Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಹೋದ್ಯೋಗಿ ಯುವತಿಯರ ಖಾಸಗಿ ದೃಶ್ಯಗಳನ್ನು ಸೆರೆಹಿಡಿದುಕೊಂಡು ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದಡಿ ಕುಂದಾಪುರ ಯುವಕನೋರ್ವನನ್ನು ಎಚ್ಎಎಲ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನಲ್ಲಿ ಕ್ಯಾಟರಿಂಗ್ ವ್ಯವಹಾರ ನಡೆಸುತ್ತಿದ್ದ ರಘುರಾಮ್ ಬಂಧಿತ ಆರೋಪಿ. ನಿಸರ್ಗ ಗಾರ್ಡನ್ನಲ್ಲಿ ಕ್ಯಾಟರಿಂಗ್ ನಡೆಸುತ್ತಿದ್ದ ರಘುರಾಮ್, ಪಶ್ಚಿಮ ಬಂಗಾಳ ಮೂಲದ ಇಬ್ಬರು ಯುವತಿಯರನ್ನು ಕೆಲಸಕ್ಕೆ ಇಟ್ಟುಕೊಂಡಿದ್ದ. ಬಾಗ್ ಮನೆ ಟೆಕ್ಪಾರ್ಕ್ ಹಾಗೂ ಮತ್ತಿತರ ಕಡೆಗಳಿಗೆ ಕ್ಯಾಟರಿಂಗ್ ವ್ಯವಸ್ಥೆ ಕಲ್ಪಿಸುತ್ತಿದ್ದ. ಸಂತ್ರಸ್ತೆ ಕ್ಯಾಟರಿಂಗ್ ನ ಕ್ಯಾಷಿಯರ್ ಆಗಿದ್ದರೆ, ಆಕೆಯ ಸ್ನೇಹಿತೆ ಕೌಂಟರ್ ಮ್ಯಾನೇಜರ್ ಆಗಿದ್ದರು. ಸಂತ್ರಸ್ತೆ ಮತ್ತು ಆಕೆಯ ಸ್ನೇಹಿತೆ ಹಾಗೂ ಆರೋಪಿ ರಘುರಾಮ್ ನಿಸರ್ಗ ಗಾರ್ಡನ್ನಲ್ಲಿ ಒಂದೇ ಮನೆಯಲ್ಲಿ ವಾಸವಾಗಿದ್ದರು. ಮೇ 12ರಂದು ದೂರುದಾರೆ ಸ್ನಾನ ಮಾಡಲು ಬಾತ್ ರೂಮಿಗೆ ಹೋಗಿದ್ದು, ಆಗ ಆರೋಪಿಯು ಬಾತ್ ರೂಮಿನ ಗೋಡೆಯ ಮೇಲಿನಿಂದ ಆಕೆ ಸ್ನಾನ ಮಾಡುವ ದೃಶ್ಯವನ್ನು ಚಿತ್ರೀಕರಿಸುತ್ತಿದ್ದ. ಅದನ್ನು ಗಮನಿಸಿದ ಆಕೆಯ ಸ್ನೇಹಿತೆ ಜೋರಾಗಿ ಕೂಗಿಕೊಂಡಿದ್ದಾಳೆ. ನಂತರ ಆರೋಪಿಯ ಮೊಬೈಲ್ ಕಸಿದುಕೊಂಡಾಗ ಇಬ್ಬರು ಯುವತಿಯರು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪದವೀಧರರು ಉದ್ಯೋಗಕ್ಕೆ ಸೇರುವ ಸಂದರ್ಭ ಸಲ್ಲಿಸುವ ಅಂಕಪಟ್ಟಿಯ ಪರಿಶೀಲನೆ (ವೆರಿಫಿಕೇಶನ್) ಕಡ್ಡಾಯ. ಆದರೆ ಅಂಕಪಟ್ಟಿ ಪರಿಶೀಲನೆಗೆ ಮಂಗಳೂರು ವಿ.ವಿ.ಯ ವಿದ್ಯಾರ್ಥಿಗಳು ದುಬಾರಿ ಶುಲ್ಕ ತೆರಬೇಕಾಗಿದ್ದು, ಇದನ್ನು ಇಳಿಸಲು ಕ್ರಮ ಕೈಗೊಳ್ಳಬೇಕು ಎಂದು ವಿ.ವಿ.ಯ ಉಪಕುಲಪತಿಗಳಿಗೆ ನೂತನ ಶಾಸಕ ಬೈಂದೂರಿನ ಗುರುರಾಜ್ ಗಂಟೆಹೊಳೆ ಟ್ವಿಟ್ ಮೂಲಕ ಮನವಿ ಮಾಡಿದ್ದು ಮನವಿಗೆ ಮಂಗಳೂರು ವಿ.ವಿ. ಸ್ಪಂದಿಸಿದೆ. ಪದವೀಧರ ತನ್ನ 6 ಸೆಮಿಸ್ಟರ್ಗಳ ಅಂಕಪಟ್ಟಿಗಳನ್ನು ಪರಿಶೀಲಿಸಲು 9 ಸಾವಿರ ರೂ. ಮೂಲ ಶುಲ್ಕ ಹಾಗೂ ಇತರ ಶುಲ್ಕ ಸೇರಿ ಒಟ್ಟು 10,800 ರೂ. ಪಾವತಿಸಬೇಕಾಗುತ್ತದೆ. ಇದು ಮಂಗಳೂರು ವಿ.ವಿ.ಯಲ್ಲಿ ಕಲಿತ ಲಕ್ಷಾಂತರ ವಿದ್ಯಾರ್ಥಿಗಳಿಗೆ ಅದರಲ್ಲೂ ಪ್ರಮುಖವಾಗಿ ಗ್ರಾಮಾಂತರ ಪ್ರದೇಶದ ಬಡ ಮಕ್ಕಳಿಗೆ ಹೊರೆಯಾಗಿತ್ತು. ತುಮಕೂರು ರಾಜ್ಯದಲ್ಲಿಯೇ 6 ವಿಷಯಗಳ ಅಂಕಪಟ್ಟಿಗೆ ಕೇವಲ 501 ರೂ. ಶುಲ್ಕವನ್ನಷ್ಟೇ ತೆಗೆದುಕೊಳ್ಳುತ್ತಿದೆ. ಈ ಬಗ್ಗೆ ಮಂಗಳೂರು ವಿ.ವಿ.ಯ ಉಪ ಕುಲಪತಿಗಳು ಉತ್ತಮ ನಿರ್ಧಾರವನ್ನು ಕೈಗೊಂಡು, ಕರಾವಳಿಯ ಲಕ್ಷಾಂತರ ವಿದ್ಯಾರ್ಥಿಗಳಿಗೆ ಮಾಡಿಕೊಡಬೇಕು ಅನುಕೂಲ ಎಂದು ಆಗ್ರಹಿಸಿದ್ದರು.…

Read More

ಕುಂದಾಪ್ರ ಡಾಟ್ ಕಾಮ ಸುದ್ದಿ.ಉಡುಪಿ,ಮೇ20: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪಿ.ಎಂ ಕಿಸಾನ್ ಯೋಜನೆಯಡಿ ಪ್ರೋತ್ಸಾಹಧನ ಪಡೆಯಲು ಫಲಾನುಭವಿ ರೈತರು ಇ-ಕೆವೈಸಿ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದ್ದು, ಇ-ಕೆವೈಸಿ ಮಾಡಿಸಿಕೊಳ್ಳದ ರೈತ ಫಲಾನುಭವಿಗಳಿಗೆ ಯೋಜನೆಯ ಮುಂದಿನ ಕಂತು ಬಿಡುಗಡೆಯಾಗುವುದಿಲ್ಲ. ಕೃಷಿ ಇಲಾಖೆಯ ವತಿಯಿಂದ ಈಗಾಗಲೇ ಈ ಕುರಿತು ಮಾಹಿತಿ ನೀಡಲಾಗಿದ್ದು, ಇದು ಕೊನೆಯ ಅವಕಾಶವಾಗಿದೆ. ಕೂಡಲೇ ರೈತರು ತಮ್ಮ ಆಧಾರ್ ಕಾರ್ಡ್, ಆಧಾರ್ ಜೋಡಣೆಯಾಗಿರುವ ಮೊಬೈಲ್ ನಂಬರ್ ದಾಖಲೆಗಳೊಂದಿಗೆ ಸಮೀಪದ ರೈತ ಸಂಪರ್ಕ ಕೇಂದ್ರ, ಗ್ರಾಮ ಒನ್ ಕೇಂದ್ರ ಅಥವಾ ಸಾಮಾನ್ಯ ಸೇವಾ ಕೇಂದ್ರದಲ್ಲಿ ಇ-ಕೆವೈಸಿ ಮಾಡಿಸಿಕೊಳ್ಳಬಹುದಾಗಿದೆ ಎಂದು ಕುಂದಾಪುರ ತಾಲೂಕು ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆ ಮೂಡ್ಲಕಟ್ಟೆ ಕುಂದಾಪುರ ಆಶ್ರಯದಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯದ ಮಹಿಳೆಯರಿಗಾಗಿ ನಡೆದ ಅಂತರ ವಲಯ ಥ್ರೋಬಾಲ್ ಪಂದ್ಯಾವಳಿಯಲ್ಲಿ ಮೂಡುಬಿದಿರೆ ಆಳ್ವಾಸ್ ಕಾಲೇಜು ಮೂಡುಬಿದಿರೆ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಹೆಬ್ರಿ ಸರಕಾರಿ ಪ್ರಥಮ ದರ್ಜೆ ಕಾಲೇಜು ತಂಡವನ್ನು 2-0 ನೇರ ಸೆಟ್ಗಳಿಂದ ಸೋಲಿಸಿ ಆಳ್ವಾಸ್ ಚಾಂಪಿಯನ್ ಆಯಿತು. ಈ ಅಂತರ ವಲಯ ಪಂದ್ಯಾವಳಿಗೂ ಮುನ್ನ ಇದೇ ಮೈದಾನದಲ್ಲಿ ಮೇ 17ರಂದು ನಡೆದ ಉಡುಪಿ ವಲಯ ಥ್ರೋಬಾಲ್ ಪಂದ್ಯಾವಳಿಯಲ್ಲಿ ಇದೇ ಹೆಬ್ರಿ ತಂಡವನ್ನು ಸೋಲಿಸಿ ಆಳ್ವಾಸ್ ಕಾಲೇಜು ಚಾಂಪಿಯನ್ ಆಗಿತ್ತು. ಇಂಟರ್ಜೋನ್ ಪಂದ್ಯಾವಳಿಯಲ್ಲಿ ಪಧುವ ಕಾಲೇಜು ಮಂಗಳೂರು ತೃತೀಯ ಮತ್ತು ಎಂಎಸ್ಆರ್ಎಸ್ ಕಾಲೇಜು ಶಿರ್ವ ನಾಲ್ಕನೇ ಸ್ಥಾನ ಪಡೆದುಕೊಂಡಿತು. ಉಡುಪಿ ವಲಯದ ಪಂದ್ಯಾವಳಿಯಲ್ಲಿ ಎಸ್.ಎಂ.ಸಿ ಶಿರ್ವ ತೃತೀಯ ಹಾಗೂ ಎಂ.ಎಸ್.ಆರ್.ಎಸ್ ಶಿರ್ವ ನಾಲ್ಕನೇ ಸ್ಥಾನ ಪಡೆದರು. ಐಎಂಜೆ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ಅಂಡ್ ಕಾಮರ್ಸ್ ಈ ಪಂದ್ಯಾವಳಿಯನ್ನು ತಮ್ಮ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಮೇ.21: ಜಿಲ್ಲಾ ವ್ಯಾಪ್ತಿಯಲ್ಲಿ ನಿರ್ವಹಣಾ ಕೆಲಸಗಳ ಕಾರಣದಿಂದ ಮೇ 23 ಹಾಗೂ 24 ರಂದು ಈ ಕೆಳಕಂಡ ಸ್ಥಳಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ. 110/11 ಕೆ.ವಿ ಹಾಲಾಡಿ ವಿದ್ಯುತ್ ಉಪಕೇಂದ್ರದಿAದ ಹೊರಡುವ 11 ಕೆ.ವಿ ಬಿದ್ಕಲ್ಕಟ್ಟೆ ಮತ್ತು ಆವರ್ಸೆ ಮಾರ್ಗಗಳಲ್ಲಿ ಪಾಲನಾ ಕಾಮಗಾರಿ ಹಮ್ಮಿಕೊಂಡಿರುವುದರಿAದ ಬಿದ್ಕಲ್ಕಟ್ಟೆ, ಕಕ್ಕುಂಜೆ, ಹಾಲಾಡಿ-76, ಹೆಸ್ಕತ್ತೂರು, ಹಾಲಾಡಿ-28, ರಟ್ಟಾಡಿ, ಅಮಾಸೆಬೈಲು, ಮಚ್ಚಟ್ಟು, ಹಳ್ಳಾಡಿ-ಹರ್ಕಾಡಿ, ಮೊಳಹಳ್ಳಿ, ಹಾರ್ದಳ್ಳಿ-ಮಂಡಳ್ಳಿ, ಶಂಕರನಾರಾಯಣ ಮತ್ತು ಯಡಾಡಿ-ಮತ್ಯಾಡಿ ಗ್ರಾಮಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೇ 23 ರಂದು ಬೆಳಗ್ಗೆ 9 ರಿಂದ ಸಂಜೆ 5 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಮಾಡಲಾಗುವುದು. 110/33/11 ಕೆ.ವಿ ಕುಂದಾಪುರ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಕುಂದಾಪುರ, ಸಂಗಮ್, ಇಂಡಸ್ಟ್ರೀಯಲ್, ಕುಂಭಾಶಿ, ಅಂಪಾರು, ಜಪ್ತಿ, ಬಳ್ಕೂರು, ಜಪ್ತಿವಾಟರ್ಸಪ್ಲ್ಯೆ, ಗುರುಕುಲ ಮತ್ತು 33/11ಕೆ.ವಿ ಕೋಟ ವಿದ್ಯುತ್ ಉಪಕೇಂದ್ರದಿAದ ಹೊರಡುವ 11 ಕೆ.ವಿ ಕೆದೂರು ಮಾರ್ಗಗಳಲ್ಲಿ ಟ್ರೀ ಟ್ರಿಮ್ಮಿಂಗ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಹಟ್ಟಿಯಂಗಡಿ ಹಾಗೂ ಹೆಮ್ಮಾಡಿ ಪರಿಸರದಲ್ಲಿ ಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಾಟಕ್ಕೆ ಸಂಬಂಧಿಸಿದಂತೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಭೂವಿಜ್ಞಾನಿ ಸಂಧ್ಯಾ ಅವರು ಕಾರ್ಯಾಚರಣೆ ನಡೆಸಿ 5 ಟಿಪ್ಪರ್ ಲಾರಿಗಳನ್ನು ವಶ ಪಡಿಸಿಕೊಂಡಿದ್ದಾರೆ. ಹಟ್ಟಿಯಂಗಡಿ ಗ್ರಾಮದ ಹಟ್ಟಿಕುದ್ರು ಹಾಗೂ ಹೆಮ್ಮಾಡಿ ಗ್ರಾಮದ ಕನ್ನಡಕುದ್ರು ಎಂಬಲ್ಲಿ ಪಂಚಗಂಗವಲ್ಲಿ ನದಿಯಿಂದ ಅನಧಿಕೃತವಾಗಿ ಮರಳುಗಾರಿಕೆ ನಡೆಸಿ ಸಾಗಾಟ ನಡೆಸುತ್ತಿರುವ ಬಗ್ಗೆ ಸಾರ್ವಜನಿಕರಿಂದ ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ ಸ್ವೀಕೃತವಾದ ದೂರಿನ ಮೇರೆಗೆ ಇಲಾಖೆ ಹಿರಿಯ ಭೂವಿಜ್ಞಾನಿ ಸಂದೀಪ್ ಜಿ.ಯು ಅವರ ಮಾರ್ಗದರ್ಶನದಲ್ಲಿ ಶುಕ್ರವಾರ ಮೇ. 19 ರ ರಾತ್ರಿ 10 ಗಂಟೆಗೆ ಹಟ್ಟಿಕುದ್ರು ಎಂಬಲ್ಲಿ ಕಾರ್ಯಾಚರಣೆ ನಡೆಸಿ ಮರಳು ದಕ್ಕೆಯಲ್ಲಿದ್ದ 4 ಲಾರಿಗಳನ್ನು ವಶಕ್ಕೆ ಪಡೆಯಲಾಗಿದೆ. ರಾತ್ರಿ 1 ಗಂಟೆಗೆ ಕನ್ನಡಕುದ್ರು ಎಂಬಲ್ಲಿ ದಾಳಿ ನಡೆಸಿ ಮರಳು ಸಹಿತ 1 ಲಾರಿಯನ್ನು ವಶಕ್ಕೆ ಪಡೆಯಲಾಗಿದೆ. ಈ ಬಗ್ಗೆ ಭೂವಿಜ್ಞಾನಿಯವರು ಪ್ರಕರಣವನ್ನು ದಾಖಲಿಸಿಕೊಂಡಿದ್ದು, ಮುಂದಿನ ಕಾನೂನು ಕ್ರಮ ವಹಿಸುವವರೆಗೆ ಅನಧಿಕೃತ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಇಲ್ಲಿನ ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಸಂಸದ ಬಿ.ವೈ. ರಾಘವೇಂದ್ರ ಹಾಗೂ ಬೈಂದೂರು ಶಾಸಕರಾದ ಗುರುರಾಜ ಶೆಟ್ಟಿ ಗಂಟಿಹೊಳೆ ಅವರು ಭೇಟಿ ನೀಡಿ ದೇವರ ದರ್ಶನ ಪಡೆದರು. ಸರತಿ ಸಾಲಿನಲ್ಲಿಯೇ ದೇವಳ ಪ್ರವೇಶಿಸಿದ ನಾಯಕರು, ದೇವರಿಗೆ ಪೂಜೆ ಸಲ್ಲಿಸಿದರು. ಈ ವೇಳೆ ದೇವಳದ ವತಿಯಿಂದ ಸಂಸದ – ಶಾಸಕರನ್ನು ಗೌರವಿಸಲಾಯಿತು. ಈ ವೇಳೆ ದೇವಳದ ಮಾಜಿ ಧರ್ಮದರ್ಶಿ ಕೃಷ್ಣಪ್ರಸಾದ್ ಅಡ್ಯಂತಾಯ, ಉದ್ಯಮಿಗಳಾದ ಬಿ.ಎಸ್. ಸುರೇಶ್ ಶೆಟ್ಟಿ, ವೆಂಕಟೇಶ ಕಿಣಿ ಮೊದಲಾದವರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಳೆದ ಇಪ್ಪತ್ತೈದು ವರ್ಷದಿಂದ ಹಾಲಾಡಿ ಸಾಧಿಸಿದಿ ಜನಪ್ರಿಯತೆ, ಗಳಿಸಿದ ಪ್ರೀತಿ, ಒಳ್ಳೆಯ ತನದೊಟ್ಟಿಗೆ ಅಭ್ಯರ್ಥಿ ಕಿರಣ್ ಕೊಡ್ಗಿ ನಿಷ್ಕಳಂಕ ವ್ಯಕ್ತಿತ್ವ ಕುಂದಾಪುರದಲ್ಲಿ ನಿರೀಕ್ಷೆಗೂ ಮೀರಿ ಮತದಾರರು ಸ್ಪಂದಿಸಿದ್ದು, ಒಳ್ಳೆಯ ತನ ಗೆದ್ದಿದೆ. ಹಾಗೆ ಬಿಜೆಪಿ ವಿರೋಧ ಪಕ್ಷದ ಸಾಲಿನಲ್ಲಿದ್ದು, ಕಾಂಗ್ರೆಸ್ ಕೊಟ್ಟ ಗ್ಯಾರೆಂಟಿ ಈಡೇರಿಸದಿದ್ದರೆ ಕಾರ್ಯಕರ್ತರು ಬೀದಿಗಳಿದು ಹೋರಾಟಕ್ಕೂ ಸಿದ್ದರಾಗಬೇಕು ಎಂದು ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಕರೆ ಕೊಟ್ಟರು. ಕುಂದಾಪುರ ಮಂಡಲ ಬಿಜೆಪಿ ಕೋಟೇಶ್ವರ ಸರಸ್ವತಿ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಆಯೋಜಿಸಿದ ನೂತನ ಶಾಸಕ ಕಿರಣ್ ಕುಮಾರ್ ಕೊಡ್ಗಿ ಅಭಿನಂದನೆ ಹಾಗೂ ಕಾರ್ಯಕರ್ತರ ಕೃತಜ್ಞತೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಕುಂದಾಪುರ ಮಂಡಲ ಬಿಜೆಪಿ ಅಧ್ಯಕ್ಷ ಶಂಕರ ಅಂಕದಕಟ್ಟೆ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ಕೊಯಿಲಾಡಿ ಸುರೇಶ್ ನಾಯಕ್, ಮಾಜಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ಶಾಸಕ ಕಿರಣ್ ಕುಮಾರ್ ಕೊಡ್ಗಿ, ಕುಂದಾಪುರ ಚುನಾವಣಾ ಉಸ್ತುವಾರಿ ಶ್ಯಾಮಲಾ ಕುಂದರ್, ಮಹಿಳಾ ಮೋರ್ಚಾ ಜಿಲ್ಲಾ ಉಪಾಧ್ಯಕ್ಷೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿಬೆಂಗಳೂರು: ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುತ್ತದೆ. 5 ಗ್ಯಾರಂಟಿಗಳಿಗೆ ತಾತ್ವಿಕವಾಗಿ ಸಂಪುಟದಲ್ಲಿ ಒಪ್ಪಿಗೆ ನೀಡಿದ್ದೇವೆ. ನಾವು ಕರ್ನಾಟಕವನ್ನು ಆರ್ಥಿಕ ದಿವಾಳಿಗೆ ಸಿಲುಕಿಸದೆ ನಾವು ಗ್ಯಾರಂಟಿಗಳನ್ನು ಈಡೇರಿಸುತ್ತೇವೆ ಎಂದು ರಾಜ್ಯದ ನೂತನ ಸಿಎಂ ಸಿದ್ದರಾಮಯ್ಯ ಹೇಳಿದರು. ಕಾಂಗ್ರೆಸ್ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿ ಮೊದಲ ಸಚಿವ ಸಂಪುಟ ಸಭೆಯಲ್ಲಿ ಐದು ಗ್ಯಾರಂಟಿ ಯೋಜನೆಗಳಿಗೆ ಒಪ್ಪಿಗೆ ನೀಡಲಾಗಿದೆ. ಇದರಿಂದ 50 ಸಾವಿರ ಕೋಟಿ.ರೂ ಹೊರೆಯಾಗಬಹುದು ಎಂದು ಅಂದಾಜಿಸಲಾಗಿದೆ. ಗೃಹ ಜ್ಯೋತಿ ಯೋಜನೆಯಡಿ ತಿಂಗಳಿಗೆ 200 ಯೂನಿಟ್ ಉಚಿತ ವಿದ್ಯುತ್ ನೀಡುತ್ತೇವೆ. ಇದಕ್ಕೆ ಸುಮಾರು ತಿಂಗಳಿಗೆ 1200 ಕೋಟಿ ರೂ. ಆಗಬಹುದು. ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ಮನೆ ಯಜಮಾನಿಗೆ ಪ್ರತಿ ತಿಂಗಳು 200 ರೂ. ಹಾಕಲಾಗುವುದು. ಅನ್ನ ಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿ, ಈ ವರ್ಷದ ಪದವೀದರ, ಪಿಎಚ್ಡಿ, ಎಂಬಿಬಿಎಸ್ ಪದವೀದರ ನಿರುದ್ಯೋಗಿಗಳಿಗೆ ಎರಡೂವರೆ ವರ್ಷಗಳ ವರೆಗೆ ತಿಂಗಳಿಗೆ ಮೂರು ಸಾವಿರ ರೂ. ನೀಡಲಾಗುವುದು. ಈ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಮೇ19: ನಾರಾಯಣ ನೇತ್ರಾಯಲಯದ ಅಧ್ಯಕ್ಷ,  ಕುಂದಾಪುರ ತಾಲೂಕು ಶಂಕರನಾರಾಯಣ ಮೂಲದ ಡಾ। ಭುಜಂಗ ಶೆಟ್ಟಿ (69) ಇಂದು ನಿಧನರಾದರು. ಇಂದು ಆಸ್ಪತ್ರೆಗೆ ತೆರಳಿ ಕಣ್ಣಿನ ರೋಗಿಗಳಿಗೆ ಚಿಕಿತ್ಸೆ ನೀಡಿ ಮನೆಗೆ ವಾಪಸ್ಸಾಗಿದ್ದ ಭುಜಂಗ ಶೆಟ್ಟಿ ಅವರಿಗೆ ಸಂಜೆ ತೀವ್ರ ಹೃದಯಾಘಾತ ಉಂಟಾಗಿತ್ತು. ಹೃದಯಾಘಾತ ಸಂಭವಿಸಿದ್ದ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಭುಜಂಗ ಶೆಟ್ಟಿ ಅವರು ದೇಶದ ಖ್ಯಾತ ನೇತ್ರ ತಜ್ಞರಾಗಿದ್ದರು. ಭುಜಂಗ ಶೆಟ್ಟಿ ಅವರು ಬಾಲ್ಯದ ಶಿಕ್ಷಣವನ್ನು ಶಂಕರನಾರಾಯಣ ಹಾಗೂ ಸಾಗರ ಕಾರ್ಗಲ್‌ನಲ್ಲಿ ಪಡೆದಿದ್ದರು. 1978 ರಲ್ಲಿ ಬೆಂಗಳೂರು ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ಮಾಡಿದ್ದರು. 1982 ರಲ್ಲಿ ಬೆಂಗಳೂರು ವೈದ್ಯಕೀಯ ಕಾಲೇಜಿನ ಮಿಂಟೋ ಆಪ್ತಾಲ್ಮಿಕ್ ಆಸ್ಪತ್ರೆಯಲ್ಲಿ ನೇತ್ರಶಾಸ್ತ್ರದಲ್ಲಿ ರೆಸಿಡೆನ್ಸಿ ತರಬೇತಿ ಪಡೆದಿದ್ದರು. 80ರ ದಶಕದಲ್ಲಿ ಸಣ್ಣ ಕ್ಲಿನಿಕ್ನಲ್ಲಿ ನೇತ್ರ ಚಿಕಿಯ್ಸಾಲಯವನ್ನು ಪ್ರಾರಂಭಿಸಿದ ಡಾ. ಭುಜಂಗ ಶೆಟ್ಟಿ ನಾರಾಯಣ ನೇತ್ರಾಯಲದ ಅಧ್ಯಕ್ಷರಾಗಿದ್ದರು. ಭುಜಂಗ ಶೆಟ್ಟಿ ನಾರಾಯಣ ನೇತ್ರಾಲಯದಲ್ಲಿ ವಿವಿಧ ಉಪವಿಭಾಗಗಳ ಅಭಿವೃದ್ಧಿಯನ್ನು ಸಕ್ರಿಯವಾಗಿ ಪ್ರೋತ್ಸಾಹಿಸಿದ್ದಾರೆ…

Read More