Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯ ಗಣಕ ವಿಭಾಗ ಮತ್ತು ವಾಣಿಜ್ಯ ಹಾಗೂ ವ್ಯವಹಾರ ಆಡಳಿತ ವಿಭಾಗದ ಜಂಟಿ ಆಶ್ರಯದಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗಾಗಿ “ಮೈಂಡ್, ಕ್ಯಾಲೆಂಡರ್ ಮತ್ತು ನಂಬರ್ಸ್” ಕುರಿತು ಸಂವಾದಾತ್ಮಕ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳಲ್ಲಿ ಗಣಿತದ ಲೆಕ್ಕಾಚಾರಗಳಲ್ಲಿ ವೇಗ ಮತ್ತು ನಿಖರತೆಯನ್ನು ಬೆಳೆಸುವ ಉದ್ದೇಶದಿಂದ ಸರಳ ವಿಧಾನಗಳು, ಶಾರ್ಟ್‌ಕಟ್‌ಗಳು ಮತ್ತು ಉಪಯುಕ್ತ ಸೂತ್ರಗಳನ್ನು ಈ ಸಂದರ್ಭದಲ್ಲಿ ಪರಿಚಯಿಸಲಾಯಿತು. ಸ್ಪರ್ಧಾತ್ಮಕ ಪರೀಕ್ಷೆಗಳು ಮತ್ತು ಆಪ್ಟಿಟ್ಯೂಡ್ ಆಧಾರಿತ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಈ ತಂತ್ರಗಳು ಉಪಯುಕ್ತವಾಗಲಿವೆ. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಕುಂದಾಪುರದ ಕ್ಯಾಲೆಂಡರ್ ತಜ್ಞರಾದ ಎಂ. ಲಕ್ಷ್ಮಣ ಶೆಟ್ಟಿ ಅವರು ವಿವಿಧ ಲೆಕ್ಕಾಚಾರ ವಿಧಾನಗಳನ್ನು ಪ್ರಾತ್ಯಕ್ಷಿಕೆಯ ಮೂಲಕ ತೋರಿಸಿಕೊಟ್ಟು, ಸುಲಭವಾಗಿ ಅರ್ಥವಾಗುವ ತಂತ್ರಗಳೊಂದಿಗೆ ವಿದ್ಯಾರ್ಥಿಗಳನ್ನು ತೊಡಗಿಸಿಕೊಂಡರು. ಕಾರ್ಯಕ್ರಮವನ್ನು ಗಣಕ ವಿಭಾಗದ ಮುಖ್ಯಸ್ಥರಾದ ಸ್ವರ್ಣರಾಣಿ ಯು.ಪಿ. ಮತ್ತು ವಾಣಿಜ್ಯ ಹಾಗೂ ವ್ಯವಹಾರ ಆಡಳಿತ ವಿಭಾಗದ ಮುಖ್ಯಸ್ಥರಾದ ಶಿಲ್ಪಾಶ್ರೀ ಅವರು ಸಂಯೋಜಿಸಿದ್ದರು. ಈ ಕಾರ್ಯಕ್ರಮವು ವಿದ್ಯಾರ್ಥಿಗಳ ಭವಿಷ್ಯದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಸೇವಾ ಸಂಗಮ ವಿದ್ಯಾಕೇಂದ್ರ ವಿದ್ಯಾಗಿರಿ–ತೆಕ್ಕಟ್ಟೆ ವತಿಯಿಂದ ವಿವಿಧ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುರೇಶ್ ಬೆಟ್ಟಿನ್ ಅವರು ಸನ್ಮಾನಿಸಿ ಅಭಿನಂದಿಸಿದರು. ಪ್ರಗತಿಪರ ಸೇವಾ ಸಂಸ್ಥೆ ರಿ., ಮಂಡ್ಯ ಇವರು ಆಯೋಜಿಸಿದ್ದ 22ನೇ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆ 2026–27ರಲ್ಲಿ ಭಾಗವಹಿಸಿದ 7ನೇ ತರಗತಿಯ ಅಪರ್ಣ ಪ್ರಭು, 6ನೇ ತರಗತಿಯ ಅದ್ವಿತ್ ಯು.ಜಿ., 5ನೇ ತರಗತಿಯ ಮನ್ವಿತ್ ಕಾರಂತ್, 4ನೇ ತರಗತಿಯ ರೋಷನ್ ಜೆ., 3ನೇ ತರಗತಿಯ ಧೃತಿಶ್ರೀ, 2ನೇ ತರಗತಿಯ ರಿಷಾ, 1ನೇ ತರಗತಿಯ ರಿಧಿ ಎನ್. ಹಾಗೂ ಯುಕೆಜಿಯ ಚಿನ್ಮಯಿ ಎಸ್. ಐತಾಳ್ ಅವರನ್ನು ಅಭಿನಂದಿಸಲಾಯಿತು. ಅದೇ ರೀತಿ, ವಿದ್ಯಾ ಭಾರತಿ ಶಿಕ್ಷಾ ಸಂಸ್ಥಾನ, ಕರ್ನಾಟಕ ಆಯೋಜಿಸಿದ್ದ ಕ್ರೀಡಾಕೂಟದ ಚಕ್ರ ಎಸೆತ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ 7ನೇ ತರಗತಿಯ ಯಷಿ ಹಾಗೂ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಭಾಗವಹಿಸಿದ 6ನೇ ತರಗತಿಯ ಭವಿಷ್ ಎಸ್. ಪೂಜಾರಿ, ಸಮುದ್ಯತಾ ವೈ.ಪಿ. ಮತ್ತು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಶಿವಮೊಗ್ಗ ಇವರ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ ವೇಯ್ಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಆಳ್ವಾಸ್ ಪದವಿಪೂರ್ವ ಕಾಲೇಜಿನ ಬಾಲಕ – ಬಾಲಕಿಯರ ತಂಡ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿತು. ಹುಡುಗರ ವಿಭಾಗದಲ್ಲಿ 04 ಚಿನ್ನ, 01 ಬೆಳ್ಳಿ ಒಟ್ಟು 05 ಪದಕ ಪಡೆದುಕೊಂಡರು. ಹುಡುಗಿಯರ ವಿಭಾಗದಲ್ಲಿ 04 ಚಿನ್ನ, 01 ಬೆಳ್ಳಿ ಒಟ್ಟು 05 ಪದಕದೊಂದಿಗೆ ಎರಡು ವಿಭಾಗದಲ್ಲಿ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡರು. ಹುಡುಗರ ವಿಭಾಗದಲ್ಲಿ: 60 ಕೆಜಿ – ಸಂತೋಷ್ (ದ್ವಿತೀಯ), 71 ಕೆಜಿ – ಪ್ರಫುಲ್ (ಪ್ರಥಮ), 79 ಕೆಜಿ – ಪ್ರಜ್ವಲ್ (ಪ್ರಥಮ), 88 ಕೆಜಿ – ಶ್ರೇಯಸ್ (ಪ್ರಥಮ), 110 ಕೆಜಿ – ಜೇಷ್ಠ (ಪ್ರಥಮ). ಹುಡುಗಿಯರ ವಿಭಾಗದಲ್ಲಿ: 48 ಕೆಜಿ – ಸಂಜನಾ (ದ್ವಿತೀಯ), 53 ಕೆಜಿ – ಸೌಮ್ಯ (ಪ್ರಥಮ), 58 ಕೆಜಿ – ಮೈತ್ರಿ (ಪ್ರಥಮ), 63…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕುಂದಾಪುರ ಇದರ ವತಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅಮಾಸೆಬೈಲುವಿನಲ್ಲಿ ನಡೆದ 14 ವರ್ಷ ವಯೋಮಾನದೊಳಗಿನವರ ವಲಯ ಮಟ್ಟದ ಕ್ರೀಡಾಕೂಟದಲ್ಲಿ ವಿದ್ಯಾರಣ್ಯ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಗೈದಿದ್ದಾರೆ. 8ನೇ ತರಗತಿಯ ವಿದ್ಯಾರ್ಥಿಗಳಾದ ಪ್ರಖ್ಯಾತ್‌ ಗುಂಡು ಎಸೆತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಹಾಗೂ ಚಕ್ರಎಸೆತ (ಡಿಸ್ಕಸ್ ಥ್ರೋ) ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ ಹಾಗೇ ಅಂಕಿತ್‌ 100 ಮೀಟರ್‌ ಓಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಹಾಗೂ 200 ಮೀಟರ್‌ ಓಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಲಿಯೋನ್‌ ಡಿ.ಎಸ್‌. ಗುಂಡು ಎಸೆತ ಸ್ಪರ್ಧೆಯಲ್ಲಿ ತೃತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ. ಅಪೂರ್ವ ಪ್ರತಿಭೆ ಪ್ರದರ್ಶಿಸಿ ವಿಜೇತರಾದ ಪ್ರಖ್ಯಾತ್‌ ಹಾಗೂ ಅಂಕಿತ್‌ ಅವರು ತಾಲೂಕು ಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಸುಜ್ಞಾನ ಎಜುಕೇಶನಲ್‌ ಟ್ರಸ್ಟ್‌ನ ಅಧ್ಯಕ್ಷರಾದ ಡಾ. ರಮೇಶ್‌ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್‌ ಚಂದ್ರ ಶೆಟ್ಟಿ, ಖಜಾಂಚಿ ಭರತ್‌ ಶೆಟ್ಟಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶಿವಮೊಗ್ಗದಲ್ಲಿ ನಡೆದ ರಾಜ್ಯ ಮಟ್ಟದ weight lifting ಚಾಂಪಿಯನ್‌ಶಿಪ್‌ನಲ್ಲಿ ತೆಕ್ಕೆಟ್ಟೆಯ ವಿಶ್ವ ವಿನಾಯಕ ಕಾಲೇಜಿನ ಪ್ರಥಮ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಶಮಂತ್ ಅವರು 71 ಕೆ.ಜಿ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದು ಬೆಳ್ಳಿ ಪದಕ ಗಳಿಸಿದ್ದಾರೆ. ಈ ಸಾಧನೆ ಕಾಲೇಜಿಗೆ ಕೀರ್ತಿ ತಂದಿದ್ದು, ವಿದ್ಯಾರ್ಥಿಯ ಈ ಕ್ರೀಡಾ ಸಾಧನೆಯನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಹೃತ್ಪೂರ್ವಕವಾಗಿ ಸಲ್ಲಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಯಕ್ಷಗಾನ ಸಂಘದ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮ ಕಾಲೇಜಿನ ಎ.ವಿ ಹಾಲ್‌ನಲ್ಲಿ ನಡೆಯಿತು. ವ್ಯವವಾರ ಆಡಳಿತ ವಿಭಾಗದ ಸಹಾಯಕ ಪ್ರಾಧ್ಯಾಪಕ, ಹವ್ಯಾಸಿ ಯಕ್ಷಗಾನ ಕಲಾವಿದ ರವಿನಂದನ್ ಭಟ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು. ಸಾಂಪ್ರದಾಯಿಕ ಯಕ್ಷಗಾನ, ಹೆಜ್ಜೆಗಳು, ಯಕ್ಷಗಾನದ ಪೂರ್ವರಂಗ, ತಾಳ ಹಾಗೂ ವಿವಿಧ ಮಟ್ಟುಗಳ ಕುರಿತು ಮಾಹಿತಿ ನೀಡಿದರು. ಇದೇ ಸಂದರ್ಭ ಅವರು ಕಾಲೇಜಿನ ಯಕ್ಷಗಾನ ಸಂಘದ ಆಶ್ರಯದಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷ ಹಮ್ಮಿಕೊಳ್ಳಲಾಗುವ ವೈವಿಧ್ಯಮಯ ಕಾರ್ಯಕ್ರಮಗಳ ಕುರಿತು ತಿಳಿಸಿದರು. ಕಾಲೇಜಿನ ಪ್ರಾಂಶುಪಾಲ ಡಾ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪ-ಪ್ರಾಂಶುಪಾಲ ಹಾಗೂ ಯಕ್ಷಗಾನ ಸಂಘದ ಸಂಯೋಜಕ ಡಾ. ಚೇತನ್ ಶೆಟ್ಟಿ ಕೋವಾಡಿ ಪ್ರಸ್ತಾವಿಸಿದರು. ವಿದ್ಯಾರ್ಥಿಗಳಾದ ಶಿಲ್ಪ ಸಂಪನ್ಮೂಲ ವ್ಯಕ್ತಿಗಳನ್ನು ಪರಿಚಯಿಸಿ, ಮೇಘನಾ ಸ್ವಾಗತಿಸಿ, ಸುಶ್ಮಿತಾ ಕಾರ್ಯಕ್ರಮ ನಿರೂಪಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಐಡಿಯಲ್ ಪ್ಲೆ ಅಬಾಕಸ್ ಇಂಡಿಯಾ ಪ್ರೈ. ಲಿಮಿಟೆಡ್ ಇವರು ನಡೆಸಿದ 21ನೇ ಕರ್ನಾಟಕ ರಾಜ್ಯಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿತ್ಮೆಟಿಕ್ 2026ರ ಸ್ಪರ್ಧೆಯಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ  ಆತೀಶ್ ಎಸ್. ಪೂಜಾರಿ (5ನೇ ತರಗತಿ) ಪ್ರಥಮ ಸ್ಥಾನ,  ಅಮಯ್ ಪಿ. ಶ್ರೀಯಾನ್ (6ನೇ ತರಗತಿ) ತೃತೀಯ ಸ್ಥಾನ ಹಾಗೂ ಚಾರ್ವಿಕಾ ಜಿ. ಖಾರ್ವಿ (6ನೇ ತರಗತಿ) ತೃತೀಯ ಸ್ಥಾನ ಪಡೆದಿರುತ್ತಾರೆ. ಇವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನಲ್ಲಿ “ಅಂತರರಾಷ್ಟ್ರೀಯ ಓಝೋನ್ ದಿನಾಚರಣೆ” ಮತ್ತು ರಸಪ್ರಶ್ನೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಂಡಾರ್ಕಾರ್ಸ್ ಪದವಿ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ ಸತ್ಯನಾರಾಯಣ ಆಗಮಿಸಿ ಬಹುಮಾನ ವಿತರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ.ಸರೋಜ ಎಮ್. ವಹಿಸಿದ್ದರು. ಈ ಸಂದರ್ಭದಲ್ಲಿ ಭಂಡಾರ್ಕಾರ್ಸ್  ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರು ಕಾರ್ಯಕ್ರಮದಲ್ಲಿ ಹಾಜರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಭಾರತೀಯ ಪಾರಂಪರಿಕ ಆಯುರ್ವೇದ ವೈದ್ಯಕೀಯ ಪದ್ಧತಿಯ ಸಂರಕ್ಷಣೆ, ಔಷಧ ಸಂಶೋಧನೆ ಮತ್ತು ನೈಸರ್ಗಿಕ ಚಿಕಿತ್ಸೆಯಲ್ಲಿ ವಿಶಿಷ್ಟ ಕೊಡುಗೆ ನೀಡುತ್ತಿರುವ ತಾಲೂಕಿನ ಜನಪ್ರಿಯ ಆಯುರ್ವೇದ ವೈದ್ಯ, ಚಿತ್ರಕೂಟ ಆಯುರ್ವೇದ ಚಿಕಿತ್ಸಾಲಯದ ಮುಖ್ಯಸ್ಥ ಡಾ. ರಾಜೇಶ್ ಬಾಯರಿ ಅವರು ಮಾಧ್ಯಮ ರಂಗದ ಅಗ್ರಗಣ್ಯ ಸಂಸ್ಥೆಗಳಾದ ಕನ್ನಡ ಪ್ರಭ ಹಾಗೂ ಏಷ್ಯಾನೆಟ್ ಸುವರ್ಣ ನ್ಯೂಸ್ ಜಂಟಿಯಾಗಿ ನೀಡುವ ಪ್ರತಿಷ್ಠಿತ ಆಯುರ್ಭೂಷಣ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ. ಅವರು ಕುಂದಾಪುರದ ಆಲೂರಿನ ಅತ್ಯಂತ ಗ್ರಾಮೀಣ ಪ್ರದೇಶವಾದ ಕಳಿಯಲ್ಲಿ ಆಯುರ್ವೇದ ಚಿಕಿತ್ಸಾಲಯ ಆರಂಭಿಸುತ್ತೇನೆ ಎಂದಾಗ ಆರಂಭದಲ್ಲಿ ಹಲವರು ಅಪಹಾಸ್ಯ ಮಾಡಿದ್ದರು. ಆದರೆ ಹಿರಿಯರು, ಪರಂಪರೆ ಮತ್ತು ಪ್ರಕೃತಿಗೆ ಗೌರವ ನೀಡುವ ಮನೋಭಾವದ ಡಾ. ರಾಜೇಶ್ ಬಾಯರಿಯವರ ಇಚ್ಛಾಶಕ್ತಿ ಅಚಲವಾಗಿತ್ತು. 2008ರ ಜೂನ್ 5ರಂದು ಗಿಡ ನೆಟ್ಟು ಸಂಕಲ್ಪ ಮಾಡಿ, ತಂದೆ ಮಹಾಬಲ ಬಾಯರಿ ಹಾಗೂ ತಾಯಿ ಕಲಾವತಿ ಅವರ ಆಶೀರ್ವಾದದೊಂದಿಗೆ 2010ರಲ್ಲಿ ತಮ್ಮ ಜಮೀನಿನಲ್ಲೇ ಕೆಲವೇ ಸಾವಿರ ರೂಪಾಯಿ ಬಂಡವಾಳದಲ್ಲಿ ಒಂದು ಕೋಣೆಯ ಚಿಕಿತ್ಸಾಲಯಕ್ಕೆ ನಾಂದಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಮರವಂತೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವಕರ್ಮ ಸಮಾಜ ಸೇವಾ ಸಂಘ ರಿ. ಮರವಂತೆ ವತಿಯಿಂದ ವಿಶ್ವಕರ್ಮ ಮಹೋತ್ಸವದ ಅಂಗವಾಗಿ “ವಿಶ್ವಕರ್ಮ” ಕುರಿತಾಗಿ ಪ್ರಬಂಧ ಸ್ಪರ್ಧೆಯ ಬಹುಮಾನ ವಿತರಣಾ ಸಮಾರಂಭ ಶಾಲೆಯ ಸಭಾಂಗಣದಲ್ಲಿ ನಡೆಯಿತು. ಶಾಲೆಯ ಎಸ್.ಡಿ.ಎಮ್.ಸಿ ಅಧ್ಯಕ್ಷೆ ಕೋಮಲ ಪ್ರಬಂಧ ಸ್ಪರ್ಧೆಯ ಬಹುಮಾನ ವಿತರಣಾ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ವಿಶ್ವಕರ್ಮ ಸಮಾಜ ಸೇವಾ ಸಂಘ ರಿ. ಮರವಂತೆ ಗೌರವ ಸಲಹೆಗಾರ ಹಾಗೂ ಉಪ್ರಳ್ಳಿ ಕಾಳಿಕಾಂಬಾ ದೇವಸ್ಥಾನದ ಮಾಗಣಿ ಮೊಕ್ತೇಸರ ಕೃಷ್ಣಯ್ಯ ಆಚಾರ್ಯ ಮರವಂತೆ ಮಾತನಾಡಿ, ಪ್ರಬಂಧ ಸ್ಪರ್ಧೆ ಎಂದರೆ ಕೇವಲ ಬಹುಮಾನ ಗೆಲ್ಲುವ ಸ್ಪರ್ಧೆಯಲ್ಲ. ಅದು ನಮ್ಮ ಚಿಂತನೆ, ಜ್ಞಾನ, ಸೃಜನಶೀಲತೆ ಮತ್ತು ಅಭಿವ್ಯಕ್ತಿ ಸಾಮರ್ಥ್ಯವನ್ನು ಬೆಳೆಸುವ ಒಂದು ಉತ್ತಮ ವೇದಿಕೆ. ವಿಶ್ವಕರ್ಮ ಸಮುದಾಯದ ಇತಿಹಾಸ, ಪರಂಪರೆ, ಕಲೆ, ಕೌಶಲ್ಯ ಮತ್ತು ಸಾಧನೆಗಳ ಕುರಿತು ವಿದ್ಯಾರ್ಥಿಗಳು ತಿಳಿದುಕೊಂಡು ತಮ್ಮ ವಿಚಾರಗಳನ್ನು ಬರಹದ ಮೂಲಕ ವ್ಯಕ್ತಪಡಿಸಿರುವುದು ನಿಜಕ್ಕೂ ಶ್ಲಾಘನೀಯ ಎಂದರು. ಉಪ್ರಳ್ಳಿ ಕಾಳಿಕಾಂಬಾ ದೇವಸ್ಥಾನದ ಮೂರನೇ…

Read More