Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ ಹಾಗೂ ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ ಇವರ ಸಹಯೋಗದಲ್ಲಿ ನಡೆದ ಜಿಲ್ಲಾ ಮಟ್ಟದ ಬಾಕ್ಸಿಂಗ್‌ನಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಅನ್ವಿತ್ ಪೂಜಾರಿ ಬಾಕ್ಸಿಂಗ್ ಅಖಾಡದಲ್ಲಿ ಚಿನ್ನದ ಪದಕ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿ, ದಿತೀಜ್ ಬೆಳ್ಳಿ ಪದಕದ ಸಾಧನೆಯೊಂದಿಗೆ ಕಾಲೇಜಿಗೆ ಕೀರ್ತಿ ತಂದಿದ್ದಾರೆ. ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಬೋಧಕ – ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ವಂಡ್ಸೆ ಭಾಗದ ಪ್ರಮುಖ ಕಾಂಗ್ರೆಸ್ ನಾಯಕರಾಗಿ ಗುರುತಿಸಿಕೊಂಡಿರುವ ಹಾಗೂ ನಾಲ್ಕು ಬಾರಿ ವಂಡ್ಸೆ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುವ ಉದಯ್ ಕುಮಾರ್ ಶೆಟ್ಟಿ ಅವರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು. ಸಂಸದರಾದ ಬಿ.ವೈ. ರಾಘವೇಂದ್ರ ಹಾಗೂ ಬೈಂದೂರು ಶಾಸಕರಾದ ಗುರುರಾಜ್ ಗಂಟಿಹೊಳೆ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉದಯ್ ಕುಮಾರ್ ಶೆಟ್ಟಿ ಅವರು ಬಿಜೆಪಿ ಪಕ್ಷದ ಧ್ವಜ ಸ್ವೀಕರಿಸುವ ಮೂಲಕ ಅಧಿಕೃತವಾಗಿ ಪಕ್ಷಕ್ಕೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದು, ನೂತನವಾಗಿ ಪಕ್ಷಕ್ಕೆ ಸೇರ್ಪಡೆಗೊಂಡ ಉದಯ್ ಕುಮಾರ್ ಶೆಟ್ಟಿ ಅವರನ್ನು ಆತ್ಮೀಯವಾಗಿ ಸ್ವಾಗತಿಸಿದರು. ಸಾಮಾಜಿಕ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಅನುಭವ ಹೊಂದಿರುವ ಉದಯ್ ಕುಮಾರ್ ಶೆಟ್ಟಿ ಅವರ ಸೇರ್ಪಡೆಯಿಂದ ಪಕ್ಷದ ಸಂಘಟನಾ ಚಟುವಟಿಕೆಗಳಿಗೆ ಮತ್ತಷ್ಟು ಬಲ ದೊರೆಯಲಿದೆ ಎಂದು ಮುಖಂಡರು ವಿಶ್ವಾಸ ವ್ಯಕ್ತಪಡಿಸಿದರು. ಸಂಸದ ಬಿ.ವೈ. ರಾಘವೇಂದ್ರ ಹಾಗೂ ಶಾಸಕ ಗುರುರಾಜ್ ಗಂಟಿಹೊಳೆ ಅವರ ನೇತೃತ್ವದಲ್ಲಿ ಪಕ್ಷದ ಸಂಘಟನೆ ಮತ್ತಷ್ಟು ಬಲಿಷ್ಠಗೊಳ್ಳುತ್ತಿದೆ ಎಂಬುದಕ್ಕೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಸ್ವಚ್ಛತೆ ನಮ್ಮ ಮನೆಯಲ್ಲಿ ಪ್ರಾರಂಭಗೊಳ್ಳಬೇಕು, ಪರಿಸರವನ್ನು ಮಲಿನಗೊಳಿಸುವ ಮನಸ್ಥಿತಿ ಬಿಟ್ಟು ಪ್ರತಿಯೊರ್ವರು ಸ್ವಚ್ಛತೆಯಡೆ ಮುಖ ಮಾಡಬೇಕು‌ ಎಂದು ತೆಕ್ಕಟ್ಟೆ ಗ್ರಾಮಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಂತೋಷ್ ಕುಮಾರ್ ಹೇಳಿದರು. ಅವರು ಭಾನುವಾರ ಪಂಚವರ್ಣ ಯುವಕ ಮಂಡಲ ಕೋಟ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಕೋಟ ನೇತೃತ್ವದಲ್ಲಿ 319ನೇ ಭಾನುವಾರದ ಪರಿಸರಸ್ನೇಹಿ ಅಭಿಯಾನದ ಪ್ರಯುಕ್ತ ಗೀತಾನಂದ ಫೌಂಡೇಶನ್ ಮಣೂರು, ತೆಕ್ಕಟ್ಟೆ ಗ್ರಾಮಪಂಚಾಯತ್ , ಎಸ್ ಎಲ್ ಆರ್ ಎಂ ಘಟಕ ತೆಕ್ಕಟ್ಟೆ, ರೋಟರಿ ಸಮುದಾಯ ದಳ ಕೋಟೇಶ್ವರ ಇವರ ಸಹಯೋಗದೊಂದಿಗೆ ಸ್ವಚ್ಛತಾ ಹೀ ಸೇವಾ ಅಂಗವಾಗಿ ತೆಕ್ಕಟ್ಟೆ ಕೊಮೆ ಬೀಚ್ ಸ್ವಚ್ಛತಾ ಅಭಿಯಾನದಲ್ಲಿ ಮಾತನಾಡಿದರು. ಪಂಚವರ್ಣದಂತಹ ಸಂಘಟನೆಗಳು‌ ಗ್ರಾಮ ಗ್ರಾಮದಲ್ಲಿದ್ದರೆ ಆ ಗ್ರಾಮಗಳು ಸುಂದರ ಸ್ವಚ್ಛ ಗ್ರಾಮಗಳಾಗಿ ಮೂಡಿಬರಲು ಸಾಧ್ಯ,ಸಂಘಸಂಸ್ಥೆಗಳು ಸದಾ ಕ್ರಿಯಾಶೀಲತೆಯಿಂದಿದ್ದರೆ ಸಾಮಾಜಿಕ ಸ್ವಾಸ್ಥ್ಯ ಕಾಪಾಡಲು ಸಾಧ್ಯ ಎಂದರು. ಜಿಲ್ಲಾಡಳಿತ ಕರೆ ಕೊಟ್ಟ ಸ್ವಚ್ಛತಾ ಹೀ ಸೇವಾ ಅಂಗವಾಗಿ ಪ್ರತಿಜ್ಞಾವಿಧಿಯನ್ನು ತೆಕ್ಕಟ್ಟೆ ಎಸ್ ಎಲ್ ಆರ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯ ಗಣಕ ವಿಭಾಗ ಮತ್ತು ವಾಣಿಜ್ಯ ಹಾಗೂ ವ್ಯವಹಾರ ಆಡಳಿತ ವಿಭಾಗದ ಜಂಟಿ ಆಶ್ರಯದಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗಾಗಿ “ಮೈಂಡ್, ಕ್ಯಾಲೆಂಡರ್ ಮತ್ತು ನಂಬರ್ಸ್” ಕುರಿತು ಸಂವಾದಾತ್ಮಕ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳಲ್ಲಿ ಗಣಿತದ ಲೆಕ್ಕಾಚಾರಗಳಲ್ಲಿ ವೇಗ ಮತ್ತು ನಿಖರತೆಯನ್ನು ಬೆಳೆಸುವ ಉದ್ದೇಶದಿಂದ ಸರಳ ವಿಧಾನಗಳು, ಶಾರ್ಟ್‌ಕಟ್‌ಗಳು ಮತ್ತು ಉಪಯುಕ್ತ ಸೂತ್ರಗಳನ್ನು ಈ ಸಂದರ್ಭದಲ್ಲಿ ಪರಿಚಯಿಸಲಾಯಿತು. ಸ್ಪರ್ಧಾತ್ಮಕ ಪರೀಕ್ಷೆಗಳು ಮತ್ತು ಆಪ್ಟಿಟ್ಯೂಡ್ ಆಧಾರಿತ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಈ ತಂತ್ರಗಳು ಉಪಯುಕ್ತವಾಗಲಿವೆ. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಕುಂದಾಪುರದ ಕ್ಯಾಲೆಂಡರ್ ತಜ್ಞರಾದ ಎಂ. ಲಕ್ಷ್ಮಣ ಶೆಟ್ಟಿ ಅವರು ವಿವಿಧ ಲೆಕ್ಕಾಚಾರ ವಿಧಾನಗಳನ್ನು ಪ್ರಾತ್ಯಕ್ಷಿಕೆಯ ಮೂಲಕ ತೋರಿಸಿಕೊಟ್ಟು, ಸುಲಭವಾಗಿ ಅರ್ಥವಾಗುವ ತಂತ್ರಗಳೊಂದಿಗೆ ವಿದ್ಯಾರ್ಥಿಗಳನ್ನು ತೊಡಗಿಸಿಕೊಂಡರು. ಕಾರ್ಯಕ್ರಮವನ್ನು ಗಣಕ ವಿಭಾಗದ ಮುಖ್ಯಸ್ಥರಾದ ಸ್ವರ್ಣರಾಣಿ ಯು.ಪಿ. ಮತ್ತು ವಾಣಿಜ್ಯ ಹಾಗೂ ವ್ಯವಹಾರ ಆಡಳಿತ ವಿಭಾಗದ ಮುಖ್ಯಸ್ಥರಾದ ಶಿಲ್ಪಾಶ್ರೀ ಅವರು ಸಂಯೋಜಿಸಿದ್ದರು. ಈ ಕಾರ್ಯಕ್ರಮವು ವಿದ್ಯಾರ್ಥಿಗಳ ಭವಿಷ್ಯದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಸೇವಾ ಸಂಗಮ ವಿದ್ಯಾಕೇಂದ್ರ ವಿದ್ಯಾಗಿರಿ–ತೆಕ್ಕಟ್ಟೆ ವತಿಯಿಂದ ವಿವಿಧ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುರೇಶ್ ಬೆಟ್ಟಿನ್ ಅವರು ಸನ್ಮಾನಿಸಿ ಅಭಿನಂದಿಸಿದರು. ಪ್ರಗತಿಪರ ಸೇವಾ ಸಂಸ್ಥೆ ರಿ., ಮಂಡ್ಯ ಇವರು ಆಯೋಜಿಸಿದ್ದ 22ನೇ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆ 2026–27ರಲ್ಲಿ ಭಾಗವಹಿಸಿದ 7ನೇ ತರಗತಿಯ ಅಪರ್ಣ ಪ್ರಭು, 6ನೇ ತರಗತಿಯ ಅದ್ವಿತ್ ಯು.ಜಿ., 5ನೇ ತರಗತಿಯ ಮನ್ವಿತ್ ಕಾರಂತ್, 4ನೇ ತರಗತಿಯ ರೋಷನ್ ಜೆ., 3ನೇ ತರಗತಿಯ ಧೃತಿಶ್ರೀ, 2ನೇ ತರಗತಿಯ ರಿಷಾ, 1ನೇ ತರಗತಿಯ ರಿಧಿ ಎನ್. ಹಾಗೂ ಯುಕೆಜಿಯ ಚಿನ್ಮಯಿ ಎಸ್. ಐತಾಳ್ ಅವರನ್ನು ಅಭಿನಂದಿಸಲಾಯಿತು. ಅದೇ ರೀತಿ, ವಿದ್ಯಾ ಭಾರತಿ ಶಿಕ್ಷಾ ಸಂಸ್ಥಾನ, ಕರ್ನಾಟಕ ಆಯೋಜಿಸಿದ್ದ ಕ್ರೀಡಾಕೂಟದ ಚಕ್ರ ಎಸೆತ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ 7ನೇ ತರಗತಿಯ ಯಷಿ ಹಾಗೂ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಭಾಗವಹಿಸಿದ 6ನೇ ತರಗತಿಯ ಭವಿಷ್ ಎಸ್. ಪೂಜಾರಿ, ಸಮುದ್ಯತಾ ವೈ.ಪಿ. ಮತ್ತು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಶಿವಮೊಗ್ಗ ಇವರ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ ವೇಯ್ಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಆಳ್ವಾಸ್ ಪದವಿಪೂರ್ವ ಕಾಲೇಜಿನ ಬಾಲಕ – ಬಾಲಕಿಯರ ತಂಡ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿತು. ಹುಡುಗರ ವಿಭಾಗದಲ್ಲಿ 04 ಚಿನ್ನ, 01 ಬೆಳ್ಳಿ ಒಟ್ಟು 05 ಪದಕ ಪಡೆದುಕೊಂಡರು. ಹುಡುಗಿಯರ ವಿಭಾಗದಲ್ಲಿ 04 ಚಿನ್ನ, 01 ಬೆಳ್ಳಿ ಒಟ್ಟು 05 ಪದಕದೊಂದಿಗೆ ಎರಡು ವಿಭಾಗದಲ್ಲಿ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡರು. ಹುಡುಗರ ವಿಭಾಗದಲ್ಲಿ: 60 ಕೆಜಿ – ಸಂತೋಷ್ (ದ್ವಿತೀಯ), 71 ಕೆಜಿ – ಪ್ರಫುಲ್ (ಪ್ರಥಮ), 79 ಕೆಜಿ – ಪ್ರಜ್ವಲ್ (ಪ್ರಥಮ), 88 ಕೆಜಿ – ಶ್ರೇಯಸ್ (ಪ್ರಥಮ), 110 ಕೆಜಿ – ಜೇಷ್ಠ (ಪ್ರಥಮ). ಹುಡುಗಿಯರ ವಿಭಾಗದಲ್ಲಿ: 48 ಕೆಜಿ – ಸಂಜನಾ (ದ್ವಿತೀಯ), 53 ಕೆಜಿ – ಸೌಮ್ಯ (ಪ್ರಥಮ), 58 ಕೆಜಿ – ಮೈತ್ರಿ (ಪ್ರಥಮ), 63…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕುಂದಾಪುರ ಇದರ ವತಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅಮಾಸೆಬೈಲುವಿನಲ್ಲಿ ನಡೆದ 14 ವರ್ಷ ವಯೋಮಾನದೊಳಗಿನವರ ವಲಯ ಮಟ್ಟದ ಕ್ರೀಡಾಕೂಟದಲ್ಲಿ ವಿದ್ಯಾರಣ್ಯ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಗೈದಿದ್ದಾರೆ. 8ನೇ ತರಗತಿಯ ವಿದ್ಯಾರ್ಥಿಗಳಾದ ಪ್ರಖ್ಯಾತ್‌ ಗುಂಡು ಎಸೆತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಹಾಗೂ ಚಕ್ರಎಸೆತ (ಡಿಸ್ಕಸ್ ಥ್ರೋ) ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ ಹಾಗೇ ಅಂಕಿತ್‌ 100 ಮೀಟರ್‌ ಓಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಹಾಗೂ 200 ಮೀಟರ್‌ ಓಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಲಿಯೋನ್‌ ಡಿ.ಎಸ್‌. ಗುಂಡು ಎಸೆತ ಸ್ಪರ್ಧೆಯಲ್ಲಿ ತೃತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ. ಅಪೂರ್ವ ಪ್ರತಿಭೆ ಪ್ರದರ್ಶಿಸಿ ವಿಜೇತರಾದ ಪ್ರಖ್ಯಾತ್‌ ಹಾಗೂ ಅಂಕಿತ್‌ ಅವರು ತಾಲೂಕು ಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಸುಜ್ಞಾನ ಎಜುಕೇಶನಲ್‌ ಟ್ರಸ್ಟ್‌ನ ಅಧ್ಯಕ್ಷರಾದ ಡಾ. ರಮೇಶ್‌ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್‌ ಚಂದ್ರ ಶೆಟ್ಟಿ, ಖಜಾಂಚಿ ಭರತ್‌ ಶೆಟ್ಟಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶಿವಮೊಗ್ಗದಲ್ಲಿ ನಡೆದ ರಾಜ್ಯ ಮಟ್ಟದ weight lifting ಚಾಂಪಿಯನ್‌ಶಿಪ್‌ನಲ್ಲಿ ತೆಕ್ಕೆಟ್ಟೆಯ ವಿಶ್ವ ವಿನಾಯಕ ಕಾಲೇಜಿನ ಪ್ರಥಮ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಶಮಂತ್ ಅವರು 71 ಕೆ.ಜಿ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದು ಬೆಳ್ಳಿ ಪದಕ ಗಳಿಸಿದ್ದಾರೆ. ಈ ಸಾಧನೆ ಕಾಲೇಜಿಗೆ ಕೀರ್ತಿ ತಂದಿದ್ದು, ವಿದ್ಯಾರ್ಥಿಯ ಈ ಕ್ರೀಡಾ ಸಾಧನೆಯನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಹೃತ್ಪೂರ್ವಕವಾಗಿ ಸಲ್ಲಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಇಲ್ಲಿನ ರಾಮಕ್ಷತ್ರಿಯ ಯುವಕ ಸಮಾಜ ನೇತೃತ್ವದಲ್ಲಿ ಅಕ್ಟೋಬರ್‌ 17ರಿಂದ 20ರ ತನಕ 40ನೇ ವರ್ಷದ ಶ್ರೀ ಶಾರದೋತ್ಸವ ಸಮಾರಂಭವು ಅದ್ದೂರಿಯಾಗಿ ಜರುಗಲಿದೆ. ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಶ್ರೀ ಸೀತಾರಾಮಚಂದ್ರ ದೇವಸ್ಥಾನದಲ್ಲಿ ಜರುಗಿತು. ಬೈಂದೂರು ರಾಮಕ್ಷತ್ರಿಯ ಸಮಾಜದ ಅಧ್ಯಕ್ಷರಾದ ಗುರುದತ್ತ ಹೆಬ್ಬಾಗಿಲುಮನೆ ತಗ್ಗರ್ಸೆ ಮತ್ತು ಶ್ರೀ ರಾಮ ವಿವಿಧೊದ್ದೇಶ ಟ್ರಸ್ಟ್‌ ಅಧ್ಯಕ್ಷರಾದ ರಾಮಕೃಷ್ಣ ಶೇರುಗಾರ್ ಬಿಜೂರು ಉಪಸ್ಥಿತಿಯಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಲಾಯಿತು. ಈ ವೇಳೆ ಸಮಾಜದ ಪ್ರಮುಖರಾದ ಸುಬ್ರಾಯ ಸೋಡಿತಾರ್, ಜಯಾನಂದ ಹೋಬಳಿದಾರ್, ಸದಾಶಿವ ಡಿ. ಪಡುವರಿ, ಕೃಷ್ಣಯ್ಯ ಮದ್ದೋಡಿ ವೆಂಕಟರಮಣ ಬಿಜೂರು, ಶಿವಾನಂದ ಮುದ್ದೋಡಿ, ದಿನಕರ ಹೋಬಳಿದಾರ್,‌ ಆನಂದ ಮುದ್ದೋಡಿ, ಸೀತಾರಾಮ ಎಸ್., ವಾಸುದೇವ ಕೆ. ಹಾಗೂ ಯುವಕ ಸಮಾಜದ, ಗೌರವಾಧ್ಯಕ್ಷ ರಾಜಶೇಖರ್ ರೊಕ್ಕನ್‌, ಅಧ್ಯಕ್ಷ ರಾಜೇಶ್‌ ಕಲ್ಲುಕಂಟ, ಪ್ರಧಾನ ಕಾರ್ಯದರ್ಶಿ ನಿತ್ಯಾನಂದ ದಡ್ಡು, ಕಾರ್ಯದರ್ಶಿ ಶಿವಾನಂದ ದುಬಾರಿ, ಮಾತೃ ಮಂಡಳಿ ಅಧ್ಯಕ್ಷರಾದ ಸೀತಾ ಭಾಸ್ಕರ,, ವಸಂತಿ ಮದ್ದೋಡಿ ಇನ್ನಿತರರು ಉಪಸ್ಥಿತರಿದ್ದರು. ಶ್ರೀ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಯಕ್ಷಗಾನ ಸಂಘದ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮ ಕಾಲೇಜಿನ ಎ.ವಿ ಹಾಲ್‌ನಲ್ಲಿ ನಡೆಯಿತು. ವ್ಯವವಾರ ಆಡಳಿತ ವಿಭಾಗದ ಸಹಾಯಕ ಪ್ರಾಧ್ಯಾಪಕ, ಹವ್ಯಾಸಿ ಯಕ್ಷಗಾನ ಕಲಾವಿದ ರವಿನಂದನ್ ಭಟ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು. ಸಾಂಪ್ರದಾಯಿಕ ಯಕ್ಷಗಾನ, ಹೆಜ್ಜೆಗಳು, ಯಕ್ಷಗಾನದ ಪೂರ್ವರಂಗ, ತಾಳ ಹಾಗೂ ವಿವಿಧ ಮಟ್ಟುಗಳ ಕುರಿತು ಮಾಹಿತಿ ನೀಡಿದರು. ಇದೇ ಸಂದರ್ಭ ಅವರು ಕಾಲೇಜಿನ ಯಕ್ಷಗಾನ ಸಂಘದ ಆಶ್ರಯದಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷ ಹಮ್ಮಿಕೊಳ್ಳಲಾಗುವ ವೈವಿಧ್ಯಮಯ ಕಾರ್ಯಕ್ರಮಗಳ ಕುರಿತು ತಿಳಿಸಿದರು. ಕಾಲೇಜಿನ ಪ್ರಾಂಶುಪಾಲ ಡಾ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪ-ಪ್ರಾಂಶುಪಾಲ ಹಾಗೂ ಯಕ್ಷಗಾನ ಸಂಘದ ಸಂಯೋಜಕ ಡಾ. ಚೇತನ್ ಶೆಟ್ಟಿ ಕೋವಾಡಿ ಪ್ರಸ್ತಾವಿಸಿದರು. ವಿದ್ಯಾರ್ಥಿಗಳಾದ ಶಿಲ್ಪ ಸಂಪನ್ಮೂಲ ವ್ಯಕ್ತಿಗಳನ್ನು ಪರಿಚಯಿಸಿ, ಮೇಘನಾ ಸ್ವಾಗತಿಸಿ, ಸುಶ್ಮಿತಾ ಕಾರ್ಯಕ್ರಮ ನಿರೂಪಿಸಿದರು.

Read More