂಪರೆ ಆವರಿಸಿಕೊಂಡಿದೆ. ಅದನ್ನು ಬಿಟ್ಟು ಭಾರತೀಯ ಸಾಹಿತ್ಯವನ್ನು ಕಟ್ಟಿಕೊಡಲು ಸಾಧ್ಯವಿಲ್ಲ, ಋಷಿ ಪರಂಪರೆಯನ್ನು ಭಾರತೀಯತೆಯಿಂದ ಪ್ರತ್ಯೇಕಿಸುವುದೆಂದರೆ ಮಣ್ಣು – ಬೇರು ಬೇರ್ಪಡಿಸಿದಂತೆ ಎಂದು ಚಿಂತಕ ರೋಹಿತ್ ಚಕ್ರತೀರ್ಥ ಹೇಳಿದರು. ಲಾವಣ್ಯ ರಿ. ಬೈಂದೂರು, ರೋಟರಿ ಕ್ಲಬ್ ಬೈಂದೂರು ಜಾಗೂ ಸಮನ್ವಿತ ಬೆಂಗಳೂರು ಸಂಯುಕ್ತ ಆಶ್ರಯದಲ್ಲಿ ಭಾನುವಾರ ರೋಟರಿ ಭವನದಲ್ಲಿ ಆಯೋಜಿಸದ ಕಾರ್ಯಕ್ರಮದಲ್ಲಿ ಸದ್ಯೋಜಾತರ ವಾಚಕ್ನವೀ ಮತ್ತು ಜಿತ್ವರೀ ಕೃತಿಗಳ ಲೋಕಾರ್ಪಣೆಗೊಳಿಸಿ ಮಾತನಾಡಿದರು. ಋಷಿಗಳೆಂದರೆ ಸಮಾಜದಿಂದ ದೂರ ಇರುವವರು ಎಂಬ ತಪ್ಪು ಕಲ್ಪನೆ ಇದೆ. ಆದರೆ ಸಮಾಜದ ಭಾಗವಾಗಿಯೇ ಇದ್ದು, ಮಾರ್ಗದರ್ಶನ ಮಾಡುತ್ತಾ ಲೌಕಿಕ ಸುಖಗಳನ್ನು ತ್ಯಜಿಸಿ ಬದುಕಿದವರು. ನಮ್ಮ ಸಂಸ್ಕೃತಿ ಪರಂಪರೆಯ ಬಗ್ಗೆ ಇರುವ ಅಸಡ್ಡೆಯೇ ಋಷಿ ಪರಂಪರೆಯ ಅಪಹಾಸ್ಯಕ್ಕೆ ಕಾರಣ. ಪ್ರತಿ ಮುನಿಯ ಜೀವನ ಚರಿತ್ರೆಯಲ್ಲಿಯೂ ಬಹುದೊಡ್ಡ ಆದರ್ಶವಿದೆ. ಅಂತಹ ಆದರ್ಶಗಳನ್ನು ಮುಂದಿನ ಪೀಳಿಗೆಗೆ ತಲುಪಿಸುವ ಕೆಲಸ ಮಾಡೋಣ. ಕಟ್ಟುವ ಸಂಸ್ಕೃತಿಯ ಭಾಗವಾಗೋಣ ಎಂದು ಕರೆ ನೀಡಿದರು. ಲೇಖಕ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಜೆಸಿಐ ಉಪ್ಪುಂದ ನೇತೃತ್ವದಲ್ಲಿ ಬೈಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಇವರ ಸಂಯುಕ್ತ ಆಶ್ರಯದಲ್ಲಿ ಬಂಜರು ಭೂಮಿಯನ್ನು ಹಸನಾಗಿಸುವ ಸಂಕಲ್ಪದೊಂದಿಗೆ ಶನಿವಾರ ಶಿರೂರು ಕರಾವಳಿಯಲ್ಲಿ ಆಯೋಜಿಸಲಾದ “ವಿದ್ಯಾರ್ಥಿಗಳಿಂದ ಗದ್ದೆ ನಾಟಿ” ಕಾರ್ಯಕ್ರಮಕ್ಕೆ ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಅವರು ಚಾಲನೆ ನೀಡಿದರು. ಈ ವೇಳೆ ಅವರು ಮಾತನಾಡಿ ವಿದ್ಯಾರ್ಥಿಗಳಿಗೆ ಕೃಷಿಯ ಬಗ್ಗೆ ಆಸಕ್ತಿ ಹಾಗೂ ಅರಿವು ಮೂಡಿಸುವುದು ಅಗತ್ಯ. ಆ ದಿಸೆಯಲ್ಲಿ ಇಂದಿನ ಕಾರ್ಯಕ್ರಮ ಪ್ರಾಯೋಗಿಕ ಅನುಭವ ನೀಡಲಿದೆ. ಇಂತಹ ಪ್ರಯತ್ನಗಳ ಮೂಲಕ ಪರಿಸರ ಕಾಳಜಿ ಹೆಚ್ಚುವಂತಾಗಲಿ ಎಂದರು. ಈ ಸಂದರ್ಭದಲ್ಲಿ ಕಾಲೇಜು ಅಭಿವೃದ್ಧಿ ಸಮಿತಿ ಕಾರ್ಯಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಕಾಲೇಜು ಪ್ರಾಂಶುಪಾಲರಾದ ನಾಗರಾಜ ಶೆಟ್ಟಿ, ಶಿರೂರು ರೈತರ ಸಂಘದ ಅಧ್ಯಕ್ಷ ರವೀಂದ್ರ ಶೆಟ್ಟಿ, ರೈತ ಸಂಘದ ಉಪಾಧ್ಯಕ್ಷರು ವೆಂಕಟ ಪೂಜಾರಿ, ನಿಕಟ ಪೂರ್ವ ಅಧ್ಯಕ್ಷ ನಾಗರಾಜ ಪೂಜಾರಿ, ಅಶೋಕ್ ಶೆಟ್ಟಿ ಕಾರಿಕಟ್ಟೆ, ಯುವಶಕ್ತಿ ಅಧ್ಯಕ್ಷರಾದ ವಿಠಲ ಬಿಲ್ಲವ, ಎನ್ಎಸ್ಎಸ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಪ್ರತಿವರ್ಷ ಸಂಭವಿಸುವ ಕಡಲ ಕೊರೆತ ತಡೆಗೆ ತಮ್ಮ ಅವಧಿಯಲ್ಲಿ ಶಾಶ್ವತ ಪರಿಹಾರವನ್ನು ಕೈಗೊಳ್ಳಲು ಆದ್ಯತೆ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು. ಅವರು ಇಂದು ಪಡುಬಿದ್ರೆಯ ಕಾಡಿಪಟ್ಣದಲ್ಲಿ , ಸಮುದ್ರ ಕೊರೆತ ಪ್ರದೇಶ ವೀಕ್ಷಿಸಿ ಮಾತನಾಡಿ, ಜಿಲ್ಲೆಯಲ್ಲಿ ಹಲವು ವರ್ಷಗಳಿಂದ ಮಳೆಗಾಲದಲ್ಲಿ ಸಮುದ್ರ ಕೊರೆತ ಸಂಭವಿಸುತ್ತಿರುವುದು ಸಾಮಾನ್ಯವಾಗಿದ್ದು ಈ ಬಗ್ಗೆ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಶಾಶ್ವತ ಕಾಮಗಾರಿಯನ್ನು ಕೈಗೊಳ್ಳಲಾಗುವುದು ಎಂದರು. ಜಿಲ್ಲೆಯಲ್ಲಿ ಈ ಬಾರಿ ತಡವಾಗಿ ಮಳೆ ಆರಂಭಗೊಂಡಿದ್ದರು ಸಹ ಪ್ರಾಕೃತಿಕ ವಿಕೋಪದಿಂದ ಇದುವರೆಗೆ ಏಳು ಮಂದಿ ಮೃತಪಟ್ಟಿದ್ದು ಇವರ ಕುಟುಂಬದವರಿಗೆ ತಲಾ ರೂ. ಐದು ಲಕ್ಷಗಳ ಪರಿಹಾರವನ್ನು ವಿತರಿಸಲಾಗಿದೆ ಜಿಲ್ಲೆಯಲ್ಲಿ ಮಳೆಯಿಂದ ಜೀವ ಹಾನಿ ಸಂಭವಿಸದಂತೆ ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲೆಯ ಎಲ್ಲಾ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು. ಮಳೆಯಿಂದ ಮಾನವ ಜೀವ ಹಾನಿ,ಮನೆ ಹಾನಿ, ಜಾನುವಾರು ಹಾನಿಗೆ ಸಂಬಂಧಿಸಿದಂತೆ ತಕ್ಷಣವೇ ಸೂಕ್ತ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಾತ್ರಿ ಕೆಲಸ ಮುಗಿಸಿ ಮನೆಗೆ ತೆರಳುವ ಸಂದರ್ಭ ತಾಲೂಕಿನ ಕೆದೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮಲ್ಯಾಡಿ ಗ್ರಾಮದಲ್ಲಿ ಸ್ಕೂಟರ್ ಸಹಿತ ಕೆರೆಗೆ ಬಿದ್ದು ಮೃತಪಟ್ಟ ದಿನಕರ ಶೆಟ್ಟಿ ಮಲ್ಯಾಡಿ ಅವರ ಮನೆಗೆ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿಯವರು ಭೇಟಿ ನೀಡಿದರು. ಈ ವೇಳೆ ವೈಯಕ್ತಿಕ ಧನಸಹಾಯ ನೀಡಿ ಸಾಂತ್ವನ ಹೇಳಿದರು. ಸರಕಾರದಿಂದ ಪರಿಹಾರ ಒದಗಿಸಿಕೊಡುವ ಬಗ್ಗೆಯೂ ಭರವಸೆ ನೀಡಿದರು. ಈ ಸಂದರ್ಭ ಕೆದೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಶಾನಾಡಿ ಸಂಪತ್ ಕುಮಾರ್ ಶೆಟ್ಟಿ. ಗ್ರಾಮ ಪಂಚಾಯತ್ ಸದಸ್ಯರಾದ ಪ್ರಶಾಂತ್ ಶೆಟ್ಟಿ ಉಳ್ತೂರು, ಸ್ಥಳೀಯರಾದ ಪ್ರಭಾಕರ್ ಶೆಟ್ಟಿ ಮಲ್ಯಾಡಿ, ಗಣೇಶ್ ಶೆಟ್ಟಿ, ಸುಧೀರ್ ಶೆಟ್ಟಿ, ಪ್ರತಾಪ್ ಶೆಟ್ಟಿ ಉಳ್ತೂರು ಹಾಗೂ ಅಂಬರೀಶ್ ಉಪಸ್ಥಿತರಿದ್ದರು. ಇದನ್ನೂ ಓದಿ:► ಮಲ್ಯಾಡಿ: ದ್ವಿಚಕ್ರ ವಾಹನ ಸಹಿತ ಕೆರೆಗೆ ಬಿದ್ದು ವ್ಯಕ್ತಿ ಸಾವು – https://kundapraa.com/?p=67497 .
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕಳೆದ ನಾಲ್ಕು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಕಡಲು ಪ್ರಕ್ಷುದ್ಧಗೊಂಡು ತೀರ ಪ್ರದೇಶದ ಜನರಲ್ಲಿ ಆತಂಕ ಮನೆಮಾಡಿದೆ. ಕೋಡಿ ಕನ್ಯಾನ ಗ್ರಾಮದಲ್ಲಿ ಕಡಲ್ಕೋರೆತ ಈ ಭಾರಿಯೂ ಕಡಲಕೊರೆತ ಉಂಟಾಗಿದ್ದು, ತೀರ ಪ್ರದೇಶದ ರಸ್ತೆ, ಮರಗಳು ಹಾಗೂ ತಾತ್ಕಾಲಿಕ ತಡೆಗೋಡೆಗಳು ಕಡಲಪಾಲಾಗಿವೆ. ಕಡಲಕೊರೆತ ಹೀಗೆಯೇ ಮುಂದುವರಿದರೆ ತೀರ ಪ್ರದೇಶದ ಹಲವು ಮನೆಗಳು ಅಪಾಯ ಎದುರಾಗಲಿದೆ. ಹಲವು ವರ್ಷಗಳಿಮದ ಕೋಡಿ ಕನ್ಯಾನ ಕಡಲಕೊರೆತವಿದ್ದು, ಶಾಶ್ವತ ಪರಿಹಾರ ಒದಗಿಸಿಕೊಡುವಂತೆ ಜನಪ್ರತಿನಿಧಿಗಳಲ್ಲಿ ಮನವಿ ಮಾಡಲಾಗಿತ್ತು. ಅಲ್ಲಲ್ಲಿ ತಾತ್ಕಾಲಿಕ ತಡೆಗೋಡೆ ನಿರ್ಮಿಸಿದ್ದು, ಅದೂ ಕೂಡ ಸಮುದ್ರದಲೆಗಳ ಹೊಡೆತಕ್ಕೆ ಸಿಕ್ಕು ಕುಸಿದುಹೋಗಿದೆ. ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳಲ್ಲಿ ಶಾಶ್ವತ ಪರಿಹಾರ ಒದಗಿಸುವಂತೆ ಹಲವು ಭಾರಿ ಮನವಿ ಮಾಡಲಾಗಿದ್ದು, ಯಾವುದೇ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರು ಅಳಲು ತೋಡಿಕೊಂಡಿದ್ದಾರೆ. * ಈ ಭಾಗದಲ್ಲಿ ಹಲವಾರು ವರ್ಷದಿಂದ ಕಡಲ್ಕೋರೆತ ಸಮಸ್ಯೆ ಇದ್ದು, ರಾಜಕೀಯ ನಾಯಕರ ಇಚ್ಚಾಶಕ್ತಿಯ ಕೊರತೆಯಿಂದ ಯಾವುದೇ ಅಗತ್ಯ ಕೆಲಸಗಳು ಆಗದೇ ಭಾರಿ ಸಮಸ್ಯೆ ಎದುರಾಗಿದೆ. ಸಮುದ್ರ ತಟದಲ್ಲಿ ರೆಸಾರ್ಟ್…
