ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವಿಶ್ವ ಕುಂದಾಪುರ ಕನ್ನಡ ಹಬ್ಬದ ಸಂಭ್ರಮ ಮನೆಮಾಡಿತ್ತು. ಟೀಮ್ ಕುಂದಾಪುರಿಯನ್ಸ್ ವತಿಯಿಂದ ಬಸವೇಶ್ವರ ನಗರದಲ್ಲಿ ಮಾತಿನ್ ಹಬ್ಬ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು. ಇಲ್ಲಿ ಕುಂದಾಪುರಿಗರು ಎದುರಿಸುತ್ತಿರೋ ಸಮಸ್ಯೆ ಹಾಗೂ ಕನಸಿನ ಕುಂದಾಪುರದ ಬಗ್ಗೆ ಹಲವು ನಿರ್ಣಯ ಕೈಗೊಳ್ಳಲಾಯ್ತು. ಬದುಕು ಕಟ್ಟಕೊಳ್ಳುವ ಸಲುವಾಗಿ ಊರು ಬಿಟ್ಟು ಬೆಂಗಳೂರಿನಲ್ಲಿ ನೆಲೆಯಾದ ಕುಂದಾಪುರ ಭಾಗದವರೇ ಸೇರಿ ಕಟ್ಟಿದ ತಂಡವೇ ಟೀಂ ಕುಂದಾಪುರಿಯನ್ಸ್. ಈಗಾಗಲೇ ಹತ್ತು-ಹಲವು ಸಾಮಾಜಿಕ ಕಾರ್ಯಗಳ ಮೂಲಕ ಮಹಾನಗರಿಯಲ್ಲಿ ಮನೆಮಾತಾದ ತಂಡ, ಇಂದು ಕುಂದಾಪುರದ ಹಬ್ಬದ ಮೂಲಕ ತಮ್ಮ ಭಾಷಾ ಪ್ರೇಮ ಮತ್ತು ಬದ್ದತೆಯನ್ನ ಮೆರೆದಿದೆ. ಕುಂದಾಪುರದ ಗ್ರಾಮೀಣ ಸೊಗಡಿನ ಅಟ:ಮಾತಿನ ಹಬ್ಬ ಕಾರ್ಯಕ್ರಮದಲ್ಲಿ ಕಾರ್ಯಕ್ರಮದಲ್ಲಿ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಕುಂದಾಪುರ ಕನ್ನಡ ಪ್ರತಿಷ್ಠಾನದ ಕಾರ್ಯದರ್ಶಿ ರಾಘವೇಂದ್ರ ಕಾಂಚನ್, ದೀಪಕ್ ಶೆಟ್ಟಿ ಬಾರ್ಕೂರು, ನಟ ಕವೀಶ್ ಶೆಟ್ಟಿ, ಸಮಾಜಸೇವಕ ಗೋವಿಂದ್ ಪೂಜಾರಿ, ಅಜಿತ್ ಶೆಟ್ಟಿ ಉಳ್ತೂರು ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು. ಇದೇ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಅತ್ಯುತ್ತಮವಾಗಿ ಪ್ರತಿಭೆಯನ್ನು ತೋರ್ಪಡಿಸುವತಂಹ ವಿದ್ಯಾರ್ಥಿಗಳಿಗೆ ಸಮಾಜ ಮೆರವಣಿಗೆ ಮಾಡುತ್ತದೆ. ಸೊಮಾರಿಗಳಾಗಿ ಎಲ್ಲೋ ಮೂಲೆಯಲ್ಲಿ ಕುಳಿತರೇ ನಿಮ್ಮನ್ನು ಈ ಸಮಾಜ ಗುರುತಿಸುವುದಿಲ್ಲ ಎಂದು ಶಾಲಾ ಉಪಪ್ರಾಂಶುಪಾಲ ಚಂದ್ರಶೇಖರ ಶೆಟ್ಟಿ ಹೇಳಿದರು. ಅವರು ಕೋಟೇಶ್ವರದ ಕರ್ನಾಟಕ ಪಬ್ಲಿಕ್ ಸ್ಕೂಲಿನಲ್ಲಿ ಶುಕ್ರವಾರ ಹಳೇ ವಿದ್ಯಾರ್ಥಿ ಸಂಘದಿಂದ ಜರುಗಿದ ’ಸ್ನೇಹ ಸಂಗಮ’ ಕಾರ್ಯಕ್ರಮದಲ್ಲಿ ಕಳೆದ ಬಾರಿಯ ಪರೀಕ್ಷೆಗಳಲ್ಲಿ ಅತ್ಯಧಿಕ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಹತ್ತನೇ ವರ್ಷದ ಪ್ರತಿಭಾ ಪುರಸ್ಕಾರ ಪ್ರೋತ್ಸಾಹ ಧನ ವಿತರಣಾ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಲಿಕೆ, ಸಾಂಸ್ಕೃತಿಕ, ಕ್ರೀಡಾ ಕ್ಷೇತ್ರ ಯಾವುದಾದರಲ್ಲಿ ಕೂಡ ನಾವು ಪ್ರತಿಭಾವಂತರಾದರೇ ನಮ್ಮನ್ನು ಹೊತ್ತು ಮೆರವಣಿಗೆ ಮಾಡುವ ವಿವಿಧ ಸಂಸ್ಥೆಗಳು ಈ ಸಮಾಜದಲ್ಲಿವೆ. ಸಂಘಟನೆಯ ಆರಂಭ ಮಾಡುವುದು ಸುಲಭ ಅದನ್ನು ಮುನ್ನೆಡೆಸಿಕೊಂಡು ಹೋಗುವುದು ಬಹಳ ಕಠಿಣ. ಇತಂಹ ದುರ್ಗಮ ಪರಿಸ್ಥಿತಿಯಲ್ಲೂ ಕೂಡ ಈ ಕಾರ್ಯ ಮುಂದುವರೆಸಿಕೊಂಡು ಬಂದಿರುವುದರ ಜೊತೆಗೆ ಈ ಶಾಲೆಯಲ್ಲಿ ಕಲಿತು ಸಮಾಜದಲ್ಲಿ ಪಡೆದಕೊಂಡಿರುವುದನ್ನ ಸಮಾಜಕ್ಕೆ ಹಿಂದಿರುಗಿಸಿದ ಸ್ನೇಹ ಸಂಗಮದ ಕಾರ್ಯ ಶ್ಲಾಘನೀಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ರೋಟರಿ ಕ್ಲಬ್ ಬೈಂದೂರು ಹಾಗೂ ಇನ್ನರ್ವೀಲ್ ಕ್ಲಬ್ ಬೈಂದೂರು ಸಹಭಾಗಿತ್ವದಲ್ಲಿ ವನಮಹೋತ್ಸವ ಕಾರ್ಯಕ್ರಮವನ್ನು ರತ್ತು ಬಾಯಿ ಪ್ರೌಢಶಾಲೆಯಲ್ಲಿ ಆಚರಿಸಲಾಯಿತು. ವಿದ್ಯಾರ್ಥಿಗಳಿಗೆ ವೃಕ್ಷ ರಕ್ಷಣೆಯ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ರೋಟರಿ ಕ್ಲಬ್ ಬೈಂದೂರು ಅಧ್ಯಕ್ಷ ಪ್ರಸಾದ ಪ್ರಭು ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಇನ್ನರ್ವೀಲ್ ಅಧ್ಯಕ್ಷೆ ಚಂದ್ರಿಕಾ ರಾಮು, ಕಾರ್ಯದರ್ಶಿ ಮಾನಸ ರಾವ್, ಅರಣ್ಯ ಇಲಾಖೆಯ ರವಿರಾಜ್, ರೋಟರಿ ಪೂರ್ವಾಧ್ಯಕ್ಷರಾದ ಐ. ನಾರಾಯಣ, ಗೋವಿಂದ ಎಮ್.,ಉಪಸ್ಥಿತರಿದ್ದರು. ರತ್ತುಬಾಯಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಆನಂದ ಮದ್ದೋಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಇಂಟರಾಕ್ಟ್ ಸಂಯೋಜಕ ಪ್ರಕಾಶ ಮಾಕೋಡಿ ಕಾರ್ಯಕ್ರಮ ನಿರೂಪಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಧುವಿಗೆ ಇಷ್ಟವಿಲ್ಲದ ಮದುವೆಯೊಂದು 2 ತಿಂಗಳೋಳಗೆ ಮುರಿದು ಬಿದ್ದಿದೆ. ಮದುವೆಯಾಗಿ ನಾಲ್ಕೇ ದಿನ ಗಂಡನ ಮನೆಯಲ್ಲಿ ವಾಸವಿದ್ದು, ತವರು ಸೇರಿದ್ದ ಪತ್ನಿ, ಆಕೆಯ ಪೋಷಕರು ಹಾಗೂ ಪತ್ನಿ ಪ್ರಿಯಕರನ ವಿರುದ್ಧ ದೂರು ದಾಖಲಾದ ಘಟನೆ ಶಂಕರನಾರಾಯಣ ಪೊಲೀಸ್ ಠಾಣಾ ವ್ಯಕ್ತಿಯಲ್ಲಿ ನಡೆದಿದೆ. ತಾಲೂಕಿನ ಉಳ್ಳೂರು-74 ಗ್ರಾಮದ ಸಂಪಿಗೇಡಿ ನಿವಾಸಿ ಸಂಕೇತ್ ಶೆಟ್ಟಿ ಎಂಬುವವರೊಂದಿಗೆ ಹಾಗೂ ವಡೇರಹೋಬಳಿಯ ಸ್ಪೂರ್ತಿ ಶೆಟ್ಟಿ ಎಂಬವವರ ವಿವಾಹ ಮೇ. 21ರಂದು ನಡೆದಿತ್ತು. ಆದರೆ ಮದುವೆಯ ಬಳಿಕ ಸ್ಪೂರ್ತಿ ಶೆಟ್ಟಿ 4 ದಿನ ಮಾತ್ರ ಗಂಡನ ಮನೆಯಲ್ಲಿ ಇದ್ದು ಬಳಿಕ ಪದೇ ಪದೇ ತವರು ಮನೆಗೆ ಹೋಗುತ್ತಿದ್ದರು. ಈ ಬಗ್ಗೆ ಪತಿ ಸಂಕೇತ್ ಶೆಟ್ಟಿ ಪತ್ನಿಯಲ್ಲಿ ವಿಚಾರಿಸಿದಾಗ ಹೊಸದಾಗಿ ಮದುವೆಯಾಗಿರುವುದರಿಂದ ಹೊಂದಾಣಿಕೆ ಮಾಡಿಕೊಳ್ಳಲು ಸ್ವಲ್ಪ ಸಮಯಬೇಕು ಎಂಬ ಉತ್ತರ ಬಂದಿದೆ. ಇದಕ್ಕೆ ಪತಿಯೂ ಒಪ್ಪಿ ಸುಮ್ಮನಾಗಿದ್ದರು. ಆದರೆ ದಿನ ಕಳೆದಂತೆ ಪತ್ನಿ ಯಾರೊಂದಿಗೋ ಮೊಬೈಲ್ನಲ್ಲಿ ಮಾತನಾಡುತ್ತಿರುವುದು, ವಾಟ್ಸಪ್ ವೀಡಿಯೋ ಕಾಲಿಂಗ್ ಮಾಡುವುದನ್ನು ಹೆಚ್ಚು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಅಂಬರ್ಗ್ರಿಸ್ [ತಿಮಿಂಗಲ ವಾಂತಿ] ಎಂದು ಹೇಳಿ ವಂಚಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರು ವ್ಯಕ್ತಿಗಳನ್ನು ಬೈಂದೂರು ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ. ಶಿವಮೊಗ್ಗ ಮೂಲದವರಾದ ನಿರಂಜನ್ ಎಸ್ (26), ಮಿಲನ್ ಮೋನಿಶ್ ಶೆಟ್ಟಿ (27), ಪೃಥ್ವಿ ಡಾಮಿಕ್ (31) ಬಂಧಿತರು. ಬೈಂದೂರು ಹೊಸ ನಿಲ್ದಾಣದ ಬಳಿಕ ತಿಮಿಂಗಲದ ವಾಂತಿ ಎಂದು ಹೇಳಿಕೊಂಡು ಮಾರಾಟ ಮಾಡಲು ಹೊಂಚು ಹಾಕುತ್ತಿದ್ದ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ ವಶಕ್ಕೆ ಪಡೆದುಕೊಂಡಿದ್ದಾರೆ. ತಿಮಿಂಗಲ ವಾಂತಿ ಎಂದು ಹೇಳಿ 10 ಲಕ್ಷ ರೂ ಹಣಕ್ಕೆ ಸಾರ್ವಜನಿಕರಿಗೆ ಮಾರಾಟ ಮಾಡಿ ವಂಚಿಸಲು ಯತ್ನಿಸುತ್ತಿದು ಗಮನಕ್ಕೆ ಬಂದಿದೆ. ಆಪಾದಿತರನ್ನು ಬೈಂದೂರು ಪೊಲೀಸರು ವಶಕ್ಕೆ ಪಡೆದಿದ್ದು ಅವರಿಂದ ಸುಮಾರು 3 ಕೆ.ಜಿ 910 ಗ್ರಾಂ ತೂಕದ ಅಂಬರ್ಗ್ರಿಸ್ ಹೊಲುವ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ. ಬೈಂದೂರು ಉಪನಿರೀಕ್ಷಕ ನಿರಂಜನ್ ಗೌಡ, ಸಿಬ್ಬಂದಿಗಳಾದ ಅಶೋಕ್ ರಾತೋಡ್, ಶ್ರೀನಿವಾಸ್, ಸುಜಿತ್ ಕಾರ್ಯಾಚರಣೆ ನಡೆಸಿದ್ದಾರೆ. ಆರೋಪಿಗಳ ವಿರುದ್ಧ ಬೈಂದೂರು ಪೊಲೀಸ್ ಠಾಣೆಯಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ವಿದ್ಯಾಕುಮಾರಿ ಕೆ. ಐಎಎಸ್ ಅವರನ್ನು ನಿಯೋಜಿಸಲಾಗಿದೆ. ಜಿಲ್ಲಾಧಿಕಾರಿಯಾಗಿದ್ದ ಕೂರ್ಮರಾವ್ ಎಂ. ಅವರನ್ನು ವರ್ಗಾವಣೆ ಮಾಡಲಾಗಿದೆ. ವಿದ್ಯಾಕುಮಾರಿ ಅವರು ಉಳ್ಳಾಲ ತಾಲೂಕಿನ ಹಾವೂರು ಗ್ರಾಮದವರಾಗಿದ್ದು, 2014ರ ಬ್ಯಾಚ್ನ ಐಎಎಎಸ್ ಅಧಿಕಾರಿಯಾಗಿದ್ದಾರೆ. ಹುದ್ದೆಯ ನಿರೀಕ್ಷೆಯಲ್ಲಿದ್ದ ಅವರನ್ನು ತಕ್ಷಣದಿಂದ ಜಾರಿಯಾಗುವಂತೆ ಉಡುಪಿ ಜಿಲ್ಲಾಧಿಕಾರಿಯಾಗಿ ವರ್ಗಾವಣೆಗೊಳಿಸಿ ಆದೇಶಿಸಿದ್ದಾರೆ. ಕೂರ್ಮರಾವ್ ಅವರು ಹುದ್ದೆಯ ನಿರೀಕ್ಷೆಯಲ್ಲಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ದ್ವೇಷದ ರಾಜಕಾರಣ ನಡೆಸುತ್ತಾ, ಕೇಂದ್ರ ತನಿಖಾ ಸಂಸ್ಥೆಗಳ ದುರುಪಯೋ ಗ ಪಡಿಸಿಕೊಳ್ಳುತ್ತಿರುವ ಮತ್ತು ಸಾಂವಿಧಾನಿಕ ಸಂಸ್ಥೆಗಳ ಸ್ವಾತಂತ್ರ್ಯವನ್ನು ನಾಶಗೊಳಿಸುತ್ತಿದ್ದಾರೆ ಎಂದು ಆರೋಪಿಸಿ ಕೆ.ಪಿ.ಸಿ.ಸಿ ವತಿಯಿಂದ ರಾಹುಲ್ ಗಾಂಧಿಯವರ ಬೆಂಬಲವಾಗಿ ಇಂದು ದೇಶಾದ್ಯಂತ ಏಕಕಾಲದಲ್ಲಿ ನಡೆದ ಪ್ರತಿಭಟನಾ ಕಾರ್ಯಕ್ರಮದ ಭಾಗವಾಗಿ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬೈಂದೂರು ಮತ್ತು ವಂಡ್ಸೆ ಬ್ಲಾಕ್ ಕಾಂಗ್ರೆಸ್ನ ವತಿಯಿಂದ ಬುಧವಾರ ‘ಮೌನಪ್ರತಿಭಟನೆ’ ನಡೆಯಿತು. ಬೈಂದೂರು ಹೊಸ ಬಸ್ ನಿಲ್ದಾಣದಲ್ಲಿ ನಡೆದ ಪ್ರತಿಭಟನೆಯಲ್ಲಿ ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮದನ್ ಕುಮಾರ್ ಉಪ್ಪುಂದ, ಕಾಂಗ್ರೆಸ್ ಮುಖಂಡರುಗಳಾದ ರಘುರಾಮ ಶೆಟ್ಟಿ ಬಿಜೂರು, ಎಸ್. ರಾಜು ಪೂಜಾರಿ, ಎಸ್. ಪ್ರಕಾಶ್ಚಂದ್ರ ಶೆಟ್ಟಿ, ಕೆ. ಬಾಬು ಶೆಟ್ಟಿ, ಸದಾಶಿವ ಪಡುವರಿ, ನಾಗರಾಜ ಗಾಣಿಗ ಬಂಕೇಶ್ವರ, ಡಾ. ಸುಬ್ರಹ್ಮಣ್ಯ ಭಟ್, ನರಸಿಂಹ ಹಳಗೇರಿ, ಅರವಿಂದ ಪೂಜಾರಿ, ಶೇಖರ ಪೂಜಾರಿ ಉಪ್ಪುಂದ, ಜಗದೀಶ ದೇವಾಡಿಗ, ಮೋಹನ ಪೂಜಾರಿ ಉಪ್ಪುಂದ, ಗಣೇಶ್ ಪೂಜಾರಿ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ದ್ವೇಷದ ರಾಜಕಾರಣ ನಡೆಸುತ್ತಾ, ಕೇಂದ್ರ ತನಿಖಾ ಸಂಸ್ಥೆಗಳ ದುರುಪಯೋಗ ಪಡಿಸಿಕೊಳ್ಳುತ್ತಿರುವ ಮತ್ತು ಸಾಂವಿಧಾನಿಕ ಸಂಸ್ಥೆಗಳ ಸ್ವಾತಂತ್ರ್ಯವನ್ನು ನಾಶಗೊಳಿಸುತ್ತಿದ್ದಾರೆ ಎಂದು ಆರೋಪಿಸಿ ಕೆ.ಪಿ.ಸಿ.ಸಿ ವತಿಯಿಂದ ರಾಹುಲ್ ಗಾಂಧಿಯವರ ಬೆಂಬಲವಾಗಿ ಇಂದು ದೇಶಾದ್ಯಂತ ಏಕಕಾಲದಲ್ಲಿ ನಡೆದ ಪ್ರತಿಭಟನಾ ಕಾರ್ಯಕ್ರಮದ ಭಾಗವಾಗಿ ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕುಂದಾಪುರ ಮತ್ತು ಕೋಟ ಬ್ಲಾಕ್ ಕಾಂಗ್ರೆಸ್ನ ವತಿಯಿಂದ ಬುಧವಾರ ‘ಮೌನಪ್ರತಿಭಟನೆ’ ನಡೆಯಿತು. ಕುಂದಾಪುರ ಶಾಸ್ತ್ರೀ ವೃತ್ತದ ಬಳಿಕ ನಡೆದ ಮೌನ ಪ್ರತಿಭಟನೆಯಲ್ಲಿ ವಿಧಾನಪರಿಷತ್ ಮಾಜಿ ಸಭಾಪತಿ ಪ್ರತಾಪ್ಚಂದ್ರ ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ, ಕಾಂಗ್ರೆಸ್ ಮಖಂಡರಾದ ಮೊಳಹಳ್ಳಿ ದಿನೇಶ್ ಹೆಗ್ಡೆ, ಮಲ್ಯಾಡಿ ಶಿವರಾಮ ಶೆಟ್ಟಿ, ದೇವಾನಂದ ಶೆಟ್ಟಿ, ಕೆದೂರು ಸದಾನಂದ ಶೆಟ್ಟಿ, ಚಂದ್ರಶೇಖರ ಶೆಟ್ಟಿ, ಬಿ. ಹಿರಿಯಣ್ಣ, ವಿಕಾಸ ಹೆಗ್ಡೆ, ಕೃಷ್ಣದೇವ ಕಾರಂತ, ಬೀಜಾಡಿ ಅಶೋಕ್ ಪೂಜಾರಿ, ಗಣೇಶ್ ಶೇರೆಗಾರ, ಮರತ್ತೂರು ಚಂದ್ರಶೇಖರ ಶೆಟ್ಟಿ, ಕೋಡಿ ಅಬ್ದುಲ್ಲಾ, ಭಾಸ್ಕರ ಶೆಟ್ಟಿ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಿ.ಎ. ಫೌಂಡೇಶನ್ ಹಾಗೂ ಇಂಟರ್ ಮೀಡಿಯೇಟ್ ತೇರ್ಗಡೆ ಹೊಂದಿದ ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ಕಾಲೇಜಿನ ವತಿಯಿಂದ ಸನ್ಮಾನಿಸಲಾಯಿತು. ಮೇ 2023ರಲ್ಲಿ ಸಿ.ಎ. ಇಂಟರ್ ಮೀಡಿಯೇಟ್ ಪರೀಕ್ಷೆಯ ಗ್ರೂಪ್ ಎರಡರಲ್ಲಿ ತೇರ್ಗಡೆ ಹೊಂದಿದ ಶ್ರಾವ್ಯ, ರೋಹನ್, ಚೇತನಾ, ಮಂದಾರ್ ಮತ್ತು ಗ್ರೂಪ್ ಒಂದರಲ್ಲಿ ತೇರ್ಗಡೆ ಹೊಂದಿದ ನಾದಶ್ರೀ, ರಂಜನ್, ಶಾಂಭವಿ, ಅನುಷಾ ಹಾಗೂ ಡಿಸೆಂಬರ್ 2022ರಲ್ಲಿ ನಡೆದ ಸಿ.ಎ. ಫೌಂಡೇಶನ್ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ಅಂಕಿತ ಮೊಗವೀರ, ಸುಜನರಾಣಿ, ಸುಚಿ ಸಿ. ಶೆಟ್ಟಿ, ಪನ್ನಗ, ಗಣೇಶ್ ಭಟ್ ಅವರನ್ನು ಸನ್ಮಾನಿಸಲಾಯಿತು. ಸಂಸ್ಥೆಯ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ, ಉಪಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳಾದ ರಕ್ಷಿತ್ ರಾವ್ ಗುಜ್ಜಾಡಿ, ಪ್ರೀತಿ ಹೆಗ್ಡೆ, ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥೆ ವೀಣಾ ಭಟ್ ಹಾಗೂ ಕಾಲೇಜಿನ ಸಿ.ಎ. ಮತ್ತು ಸಿ.ಎಸ್. ಸಂಯೋಜಕರಾದ ಸತೀಶ್ ಶೆಟ್ಟಿ ಹೆಸ್ಕತ್ತೂರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸಾಮಾಜಿಕ ಜೀವನದಲ್ಲಿ ಸಂಘಟನೆ ಅತ್ಯಗತ್ಯ. ಯಾವುದೇ ಸಂಸ್ಥೆ ಬೆಳೆಯಬೇಕಾದರೆ ಸಮಾನ ಮನಸ್ಕ ಸದಸ್ಯರು ಮುಖ್ಯವಾಗಿರಬೇಕು. ಅವರೆಲ್ಲರ ಸತ್ಚಿಂತನೆಗಳ ಜತೆಗೆ ಆಸಕ್ತಿ ಹಾಗೂ ಛಲವಿದ್ದರೆ ಅಸಾಧ್ಯವೆಂಬುವುದು ಯಾವುದೂ ಇಲ್ಲ ಎಂದು ಕಾಲ್ತೋಡು ಸರ್ಕಾರಿ ಆಯುರ್ವೇದ ಕೇಂದ್ರದ ವೈದ್ಯಾಧಿಕಾರಿ ಡಾ. ವೀಣಾ ಕಾರಂತ್ ಹೇಳಿದರು. ಇಲ್ಲಿನ ರೋಟರಿ ಸಮುದಾಯ ಭವನದಲ್ಲಿ ನಡೆದ ಇನ್ನರ್ವೀಲ್ ಕ್ಲಬ್ನ ಪದಗ್ರಹಣ ಸಮಾರಂಭ ಉದ್ಘಾಟಿಸಿ ಮಾತನಾಡಿ ಪರಸ್ಪರ ಗೆಳೆತನದಿಂದ ಕೂಡಿ ಬಾಳುವ ಒಂದು ಕುಟುಂಬದಂತಿರುವ ಇನ್ನರ್ವೀಲ್ ಕ್ಲಬ್ನಲ್ಲಿ ಎಲ್ಲಾ ಸಹೋದರಿಯರು ಸಂಘಟಿತರಾಗಿ ಊರಿಗೆ ಹಾಗೂ ಸಮಾಜಕ್ಕೆ ಮಾದರಿಯಾಗುವಂತಹ ಕೆಲಸಗಳನ್ನು ಮಾಡುವಂತಾದಾಗ ಮಾತ್ರ ಶತ್ರುತ್ವ ಮರೆಯಾಗಿ ಕತ್ತಲೆಯ ಒಳಗಿರುವ ಜ್ಞಾನ, ಭರವಸೆಗಳೆಂಬ ಬೆಳಕಿನ ಬೀಜದಂತೆ ಭವಿಷ್ಯದ ಬಾಳು ಬೆಳಗುತ್ತದೆ. ಮಹಿಳೆಯರ ರಕ್ಷಣೆಯ ಬಗ್ಗೆ ಅಲ್ಲಲ್ಲಿ ಜಾಗೃತಿ ಸಮಾವೇಶ, ಕಷ್ಟದಲ್ಲಿರುವವರಿಗೆ, ನೊಂದವರಿಗೆ ತಕ್ಷಣ ಸ್ಪಂದಿಸುವ ಹಾಗೂ ಮಕ್ಕಳಿಗೆ ಪ್ರಕೃತಿ ರಕ್ಷಣೆ, ನೀರಿನ ಮಿತ ಬಳಕೆ, ಪ್ಲಾಸ್ಟಿಕ್ ಮುಕ್ತ ಸಮಾಜ ನಿರ್ಮಾಣ ಮತ್ತು ಆರೋಗ್ಯದ ಬಗ್ಗೆ ಮಾರ್ಗದರ್ಶನ ನೀಡುವ…
